Tag: Sachin Cheluvarayaswamy

  • ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಚಲುವರಾಯಸ್ವಾಮಿ ಪುತ್ರ ಮಂಡ್ಯ ಲೋಕಲ್ ಪಾಲಿಟಿಕ್ಸ್‌ಗೆ ಎಂಟ್ರಿ!

    ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಚಲುವರಾಯಸ್ವಾಮಿ ಪುತ್ರ ಮಂಡ್ಯ ಲೋಕಲ್ ಪಾಲಿಟಿಕ್ಸ್‌ಗೆ ಎಂಟ್ರಿ!

    ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಮತ್ತೆ ಕುಟುಂಬ ರಾಜಕಾರಣ ಸದ್ದು ಮಾಡಿದೆ. ಜಿಲ್ಲೆಯಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ಕೃಷಿ ಸಚಿವ ಚಲುವರಾಯಸ್ವಾಮಿ (Cheluvarayaswamy) ತಮ್ಮ ಪುತ್ರ ಸಚಿನ್‌ (Sachin) ಅವರನ್ನು ಅಧಿಕೃತವಾಗಿ ರಾಜಕೀಯ (Politics) ಕ್ಷೇತ್ರಕ್ಕೆ ಪ್ರವೇಶ ಮಾಡಿಸಲು ಮುಂದಾಗಿದ್ದಾರೆ.

    ಇಷ್ಟು ದಿನ ಸಿನಿಮಾ (Cinema) ಕ್ಷೇತ್ರದಲ್ಲಿ ಬ್ಯುಸಿಯಾಗಿದ್ದ ಸಚಿನ್ ಚಲುವರಾಯಸ್ವಾಮಿ ಇದೀಗ ರಾಜಕೀಯ ರಂಗ ಪ್ರವೇಶ ಮಾಡಿ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಲು ಸಿದ್ಧತೆ ಆರಂಭಿಸಿದ್ದಾರೆ.

    ಈಗಾಗಲೇ ನಾಗಮಂಗಲ (Nagamangala) ವಿಧಾನಸಭಾ ಕ್ಷೇತ್ರದಲ್ಲಿ ಸಕ್ರೀಯವಾಗಿರುವ ಸಚಿನ್‌ ವಾರದಲ್ಲಿ ಮೂರರಿಂದ ನಾಲ್ಕು ದಿನ ಕ್ಷೇತ್ರದಲ್ಲೇ ಇರುತ್ತಾರೆ. ನಾಗಮಂಗಲದಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆ, ಕಾರ್ಯಕ್ರಮಗಳು, ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿದ್ದಾರೆ. ಮುಂದುವರಿದ ಭಾಗ ಎಂಬಂತೆ ನಾಗಮಂಗಲ ತಾಲೂಕಿನ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ನಿಂತಿದ್ದಾರೆ. ಇದನ್ನೂ ಓದಿ: 180 ರೂ. ಟೋಲ್‌ ಉಳಿಸಲು ಹೋಗಿ ದುರಂತ ಅಂತ್ಯ – ಒಂದೇ ಕುಟುಂಬದ ನಾಲ್ವರ ಸಾವು

    ಭವಿಷ್ಯದ ದೃಷ್ಟಿಯಿಂದ ಚಲುವರಾಯಸ್ವಾಮಿ ತಮ್ಮ ಮಗನ ರಾಜಕೀಯ ಜೀವನಕ್ಕೆ ಭದ್ರ ಬುನಾದಿ ಹಾಕಲು ಲೋಕಲ್ ಪಾಲಿಟಿಕ್ಸ್‌ಗೆ ಇಳಿಸಿದ್ದಾರೆ ಎಂಬ ಮಾತು ಈಗ ಕೇಳಿ ಬಂದಿದೆ. ಮುಂಬರುವ ವಿಧಾನಸಭಾಕ್ಷೇತ್ರ, ಲೋಕಸಭಾ ಕ್ಷೇತ್ರದ ಚುನಾವಣೆ ಹೊತ್ತಿಗೆ ಪುತ್ರನನ್ನು ಸಂಪೂರ್ಣ ತಯಾರಿ ಮಾಡಲು ಚಲುವರಾಯಸ್ವಾಮಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    ಸಾಮಾಜಿಕ ಜಾಲತಾಣದಲ್ಲಿ ಈಗ ಸಚಿನ್ ಚಲುವರಾಯಸ್ವಾಮಿ ಸ್ಪರ್ಧಿಸುತ್ತಿರುವುದು ಪರ, ವಿರೋಧ ಚರ್ಚೆಗೆ ಕಾರಣವಾಗಿದೆ. ಇದು ಕುಟುಂಬ ರಾಜಕೀಯ ಅಲ್ವಾ ಎಂದು ಜೆಡಿಎಸ್ ಕಾರ್ಯಕರ್ತರ ಟೀಕೆ ಮಾಡಿದರೆ ದೇವೇಗೌಡರ ಇಡೀ ಕುಟುಂಬ ಎಲ್‌ಎಲ್‌ಎ, ಎಂಪಿ, ಎಂಎಲ್‌ಸಿ ಆಗಬಹದು. ಸಹಕಾರ ಸಂಘದ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಪುತ್ರ  ಸ್ಪರ್ಧಿಸಿದರೆ ತಪ್ಪೇನು ಎಂದು ಕೈ ಕಾರ್ಯಕರ್ತರು ತಿರುಗೇಟು ನೀಡುತ್ತಿದ್ದಾರೆ. ಇದನ್ನೂ ಓದಿ:ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ – ಇನ್ನೂ 4 ದಿನ ಮಳೆ, ಬಳಿಕ ಉಷ್ಣಾಂಶದಲ್ಲಿ ಹೆಚ್ಚಳ ಸಾಧ್ಯತೆ

    ಮಂಡ್ಯದಲ್ಲಿ ದೇವೇಗೌಡರ (Devegowda) ಕುಟುಂಬದ ಪ್ರಾಬಲ್ಯ ಸ್ವಲ್ಪ ಜಾಸ್ತಿಯೇ ಇದೆ. ಹೀಗಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಅಂದಿನ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ರಾಜಕೀಯ ಭವಿಷ್ಯ ಕಟ್ಟಿಕೊಡಲು ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿಸಿದ್ರು.  ಆದರೆ ಈ ಪ್ರಯತ್ನ ಫಲ ನೀಡಲಿಲ್ಲ.

    ನಿಖಿಲ್ ಏಕಾಏಕಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭಸಿದ್ದಾರೆ. ಈ ತಪ್ಪು ತಮ್ಮ ಪುತ್ರನ ರಾಜಕೀಯ ಪ್ರವೇಶದಲ್ಲಿ ಆಗಬಾರದು ಎಂದು ಸಚಿವ ಚಲುವರಾಯಸ್ವಾಮಿ ತಮ್ಮ ಪುತ್ರ ಸಚಿನ್‌ ಅವರನ್ನು ಲೋಕಲ್ ಪಾಲಿಟಿಕ್ಸ್ ಮೂಲಕ ರಾಜಕೀಯ ಚದುರಂಗದ ಆಟಕ್ಕೆ ಎಂಟ್ರಿ ಕೊಡಿಸುತ್ತಿದ್ದಾರೆ.

     

  • ಬೆಂಗಳೂರು ಬಾಯ್ಸ್ ಕೊಟ್ಟ ನಾಲ್ಕು ಐಕಾನಿಕ್ಸ್ ಕ್ಯಾರೆಕ್ಟರ್ ಝಲಕ್

    ಬೆಂಗಳೂರು ಬಾಯ್ಸ್ ಕೊಟ್ಟ ನಾಲ್ಕು ಐಕಾನಿಕ್ಸ್ ಕ್ಯಾರೆಕ್ಟರ್ ಝಲಕ್

    ವಿ.ಮೇಕರ್ಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಬೆಂಗಳೂರು ಬಾಯ್ಸ್’  (Bangalore Boys) ಸಿನಿಮಾದ ಮೊದಲ ನೋಟ ಬಿಡುಗಡೆಯಾಗಿದೆ. ಎರಡು ನಿಮಿಷ ಐವತ್ತೈದು ಸೆಕೆಂಡ್ ಇರುವ ಟ್ರೈಲರ್ ಫನ್-ಎಮೋಷನ್, ಸೆಂಟಿಮೆಂಟ್, ರೋಮ್ಯಾನ್ಸ್, ಮೋಜು-ಮಸ್ತಿ, ಪಂಚಿಂಗ್ ಡೈಲಾಗ್ ಕಿಕ್ ಗಳಿಂದ ಕೂಡಿದೆ.

    ವೇಸ್ಟ್ ಎನಿಸಿಕೊಳ್ಳುವ ಲಾಸ್ಟ್ ಬೆಂಚ್ ಸ್ಟೂಡೆಂಟ್ ಬದುಕಿನಲ್ಲಿ ಸಾಧನೆಯ ಗುರಿಮುಟ್ಟಿದ ಸಾಕಷ್ಟು ಉದಾಹರಣೆಗಳಿವೆ. ಅಂತಹದ್ದೇ ಕಥಾಹಂದರ ಹೊಂದಿರುವ ಸಿನಿಮಾ ಬೆಂಗಳೂರು ಬಾಯ್ಸ್. ತೊಂಬತ್ತರ ದಶಕದಲ್ಲಿ ಸೂಪರ್ ಹಿಟ್ ಸಿನಿಮಾಗಳಾದ ರಣಧೀರ, ಅಂತ , ಓಂ ಹಾಗೂ ಎ ಚಿತ್ರಗಳ ಪಾತ್ರದಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ (Sachin Cheluvarayaswamy), ಚಂದನ್ ಆಚಾರ್ (Chandan Achar), ರೋಹಿತ್ ಮಿಂಚಿದ್ದಾರೆ. ಇವರಿಗೆ ಜೋಡಿಯಾಗಿ ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಹಾಗೂ ಸೋನಿ ನಟಿಸಿದ್ದಾರೆ. ಇದನ್ನೂ ಓದಿ:ಅಂಬಿ ಪುತ್ರನ ಅದ್ದೂರಿ ಕಲ್ಯಾಣ- ಮದುವೆಯ ಕಲರ್‌ಫುಲ್ ಫೋಟೋಸ್

    ಕಾಮಿಡಿ ಕಿಂಗ್ ಚಿಕ್ಕಣ ಪ್ರಮುಖ ಪಾತ್ರವೊಂದ್ರಲ್ಲಿ ನಟಿಸಿದ್ದು, ಐಟಿಬಿಟಿ ಉದ್ಯೋಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅರಸು ಸಾಹಿತ್ಯದ ಹಾಡಿಗೆ ಕಂಠ ಕೂಡ ಕುಣಿಸಿದ್ದಾರೆ.  ಉಮೇಶ್, ಪಿಡಿ ಸತೀಶ್, ಮೋಹನ್ ಜೂನೇಜಾ ಸೇರಿದಂತೆ ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ. ಶೂಟಿಂಗ್ ಮುಗಿಸಿ ಬಿಡುಗಡೆ ರೆಡಿಯಾಗಿರೋ ಬೆಂಗಳೂರು ಬಾಯ್ಸ್ ಸಿನಿಮಾಗೆ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ಗುರುದತ್‌ ಗಾಣಿಗ  (Gurudutt Ganiga)ಕ್ರಿಯೇಟಿವ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದು, ರವಿ ಶ್ರೀರಾಮ್ ಕೋ ಡೈರೆಕ್ಟರ್ ಆಗಿ ದುಡಿದಿದ್ದಾರೆ.

    ರಿಜೋ ಪಿ ಜಾನ್ ಛಾಯಾಗ್ರಹಣ, ಧರ್ಮ ವಿಶ್ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. . ಸಿನಿಮಾ ಆಸಕ್ತಿ ಹೊಂದಿರುವ ತೆಲುಗು ಮೂಲದ ವಿಕ್ರಮ್‌ ಕೆ.ವೈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ಸದ್ಯ ಟ್ರೇಲರ್ ಮೂಲಕ ಕಿಕ್ ಕೊಟ್ಟಿರುವ ಬೆಂಗಳೂರು ಬಾಯ್ಸ್ ಆದಷ್ಟು ಬೆಳ್ಳಿತೆರೆಮೇಲೆ ಅಬ್ಬರಿಸಲಿದೆ.