Tag: Sachin Dhanapal

  • ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

    ‘ಚಾಂಪಿಯನ್’ ಸಿನಿಮಾದ ಟ್ರೈಲರ್ ರಿಲೀಸ್ : ಚಿತ್ರ ತಂಡಕ್ಕೆ ಡೈನಾಮಿಕ್ ಸ್ಟಾರ್ ದೇವರಾಜ್ ಸಾಥ್

    ಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ (Aditi Prabhudev) ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” (Champion) ಚಿತ್ರದ ಟ್ರೇಲರ್ (Trailer)ಡೈನಾಮಿಕ್ ಸ್ಟಾರ್ ದೇವರಾಜ್ (Devraj) ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು.‌ ಈ ಕುರಿತು ಚಿತ್ರತಂಡವು ಹಲವು ವಿಚಾರಗಳನ್ನು ಹಂಚಿಕೊಂಡಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ.  ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ “ಚಾಂಪಿಯನ್” ಚಿತ್ರವನ್ನು ನಾನು ನಿರ್ಮಾಣ ಮಾಡಿದ್ದೀನಿ. ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ. 2019 ರಲ್ಲಿ ಈ ಚಿತ್ರ ಆರಂಭವಾಯಿತು. ನಂತರ ಕೋವಿಡ್.. ಆನಂತರ ನಮ್ಮ ಚಿತ್ರದ ನಿರ್ದೇಶಕ ಶಾಹುರಾಜ್ ಶಿಂಧೆ ಅವರ ಹಠಾತ್ ನಿಧನ. ಈ ರೀತಿ ಹಲವು ಅಡೆತಡೆಗಳನ್ನು ದಾಟಿ ಈಗ ಚಿತ್ರ ಬಿಡುಗಡೆ ಹಂತ ತಲುಪಿದೆ‌. ಉತ್ತರ ಕರ್ನಾಟಕದ ನನ್ನ ಸ್ನೇಹಿತರು ತಮ್ಮದೇ ಚಿತ್ರ ಅನ್ನುವ ಹಾಗೆ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಹಾಗೂ ಸಚಿನ್ ಕುಟುಂಬದವರು ಸಾಕಷ್ಟು ಜನ ಆರ್ಮಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್ಮಿಯಲ್ಲಿ ನಮಗೆ ಸಾಕಷ್ಟು ಸ್ನೇಹಿತರಿದ್ದಾರೆ. ಅವರೆಲ್ಲರ ಬೆಂಬಲ ಕೂಡ ನಮ್ಮಗಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಶಿವಾನಂದ ಎಸ್ ನೀಲಣ್ಣನವರ್.

    ನಾನು ಚಿತ್ರದಲ್ಲಿ ನಟಿಸುತ್ತೇನೆ ಎಂದು ಅಂದು ಕೊಂಡಿರಲಿಲ್ಲ. ಏಕೆಂದರೆ ನನ್ನ ತಂದೆ, ತಮ್ಮ ಎಲ್ಲಾ ಆರ್ಮಿಯಲ್ಲಿದ್ದಾರೆ. ನಾನು ಸಹ ಪರೀಕ್ಷೆ ಬರೆದಿದ್ದೆ. ಆದರೆ ಸೆಲೆಕ್ಟ್ ಆಗಲಿಲ್ಲ. ಹನ್ನೆರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಕೆಲಸ ಮಾಡುತ್ತಿದ್ದೆ. ಕೆಲವು ವರ್ಷಗಳ ಹಿಂದೆ ನನ್ನ ಸ್ನೇಹಿತ ಶಿವಾನಂದ, ಕೊಟ್ಟ ಮಾತಿನಂತೆ “ಚಾಂಪಿಯನ್” ಚಿತ್ರದ ಮೂಲಕ ನನ್ನನ್ನು ಹೀರೋ ಮಾಡಿದ್ದಾರೆ.  ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೀನಿ. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರ ಅಭಿನಯ ಚೆನ್ನಾಗಿದೆ. ಸನ್ನಿಲಿಯೋನ್ ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.  ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ದೇವರಾಜ್ ಸರ್ ಗೆ, ಸಮಾರಂಭಕ್ಕೆ ಆಗಮಿಸಿರುವ ಲಹರಿ ವೇಲು ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ. ಮುಂದಿನ ತಿಂಗಳ ಹದಿನಾಲ್ಕು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ ಪ್ರೋತ್ಸಾಹ ನೀಡಿ ಎಂದರು ನಾಯಕ ಸಚಿನ್ ಧನಪಾಲ್ (Sachin Dhanapal). ಇದನ್ನೂ ಓದಿ:ನಾಯಕಿ ರುಕ್ಮಿಣಿ ಜೊತೆ ಆಫ್ರಿಕಾಗೆ ಹೊರಟು ನಿಂತ ಗೋಲ್ಡನ್ ಸ್ಟಾರ್ ಗಣೇಶ್

    ನಾನು ಈ ಚಿತ್ರದಲ್ಲಿ ನಟಿಸಲು ಪ್ರಮುಖ ಕಾರಣ ನಿರ್ದೇಶಕ ಶಾಹುರಾಜ್ ಶಿಂಧೆ. ಇಂದು ಅವರಿಲ್ಲದಿರುವುದು ತುಂಬಾ ದುಃಖದ ವಿಷಯ.  ಉತ್ತರ ಕರ್ನಾಟಕದ ನಿರ್ಮಾಪಕ ಶಿವಾನಂದ್ ಅವರ ಬಗ್ಗೆ ನನಗೆ ಹೆಮ್ಮೆಯಿದೆ. ಸ್ನೇಹಿತನಿಗಾಗಿ ಅವರು ಚಿತ್ರ ನಿರ್ಮಾಣ ಮಾಡಿರುವುದು ನಿಜಕ್ಕೂ ಖುಷಿಯ ವಿಚಾರ.  ಮೊದಲ ಚಿತ್ರದಲ್ಲೇ ಸಚಿನ್ ಚೆನ್ನಾಗಿ ನಟಿಸಿದ್ದಾರೆ. ನನ್ನ‌ ಪಾತ್ರ ಕೂಡ ಚೆನ್ನಾಗಿದೆ. ನಿಮ್ಮೆಲ್ಲರ ಬೆಂಬಲ ನಮ್ಮ ಚಿತ್ರಕ್ಕಿರಲಿ ಎಂದು ನಟಿ‌ ಅದಿತಿ ಪ್ರಭುದೇವ ತಿಳಿಸಿದರು. ನನ್ನ ಮನೆಗೆ ಶಿವಾನಂದ್ ಹಾಗೂ ಸಚಿನ್ ಅವರು ಬಂದಿದಾಗ ನಾನು, ನಿರ್ಮಾಪಕ ಹಾಗೂ ಹೀರೋ ಬಂದಿದ್ದಾರೆ ಅಂದು ಕೊಂಡಿದ್ದೆ. ಆನಂತರ ಇವರ ಸ್ನೇಹದ ಬಗ್ಗೆ ತಿಳಿದು ಆನಂದವಾಯಿತು. ನಾನು ಕೂಡ ಈ ಚಿತ್ರದಲ್ಲಿ ನಟಿಸಿದ್ದೇನೆ ಎಂದರು ನಟ ದೇವರಾಜ್.ಲಹರಿ ವೇಲು “ಚಾಂಪಿಯನ್” ಗೆ ಶುಭ ಕೋರಿದರು. ಛಾಯಾಗ್ರಾಹಕ ಸರವಣನ್ ನಟರಾಜನ್ ಹಾಗೂ ನೃತ್ಯ ನಿರ್ದೇಶಕ ಧನು ಮಾಸ್ಟರ್ ಚಿತ್ರದ ಬಗ್ಗೆ ‌ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • ಕನ್ನಡಕ್ಕೆ ಮತ್ತೊಮ್ಮೆ ಎಂಟ್ರಿ ಕೊಟ್ಟ ಸನ್ನಿ ಲಿಯೋನ್

    ಕನ್ನಡಕ್ಕೆ ಮತ್ತೊಮ್ಮೆ ಎಂಟ್ರಿ ಕೊಟ್ಟ ಸನ್ನಿ ಲಿಯೋನ್

    ಮಾದಕ ಬೆಡಗಿ ಸನ್ನಿಲಿಯೋನ್ ಈಗಾಗಲೇ ಕನ್ನಡದ ಎರಡು ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ಪ್ರೇಮ್ ನಟಿಸಿದ್ದ ‘ಡಿಕೆ’ ಸಿನಿಮಾದ ‘ಶೇಷಮ್ಮ ಶೇಷಮ್ಮ ಬಾಗ್ಲು ತೆಗೆಯಮ್ಮ’ ಹಾಡಿಗೆ ಸಖತ್ ಹೆಜ್ಜೆ ಹಾಕಿದ್ದ ಸನ್ನಿ, ಆನಂತರ ಇಂದ್ರಜಿತ್ ಲಂಕೇಶ್ ನಿರ್ದೇಶನದ ಚಿತ್ರದಲ್ಲೂ ಸನ್ನಿ ಕಾಣಿಸಿಕೊಂಡಿದ್ದರು. ಇದೀಗ ಸದ್ದಿಲ್ಲದೇ ಮತ್ತೊಂದು ಸಿನಿಮಾದ ಸ್ಪೆಷಲ್ ಹಾಡಿಗೆ ಕುಣಿದು ಹೋಗಿದ್ದಾರೆ ಸನ್ನಿ ಲಿಯೋನ್. ಈಗಾಗಲೇ ಆ ಹಾಡಿನ ಚಿತ್ರೀಕರಣ ಕೂಡ ಆಗಿದೆ. ಇದನ್ನೂ ಓದಿ : ಮೇ 11ಕ್ಕೆ ನಟಿ ಮಮತಾ ರಾವುತ್ ಮದುವೆ : ಡಾಕ್ಟರ್ ಜತೆ ಸಪ್ತಪದಿ ತುಳಿಯಲಿರುವ ನಟಿ

    ಸಚಿನ್ ಧನಪಾಲ್ ನಟನೆಯ ‘ಚಾಂಪಿಯನ್’ ಸಿನಿಮಾದಲ್ಲಿ ವಿಶೇಷವಾದ ಹಾಡೊಂದಕ್ಕೆ ಸನ್ನಿ ಲಿಯೋನ್ ಹೆಜ್ಜೆ ಹಾಕಿದ್ದಾರೆ. ಸ್ಪೋರ್ಟ್ಸ್ ಆಧರಿಸಿದ ಸಿನಿಮಾ ಇದಾಗಿದ್ದು, ಒಂದು ಸನ್ನಿವೇಶದಲ್ಲಿ ಬರುವ ಹಾಡಿಗೆ ಸನ್ನಿ ಕುಣಿದಿರುವುದು ವಿಶೇಷ. ಸಚಿನ್ ಅವರ ಚೊಚ್ಚಲು ಸಿನಿಮಾ ಇದಾಗಿದ್ದು, ಶಾಹುರಾಜ ಶಿಂಧೆ ನಿರ್ದೇಶನದಲ್ಲಿ ಚಿತ್ರ ಮೂಡಿ ಬಂದಿದೆ. ಇದನ್ನೂ ಓದಿ : ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದು ಹೇಳಿ ನಾಚಿ ನೀರಾದ ಆಲಿಯಾ

    ಡಿಂಗರ್ ಬಿಲ್ಲಿ ಎಂಬ ಸಾಹಿತ್ಯದಿಂದ ಶುರುವಾಗುವ ಈ ಗೀತೆಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಉತ್ತರ ಕರ್ನಾಟಕ ಭಾಷೆಯ ಸೊಗಡನ್ನು ಈ ಸಾಹಿತ್ಯದಲ್ಲಿ ಬಳಸಿಕೊಂಡಿದ್ದಾರೆ ಶಿವು ಬೊರಗಿ. ಅಂದಹಾಗೆ ಈ ಸಿನಿಮಾದಲ್ಲಿ ಸಚಿನ್ ನಾಯಕನಾದರೆ, ಅದಿತಿ ಪ್ರಭುದೇವ ನಾಯಕಿ. ಚಿಕ್ಕಣ್ಣ, ಪ್ರಶಾಂತ್ ಸಿದ್ದಿ, ಹಿರಿಯ ನಟರಾದ ದೇವರಾಜ್ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿದ್ದಾರೆ.