Tag: sachin tendulkar

  • ರಾಮಮಂದಿರ ಪ್ರಾಣಪ್ರತಿಷ್ಠೆಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ಗೆ ಆಹ್ವಾನ

    ರಾಮಮಂದಿರ ಪ್ರಾಣಪ್ರತಿಷ್ಠೆಗೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್‌ಗೆ ಆಹ್ವಾನ

    ನವದೆಹಲಿ: ರಾಮಮಂದಿರದಲ್ಲಿರುವ (Ram Mandir) ಬಾಲರಾಮನ ಪ್ರಾಣಪ್ರತಿಷ್ಠೆಗೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದೆ. ವಿರಾಟ್ ಕೊಹ್ಲಿಯ (Virat Kohli) ಬಳಿಕ ಇದೀಗ ಭಾರತದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ (Sachin Tendulkar) ಅವರಿಗೂ ಅಯೋಧ್ಯೆಯ (Ayodhya) ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ.

    ಕಾರ್ಯಕ್ರಮದ ಉಸ್ತುವಾರಿಯನ್ನು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನೋಡಿಕೊಳ್ಳುತ್ತಿದೆ. ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಕೇವಲ 9 ದಿನಗಳು ಉಳಿದಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ವಿಶೇಷ ಅತಿಥಿಗಳಿಗೆ ಉಡುಗೊರೆಗಳನ್ನು ಒಳಗೊಂಡಂತೆ ಅವರಿಗೆ ಬೇಕಾದ ಸಕಲ ವ್ಯವಸ್ಥೆಯನ್ನು ಟ್ರಸ್ಟ್ ಮಾಡುತ್ತಿದೆ. ವಿಶೇಷ ಅತಿಥಿಗಳಿಗೆ ನೀಡಲಾಗುವ ಉಡುಗೊರೆಗಳು ದೇವಾಲಯದ ಶಂಕುಸ್ಥಾಪನೆಯ ಸಮಯದಲ್ಲಿ ತೆಗೆದ ಮಣ್ಣನ್ನು (ರಾಮ್‌ರಾಜ್) ಒಳಗೊಂಡಿದೆ. ಅಲ್ಲದೇ ಕಾರ್ಯಕ್ರಮದ ಅಂಗವಾಗಿ ಸಮಾರಂಭದ ದಿನದಂದು ಅತಿಥಿಗಳಿಗೆ ವಿಶೇಷವಾಗಿ ದೇಶಿ ತುಪ್ಪದಿಂದ ತಯಾರಿಸಲಾಗುವ ಮೋತಿಚೂರು ಲಡ್ಡನ್ನು ಪ್ರಸಾದವಾಗಿ ವಿತರಿಸಲಾಗುತ್ತದೆ. ಇದನ್ನೂ ಓದಿ: ಮೈಸೂರಿನಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಅತಿಹೆಚ್ಚು ದೇಣಿಗೆ ಕೊಟ್ಟಿದ್ದು ಮುಸ್ಲಿಮರು!

    ಜನವರಿ 22ರಂದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ನೇತೃತ್ವ ವಹಿಸಲಿದ್ದಾರೆ ಮತ್ತು ಜಟಾಯು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಇದನ್ನೂ ಓದಿ: Ayodhya Ram Mandir: ಕಾಶಿ ಯಜ್ಞಶಾಲೆಯಲ್ಲಿ 40 ದಿನ ವಿಶೇಷ ಪೂಜೆ – ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ

     

  • ಕ್ರಿಕೆಟ್‌ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್‌, ಸಿದ್ದು

    ಕ್ರಿಕೆಟ್‌ ದೇವರನ್ನು ಆಕಸ್ಮಿಕವಾಗಿ ಭೇಟಿಯಾದ ಸಿಎಂ – ಒಂದೇ ಫ್ರೇಮ್‌ನಲ್ಲಿ ಸಚಿನ್‌, ಸಿದ್ದು

    ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್‌ರನ್ನ (Sachin Tendulkar) ಆಕಸ್ಮಿಕವಾಗಿ ಭೇಟಿಯಾದ ಪ್ರಸಂಗ ನಡೆಯಿತು.

    ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಗುರುವಾರ ಸಚಿನ್‌ ತೆಂಡೂಲ್ಕರ್‌ ಅವರು ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟರು. ಈ ಸಂತಸವನ್ನು ಸಿಎಂ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Virat Kohli: ಸಚಿನ್‌ ತೆಂಡೂಲ್ಕರ್‌ ಮತ್ತೊಂದು ದಾಖಲೆ ಉಡೀಸ್‌ ಮಾಡಿದ ಕೊಹ್ಲಿ!

    ಟೀಂ ಇಂಡಿಯಾ ಮಾಜಿ ನಾಯಕರೂ ಆಗಿರುವ ಸಚಿನ್‌ ತೆಂಡೂಲ್ಕರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಈಗಲೂ ಸಚಿನ್‌ ಹೆಸರಿನಲ್ಲಿರುವ ಮಹತ್ವದ ದಾಖಲೆಗಳು ಯಾರೂ ಮುರಿಯಲಾಗದೇ ಸಾರ್ವಕಾಲಿಕವಾಗಿ ಉಳಿದುಕೊಂಡಿವೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 15,921 ರನ್‌ ಸಿಡಿಸಿರುವ ತೆಂಡೂಲ್ಕರ್‌, ಬರೋಬ್ಬರಿ 51 ಶತಕಗಳನ್ನು ಸಿಡಿಸಿದ್ದಾರೆ. ಸುದೀರ್ಘ ಸ್ವರೂಪದಲ್ಲಿ ಇಷ್ಟೊಂದು ಶತಕ ಯಾರೂ ಸಿಡಿಸಿಲ್ಲ. ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳೊಂದಿಗೆ 18,426 ರನ್‌ಗನ್‌ಗಳ ಪೇರಿಸಿ ವಿಶ್ವದ ಗರಿಷ್ಠ ರನ್‌ಗಳಿಸಿದ ಏಕೈಕ ಆಟಗಾರನಾಗಿದ್ದಾರೆ.

    2023ರಲ್ಲಿ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಸಚಿವ್‌ ಅವರ 49 ಶತಕಗಳ ದಾಖಲೆಯನ್ನ ನುಚ್ಚುನೂರು ಮಾಡಿದರು. ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ ವೃತ್ತಿ ಬದುಕಿನ 50ನೇ ಶತಕ ದಾಖಲಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಆಟಗಾರನೊಬ್ಬ ಸಿಡಿಸಿದ ಅತಿಹೆಚ್ಚು ಶತಕಗಳಾಗಿವೆ. ಆದ್ರೆ ಅವರ ಒಟ್ಟಾರೆ ಗರಿಷ್ಠ ಸ್ಕೋರ್‌ ದಾಖಲೆಯನ್ನು ಈವರೆಗೆ ಯಾರೂ ಮುರಿದಿಲ್ಲ. ಇದನ್ನೂ ಓದಿ: 20 ವರ್ಷಗಳ ಹಿಂದಿನ ಸಚಿನ್‌ ವಿಶ್ವದಾಖಲೆಯನ್ನು ಮುರಿದ ಕೊಹ್ಲಿ

  • World Cup 2023- ನೀವು ನಮ್ಮ ಹೆಮ್ಮೆ- ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಸಚಿನ್ ಜೆರ್ಸಿ ಗಿಫ್ಟ್

    World Cup 2023- ನೀವು ನಮ್ಮ ಹೆಮ್ಮೆ- ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಸಚಿನ್ ಜೆರ್ಸಿ ಗಿಫ್ಟ್

    ಅಹಮದಾಬಾದ್: ವಿಶ್ವಕಪ್ 2023ರ (World Cup 2023) ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium Ahemadabad) ನಡೆದ ಒಂದು ಘಟನೆ ಹೃದಯಸ್ಪರ್ಶಿ ಕ್ಷಣಕ್ಕೆ ಸಾಕ್ಷಿಯಾಗಿದೆ.

    ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (sachin Tendulakr) ಅವರು ತಮ್ಮ ಸಹಿ ಇರುವ ಜೆರ್ಸಿಯನ್ನು ವಿರಾಟ್ ಕೊಹ್ಲಿಗೆ (Virat Kohli) ಉಡುಗೊರೆಯಾಗಿ ನೀಡಿದ ಪ್ರಸಂಗ ನಡೆಯಿತು. ಜೆರ್ಸಿಯಲ್ಲಿ (Jersey) ಸಹಿ ಜೊತೆಗೆ ವಿರಾಟ್, ನೀವು ನಮ್ಮನ್ನು ಹೆಮ್ಮೆ ಪಡಿಸಿದ್ದೀರಿ ಎಂಬ ಹೃತ್ಪೂರ್ವಕ ಸಂದೇಶ ಕೂಡ ಬರೆಯಲಾಗಿದೆ. ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವು ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮುನ್ನವೇ ಮಾಸ್ಟರ್ ಬ್ಲಾಸ್ಟರ್ ನ ಈ ಭಾವನಾತ್ಮಕ ನಡೆಗೆ ಕ್ರೀಡಾಭಿಮಾನಿಗಳು ಸಾಕ್ಷಿಯಾದರು.

     

    View this post on Instagram

     

    A post shared by ICC (@icc)

     

    ಈ ಜೆರ್ಸಿಯು ಬಹಲ ಪ್ರಾಮುಖ್ಯತೆ ಪಡೆದಿದೆ. ಇದು 100 ಅಂತಾರಾಷ್ಟ್ರೀಯ ಶತಕಗಳನ್ನು ಗಳಿಸಿದ ಮೊದಲ ಬ್ಯಾಟ್ಸ್ ಮನ್ ತೆಂಡೂಲ್ಕರ್‌ರಿಂದ ಹಿಡಿದು ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ದಾಖಲೆಗಳನ್ನು ಮುರಿದು ಹೊಸ ಮಾನದಂಡಗಳನ್ನು ಸ್ಥಾಪಿಸುತ್ತಿರುವ ಕೊಹ್ಲಿಯವರೆಗೆ ಒಂದು ಪೀಳಿಗೆಯಿಂದ ಮುಂದಿನ ಪೀಳಿಗೆಗೆ ರವಾನೆಯಾದ ಜ್ಯೋತಿಯನ್ನು ಪ್ರತಿನಿಧಿಸುತ್ತದೆ.

    ಸಹಿ ಹಾಕಿದ ಜೆರ್ಸಿ ಕೇವಲ ಸ್ಮರಣಿಕೆಗಳಲ್ಲ; ಇದು ತೆಂಡೂಲ್ಕರ್ ಅವರ ಮನ್ನಣೆಯ ಸಂಕೇತವಾಗಿದೆ. ಭಾರತ ಕ್ರಿಕೆಟ್‍ಗೆ ಕೊಹ್ಲಿಯ ಕೊಡುಗೆಗಳನ್ನು ಮತ್ತು ರಾಷ್ಟ್ರವನ್ನು ಪ್ರೇರೇಪಿಸುವಲ್ಲಿ ಅವರ ಪಾತ್ರವನ್ನು ಗುರುತಿಸುತ್ತದೆ. ಇದನ್ನೂ ಓದಿ: ಮೂರು ಫೈನಲ್‌ ಪೈಕಿ ಟಾಸ್‌ ಸೋತ ಎರಡರಲ್ಲಿ ಭಾರತ ಚಾಂಪಿಯನ್‌ – ಈ ಬಾರಿ ಏನಾಗಬಹುದು?

    ಈ ಹಿಂದೆ ಭಾರತ ಹಾಗೂ ಪಾಕಿಸ್ತಾನ (India- Pakistan) ನಡುವಿನ ಪಂದ್ಯ ಮುಗಿದ ನಂತರ ಪಾಕಿಸ್ತಾನ ನಾಯಕ ಬಾಬರ್ ಆಜಮ್ ಅವರನ್ನು ವಿರಾಟ್ ಕೊಹ್ಲಿ  ಮೈದಾನದಲ್ಲೇ ಭೇಟಿ ಮಾಡಿ ಧೈರ್ಯ ತುಂಬಿದ್ದಲ್ಲದೆ ತಮ್ಮ ಹಸ್ತಾಕ್ಷರವುಳ್ಳ ಭಾರತ ತಂಡದ 2 ಜೆರ್ಸಿಗಳನ್ನು ನೀಡುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದರು. ಈ ಫೋಟೋ ‘ಎಕ್ಸ್’ ಖಾತೆ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

  • ವಿಶ್ವಕಪ್ ಗೆಲ್ಲುವ ನಿರೀಕ್ಷೆಯಿದೆ- ಟೀಂ ಇಂಡಿಯಾಗೆ ತೆಂಡೂಲ್ಕರ್ ವಿಶ್

    ವಿಶ್ವಕಪ್ ಗೆಲ್ಲುವ ನಿರೀಕ್ಷೆಯಿದೆ- ಟೀಂ ಇಂಡಿಯಾಗೆ ತೆಂಡೂಲ್ಕರ್ ವಿಶ್

    – ಸ್ಟೇಡಿಯಂನತ್ತ ಟೀಂ ಇಂಡಿಯಾ

    ಅಹಮದಾಬಾದ್: ವಿಶ್ವಕಪ್ 2023ರ (World Cup 2023) ಫೈನಲ್ ಪಂದ್ಯಕ್ಕೆ ಈಗಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮೂರನೇ ಏಕದಿನದ ವಿಶ್ವಕಪ್‌ಗಾಗಿ ಹೋರಾಟ ನಡೆಸಲಿದೆ. ಈ ನಡುವೆ ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಪಂದ್ಯ ಪ್ರಾರಂಭಕ್ಕೂ ಗಂಟೆಗಳ ಮೊದಲು ಅಹಮದಾಬಾದ್‌ಗೆ ಆಗಮಿಸಿದ್ದಾರೆ.

    ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮಾಜಿ ಕ್ರಿಕೆಟಿಗ, ಎಲ್ಲರೂ ಈ ದಿನಕ್ಕಾಗಿ ಕಾಯುತ್ತಿದ್ದಾರೆ. ನಾನು ಟೀಂ ಇಂಡಿಯಾಗೆ ಶುಭಾಶಯ ಹೇಳಲು ಬಂದಿದ್ದೇನೆ. ವಿಶ್ವಕಪ್‌ಗಾಗಿ ಹಣಾಹಣಿಯಲ್ಲಿರುವ ಭಾರತ ಟ್ರೋಫಿ ಎತ್ತಿಹಿಡಿಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಗೆಲುವಿಗಾಗಿ ಇಶನ್ ಕಿಶನ್ ಕುಟುಂಬಸ್ಥರಿಂದ ವಿಶೇಷ ಪೂಜೆ

    ವಿಶ್ವಕಪ್‌ಗಾಗಿ ಹೋರಾಟ ನಡೆಸಲಿರುವ ಕ್ರಿಕೆಟಿಗರು ಈಗಾಗಲೇ ಸ್ಟೇಡಿಯಂಗೆ ಲಗ್ಗೆಯಿಟ್ಟಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ಪ್ರಾರಂಭವಾಗಲಿದೆ. ಮೋದಿ ಸ್ಟೇಡಿಯಂನೆಡೆಗೆ ಸಾವಿರಾರು ಕ್ರಿಕೆಟ್ ಅಭಿಮಾನಿಗಳ ದಂಡು ಹೊರಟಿದೆ. ಭಾರತಕ್ಕೆ ಕಪ್ ಒಲಿದು ಬರಲಿ ಎಂದು ದೇಶಾದ್ಯಂತ ಎಲ್ಲೆಡೆ ಪೂಜೆ ಪುನಸ್ಕಾರಗಳು ನೆರವೇರಿಸಲಾಗುತ್ತಿದೆ. ಇದನ್ನೂ ಓದಿ: 13 ವಿಶ್ವಕಪ್‍ನಲ್ಲಿ 8ನೇ ಬಾರಿ ಫೈನಲ್- 5 ಬಾರಿ ಚಾಂಪಿಯನ್ ಆಗಿರೋ ಆಸ್ಟ್ರೇಲಿಯಾ

  • ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

    ವಿಶ್ವದಾಖಲೆಯ ಶತಕ ಸಿಡಿಸಿದ ಕೊಹ್ಲಿಗೆ ಪಾಕ್‌ ಕ್ರಿಕೆಟಿಗನಿಂದ ʻಚಕ್ರವರ್ತಿʼ ಬಿರುದು – ಅಭಿನಂದನೆಗಳ ಮಹಾಪೂರ

    ಮುಂಬೈ: ಸದ್ಯ ವಿಶ್ವಕಪ್‌ ಕ್ರಿಕೆಟ್‌ (World Cup Cricket) ಟೂರ್ನಿಯಲ್ಲಿ ವಿಶ್ವದಾಖಲೆಯ ಶತಕ ಸಿಡಿಸಿರುವ ವಿರಾಟ್‌ ಕೊಹ್ಲಿ (Virat Kohli) ಸುದ್ದಿಯಲ್ಲಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಏಕದಿನ ಕ್ರಿಕೆಟ್‌ನ 50ನೇ ಶತಕ ಸಿಡಿಸುವ ಮೂಲಕ ಕೊಹ್ಲಿ ಕ್ರಿಕೆಟ್‌ ಆರಾಧ್ಯ ದೈವ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆ ಮುರಿದಿದ್ದಾರೆ.

    ಕೊಹ್ಲಿ ಶತಕ ಸಂಭ್ರಮವನ್ನು ವಿಶ್ವದಾದ್ಯಂತ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಹಿರಿಯ ಕ್ರಿಕೆಟಿಗರಿಂದಲೂ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಈ ನಡುವೆ ಪಾಕ್‌ ಮಾಜಿ ಕ್ರಿಕೆಟಿಗ ಮಾಸಿಂ ಅಕ್ರಮ್‌ ಕೊಹ್ಲಿಗೆ ʻಚಕ್ರವರ್ತಿʼ ಎಂಬ ಬಿರುದು ನೀಡಿದ್ದಾರೆ. ಇತರರು ಏನು ಹೇಳಿದ್ದಾರೆ ಎಂಬುದನ್ನು ತಿಳಿಯಲು ಮುಂದೆ ಓದಿ…

    ನರೇಂದ್ರ ಮೋದಿ (Narendra Modi): ವಿರಾಟ್‌ ಕೊಹ್ಲಿ ಅವರು ತಮ್ಮ ಏಕದಿನ ಕ್ರಿಕೆಟ್‌ನ 50ನೇ ಶತಕ ಸಿಡಿಸುವ ಮೂಲಕ ಕ್ರೀಡಾ ಮನೋಭಾವ ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವ ಸಹ ಪ್ರದರ್ಶಿಸಿದ್ದಾರೆ. ಇದು ಮತ್ತೊಂದು ಮೈಲುಗಲ್ಲಾಗಿದ್ದು, ಅವರ ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ.

    ಸಚಿನ್‌ ತೆಂಡೂಲ್ಕರ್‌ (Sachin Tendulkar): ಅಂದು ನಾನು ನಿಮ್ಮನ್ನು ಮೊದಲ ಬಾರಿಗೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಭೇಟಿಯಾದಾಗ, ನನ್ನ ಪಾದ ಮುಟ್ಟುವಂತೆ ಇತರ ತಂಡದ ಸದಸ್ಯರು ನಿಮ್ಮನ್ನ ತಮಾಷೆ ಮಾಡಿದ್ದರು. ಆ ದಿನ ನನಗೆ ನಗು ತಡೆಯಲಾಗಲಿಲ್ಲ. ಆದ್ರೆ ಅತೀ ಶೀಘ್ರದಲ್ಲೇ, ನಿಮ್ಮ ಉತ್ಸಾಹ ಮತ್ತು ಕೌಶಲ್ಯದಿಂದ ನೀವು ನನ್ನ ಹೃದಯ ಮುಟ್ಟಿದ್ದೀರಿ. ಆ ಚಿಕ್ಕ ಹುಡುಗ ‘ವಿರಾಟ್’ ಆಟಗಾರನಾಗಿ ಬೆಳೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗಿದೆ.

    ವಾಸಿಂ ಅಕ್ರಮ್‌ (Wasim Akram): ನಾವಿಂದು ವಿರಾಟ್‌ ಕೊಹ್ಲಿ ಯುಗದಲ್ಲಿ ಬದುಕುತ್ತಿದ್ದೇವೆ. ಧನ್ಯವಾದಗಳು ʻಚಕ್ರವರ್ತಿʼ. ಇದನ್ನೂ ಓದಿ: ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

    ಮೊಹಮ್ಮದ್‌ ಅಫೀಜ್‌ (Mohammad Hafeez): ವಿಶ್ವದಾಖಲೆಯ ಏಕದಿನ ಶತಕ ಸಿಡಿಸಿದ ವಿರಾಟ್‌ ಕೊಹ್ಲಿಗೆ ಅಭಿನಂದನೆಗಳು. ವಿಶ್ವದಾದ್ಯಂತ ಕ್ರಿಕೆಟ್‌ ಅಭಿಮಾನಿಗಳನ್ನು ನೀವು ರಂಜಿಸುತ್ತಿದ್ದೀರಿ, ನೀವು ಇನ್ನಷ್ಟು ಆರೋಗ್ಯವಾಗಿರಿ.

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: 20 ವರ್ಷಗಳ ಕಾಲ ಇದ್ದ ಸುಪ್ರೀಂ ದಾಖಲೆಗಳಿಗೆ ಕೊಹ್ಲಿ ಗ್ರಹಣ ಬಿಡಿಸಿದ್ದಾರೆ. ಒಂದೇ ವಿಶ್ವಕಪ್‌ ಆವೃತ್ತಿಯಲ್ಲಿ ಅತಿಹೆಚ್ಚು ರನ್‌ ಗಳಿಸಿದ ವಿರಾಟ್‌ ಕೊಹ್ಲಿ ಕ್ರಿಕೆಟ್‌ ಆರಾಧ್ಯ ದೈವ ಸಚಿನ್‌ ದಾಖಲೆಯನ್ನ ಹಿಂದಿಕ್ಕಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ನಲ್ಲಿ ಕಳಪೆ ಪ್ರದರ್ಶನಕ್ಕೆ ತಲೆದಂಡ – ಪಾಕ್‌ ತಂಡದ ನಾಯಕತ್ವಕ್ಕೆ ಬಾಬರ್‌ ಆಜಂ ಗುಡ್‌ಬೈ

  • ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

    ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

    ಮುಂಬೈ: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ ತನ್ನ ದಾಖಲೆಯನ್ನು ಮುರಿದ ಕೊಹ್ಲಿಗೆ (Virat Kohli) ಲೆಜೆಂಡ್‌ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅಭಿನಂದಿಸಿದ್ದಾರೆ.

    ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ನಡೆದ ಪಂದ್ಯದಲ್ಲಿ, ಕೊಹ್ಲಿ ತಮ್ಮ ವೃತ್ತಿಬದುಕಿನ 80ನೇ ಶತಕವನ್ನು ದಾಖಲಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿನ್‌, ಕೊಹ್ಲಿಗೆ ಭಾವುಕ ನುಡಿಗಳ ಮೂಲಕ ಧನ್ಯವಾದ ಅರ್ಪಿಸಿದ್ದಾರೆ. ಅಂದು ನಾನು ನಿಮ್ಮನ್ನು ಮೊದಲ ಬಾರಿಗೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಭೇಟಿಯಾದಾಗ, ನನ್ನ ಪಾದಗಳನ್ನು ಮುಟ್ಟುವಂತೆ ಇತರ ತಂಡದ ಸದಸ್ಯರು ನಿಮ್ಮನ್ನ ತಮಾಷೆ ಮಾಡಿದ್ದರು. ಆ ದಿನ ನನಗೆ ನಗು ತಡೆಯಲಾಗಲಿಲ್ಲ. ಆದ್ರೆ ಅತೀ ಶೀಘ್ರದಲ್ಲೇ, ನಿಮ್ಮ ಉತ್ಸಾಹ ಮತ್ತು ಕೌಶಲ್ಯದಿಂದ ನೀವು ನನ್ನ ಹೃದಯ ಮುಟ್ಟಿದ್ದೀರಿ. ಆ ಚಿಕ್ಕ ಹುಡುಗ ‘ವಿರಾಟ್’ ಆಟಗಾರನಾಗಿ ಬೆಳೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗಿದೆ ಎಂದು ಭಾವುಕವಾಗಿ ಮಾತನಾಡಿದ್ದಾರೆ.

    ವಾಂಖೆಡೆ ಕ್ರೀಡಾಂಗಣದಲ್ಲಿ ಕೊಹ್ಲಿ ತಮ್ಮ ಏಕದಿನ ಕ್ರಿಕೆಟ್‌ನ 50ನೇ ಶತಕ ಸಿಡಿಸಿ ಸಂಭ್ರಮಿಸುತ್ತಿದ್ದಂತೆ ಅಭಿಮಾನಿಗಳು ಈ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದರು. ಇದೇ ವೇಳೆ ಕೊಹ್ಲಿ ಸಚಿನ್‌ ತೆಂಡೂಲ್ಕರ್‌ ಅವರಿಗೆ ಸ್ಟೇಡಿಯಂನಿಂದಲೇ ಶಿರಬಾಗಿ ನಮಸ್ಕರಿದರು. ಪ್ರತಿಯಾಗಿ ಸಚಿನ್‌ ತೆಂಡೂಲ್ಕರ್‌ ಅವರು ಎದ್ದುನಿಂತು ಚಪ್ಪಾಳೆ ಬಾರಿಸುವ ಮೂಲಕ ಗೌರವ ತೋರಿದರು. ಇದನ್ನೂ ಓದಿ: 50th Century: ಶತಕ ಸಂಭ್ರಮದಲ್ಲಿ ಅನುಷ್ಕಾಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಕೊಹ್ಲಿ..!

    2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸಿ ಸಚಿನ್‌ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನ ಸರಿಗಟ್ಟಿದ್ದರು. ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದರು. ಬುಧವಾರ (ನ.15) ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 106 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ. ಒಟ್ಟು 113 ಎಸೆತಗಳನ್ನು ಎದುರಿಸಿದ ಕೊಹ್ಲಿ 117 ರನ್‌ (2 ಸಿಕ್ಸರ್‌, 9 ಬೌಂಡರಿ) ಬಾರಿಸಿ ಔಟಾದರು.

    ಕಿವೀಸ್‌ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ತಮ್ಮ ವೃತ್ತಿಜೀವನದ 80ನೇ ಶತಕ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 50 ಶತಕ ಸಿಡಿಸಿದ್ದಾರೆ. ಇನ್ನೂ 49 ಶತಕಗಳನ್ನು ಸಿಡಿಸಿರುವ ಸಚಿನ್‌ ತೆಂಡೂಲ್ಕರ್‌ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: World Cup Semifinal: ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

  • 50th Century: ಶತಕ ಸಂಭ್ರಮದಲ್ಲಿ ಅನುಷ್ಕಾಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಕೊಹ್ಲಿ..!

    50th Century: ಶತಕ ಸಂಭ್ರಮದಲ್ಲಿ ಅನುಷ್ಕಾಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಕೊಹ್ಲಿ..!

    ಮುಂಬೈ: ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli) ನ್ಯೂಜಿಲೆಂಡ್‌ ವಿರುದ್ಧ ನಡೆಯುತ್ತಿರುವ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ವಿಶ್ವದಾಖಲೆಯೊಂದನ್ನ ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್‌ ದೇವರು ಖ್ಯಾತಿಯ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ದಾಖಲೆಯನ್ನ ಪುಡಿಪುಡಿ ಮಾಡಿದ್ದಾರೆ.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸಿದ ಕ್ಷಣವನ್ನು ಅಭಿಮಾನಿಗಳು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದರು. ಇದೇ ವೇಳೆ ಕೊಹ್ಲಿ ಸಚಿನ್‌ ತೆಂಡೂಲ್ಕರ್‌ ಅವರಿಗೆ ಸ್ಟೇಡಿಯಂನಿಂದಲೇ ಶಿರಬಾಗಿ ನಮಸ್ಕರಿದರು. ಪ್ರತಿಯಾಗಿ ಸಚಿನ್‌ ತೆಂಡೂಲ್ಕರ್‌ ಅವರು ಎದ್ದುನಿಂತು ಚಪ್ಪಾಳೆ ಬಾರಿಸುವ ಮೂಲಕ ಗೌರವ ತೋರಿದರು. ಈ ಸಂದರ್ಭದಲ್ಲಿ ಪತ್ನಿಯನ್ನು ಕೊಹ್ಲಿ ಮರೆಯಲಿಲ್ಲ. ಅನುಷ್ಕಾ, ಕೊಹ್ಲಿಯತ್ತ ನೋಡುತ್ತಲೇ ಮುತ್ತಿನ ಸುರಿಮಳೆ ಸುರಿಸಿದರು. ಕೊಹ್ಲಿ ಸಹ ಅನುಷ್ಕಾಗೆ (Anushka Sharma) ಗಾಳಿಯಲ್ಲಿ ಮುತ್ತು ತೇಲಿಸಿ ತಮ್ಮ ಪ್ರೀತಿ ಹಂಚಿಕೊಂಡರು. ಈ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

    2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸಿ ಸಚಿನ್‌ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನ ಸರಿಗಟ್ಟಿದ್ದರು. ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದರು. ಬುಧವಾರ (ನ.15) ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 106 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ. ಒಟ್ಟು 113 ಎಸೆತಗಳನ್ನು ಎದುರಿಸಿದ ಕೊಹ್ಲಿ 117 ರನ್‌ (2 ಸಿಕ್ಸರ್‌, 9 ಬೌಂಡರಿ) ಬಾರಿಸಿ ಔಟಾದರು. ಇದನ್ನೂ ಓದಿ: World Cup Semifinal: ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

    ಕಿವೀಸ್‌ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ತಮ್ಮ ವೃತ್ತಿಜೀವನದ 80ನೇ ಶತಕ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 50 ಶತಕ ಸಿಡಿಸಿದ್ದಾರೆ. ಇನ್ನೂ 49 ಶತಕಗಳನ್ನು ಸಿಡಿಸಿರುವ ಸಚಿನ್‌ ತೆಂಡೂಲ್ಕರ್‌ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: ಕೈಮುಗಿದು ನಿಟ್ಟುಸಿರು ಬಿಟ್ಟ ಅನುಷ್ಕಾ – ರಿಯಾಕ್ಷನ್‌ ಕಂಡು ಕೊಹ್ಲಿ ಫ್ಯಾನ್ಸ್ ಶಾಕ್‌

  • 20 ವರ್ಷಗಳ ಹಿಂದಿನ ಸಚಿನ್‌ ವಿಶ್ವದಾಖಲೆಯನ್ನು ಮುರಿದ ಕೊಹ್ಲಿ

    20 ವರ್ಷಗಳ ಹಿಂದಿನ ಸಚಿನ್‌ ವಿಶ್ವದಾಖಲೆಯನ್ನು ಮುರಿದ ಕೊಹ್ಲಿ

    ಮುಂಬೈ: ದಾಖಲೆ ಮೇಲೆ ದಾಖಲೆ ನಿರ್ಮಿಸುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ವಿಶ್ವಕಪ್‌ನಲ್ಲಿ ಸಚಿನ್‌ ತೆಂಡೂಲ್ಕರ್‌ (Sachin Tendulkar) ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು (World Record) ಮುರಿದಿದ್ದಾರೆ.

    ಒಟ್ಟು 10 ಪಂದ್ಯಗಳಿಂದ 711 ರನ್‌ಗಳಿಸುವ ಮೂಲಕ ಕೊಹ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಸಚಿನ್‌ 2003ರ ವಿಶ್ವಕಪ್‌ನಲ್ಲಿ 673 ರನ್‌ ಹೊಡೆದಿದ್ದರು.

    673 ರನ್‌ ಸಿಡಿಸುವ ಮೂಲಕ ವಿಶ್ವಕಪ್ (World Cup Cricket) ಟೂರ್ನಿಯೊಂದರಲ್ಲಿ ಅತಿಹೆಚ್ಚು ರನ್ ದಾಖಲಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2003ರಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಫೈನಲ್‌ನಲ್ಲಿ ಸೋತರೂ ಸಚಿನ್‌ ಅವರ ಅತ್ಯುತ್ತಮ ಆಟಕ್ಕೆ ಸರಣಿ ಶ್ರೇಷ್ಠ ಪ್ರಶಸ್ತಿ ಸಿಕ್ಕಿತ್ತು.  ಇದನ್ನೂ ಓದಿ: World Cup Semifinal: ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

    ಈ ಸಾಧನೆ ನಿರ್ಮಿಸಿ 20 ವರ್ಷ ಕಳೆದರೂ ಈ ದಾಖಲೆ ಇನ್ನೂ ಸಚಿನ್ ಹೆಸರಿನಲ್ಲೇ ಇತ್ತು. ಸಚಿನ್‌ 11 ಪಂದ್ಯಗಳಿಂದ ಈ ದಾಖಲೆ ನಿರ್ಮಿಸಿದ್ದರೆ ಕೊಹ್ಲಿ 10 ಪಂದ್ಯಗಳಿಂದ 700 ರನ್‌ಗಳ ಗಡಿಯನ್ನು ದಾಟಿದ್ದಾರೆ.

    ನ್ಯೂಜಿಲೆಂಡ್‌ ವಿರುದ್ಧದ  ಸೆಮಿಫೈನಲ್‌ ಪಂದ್ಯದಲ್ಲಿ 106 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿ ಕೊಹ್ಲಿ ವಿಶ್ವದಾಖಲೆ ಬರೆದಿದ್ದಾರೆ. ಅಂತಿಮವಾಗಿ ಕೊಹ್ಲಿ 117 ರನ್‌ (113 ಎಸೆತ, 9 ಬೌಂಡರಿ, 2 ಸಿಕ್ಸ್‌) ಸಿಡಿಸಿ ಔಟಾದರು.

     

    View this post on Instagram

     

    A post shared by ICC (@icc)

    ಸದ್ಯ ಈ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಕ್ವಿಂಟನ್‌ ಡಿಕಾಕ್‌ 591 ರನ್‌, ನ್ಯೂಜಿಲೆಂಡಿನ ರಚಿನ್‌ ರವೀಂದ್ರ 565 ರನ್‌, ರೋಹಿತ್‌ ಶರ್ಮಾ 550 ರನ್‌ ಹೊಡೆದಿದ್ದಾರೆ.

    ಅತಿ ಹೆಚ್ಚು ರನ್‌ ಹೊಡೆದ ಆಟಗಾರರು:
    ವಿರಾಟ್‌ ಕೊಹ್ಲಿ 711 ರನ್‌, ಸಚಿನ್‌ ತೆಂಡೂಲ್ಕರ್‌ 673 ರನ್‌ (2003), ಮಾಥ್ಯೂ ಹೇಡನ್‌ 659 ರನ್‌ (2007), ರೋಹಿತ್‌ ಶರ್ಮಾ 648 ರನ್‌ (2019)

  • World Cup Semifinal: ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

    World Cup Semifinal: ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

    ಮುಂಬೈ: ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) 50ನೇ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನ ನುಚ್ಚುನೂರು ಮಾಡಿದ್ದಾರೆ.

    2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ ವಿರುದ್ಧ ನಡೆದ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿ ಮೆರೆದಾಡಿದ್ದಾರೆ. ಇದರೊಂದಿಗೆ 2019ರ ವಿಶ್ವಕಪ್‌ ಪಂದ್ಯದಲ್ಲಿ ತಮಗಾದ ನೋವಿಗೆ ಕಿವೀಸ್‌ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ.

    ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸಿ ಸಚಿನ್‌ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನ ಸರಿಗಟ್ಟಿದ್ದರು. ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದರು. ಬುಧವಾರ (ನ.15) ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 106 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ.

    ಕಿವೀಸ್‌ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ತಮ್ಮ ವೃತ್ತಿಜೀವನದ 80ನೇ ಶತಕ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 50 ಶತಕ ಸಿಡಿಸಿದ್ದಾರೆ. ಇನ್ನೂ 49 ಶತಕಗಳನ್ನು ಸಿಡಿಸಿರುವ ಸಚಿನ್‌ ತೆಂಡೂಲ್ಕರ್‌ 2ನೇ ಸ್ಥಾನಕ್ಕೆ ಕುಸಿದಿದ್ದಾರೆ.

    2019ರ ವಿಶ್ವಕಪ್‌ನಲ್ಲಿ ಏನಾಗಿತ್ತು..?
    2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ವಿರುದ್ಧ ಭಾರತ 18 ರನ್‌ಗಳ ಅಂತರದಿಂದ ಸೋಲನುಭವಿಸಿತ್ತು. ಅಂದು ನಾಯಕನಾಗಿದ್ದ ಕೊಹ್ಲಿ ಕೇವಲ 1 ರನ್‌ಗೆ ಎಲ್‌ಬಿಡಬ್ಲ್ಯೂಗೆ ತುತ್ತಾಗಿದ್ದರು. ಕೊಹ್ಲಿ ಡಿಆರ್‌ಎಸ್‌ಗೆ ಮನವಿ ಮಾಡಿದಾಗ ಬಾಲ್ ಟ್ರ‍್ಯಾಂಕಿಂಗ್‌ನಲ್ಲಿ ವಿಕೆಟ್‌ನಿಂದ ಚೆಂಡು ಒಂದಿಂಚು ಮೇಲಿರುವುದು ತೋರಿಸಿತ್ತು. ಆದ್ರೆ ಅದನ್ನು ಅಂಪೈರ್ ತೀರ್ಮಾನಕ್ಕೆ ಬಿಡಲಾಗಿತ್ತು. ಅಂಪೈರ್ ಮೊದಲೇ ಔಟ್ ತೀರ್ಪು ನೀಡಿದ್ದರಿಂದ ಔಟ್ ಎಂದು ಘೋಷಿಸಲಾಯಿತು. ಇದರಿಂದ ಕೊಹ್ಲಿ ಅಂಪೈರ್ಸ್‌ ಕಾಲ್‌ ನಿಯಮದ ವಿರುದ್ಧ ಮೈದಾನದಲ್ಲೇ ಅಸಮಾಧಾನ ಹೊರಹಾಕಿದ್ದರು.

  • ಕೈಮುಗಿದು ನಿಟ್ಟುಸಿರು ಬಿಟ್ಟ ಅನುಷ್ಕಾ – ರಿಯಾಕ್ಷನ್‌ ಕಂಡು ಕೊಹ್ಲಿ ಫ್ಯಾನ್ಸ್ ಶಾಕ್‌

    ಕೈಮುಗಿದು ನಿಟ್ಟುಸಿರು ಬಿಟ್ಟ ಅನುಷ್ಕಾ – ರಿಯಾಕ್ಷನ್‌ ಕಂಡು ಕೊಹ್ಲಿ ಫ್ಯಾನ್ಸ್ ಶಾಕ್‌

    ಮುಂಬೈ: 2023ರ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯ ಆರಂಭವಾಗಿದ್ದು, ಭಾರತ-ನ್ಯೂಜಿಲೆಂಡ್‌ ನಡುವೆ ಸೆಣಸಾಟ ನಡೆದಿದೆ. ಈ ಪಂದ್ಯದಲ್ಲಿ ಕೊಹ್ಲಿ ಡಿಆರ್‌ಎಸ್‌‌ ರಿವ್ಯೂವ್‌ನಿಂದ (DRS Review) ಪಾರಾದ ಬಳಿಕ ಪತ್ನಿ ಅನುಷ್ಕಾ ಶರ್ಮಾ (Anushka Sharma) ಕೈಮುಗಿದು ನಿಟ್ಟುಸಿರು ಬಿಟ್ಟಿರುವ ದೃಶ್ಯ ಜಾಲತಾಣದಲ್ಲಿ ಹರಿದಾಡುತ್ತಿದೆ. ಅನುಷ್ಕಾ ರಿಯಾಕ್ಷನ್‌ ಕಂಡು ಕೊಹ್ಲಿ ಅಭಿಮಾನಿಗಳೂ ಶಾಕ್‌ ಆಗಿದ್ದಾರೆ.

    ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ (Rohit Sharma) ಮತ್ತು ಶುಭಮನ್‌ ಗಿಲ್‌ ಜೋಡಿ ಸ್ಫೋಟಕ ಆರಂಭ ಪಡೆದುಕೊಂಡಿತ್ತು. ಮೊದಲ ವಿಕೆಟ್‌ಗೆ ಈ ಜೋಡಿ 8.2 ಓವರ್‌ಗಳಲ್ಲಿ 71 ರನ್‌ ಬಾರಿಸಿತ್ತು. ಆದ್ರೆ 9ನೇ ಓವರ್‌ನಲ್ಲಿ ಟಿಮ್‌ ಸೌಥಿ ಬೌಲಿಂಗ್‌ನ 2ನೇ ಎಸೆತವನ್ನು ಸಿಕ್ಸರ್‌ಗೆ ಸಿಡಿಸಲು ಪ್ರಯತ್ನಿಸಿದ ರೋಹಿತ್‌ ಶರ್ಮಾ ಕ್ಯಾಚ್‌ಗೆ ತುತ್ತಾಗಿ ಪೆವಿಲಿಯನ್‌ಗೆ ಮರಳಿದರು. ಬಳಿಕ ಕ್ರೀಸ್‌ಗೆ ಬಂದ ಕೊಹ್ಲಿ (Virat Kohli) ಟಿಮ್‌ ಸೌತಿ ಬೌಲಿಂಗ್‌ನಲ್ಲೇ ಎಲ್‌ಬಿಡಬ್ಲ್ಯೂಗೆ ಔಟಾಗುವ ಸಾಧ್ಯತೆಯಿತ್ತು. ಕ್ಯಾಪ್ಟನ್‌ ವಿಲಿಯಮ್ಸನ್‌ ಡಿಆರ್‌ಎಸ್‌ಗೂ ಮನವಿ ಮಾಡಿದ್ದರು. ಆದ್ರೆ ಬಾಲ್‌ ಪ್ಯಾಡ್‌ಗೆ ಬಡಿಯುವುದಕ್ಕೂ ಮುನ್ನವೇ ಬ್ಯಾಟ್‌ಗೆ ತಾಗಿತ್ತು. ಆದ್ದರಿಂದ ಕೊಹ್ಲಿ ನಾಟೌಟ್‌ ಎಂದು ಘೋಷಿಸಲಾಯಿತು. ಕೊಹ್ಲಿ ನಾಟೌಟ್‌ ಎಂದು ತೀರ್ಪು ಅನುಷ್ಕಾ ಕೈಮುಗಿದು ನಿಟ್ಟುಸಿರು ಬಿಟ್ಟರು. ಅನುಷ್ಕಾ ಅವರ ರಿಯಾಕ್ಷನ್‌ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದೆ.

    ಕೊಹ್ಲಿ ಅವರಿಗೆ ಇದು ಅತ್ಯಂತ ನಿರ್ಣಾಯಕ ಪಂದ್ಯವಾಗಿದೆ. ಏಕೆಂದರೆ ಏಕದಿನ ಕ್ರಿಕೆಟ್‌ನಲ್ಲಿ 49 ಶತಕ ಸಿಡಿಸಿ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಸರಿಗಟ್ಟಿರುವ ಕೊಹ್ಲಿ 50ನೇ ಶತಕ ಸಿಡಿಸಿ ಕ್ರಿಕೆಟ್‌ ದೇವರ ದಾಖಲೆಯನ್ನ ಮುರಿಯುವ ಸಾಧ್ಯತೆಗಳಿವೆ. ಇದನ್ನೂ ಓದಿ: World Cup Semifinal: ಸಿಕ್ಸರ್‌ನಿಂದಲೇ ವಿಶ್ವದಾಖಲೆ ನಿರ್ಮಿಸಿದ ಹಿಟ್‌ಮ್ಯಾನ್‌

    2019ರ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಕಿವೀಸ್‌ ವಿರುದ್ಧ ಭಾರತ 18 ರನ್‌ಗಳ ಅಂತರದಿಂದ ಸೋಲನುಭವಿಸಿತ್ತು. ಅಂದು ನಾಯಕನಾಗಿದ್ದ ಕೊಹ್ಲಿ ಕೇವಲ 1 ರನ್‌ಗೆ LBWಗೆ ತುತ್ತಾಗಿದ್ದರು.

    ಕೊಹ್ಲಿ ಡಿಆರ್‌ಎಸ್‌ಗೆ ಮನವಿ ಮಾಡಿದಾಗ ಬಾಲ್‌ ಟ್ರ್ಯಾಂಕಿಂಗ್‌ನಲ್ಲಿ ವಿಕೆಟ್‌ನಿಂದ ಚೆಂಡು ಒಂದಿಂಚು ಮೇಲಿರುವುದು ತೋರಿಸಿತ್ತು. ಆದ್ರೆ ಅದನ್ನು ಅಂಪೈರ್‌ ತೀರ್ಮಾನಕ್ಕೆ ಬಿಡಲಾಗಿತ್ತು. ಅಂಪೈರ್‌ ಮೊದಲೇ ಔಟ್‌ ತೀರ್ಪು ನೀಡಿದ್ದರಿಂದ ಔಟ್‌ ಎಂದು ಘೋಷಿಸಲಾಯಿತು. ಇದರಿಂದ ಕೊಹ್ಲಿ ಅಂಪೈರ್ಸ್‌ಕಾಲ್ಡ್‌ ನಿಯಮದ ವಿರುದ್ಧ ಮೈದಾನದಲ್ಲೇ ಅಸಮಾಧಾನ ಹೊರಹಾಕಿದ್ದರು. ಇದನ್ನೂ ಓದಿ: ಅಭಿಮಾನಿಯ ಹೃದಯ ಬಡಿತ ನಿಲ್ಲಿಸಿತ್ತು, ವಿಶ್ವಕಪ್ ಕನಸನ್ನೇ ಭಗ್ನಗೊಳಿಸಿತ್ತು ಆ ಒಂದು ರನೌಟ್..!