Tag: sachin tendulkar

  • Sachin V/S Kohli – 49=49 ಶತಕ ಆಗಿದ್ದು ಎಲ್ಲೆಲ್ಲಿ?

    Sachin V/S Kohli – 49=49 ಶತಕ ಆಗಿದ್ದು ಎಲ್ಲೆಲ್ಲಿ?

    ಬೆಂಗಳೂರು: ಈ ಬಾರಿಯ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ (Virat Kohli) ತಮ್ಮ ಬ್ಯಾಟಿಂಗ್ ಮೂಲಕ ಮಿಂಚುತ್ತಿದ್ದಾರೆ. ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ, ಸಚಿನ್ (Sachin Tendulkar) 49 ಶತಕದ ದಾಖಲೆಯನ್ನು ಸರಿಗಟ್ಟಿದ್ದಾರೆ.

    ಸಚಿನ್ ಹಾಗೂ ಕೊಹ್ಲಿ ಶತಕಗಳನ್ನು ಎಲ್ಲೆಲ್ಲಿ ಬಾರಿಸಿದರು ಅನ್ನೋ ಕುತೂಹಲ ನಿಮಗಿದ್ದರೆ ಮುಂದೆ ಓದಿ.

    ಭಾರತದಲ್ಲಿ ನಡೆದ ಪಂದ್ಯಗಳಲ್ಲಿ ಸಚಿನ್ 20 ಶತಕ ದಾಖಲಿಸಿದರೆ ಕೊಹ್ಲಿ 23 ಶತಕ ದಾಖಲಿಸಿದ್ದಾರೆ.

    ವಿದೇಶದಲ್ಲಿ ನಡೆದ ಪಂದ್ಯಗಳಲ್ಲಿ ಸಚಿನ್ 12 ಶತಕ ಬಾರಿಸಿದರೆ, ಕೊಹ್ಲಿ 21 ಶತಕ ಬಾರಿಸಿದ್ದಾರೆ.

    ತಟಸ್ಥ ಕೇಂದ್ರಗಳಲ್ಲಿ ನಡೆದ ಪಂದ್ಯಗಳಲ್ಲಿ ಸಚಿನ್ 17 ಸೆಂಚುರಿ ಗಳಿಸಿದ್ದು, ಕೊಹ್ಲಿ 5 ಶತಕ ಬಾರಿಸಿದ್ದಾರೆ.

    ಸಚಿನ್ ದಾಖಲೆಯನ್ನು ಒಟ್ಟು 12 ರಾಷ್ಟ್ರಗಳಲ್ಲಿ ಮಾಡಿದ್ದರೆ, ಕೊಹ್ಲಿ 9 ರಾಷ್ಟ್ರಗಳಲ್ಲಿ ಈ ಸಾಧನೆ ಮಾಡಿದ್ದಾರೆ.

    ಸಚಿನ್ 34 ಕ್ರೀಡಾಂಗಣದಲ್ಲಿ 49 ಶತಕ ದಾಖಲಿಸಿದ್ದರೆ, ಕೊಹ್ಲಿ 32 ಕ್ರೀಡಾಂಗಣದಲ್ಲಿ 49 ಶತಕ ದಾಖಲಿಸಿದ್ದಾರೆ.

    ಸಚಿನ್ 6 ತಂಡದ ವಿರುದ್ಧ 5 ಅಥವಾ 5ಕ್ಕೂ ಹೆಚ್ಚು ಶತಕ ದಾಖಲಿಸಿದ್ದಾರೆ. ಆಸ್ಟ್ರೇಲಿಯಾ (Australia) ವಿರುದ್ಧ 9 ಶತಕ ದಾಖಲಿಸಿದ್ದೇ ತಂಡವೊಂದರ ವಿರುದ್ಧ ಸಚಿನ್ ಬಾರಿಸಿದ ಗರಿಷ್ಟ ಶತಕವಾಗಿದೆ.

    ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ 10 ಶತಕ ದಾಖಲಿಸಿದ್ದೇ ತಂಡವೊಂದರ ವಿರುದ್ಧ ಬಾರಿಸಿದ ಗರಿಷ್ಟ ಶತಕ. 6 ದೇಶಗಳ ವಿರುದ್ಧ ಕೊಹ್ಲಿ 5 ಅಥವಾ ಐದಕ್ಕಿಂತ ಹೆಚ್ಚು ಶತಕ ದಾಖಲಿಸಿದ್ದಾರೆ.

  • 49th Century: ಕಿಂಗ್ ಕೊಹ್ಲಿ ಬರ್ತ್ ಡೇ ಶತಕ – ಶುಭಾಶಯಗಳ ಸುರಿಮಳೆ!

    49th Century: ಕಿಂಗ್ ಕೊಹ್ಲಿ ಬರ್ತ್ ಡೇ ಶತಕ – ಶುಭಾಶಯಗಳ ಸುರಿಮಳೆ!

    – ಸಚಿನ್, ಸೆಹ್ವಾಗ್, ಐಸಿಸಿಯಿಂದ ಶುಭಾಶಯ

    ಕೋಲ್ಕತ್ತಾ: ಬರ್ತ್‌ಡೇ ದಿನದಂದೇ ಸಚಿನ್ (Sachin) ದಾಖಲೆ ಸರಿಗಟ್ಟಿ ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ (Virat Kohli) ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಶುಭಾಶಯಗಳ ಸುರಿಮಳೆಯಾಗಿದೆ.

    ಕ್ರಿಕೆಟ್ ದೇವರು ಎಂದೇ ಆರಾಧಿಸಲ್ಪಡುವ ಸಚಿನ್ ತೆಂಡೂಲ್ಕರ್ ವಿರಾಟ್ ಸಾಧನೆಗೆ ಶುಭ ಕೋರಿದ್ದಾರೆ. ತನ್ನ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ ಸಾಧನೆಯನ್ನು ಕೊಂಡಾಡಿದ್ದಾರೆ. ಜೊತೆಗೆ ಶೀಘ್ರದಲ್ಲೇ 50ನೇ ಶತಕ (50th Century) ದಾಖಲಿಸಿ ಎಂದು ಶುಭ ಹಾರೈಸಿದ್ದಾರೆ.

    ಐಸಿಸಿ ಕೂಡಾ, ಗ್ರೇಟ್ ನೆಸ್ ಮೀಟ್ಸ್ ಗ್ರೇಟ್ ನೆಸ್. ಕಿಂಗ್ ಕೊಹ್ಲಿಗೆ 49ನೇ ಶತಕ ಎಂದು ಬರೆದು ಕೊಹ್ಲಿ ಹಾಗೂ ಸಚಿನ್ ಮುಖಾಮುಖಿಯಾಗಿ ನಿಂತಿರುವ ಫೋಟೋವನ್ನು ಎಕ್ಸ್ ನಲ್ಲಿ ಶೇರ್ ಮಾಡಿಕೊಂಡಿದೆ.

    ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಸಚಿನ್ ದಾಖಲೆಯನ್ನು ಸರಿಗಟ್ಟಲು ಸಿಕ್ಕಿದ್ದು ಎಂಥಾ ದಿನ..? ಐತಿಹಾಸಿಕ ಈಡನ್ ಗಾರ್ಡನ್ಸ್ ನಲ್ಲಿ ಕೊಹ್ಲಿ ಬರ್ತ್ ಡೇ ಎಂದು ಬರೆದುಕೊಂಡಿದ್ದಾರೆ.

    ಟೀಂ ಇಂಡಿಯಾ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿಯ ಬೆಸ್ಟ್ ಬರ್ತ್ ಡೇ ಗಿಫ್ಟ್ ಎಂದು ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಆಫ್ರಿದಿ (Shahid Afridi) ಬಣ್ಣಿಸಿದ್ದಾರೆ.

    ದಾವಣಗೆರೆ ಎಕ್ಸ್ ಪ್ರೆಸ್ ಖ್ಯಾತಿಯ ಭಾರತದ ಮಾಜಿ ಕ್ರಿಕೆಟಿಗ ವಿನಯ್ ಕುಮಾರ್, 35ನೇ ಹುಟ್ಟುಹಬ್ಬಕ್ಕೆ 49ನೇ ಶತಕದ ಮೂಲಕ ವಿರಾಟ್ ತಮಗೆ ತಾವೇ ಗಿಫ್ಟ್ ಕೊಟ್ಟಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು, ನಿಮ್ಮ ಶತಕ ಹಾಗೂ ಸಾಧನೆಗೆ ಅಭಿನಂದನೆ ಎಂದು ಶುಭ ಕೋರಿದ್ದಾರೆ.

    ಟೀ ಇಂಡಿಯಾ ಮಾಜಿ ಆಟಗಾದ ಎಸ್.ಬದ್ರಿನಾಥ್ ಕೂಡಾ ವಿರಾಟ್ ಕೊಹ್ಲಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಶ್ರೀಲಂಕಾದ ಮಾಜಿ ಕ್ರಿಕೆಟಿಗ ರಸೆಲ್ ಅರ್ನಾಲ್ಡ್, ಸೆಂಚುರಿ 49 ವಿರಾಟ್ ಕೊಹ್ಲಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಶುಭ ಕೋರಿದ್ದಾರೆ.

  • Virat Kohli – ಬರ್ತ್ ಡೇಯಂದೇ ಸೆಂಚುರಿ ಬಾರಿಸಿದ 7ನೇ ಆಟಗಾರ..!

    Virat Kohli – ಬರ್ತ್ ಡೇಯಂದೇ ಸೆಂಚುರಿ ಬಾರಿಸಿದ 7ನೇ ಆಟಗಾರ..!

    – ವಿಶ್ವಕಪ್‌ನಲ್ಲಿ ಜನ್ಮದಿನದಂದೇ ಭಾರತದ ಪರ ಮೊದಲ ಸೆಂಚುರಿ

    ಕೋಲ್ಕತ್ತಾ: ಕಿಂಗ್ ಕೊಹ್ಲಿ (Virat Kohli) ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯಲ್ಲಿ ಹೊಸ ದಾಖಲೆಯೊಂದನ್ನ ತನ್ನ ಹೆಸರಿಗೆ ಬರೆದುಕೊಂಡಿದ್ದಾರೆ. ವಿಶ್ವಕಪ್ (W0rld Cup) ಪಂದ್ಯದಲ್ಲಿ ಬರ್ತ್ ಡೇಯಂದೇ ಶತಕ ದಾಖಲಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

    ದಕ್ಷಿಣ ಆಫ್ರಿಕಾ (South Africa) ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ತನ್ನ ವೃತ್ತಿ ಬದುಕಿನ 49ನೇ ಏಕದಿನ ಶತಕ ದಾಖಲಿಸಿದರು. 101 ರನ್ ಗಳಿಸಿದ ಕೊಹ್ಲಿ ಅಜೇಯರಾಗಿಯೇ ಉಳಿದರು. ಅಲ್ಲದೆ ವಿಶ್ವಕಪ್‌ನಲ್ಲಿ 4ನೇ ಸೆಂಚುರಿ ಬಾರಿಸಿದರು. ಈ ಮೂಲಕ 49 ಶತಕ ಬಾರಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (Sachin Tendulkar) ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದರು.

    ಇನ್ನಿಂಗ್ಸ್ ಮಧ್ಯೆ ಬ್ರೇಕ್‌ನಲ್ಲಿ ಬರ್ತ್ ಡೇ ದಿನದ ಶತಕ ಹೇಗನ್ನಿಸ್ತು? ಎಂಬ ವೀಕ್ಷಕ ವಿವರಣೆಗಾರರ ಪ್ರಶ್ನೆಗೆ ಉತ್ತರಿಸಿದ ವಿರಾಟ್ ಕೊಹ್ಲಿ, ಭಾರತಕ್ಕಾಗಿ ಆಡುವುದು ನನಗೆ ಹೆಮ್ಮೆ. ಇಷ್ಟೊಂದು ಅಭಿಮಾನಿಗಳ ಮುಂದೆ ಈ ಸಾಧನೆ ನೀಡಿರುವುದು ಖುಷಿ ತಂದಿದೆ ಎಂದರು.

    ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಇದುವರೆಗೆ 7 ಆಟಗಾರರು ಬರ್ತ್ ಡೇಯಂದೇ ಶತಕ ಬಾರಿಸಿದ್ದಾರೆ.

    1. ವಿನೋದ್ ಕಾಂಬ್ಳಿ, ಭಾರತ 21ನೇ ಶತಕ, ಇಂಗ್ಲೆಂಡ್ ವಿರುದ್ಧ ಅಜೇಯ 100 ರನ್, ಜೈಪುರ, 1993

    ಇಂಗ್ಲೆಂಡ್ ವಿರುದ್ಧ ಜೈಪುರದಲ್ಲಿ ನಡೆದ ಪಂದ್ಯದಲ್ಲಿ 149 ಎಸೆತಗಳಲ್ಲಿ ಶತಕ ಬಾರಿಸಿದ ವಿನೋದ್ ಕಾಂಬ್ಳಿ (Vinod Kambli) ಅಜೇಯರಾಗಿ ಉಳಿದರು. 9 ಬೌಂಡರಿ ಹಾಗೂ ಒಂದು ಸಿಕ್ಸ್ ಒಳಗೊಂಡ ಶತಕ ಕಾಂಬ್ಳಿ ಬಾರಿಸಿದರೂ ಭಾರತ ಈ ಪಂದ್ಯವನ್ನು 4 ವಿಕೆಟ್‌ಗಳಿಂದ ಸೋತಿತ್ತು.

    2. ಸಚಿನ್ ತೆಂಡೂಲ್ಕರ್, ಭಾರತ, 25ನೇ ಶತಕ, ಆಸ್ಟ್ರೇಲಿಯಾ ವಿರುದ್ಧ 134, ಶಾರ್ಜಾ, 1998

    1998ರಲ್ಲಿ ಶಾರ್ಜಾದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಒನ್‌ಡೇ ಮ್ಯಾಚ್ ದಿನ 25ನೇ ಬರ್ತ್ಡೇ ಆಚರಿಸಿದ ಸಚಿನ್ (Sachin Tendulkar) ತಮ್ಮ 25ನೇ ಶತಕವನ್ನು ಅರ್ಥಪೂರ್ಣವಾಗಿ ಬಾರಿಸಿದರು. 131 ಎಸೆತಗಳಲ್ಲಿ 12 ಬೌಂಡರಿ ಹಾಘೂ 3 ಸಿಕ್ಸರ್ ಒಳಗೊಂಡ 134 ರನ್ ಬಾರಿಸಿದರು. ಈ ಪಂದ್ಯವನ್ನು ಭಾರತ ಆರು ವಿಕೆಟ್‌ಗಳಿಂದ ಗೆದ್ದಿತ್ತು.

    3. ಸನತ್ ಜಯಸೂರ್ಯ, ಶ್ರೀಲಂಕಾ, 39ನೇ ಬರ್ತ್ಡೇ, ಬಾಂಗ್ಲಾದೇಶದ ವಿರುದ್ಧ 130 ರನ್, ಕರಾಚಿ, 2008

    2008ರಲ್ಲಿ 39ನೇ ಬರ್ತ್ಡೇ ದಿನ ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನದ ಕರಾಚಿಯಲ್ಲಿ ನಡೆದ ಪಂದ್ಯಲ್ಲಿ ಸನತ್ ಜಯಸೂರ್ಯ ಶತಕ ಬಾರಿಸಿದರು. 88 ಎಸೆತಗಳಲ್ಲಿ 16 ಬೌಂಡರಿ ಹಾಗೂ 6 ಸಿಕ್ಸರ್ ಒಳಗೊಂಡ ಇನ್ನಿಂಗ್ಸ್ನಲ್ಲಿ ಜಯಸೂರ್ಯ 130 ರನ್ ಗಳಿಸಿರು. ಈ ಪಂದ್ಯದಲ್ಲಿ ಶ್ರೀಲಂಕಾ 158 ರನ್ ಅಂತರದಿಂದ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿತ್ತು.

    4. ರಾಸ್ ಟೇಲರ್, ನ್ಯೂಜಿಲೆಂಡ್, 27ನೇ ಬರ್ತ್ಡೇ, ಪಾಕಿಸ್ತಾನ ವಿರುದ್ಧ ಅಜೇಯ 131 ರನ್, ಪಲ್ಲೆಕೆಲೆ, 2011

    ವಿಶ್ವಕಪ್ ಪಂದ್ಯಾವಳಿಯಲ್ಲಿ ಬರ್ತ್ಡೇ ಆಚರಿಸಿಕೊಂಡ ಮೊದಲ ಆಟಗಾರ ರಾಸ್ ಟೇಲರ್ (Ross Taylor). ಶತಕದ ಜೊತೆ 27ನೇ ಬರ್ತ್ಡೇ ಆಚರಿಸಿಕೊಂಡರು. ಪಾಕಿಸ್ತಾನ ವಿರುದ್ಧದ ಪಂದ್ಯಲ್ಲಿ 124 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸ್ ಜೊತೆ 131 ರನ್ ಬಾರಿಸಿದ್ದರು. ಈ ಪಂದ್ಯವನ್ನು ನ್ಯೂಜಿಲೆಂಡ್ 110 ರನ್ ಗಳಿಂದ ಗೆದ್ದಿತ್ತು.

    5. ಟಾಮ್ ಲ್ಯಾಥಮ್, ನ್ಯೂಜಿಲೆಂಡ್, 30ನೇ ಶತಕ, ನೆದರ್ಲೆಂಡ್ ವಿರುದ್ಧ ಅಜೇಯ 140 ರನ್, ಹ್ಯಾಮಿಲ್ಟನ್, 2022

    ನೆದರ್ಲೆಂಡ್ ವಿರುದ್ಧದ ಹ್ಯಾಮಿಲ್ಟನ್‌ನಲ್ಲಿ 2022ರಲ್ಲಿ ನಡೆದ 123 ಎಸೆತಗಳಲ್ಲಿ 140 ರನ್ ಗಳಿಸಿ ಟಾಮ್ ಲ್ಯಾಥಮ್ ಅಜೇಯರಾಗಿ ಉಳಿದರು. ಈ ಇನ್ನಿಂಗ್ಸ್ 10 ಬೌಂಡರಿ ಹಾಘೂ 5 ಸಿಕ್ಸರ್ ಗಳನ್ನೊಳಗೊಂಡಿತ್ತು. ನ್ಯೂಜಿಲೆಂಡ್ ಈ ಪಂದ್ಯವನ್ನು 118 ರನ್ ಅಂತರದಿಂದ ಗೆದ್ದಿತ್ತು.

    6. ಮಿಚೆಲ್‌ ಮಾರ್ಷ್‌, ಆಸ್ಟ್ರೇಲಿಯಾ, 32ನೇ ಬರ್ತ್ಡೇ, ಪಾಕಿಸ್ತಾನ ವಿರುದ್ಧ 121, ಬೆಂಗಳೂರು 2023

    ಈ ಬಾರಿಯ ವಿಶ್ವಕಪ್‌ನಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಮಿಚೆಲ್‌ ಮಾರ್ಷ್‌ ಬರ್ತ್ಡೇ ದಿನವೇ ಸೆಂಚುರಿ ಬಾರಿಸಿದರು. 108 ಬಾಲಲ್ಲಿ 121 ರನ್ ಗಳಿಸಿದರು. 10 ಫೋರ್ ಹಾಗೂ 9 ಸಿಕ್ಸರ್ ಒಳಗೊಂಡ ಇನ್ನಿಂಗ್ಸ್ ಇದಾಗಿತ್ತು.

    7. ವಿರಾಟ್ ಕೊಹ್ಲಿ, ಭಾರತ, 35ನೇ ಬರ್ತ್ಡೇ, ದಕ್ಷಿಣ ಆಫ್ರಿಕಾ ವಿರುದ್ಧ ಅಜೇಯ 101 ರನ್, ಕೋಲ್ಕತ್ತಾ, 2023

    ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ಭಾರತದ ಪರ ಬರ್ತ್ಡೇ ದಿನ ವಿಶ್ವಕಪ್‌ನಲ್ಲಿ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಗೆ ಪಾತ್ರರಾದರು. 121 ಎಸೆತಗಳಲ್ಲಿ ಕೊಹ್ಲಿ 10 ಬೌಂಡರಿಗಳ ಸಹಿತ 101 ರನ್ ಬಾರಿಸಿದರು. ಅಲ್ಲದೇ ಇದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ದಾಖಲೆಗೆ ತಮ್ಮ ಹೆಸರನ್ನೂ ಸೇರಿಸಿಕೊಂಡರು.

  • Virat Kohli Centuries: ಕ್ರಿಕೆಟ್‌ ದೇವರಿಗೆ ಸರಿಸಮನಾಗಿ ನಿಂತ ಕಿಂಗ್‌ ಕೊಹ್ಲಿ..!

    Virat Kohli Centuries: ಕ್ರಿಕೆಟ್‌ ದೇವರಿಗೆ ಸರಿಸಮನಾಗಿ ನಿಂತ ಕಿಂಗ್‌ ಕೊಹ್ಲಿ..!

    ಕೋಲ್ಕತ್ತಾ: ಚೇಸ್‌ ಮಾಸ್ಟರ್‌, ಸೂಪರ್‌ ಸ್ಟಾರ್‌ ಕ್ರಿಕೆಟಿಗ, ಕ್ರಿಕೆಟ್‌ ಲೋಕದ ಕಿಂಗ್‌ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಲೆಜೆಂಡ್‌ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನ ಸರಿಗಟ್ಟಿದ್ದಾರೆ.

    ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸುವ ಮೂಲಕ ಫ್ಯಾನ್ಸ್‌ಗೆ ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ ಸಾಧನೆ ಮಾಡಿದರೆ, ವಿರಾಟ್‌ ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. 2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಇದನ್ನೂ ಓದಿ: ಶತಕ ಮಿಸ್‌ ಆದ್ರೂ ಸಚಿನ್‌ ದಾಖಲೆ ಮುರಿದ ಕಿಂಗ್‌ ಕೊಹ್ಲಿ 

    ಇದೀಗ ಏಕದಿನ ಕ್ರಿಕೆಟ್‌ನಲ್ಲಿ 277 ಇನ್ನಿಂಗ್ಸ್‌ನಲ್ಲಿ 49 ಶತಕ ಸಿಡಿಸಿದ ಕೊಹ್ಲಿಯೇ ನಂ.1 ಶತಕ ವೀರನಾಗಿದ್ದು, 452 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಸಚಿನ್‌ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. 251 ಇನ್ನಿಂಗ್ಸ್‌ಗಳಲ್ಲಿ 31 ಶತಕ ಬಾರಿಸಿರುವ ರೋಹಿತ್‌ ಶರ್ಮಾ, 365 ಇನ್ನಿಂಗ್ಸ್‌ಗಳಲ್ಲಿ 30 ಶತಕ ಬಾರಿಸಿರುವ ಆಸ್ಟ್ರೇಲಿಯಾದ ರಿಕಿ ಪಾಟಿಂಗ್‌, 433 ಇನ್ನಿಂಗ್ಸ್‌ಗಳಲ್ಲಿ 28 ಶತಕ ಬಾರಿಸಿರುವ ಶ್ರೀಲಂಕಾದ ಸನತ್‌ ಜಯಸೂರ್ಯ ಕ್ರಮವಾಗಿ 3, 4 ಮತ್ತು 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ; ಸೆಮೀಸ್‌ ಆಸೆ ಜೀವಂತ

    ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ವೃತ್ತಿ ಜೀವನದಲ್ಲಿ 79 ಶತಕಗಳನ್ನ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 49 ಶತಕ ಸಿಡಿಸಿದ್ದಾರೆ. ಸಚಿನ್‌ ದಾಖಲೆ ಮುರಿಯಲು ಇನ್ನು ಒಂದೇ ಒಂದು ಶತಕವಷ್ಟೇ ಬಾಕಿಯಿದೆ ಎಂಬುದು ವಿಷೇಷ. ಇದನ್ನೂ ಓದಿ: ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

  • ಕೊಹ್ಲಿಗೂ ಮುನ್ನವೇ ಸಚಿನ್‌ ಶತಕ ದಾಖಲೆ ಉಡೀಸ್‌ ಮಾಡಿದ ರಚಿನ್‌..!

    ಕೊಹ್ಲಿಗೂ ಮುನ್ನವೇ ಸಚಿನ್‌ ಶತಕ ದಾಖಲೆ ಉಡೀಸ್‌ ಮಾಡಿದ ರಚಿನ್‌..!

    ಬೆಂಗಳೂರು: ಸದ್ಯ ಟೀಂ ಇಂಡಿಯಾ ಸ್ಟಾರ್‌ ಪ್ಲೇಯರ್‌ ವಿರಾಟ್‌ ಕೊಹ್ಲಿ (Virat Kohli), ಕ್ರಿಕೆಟ್‌ ದಂತಕಥೆ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ಶತಕ ದಾಖಲೆ ಸರಿಗಟ್ಟುತ್ತಾರೆ ಎಂಬುದು ಚರ್ಚೆಯಲ್ಲಿರುವ ವಿಷಯ. ಆದ್ರೆ ಕೊಹ್ಲಿಗೂ ಮುನ್ನವೇ ನ್ಯೂಜಿಲೆಂಡ್‌ ಕ್ರಿಕೆಟಿಗ ರಚಿನ್‌ ರವೀಂದ್ರ (Rachin Ravindra) ತಾನು ಪ್ರವೇಶಿಸಿದ ಚೊಚ್ಚಲ ವಿಶ್ವಕಪ್‌ ಆವೃತ್ತಿಯಲ್ಲೇ ಸಚಿನ್‌ ತೆಂಡೂಲ್ಕರ್‌ ಅವರ ಶತಕ ದಾಖಲೆಯೊಂದನ್ನ ಮುರಿದಿದ್ದಾರೆ.

    ಶನಿವಾರ (ನ.4) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium) ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ತಂಡ ಪಾಕಿಸ್ತಾನದ ಎದುರು 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ ಭರ್ಜರಿ 401 ರನ್‌ ಬಾರಿಸಿತು. ಪಾಕ್‌ ವಿರುದ್ಧ ಆರಂಭಿಕನಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ ಭರ್ಜರಿ ಶತಕ ಸಿಡಿಸುವ ಮೂಲಕ ಅಭಿಮಾನಿಗಳಿಗೆ ರಸದೌತಣ ನೀಡಿದರು. ಇದನ್ನೂ ಓದಿ: ವಿಶ್ವಕಪ್‌ ಟೂರ್ನಿಯಿಂದಲೇ ಪಾಂಡ್ಯ ಔಟ್‌ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ

    ಈ ಪಂದ್ಯದಲ್ಲಿ ಪಾಕ್‌ ಬೌಲರ್‌ಗಳನ್ನ ಬೆಂಡೆತ್ತಿದ್ದ ರಚಿನ್‌ 88 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್‌ನೊಂದಿಗೆ 100 ರನ್‌ ಬಾರಿಸಿದರು. ಒಟ್ಟು 94 ಎಸೆತಗಳನ್ನು ಎದುರಿಸಿದ ರವೀಂದ್ರ 15 ಬೌಂಡರಿ, 1 ಸಿಕ್ಸರ್‌ ಸೇರಿ 108 ರನ್‌ ಗಳಿಸಿದರು. ಈ ಶತಕದೊಂದಿಗೆ ಭಾರತದ ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯೊಂದನ್ನ ಮುರಿದ ಸಾಧನೆ ಮಾಡಿದರು. ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾ ಕ್ರೀಡಾಂಗಣದಲ್ಲಿ 77 ಎಸೆತಗಳಲ್ಲಿ ಶತಕ ಸಿಡಿಸಿ ಸಚಿನ್‌ ದಾಖಲೆ ಸರಿಗಟ್ಟಿದ ರಚಿನ್‌, ಪ್ರಸಕ್ತ ವಿಶ್ವಕಪ್‌ ಆವೃತ್ತಿಯಲ್ಲಿ ಶತಕ ಸಿಡಿಸಿ ಸಚಿನ್‌ ದಾಖಲೆಯನ್ನ ಉಡೀಸ್‌ ಮಾಡಿದ್ದಾರೆ. ಜೊತೆಗೆ ಒಂದೇ ವಿಶ್ವಕಪ್‌ ಟೂರ್ನಿಯಲ್ಲಿ 3 ಶತಕ ಸಿಡಿಸಿದ ಕಿವೀಸ್‌ ಮೊದಲ ಆಟಗಾರ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ.

    24 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಏಕದಿನ ವಿಶ್ವಕಪ್‌ ಇತಿಹಾಸದಲ್ಲಿ 2 ಶತಕಗಳನ್ನು ಗಳಿಸಿದವರಲ್ಲಿ ಸಚಿನ್‌ ತೆಂಡೂಲ್ಕರ್‌ ಮೊದಲಿಗರಾಗಿದ್ದರು. ಸಚಿನ್‌ 23 ವರ್ಷದವರಾಗಿದ್ದಾಗ 1996ರ ವಿಶ್ವಕಪ್‌ನಲ್ಲಿ (World Cup) 2 ಶತಕ ಸಿಡಿಸಿದ್ದರು. ಇದೀಗ 23 ವರ್ಷ ವಯಸ್ಸಿನ ರಚಿನ್‌ ರವೀಂದ್ರ 2023ರ ವಿಶ್ವಕಪ್‌ ಟೂರ್ನಿಯಲ್ಲಿ 3 ಶತಕ ಸಿಡಿಸಿ ಸಚಿನ್‌ ದಾಖಲೆ ಮುರಿದಿದ್ದಾರೆ. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ 

    ಕೊಹ್ಲಿಯನ್ನೂ ಹಿಂದಿಕ್ಕಿದ ರಚಿನ್‌: ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್‌ನಲ್ಲಿ 7 ಪಂದ್ಯಗಳಲ್ಲಿ ಬರೋಬ್ಬರಿ 4 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾ ಆಟಗಾರ ಕ್ವಿಂಟನ್‌ ಡಿಕಾಕ್‌ 545 ರನ್‌ ಸಿಡಿಸಿ ವಿಶ್ವಕಪ್‌ ಟೂರ್ನಿಯ ಟಾಪ್‌ ಸ್ಕೋರರ್‌ಗಳಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಆದ್ರೆ ಕೊಹ್ಲಿಯನ್ನು ಹಿಂದಿಕ್ಕಿದ ರವೀಂದ್ರ 8 ಪಂದ್ಯಗಳಲ್ಲಿ 3 ಶತಕ ಸಿಡಿಸಿರುವ 523 ರನ್‌ಗಳೊಂದಿಗೆ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. 442 ರನ್‌ ಬಾರಿಸಿರುವ ಕೊಹ್ಲಿ 3ನೇ ಸ್ಥಾನ, 428 ರನ್‌ ಗಳಿಸಿರುವ ಡೇವಿಡ್‌ ವಾರ್ನರ್‌ 4ನೇ ಸ್ಥಾನದಲ್ಲಿದ್ದರೆ, 402 ರನ್‌ ಬಾರಿಸಿರುವ ರೋಹಿತ್‌ ಶರ್ಮಾ 5ನೇ ಸ್ಥಾನದಲ್ಲಿದ್ದಾರೆ.

    ರಚಿನ್‌ ರವೀಂದ್ರ ಯಾರು?
    ರಚಿನ್‌ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್‌ವೇರ್‌ ಎಂಜಿನಿಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್‌ ರವೀಂದ್ರ ಅವರ ತಂದೆ, ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದರೂ ಅಪ್ಪಟ ಕ್ರಿಕೆಟ್‌ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್‌ ದಿಗ್ಗಜರಾದ ಸಚಿನ್‌ ತೆಂಡೂಲ್ಕರ್‌ ಹಾಗೂ ರಾಹುಲ್‌ ದ್ರಾವಿಡ್‌ ಅವರ ಪಕ್ಕಾ ಫ್ಯಾನ್‌. ಈ ಕಾರಣದಿಂದಾಗಿ ರಾಹುಲ್‌ ದ್ರಾವಿಡ್‌ (Rahul Dravid) ಹೆಸರಿನಿಂದ ʻರʼ ಮತ್ತು ಸಚಿನ್‌ ತೆಂಡೂಲ್ಕರ್‌ (Sachin Tendulkar) ಹೆಸರಿನಿಂದ ʻಚಿನ್‌ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್‌ ಎಂದು ಹೆಸರಿಟ್ಟಿದ್ದರು ಎಂಬುದು ವಿಶೇಷ.

  • World Cup 2023: ಶ್ರೇಯಸ್‌ ಅಯ್ಯರ್‌ಗೆ ಸರ್ಪ್ರೈಸ್‌ ಗಿಫ್ಟ್‌ ಕೊಟ್ಟ ಕ್ರಿಕೆಟ್‌ ದೇವರು

    World Cup 2023: ಶ್ರೇಯಸ್‌ ಅಯ್ಯರ್‌ಗೆ ಸರ್ಪ್ರೈಸ್‌ ಗಿಫ್ಟ್‌ ಕೊಟ್ಟ ಕ್ರಿಕೆಟ್‌ ದೇವರು

    ಮುಂಬೈ: 2023ರ ಏಕದಿನ ವಿಶ್ವಕಪ್‌ (World Cup 2023) ಕ್ರಿಕೆಟ್‌ ಟೂರ್ನಿಯಲ್ಲಿ ಸೋಲಿಲ್ಲದ ಸರದಾರರಂತೆ ಅಜೇಯ ಓಟ ಮುಂದುವರಿಸಿರುವ ಟೀಂ ಇಂಡಿಯಾ (Team India) ಪ್ರಸಕ್ತ ವರ್ಷದಲ್ಲಿ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಮೊದಲ ತಂಡವಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯದಲ್ಲಿ 357 ರನ್‌ ಬಾರಿಸಿದ ಭಾರತ ಎದುರಾಳಿ ಲಂಕಾ ತಂಡವನ್ನು ಕೇವಲ 55 ರನ್‌ಗಳಿಗೆ ಕಟ್ಟಿಹಾಕಿ 302 ರನ್‌ಗಳ ದಾಖಲೆಯ ಜಯ ಸಾಧಿಸಿತು.

     

    View this post on Instagram

     

    A post shared by Team India (@indiancricketteam)

    ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರಿದ ಬಳಿಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರಿಗೆ ಫಿಲ್ಡಿಂಗ್‍ಗಾಗಿ ತಂಡದ ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಅವರಿಂದ ಪದಕ ಪಡೆದರು. ಇದೇ ವೇಳೆ ರವೀಂದ್ರ ಜಡೇಜಾ ಅವರ ಫೀಲ್ಡಿಂಗ್‌ ಪ್ರಯತ್ನಗಳಿಗಾಗಿ ಮೆಚ್ಚುಗೆ ವ್ಯಕ್ತಪಡಿಸಿದ ದಿಲೀಪ್ ʻಸೈಲೆಂಟ್ ಸ್ನೈಪರ್ʼಎಂಬ ಬಿರುದನ್ನೂ ನೀಡಿದರು.

    ಶ್ರೇಯಸ್‌ ಅಯ್ಯರ್‌ಗೆ ಸರ್ಪ್ರೈಸ್‌ ಕೊಟ್ಟ ಲೆಜೆಂಡ್‌: ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಉತ್ತೇಜನ ನೀಡಲು ಡ್ರೆಸ್ಸಿಂಗ್‌ ರೂಮ್‌ನಲ್ಲಿ ಹೊಸ ಕಾನ್ಸೆಪ್ಟ್‌ ಮಾಡಿರುವ ತಂಡ ಫೀಲ್ಡಿಂಗ್‌ನಲ್ಲಿ ಅತ್ಯುತ್ತಮ ಸಾಮರ್ಥ್ಯ ತೋರಿದ ಆಟಗಾರರಿಗೆ ಪದಕಗಳನ್ನು ನೀಡಿ ಹುರಿದುಂಬಿಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರಿಗೆ ಉತ್ತಮ ಫೀಲ್ಡಿಂಗ್‌ ಪ್ರದರ್ಶನಕ್ಕಾಗಿ ಡ್ರೆಸ್ಸಿಂಗ್‌ ರೂಮ್‌ ಚುಟುಕು ಸಮಾರಂಭದಲ್ಲಿ ಚಿನ್ನದ ಪದಕ ನೀಡಲಾಗಿತ್ತು. ಈ ಬಾರಿ ಶ್ರೇಯಸ್‌ ಅಯ್ಯರ್‌ ಅವರಿಗೆ ಉತ್ತಮ ಫೀಲ್ಡಿಂಗ್‌ಗಾಗಿ ಗೋಲ್ಡ್‌ ಮೆಡಲ್‌ ನೀಡಲಾಯಿತು.

    ವಿಶೇಷವೆಂದರೆ ಪ್ರಶಸ್ತಿ ವಿಜೇತರ ಹೆಸರನ್ನು ಘೋಷಿಸಲು ಟೀಂ ಇಂಡಿಯಾ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರನ್ನು ಆಹ್ವಾನಿಸಿತ್ತು. ಭಾರತೀಯ ಕ್ರಿಕೆಟ್‌ ಲೋಕದ ಲೆಜೆಂಡ್‌ ಎಂದೇ ಗುರುತಿಸಿಕೊಂಡಿರುವ ಸಚಿನ್‌ ತೆಂಡೂಲ್ಕರ್‌ ಅವರು ವರ್ಚುಲ್‌ನಲ್ಲಿ ಪ್ರಶಸ್ತಿಗೆ ಶ್ರೇಯಸ್‌ ಅಯ್ಯರ್‌ ಅವರ ಹೆಸರನ್ನು ಪ್ರಕಟಿಸುವ ಮೂಲಕ ಇತರ ಆಟಗಾರರಿಗೂ ಸರ್ಪ್ರೈಸ್‌ ಕೊಟ್ಟರು. ಇದೇ ವೇಳೆ ಟೀಂ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಸಚಿನ್‌ ದಕ್ಷಿಣ ಆಫ್ರಿಕಾದಲ್ಲಿ 2003ರ ವಿಶ್ವಕಪ್‌ ವೇಳೆ ಸಹಿ ಹಾಕುತ್ತಿದ್ದ ವಿಚಾರವನ್ನು ಬಹಿರಂಗ ಪಡಿಸಿದರು.

    ಬಳಿಕ ಮಾತನಾಡುತ್ತಾ, ರೋಹಿತ್‌ ಹಿಂದಿನ ದಿನ ನನ್ನನ್ನು ಭೇಟಿಯಾಗಿ ಅತ್ಯುತ್ತಮ ಫೀಲ್ಡರ್‌ ಪದಕ ನೀಡುವ ಬಗ್ಗೆ ನನ್ನೊಂದಿಗೆ ಮಾತನಾಡಿದ್ದರು. ಇದು ದಕ್ಷಿಣ ಆಫ್ರಿಕಾದಲ್ಲಿ 2003ರ ವಿಶ್ವಕಪ್‌ ಟೂರ್ನಿಯನ್ನು ನೆನಪಿಸಿತು, ಅಂದು ಟೂರ್ನಿ ಆರಂಭವಾಗುವುದಕ್ಕೂ ಮುನ್ನ ʻನಾನು ಮಾಡಬಹುದು, ನಾವೂ ಮಾಡಬಹುದುʼ ಎಂಬ ಘೋಷವಾಕ್ಯದೊಂದಿಗೆ ನಮ್ಮಲ್ಲೊಂದು ಚಾರ್ಟ್‌ ಇತ್ತು. ಪ್ರತಿಯೊಬ್ಬರು ಹೋಗುವ ಮುನ್ನ ಆ ಚಾರ್ಟ್‌ಗೆ ಸಹಿ ಹಾಕಬೇಕಿತ್ತು. ಇದು ನಮ್ಮಲ್ಲಿ ಬದ್ಧತೆಯ ಬಗ್ಗೆ ಮತ್ತು ದೇಶಕ್ಕಾಗಿ, ನನ್ನ ತಂಡಕ್ಕಾಗಿ 100% ಶ್ರಮ ಹಾಕುತ್ತೇನೆ ಎಂಬ ಸೂಚಕವಾಗಿತ್ತು. ಅದೇ ರೀತಿ ಈಗಲೂ ಫೀಲ್ಡಿಂಗ್‌ ಪದಕಗಳು ತಂಡದ ಬಗ್ಗೆ ನಿಮಗಿರುವ ಬದ್ಧತೆಯ ಪ್ರತಿಬಿಂಬವಾಗಿದೆ. ನಿಮ್ಮ ಸಹೋದ್ಯೋಗಿಗಾಗಿ, ನಿಮ್ಮ ತಂಡಕ್ಕಾಗಿ ಮತ್ತು ದೇಶಕ್ಕಾಗಿ ಏನನ್ನಾದರೂ ಮಾಡಬೇಕೆಂಬುದು ನಿಮ್ಮಲ್ಲಿರಬೇಕು. ನಾನು ಇಲ್ಲಿಯವರೆಗೆ ನೀವು ಆಡಿದ ಪಂದ್ಯಗಳನ್ನು ತುಂಬಾ ಇಷ್ಟಪಟ್ಟಿದ್ದೇನೆ. ಇದೇ ಫಾರ್ಮ್‌ ಮುಂದುವರಿಸುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಫೀಲ್ಡರ್‌ ಆಫ್‌ ದಿ ಮ್ಯಾಚ್‌ ಪದಕ ಪಡೆದಿದ್ದರು. ಚೊಚ್ಚಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಈ ಪದಕ ತನ್ನದಾಗಿಸಿಕೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    ಮುಂಬೈ: ಶ್ರೀಲಂಕಾ (Sri Lanka) ವಿರುದ್ಧ ಗುರುವಾರ ನಡೆದ ವಿಶ್ವಕಪ್‌ ಪಂದ್ಯದಲ್ಲಿ 49ನೇ ಶತಕ ಸಿಡಿಸಿ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ (Sachin Tendulkar) ದಾಖಲೆ ಸರಿಗಟ್ಟುವ ಸನಿಹದಲ್ಲಿದ್ದ ಕಿಂಗ್‌ ಕೊಹ್ಲಿ (Virat Kohli) ಮತ್ತೆ ಎಡವಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ರು. ಆದ್ರೂ ಕೂಡ ಕ್ರಿಕೆಟ್‌ ದೇವರ ಹೆಸರಿನಲ್ಲಿದ್ದ ಮಹತ್ತರ ದಾಖಲೆಯೊಂದನ್ನು ಮುರಿದು ಗಮನ ಸೆಳೆದಿದ್ದಾರೆ.

    ಶ್ರೀಲಂಕಾ ವಿರುದ್ಧ 88 ರನ್‌ ಬಾರಿಸಿದ್ದ ಕೊಹ್ಲಿ 32ನೇ ಓವರ್‌ನಲ್ಲಿ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದ್ರು. ಶತಕ ಸಿಡಿಸಿ ದಾಖಲೆ ಬರೆಯುವ ಸನಿಹದಲ್ಲಿದ್ದ ಕೊಹ್ಲಿ ಔಟಾಗುತ್ತಿದ್ದಂತೆ ಹತಾಷಾ ಭಾವದಿಂದ ಹೊರನಡೆದ್ರು. ಈ ವೇಳೆ ಅಭಿಮಾನಿಗಳೂ ಕೊಹ್ಲಿ (Kohli Fans) ಬೇಸರದಿಂದ ನಡೆದು ಹೋಗುತ್ತಿದ್ದ ದೃಶ್ಯವನ್ನ ಮೊಬೈಲ್‌ಗಳಲ್ಲಿ ಸೆರೆಹಿಡಿದ್ರು. ನಂತರ ಕ್ಯಾಬಿನ್‌ನಲ್ಲಿ ಕುಳಿತ ಕೊಹ್ಲಿ ಕಣ್ಣಲ್ಲಿ ಇದ್ದಕ್ಕಿದ್ದಂತೆ ನೀರು ಕಚ್ಚಿತು. ಅಭಿಮಾನಿಗಳನ್ನು ಕಂಡಾಗ ನಗುಮುಖದಿಂದಲೇ ಕೈಸನ್ನೆ ಮಾಡಿದ ಕೊಹ್ಲಿ ಬಳಿಕ ಕ್ಯಾಬಿನ್‌ನಲ್ಲಿ ಕುಳಿತು ಬಿಕ್ಕಿ-ಬಿಕ್ಕಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಭಿಮಾನಿಗಳಿಗೂ ಬೇಸರವುಂಟುಮಾಡಿದೆ. ಇದನ್ನೂ ಓದಿ: 48 ವರ್ಷಗಳಲ್ಲೇ ಮೊದಲು! ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಬುಮ್ರಾ

    ಗುರುವಾರ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್‌ ಆರಂಭದ 2ನೇ ಎಸೆತದಲ್ಲೇ ವಿಕೆಟ್‌ ಕೈಚೆಲ್ಲಿದರು. ಆದ್ರೆ 2ನೇ ವಿಕೆಟ್‌ಗೆ ಶುಭಮನ್ ಗಿಲ್, ಜೊತೆಗೂಡಿದ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ, ಶ್ರೀಲಂಕಾ ಬೌಲರ್‌ಗಳನ್ನ ಬೆಂಡೆತ್ತಿದರು. 2ನೇ ವಿಕೆಟ್‌ಗೆ ಈ ಜೋಡಿ 179 ಎಸೆತಗಳಲ್ಲಿ 189 ರನ್‌ ಬಾರಿಸಿತ್ತು. ಇದನ್ನೂ ಓದಿ: ಶಮಿ ದಾಳಿಗೆ ಲಂಕಾ ಭಸ್ಮ – 302 ರನ್‌ಗಳ ಭರ್ಜರಿ ಜಯ, ಸೆಮಿಗೆ ಟೀಂ ಇಂಡಿಯಾ

    ಪಂದ್ಯದ ಆರಂಭದಲ್ಲೇ ಶ್ರೀಲಂಕಾದ ಕ್ಷೇತ್ರ ರಕ್ಷಕರು ತೋರಿದ ಕಳಪೆ ಪ್ರದರ್ಶನದಿಂದ ಹಲವು ಬಾರಿ ಜೀವದಾನ ಪಡೆದಿದ್ದ ವಿರಾಟ್ ಕೊಹ್ಲಿ, ನಂತರ ಸಿಡಿಲಬ್ಬರದ ಆಟಕ್ಕೆ ಮುಂದಾಗಿದ್ದರು. ಒಂದೂ ಸಿಕ್ಸರ್‌ ಸಿಡಿಸದಿದ್ದರೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟುವ ಭರವಸೆ ಮೂಡಿಸಿದ್ದರು. ಆದ್ರೆ ಶ್ರೀಲಂಕಾದ ದಿಲ್ಷಾನ್ ಮಧುಶಂಕ ಬೌಲಿಂಗ್ ನಲ್ಲಿ ನಿಸ್ಸಾಂಕಗೆ ಕ್ಯಾಚ್ ನೀಡಿ ಮೈದಾನ ತೊರೆದರು.‌ ಗಾಡ್ ಆಫ್ ಕ್ರಿಕೆಟ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಏಷ್ಯನ್ ಕಂಡೀಷನ್ಸ್ ಗಳಲ್ಲಿ ಆಡಿದ್ದ 188 ಇನಿಂಗ್ಸ್‌ನಲ್ಲಿ 8 ಸಾವಿರ ರನ್ ಗಡಿ ಮುಟ್ಟಿದ್ದರೆ, ವಿರಾಟ್ ಕೊಹ್ಲಿ 159 ಇನಿಂಗ್ಸ್ ನಲ್ಲೇ ಆ ದಾಖಲೆ ಮುರಿದಿದ್ದಾರೆ. ಇಷ್ಟಾದರೂ ಕೊಹ್ಲಿಗೆ ಸಮಾಧಾನ ತರಿಸದೇ ಕ್ಯಾಬಿನ್‌ನಲ್ಲಿ ಕಣ್ಣೀರಿಟ್ಟರು.

    ಒಟ್ಟಿನಲ್ಲಿ ಇನ್ನೆರಡು ಲೀಗ್‌ ಪಂದ್ಯಗಳಿದ್ದು, ಉಳಿದ ಪಂದ್ಯಗಳಲ್ಲಾದರೂ ಕೊಹ್ಲಿ ಶತಕ ಪೂರೈಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.  ಇದನ್ನೂ ಓದಿ: ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿದಿ – ಟಾಪ್ 10 ರಲ್ಲಿ ಇಬ್ಬರು ಟೀಂ ಇಂಡಿಯಾ ಆಟಗಾರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • World Cup 2023: ಗಿಲ್‌ ಕೈ ತಪ್ಪಿದ ಶತಕ – ಸಾರಾಗೆ ಬೇಸರ

    World Cup 2023: ಗಿಲ್‌ ಕೈ ತಪ್ಪಿದ ಶತಕ – ಸಾರಾಗೆ ಬೇಸರ

    ಮುಂಬೈ: ಟೀಂ ಇಂಡಿಯಾದ (Team India) ಆರಂಭಿಕ ಬ್ಯಾಟರ್‌ ಶುಭಮನ್‌ ಗಿಲ್‌ (Shubman Gill), ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 8 ರನ್‌ ಅಂತರದಲ್ಲಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ತಮ್ಮ ಚೊಚ್ಚಲ ಶತಕದಿಂದ ವಂಚಿತರಾದರು. ಇದು ಗಿಲ್‌ ಅಭಿಮಾನಿಗಳಲ್ಲೂ ನಿರಾಸೆ ಮೂಡಿಸಿತು.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಶುಭಮನ್‌ ಗಿಲ್‌ ಕೊಹ್ಲಿ ಜೊತೆಗೂಡಿ ಭರ್ಜರಿ ಆಟವಾಡಿದರು. 92 ಎಸೆತಗಳಲ್ಲಿ 11 ಫೋರ್‌ ಮತ್ತು 2 ಸಿಕ್ಸರ್‌ಗಳೊಂದಿಗೆ ಶತಕದತ್ತ ದಾಪುಗಾಲಿಟ್ಟಿದ್ದ ಗಿಲ್‌, ಸ್ಲೋ ಬೌನ್ಸರ್ ಎದುರು ಅಪ್ಪರ್‌ ಕಟ್‌ ಆಡುವ ಪ್ರಯತ್ನದಲ್ಲಿ 92 ರನ್‌ಗೆ ವಿಕೆಟ್‌ ಕೈಚೆಲ್ಲಿದರು. ಇದನ್ನೂ ಓದಿ: ಆಪ್‌ಗೆ ಮತ್ತೊಂದು ಶಾಕ್ – ಸಚಿವ ರಾಜ್ ಕುಮಾರ್ ಆನಂದ್ ನಿವಾಸದ ಮೇಲೆ ಇಡಿ ದಾಳಿ

    ಈ ವೇಳೆ ವಾಂಖೆಡೆ ಕ್ರೀಡಾಂಗಣದ ಗ್ಯಾಲರಿಯಲ್ಲಿ ಕುಳಿತಿದ್ದ ಶುಭಮನ್ ಗಿಲ್‌ ಅವರ ಪ್ರೇಯಸಿ ಎಂದೇ ಗುರುತಿಸಿಕೊಂಡಿರುವ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರಿ ಸಾರಾ ತೆಂಡೂಲ್ಕರ್‌ (Sara Tendulkar) ಬೇಸರಗೊಂಡರು. ಆದಾಗ್ಯೂ ಟೀಂ ಇಂಡಿಯಾದ ಪ್ರಿನ್ಸ್‌ ಖ್ಯಾತಿಯ ಆಟಗಾರನಿಗೆ ಸ್ಟ್ಯಾಂಡಿಂಗ್ ಓವೇಷನ್‌ ಕೊಟ್ಟರು.

    ಈ ದೃಶ್ಯದ ವೀಡಿಯೋ ಸೋಷಿಯಲ್‌ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ: ನಿತೀಶ್‌ ಕುಮಾರ್‌ ಬೇಸರ

    ಈಗಾಗಲೇ ಗಿಲ್‌ ಮತ್ತು ಸಾರಾ ನಡುವಣ ಪ್ರೇಮ ಪುರಾಣ ಸುದ್ದಿ ಜಾಲತಾಣದಲ್ಲಿ ಆಗಾಗ್ಗೆ ಸದ್ದು ಮಾಡುತ್ತಿದ್ದು, ಇವರಿಬ್ಬರ ಪ್ರೇಮ ಪುರಾಣಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಇಬ್ಬರೂ ಕದ್ದು ಮುಚ್ಚಿ ಡೇಟಿಂಗ್‌ ಮಾಡುತ್ತಿರುವುದು ಹಲವು ಬಾರಿ ಬೆಳಕಿಗೆ ಬಂದಿದೆ. ಆದ್ರೆ, ಎಲ್ಲಿಯೂ ಕೂಡ ಇಬ್ಬರಿಂದ ಅಧಿಕೃತ ಮಾಹಿತಿ ಹೊರಬಂದಿಲ್ಲ. ಇದನ್ನೂ ಓದಿ: Breaking: ಲಂಚ ಪಡೆಯುವಾಗಲೇ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ED ಅಧಿಕಾರಿಗಳು ಅರೆಸ್ಟ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶತಕ ಮಿಸ್‌ ಆದ್ರೂ ಸಚಿನ್‌ ದಾಖಲೆ ಮುರಿದ ಕಿಂಗ್‌ ಕೊಹ್ಲಿ

    ಶತಕ ಮಿಸ್‌ ಆದ್ರೂ ಸಚಿನ್‌ ದಾಖಲೆ ಮುರಿದ ಕಿಂಗ್‌ ಕೊಹ್ಲಿ

    ಮುಂಬೈ: ಶ್ರೀಲಂಕಾ (Sri Lanka) ವಿರುದ್ಧದ ಪಂದ್ಯದಲ್ಲಿ ಶತಕ ವಂಚಿತರಾದರೂ ವಿರಾಟ್‌ ಕೊಹ್ಲಿ (Virat Kohli) ಭಾರತ ತಂಡದ ಮಾಜಿ ಆಟಗಾರ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರ ಮತ್ತೊಂದು ದಾಖಲೆಯನ್ನು ಮುರಿದು ಇತಿಹಾಸ ಬರೆದಿದ್ದಾರೆ.

    ಏಕದಿನ ಕ್ರಿಕೆಟ್‌ನಲ್ಲಿ ಕ್ಯಾಲೆಂಡರ್‌ ವರ್ಷದಲ್ಲಿ 8 ಬಾರಿ 1,000 ಕ್ಕೂ ಹೆಚ್ಚು ರನ್‌ ಗಳಿಸಿದ ಮೊದಲ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಚಿನ್‌ ತೆಂಡೂಲ್ಕರ್‌ 7 ಬಾರಿ ಈ ಸಾಧನೆ ಮಾಡಿದ್ದರು. ಇದನ್ನೂ ಓದಿ: ಬೌಲಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ ಆಫ್ರಿದಿ – ಟಾಪ್ 10 ರಲ್ಲಿ ಇಬ್ಬರು ಟೀಂ ಇಂಡಿಯಾ ಆಟಗಾರರು

    1994, 1996, 1998, 2000, 2003, 2007 ರಲ್ಲಿ ಸಚಿನ್‌ ತೆಂಡೂಲ್ಕರ್ 1,000 ಕ್ಕೂ ಹೆಚ್ಚು ರನ್‌ ಗಳಿಸಿದ್ದಾರೆ. ವಿರಾಟ್‌ ಕೊಹ್ಲಿ 2011, 2012, 2013, 2014, 2017, 2018, 2019, 2023 ರಲ್ಲಿ ಈ ಸಾಧನೆ ಮಾಡಿದ್ದಾರೆ.

    ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳನ್ನು ದಾಖಲಿಸಿದ್ದರೆ, ಕೊಹ್ಲಿ ಈಗಾಗಲೇ 48 ಶತಕಗಳನ್ನು ಬಾರಿಸಿದ್ದಾರೆ. ತೆಂಡೂಲ್ಕರ್‌ ಸಾಧನೆ ಸರಿಗಟ್ಟಲು ಇನ್ನೊಂದು ಶತಕದ ಅಗತ್ಯವಿದೆ. ಇದನ್ನೂ ಓದಿ: ಕ್ರಿಕೆಟ್‌ ದೇವರಿಗೆ ವಿಶೇಷ ಗೌರವ – ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ಪ್ರತಿಮೆ ಅನಾವರಣ

    ವಾಂಖೆಡೆ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್‌ ಕ್ರಿಕೆಂಟ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅರ್ಧಶತಕ ಸಿಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ರಿಕೆಟ್‌ ದೇವರಿಗೆ ವಿಶೇಷ ಗೌರವ – ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ಪ್ರತಿಮೆ ಅನಾವರಣ

    ಕ್ರಿಕೆಟ್‌ ದೇವರಿಗೆ ವಿಶೇಷ ಗೌರವ – ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ಪ್ರತಿಮೆ ಅನಾವರಣ

    ಮುಂಬೈ: ಕ್ರಿಕೆಟ್‌ ದೇವರು ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ (Team India) ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರ ಬೃಹತ್‌ ಪ್ರತಿಮೆಯನ್ನು (Sachin Tendulkar Statue) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅನಾವರಣಗೊಳಿಸಲಾಗಿದೆ.

    ಕ್ರಿಕೆಟ್‌ ಲೋಕದಲ್ಲಿ ಹಲವಾರು ದಾಖಲೆಗಳನ್ನು ಬರೆದಿರುವ ದಿಗ್ಗಜ ಕ್ರಿಕೆಟಿಗ ಸಚಿನ್‌ (Sachin Tendulkar) ಅವರ ಪಾಲಿಗೆ, ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣವು (Wankhede Stadium) ತುಂಬಾ ವಿಶೇಷ. ಹೀಗಾಗಿ ಅವರಿಗೆ ಗೌರವಾರ್ಥವಾಗಿ ಪ್ರತಿಮೆ ನಿರ್ಮಿಸಲಾಗಿದೆ. ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂದೆ ಪ್ರತಿಮೆ ಅನಾವರಣಗೊಳಿಸಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಗೆದ್ದರೂ ಪಟಾಕಿ ಸಿಡಿಸುವಂತಿಲ್ಲ – BCCI ಪಟಾಕಿ ಬ್ಯಾನ್‌ ಮಾಡಿದ್ದೇಕೆ?

    ಕಾರ್ಯಕ್ರಮದಲ್ಲಿ ಸಚಿನ್‌ ತೆಂಡೂಲ್ಕರ್‌ ಪತ್ನಿ ಅಂಜಲಿ, ಪುತ್ರಿ ಸಾರಾ, ಸಹೋದರ ಅಜಿತ್‌ ಜೊತೆಗೆ ಪಾಲ್ಗೊಂಡಿದ್ದರು. ಐಸಿಸಿ ಮಾಜಿ ಅಧ್ಯಕ್ಷ ಶರದ್‌ ಪವಾರ್‌, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಇದ್ದರು.

    ಈ ವರ್ಷದ ಏಪ್ರಿಲ್‌ನಲ್ಲಿ ಸಚಿನ್ ಅವರು ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗಾಗಿ ಪ್ರತಿಮೆಯನ್ನು ಅವರ 50 ವರ್ಷಗಳ ಅರ್ಥಪೂರ್ಣ ಬದುಕಿಗೆ ಸಮರ್ಪಿಸಲಾಗಿದೆ. ಇದನ್ನೂ ಓದಿ:  ವಿಶ್ವಕಪ್‌ನ ಟಾಪ್‌ 7 ತಂಡಗಳು 2025 ರ ಚಾಂಪಿಯನ್ಸ್‌ ಟ್ರೋಫಿಗೆ – ಪಾಕಿಸ್ತಾನ ಡೈರೆಕ್ಟ್‌ ಎಂಟ್ರಿ

    2011ರಲ್ಲಿ ಭಾರತ ವಿಶ್ವಕಪ್‌ ಗೆದ್ದ ಬಳಿಕ ವಾಂಖೆಡೆ ಸ್ಟೇಡಿಯಂನಲ್ಲಿಯೇ ಸಚಿನ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಹೀಗಾಗಿ ಅಲ್ಲಿ ಅವರ ಹೆಸರಿನ ಸ್ಟ್ಯಾಂಡ್ ಇದೆ. ಅಲ್ಲದೇ ಸಚಿನ್‌ ತಮ್ಮ 200ನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನೂ 2013ರ ನವೆಂಬರ್‌ನಲ್ಲಿ ವಾಂಖೆಡೆಯಲ್ಲಿ ಆಡಿದ್ದರು.

    ಕ್ರಿಕೆಟ್‌ನಲ್ಲಿ ತೆಂಡೂಲ್ಕರ್‌ ಮಾಡಿರುವ ಹಲವು ದಾಖಲೆಗಳು ಇನ್ನೂ ಬ್ರೇಕ್‌ ಆಗಿಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ ಬರೋಬ್ಬರಿ 15,921 ರನ್‌ಗಳು ಹಾಗೂ ಏಕದಿನ ಸ್ವರೂಪದಲ್ಲಿ 18,426 ರನ್‌ಗಳನ್ನು ಸಿಡಿಸಿರುವ ಸಚಿನ್ ದಾಖಲೆಯನ್ನು ಇನ್ನೂ ಯಾರೂ ಮುರಿಯಲು ಸಾಧ್ಯವಾಗಿಲ್ಲ. ಆದ್ರೆ ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳ ದಾಖಲೆಯನ್ನು ಸದ್ಯದಲ್ಲೇ ವಿರಾಟ್‌ ಕೊಹ್ಲಿ ಅವರು ಮುರಿಯುವ ನಿರೀಕ್ಷೆ ಹೊಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]