Tag: SachinTendulkar

  • ಪೋಲಾರ್ಡ್ ವಿದಾಯ ಹೇಳಿದ್ದು ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ: ಕ್ರಿಸ್‌ಗೇಲ್

    ಪೋಲಾರ್ಡ್ ವಿದಾಯ ಹೇಳಿದ್ದು ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ: ಕ್ರಿಸ್‌ಗೇಲ್

    ಮುಂಬೈ: 15 ವರ್ಷಗಳ ಕಾಲ ವೆಸ್ಟ್ಇಂಡೀಸ್ ತಂಡದಲ್ಲಿ ಕ್ರಿಕೆಟ್ ಆಡಿದ 34 ವರ್ಷದ ಕೀರನ್ ಪೊಲಾರ್ಡ್ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದು, ಅಭಿಮಾನಿಗಳು ಮಾತ್ರವಲ್ಲದೇ ಸ್ಟಾರ್ ಕ್ರಿಕೆಟರ್‌ಗಳು ಅಭಿನಂದನೆ ಸಲ್ಲಿಸಿದ್ದಾರೆ. ತಮ್ಮ ಜಾಲತಾಣಗಳಲ್ಲಿ ಪೊಲಾರ್ಡ್ ಅವರ ಫೋಟೋ ಹಂಚಿಕೊಳ್ಳುವ ಮೂಲಕ ವಿದಾಯದ ಶುಭಾಶಯ ಕೋರಿದ್ದಾರೆ.

    IPL 2022 MI (1)

    ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಹ ತಮ್ಮ ಟ್ವೀಟ್‌ನಲ್ಲಿ ಪೋಲಾರ್ಡ್ ಅವರ ಫೋಟೋ ಹಂಚಿಕೊಂಡಿದ್ದು, ಅವರನ್ನು `ಆಲ್‌ರೌಂಡರ್, ಚಾಲೆಂಜರ್, ಫೈಟರ್’ ಎಂದು ಕರೆದಿದ್ದಾರೆ. ಇದನ್ನೂ ಓದಿ: ಡೆಲ್ಲಿ ದರ್ಬಾರ್‌ಗೆ ಪಂಜಾಬ್ ಪಂಚರ್ – 10 ಓವರ್‌ಗಳಲ್ಲಿ ಟಾರ್ಗೆಟ್ ಉಡೀಸ್

    ವೆಸ್ಟ್ಇಂಡೀಸ್ ತಂಡದ ಕ್ರಿಕೆಟಿಗ ಕ್ರಿಸ್‌ಗೇಲ್, ನನಗಿಂತಲೂ ಮುಂಚಿತವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವುದು ನನಗೆ ನಂಬಲಾಗುತ್ತಿಲ್ಲ. ನಿಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಅಭಿನಂದನೆಗಳು. ನಿಮ್ಮ ಜೊತೆಯಲ್ಲಿ ಆಡಿದ ಆಟಗಳು ತುಂಬಾ ಚೆನ್ನಾಗಿವೆ ಎಂದು ನೆನಪಿಸಿಕೊಂಡಿದ್ದಾರೆ.

    ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಪೊಲಾರ್ಡ್ ಅವರು ಆಡುತ್ತಿದ್ದಾರೆ. T20 ಫ್ರಾಂಚೈಸಿ ಹಾಗೂ T-10 ಲೀಗ್ ಟೂರ್ನಿಗಳಲ್ಲೂ ತಮ್ಮ ಆಟ ಮುಂದುವರಿಸಲಿದ್ದಾರೆ. ಬಹಳಷ್ಟು ಯೋಚಿಸಿದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಕೆಜಿಎಫ್ ಚಾಪ್ಟರ್-2 ಡೈಲಾಗ್ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ವ್ಯಂಗ್ಯ

    Kieron Pollard a

    34 ವರ್ಷ ವಯಸ್ಸಿನ ಪೊಲಾರ್ಡ್ 2007ರಲ್ಲಿ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಕೊನೆಯ ಸರಣಿಯನ್ನು ಭಾರತ ತಂಡದ ವಿರುದ್ಧ ಆಡಿದರು. ಈವರೆಗೆ 123 ಏಕದಿನ ಪಂದ್ಯಗಳು ಹಾಗೂ ಹಾಗೂ 101 ಟಿ20 ಪಂದ್ಯಗಳಲ್ಲಿ ಮಿಂಚಿರುವ ಪೊಲಾರ್ಡ್ ಏಕದಿನ ಪಂದ್ಯಗಳಲ್ಲಿ 2706 (13 ಅರ್ಧ ಶತಕ, 3 ಶತಕ) ಹಾಗೂ T20 ಪಂದ್ಯಗಳಲ್ಲಿ 1569 ರನ್ (6 ಅರ್ಧಶತಕ) ಗಳನ್ನು ಗಳಿಸಿದ್ದಾರೆ. ಏಕದಿನ ಪಂದ್ಯದಲ್ಲಿ 119 ಗರಿಷ್ಠ ರನ್ ಗಳಿಸಿರುವ ಅವರು T20 ನಲ್ಲಿ 75 ಗರಿಷ್ಠ ರನ್‌ಗಳನ್ನು ಪೇರಿಸಿದ್ದಾರೆ.

    ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿರುವ ಅವರು, ಅನೇಕ ಪಂದ್ಯಗಳಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಗೆಲುವಿನ ದಡ ಸೇರಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟಿಗರ ಸ್ಪೋಟಕ ಆಟಗಾರರ ಪಟ್ಟಿಯಲ್ಲೂ ಸ್ಥಾನ ಗಳಿಸಿದ್ದಾರೆ.

  • ಸಚಿನ್ ತೆಂಡೂಲ್ಕರ್ ಕಾಲಿಗೆ ನಮಸ್ಕರಿಸಿದ ಜಾಂಟಿ ರೋಡ್ಸ್

    ಸಚಿನ್ ತೆಂಡೂಲ್ಕರ್ ಕಾಲಿಗೆ ನಮಸ್ಕರಿಸಿದ ಜಾಂಟಿ ರೋಡ್ಸ್

    ಮುಂಬೈ: ಕ್ರಿಕೆಟ್ ಬದುಕಿಗೆ ವಿದಾಯ ಹೇಳಿ ವರ್ಷಗಳೇ ಕಳೆದರೂ ಎಷ್ಟು ಆಟಗಾರಿಗೆ ತಮ್ಮ ಸ್ಟಾರ್‌ಗಳ ಮೇಲಿನ ಭಕ್ತಿ ಕಡಿಮೆಯಾಗಿಲ್ಲ ಎಂಬುದಕ್ಕೆ ಬುಧವಾರ ಐಪಿಎಲ್ ವೇಳೆ ಕಂಡುಬಂದ ದೃಶ್ಯವೊಂದು ಸಾಕ್ಷಿಯಾಯಿತು.

    ROADS

    ಹೌದು… 2022ನೇ ಸಾಲಿನ 15ನೇ ಆವೃತ್ತಿಯ ವೇಳೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಸಚಿನ್ ತೆಂಡೂಲ್ಕರ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಕಿಂಗ್ಸ್ ಪಂಜಾಬ್ ನಡುವಣ ಪಂದ್ಯದ ಬಳಿಕ ಎರಡೂ ತಂಡದ ಆಟಗಾರರೂ ಪರಸ್ಪರ ಹಸ್ತಲಾಘವ ಮಾಡುತ್ತಿದ್ದ ವೇಳೆ ರೋಡ್ಸ್ ಸಚಿನ್ ಕಾಲಿಗೆ ನಮಸ್ಕರಿಸಿದ್ದಾರೆ. ಈ ವೇಳೆ ಸಚಿನ್ ತಡೆಯಲು ಪ್ರಯತ್ನಿಸಿದ್ದಾದರೂ ರೋಡ್ಸ್ ತಮ್ಮ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ: 4 ತಿಂಗಳ ಕಾಲ ಕ್ರಿಕೆಟ್‍ನಿಂದ ಹೊರಗುಳಿಯಬೇಕಾಗಿದೆ ದೀಪಕ್ ಚಹರ್ – ಟಿ20 ವಿಶ್ವಕಪ್‍ಗೂ ಡೌಟ್

    ಪ್ರಸ್ತುತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಚ್ಚಿನ್‌ಗಿಂತಲೂ ನಾಲ್ಕು ವರ್ಷ ದೊಡ್ಡವರಾಗಿರುವ ಜಾಂಟಿ ರೋಡ್ಸ್ (52) ಅವರ ವಿನಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. 2009ರಿಂದ 2017ರ ವರೆಗೆ ಮುಂಬೈ ತಂಡದ ಫೀಲ್ಡಿಂಗ್ ಕೋಚ್ ಆಗಿ ಜಾಂಟಿ ರೋಡ್ಸ್ ಕರ್ತವ್ಯ ನಿರ್ವಹಿಸಿದ್ದರು. ಈ ಮೂಲಕ ಸಚಿನ್ ತೆಂಡೂಲ್ಕರ್ ಜೊತೆಗೆ ಉತ್ತಮ ಒಡನಾಟ ಹೊಂದಿದ್ದಾರೆ. ಇದನ್ನೂ ಓದಿ: ಧೋನಿಯೇ ಮುಖ್ಯವಾದ್ರೆ ಉಳಿದ ಆಟಗಾರರು ಲಸ್ಸಿ ಕುಡಿಯಲು ಹೋಗಿದ್ರಾ: ಭಜ್ಜಿ ಪ್ರಶ್ನೆ

    ಪಂಜಾಬ್ ಕಿಂಗ್ಸ್ ತಂಡದ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ ಕೋಚ್ ಜವಾಬ್ದಾರಿಯನ್ನು ಜಾಂಟಿ ರೋಡ್ಸ್ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಮುಂಬೈ ವಿರುದ್ಧದ ಪಂದ್ಯದಲ್ಲಿ ಪಂಜಾಬ್ 12 ರನ್ ಅಂತರದ ಗೆಲುವು ದಾಖಲಿಸಿತ್ತು. ಈ ಹಿಂದೆ ಭಾರತದ ಮೇಲಿನ ಪ್ರೀತಿಗಾಗಿ ಜಾಂಟಿ ರೋಡ್ಸ್ ತನ್ನ ಮಗಳಿಗೆ `ಇಂಡಿಯಾ’ ಎಂದು ಹೆಸರಿಟ್ಟಿದ್ದರು ಎನ್ನುವುದು ಇಲ್ಲಿ ವಿಶೇಷ.