Tag: Saddam Jamadar

  • ಅನಾರೋಗ್ಯದಿಂದ ಕರ್ತವ್ಯನಿರತ ಬಿಎಸ್ಎಫ್ ಯೋಧ ನಿಧನ

    ಅನಾರೋಗ್ಯದಿಂದ ಕರ್ತವ್ಯನಿರತ ಬಿಎಸ್ಎಫ್ ಯೋಧ ನಿಧನ

    ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯವರಾದ ಬಿಎಸ್‌ಎಫ್‌ ಯೋಧ (BSF Soldier) ಸದ್ದಾಂ ಜಮಾದಾರ್‌ (33) ಅವರು ಅನಾರೋಗ್ಯದ ಕಾರಣದಿಂದಾಗಿ ಕರ್ತವ್ಯದಲ್ಲಿ ಇದ್ದಾಗಲೇ ಗುಜರಾತ್‌ನ (Gujarat) ಬುಜ್‌ನಲ್ಲಿ ನಿಧನರಾಗಿದ್ದಾರೆ.

    ಸದ್ದಾಂ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಬಿರೇಶ್ವರ ನಗರದವರು. ಇತ್ತೀಚಿಗೆ ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳವಾರ ಯೋಧನ ಪಾರ್ಥಿವ ಶರೀರ ಸಂಕೇಶ್ವರ ಪಟ್ಟಣಕ್ಕೆ ಆಗಮಿಸಲಿದೆ. ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಸದ್ದಾಂ ಜಮಾದಾರ್‌ ಅವರಿಗೆ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆದರೆ ಅಕಾಲಿಕವಾಗಿ ನಿಧನ ಹೊಂದಿದ್ದು, ಅತೀವ ದುಃಖ ಉಂಟಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಅಣ್ಣತಂಮ್ಮದಿರನ್ನು ಅಗಲಿದ್ದಾರೆ.

    ನಾಳೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಮಗನ ಅಕಾಲಿಕ ನಿಧನದಿಂದ ಸದ್ದಾಂ ಜಮಾದಾರ್‌ ಅವರ ಕುಟುಂಬದಲ್ಲಿ ಶೋಕ ಮುಡುಗಟ್ಟಿದೆ. ಇದನ್ನೂ ಓದಿ: ನಿಮ್ಮ ಸಾಧನೆ ಎಲ್ಲರಿಗೂ ಗೊತ್ತು – ರೊನಾಲ್ಡೊಗೆ ಭಾವನಾತ್ಮಕ ಸಂದೇಶ ರವಾನಿಸಿದ ಕೊಹ್ಲಿ

    Live Tv
    [brid partner=56869869 player=32851 video=960834 autoplay=true]