Tag: Saffron Flag

  • ಕಾಫಿನಾಡಲ್ಲಿ ದತ್ತಮಾಲಾ ಅಭಿಯಾನ – ಕೇಸರಿ ಬಾವುಟ ವಿಚಾರಕ್ಕೆ 2 ಕೋಮುಗಳ ಮಧ್ಯೆ ಗಲಾಟೆ

    ಕಾಫಿನಾಡಲ್ಲಿ ದತ್ತಮಾಲಾ ಅಭಿಯಾನ – ಕೇಸರಿ ಬಾವುಟ ವಿಚಾರಕ್ಕೆ 2 ಕೋಮುಗಳ ಮಧ್ಯೆ ಗಲಾಟೆ

    ಚಿಕ್ಕಮಗಳೂರು: ಮಸೀದಿ ಮುಂಭಾಗ ಕೇಸರಿ ಬಾವುಟ ಕಟ್ಟಿದ್ದಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ನಡೆದು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ (Sringeri Pattanam) ನಡೆದಿದೆ.

    ಶೃಂಗೇರಿ ಪಟ್ಟಣದ ವೆಲ್‍ಕಂ ಗೇಟ್ ಬಳಿ ಇರುವ ಮಸೀದಿ ಮುಂಭಾಗ ಜಿಲ್ಲೆಯಲ್ಲಿ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಕೇಸರಿ ಬಾವುಟ ಹಾಗೂ ಬಂಟಿಂಗ್ಸ್‌ಗಳನ್ನು ಕಟ್ಟಿದ್ದರು. ಈ ವಿಚಾರವಾಗಿ ಶ್ರೀರಾಮಸೇನೆ (Sri ramasene) ಮುಖಂಡ ಅರ್ಜುನ್ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ರಫೀಕ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರೂ ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

    ಜಿಲ್ಲೆಯಲ್ಲಿ ಶ್ರೀ ರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿದೆ. ಶೃಂಗೇರಿಯಲ್ಲೂ ಶ್ರೀ ರಾಮಸೇನೆ ಕಾರ್ಯಕರ್ತರು ಮಾಲೆ ಧರಿಸಿದ್ದು, ಶೃಂಗೇರಿ ಪಟ್ಟಣದಾದ್ಯಂತ ಕೇಸರಿ ಬಾವುಟ-ಬಂಟಿಂಗ್ಸ್ ಕಟ್ಟಿದ್ದರು. ಈ ಹಿಂದೆ ನಡೆದಿದ್ದ ಕಾಂಗ್ರೆಸ್ (Congress) ರ್‍ಯಾಲಿ ವೇಳೆಯಲ್ಲಿ ಅದೇ ಜಾಗದಲ್ಲಿ ಫ್ಲೆಕ್ಸ್ ಹಾಗೂ ಬಾವುಟಗಳನ್ನು ಹಾಕಲು ಅನುಮತಿ ನೀಡಲಾಗಿತ್ತು. ಆದರೆ, ಈಗ ಕೇಸರಿ ಬಾವುಟಗಳನ್ನು ತೆರವು ಮಾಡಿಸಿರುವುದು ಸರಿಯಲ್ಲ ಎಂದು ಹಿಂದೂ ಸಂಘಟನೆಗಳು ಪಟ್ಟಣ ಪಂಚಾಯಿತಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಗುಡ್ಡ ಹತ್ತಿ ಆಯುಷ್ಮಾನ್ ಕಾರ್ಡ್ ನೋಂದಣಿ – ಧರ್ಮಸ್ಥಳ ಸಂಘದ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಸದ್ಯ ಗಲಾಟೆಯ ಬಳಿಕ ಇಬ್ಬರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ. ಸ್ಥಳಕ್ಕೆ ಎಎಸ್‍ಪಿ ಗುಂಜನ್ ಆರ್ಯ ಭೇಟಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಣಪತಿ ಶೋಭಾಯಾತ್ರೆ ವೇಳೆ ರಾಷ್ಟ್ರೀಯ ಲಾಂಛನಕ್ಕೆ ಅಪಮಾನ

    ಗಣಪತಿ ಶೋಭಾಯಾತ್ರೆ ವೇಳೆ ರಾಷ್ಟ್ರೀಯ ಲಾಂಛನಕ್ಕೆ ಅಪಮಾನ

    ಶಿವಮೊಗ್ಗ: ನಗರದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ವೇಳೆ ರಾಷ್ಟ್ರೀಯ ಲಾಂಛನಕ್ಕೆ (National Emblem) ಅಪಮಾನ ನಡೆದಿದೆ.

    ರಾಷ್ಟ್ರೀಯ ಲಾಂಚನದ ಮೇಲೆ ಹಿಂದೂ ಸಂಘಟನೆಗಳು ಕೇಸರಿ ಧ್ವಜ (Saffron Flag) ಹಾರಿಸಿವೆ. ನಗರದ ಅಶೋಕ ರಸ್ತೆಯಲ್ಲಿರುವ ಅಶೋಕ ಸ್ಥಂಭವನ್ನೇ ಕೇಸರಿಮಯ ಮಾಡಲಾಗಿದೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಕೇಸರಿ ಧ್ವಜ ತೆರವು ಮಾಡಿದ್ದಾರೆ. ಈ ಮಧ್ಯೆ, ಬಿಗಿಭದ್ರತೆ ನಡುವೆ ಶೋಭಾ ಯಾತ್ರೆ ನಡೆಯಿತು. ಇದನ್ನೂ ಓದಿ: ACB ರದ್ದು ತೀರ್ಪಿನ ಅನುಷ್ಠಾನ‌ ಮಾಡಿ ಸರ್ಕಾರದಿಂದ ಆದೇಶ

    ಸಾವಿರಾರು ಮಂದಿ ಶೂಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯರಾತ್ರಿ 12 ಗಂಟೆಗೆ ತುಂಗಾ ನದಿಯಲ್ಲಿ ಗಣೇಶ ವಿಸರ್ಜನೆ ನಡೆಯಲಿದೆ. ಅತ್ತ ರಾಯಚೂರಿನ ದಡೇಸುಗೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಘರ್ಷಣೆ ನಡೆದಿದೆ. ಮದ್ಯದ ನಶೆಯಲ್ಲಿ ಜಗಳ ಆಗಿ, ಯುವಕರು ಕೈಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಮೂರ್ನಾಲ್ಕು ಜನ ಗಾಯಗೊಂಡಿದ್ದಾರೆ. ಇದನ್ನೂ ಓದಿ: ರೇವಣ್ಣನನ್ನು ಹಿಟ್ಲರ್‌ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ

    Live Tv
    [brid partner=56869869 player=32851 video=960834 autoplay=true]

  • ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

    ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

    ಹುಬ್ಬಳ್ಳಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಹಿಂದೂ ಯುವಕನೊಬ್ಬ ಪೋಸ್ಟ್ ಮಾಡಿದ್ದ ಹಿನ್ನೆಲೆ ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕರು ದಾಂಧಲೆ ನಡೆಸಿದ್ದಾರೆ.

    ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಫೋಟೋ ಎಡಿಟ್ ಮಾಡಿ ಹಿಂದೂ ಯುವಕನೋರ್ವ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದನು. ಈ ವಿವಾದಿತ ಪೋಸ್ಟ್ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರ ಗುಂಪು ದೇವಸ್ಥಾನ, ಆಸ್ಪತ್ರೆ, ಬಸ್, ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಇದನ್ನೂ ಓದಿ: ವಿಜಯನಗರ ಕಾರ್ಯಕಾರಿಣಿಯಲ್ಲಿ ಹಿಂದುತ್ವ ಅಜೆಂಡಾ ಜಪ

    ದುಷ್ಕರ್ಮಿಗಳು ಹುಬ್ಬಳ್ಳಿಯ ದಿಡ್ಡಿ ಓಣಿಯ ಗುರು ಆಸ್ಪತ್ರೆ ಧ್ವಂಸಗೊಳಿಸಿದ್ದಾರೆ. ಅಲ್ಲದೇ ಹನುಮ ಜಯಂತಿ ದಿನದಂದೇ ದಿಡ್ಡಿ ಹನುಮಂತ ದೇವಸ್ಥಾನದ ಕಿಟಕಿ ಗ್ಲಾಸ್ ಒಡೆದು ಪುಡಿ, ಪುಡಿಗೊಳಿಸಿದ್ದಾರೆ ಮತ್ತು ಬಸ್‍ಗಳ ಮೇಲೆ ಕೂಡ ಕಲ್ಲು ತೂರಾಟ ನಡೆಸಿದ್ದಾರೆ. ಉಪ ನಗರ ಠಾಣೆ ಇನ್ಸ್‍ಪೆಕ್ಟರ್ ವಾಹನ ಜಖಂಗೊಳಿಸಿದ್ದಾರೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಕೊನೆಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

    ಘಟನೆಯಲ್ಲಿ ಪೂರ್ವ ಸಂಚಾರಿ ಠಾಣೆ ಇನ್ಸ್‍ಪೆಕ್ಟರ್ ಕಾಡದೇವರ ಮಠ ತಲೆಗೆ ಗಾಯಗೊಂಡಿದ್ದು, ವಿವಾದಿ ಫೋಟೋ ಪೋಸ್ಟ್ ಮಾಡಿದ್ದ ಹಿಂದೂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೂ ಹುಬ್ಬಳ್ಳಿ ನಗರಾದ್ಯಂತ ಪೊಲೀಸ್ ಆಯುಕ್ತ ಲಾಬೂರಾಮ್ ಕಲಂ 144 ಸೆಕ್ಷನ್ ಜಾರಿಗೊಳಿಸಿದ್ದಾರೆ. ಇದನ್ನೂ ಓದಿ: ಉಪಚುನಾವಣಾ ಫಲಿತಾಂಶ, ಬಿಜೆಪಿಗೆ ಮುಖಭಂಗ – ಕಾಂಗ್ರೆಸ್, ಟಿಎಂಸಿಗೆ ಜಯ

    ಘಟನೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹಳೇ ಹುಬ್ಬಳ್ಳಿ ನಿವಾಸಿಗಳು ಗಲಾಟೆ ಮಾಡಿದವರು ನಮ್ಮ ಏರಿಯಾದವರಲ್ಲ. ನಾವು ಇಲ್ಲಿ ಅವರನ್ನು ನೋಡಿಯೇ ಇಲ್ಲ. ಕೆಲವರು ಕೇಸರಿ, ಕೆಲವರು ಹಸಿರು, ಕೆಲವರು ನೀಲಿ ಧ್ವಜ ಹಿಡಿದಿದ್ದರು. ಏಕಾಏಕಿ ಗಲಾಟೆ ಆರಂಭವಾಯಿತು. ನಂತರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಿದ್ದಾರೆ.

  • ಜೆ‌ಎನ್‌ಯು ಕ್ಯಾಂಪಸ್ ಬಳಿ ಕೇಸರಿ ಧ್ವಜ ಹಾರಿಸಿದ ಹಿಂದೂ ಸೇನೆ

    ಜೆ‌ಎನ್‌ಯು ಕ್ಯಾಂಪಸ್ ಬಳಿ ಕೇಸರಿ ಧ್ವಜ ಹಾರಿಸಿದ ಹಿಂದೂ ಸೇನೆ

    ನವದೆಹಲಿ: ರಾಮನವಮಿಯಂದು ಮಾಂಸಾಹಾರ ವಿಚಾರವಾಗಿ ಎರಡು ವಿದ್ಯಾರ್ಥಿ ಸಂಘಟನೆಗಳ ಮಧ್ಯೆ ನಡೆದ ಮಾರಮಾರಿ ಬಳಿಕ ಈಗ ಜೆ‌ಎನ್‌ಯು ಕ್ಯಾಂಪಸ್‌ನಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಗಲಭೆ ವೇಳೆ ಎಬಿವಿಪಿ ವಿದ್ಯಾರ್ಥಿಗಳ‌ ಮೇಲೆ ನಡೆದ ದಾಳಿಯನ್ನು ಖಂಡಿಸಿ ವಿವಿ ಸುತ್ತಲೂ ಭಗವಾ ಧ್ವಜ ಹಾರಿಸಲಾಗಿದೆ.

    ಇಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಜೆಎನ್‌ಯು ಕ್ಯಾಂಪಸ್ ಸುತ್ತಲೂ ಕೇಸರಿ ಶಾಲ್‌ಗಳನ್ನು ಕಟ್ಟಿ, ಭಗವಾ ಧ್ವಜ ಹಾರಿಸಿ, ಭಗವಾ ಜೆಎನ್‌ಯು ಎಂದು ಫ್ಲೇಕ್ಸ್‌ಗಳನ್ನು ಹಾರಿಸಲಾಗಿತ್ತು. ಹಿಂದೂ ಸೇನೆ ನೇತೃತ್ವದಲ್ಲಿ ಈ ಕಾರ್ಯ ನಡೆದಿದ್ದು, ಬಲಪಂಥಿಯ ವಿದ್ಯಾರ್ಥಿಗಳಿಗೆ ಬೆಂಬಲ ನೀಡುವುದು ಉದ್ದೇಶ ಎಂದು ಸಂಘಟನೆ ಹೇಳಿಕೊಂಡಿದೆ.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು ಕಟ್ಟಿದ ಕೇಸರಿ ಶಾಲ್‌ಗಳನ್ನು, ಫ್ಲೇಕ್ಸ್‌ಗಳನ್ನು ತೆರವುಗೊಳಿಸಿದರು ಮತ್ತು ಭಗವಾ ಧ್ವಜಗಳನ್ನು ಕೆಳಗಿಳಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಲಾಯಿತು. ಹಿಂದೂ ಸೇನೆ ಕಾರ್ಯಕ್ಕೆ ವಿಶ್ವವಿದ್ಯಾಲಯದಲ್ಲಿರುವ ಎಡಪಂಥೀಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯದಿಂದ ಸ್ವಾಗತ ಮಾಡ್ತೀನಿ: ಲಕ್ಷ್ಮಿ ಹೆಬ್ಬಾಳ್ಕರ್

    ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ, ಜೆಎನ್‌ಯು ಕ್ಯಾಂಪಸ್‌ನಲ್ಲಿ ಕೇಸರಿ ಮತ್ತು ಹಿಂದುತ್ವವನ್ನು ನಿರಂತರವಾಗಿ ಅವಮಾನಿಸಲಾಗುತ್ತಿದೆ. ಇದು ದುರದೃಷ್ಟಕರ ಮತ್ತು ತಪ್ಪು ನಿರ್ಧಾರವಾಗಿದೆ. ಕ್ಯಾಂಪಸ್‌ನಲ್ಲಿರುವ ವಿದ್ಯಾರ್ಥಿಗಳು ಕೇಸರಿ ಬಣ್ಣವನ್ನು ಏಕೆ ದ್ವೇಷಿಸುತ್ತಾರೆ? ಕೇಸರಿ ನಮ್ಮ ಸಂಸ್ಕೃತಿ, ಇದು ಜೆಎನ್‌ಯು ಮಾತ್ರವಲ್ಲದೆ ಇಡೀ ದೇಶದಲ್ಲಿ ನಮ್ಮ ಸಂಸ್ಕೃತಿಯ ಸಂಕೇತವಾಗಿದೆ. ಹಿಂದುತ್ವ ನಮ್ಮ ಸಂಸ್ಕೃತಿ. ಹಿಂದೂ ನಮ್ಮ ಸಂಸ್ಕೃತಿ, ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು. ಇದನ್ನೂ ಓದಿ: ಮುಸ್ಲಿಮರ ಮನೆ, ಬದುಕು ಕಸಿಯಲು ಬಿಜೆಪಿ ನಾಯಕರಲ್ಲೇ ಪೈಪೋಟಿ: ಮುಫ್ತಿ

    ಪೊಲೀಸರ ಕ್ರಮಕ್ಕೆ ಪ್ರತಿಕ್ರಿಯಿಸಿದ ಗುಪ್ತಾ, ಧ್ವಜಗಳನ್ನು ತೆಗೆದುಹಾಕುವ ಮೂಲಕ ಪೊಲೀಸರು ಸಂವಿಧಾನವನ್ನು ಅಗೌರವಿಸಿದ್ದಾರೆ. ಪೊಲೀಸರು ಕೇಸರಿ ಧ್ವಜಗಳನ್ನು ಕಿತ್ತೊಗೆಯಲು ಆತುರಪಡಬಾರದು. ಪೊಲೀಸರು ಆತುರ ತೋರಲು ಕೇಸರಿ ಭಯೋತ್ಪಾದನೆಯ ಸಂಕೇತವಲ್ಲ. ಕೇಸರಿ ಮತ್ತು ಹಿಂದುತ್ವವನ್ನು ರಕ್ಷಿಸುವುದು ಕಾನೂನಿನ ಹಕ್ಕು ಎಂದರು.

  • ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    ಬೆಂಗಳೂರು(ಆನೇಕಲ್): ಹೊಸತೊಡುಕು ಹಿನ್ನೆಲೆ, ನೇಕಲ್ ಪಟ್ಟಣದಲ್ಲಿ ಮಾಂಸ ಖರೀದಿ ಭರಾಟೆ ಭರ್ಜರಿಯಾಗಿದೆ. ಜಟ್ಕಾ ಕಟ್ ಅಂಗಡಿಗಳ ಮುಂದೆ ಕೇಸರಿ ಧ್ವಜ ಕಟ್ಟಿ ವ್ಯಾಪಾರಸ್ಥರು ಮಾರಾಟ ಮಾಡುತ್ತಿದ್ದಾರೆ.

    ಜಟ್ಕಾ ಕಟ್ ಅಂಗಡಿಗಳ ಮುಂದೆ ಕೇಸರಿ ಧ್ವಜ ಕಟ್ಟಿ ಬನ್ನೇರುಘಟ್ಟದಲ್ಲಿ ಭರ್ಜರಿ ಮಾಂಸ ಮಾರಾಟ ಮಾಡುತ್ತಿದ್ದಾರೆ. ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಪಂಚಾಯಿತಿಯಿಂದ ನೋಟಿಸ್ ನೀಡಿ 650 ರೂ.ಗೆ ಮಾರಾಟ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಬನ್ನೇರುಘಟ್ಟದಲ್ಲಿ 800 ರೂ.ಗೆ ಮಟನ್ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಇದೆಲ್ಲದರ ನಡುವೆ ಕೇಸರಿ ಧ್ವಜ ಅಂಗಡಿಗಳ ಮುಂದೆ ರಾರಾಜಿಸುತ್ತಿದೆ.

    ಹೊಸಕೋಟೆ ಮತ್ತು ಆನೇಕಲ್ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ಮಾಂಸದ ಮಾರುಕಟ್ಟೆಯಲ್ಲಿ ಬೆಳಗ್ಗೆಯಿಂದ ಮಾಂಸ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಹಬ್ಬದ ಬಾಡೂಟಕ್ಕೆ ಚಿಕನ್, ಮಟನ್ ಖರೀದಿಗೆ ಈ ಬಾರಿ ಆನೇಕಲ್‌ ಮತ್ತು ಹೊಸಕೋಟೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಂಸದ ಅಂಗಡಿಗಳನ್ನು ತೆರೆಯಲಾಗಿದೆ.

  • ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನ ಯಾವಾಗ?: ಕಾಂಗ್ರೆಸ್ ಪ್ರಶ್ನೆ

    ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನ ಯಾವಾಗ?: ಕಾಂಗ್ರೆಸ್ ಪ್ರಶ್ನೆ

    ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ ಎಂದು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

    ಟ್ವೀಟ್‍ನಲ್ಲಿ ಏನಿದೆ:
    ಮಾನ್ಯ ಬೊಮ್ಮಾಯಿ ಅವರೇ, ದೇಶ ವಿರೋಧಿಗಳನ್ನು ಸಹಿಸುವುದಿಲ್ಲ ಎಂದು ಹೇಳಿಕೆ ಕೊಟ್ಟು ವೀರಾವೇಶ ಮೆರೆದಿದ್ದೀರಿ, ಸಂತೋಷ. ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ? ಆತನನ್ನು ಜೈಲಿಗಟ್ಟಿ ನಿಮ್ಮ ಹೇಳಿಕೆಗೆ ಬದ್ಧತೆ ತೋರಿಸಿ. ಹಾಗೆಯೇ ಈಶ್ವರಪ್ಪರ ರಾಜೀನಾಮೆ ಯಾವಾಗ ಪಡೆಯುವಿರಿ?. ಇದನ್ನೂ ಓದಿ: ಕುರಾನ್, ಬೈಬಲ್ ಎಲ್ಲರನ್ನು ಕೊಲ್ಲು ಎಂದು ಹೇಳುತ್ತದೆ:  ಕಲ್ಲಡ್ಕ ಪ್ರಭಾಕರ ಭಟ್

    ಬಿಜೆಪಿ ಸರ್ಕಾರದ ಸಾಧನೆಗಳು, ಸಿನೆಮಾ ಪ್ರಚಾರ ಮಾಡುವುದು, ಸಿನೆಮಾ ನೋಡುವುದು, ಸಿನೆಮಾ ಮಾಡುವುದು!. ಕೃಷಿ ಇಲಾಖೆಯಲ್ಲಿ ಜ್ವಲಂತ ಸಮಸ್ಯೆಗಳಿವೆ, ರೈತರ ಸಂಕಷ್ಟ ಹಲವಾರಿವೆ, ರಸಗೊಬ್ಬರ ಅಭಾವವಿದೆ. ಆದರೆ ಕೃಷಿ ಸಚಿವರು ನಟನೆಯಲ್ಲಿ ಬ್ಯುಸಿಯಾಗಿದ್ದಾರೆ!. ಬಿ.ಸಿ ಪಾಟೀಲ್ ಅವರೇ, ರೈತರಿಗೂ ನಿಮ್ಮ ಕಾಲ್‍ಶೀಟ್ ಬೇಕಿತ್ತು, ಯಾವಾಗ ಕೊಡುವಿರಿ?.

    ಕೆಲದಿನಗಳ ಹಿಂದೆ ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರದ ಆವರಣದಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಕಾಂಗ್ರೆಸ್‍ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡುತ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು ಅನ್ನೋದು ಹೆಚ್ಚಿನವರಿಗೆ ಗೊತ್ತಿಲ್ಲ. ಮೊದಲು ಬ್ರಿಟಿಷರ ಧ್ವಜ ಇತ್ತು. ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು, ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್‍ನಲ್ಲಿ ಮೂರನೇಯವರ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ, ಹೀಗೆಯೇ ಮುಂದುವರಿದರೆ ಹಿಂದೂ ಸಮಾಜ ಒಟ್ಟಾಗುತ್ತದೆ ಎಂದಿದ್ದರು. ಇದನ್ನೂ ಓದಿ: ಗುಜರಾತ್ ಹತ್ಯಾಕಾಂಡದ ಸಿನಿಮಾ ಬಂದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ: ಕಲ್ಲಡ್ಕ ಪ್ರಭಾಕರ ಭಟ್

  • ಕೆಂಪು ಕೋಟೆ ಮೇಲೆ ಕೇಸರಿ ಧ್ವಜ – ಈಶ್ವರಪ್ಪ ಹೇಳಿಕೆಗೆ ಜೆ.ಪಿ ನಡ್ಡಾ ಛೀಮಾರಿ

    ಕೆಂಪು ಕೋಟೆ ಮೇಲೆ ಕೇಸರಿ ಧ್ವಜ – ಈಶ್ವರಪ್ಪ ಹೇಳಿಕೆಗೆ ಜೆ.ಪಿ ನಡ್ಡಾ ಛೀಮಾರಿ

    ನವದೆಹಲಿ: ಕೇಸರಿ ಧ್ವಜದ ವಿಚಾರವಾಗಿ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ಕುರಿತಂತೆ ಕರ್ನಾಟಕ ರಾಜಕೀಯದಲ್ಲಿ ಜಿದ್ದಾಜಿದ್ದಿ ನಡೆಯುತ್ತಿದೆ. ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈಶ್ವರಪ್ಪನವರಿಗೆ ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಂದಿನ ದಿನದಲ್ಲಿ ಕೆಂಪು ಕೋಟೆಯ ಮೇಲಿರುವ ರಾಷ್ಟ್ರಧ್ವಜವನ್ನು ಕೇಸರಿ ಧ್ವಜವನ್ನಾಗಿ ಬದಲಾಯಿಸಬಹುದು ಎಂಬ ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಟಿಸಿದ್ದರು. ಇದನ್ನೂ ಓದಿ:  ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

    ಈಶ್ವರಪ್ಪ ಅವರು ಈ ಹೇಳಿಕೆ ನೀಡುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು ಈಶ್ವರಪ್ಪ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಅವರು ನೀಡಿರುವ ಹೇಳಿಕೆ ವಿರುದ್ಧ ದೇಶದ್ರೋಹಿ ಆರೋಪದ ಮೇಲೆ ಕೇಸು ದಾಖಲಿಸಬೇಕು ಎಂದು ಕಿಡಿಕಾರಿದ್ದಾರೆ.

    ಈ ಮಧ್ಯೆ ಸಂದರ್ಶನವೊಂದರಲ್ಲಿ ಮಾತನಾಡಿದ ಜೆಪಿ ನಡ್ಡಾ ಅವರು, ಈಶ್ವರಪ್ಪ ಹೇಳಿಕೆಯನ್ನು ನಾನು ಒಪ್ಪಲ್ಲ. ನಾವು ಕಾನೂನು ರೀತಿಯಾಗಿ ನಡೆದುಕೊಳ್ಳುವವರು. ಸಂವಿಧಾನ ಒಪ್ಪುತ್ತೇವೆ. ಸಂವಿಧಾನವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ. ನಾವು ರಾಷ್ಟ್ರವಾದಿಗಳು ತಪ್ಪು ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ಕೆಲವು ಸಂದರ್ಭಗಳಲ್ಲಿ ಅತ್ಯುತ್ಸಾಹದಲ್ಲಿ ಮಾತನಾಡಿ ಬಿಡುತ್ತಾರೆ. ಅವರು ನಮ್ಮ ಹಿರಿಯ ನಾಯಕ. ಆದರೂ ಅಂತಹ ಹೇಳಿಕೆಯನ್ನು ಕೊಡಬಾರದಿತ್ತು. ಈ ವಿಚಾರವಾಗಿ ಈಶ್ವರಪ್ಪ ಅವರಿಗೆ ಕರೆ ಮಾಡಿ ಛೀಮಾರಿ ಹಾಕಿರುವುದಾಗಿ ತಿಳಿಸಿದ್ದಾರೆ.

    ಇದೇ ವೇಳೆ ಕರ್ನಾಟಕದಲ್ಲಿ ಕಾಂಗ್ರೆಸ್ ಹಿಜಬ್ ವಿವಾದಕ್ಕೆ ಉತ್ತೇಜನ ನೀಡುತ್ತಿದೆ ಮತ್ತು ಅದರಿಂದ ರಾಜಕೀಯ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ ಎಂದು ನಡ್ಡಾ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಐದು ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಪೃಥ್ವಿರಾಜ್ ಚವಾಣ್

  • ಕೇಸರಿ ಶಾಲು, ಹಿಜಬ್ ಧರಿಸಿ ಬರೋದು ಸರಿಯಲ್ಲ, ಇದ್ರಿಂದ ಶಾಲೆಗಳಲ್ಲಿ ಧರ್ಮದ ಸಮಸ್ಯೆ ಆಗುತ್ತೆ: ಜೋಶಿ

    ಕೇಸರಿ ಶಾಲು, ಹಿಜಬ್ ಧರಿಸಿ ಬರೋದು ಸರಿಯಲ್ಲ, ಇದ್ರಿಂದ ಶಾಲೆಗಳಲ್ಲಿ ಧರ್ಮದ ಸಮಸ್ಯೆ ಆಗುತ್ತೆ: ಜೋಶಿ

    ಧಾರವಾಡ: ಶಾಲೆಗಳಿಗೆ ಕೇಸರಿ ಶಾಲು ಅಥವಾ ಹಿಜಬ್ ಹಾಕಿಕೊಂಡು ಬರುವುದು ಸರಿಯಲ್ಲ. ಇದರಿಂದ ಶಾಲೆಗಳಲ್ಲಿ ಧರ್ಮದ ಸಮಸ್ಯೆ ಆಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈಶ್ವರಪ್ಪ ರಾಷ್ಟ್ರ ಧ್ವಜ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಎರಡು ನೂರು ವರ್ಷಗಳ ನಂತರ ಕೇಸರಿ ಧ್ವಜ ಬರಹುದು ಎಂದು ಏನೋ ಹೇಳಿಕೆ ಕೊಟ್ಟಿದ್ದಾರೆ. ನನ್ನ ಪ್ರಕಾರ ನಮ್ಮ ರಾಷ್ಟ್ರ ಧ್ವಜ ಎರಡು ನೂರು ವರ್ಷದ ನಂತರ ಒಮ್ಮತದಿಂದ ಒಪ್ಪಿದ್ದೇವೆ. 75 ವರ್ಷದಿಂದ ತ್ರಿವರ್ಣ ಧ್ವಜದ ಜೊತೆ ನಮ್ಮ ಸಂಬಂಧ ಇದೆ. ಅದು ಗೌರವದ ಪ್ರತೀಕ, ಅದೇ ಇರುತ್ತದೆ. ಇದನ್ನೇ ಇಟ್ಟುಕೊಂಡು ವಿಧಾನ ಸಭೆ ಹಾಗೂ ಪರಿಷತ್ ಕಲಾಪ ಹಾಳು ಮಾಡುವಂತದ್ದು ಸರಿ ಅಲ್ಲ ಎಂದರು. ಇದನ್ನೂ ಓದಿ: ಇದು RSS ಕುತಂತ್ರ – ಈಶ್ವರಪ್ಪ ಪೆದ್ದ: ಸಿದ್ದರಾಮಯ್ಯ

    ಕಾಂಗ್ರೆಸ್‍ಗೆ ಏನಾಗಿದೆ ಅಂದರೆ ನೆಪ ಸಿಕ್ಕಿದೆ. ನನಗೆ ಖಚಿತ ಮಾಹಿತಿ ಇದೆ. ಹಿಜಬ್ ವಿಚಾರದಲ್ಲಿ ಕಾಂಗ್ರೆಸ್‍ನಲ್ಲೇ ಎರಡು ಬಣ ಆಗಿದೆ. ಹಿಜಬ್ ಪರ ನಾವು ತೀರ್ಮಾನ ತೆಗೆದುಕೊಂಡರೆ ನಷ್ಟ ಹಾಗೂ ವಿರುದ್ಧ ತೀರ್ಮಾನ ತೆಗೆದುಕೊಂಡರೆ ಮುಸ್ಲಿಂ ಮತ ಹೋಗುತ್ತವೆ ಎಂಬ ಚಿಂತೆ ಅವರಿಗೆ ಇದೆ. ಈ ಕಾರಣದಿಂದ ಈ ವಿಷಯ ಇಟ್ಟುಕೊಂಡು ಅಗತ್ಯಕ್ಕಿಂತ ಹೆಚ್ಚು ವಿವಾದ ಮಾಡಿ ಕಲಾಪ ಹಾಳು ಮಾಡುತಿದ್ದಾರೆ. ಜನರ ದುಡ್ಡನ್ನು ವ್ಯರ್ಥ ಮಾಡುತ್ತಿದ್ದಾರೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೆನೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

    ನೀವು ಚರ್ಚೆಗೆ ಬನ್ನಿ, ನಿಮಗೆ ಆಂತರಿಕ ಸಮಸ್ಯೆ ಮುಚ್ಚಿಕೊಳ್ಳಲು ಈಶ್ವರಪ್ಪನ ಹೇಳಿಕೆ ನೆಪವಾಗಿ ಇಟ್ಟುಕೊಂಡಿದ್ದೀರಾ. ಇದು ಜನರಿಗೆ ಮಾಡುವ ದ್ರೋಹ. ಕೇಸರಿ ಶಾಲು ಅಥವಾ ಹಿಜಬ್ ಹಾಕಿಕೊಂಡು ಬರುವುದು ಸರಿಯಲ್ಲ. ಇದರಿಂದ ಧರ್ಮದ ಸಮಸ್ಯೆ ಆರಂಭ ಆಗುತ್ತದೆ. ಶಾಲೆಗಳಲ್ಲಿ ಗ್ರೂಪ್‍ಗಳು ಬೆಳೆಯುತ್ತವೆ. ಇಂತಹ ಅತ್ಯಂತ ಘನಘೋರ ತಪ್ಪನ್ನು ದುರುದ್ದೇಶದಿಂದ ಮಾಡುತ್ತಿದ್ದಾರೆ ಎಂದರು.

    ಕೆಲ ಪತ್ರಿಕೆಗಳಲ್ಲಿ ಕೂಡಾ ಇದು ವರದಿಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ವಿರೋಧಿ ಸಂಘಟನೆಗಳು ಯಾವ ರೀತಿ ಪ್ರಚಾರ ಮಾಡುತ್ತಿವೆ. ಟ್ವೀಟ್‍ಗಳನ್ನು ಪ್ರಮೋಟ್ ಮಾಡುತ್ತಿದ್ದಾರೆ. ಅಲ್ಲಾಹೂ ಅಕ್ಬರ್ ಘೋಷಣೆ ಮಾಡಿದ್ದನ್ನು ವೈಭವಿಕರಿಸುತ್ತಿದ್ದಾರೆ. ಇದಕ್ಕೆಲ್ಲವೂ ಪ್ಲಾನ್ ಆಗಿ ದೇಶಕ್ಕೆ ಬದನಾಮ್ ಮಾಡಲು ಪ್ರಯತ್ನ ನಡೆದಿದೆ. ಇದಕ್ಕೆ ಕಾಂಗ್ರೆಸ್ ನವರು ಮೋದಿ ಅಥವಾ ಬೊಮ್ಮಾಯಿ ವಿರೋಧದ ಭರದಲ್ಲಿ ದೇಶವನ್ನು ವಿರೋಧ ಮಾಡಬಾರದು ಎಂದು ತಿಳಿಸಿದರು.

  • ಇಡೀ ದೇಶದಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು ಅಂತ ಹೊರಟ ನಮ್ಮ ಪಕ್ಷ ಇವತ್ತು ಬುದ್ಧಿ ಹೇಳಿಸಿಕೊಳ್ಳಬೇಕಾಗಿದೆ: ಮಾಧುಸ್ವಾಮಿ

    ಇಡೀ ದೇಶದಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು ಅಂತ ಹೊರಟ ನಮ್ಮ ಪಕ್ಷ ಇವತ್ತು ಬುದ್ಧಿ ಹೇಳಿಸಿಕೊಳ್ಳಬೇಕಾಗಿದೆ: ಮಾಧುಸ್ವಾಮಿ

    ಬೆಂಗಳೂರು: ನಮ್ಮ ದುರಂತ ಅಂದ್ರೆ, ಇಡೀ ಭಾರತ ದೇಶದಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು ಅಂತ ಹೊರಟ ನಮ್ಮ ಪಕ್ಷ ಇವತ್ತು ಬುದ್ಧಿ ಹೇಳಿಸಿಕೊಳ್ಳಬೇಕಾದ ಪರಿಸ್ಥಿತಿಗೆ ಬಂದಿದೆ ಎಂದು ಅಧಿವೇಶನದಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ಪರಿಷತ್‍ನಲ್ಲಿ ಈಶ್ವರಪ್ಪ ರಾಷ್ಟ್ರಧ್ವಜ ವಿವಾದಾತ್ಮಕ ಹೇಳಿಕೆ ಚರ್ಚೆ ವೇಳೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಮತ್ತು ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದು ನಾವು. ನಮಗೆ ಯಾವುದೇ ಹಿಡನ್ ಅಜೆಂಡಾ ಇಲ್ಲ. ನಾವು ದೇಶದ್ರೋಹದ ಹೇಳಿಕೆ ಕೊಟ್ಟಿಲ್ಲ. ನಿನ್ನೆ ಎಲ್ಲವನ್ನು ಹೇಳಲಾಗಿದೆ. ಈಶ್ವರಪ್ಪ ಹೇಳಿಕೆ ಸ್ಪಷ್ಟವಾಗಿ ಇದೆ. ಎಲ್ಲೂ ಕೂಡಾ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿಲ್ಲ. ರಾಷ್ಟ್ರಧ್ವಜವೇ ಅಂತಿಮ ಅಂತ ಹೇಳಿದ್ದಾರೆ. ಈ ಘಟನೆ ಇಲ್ಲಿಗೆ ಬಿಡಬೇಕು. ಈಶ್ವರಪ್ಪ ಎಲ್ಲೂ ಕೇಸರಿ ಧ್ವಜ ಹಾರಿಸ್ತೀನಿ ಅಂತ ಹೇಳಿಲ್ಲ. 200, 300 ವರ್ಷಕ್ಕೆ ಆಗಬಹುದು ಅಂತ ಹೇಳಿದ್ದಾರೆ. ಅಷ್ಟು ಹೊತ್ತಿಗೆ ನಾವು ಯಾರು ಇರುವುದಿಲ್ಲ ಈ ವಿಷಯ ಇಲ್ಲಿಗೆ ಬಿಡಬೇಕು ಎಂದು ಮನವಿಮಾಡಿಕೊಂಡರು. ಇದನ್ನೂ ಓದಿ: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್

    ಇಂಟರಾಕ್ಷನ್ ಸಂದರ್ಭ ಮಾತನಾಡಿದ್ದು ಸ್ಟೇಟ್‍ಮೆಂಟ್ ಆಗುವುದಿಲ್ಲ. ನಮ್ಮ ಸರ್ಕಾರ ಮೋದಿ ನೇತೃತ್ವದಲ್ಲಿ ರಾಷ್ಟ್ರ ಧ್ವಜ, ರಾಷ್ಟ್ರ ಗೀತೆ ಬಗ್ಗೆ ಒಡಕು ಮಾತುಗಳನ್ನು ಆಡುವುದಿಲ್ಲ. ಈಶ್ವರಪ್ಪ ತಮ್ಮ ಹೇಳಿಕೆಯನ್ನು ತಿರುಚುವುದಕ್ಕೂ ಹೋಗಿಲ್ಲ. ಈ ಪ್ರಕರಣದ ಚರ್ಚೆಯನ್ನು ಕಾಂಗ್ರೆಸ್ ಇಲ್ಲಿಗೆ ನಿಲ್ಲಿಸಲಿ ಎಂದು ಕೇಳಿಕೊಂಡರು. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ

    ಇತ್ತ ಕಾಂಗ್ರೆಸ್ ಈಶ್ವರಪ್ಪ ರಾಜಿನಾಮೆ ಕೊಡಬೇಕೆಂದು ಪಟ್ಟುಹಿಡಿದು ಕೂತಿದೆ. ಈ ವೇಳೆ ಸಭಾಪತಿ ಹೊರಟ್ಟಿ ಮಾತನಾಡಿ, ಇದು ಇಲ್ಲಿಗೆ ಮುಕ್ತಾಯ ಮಾಡೋಣ. ಪ್ರಶ್ನೋತ್ತರ ಕಲಾಪ ಎಂದು ರೂಲಿಂಗ್ ಕೊಟ್ಟರು, ಈ ವೇಳೆ ಸಭಾಪತಿ ರೂಲಿಂಗ್‍ಗೆ ವಿರೋಧಿಸಿ ಕಾಂಗ್ರೆಸ್ ಧರಣಿ ಆರಂಭಿಸಿತು. ಸದನದ ಬಾವಿಗಿಳಿದು ಪ್ರತಿಭಟನೆಗೆ ಮುಂದಾಯಿತು. ಅಯ್ಯಯ್ಯೋ ಅನ್ಯಾಯ ಅಂತ ಕೂಗುತ್ತ ಈಶ್ವರಪ್ಪ ವಿರುದ್ಧ ಬಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಮುಂದಾಯಿತು.

  • ರಾಷ್ಟ್ರಧ್ವಜ ಅವಮಾನಿಸಿದ ಈಶ್ವರಪ್ಪ ಹೇಳಿಕೆ ಖಂಡನೀಯ: ಈಶ್ವರ ಖಂಡ್ರೆ

    ರಾಷ್ಟ್ರಧ್ವಜ ಅವಮಾನಿಸಿದ ಈಶ್ವರಪ್ಪ ಹೇಳಿಕೆ ಖಂಡನೀಯ: ಈಶ್ವರ ಖಂಡ್ರೆ

    ಬೀದರ್: ಮುಂದೊಂದು ದಿನ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಾಡಲಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಬೀದರ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಸಂಪುಟದ ಹಿರಿಯ ಸದಸ್ಯರು, ನಮ್ಮ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವ ಹೇಳಿಕೆ ನೀಡಿರುವುದು ಖಂಡನೀಯ. ಅವರ ಮೇಲೆ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಾಠ ಮುಗಿದಿಲ್ಲ, ರಿವಿಜನ್ ಆಗಿಲ್ಲ: ವಿದ್ಯಾರ್ಥಿನಿ

    ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ಪಕ್ಷ ಅಂದರೆ ಅದು ಬಿಜೆಪಿ. ಉದ್ಯೋಗ ಪತಿಗಳ ಪರವಾಗಿ ಎಲ್ಲಾ ನೀತಿಗಳನ್ನು ಮಾಡಿರುವ ಬಿಜೆಪಿ, ಭಾರತವನ್ನು ಬಡ ರಾಷ್ಟ್ರವನ್ನಾಗಿ ಮಾಡಿ ಮೆರೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

    ತಮ್ಮ ಅಕ್ರಮ ಮುಚ್ಚಿಕೊಳ್ಳಲು ಆನ್‌ಲೈನ್‌ನಲ್ಲಿ ಸದಸ್ಯತ್ವ ಅಭಿಯಾನ ಎಂದು ಜನರ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡುತ್ತಿದೆ. ಬಿಜೆಪಿಯ ದಬ್ಬಾಳಿಕೆ ಹಾಗೂ ಸರ್ವಾಧಿಕಾರಿ ದೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಿಜಬ್-ಕೇಸರಿ ಧರಿಸಬೇಡಿ: ರಮೇಶ್ ಜಾರಕಿಹೊಳಿ

    ಬಾಬ್ರಿ ಮಸೀದಿಯ ಸುಪ್ರೀಂಕೋರ್ಟ್ ತಿರ್ಪುನ್ನು ದಿಕ್ಕರಿಸಿ ಅಪಹಾಸ್ಯ ಮಾಡಿ ವಿದ್ಯಾರ್ಥಿನಿಯರು ಟ್ವಿಟ್ ಮಾಡಿದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಪ್ರತಿಕ್ರಿಯೆ ನೀಡಿಲು ನಿರಾಕರಿಸಿದ್ದಾರೆ. ನಿಮ್ಮ ಪಬ್ಲಿಕ್ ಟಿವಿ ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಈಶ್ವರ ಖಂಡ್ರೆಗೆ ವಿದ್ಯಾರ್ಥಿನಿಯರು ಟ್ವಿಟ್ ಬಗ್ಗೆ ಕೇಳಿದಾಗ ಬೇಡ ಬೇಡಾ ಎಂದು ಕೈಸನ್ನೆ ಮಾಡಿದರು.

    ಜೊತೆಗೆ ಯಾವುದು ಸಾಮಾಜದಲ್ಲಿ ಗೊಂದಲ ಉಂಟು ಮಾಡೋದು ಬೇಡ ಎಂದು ಹೇಳಿ ಮತ್ತೆ‌ ಕೈ ಸನ್ನೆ ಮಾಡಿ ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದರು. ಇನ್ನು ಪಕ್ಕದಲ್ಲೆ ಕುಳಿತಿದ್ದ ಹುಮ್ನಾಬಾದ್ ಶಾಸಕ ರಾಜಶೇಖರ ಪಾಟೀಲ್ ಕೂಡಾ ಬೇಡಾ ಬೇಡಾ ಎಂದರು.