Tag: Sai baba temple

  • ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ

    ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ

    ಮುಂಬೈ: ಗುರುಪೂರ್ಣಿಮೆ ಸಂದರ್ಭದಲ್ಲೇ ಶಿರಡಿಯ ಸಾಯಿಬಾಬಾ ದೇವಸ್ಥಾನಕ್ಕೆ (Shiradi Sai Baba Temple) ಅನಾಮಧೇಯ ಭಕ್ತರೊಬ್ಬರು 59 ಲಕ್ಷದ ಚಿನ್ನದ ಕಿರೀಟ (Gold Crown) ಸೇರಿ 65 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದಾನವಾಗಿ ನೀಡಿದ್ದು, ಬಾಬಾ ಕೃಪೆಗೆ ಪಾತ್ರರಾಗಿದ್ದಾರೆ.

    ದೇಣಿಗೆ ನೀಡಲಾದ 65 ಲಕ್ಷರೂ. ಮೌಲ್ಯದ ಆರಭರಣಗಳ ಪೈಕಿ 566 ಗ್ರಾಂ ತೂಕದ 59 ಲಕ್ಷ ಮೌಲ್ಯದ ಚಿನ್ನದ ಕಿರೀಟ, 54 ಗ್ರಾಂ ತೂಕದ ಚಿನ್ನದ ಹೂವುಗಳು (ಆಭರಣ), 2 ಕೆಜಿ ತೂಕದ ಬೆಳ್ಳಿಯ ಹಾರ ಸೇರಿವೆ. ಆಭರಣವನ್ನು ಬಾಬಾಗೆ ಅರ್ಪಿಸುವಾಗ ಭಕ್ತರು ತಮ್ಮ ಹೆಸರು ಅಥವಾ ವಿಳಾಸವನ್ನ ಬಹಿರಂಗಪಡಿಸಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಹಾಸನ ಹೃದಯಾಘಾತ ವರದಿ ಬಹಿರಂಗ: 8 ಲಕ್ಷ ಚಾಲಕರಿಗೆ ಹೆಲ್ತ್‌ ಕ್ಯಾಂಪ್‌ ಆಯೋಜಿಸಲು ಮುಂದಾದ ಸರ್ಕಾರ

    ಭಕ್ತರು ಕಾಣಿಕೆ ನೀಡಿರುವ ಬಗ್ಗೆ ಮಾತನಾಡಿರುವ ಶಿರಡಿ ಸಾಯಿ ಟ್ರಸ್ಟ್‌ನ ಸಿಇಒ ಗೋರಕ್ಷ ಗಾಡಿಲ್ಕರ್, ಇದು ಕೇವಲ ಹಣಕಾಸಿನ ದೃಷ್ಟಿಯಿಂದ ಅಮೂಲ್ಯವಾದ ದೇಣಿಗೆಯಾಗಿರದೇ, ಆಳವಾದ ಭಕ್ತಿ ಮತ್ತು ಭಕ್ತಿಯ ಸಂಕೇತವೂ ಆಗಿದೆ. ಜೊತೆಗೆ ಸಾಯಿ ಬಾಬಾ ಭಕ್ತನ ಹೃದಯದಿಂದ ಮೂಡಿದ ಭಕ್ತಿ ಮತ್ತು ಕೃತಜ್ಞತೆಗೆ ಸಾಕ್ಷಿಯಾಗಿದೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: 3ನೇ ಆಷಾಢ ಸಂಭ್ರಮ; ಗಜ ಲಕ್ಷ್ಮಿ, ನಾಗಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ ತಾಯಿ

    ಶಿರಡಿ ಸಾಯಿಬಾಬಾ ದೇವಾಲಯದಲ್ಲಿ 1908 ರಿಂದಲೂ ಗುರು ಪೂರ್ಣಿಮೆ (Guru Purnima) ಆಚರಿಸಲಾಗುತ್ತಿದೆ. ಪ್ರತಿ ವರ್ಷವೂ ದೇಶಾದ್ಯಂತ ಹಾಗೂ ವಿದೇಶಿ ಭಕ್ತರಿಂದ ಹತ್ತಾರು ಕೊಡುಗೆಗಳು ದೇವಸ್ಥಾನಕ್ಕೆ ಹರಿದು ಬರುತ್ತದೆ. ಈ ಬಾರಿ 61 ದೇಶಗಳಿಂದ ವಿದೇಶಿಯರು ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್‌ನಲ್ಲಿ ಕೆಲಸ ಗಿಟ್ಟಿಸಿಕೊಂಡ ಕನ್ನಡತಿ

    ವ್ಯಾಸ ಪೂರ್ಣಿಮೆ ಎಂದೂ ಕರೆಯಲ್ಪಡುವ ಗುರು ಪೂರ್ಣಿಮೆಯನ್ನು ಭಾರತ, ನೇಪಾಳ, ಭೂತಾನ್ ಮತ್ತು ಇತರ ಹಲವು ದೇಶಗಳಲ್ಲಿ ಹಿಂದೂ, ಬೌದ್ಧ ಮತ್ತು ಜೈನ ಸಮುದಾಯಗಳಲ್ಲಿ ಆಚರಿಸಲಾಗುತ್ತದೆ. ಇದು ಮಹರ್ಷಿ ವೇದ ವ್ಯಾಸರ ಜನ್ಮವನ್ನು ಸ್ಮರಿಸುತ್ತದೆ.

  • 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ಸಾಯಿಬಾಬಾ ದೇವಸ್ಥಾನಕ್ಕೆ ವಿಶೇಷ ಅಲಂಕಾರ

    3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ಸಾಯಿಬಾಬಾ ದೇವಸ್ಥಾನಕ್ಕೆ ವಿಶೇಷ ಅಲಂಕಾರ

    – ಗುರುಪೂರ್ಣಿಮೆ ಅಂಗವಾಗಿ ಜೆಪಿನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ
    – ಭಕ್ತಾದಿಗಳಿಗೆ ವಿಶೇಷ ಸುರಕ್ಷೆ ನೀಡಲು ಕರೋನಾ ಕಿಲ್ಲರ್ ಯಂತ್ರ ಅಳವಡಿಕೆ
    – ಒಂದು ವಾರದ ಬಳಿಕ ಒಂದು ಲಕ್ಷ ಕುಟುಂಬಕ್ಕೆ ಹಂಚುವ ನಿರ್ಧಾರ
    – ಸಂಸದ ತೇಜಸ್ವೀ ಸೂರ್ಯ ಅವರಿಂದ ಶ್ಲಾಘನೆ

    ಬೆಂಗಳೂರು: ಗುರುಪೂರ್ಣಿಮೆ ಅಂಗವಾಗಿ ಇಂದು ಜೆಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ವಿಶೇಷ ಅಲಂಕಾರ ಮಾಡಿರುವುದನ್ನ ಕಂಡು ಭಕ್ತಾದಿಗಳು ಪುಳಕಿತರಾದರು.

    ಕೊರೊನಾ ಮೂರನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಹಾಗೂ ವಿಶೇಷ ವಾದ ಆಲಂಕಾರದಿಂದ ಜನರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಮಾತ್ರೆಗಳನ್ನು ಬಳಸಿಕ ಆಲಂಕಾರ ಮಾಡುವ ಯೋಜನೆಯನ್ನು ಕೈಗೆತ್ತುಕೊಳ್ಳಲಾಯಿತು. 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಹಾಗೂ ರೇಷನ್ ಕಿಟ್ ನಲ್ಲಿ ಇರುವಂತಹ ಪದಾರ್ಥಗಳಿಂದ ಆಲಂಕಾರ ಮಾಡಿದ್ದೇವೆ. ಸುಮಾರು 4 ದಿನಗಳ ಕಾಲ ತಯಾರಿ ನಡೆಸಿದ್ದು, ಒಂದು ವಾರಗಳ ನಂತರ ಇಲ್ಲಿ ಬಳಸಲಾಗಿರುವ ಎಲ್ಲಾ ರೀತಿಯ ವಸ್ತುಗಳನ್ನು ಅಗತ್ಯವಿರುವ ಜನರಿಗೆ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.

    ಈ ವಿಶೇಷ ಅಲಂಕಾರವನ್ನು ಕಂಡು ಸಂಸದ ತೇಜಸ್ವೀ ಸೂರ್ಯ ಶ್ಲಾಘಿಸಿದರು. ಲಕ್ಷಾಂತರ ರೂಪಾಯಿಗಳನ್ನು ಖರ್ಚುಗೊಳಿಸಿ ಹಾಳಾಗುವಂತಹ ವಸ್ತುಗಳನ್ನು ಬಳಸಿ ಆಲಂಕಾರ ಮಾಡಿದರೆ ಅದರಿಂದ ಉಪಯೋಗವಾಗುವುದಿಲ್ಲ. ಇಂತಹ ವಿಭಿನ್ನ ಆಲೋಚನೆಯಿಂದಾಗಿ ಆಲಂಕಾರವೂ ಆಗುತ್ತದೆ ಹಾಗೆಯೇ ನಂತರ ಅದರ ಸದುಯೋಗವೂ ಆಗುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನ ಆಲೋಚನೆ ಮಾಡಿರುವ ಮಾಜಿ ಉಪಮಹಾಪೌರರಾದ ರಾಮ ಮೋಹನ ರಾಜ್ ಅವರ ಕಾರ್ಯ ಶ್ಲಾಘನೀಯ ಎಂದರು. ಇದನ್ನೂ ಓದಿ: ದೊಡ್ಮನೆಯಲ್ಲಿ ಮತ್ತೊಮ್ಮೆ ಅರವಿಂದ್‍ಗೆ ಸಿಕ್ತು ಬಿಗ್‍ಬಾಸ್ ಪಟ್ಟ

    ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತೆ ಕವಿತಾ ಮಾತನಾಡಿ, ಲಾಕ್‍ಡೌನ್ ನಲ್ಲಿ ಮನೆಯಿಂದ ಹೊರಗೆ ಹೋಗದೆ ಬಹಳಷ್ಟು ಬೇಸರಕ್ಕೀಡಾಗಿದ್ದೇವು. ಲಾಕ್‍ಡೌನ್ ಸಡಲಿಕೆಗೊಂಡ ನಂತರ ಇಂತಹ ವಿಭಿನ್ನ ಆಲೋಚನೆಯ ಆಲಂಕಾರ ಮಾಡಿರುವ ದೇವಸ್ಥಾನಕ್ಕೆ ಭೇಟಿ ನೀಡದ್ದು ಸಂತಸವಾಯಿತು ಎಂದು ಹೇಳಿದರು. ಇದನ್ನೂ ಓದಿ: RRR ಆಡಿಯೋ ರೈಟ್ಸ್ ಲಹರಿ ಪಾಲು

  • ಸಾಯಿಬಾಬಾ ಮಂದಿರ ಆಶ್ರಮದ ಸೂಪರ್ ವೈಸರ್‌ಗೆ ಕೊರೊನಾ

    ಸಾಯಿಬಾಬಾ ಮಂದಿರ ಆಶ್ರಮದ ಸೂಪರ್ ವೈಸರ್‌ಗೆ ಕೊರೊನಾ

    – ಚಿನ್ನದಂಗಡಿ ಮಾಲೀಕನ ಮಗಳ ಮಗನಿಗೂ ಸೋಂಕು

    ಚಿಕ್ಕಬಳ್ಳಾಪುರ: ನಗರ ಹೊರವಲಯದ ಹಾರೋಬಂಡೆ ಬಳಿಯ ಸಾಯಿಬಾಬಾ ಮಂದಿರ ಆಶ್ರಮದಲ್ಲಿನ 68 ವರ್ಷದ ಸೂಪರ್ ವೈಸರ್ ಗೂ ರೋಗಿ 2,653 ಕೊರೊನಾ ದೃಢವಾಗಿದೆ.

    ಆಶ್ರಮದಲ್ಲಿ ಸೂಪರ್ ವೈಸರ್ ಆಗಿದ್ದ ಇವರು ಇತ್ತೀಚೆಗೆ ಬೆಂಗಳೂರಿನ ಎಸ್.ಪಿ.ರೋಡ್‍ಗೆ ಹೋಗಿ ಬಂದಿದ್ದರು ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಹೀಗಾಗಿ ಗುರುವಾರ ಇವರ ಗಂಟಲು ದ್ರವ ಮಾದರಿಯನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ 50-50 ಅಂತ ಬಂದಿದೆ.

    ಸಂಶಯ ವ್ಯಕ್ತವಾದ ಹಿನ್ನೆಲೆ ಇವರ ಗಂಟಲು ದ್ರವ ಮಾದರಿಯನ್ನ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಇಂದು ಇವರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಆಶ್ರಮ ಹಾಗೂ ಸಾಯಿಬಾಬಾ ಮಂದಿರ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಸಂಬಂಧಿ ಜಿ.ಎಚ್.ನಾಗರಾಜ್ ಎಂಬವರದ್ದಾಗಿದೆ. ಸದ್ಯ ಆಶ್ರಮವಮ್ನ ಸೀಲ್‍ಡೌನ್ ಮಾಡಲಾಗಿದೆ.

    ಆಶ್ರಮದಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಕಾರ್ಮಿಕರನ್ನ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ವ್ಯಕ್ತಿ ಮೂಲತಃ ಕೇರಳದವರಾಗಿದ್ದು, ಕಳೆದ 3 ವರ್ಷಗಳಿಂದ ಇದೇ ಆಶ್ರಮದಲ್ಲಿ ದೇವಾಲಯ ನಿರ್ಮಾಣಕ್ಕೆ ಬೇಕಾಗುವ ಸಾಮಾಗ್ರಿಗಳನ್ನ ತಂದುಕೊಡುವ, ಉಸ್ತುವಾರಿ ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು.

    ಚಿನ್ನದಂಗಡಿ ಮಾಲೀಕನ ಮಗಳ ಮಗನಿಗೂ ಸೋಂಕು:
    ಜಿಲ್ಲೆಯ ಚಿಂತಾಮಣಿ ನಗರದ ಚಿನ್ನದಂಗಡಿ ಮಾಲೀಕ ಸಂಪರ್ಕಕ್ಕೆ ಒಳಗಾಗಿದ್ದ ಮಗಳ ಮಗನಿಗೂ ಈಗ ಕೊರೊನಾ ದೃಢವಾಗಿದೆ. ಅಂದಹಾಗೆ ಈ ಚಿನ್ನದಂಗಡಿ ಮಾಲೀಕನ ಮಗ, ಮೊಮ್ಮಗ, ಮಗಳು, ಅಳಿಯನಿಗೂ ಕೊರೊನಾ ಸೋಂಕು ದೃಢವಾಗಿತ್ತು. ಈಗ ಮಗಳ 17 ವರ್ಷದ ಮಗನಿಗೂ ಸೋಂಕು ಬಂದಿದೆ. ಹೀಗಾಗಿ ಒಂದೇ ಕುಟುಂಬದ 6 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಸೋಂಕಿತ ರೋಗಿ 648 ಮೊಮ್ಮಗನನ್ನ ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಲಾಗಿದೆ.

  • ಸಾಯಿಬಾಬ ಮಂದಿರದ ಬೀಗ ಮುರಿದು ಕಳ್ಳತನಕ್ಕೆ ಯತ್ನ

    ಸಾಯಿಬಾಬ ಮಂದಿರದ ಬೀಗ ಮುರಿದು ಕಳ್ಳತನಕ್ಕೆ ಯತ್ನ

    ರಾಯಚೂರು: ನಗರದ ಇಂದಿರಾನಗರದಲ್ಲಿರುವ ಸಾಯಿಬಾಬಾ ಮಂದಿರದ ಬೀಗ ಮುರಿದು ಕಳ್ಳತನಕ್ಕೆ ವಿಫಲಯತ್ನ ನಡೆದಿದೆ. ಮಂದಿರದ ಹುಂಡಿ ಹೊಡೆಯಲು ಯತ್ನ ನಡೆದಿದೆಯಾದರೂ ಸಫಲವಾಗಿಲ್ಲ.

    ಸಾಯಿಬಾಬಾ ಮಂದಿರದಲ್ಲಿನ ವಸ್ತುಗಳು ಚಲ್ಲಾಪಿಲ್ಲಿ ಮಾಡಲಾಗಿದೆ. ಆದರೆ ಕಳ್ಳತನಕ್ಕೆ ಯತ್ನಿಸಿದರೂ ಯಾವುದೇ ವಸ್ತು, ಆಭರಣ ಕಳ್ಳತನವಾಗಿಲ್ಲ. ಶುಕ್ರವಾರ ರಾತ್ರಿ ವೇಳೆ ಮಂದಿರಕ್ಕೆ ನುಗ್ಗಿರುವ ಕಳ್ಳರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

    ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

  • ನಿರ್ಮಾಣ ಹಂತದ ದೇವಸ್ಥಾನ ಕುಸಿತ- ತಪ್ಪಿದ ಭಾರೀ ಅನಾಹುತ

    ನಿರ್ಮಾಣ ಹಂತದ ದೇವಸ್ಥಾನ ಕುಸಿತ- ತಪ್ಪಿದ ಭಾರೀ ಅನಾಹುತ

    ಬೀದರ್: ನಗರದ ಸಾಯಿ ಕಾಲೋನಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಶ್ರೀ ಸಾಯಿ ಮಂದಿರದ ಮೇಲ್ಛಾವಣಿ ಕುಸಿದು ಭಾರೀ ಅವಘಡ ತಪ್ಪಿದೆ.

    ಲಕ್ಷಾಂತರ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಹಲವು ತಿಂಗಳುಗಳಿಂದ ಶ್ರೀ ಸಾಯಿ ಮಂದಿರದ ನಿರ್ಮಾಣವಾಗುತ್ತಿದೆ. ಆದರೆ ಶನಿವಾರ ದೇವಸ್ಥಾನ ಕುಸಿದು ಬಿದ್ದಿದೆ. ಅದೃಷ್ಟವಷಾತ್ ಈ ವೇಳೆ ಸ್ಥಳದಲ್ಲಿ ಕಾರ್ಮಿಕರು, ಸಾರ್ವಜನಿಕರು ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಕುಸಿದು ಬಿದ್ದ ಕಟ್ಟಡದ ಪಕ್ಕದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹೀಗಾಗಿ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳವು ಕುಸಿದಿರುವ ಕಟ್ಟಡವನ್ನು ತೆರವು ಗೊಳಿಸಿದೆ. ಗಾಂಧಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.