Tag: saints

  • ಶ್ರೀರಾಮ ಮಂದಿರ ಉದ್ಘಾಟನೆಗೆ 2,500 ಸಂತರಿಗೆ ಆಹ್ವಾನ – ದಂಡ, ಚನ್ವಾರ್, ಛತ್ರ, ಪಾದುಕೆ ತರದಂತೆ ಮನವಿ

    ಶ್ರೀರಾಮ ಮಂದಿರ ಉದ್ಘಾಟನೆಗೆ 2,500 ಸಂತರಿಗೆ ಆಹ್ವಾನ – ದಂಡ, ಚನ್ವಾರ್, ಛತ್ರ, ಪಾದುಕೆ ತರದಂತೆ ಮನವಿ

    ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಮಂದಿರದಲ್ಲಿ (Ayodhya Ram Mandir) ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸಿದ್ಧತೆ ಬರದಿಂದ ಸಾಗಿದೆ. ಜನವರಿ 22 ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಅತಿಥಿಗಳನ್ನು ಆಹ್ವಾನಿಸುವ ಕಾರ್ಯ ಪ್ರಗತಿಯಲ್ಲಿದ್ದು ಸುಮಾರು 7 ಸಾವಿರ ಗಣ್ಯರಿಗೆ ಆಥಿತ್ಯ ವಹಿಸಲು ನಿರ್ಧರಿಸಿದೆ.

    ಅತಿಥಿಗಳ ಪಟ್ಟಿ ಅಂತಿಮಗೊಳಿಸಲು ರಾಮ್‌ಕೋಟ್‌ನಲ್ಲಿರುವ ಟ್ರಸ್ಟ್ ಕಚೇರಿಯಲ್ಲಿ ಮಂಗಳವಾರ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಅತಿಥಿಗಳ ವಸತಿ, ಸಾರಿಗೆ, ಆಹಾರ ಇತ್ಯಾದಿ ವ್ಯವಸ್ಥೆಗಳ ಕುರಿತು ಚರ್ಚಿಸಲಾಯಿತು. ಅತಿಥಿಗಳ ಪಟ್ಟಿಯನ್ನು ಎಚ್ಚರಿಕೆಯಿಂದ ಪರಿಗಣಿಸಲಾಗಿದೆ. ಅಯೋಧ್ಯೆಯಿಂದಲೇ ಅತಿಥಿ ದೇವೋ ಭವ ಎಂಬ ಸಂದೇಶ ನೀಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಸಿಬ್ಬಂದಿಗೆ ಸಂಬಳ ನೀಡಲು ಬೆಂಗ್ಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟ ಬೈಜೂಸ್ ಸಂಸ್ಥಾಪಕ!

    7 ಸಾವಿರ ಅತಿಥಿಗಳ ಪೈಕಿ ವಿಶೇಷವಾಗಿ ದೇಶಾದ್ಯಂತ ವಿವಿಧ ಸಂಪ್ರದಾಯಗಳ ಸುಮಾರು 2,500 ಋಷಿಮುನಿಗಳು ಮತ್ತು ಸಂತರನ್ನು (Saints) ಅಹ್ವಾನಿಸಲಾಗುತ್ತಿದೆ. ಅವರಿಗೆ ಯಾವುದೇ ಕೊರತೆ ಇರದಂತೆ ನೋಡಿಕೊಳ್ಳಲಾಗುತ್ತಿದೆ. ಭದ್ರತಾ ದೃಷ್ಠಿಯಿಂದಲೂ ಭದ್ರತಾ ಏಜೇನ್ಸಿಗಳ ಜೊತೆಗೆ ಚರ್ಚೆ ಮಾಡಿದೆ. ಭದ್ರತಾ ಏಜೆನ್ಸಿಗಳ ಮನವಿಯ ಮೇರೆಗೆ, ದಂಡ, ಚನ್ವಾರ್, ಛತ್ರ ಮತ್ತು ಪಾದುಕೆಗಳನ್ನು ಸಮಾರಂಭಕ್ಕೆ ತರದಂತೆ ಸಂತರು ಮತ್ತು ಋಷಿಗಳಲ್ಲಿ ಟ್ರಸ್ಟ್ (Ram Mandir)   ಮನವಿ ಮಾಡಿದೆ. ಇದನ್ನೂ ಓದಿ: ಕಾರು ನಿಲ್ಲಿಸೋಕೆ 100*100 ಸೈಟು, ಕೋಟಿ-ಕೋಟಿ ಆಸ್ತಿ; ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ರೇಡ್‌

    ಅತಿಥಿಗಳ ಜವಾಬ್ದಾರಿಯನ್ನು ಸಂಘವು ಕ್ಷೇತ್ರದ ಸಹ-ಸಂಪರ್ಕ ಮುಖ್ಯಸ್ಥ ಮನೋಜ್ ಜಿ ಅವರಿಗೆ ವಹಿಸಿದೆ. ಸಂಘದ ಅಖಿಲ ಭಾರತ ಸಂಪರ್ಕ ಮುಖ್ಯಸ್ಥ ರಾಮಲಾಲ್, ವಿಎಚ್‌ಪಿ ಸಂಘಟನೆ ಸಚಿವ ಕೋಟೇಶ್ವರ್, ವಿಎಚ್‌ಪಿ ಪೋಷಕ ಮಂಡಳಿ ಸದಸ್ಯ ದಿನೇಶ್ ಚಂದ್ರ, ವಿಎಚ್‌ಪಿ ಕೇಂದ್ರ ಸಚಿವ ಗಜೇಂದ್ರ ಸಿಂಗ್, ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟಿ ಡಾ.ಅನಿಲ್ ಮಿಶ್ರಾ ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮೈಸೂರಿಗೆ ಕಳುಹಿಸಿಕೊಡಿ ಇಲ್ಲವೇ ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ: ಗೋಳಾಡಿದ ಮಾವುತ

  • ಸತತ ಎರಡನೇ ಬಾರಿ ಮುಖ್ಯಮಂತ್ರಿ ಗದ್ದುಗೆ ಏರಿದ ಭೂಪೇಂದ್ರ ಪಟೇಲ್

    ಸತತ ಎರಡನೇ ಬಾರಿ ಮುಖ್ಯಮಂತ್ರಿ ಗದ್ದುಗೆ ಏರಿದ ಭೂಪೇಂದ್ರ ಪಟೇಲ್

    ಗಾಂಧಿನಗರ: ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ನಲ್ಲಿ (Gujarat) ಬಹುಮತ ಪಡೆದಿರುವ ಬಿಜೆಪಿ (BJP) ಇಂದು ಏಳನೇ ಬಾರಿಗೆ ಸರ್ಕಾರ ರಚಿಸಿದೆ. ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ (Bhupendra Patel) ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

    ಈ ಮೂಲಕ ಗುಜರಾತ್‍ನ 18ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾದರು. ಈ ಹಿಂದೆ ಕಳೆದ ವರ್ಷ ವಿಜಯ್ ರೂಪಾನಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಭೂಪೇಂದ್ರ ಪಟೇಲ್ ಸಿಎಂ ಆಗಿದ್ದರು. ಇದೀಗ ಸತತ ಎರಡನೇ ಬಾರಿ ಅಧಿಕಾರ ಹಿಡಿದಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಿದರು. ಸಿಎಂ ಜೊತೆ ಇಂದು ಒಟ್ಟು 16 ಮಂದಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿದರು. ಈ ಹಿಂದೆ ಭೂಪೇಂದ್ರ ಪಟೇಲ್ ಸಂಪುಟದಲ್ಲಿದ್ದ ಕಾನು ದೇಸಾಯಿ, ಋಷಿಕೇಶ್ ಪಟೇಲ್, ರಾಘವ್ಜಿ ಪಟೇಲ್, ಬಲವಂತಸಿನ್ಹ್ ರಜಪೂತ್, ಕುನ್ವರ್ಜಿ ಬವಲಿಯಾ, ಮುಲು ಬೇರಾ, ಕುಬೇರ್ ದಿಂಡೋರ್ ಮತ್ತು ಭಾನುಬೆನ್ ಬಬಾರಿಯಾ ಮತ್ತೊಮ್ಮೆ ಕ್ಯಾಬಿನೆಟ್‍ನಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಮಾಜಿ ಸಚಿವ ದೇಶ್‌ಮುಖ್‌ ಜಾಮೀನು ನೀಡಿ ಕೆಲ ಹೊತ್ತಲ್ಲೇ ತಡೆ ಹಿಡಿದ ಬಾಂಬೆ ಕೋರ್ಟ್‌

    ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್‌ನ ಹೆಲಿಪ್ಯಾಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜೆ.ಪಿ ನಡ್ಡಾ, ಕೆಲ ಕೇಂದ್ರ ಸಚಿವರು ಭಾಗಿಯಾದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು, ಮಾಜಿ ಸಿಎಂ ಯಡಿಯೂರಪ್ಪ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಶೇಷವಾಗಿ 200 ಸಂತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಪ್ರಿಯಾಂಕಾ ಗಾಂಧಿ ಮಗಳು

    ಗುಜರಾತ್ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತ್ತ ಈ ಬಾರಿ ಚುನಾವಣೆಯಲ್ಲಿ ಶೇಕಡಾ 10 ರಷ್ಟು ಸ್ಥಾನಗಳನ್ನು ಗೆಲ್ಲದ ಕಾಂಗ್ರೆಸ್ ಅಧಿಕೃತ ವಿಪಕ್ಷ ಸ್ಥಾನವನ್ನು ಕಳೆದುಕೊಂಡಿದೆ. ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಫಲವಾಗಿ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ.

    Live Tv
    [brid partner=56869869 player=32851 video=960834 autoplay=true]

  • 200 ಸಂತರ ಸಮ್ಮುಖದಲ್ಲಿ ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

    200 ಸಂತರ ಸಮ್ಮುಖದಲ್ಲಿ ಇಂದು ಗುಜರಾತ್‍ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ

    ಗಾಂಧಿನಗರ: ವಿಧಾನಸಭೆ ಚುನಾವಣೆಯಲ್ಲಿ ದಾಖಲೆಯ ಸ್ಥಾನಗಳನ್ನು ಪಡೆಯುವ ಮೂಲಕ ಗುಜರಾತ್‍ನಲ್ಲಿ (Gujarat) ಪ್ರಚಂಡ ಬಹುಮತ ಪಡೆದಿರುವ ಬಿಜೆಪಿ (BJP) ಇಂದು ಏಳನೇ ಬಾರಿಗೆ ಸರ್ಕಾರ ರಚಿಸಲಿದೆ.

    ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ (Bhupendra Patel) ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ (CM) ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್‍ನ 18ನೇ ಮುಖ್ಯಮಂತ್ರಿಗೆ ರಾಜ್ಯಪಾಲ ಆಚಾರ್ಯ ದೇವವ್ರತ್ ಪ್ರಮಾಣವಚನ ಬೋಧಿಸಲಿದ್ದಾರೆ. ಸಿಎಂ ಜೊತೆ ಇಂದು ಒಟ್ಟು 25 ಮಂದಿ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಗುಜರಾತ್ ಚುನಾವಣೆಯಲ್ಲಿ 182 ಸ್ಥಾನಗಳ ಪೈಕಿ ಬಿಜೆಪಿ 156 ಸ್ಥಾನಗಳನ್ನು ಗೆಲುವು ಸಾಧಿಸಿತ್ತು. ಇದನ್ನೂ ಓದಿ: ಒಂದೇ ದಿನ 10 ಜನರಿಗೆ ಕಡಿದ ಹುಚ್ಚುನಾಯಿ

    ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್‌ನಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜೆ.ಪಿ ನಡ್ಡಾ, ಕೆಲ ಕೇಂದ್ರ ಸಚಿವರು ಭಾಗಿ ಆಗಲಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಿಎಂಗಳು, ಮಾಜಿ ಸಿಎಂ ಯಡಿಯೂರಪ್ಪ ಸಹ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಗುಜರಾತ್ ಚುನಾವಣೆ ವೇಳೆ ಅಬ್ಬರದ ಪ್ರಚಾರದ ಮೂಲಕ ಗಮನಸೆಳೆದ ಬಿ.ಎಲ್ ಸಂತೋಷ್ ಸೇರಿದಂತೆ ಹಲವು ಸಂಸದರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಪ್ರಧಾನಿ ಸೇರಿದಂತೆ ವಿವಿಐಪಿಗಳಿಗೆ ವಿಶೇಷ ಆಸನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಗುಜರಾತ್‌ಗೆ ಪ್ರಯಾಣ ಬೆಳೆಸಿದ್ದು, ಸಿಎಂ ಜೊತೆ ಸಚಿವ ಬಿಸಿ ನಾಗೇಶ್ ಹಾಗೂ ಭೈರತಿ ಬಸವರಾಜ್ ತೆರಳಿದ್ದಾರೆ. ಇದನ್ನೂ ಓದಿ: ಪಿಕ್ನಿಕ್ ಮುಗಿಸಿ ಬರ್ತಿದ್ದ ಬಸ್ ಪಲ್ಟಿ – ಇಬ್ಬರು ಶಾಲಾ ವಿದ್ಯಾರ್ಥಿಗಳ ದುರ್ಮರಣ

    ಈ ಬಾರಿ ಚುನಾವಣೆಯಲ್ಲಿ ಶೇಕಡಾ 10ರಷ್ಟು ಸ್ಥಾನಗಳನ್ನು ಗೆಲ್ಲದ ಕಾಂಗ್ರೆಸ್ ಅಧಿಕೃತ ವಿಪಕ್ಷ ಸ್ಥಾನವನ್ನು ಕಳೆದುಕೊಂಡಿದೆ. ಕೇವಲ 17 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಫಲವಾದ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

    ರಾಮನ ಹೆಸ್ರಲ್ಲಿ ದೇಶ ಒಡೆಯುವ ಕೆಲಸ ಮಾಡ್ಬೇಡಿ: ಬಾಬಾ ರಾಮ್‍ದೇವ್

    ಮುಂಬೈ: ಯಾವುದೇ ರಾಜಕೀಯ ಪಕ್ಷಕ್ಕೂ ರಾಮ ಸೇರಿಲ್ಲ. ರಾಜಕೀಯಕ್ಕಾಗಿ ರಾಮನನ್ನು ಬಳಸಿಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಾವೆಲ್ಲ ಸನ್ಯಾಸಿಗಳು ಒಗ್ಗೂಡಿ ರಾಮ ಮಂದಿರ ನಿರ್ಮಾಣಕ್ಕೆ ಹೋರಾಡಬೇಕು ಎಂದು ಯೋಗ ಗುರು ಬಾಬಾ ರಾಮ್‍ದೇವ್ ಕರೆಕೊಟ್ಟಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮನು ಕೇವಲ ಯಾವುದೋ ಒಂದು ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ರಾಮ ಇಡೀ ದೇಶಕ್ಕೆ ಸೇರಿದವನು. ಆದ್ದರಿಂದ ಎಲ್ಲಾ ಸಾಧು ಸಂತರು ಕೂಡ ಜೊತೆಗೂಡಿ ರಾಮನ ಮೇಲಿರುವ ಭಕ್ತಿಯನ್ನು ಸಾರಬೇಕು. ದೇಶಕ್ಕೆ ಯಾವುದೇ ತಪ್ಪು ಪರಿಲ್ಪನೆಯನ್ನು ನೀಡುವ ರೀತಿ ನಮ್ಮ ಭಕ್ತಿ ಇರಬಾರದು ಎಂದು ಕಿಡಿಕಾರಿದ್ದಾರೆ.

    ಒಂದು ವೇಳೆ ಸಂತರು ಹಾಗೂ ಸನ್ಯಾಸಿಗಳು ಒಗ್ಗೂಡಿ ಪ್ರಾಮಾಣಿಕತೆಯಿಂದ ಇರದಿದ್ದರೆ ದೇಶದಲ್ಲಿ ಏಕತೆ ಹಾಗೂ ಸಮಗ್ರತೆಯನ್ನು ಹೇಗೆ ಕಾಯ್ದುಕೊಳ್ಳಲು ಸಾಧ್ಯ? ರಾಮನ ಹೆಸರನ್ನು ಬಳಸಿಕೊಂಡು ದೇಶವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ನಾನು ಎಲ್ಲಾ ಸನ್ಯಾಸಿಗಳು ಹಾಗೂ ಸಂತರ ಬಳಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿಕೊಂಡರು.

    ಕೆಲ ಸನ್ಯಾಸಿಗಳು ಹಾಗೂ ಪ್ರಜೆಗಳು ರಾಮ ಮಂದಿರವನ್ನು ಆದಷ್ಟು ಬೇಗ ಅಯೋಧ್ಯೆಯಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದ್ರೆ ಜನವರಿ 30ರಂದು ಸನ್ಯಾಸಿಗಳು ಹಾಗೂ ಸಂತರು ಸಂಘಟಿತಗೊಂಡಾಗ ರಾಮಮಂದಿರ ನಿರ್ಮಾಣದ ಕಾರ್ಯ ಫೆಬ್ರವರಿ 21ಕ್ಕೆ ಆರಂಭವಾಗಲಿದೆ ಎಂದು ತಿಳಿಸಿದ್ದರು.

    ಜನವರಿ 29ರಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‍ಗೆ ವಿವಾದದಲ್ಲಿರುವ ಅಯೋಧ್ಯೆಯ ಜಾಗವನ್ನು ಹೊರತುಪಡಿಸಿ ಇನ್ನುಳಿದ ಸ್ಥಳವನ್ನು ರಾಮ ಮಂದಿರ ಪುನರ್ ನಿರ್ಮಿಸಲು ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • 70 ವರ್ಷದಲ್ಲಿ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ಕೊಟ್ಟಿಲ್ಲ: ಬಾಬಾ ರಾಮ್‍ದೇವ್

    70 ವರ್ಷದಲ್ಲಿ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ಕೊಟ್ಟಿಲ್ಲ: ಬಾಬಾ ರಾಮ್‍ದೇವ್

    ನವದೆಹಲಿ: ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗೂ ಕೇಂದ್ರ ಸರ್ಕಾರ ಭಾರತ ರತ್ನ ನೀಡಿ ಗೌರವಿಸಿಲ್ಲ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲಾ ವಿಭಾಗದಲ್ಲೂ ಸಾಧನೆ ಮಾಡಿದ ಗಣ್ಯರಿಗೆ ಸರ್ಕಾರ ಭಾರತದ ಶ್ರೇಷ್ಠ ಪ್ರಶಸ್ತಿ ಭಾರತ ರತ್ನವನ್ನು ನೀಡಿ ಗೌರವಿಸುತ್ತೆ. ಆದರೇ ಕಳೆದ 70 ವರ್ಷದಲ್ಲಿ ಯಾವುದೇ ಸನ್ಯಾಸಿಗಳಿಗೆ ಅಥವಾ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದಿದ್ದಾರೆ. ಇದನ್ನೂ ಓದಿ:ಶ್ರೀಗಳಿಗೆ ಭಾರತರತ್ನ ಕೊಡದಿರುವುದು ಎಲ್ಲರಿಗಿಂತ ನನಗೆ ಹೆಚ್ಚು ನೋವು ತಂದಿದೆ – ಬಿಎಸ್‍ವೈ

    ವಿಪರ್ಯಾಸವೆಂದರೆ ಸಾಮಾಜಕ್ಕಾಗಿ ದುಡಿದು, ಜನರಿಗಾಗಿ ಒಳ್ಳೆಯ ಕೆಲಸವನ್ನು ಮಾಡಿರುವ ಮಹಾಋಷಿ ದಯಾನಂದ ಸರಸ್ವತಿ, ಸ್ವಾಮಿ ವಿವೇಕಾನಂದರಿಂದ ಹಿಡಿದು ಶ್ರೀ ಶಿವಕುಮಾರ ಸ್ವಾಮೀಜಿಗಳ ವರೆಗೂ ಯಾವ ಸನ್ಯಾಸಿಗೂ ಸರ್ಕಾರ ಭಾರತ ರತ್ನ ನೀಡಿಲ್ಲ ಎಂದು ಅಸಮಾಧಾನವನ್ನು ಹೊರಹಾಕಿದರು. ಇದನ್ನೂ ಓದಿ:ಭಾರತ ರತ್ನ – ಲತಾಗಿಲ್ಲದ ನಿಯಮಾವಳಿ ಸಿದ್ದಗಂಗಾ ಶ್ರೀಗಳಿಗೆ ಮಾತ್ರ ಯಾಕೆ?

    ಮುಂದಿನ ಬಾರಿಯಾದರೂ ಸಾಧು ಸನ್ಯಾಸಿಗಳು ಮಾಡಿರುವ ಸೇವೆಯನ್ನು ಗುರುತಿಸಿ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರವನ್ನು ರಾಮ್‍ದೇವ್ ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv