Tag: Saira Narasimha Reddy

  • ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಕಿಚ್ಚ

    ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಕಿಚ್ಚ

    ಬೆಂಗಳೂರು: ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ.

    ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ಟಿನಲ್ಲಿ ತಾವೇ ಕೈಯಾರೇ ತಮ್ಮ ಸಹ ಕಲಾವಿದರಿಗೆ ಹಾಗೂ ಚಿತ್ರ ತಂಡದ ಸದಸ್ಯರಿಗೆ ಮೊಟ್ಟೆ ದೋಸೆ ಮಾಡಿ ಕೊಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.

    ಇನ್‍ಸ್ಟಾ ಪೋಸ್ಟ್‍ನಲ್ಲಿ, ಎಸ್‍ಎನ್‍ಆರ್(ಸೈರಾ ನರಸಿಂಹ ರೆಡ್ಡಿ) ಸಿನಿಮಾ ಶೂಟಿಂಗ್ ಸೆಟ್ಟಿನಲ್ಲಿ ಕಳೆದ ಮೋಜಿನ ಸಮಯ, ಸ್ಪೇಷಲ್ ಆಮ್ಲೆಟ್ ದೋಸೆ ಎಂದು ಬರೆದು ಎಸ್‍ಎನ್‍ಆರ್ ಎಂದು ಹ್ಯಾಷ್‍ಟ್ಯಾಗ್ ಹಾಕಿ, ದೋಸೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸುದೀಪ್ ದೋಸೆ ಮಾಡಿ ಕೊಡುತ್ತಿದ್ದರೆ, ಸಾಲಾಗಿ ಸಿನಿಮಾ ತಂಡದ ಸದಸ್ಯರು, ಕಲಾವಿದರು ಪ್ಲೇಟ್‍ನಲ್ಲಿ ದೋಸೆ ಹಾಕಿಸಿಕೊಂಡು ಸವಿಯುತ್ತಿರುವ ದೃಶ್ಯ ಸೆರೆಯಾಗಿದೆ.

    ಈ ವಿಶೇಷ ಪೋಸ್ಟ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಶೂಟಿಂಗ್ ಸೆಟ್ಟಿನಲ್ಲಿ ಸೌಟು ಹಿಡಿದ ಕಿಚ್ಚನ ಸರಳತನಕ್ಕೆ ಮನಸೋತಿದ್ದಾರೆ. ಈವರೆಗೂ ಈ ವಿಡಿಯೋ ಸುಮಾರು 1 ಲಕ್ಷಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, ಸಾಕಷ್ಟು ಮಂದಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

    https://www.instagram.com/p/B3Ci_24HOY6/

  • My dear hero ಅಂದ್ರು ಮಿಸಸ್ ಪ್ರಿಯಾ

    My dear hero ಅಂದ್ರು ಮಿಸಸ್ ಪ್ರಿಯಾ

    ಬೆಂಗಳೂರು: ಇಂದು ರಾಜ್ಯಾದ್ಯಂತ ಬಹುನಿರೀಕ್ಷಿತ ಸಿನಿಮಾ ‘ದಿ ವಿಲನ್’ ಚಿತ್ರ ಬಿಡುಗಡೆಯಾಗಿದೆ. ಆದರೆ ಸಿನಿಮಾ ಬಿಡುಗಡೆಯ ಮೊದಲೇ ಈ ಬಗ್ಗೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

    ಪ್ರಿಯಾ ಸುದೀಪ್ ಅವರು, ”ನಾನು ಇದುವೆರೆಗೂ ಈ ರೀತಿಯ ಕ್ರೇಜ್ ಅನ್ನು ಈ ಹಿಂದೆ ನೋಡಿಯೇ ಇರಲಿಲ್ಲ. ರಾಜ್ಯಾದ್ಯಂತ ಇದು ಹಬ್ಬದ ರೀತಿ ಆಗಿದೆ. ಎನರ್ಜಿಟಿಕ್ ಶಿವಣ್ಣ, ನಿರ್ದೇಶಕ ಪ್ರೇಮ್ ಹಾಗೂ ನನ್ನ ಪ್ರೀತಿಯ ಹೀರೋ ಸುದೀಪ್ ಸೇರಿದಂತೆ ಇಡೀ ‘ದಿ ವಿಲನ್’ ಚಿತ್ರತಂಡಕ್ಕೆ ನನ್ನ ಶುಭಾಶಯಗಳು”  ಎಂದು ಬರೆದು  ಟ್ವೀಟ್ ಮಾಡಿದ್ದಾರೆ.

    ಇಂದು ಹಲವು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಿ ಭರ್ಜರಿ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಇತ್ತೀಚೆಗೆ ಸುದೀಪ್ ಕುಟುಂಬ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಭೇಟಿಯಾಗಿದ್ದರು. ಭೇಟಿಯಾಗಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

    ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟ ಸುದೀಪ್ ‘ಅವುಕು ರಾಜಾ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮುಖ್ಯ ಪಾತ್ರ ಪೋಷಿಸುತ್ತಿರುವ ಸುದೀಪ್ ಅವರ ಲುಕ್ ಈಗಾಗಲೇ ಬಹಿರಂಗವಾಗಿದೆ.

    ‘ಸೈರಾ ನರಸಿಂಹ ರೆಡ್ಡಿ’ ಚಿತ್ರದ ಶೂಟಿಂಗ್ ನ ಬಿಡುವಿನ ವೇಳೆ ಚಿರಂಜೀವಿ ಜೊತೆಗೆ ಸುದೀಪ್ ಕುಟುಂಬ ಸಮಯ ಕಳೆದಿದೆ. ಚಿರಂಜೀವಿ ಜೊತೆಗೆ ಸುದೀಪ್ ಪುತ್ರಿ ಸಾನ್ವಿ ಕೂಡ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.

    ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಚಿರಂಜೀವಿ, ಸುದೀಪ್ ಜೊತೆಗೆ ಜಗಪತಿ ಬಾಬು, ವಿಜಯ್ ಸೇತುಪತಿ, ನಯನತಾರಾ, ತಮನ್ನಾ, ಪೂನಂ ಕೌರ್ ನಟಿಸಿದ್ದಾರೆ. ವಿಶೇಷ ಪಾತ್ರವೊಂದರಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ಬಣ್ಣ ಹಚ್ಚಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv