ಇನ್ನೂ ಅಗತ್ಯವಿದ್ದ ಹೆಚ್ಚುವರಿ 2.5 ಲಕ್ಷ ರೂ. ಹಣವನ್ನು ಡ್ರಾ ಮಾಡಲು ಕೆನರಾ ಬ್ಯಾಂಕ್ ಶಾಖೆಗೆ ಬಂದಿದ್ದರು. ಕೆನರಾ ಬ್ಯಾಂಕ್‌ನೊಳಗೆ ಹೋಗುವ ಮುನ್ನ ಈ ಮೊದಲು ತಂದಿದ್ದ 13 ಲಕ್ಷ ರೂ. ಹಣವನ್ನು ಸ್ಕೂಟರ್‌ನ ಡಿಕ್ಕಿಯಲ್ಲಿ ಇಟ್ಟು, ಲಾಕ್ ಮಾಡಿ ಹೋಗಿದ್ದರು. ಬ್ಯಾಂಕ್‌ನೊಳಗೆ ಹೋಗಿ ಬರುವಷ್ಟರಲ್ಲಿ ಕಳ್ಳರು ಡಿಕ್ಕಿಯನ್ನು ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂತ್ರವಾದಿ ಗೆಟಪ್‌ನಲ್ಲಿ ಬಂದ ಸಮಂತಾ- ಏನಿದು ಹೊಸ ಅವತಾರ?
ಯೋಗೇಶ್ ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಖದೀಮರಿಗೆ ಬಲೆ ಬೀಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ (Sakaleshpura Town Police) ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾಸನ: ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂವರು ವಿದ್ಯಾರ್ಥಿಗಳು ಕುನಿಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಆದರವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಬೆಳಿಗ್ಗೆ 7:30ಕ್ಕೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ಮೂವರು ಶಾಲೆಗೆ ಬಾರದ ಹಿನ್ನೆಲೆ ಶಿಕ್ಷಕರು ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನಂತರ ಗಾಬರಿಗೊಂಡ ಪೋಷಕರು ತಮ್ಮ ಮಕ್ಕಳಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ.
ರಾತ್ರಿಯಾದರೂ ಮೂವರು ಮಕ್ಕಳು ಮನೆಗೆ ವಾಪಸ್ ಬಂದಿಲ್ಲ. ಇನ್ನೂ ನಾಪತ್ತೆಯಾಗಿರುವ ಶರತ್ ಬಳಿ ಮೊಬೈಲ್ ಫೋನ್ ಇದ್ದು, ಸ್ವಿಚ್ ಆಫ್ ಆಗಿದೆ. ಇದರಿಂದ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ತಮ್ಮ ಮಕ್ಕಳನ್ನು ಹುಡುಕಿಸಿ ಕೊಡುವಂತೆ ದೂರು ನೀಡಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಇನ್ಮುಂದೆ ವಾಹನಗಳ ಮೇಲೆ ಮಚ್ಚು ಹಿಡಿದ ಪೋಸ್ಟರ್ ಹಾಕಿದ್ರೆ ಬೀಳುತ್ತೆ ದಂಡ!
ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ (Sakaleshapura) ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರುಣಾಕರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದ್ದು ಪತ್ನಿ ಹಾಗೂ ಅತ್ತೆ ನಡುವೆ ಹೊಂದಾಣಿಕೆ ಇರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ತಾಯಿ ಬೇರೆ ಮನೆಯಲ್ಲಿ ವಾಸವಿದ್ದರು. ಅತ್ತೆ-ಸೊಸೆ ಜಗಳದಿಂದ ಕರುಣಾಕರ ಮನನೊಂದಿದ್ದ. ಇಂದು ಬೆಳಗ್ಗೆ ಮನೆಯಲ್ಲಿಯೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: Kalaburagi| ಒಂದೇ ರಾತ್ರಿ 6 ಮನೆ ಕಳ್ಳತನ- 4.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಹಾಸನ: ಕಾಡಾನೆ (Wild Elephant) ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಕ್ಯಾಪ್ಟನ್ ಅರ್ಜುನ (Arjuna) ಸಾವನ್ನಪ್ಪಿದ ಘಟನೆ ಹಾಸನ (Hassan) ಜಿಲ್ಲೆ, ಸಕಲೇಶಪುರ (Sakleshpura) ತಾಲೂಕಿನ ಯಸಳೂರು ಬಳಿ ನಡೆದಿದೆ.
ನಾಲ್ಕು ಸಾಕಾನೆಗಳೊಂದಿಗೆ ಇಂದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಕಾರ್ಯಾಚರಣೆ ಆರಂಭಿಸಿದ್ದರು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿದೆ. ಇದನ್ನೂ ಓದಿ: ಮಾಜಿ ಸಚಿವ ಸಿಪಿವೈ ಬಾವ ಮಹದೇವಯ್ಯ ಶವ ಪತ್ತೆ
ಸಾಕಾನೆ ಅರ್ಜುನ ಒಂಟಿಸಲಗದ ಜೊತೆ ಕಾಳಗಕ್ಕಿಳಿದಿದೆ. ಮದಗಜಗಳ ಕಾಳಗದಲ್ಲಿ ಅರ್ಜುನ ಸಾವನ್ನಪ್ಪಿದೆ. ಎರಡು ಆನೆಗಳು ಕಾಳಗಕ್ಕೆ ಬೀಳುತ್ತಿದ್ದಂತೆ ಮಾವುತರು ಅರ್ಜುನನ ಮೇಲಿನಿಂದ ಇಳಿದು ಓಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಳ್ಳತನಕ್ಕೆ ಬಂದು ಹಣ, ಬಂಗಾರ ದೋಚಿದ್ದಲ್ಲದೇ ಊಟ ಮಾಡಿ ಹೋದ ಕಳ್ಳರು!
ಕ್ಯಾಪ್ಟನ್ ಅರ್ಜುನ ದಸರಾ ವೇಳೆ ಎಂಟು ಬಾರಿ ಅಂಬಾರಿ ಹೊತ್ತಿದ್ದು, ಜನರ ಪ್ರೀತಿಗೆ ಪಾತ್ರರಾಗಿತ್ತು. ಇಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಬಲಿಯಾಗಿದೆ. ಕಾಡಾನೆ ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಭಾರೀ ದುರಂತ ನಡೆದಿದ್ದು, ಕಾಡಾನೆ ದಾಳಿಗೆ ಪಳಗಿದ ಆನೆ ಅರ್ಜುನ ಸಾವನ್ನಪ್ಪಿದೆ. ಇದನ್ನೂ ಓದಿ: ಕೂಟಿಯಾಲ ಹೊಳೆಯಲ್ಲಿ ತಾಯಿ, ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆ
ಸಕಲೇಶಪುರ ತಾಲೂಕಿನ ಯಸಳೂರು, ಬಾಳೆಕೆರೆ ಫಾರೆಸ್ಟ್‌ನಲ್ಲಿ ಘಟನೆ ನಡೆದಿದೆ. ಅರ್ಜುನ ಸೇರಿ ನಾಲ್ಕು ಪಳಗಿದ ಆನೆಗಳೊಂದಿಗೆ ಅರಣ್ಯ ಇಲಾಖೆ ಇಂದು ಕಾರ್ಯಾಚರಣೆ ಆರಂಭಿಸಿತ್ತು. ಪುಂಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡುವಾಗ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಸಾಕಾನೆಗಳು ಹಿಮ್ಮೆಟ್ಟಿದೆ. ಇದನ್ನೂ ಓದಿ: ಸಿಂಧನೂರಿನಲ್ಲಿ ಸರಣಿ ಕಳ್ಳತನ – 60 ಮೊಬೈಲ್, ಬೈಕ್, ಲ್ಯಾಪ್‍ಟಾಪ್ ದೋಚಿದ ಕಳ್ಳರು
ಒಂಟಿ ಸಲಗದ ಜೊತೆ ಅರ್ಜುನ ಕಾಳಗಕ್ಕಿಳಿದಿದ್ದು, ಮದಗಜಗಳ ಕಾಳಗದಲ್ಲಿ ಅರ್ಜುನ ವೀರಮರಣ ಹೊಂದಿದೆ. ಅರ್ಜುನ ಆನೆಯ ಹಠಾತ್ ಸಾವಿನಿಂದ ಪ್ರಾಣಿಪ್ರಿಯರಿಗೆ ಶಾಕ್ ಆಗಿದೆ. ಹೊಟ್ಟೆ ಭಾಗದಲ್ಲಿ ತಿವಿತಕ್ಕೆ ಒಳಗಾಗಿ ಕ್ಯಾಪ್ಟನ್ ಅರ್ಜುನ ಕೊನೆಯುಸಿರೆಳೆದಿದೆ. ಮೈಸೂರು ದಸರಾದಲ್ಲಿ ಅರ್ಜುನ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತು ಜನಮನಗೆದ್ದಿತ್ತು. 2012ರಿಂದ 2019 ರವರೆಗೆ ಅಂಬಾರಿ ಹೊತ್ತು ಅರ್ಜುನ ಸೈ ಎನಿಸಿಕೊಂಡಿತ್ತು. ಎಲ್ಲಾ ರೀತಿಯಲ್ಲೂ ಜನರ ಪ್ರೀತಿಗೆ ಪಾತ್ರನಾಗಿದ್ದ ಕ್ಯಾಪ್ಟನ್ ಅರ್ಜುನನ ಹಠಾತ್ ಸಾವು ಕಂಡು ಮಾವುತರು ಕಣ್ಣೀರಾಗಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲೇ ವೃದ್ಧನ ಬರ್ಬರ ಹತ್ಯೆ- ದೃಶ್ಯ ಮೊಬೈಲ್‍ನಲ್ಲಿ ಸೆರೆ
ಹಾಸನ: ಮಧ್ಯಾಹ್ನದ ಊಟ ಸೇವಿಸಿದ 35 ಮಂದಿ ಸೈನಿಕರು (Soldiers) ಅಸ್ವಸ್ಥಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ (Sakaleshpura) ತಾಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ.
ಕುಡುಗರಹಳ್ಳಿ ಬಳಿಯ ಕ್ಯಾಂಪ್‌ನಲ್ಲಿ ಘಟನೆ ನಡೆದಿದ್ದು, ಚಾಲನಾ ತರಬೇತಿಗೆಂದು ಬಂದಿದ್ದ ಸೈನಿಕರು ಕುಡುಗರಹಳ್ಳಿ ಬಳಿ ಕ್ಯಾಂಪ್ ಹಾಕಿದ್ದರು. ಬುಧವಾರ ಮಧ್ಯಾಹ್ನ ಕ್ಯಾಂಪ್‌ನಲ್ಲಿ ತಯಾರಾಗಿದ್ದ ಆಹಾರವನ್ನು ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಿಲಿಟರಿ ವಾಹನಗಳಲ್ಲಿ ಕರೆತಂದು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಅಣ್ಣನ ಜೊತೆಗೆ ಐಸ್‌ಕ್ರೀಮ್ ತೆಗೆದುಕೊಂಡು ಬರುವಾಗ ಅಪಘಾತ – ಬಾಲಕ ಸಾವು
ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ. ಅಸ್ವಸ್ಥಗೊಂಡಿರುವ ಸೈನಿಕರು ಚೇತರಿಸಿಕೊಳ್ಳುತ್ತಿದ್ದು, ಫುಡ್ ಪಾಯ್ಸನ್‌ನಿಂದ ಅಸ್ವಸ್ಥಗೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಹೆಂಡತಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪತಿ
ಹಾಸನ: ಗಣೇಶ ವಿಸರ್ಜನೆ ವೇಳೆ ಯುವಕರ ಗುಂಪೊಂದು ಪೊಲೀಸರನ್ನೇ ತಳ್ಳಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.
ಕೊರೊನಾ ನಿಯಮ ಪಾಲಿಸಿ ಗಣೇಶನ ಮೆರವಣಿಗೆ ಮಾಡಲು ಯುವಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಗಣಪತಿ ವಿಸರ್ಜನೆ ವೇಳೆಯಲ್ಲಿ ಡೋಲು ಬಡಿಯುತ್ತಾ, ಕುಣಿಯುತ್ತಿದ್ದವರನ್ನು ಸಬ್ ಇನ್ಸ್ ಪೆಕ್ಟರ್ ತಡೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ಯುವಕರು ಡೋಲು ಬಡಿಯುವುದನ್ನು ನಿಲ್ಲಿಸದಂತೆ ಕುಮ್ಮಕ್ಕು ನೀಡಿದ್ದಾರೆ. ಒಂದು ಕಡೆ ಪಿಎಸ್‍ಐ ಡೋಲು ಬಡಿಯುತ್ತಾ ಕುಣಿಯುವುದನ್ನು ನಿಲ್ಲಿಸಿ ಎಂದು ಮನವಿ ಮಾಡುತ್ತಿದ್ದರೆ, ಮತ್ತೊಂದೆಡೆ ಡೋಲು ಬಡಿಯುವುದನ್ನು ನಿಲ್ಲಿಸದಂತೆ ಯುವಕರು ಆಗ್ರಹ ಮಾಡಿದ್ದಾರೆ. ಇದನ್ನೂ ಓದಿ: ಕಿಡಿಗೇಡಿಗಳಿಂದ ಗಣಪತಿ ಮೂರ್ತಿ ಧ್ವಂಸ – ಗ್ರಾಮಸ್ಥರಲ್ಲಿ ಆತಂಕ
ಈ ವೇಳೆಯಲ್ಲಿ ಪಿಎಸ್‍ಐ ಹಾಗೂ ಯುವಕರ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು, ಯುವಕರು ಪೊಲೀಸರನ್ನೇ ತಳ್ಳಾಡಿದ್ದಾರೆ. ಪೊಲೀಸರ ಅಸಹಾಯಕತೆ ಸ್ಥಳೀಯರೊಬ್ಬರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಈ ವಿಚಾರವಾಗಿ ಈವರೆಗೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಬೈಕ್ ಆಕ್ಸಿಡೆಂಟ್ – ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ
ಹಾಸನ: ಇದೇ ತಿಂಗಳ 20 ರಿಂದ ಮಂಗಳೂರು-ಬೆಂಗಳೂರು ಮಾರ್ಗದ ಶಿರಾಡಿ ಘಾಟ್ ಬಂದ್ ಆಗಲಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲಾಗುತ್ತಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.
ಸಕಲೇಶಪುರ ಪ್ಲಾಂಟರ್ಸ್ ಕ್ಲಬ್ ನಲ್ಲಿ ಶಿರಾಡಿ ಘಾಟ್ ರಸ್ತೆಯ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡುವ ಮತ್ತು ಸಾಧಕ ಭಾದಕಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಸಚಿವರು, ಅಧಿಕವಾದ ಮಳೆಯಿಂದ ನಿರಂತರವಾಗಿ ಹಾಳಾಗುತ್ತಿದ್ದ ಶಿರಾಡಿ ಘಾಟ್ ರಸ್ತೆ ಭಾಗವನ್ನು ಕಾಂಕ್ರೀಟೀಕರಣ ಕಾಮಗಾರಿಯ ಮೂಲಕ ಸರಿಪಡಿಸಿ ಈ ಭಾಗದ ರಸ್ತೆ ಬಳಕೆದಾರರು ಅನುಭವಿಸುತ್ತಿದ್ದ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.
ಈಗಾಗಲೇ ಮೊದಲ ಹಂತದ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. 13 ಕಿಲೋಮೀಟರ್ ಎರಡನೇ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿದ್ದು ಮೇ ಅಂತ್ಯದ ವೇಳೆಗೆ ಪೂರ್ಣಗೊಳಿಸಲಾಗುವುದು. ಶಿರಾಡಿ ಘಾಟ್ ರಸ್ತೆ ಕಾಮಗಾರಿ ಹಿನ್ನೆಲೆ, ವಾಹನಗಳು ಸಂಚರಿಸುವ ಮಾರ್ಗ ಬದಲಾವಣೆ ಮಾಡಲಾಗಿದೆ. 6 ಪರ್ಯಾಯ ರಸ್ತೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ವಾಹನಗಳನ್ನು ಎ ಮತ್ತು ಬಿ ಪಟ್ಟಿಗೆ ಸೇರುವ ವಾಹನಗಳೆಂದು ವಿಭಜನೆ ಮಾಡಿ ಎ ಪಟ್ಟಿಗೆ ಸೇರುವ ಸಾಮಾನ್ಯ ಬಸ್ಸುಗಳು, ಕಾರ್, ಜೀಪ್ ಎರಡು ಚಕ್ರದ ವಾಹನಗಳು ಇವುಗಳನ್ನು ಮಂಗಳೂರು-ಬಿಸಿ ರೋಡ್-ಉಜಿರೆ-ಚಾರ್ಮಾಡಿ ಘಾಟ್-ಮೂಡಿಗೆರೆ- ಬೇಲೂರು ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.
ಬಿ ಪಟ್ಟಿಗೆ ಸೇರಿಸಿರುವ ಭಾರಿ ವಾಹನಗಳನ್ನು, ಉಡುಪಿ-ಕುಂದಾಪುರ-ಮುರುಡೇಶ್ವರ-ಹೊನ್ನಾವರ-ಸಾಗರ-ಶಿವಮೊಗ್ಗ-ನೆಲಮಂಗಲ-ಬೆಂಗಳೂರು ಈ ಮಾರ್ಗವಾಗಿ ಸಂಚರಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.