Tag: Sakkat Studio

  • ‘ಮರ್ಯಾದೆ ಪ್ರಶ್ನೆ ಗುರು’ ಕಪ್ ಗೆಲ್ಲಿ ಅಂತಿದೆ ಸ್ಯಾಂಡಲ್ ವುಡ್ ಸೆಲೆಬ್ರಿಟೀಸ್

    ‘ಮರ್ಯಾದೆ ಪ್ರಶ್ನೆ ಗುರು’ ಕಪ್ ಗೆಲ್ಲಿ ಅಂತಿದೆ ಸ್ಯಾಂಡಲ್ ವುಡ್ ಸೆಲೆಬ್ರಿಟೀಸ್

    ಆರ್ಸಿಬಿ (RCB) ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ.  ಆರ್ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ ಕನಸ್ಸನ್ನು ನನಸು ಮಾಡಿದ್ದಾರೆ. WPL ಮುಗಿಯುತ್ತಿದ್ದಂತೆ ಈಗ ಐಪಿಎಲ್ ಜ್ವರ ಏರುತ್ತಿದೆ. ಹೆಣ್ಮಕ್ಳು ಸ್ಟ್ರಾಂಗ್ ಗುರು ಅಂತಾ ನಮ್ಮ ಆರ್ ಸಿಬಿ ಮಹಿಳೆಯರು ತೋರಿಸಿಕೊಟ್ಟಿದ್ದಾರೆ. ಈಗ ಕಿಂಗ್ ಕೊಹ್ಲಿ ಬಳಗ ಕಪ್ ಹೊಡೆಯುತ್ತಿಕ್ಕೆ ನಮ್ಮ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಚಿಯರ್ಸ್ ಹೇಳಿದ್ದಾರೆ.

    ಆರ್ ಸಿಬಿ ತಂಡ ಪ್ರೋತ್ಸಾಹ ಫ್ಲಸ್ ಉತ್ಸಹ ಹೆಚ್ಚಿಸುವ ಹಾಡೊಂದು ಬಿಡುಗಡೆಯಾಗಿದೆ. ಸಕ್ಕತ್ ಸ್ಟುಡಿಯೋನ ಸ್ಪೆಷಲ್ ಕೊಡುಗೆಯಾಗಿರುವ ಆರ್ ಸಿಬಿ ಕಪ್ ಗೆಲ್ಬೇಕು ಮರ್ಯಾದೆ ಪ್ರಶ್ನೆ ಎಂಬ ಹಾಡಿಗೆ ಕೀರ್ತಿ ನಾರಾಯಣ್ ಪದ ಪೊಣಿಸಿದ್ದು, ಐಶ್ವರ್ಯ ರಂಗರಾಜನ್ ಕಂಠ ಕುಣಿಸಿದ್ದಾರೆ. ಯುವ ತಾರೆಗಳಾದ ಶೈನ್ ಶೆಟ್ಟಿ, ಸಾನ್ಯಾ ಅಯ್ಯರ್, ಕಿಶನ್ ಬೆಳಗಲಿ, ದಿವ್ಯಾ ಉರುಡುಗ ಮತ್ತು ರಘು ಗೌಡ ಮತ್ತು ಅನೇಕರು ಕಲ್ಯಾಣ್ ಟ್ಯೂನ್ ಗೆ ಬೊಂಬಾಟ್ ಆಗಿ ಹೆಜ್ಜೆ ಹಾಕಿದ್ದಾರೆ.

    ಆರ್ ಸಿಬಿ ಪುರುಷ ತಂಡಕ್ಕೆ ಹೊಸ ಹುರುಪು ತುಂಬಲಿರುವ ಈ ಸಿಂಗಿಂಗ್ ಎಲ್ಲೆಡೆ ಸೆನ್ಸೇಷನ್ ಸೃಷ್ಟಿಸುತ್ತಿದೆ. ಈ ಹಾಡಿಗೆ ಹೆಜ್ಜೆ ಹಾಕಿರುವ ಶೈನ್ ಶೆಟ್ಟಿ ಮಾತನಾಡಿ, “ಕ್ರಿಕೆಟ್ ಕೇವಲ ಒಂದು ಆಟವಲ್ಲ; ಇದು ಲಕ್ಷಾಂತರ ಅಭಿಮಾನಿಗಳನ್ನು ಒಗ್ಗೂಡಿಸುವ ಭಾವನೆಯಾಗಿದೆ. ನಮ್ಮ ಮಹಿಳಾ ತಂಡದ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾದ ನಂತರ, ಪುರುಷರ ತಂಡಕ್ಕೆ ನಮ್ಮ ಹೃತ್ಪೂರ್ವಕ ಬೆಂಬಲವನ್ನು ನೀಡುವ ಸಮಯ ಬಂದಿದೆ. ಈ ಹಾಡಿನ ಮೂಲಕ, ನಾವು ಅವರ ಸಾಮರ್ಥ್ಯಗಳ ಮೇಲಿನ ನಮ್ಮ ನಂಬಿಕೆಯನ್ನು ತಿಳಿಸಲು ಬಯಸುತ್ತೇವೆ ಮತ್ತು ಮೈದಾನದಲ್ಲಿ ನಮ್ಮನ್ನು ಹೆಮ್ಮೆಪಡುವಂತೆ ಮಾಡಲು ಅವರನ್ನು ಒತ್ತಾಯಿಸುತ್ತೇವೆ ” ಎಂದಿದ್ದಾರೆ.

    ಸಾನ್ಯಾ ಅಯ್ಯರ್, “ಎಲ್ಲಾ ವರ್ಗದ ಜನರನ್ನು ಪ್ರೇರೇಪಿಸುವ ಮತ್ತು ಒಗ್ಗೂಡಿಸುವ ಶಕ್ತಿ ಕ್ರೀಡೆಗೆ ಇದೆ. ಕಲಾವಿದರಾಗಿ, ನಮ್ಮ ತಂಡಗಳಿಗೆ ಸಕಾರಾತ್ಮಕತೆಯನ್ನು ಹರಡಲು ಮತ್ತು ಹುರಿದುಂಬಿಸಲು ನಮ್ಮ ವೇದಿಕೆಗಳನ್ನು ಬಳಸುವುದು ನಮ್ಮ ಜವಾಬ್ದಾರಿಯಾಗಿದೆ. ಬೆಂಗಳೂರು ಪುರುಷರ ಕ್ರಿಕೆಟ್ ತಂಡವು ಗೆಲ್ಲುವುದು ಎಂಬ ನಿರೀಕ್ಷೆಯಿದೆ ನಮಗೆ ವಿಶ್ವಾಸವಿದೆ “ಎಂದು ಹೇಳಿದರು.

    ಸೋಷಿಯಲ್ ಮೀಡಿಯಾ ಸ್ಟಾರ್  ರಘು ಗೌಡ ತನ್ನ ಉತ್ಸಾಹವನ್ನು ವ್ಯಕ್ತಪಡಿಸಿದರು. “ಕ್ರೀಡೆಗಳು ಸಮುದಾಯಗಳನ್ನು ಹೇಗೆ ಒಗ್ಗೂಡಿಸುತ್ತವೆ ಎಂಬುದನ್ನು ನೋಡುವುದು ನಂಬಲಾಗದ ಸಂಗತಿ. ಈ ಹಾಡು ಸ್ಯಾಂಡಲ್ ವುಡ್ ಮತ್ತು ಕ್ರಿಕೆಟ್ ನಡುವಿನ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ ಮತ್ತು ಇದು ಬೆಂಗಳೂರು ತಂಡದ ಹಿಂದೆ ಇನ್ನೂ ಹೆಚ್ಚಿನ ಉತ್ಸಾಹದಿಂದ ನಿಲ್ಲಲು ಅಭಿಮಾನಿಗಳನ್ನು ಪ್ರೇರೇಪಿಸುತ್ತದೆ ಎಂದು ನಾನು ನಂಬುತ್ತೇನೆ “ಎಂದು ಅವರು ಹೇಳಿದರು.

     

    ನೃತ್ಯಕ್ಕೆ ಹೆಸರುವಾಸಿಯಾದ ಕಿಶನ್ ಬೆಲಗಲಿ “ನೃತ್ಯ ಸಂಯೋಜಕ ಸುಚಿನ್ ನ ಹುಕ್ ಸ್ಟೆಪ್ ನನಗೆ ತುಂಬಾ ಇಷ್ಟವಾಯಿತು.”ಎಂದು ಅವರು ಹೇಳಿದರು, “ಮರ್ಯಾದೆ ಪಶ್ನೆ” ಚಿತ್ರವನ್ನು ನಿರ್ಮಿಸಿರುವ ಸಕ್ಕತ್ ಸ್ಟುಡಿಯೋ (Sakkat Studio) ಈ ಹಾಡನ್ನು ನಿರ್ಮಿಸಿದ್ದು, ಈ ಹಾಡಿಗೂ ಸಿನಿಮಾಗೂ ಸಂಬಂಧವಿಲ್ಲ. ಆದರೆ  ಸಿನಿಮಾ ಶೀರ್ಷಿಕೆ ಇದರಲ್ಲಿ ಬಳಕೆಯಾಗಿದೆ, ಸಿನಿಮಾ ಪ್ರಚಾರಕ್ಕಿಂತ ನಮ್ಮ ಬೆಂಗಳೂರು ತಂಡ ಗೆಲ್ಲಲ್ಲಿ ಎಂಬುದು ಮರ್ಯಾದೆ ಪ್ರಶ್ನೆ ಚಿತ್ರತಂಡ ಆಶಯ. ಸಖತ್ ಕ್ರಿಯೇಟಿವಿಟಿಯಾಗಿ ಪ್ರಚಾರದ ಪಡಸಾಲೆಗೆ ಇಳಿದಿರುವ ಆರ್ ಜೆ ಪ್ರದೀಪ್ ಅವರ ತಂಡಕ್ಕೆ ರಾಯಲ್ ಸೆಲ್ಯೂಟ್.

  • ಸ್ಯಾಂಡಲ್ ವುಡ್ ಲೋಕಕ್ಕೆ ಸಕ್ಕತ್ ಸ್ಟುಡಿಯೋ ಪ್ರವೇಶ : ಹೊಸ ಚಿತ್ರಕ್ಕೆ ರವಿಚಂದ್ರನ್ ಕ್ಲ್ಯಾಪ್

    ಸ್ಯಾಂಡಲ್ ವುಡ್ ಲೋಕಕ್ಕೆ ಸಕ್ಕತ್ ಸ್ಟುಡಿಯೋ ಪ್ರವೇಶ : ಹೊಸ ಚಿತ್ರಕ್ಕೆ ರವಿಚಂದ್ರನ್ ಕ್ಲ್ಯಾಪ್

    ನ್ನಡ ಡಿಜಿಟಲ್ ಕ್ಷೇತ್ರದಲ್ಲಿ ಸಕ್ಕತ್ ಸ್ಟುಡಿಯೋ (Sakkat Studio) ಟ್ರೆಂಡ್ಸೆಟ್ಟರ್ ಆಗಿರುವುದು ಸುಳ್ಳಲ್ಲಾ. ಸುನೀಲ್ ರಾವ್, ಅನುಪಮಾ ಗೌಡ, ಸಿಂಧು ಲೋಕನಾಥ್ ಮುಂತಾದವರು ನಟಿಸಿರುವ ‘ಲೂಸ್ ಕನೆಕ್ಷನ್’ ನಮ್ಮ ಕನ್ನಡದ ಮೊದಲ ವೆಬ್ ಸರಣಿಯ ನಿರ್ಮಿಸಿದ್ದು ಇದೇ ಸಂಸ್ಥೆ. ಸ್ಟಾರ್ ದಂಪತಿಗಳಾದ ಆರ್. ಜೆ. ಪ್ರದೀಪ್ (Pradeep) ಮತ್ತು ಶ್ವೇತಾ ಆರ್ ಪ್ರಸಾದ್ (Shweta R Prasad) ಅವರ ನೇತೃತ್ವದಲ್ಲಿ ಶುರುವಾದ ಸಕ್ಕತ್ ಸ್ಟುಡಿಯೋ ವೈವಿಧ್ಯಮಯ ವೆಬ್ ಸರಣಿಗಳೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುತ್ತಲೇ ಇತ್ತು. ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ಅವರ ಸಹಯೋಗದೊಂದಿಗೆ ಸಕ್ಕತ್ ಸ್ಟುಡಿಯೋ, ನಾಗಭೂಷಣ ಮತ್ತು ಸಂಜನಾ ಆನಂದ್ ಅಭಿನಯದ ‘ಹನಿಮೂನ್’, ಪೂರ್ಣ ಮೈಸೂರು ಮತ್ತು ಸಿರಿ ರವಿಕುಮಾರ್ ಅಭಿನಯದ ‘ಬೈ ಮಿಸ್ಟೇಕ್’ ಮತ್ತು ಅರವಿಂದ್ ಅಯ್ಯರ್ ಮತ್ತು ದಿಶಾ ಮದನ್ ಅಭಿನಯದ “ಹೇಟ್ ಯು ರೋಮಿಯೋ” ಹೀಗೆ ಉನ್ನತ ಮಟ್ಟದ ಸರಣಿಗಳು ನಿರ್ಮಾಣವಾಗಿ ವೂಟ್ ( Voot), ಆಹಾ (Aha ), ಮುಂತಾದ ಒಟಿಟಿ ಪ್ಲಾಟ್‌ಫಾರಂ ಗಳಲ್ಲಿ ನೋಡುಗರ ಗಮನ ಸೆಳೆದಿವೆ.

    ಡಿಜಿಟಲ್ ಕ್ಷೇತ್ರದಲ್ಲಿ ಒಂದು ಸ್ಥಾನವನ್ನು ಯಶಸ್ವಿಯಾಗಿಸಿ, ಸಕ್ಕತ್ ಸ್ಟುಡಿಯೋ ಈಗ ಸಿನಿಮಾ ಜಗತ್ತಿಗೆ ಕಾಲಿಡುವ ಮೂಲಕ ಹೊಸ ಅಧ್ಯಾಯವನ್ನು ಪ್ರಾರಂಭಿಸಿದೆ. ತನ್ನ ಮೊಟ್ಟಮೊದಲ ಚಿತ್ರದ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತ ತಲುಪಿದೆ. ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಅವರು ಚಿತ್ರದ ಮಹೂರ್ತಕ್ಕೆ ಆಗಮಿಸಿ ಕ್ಲ್ಯಾಪ್ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ್ದರು.

    ದಕ್ಷಿಣ ಭಾರತದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದ ‘ದಿ ಬೆಸ್ಟ್ ಆಕ್ಟರ್’ ಮೈಕ್ರೊ ಮೂವಿ ನಿರ್ದೇಶನ ಸೇರಿದಂತೆ, ದಿವಂಗತ ಸಂಚಾರಿ ವಿಜಯ್ ನಟಿಸಿರುವ ‘ಪುಕ್ಸಟ್ಟೆ ಲೈಫ್ “ಚಿತ್ರವನ್ನು ನಿರ್ಮಿಸಿದ್ದ ನಾಗರಾಜ್ ಸೋಮಯಾಜಿ ಇದೀಗ ಸಕ್ಕತ್ ಸ್ಟುಡಿಯೋದ ಮೊದಲ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

    ಮುಂಬರುವ ವಾರದಲ್ಲಿ ವಿಶಿಷ್ಟ ಶೀರ್ಷಿಕೆ, ಪರಿಕಲ್ಪನೆ ಮತ್ತು ತಾರಾಗಣವನ್ನು ಅನಾವರಣಗೊಳಿಸಲು ಯೋಜಿಸಿದೆ. ಇದು ಒಂದು ಅದ್ಭುತವಾದ ಸಿನಿಮೀಯ ಅನುಭವದ ಭರವಸೆಯನ್ನು ಈ ತಂಡ ನೀಡುತ್ತದೆ. ಹೆಚ್ಚು ಹೆಚ್ಚು ಕನ್ನಡ ಸಿನಿಮಾಗಳು ನಿರ್ಮಾಣವಾಗಬೇಕು ಹಾಗು ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿರುವ ಪ್ರೇಕ್ಷಕ ವರ್ಗ, ಝೀ5ನ ಒಟಿಟಿ ಕ್ಷೇತ್ರದಲ್ಲಿ ಪ್ರದೀಪ್ ಅವರ ಹಿಂದಿನ ನಾಯಕತ್ವ ಮತ್ತು ಛಾಯಾಗ್ರಹಣ ಮತ್ತು ಕಥೆ ಹೇಳುವಿಕೆಯಲ್ಲಿ ನಾಗರಾಜ್ ಅವರ ಪ್ರಭಾವ, ಸೃಜನಶೀಲ ಮನಸ್ಸುಗಳನ್ನು ಒಳಗೊಂಡಿರುವ ತಂಡವು ನಿಸ್ಸಂದೇಹವಾಗಿ ‘ಸಕ್ಕತ್’ ಕನ್ನಡ ಚಿತ್ರವನ್ನು  ಪ್ರೇಕ್ಷಕನಿಗೆ ನೀಡುತ್ತಾರೆಂಬ ಭರವಸೆ ಮೂಡಿಸಿದೆ.