Tag: Salaar

  • ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

    ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

    ಟಾಲಿವುಡ್‌ನಿಂದ ಧಮಾಕೇದಾರ್ ಸುದ್ದಿಯೊಂದು ಬಂದಿದೆ. ಅದುವೇ ಅಲ್ಲು ಅರ್ಜುನ್ (Allu Arjun) ಹಾಗೂ ಪ್ರಶಾಂತ್ ನೀಲ್ (Prashanth Neel) ಸೂಪರ್ ಕಾಂಬೋ ಸುದ್ದಿ.

    ಹೌದು. ಅಲ್ಲು ಅರ್ಜುನ್ ಮುಂದಿನ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಾರೆ ಎನ್ನಲಾದ ಸುದ್ದಿ ವೈರಲ್ ಆಗಿದೆ. ಪ್ರಸ್ತುತ ಪ್ರಶಾಂತ್ ನೀಲ್ ಜೂ.ಎನ್‌ಟಿಆರ್ (Jr ntr) ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಅಲ್ಲು ಅರ್ಜುನ್ ಅಟ್ಲಿ ಚಿತ್ರಕ್ಕೆ ಡೇಟ್ಸ್ ಕೊಟ್ಟಿದ್ದಾರೆ. ಇಬ್ಬರ ವಿಭಿನ್ನ ಚಿತ್ರಗಳು ಮುಗಿದ ಬಳಿಕ ಪ್ರಶಾಂತ್‌ ನೀಲ್‌ ಜೊತೆಗೆ ಕೈಜೋಡಿಸಲಿದ್ದಾರೆ ಎನ್ನಲಾಗುತ್ತಿದ್ದು ಈ ಚಿತ್ರಕ್ಕೆ `ರಾವಣಂ’ ಎಂಬ ಶೀರ್ಷಿಕೆ ಇಡಲಾಗುತ್ತೆ ಅನ್ನೋದು ಇಂಟ್ರೆಸ್ಟಿಂಗ್ ವಿಚಾರ. ಇದನ್ನೂ ಓದಿ: ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

    ಕೆಜಿಎಫ್ ಚಿತ್ರದ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪುಷ್ಪ-2 (Pushpa 2) ಮೂಲಕ ಇಂಟರ್‌ನ್ಯಾಶನಲ್ ಸ್ಟಾರ್ ಆಗಿರುವ ಅಲ್ಲು ಅರ್ಜುನ್ ಬಿಗ್ ಬಜೆಟ್ ಸಿನಿಮಾ ಮೇಕರ್ಸ್‌ ಎಂದು ಹೆಸರು ಮಾಡಿದವರು. ಇಬ್ಬರು ಒಂದೇ ಚಿತ್ರಕ್ಕಾಗಿ ಕೈಜೋಡಿಸದ್ರೆ ಆ ಸಿನಿಮಾ ಇನ್ನಿಲ್ಲದ ನಿರೀಕ್ಷೆ ಹುಟ್ಟಿಸೋದ್ರಲ್ಲಿ ಅನುಮಾನವೇ ಇಲ್ಲ. ಅಂದಹಾಗೆ ಈ ಸಿನಿಮಾವನ್ನ ಬಿಗ್ ಬಜೆಟ್‌ನಲ್ಲಿ ಟಾಲಿವುಡ್ ಖ್ಯಾತ ನಿರ್ಮಾಪಕ ದಿಲ್‌ರಾಜು ನಿರ್ಮಿಸಲಿದ್ದಾರೆ. ಸಿನಿಮಾ ಶುರುವಾಗೋದು ಇನ್ನೂ ಎರಡು ವರ್ಷದ ಬಳಿಕ ಎನ್ನಲಾಗುತ್ತಿದೆ. ಇದನ್ನೂ ಓದಿ: ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

    ಸಿನಿಮಾ ಆರಂಭಕ್ಕೂ ಮುನ್ನವೇ ಅಲ್ಲು ನೀಲ್ ಕಾಂಬಿನೇಶನ್ ಚಿತ್ರದ ಶೀರ್ಷಿಕೆ ರಿವೀಲ್ ಆಗಿರುವುದು ವಿಶೇಷ. ಸಾಮಾನ್ಯವಾಗಿ ಬಿಗ್‌ಸ್ಟಾರ್‌ಗಳ ಚಿತ್ರಕ್ಕೆ ಆರಂಭದಲ್ಲೇ ಟೈಟಲ್ ರಿವೀಲ್ ಮಾಡೋದಿಲ್ಲ. ಕಾನ್ಸೆಪ್ಟ್ ಪ್ರಕಾರ ಮಾಡಲಾಗುತ್ತೆ. ಹೀಗಾಗಿ ಶೀರ್ಷಿಕೆ ವಿಚಾರಕ್ಕೆ ಗೊಂದಲ ಇದೆ. ಹಿಂದೆ ಸಂದರ್ಶನವೊಂದರಲ್ಲಿ ಪ್ರಶಾಂತ್ ನೀಲ್ ತಾವು ಚಿತ್ರ ಮಾಡಬೇಕೆನ್ನುವ ಹೀರೋ ಜೊತೆ ಲವ್ ಆದ್ರೆ ಮಾತ್ರ ಅವರ ಜೊತೆ ಸಿನಿಮಾ ಮಾಡ್ತೀನಿ ಎಂದಿದ್ರು. ಇದನ್ನೂ ಓದಿ: ಸುದೀಪ್ `ಬಿಲ್ಲ ರಂಗ ಬಾಷ’ ಸೆಟ್ ರಿವೀಲ್!

    ಹೀಗಾಗಿ ನಿರ್ದೇಶಕ ನೀಲ್ ಆಯ್ಕೆ ಮಾಡಿಕೊಳ್ಳುವ ಹೀರೋ ಇಂಟ್ರೆಸ್ಟಿಂಗ್ ಆಗಿರ್ತಾರೆ. ಇದೀಗ ಅಲ್ಲು ಜೊತೆ ಪ್ರಶಾಂತ್ ನೀಲ್ ಕೈ ಜೋಡಿಸಿರುವುದು ಆರಂಭಿಕ ಮಾತುಕತೆಯಲ್ಲಿ ರಿವೀಲ್ ಆಗಿದೆ. ಇದನ್ನೂ ಓದಿ: ನನ್ನ ಹಂಸಲೇಖ ನಡುವೆ ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

  • ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್‌

    ಕೆಜಿಎಫ್, ಕೆಜಿಎಫ್‌ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್‌ (Hombale Fims) ಇದೀಗ ಸಲಾರ್‌ ಬಳಿಕ ಮತ್ತೆ ಪ್ರಭಾಸ್ ಜೊತೆ ಕೈ ಜೋಡಿಸಿದೆ. ಪ್ರಭಾಸ್ (Prabhas) ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಮಾಡೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ.

    ಈ ಹಿಂದೆ ಪ್ರಭಾಸ್‌ ನಟನೆಯ ಸಲಾರ್‌ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇದೀಗ ಮತ್ತೆ ನಟನ ಜೊತೆ 3 ಚಿತ್ರಗಳನ್ನು ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ ಅಂದರೆ 2026, 2027, ಮತ್ತು 2028ಗೆ ಸಾಲು ಸಾಲು 3 ಸಿನಿಮಾಗಳು ರಿಲೀಸ್ ಆಗಲಿದೆ ಎಂದು ಹೊಂಬಾಳೆ ಸಂಸ್ಥೆ ಘೋಷಿಸಿದೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

     

    View this post on Instagram

     

    A post shared by Hombale Films (@hombalefilms)

    ರೆಬಲ್ ಸ್ಟಾರ್ ಜೊತೆಗೆ ಕೈಜೋಡಿಸುತ್ತಿರುವುದು ನಮಗೆ ಹೆಮ್ಮೆಯ ವಿಷಯ. ಭಾರತೀಯ ಸಿನಿಮಾದ ಸಾರವನ್ನು ಸಂಭ್ರಮಿಸುವ ಹಾಗೂ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಲು ಈ ಕೈಜೋಡಿಸುವಿಕೆ ಅತ್ಯಂತ ಮಹತ್ವದ್ದಾಗಲಿದೆ. ಸಿನಿಮಾ ಪ್ರೇಮಿಗಳಿಗೆ ಮರೆಯಲಾಗದ ಸಿನಿಮಾ ಅನುಭವವನ್ನು ಕೊಡುವುದು ನಮ್ಮ ಘೋಷಣೆಯಾಗಿದೆ. ವೇದಿಕೆ ಸಜ್ಜಾಗಿದೆ, ಮುಂದಿನ ಹಾದಿ ಮಿತಿಯಿಲ್ಲದ್ದಾಗಿದೆ. ‘ಸಲಾರ್ 2’ (Salaar 2) ಸಿನಿಮಾದ ಜೊತೆಗೆ ನಮ್ಮ ಈ ಪಯಣ ಪ್ರಾರಂಭ ಆಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಗುಡ್ ನ್ಯೂಸ್ ಹಂಚಿಕೊಂಡಿದೆ.

  • ರಣ್‌ವೀರ್ ಸಿಂಗ್, ಅಕ್ಷಯ್ ಕುಮಾರ್ ಮನೆ ಪಕ್ಕ ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿಸಿದ ಪೃಥ್ವಿರಾಜ್

    ರಣ್‌ವೀರ್ ಸಿಂಗ್, ಅಕ್ಷಯ್ ಕುಮಾರ್ ಮನೆ ಪಕ್ಕ ಐಷಾರಾಮಿ ಅಪಾರ್ಟ್‌ಮೆಂಟ್‌ ಖರೀದಿಸಿದ ಪೃಥ್ವಿರಾಜ್

    ಮಾಲಿವುಡ್ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು 30.6 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯೊಂದನ್ನು ಖರೀದಿಸಿದ್ದಾರೆ. ರಣ್‌ವೀರ್ ಸಿಂಗ್ (Ranveer Singh), ಅಕ್ಷಯ್ ಕುಮಾರ್ ಮನೆ ಪಕ್ಕದಲ್ಲೇ ಐಷಾರಾಮಿ ಅಪಾರ್ಟ್‌ಮೆಂಟ್‌ ಅನ್ನು ‘ಸಲಾರ್’ ನಟ ಪೃಥ್ವಿರಾಜ್ ಖರೀದಿಸಿದ್ದಾರೆ.

    ಪೃಥ್ವಿರಾಜ್ ಸುಕುಮಾರನ್ ಈಗ ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಮನೆ ಪಕ್ಕ ಮನೆಯನ್ನು ಖರೀದಿಸಿದ್ದಾರೆ. ಮುಂಬೈನ ಬಾಂದ್ರಾದ ಪಾಲಿ ಹಿಲ್‌ನಲ್ಲಿ ಐಷಾರಾಮಿ ಡುಪ್ಲೆಕ್ಸ್ ಅಪಾರ್ಟ್‌ಮೆಂಟ್‌ ಖರೀದಿ ಮಾಡಿರುವ ಪೃಥ್ವಿರಾಜ್ ಸುಕುಮಾರನ್ ಈ ಮನೆಗೆ ಬರೋಬ್ಬರಿ 30.6 ಕೋಟಿ ರೂ. ಹಣವನ್ನು ನೀಡಿದ್ದಾರೆ.

    ಅಂದಾಜು 2,970 ಚದರ ಅಡಿ ವಿಸ್ತೀರ್ಣದಲ್ಲಿ ಈ ಅಪಾರ್ಟ್‌ಮೆಂಟ್‌ ಹೊಂದಿದೆ. 40 ಚದರ ಮೀಟರ ವಿಸ್ತೀರ್ಣದಲ್ಲಿ ನಾಲ್ಕು ಕಾರು ಪಾರ್ಕಿಂಗ್ ಸ್ಥಳಗಳನ್ನು ನಿರ್ಮಾಣ ಮಾಡಲಾಗಿದೆ. ಸ್ಟ್ಯಾಂಪ್ ಡ್ಯೂಟಿಗೆ 1.84 ಕೋಟಿ ಖರ್ಚಾಗಿದೆ. ಸೆ.12ರಂದು ಈ ಮನೆಯನ್ನು ಅವರು ನೊಂದಣಿ ಮಾಡಿಸಿದ್ದಾರೆ. ಇದನ್ನೂ ಓದಿ:‘ಯುಐ’ ಸಿನಿಮಾ ಸೈಕಾಲಜಿಕಲ್ ಕಲ್ಕಿ ಎಂದು ಬಣ್ಣಿಸಿದ ಉಪೇಂದ್ರ

    ಅವರು ಮನೆ ಖರೀದಿಸಿರುವ ಏರಿಯಾದಲ್ಲಿ ಅಕ್ಷಯ್ ಕುಮಾರ್, ರಣ್‌ವೀರ್ ಸಿಂಗ್ ದಂಪತಿ, ತೃಪ್ತಿ ದಿಮ್ರಿ, ಅಥಿಯಾ ಶೆಟ್ಟಿ ಸೇರಿದಂತೆ ಅನೇಕರು ವಾಸ ಮಾಡುತ್ತಿದ್ದಾರೆ.

  • ‘ಕೆಜಿಎಫ್ 2’ ನಿರ್ದೇಶಕನನ್ನು ಹಾಡಿ ಹೊಗಳಿದ ಪ್ರಭಾಸ್

    ‘ಕೆಜಿಎಫ್ 2’ ನಿರ್ದೇಶಕನನ್ನು ಹಾಡಿ ಹೊಗಳಿದ ಪ್ರಭಾಸ್

    ತೆಲುಗು ನಟ ಪ್ರಭಾಸ್ (Prabhas) ಇದೀಗ ‘ಸಲಾರ್’ ನಿರ್ದೇಶಕ ಪ್ರಶಾಂತ್ ನೀಲ್‌ರನ್ನು ಹಾಡಿ ಹೊಗಳಿದ್ದಾರೆ. ನೀವು ಹೀರೋನೇ ಎಂದು ನಿರ್ದೇಶಕ ಪ್ರಶಾಂತ್ ನೀಲ್‌ ಸ್ಟೈಲೀಶ್‌ ಲುಕ್‌ಗೆ (Prashanth Neel) ಪ್ರಭಾಸ್ ಕೊಂಡಾಡಿದ್ದಾರೆ. ಇದನ್ನೂ ಓದಿ:‘ರಕ್ಕಸಪುರದೋಳ್’ ರಾಜ್ ಬಿ ಶೆಟ್ಟಿ ಆರ್ಭಟ

    ಹೈದರಾಬಾದ್‌ನಲ್ಲಿ ಪ್ರಭಾಸ್ ನಟನೆಯ ‘ಫೌಜಿ’ ಸಿನಿಮಾದ ಮುಹೂರ್ತ ನಡೆದಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಪ್ರಶಾಂತ್ ನೀಲ್‌ ಕೂಡ ಭಾಗಿಯಾಗಿದ್ದರು. ಈ ವೇಳೆ, ಬ್ಲ್ಯಾಕ್ ಔಟ್ ಫಿಟ್‌ನಲ್ಲಿ ಸ್ಟೈಲೀಶ್‌ ಆಗಿ ಎಂಟ್ರಿ ಕೊಟ್ಟ ನಿರ್ದೇಶಕನನ್ನು ನೋಡಿ ಆ ಕ್ಷಣವೇ ‘ಲುಕ್ ಲೈಕ್ ಹೀರೋ’ ಅಂತ ಪ್ರಭಾಸ್ ಮೆಚ್ಚುಗೆ ಸೂಚಿಸಿದ್ದರು. ಆಗ ನಗು ನಗುತ್ತಲೇ ನಟನನ್ನು ಪ್ರಶಾಂತ್ ನೀಲ್ ತಬ್ಬಿಕೊಂಡರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಇಬ್ಬರ ಸ್ನೇಹ ಕಂಡು ಫ್ಯಾನ್ಸ್‌ ಖುಷಿಪಟ್ಟಿದ್ದಾರೆ.

     

    View this post on Instagram

     

    A post shared by Manav Manglani (@manav.manglani)

    ಅಂದಹಾಗೆ, ಇಂದಿಗೂ ಇಬ್ಬರ ಒಡನಾಟ ಚೆನ್ನಾಗಿದೆ ಎಂಬುದಕ್ಕೆ ಈ ಸಂದರ್ಭ ಸಾಕ್ಷಿಯಾಗಿದೆ. ಈ ಹಿಂದೆ ಇಬ್ಬರ ಬಾಂಧವ್ಯ ಚೆನ್ನಾಗಿಲ್ಲ. ‘ಸಲಾರ್ 2’ (Salaar 2)  ಸೆಟ್ಟೇರಲ್ಲ ಎಂದೆಲ್ಲಾ ಕಿಡಿಗೇಡಿಗಳು ಸುದ್ದಿ ಹಬ್ಬಿಸಿದ್ದರು. ಅದಕ್ಕೆ, ಪ್ರಶಾಂತ್ ನೀಲ್ ಪತ್ನಿ ಪರೋಕ್ಷವಾಗಿ ಟೀಕೆಗಳಿಗೆ ಉತ್ತರ ಕೊಟ್ಟಿದ್ದರು. ಈಗ ಮತ್ತೊಮ್ಮೆ ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಯಾಗಿರೋದು ಈ ಹಿಂದೆ ಹರಿದಾಡುತ್ತಿದ್ದ ವದಂತಿಗಳಿಗೆ ತಕ್ಕ ಉತ್ತರ ಸಿಕ್ಕಿದೆ.

    ಪ್ರಭಾಸ್ ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳನ್ನು ಮುಗಿಸಿದ ಬಳಿಕ ‘ಸಲಾರ್ 2’ ಚಿತ್ರದ ಶೂಟಿಂಗ್ ಶುರುವಾಗಲಿದೆ. ಇನ್ನೂ ಕಳೆದ ವಾರ ‘ಕೆಜಿಎಫ್ 2’ (KGF 2) ನಿರ್ದೇಶಕನ ಜೊತೆಗಿನ ಜ್ಯೂ.ಎನ್‌ಟಿಆರ್ ಹೊಸ ಚಿತ್ರದ ಮುಹೂರ್ತ ಸರಳವಾಗಿ ಜರುಗಿದೆ. ಸೆಪ್ಟೆಂಬರ್‌ನಿಂದ ಶೂಟಿಂಗ್ ಆರಂಭವಾಗಲಿದೆ. ಈ ಸಿನಿಮಾದ ಬಳಿಕ ಪ್ರಭಾಸ್ ಜೊತೆ ಪ್ರಶಾಂತ್ ನೀಲ್ ಕೈಜೋಡಿಸಲಿದ್ದಾರೆ.

  • ಬ್ರೇಕಪ್ ಬಳಿಕ ಜೀವನ ಹೇಗಿದೆ ಎಂದು ಹಾಡಿದ ಶ್ರುತಿ ಹಾಸನ್

    ಬ್ರೇಕಪ್ ಬಳಿಕ ಜೀವನ ಹೇಗಿದೆ ಎಂದು ಹಾಡಿದ ಶ್ರುತಿ ಹಾಸನ್

    ‘ಸಲಾರ್’ (Salaar) ನಟಿ ಶ್ರುತಿ ಹಾಸನ್ (Shruti Haasan) ಇತ್ತೀಚೆಗೆ ಶಾಂತನು ಹಜಾರಿಕಾ (Santanu Hazarika) ಜೊತೆ ಬ್ರೇಕಪ್ ಮಾಡಿಕೊಂಡರು. ಇದೀಗ ಸಿಂಗಲ್ ಇರುವ ನಟಿ, ಬ್ರೇಕಪ್ ಕುರಿತಂತೆ ಗೀತೆ ರಚಿಸಿ ಆ ಹಾಡಿಗೆ ಶ್ರುತಿ ದನಿಯಾಗಿದ್ದಾರೆ. ಬ್ರೇಕಪ್ (Breakup) ಮತ್ತು ಸೆಲ್ಫ್ ಲವ್ ಬಗ್ಗೆ ಹಾಡಿನ ಮೂಲಕ ನಟಿ ತಿಳಿಸಿದ್ದಾರೆ. ಸದ್ಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿವ್ಸ್ ಪಡೆದುಕೊಳ್ಳುತ್ತಿದೆ.

    ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್‌ಗೆ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ. ಆದರೆ ಸಿನಿಮಾಗಿಂತ ಖಾಸಗಿ ಬದುಕಿನ ವಿಚಾರವಾಗಿ ಹೆಚ್ಚೆಚ್ಚು ಸುದ್ದಿಯಾಗುತ್ತಿದ್ದಾರೆ. ಇನ್ನೇನು ಬಹುಕಾಲದ ಗೆಳೆಯ ಶಾಂತನು ಜೊತೆ ಶ್ರುತಿ ಮದುವೆ ಸುದ್ದಿ ವೈರಲ್ ಆಗುತ್ತಿದ್ದಂತೆ ಬ್ರೇಕಪ್ ನ್ಯೂಸ್ ಕೊಟ್ಟು ನಟಿ ಶಾಕ್ ಕೊಟ್ಟಿದ್ದರು. ಇದನ್ನೂ ಓದಿ:ಸಂದೇಶ್ ಪ್ರೊಡಕ್ಷನ್ಸ್ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

     

    View this post on Instagram

     

    A post shared by Shruti Haasan (@shrutzhaasan)

    ಸದ್ಯ ಮಾಜಿ ಗೆಳೆಯನ ಜೊತೆ ಬೇರೆಯಾದ್ಮೇಲೆ ಜೀವನ ಹೇಗಿದೆ ಎಂದು ತಮ್ಮ ಹಾಡಿನ ಮೂಲಕ ನಟಿ ಸುಳಿವು ನೀಡಿದ್ದಾರೆ. ನನ್ನ ಹೃದಯದ ಬಾಗಿಲು ಮುಚ್ಚಿದೆ. ಪ್ರೀತಿ ಎನ್ನುವ ಬೀಗದ ಕೈ ಬೇಕಿಲ್ಲ ಎನ್ನುವ ಅರ್ಥದಲ್ಲಿ ನಟಿ ಹಾಡಿದ್ದಾರೆ. ನಟಿಯ ಹಾಡಿಗೆ ನೆಟ್ಟಿಗರಿಂದ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿದೆ.

    ಅಂದಹಾಗೆ, ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಜೊತೆಗಿನ ‘ಸಲಾರ್’ ಬಳಿಕ ಇದೀಗ ‘ಚೆನ್ನೈ ಸ್ಟೋರಿಸ್’, ಸಲಾರ್ ಪಾರ್ಟ್ 2 ಸೇರಿದಂತೆ ಹಲವು ಸಿನಿಮಾಗಳು ಅವರ ಕೈಯಲ್ಲಿವೆ.

  • ‘ಸಲಾರ್ 2’ ಸಿನಿಮಾ ನಿಂತೇ ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ ಸಂಸ್ಥೆ

    ‘ಸಲಾರ್ 2’ ಸಿನಿಮಾ ನಿಂತೇ ಹೋಯ್ತು ಎಂದವರಿಗೆ ಖಡಕ್ ಉತ್ತರ ಕೊಟ್ಟ ಹೊಂಬಾಳೆ ಸಂಸ್ಥೆ

    ಹೊಂಬಾಳೆ ಸಂಸ್ಥೆ ನಿರ್ಮಾಣದ ‘ಸಲಾರ್’ (Salaar) ಸಿನಿಮಾ ಥಿಯೇಟರ್‌ನಲ್ಲಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಇದೀಗ ಕಿರುತೆರೆಯಲ್ಲೂ ಪ್ರಸಾರವಾಗುತ್ತಿದೆ. ಹೀಗಿರುವಾಗ ಕೆಲ ದಿನಗಳಿಂದ ‘ಸಲಾರ್ -2’ (Salaar 2)  ಸಿನಿಮಾ ನಿಂತು ಹೋಗಿದೆ ಎಂಬ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ವಿಚಾರವಾಗಿ ಹೊಂಬಾಳೆ ಸಂಸ್ಥೆ ಖಡಕ್ ಆಗಿ ಉತ್ತರ ನೀಡಿದೆ. ಇದನ್ನೂ ಓದಿ:ಟ್ರೋಲ್‌ಗಳ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ನೇಹಾ ಶೆಟ್ಟಿ

    ಡೈರೆಕ್ಟರ್ ಪ್ರಶಾಂತ್ ನೀಲ್ (Prashanth Neel) ಮತ್ತು ಪ್ರಭಾಸ್ ನಡುವೆ ಭಿನ್ನಾಭಿಪ್ರಾಯವಿದೆ ಎನ್ನಲಾದ ಕೆಲ ಸುದ್ದಿಗಳು ಹರಿದಾಡಿತ್ತು. ಇದರಿಂದ ಸಲಾರ್ 2 ಸಿನಿಮಾ ನಿಂತಿದೆ ಎಂದು ಬಿಂಬಿಸಲಾಗಿತ್ತು. ಇದೀಗ ಪ್ರಶಾಂತ್ ನೀಲ್ ಮತ್ತು ನಟ ಪ್ರಭಾಸ್ (Prabhas) ಖುಷಿಯಿಂದ ಸ್ಮೈಲ್ ಮಾಡುತ್ತಿರುವ ಫೋಟೋ ಶೇರ್ ಮಾಡಿ ಹೊಂಬಾಳೆ ಟೀಮ್ ಪರೋಕ್ಷವಾಗಿ ಉತ್ತರಿಸಿದೆ.

     

    View this post on Instagram

     

    A post shared by Salaar (@salaarthesaga)

    ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಒಟ್ಟಿಗೆ ಜೋರಾಗಿ ನಗುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದು, ಅವರು ನಗು ನಿಲ್ಲಿಸುವುದಿಲ್ಲ ಎಂದು ಬರೆಯಲಾಗಿದೆ.  ಈ ಮೂಲಕ ‘ಸಲಾರ್ 2’ ನಿಂತು ಹೋಗಿದೆ ಎಂಬ ಸುದ್ದಿ ಸುಳ್ಳು ಎಂಬುದನ್ನು ಖಾತ್ರಿ ಪಡಿಸಿದೆ. ಈ ಪೋಸ್ಟ್ ನೋಡಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ.

    ಅಂದಹಾಗೆ, ಪ್ರಭಾಸ್ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ಬ್ಯುಸಿಯಿರುವ ಕಾರಣ, ಪ್ರಶಾಂತ್ ನೀಲ್ ಅವರು ಜ್ಯೂ.ಎನ್‌ಟಿಆರ್ ನಟನೆಯ ‌’ಡ್ರ್ಯಾಗನ್’ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಇದೇ ಆಗಸ್ಟ್‌ನಿಂದ ‘ಡ್ರ್ಯಾಗನ್’ ಚಿತ್ರದ ಶೂಟಿಂಗ್ ಶುರುವಾಗಲಿದೆ. ಈ ಚಿತ್ರ ಪೂರ್ಣಗೊಳಿಸಲು 2 ವರ್ಷಗಳು ಸಮಯ ಬೇಕಿದೆ. ಇದಾದ ಬಳಿಕ ‘ಸಲಾರ್ 2’ ಕೈಗೆತ್ತಿಕೊಳ್ಳಲಿದ್ದಾರೆ ಪ್ರಶಾಂತ್ ನೀಲ್.

  • ನಾನು ಸಿಂಗಲ್‌, ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ ಎಂದು ಬ್ರೇಕಪ್‌ ಬಗ್ಗೆ ತಿಳಿಸಿದ ‘ಸಲಾರ್‌’ ನಟಿ

    ನಾನು ಸಿಂಗಲ್‌, ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ ಎಂದು ಬ್ರೇಕಪ್‌ ಬಗ್ಗೆ ತಿಳಿಸಿದ ‘ಸಲಾರ್‌’ ನಟಿ

    ‘ಸಲಾರ್’ (Salaar) ಬೆಡಗಿ ಶ್ರುತಿ ಹಾಸನ್ (Shruti Hasaan) ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ ಅವರ ಬ್ರೇಕಪ್ ಮ್ಯಾಟರ್ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಇದೀಗ ಮೊದಲ ಬಾರಿಗೆ ಶಾಂತನು ಜೊತೆಗಿನ ಬ್ರೇಕಪ್ ಬಗ್ಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:‘ಮಾರಿಗೆ ದಾರಿ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

    ‘ಸಲಾರ್’ ನಟಿ ಶ್ರುತಿ ಅವರು ಶಾಂತನು ಹಜಾರಿಕಾ (Shantanu Hazarika) ಜೊತೆ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್‌ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ. ಬಹುದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ‘ಆಸ್ಕ್ ಮಿ ಅನಿಥಿಂಗ್’ ಸೆಷನ್ ಅನ್ನು ಶ್ರುತಿ ಮಾಡಿದ್ದಾರೆ. ಈ ವೇಳೆ, ಅಭಿಮಾನಿಯೊಬ್ಬರು ಶ್ರುತಿಗೆ ಸಿಂಗಲ್ ಅಥವಾ ಕಮಿಟೆಡ್ ಎಂದು ಕೇಳಿದ್ದಾರೆ.

    ನಾನು ಇಂತಹ ಪ್ರಶ್ನೆಗಳನ್ನು ಉತ್ತರಿಸಲು ಸಿದ್ಧವಾಗಿಲ್ಲ. ನಾನು ಸಿಂಗಲ್. ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ. ಸದ್ಯ ಕೆಲಸ ಮಾತ್ರ. ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ‘ಸಲಾರ್’ ನಟಿ ಅಭಿಮಾನಿಯ ಪ್ರಶ್ನೆಗೆ ಉತ್ತರಿಸಿದ್ದಾರೆ. ಬ್ರೇಕಪ್ ಬಗ್ಗೆ ಪರೋಕ್ಷವಾಗಿ ನಟಿ ಹೇಳಿದ್ದಾರೆ.

    ಶ್ರುತಿ ಹಾಸನ್ ನಟನೆಯ ಡಕಾಯಿಟ್, ಚೆನ್ನೈ ಸ್ಟೋರಿಸ್, ಸಲಾರ್ 2 ಸೇರಿದಂತೆ ಹಲವು ಸಿನಿಮಾಗಳು ಶ್ರುತಿ ಹಾಸನ್ ಕೈಯಲ್ಲಿವೆ.

  • ಕಿರುತೆರೆಗೆ ಬಂತು ಸೂಪರ್ ಹಿಟ್ ಚಿತ್ರ ‘ಸಲಾರ್’

    ಕಿರುತೆರೆಗೆ ಬಂತು ಸೂಪರ್ ಹಿಟ್ ಚಿತ್ರ ‘ಸಲಾರ್’

    ನ್ನಡಿಗರಿಗೆ ಸ್ಟಾರ್ ಸುವರ್ಣ ವಾಹಿನಿಯು (TV) ಅನೇಕ ರೀತಿಯ ಸದಭಿರುಚಿಯುಳ್ಳ ಕಾರ್ಯಕ್ರಮಗಳನ್ನು, ಧಾರಾವಾಹಿಗಳನ್ನು, ಸಿನಿಮಾಗಳನ್ನು ನೀಡುತ್ತಾ ಬಂದಿದೆ. ವಿಶ್ವ-ವಿಖ್ಯಾತಿ ಪಡೆದ ಕಾಂತಾರ, ಹೊಯ್ಸಳ, ಜೇಮ್ಸ್ ನಂತಹ ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ಪ್ರಸಾರ ಮಾಡಿ ಪ್ರೇಕ್ಷಕರ ಮನಗೆದ್ದ ಸುವರ್ಣ ವಾಹಿನಿಯಲ್ಲಿ ಇದೀಗ 2023ರ ಬ್ಲಾಕ್ ಬಸ್ಟರ್ ಹಿಟ್ ‘ಸಲಾರ್’ (Salaar) ಸಿನಿಮಾ ಪ್ರಸಾರವಾಗಲಿದೆ. ಜೊತೆಗೆ ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶವನ್ನು ಸುವರ್ಣ ವಾಹಿನಿಯು ನೀಡುತ್ತಿದೆ.

    ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಇದೀಗ ಈ ಸಿನಿಮಾವು ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಗುತ್ತಿದ್ದು. ಈ ಸಿನಿಮಾದಲ್ಲಿ ವೀಕ್ಷಕರಿಗೆ ಪ್ರಭಾಸ್ ಅವರ ಲುಕ್ ಜೊತೆಗೆ ಸಿನಿಮಾದಲ್ಲಿ ಬಳಸಲಾಗಿದ್ದ ಬೈಕ್ ದೊಡ್ಡ ಮಟ್ಟದ ಕ್ರೇಜ್ ಸೃಷ್ಟಿ ಮಾಡಿತ್ತು. ಇದೀಗ ಆ ಬೈಕ್ ಗೆಲ್ಲೋ ಅವಕಾಶವನ್ನು ನೋಡುಗರಿಗೆ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆಯು ನೀಡುತ್ತಿದೆ. ‘ಸಲಾರ್’ ಸಿನಿಮಾ ನೋಡ್ತಾ ನೋಡ್ತಾ, ಅಲ್ಲಿ ಕೇಳೊ ಪ್ರಶ್ನೆಗಳಿಗೆ ಆದಷ್ಟು ಬೇಗ ಸರಿಯಾದ ಉತ್ತರ ಕೊಟ್ರೆ, ಅದೃಷ್ಟಶಾಲಿ ವಿಜೇತರಿಗೆ ‘ಸಲಾರ್’ ನಲ್ಲಿ ಪ್ರಭಾಸ್ ಬಳಸಿರೋ ಬೈಕ್ ಬಹುಮಾನವಾಗಿ ಸಿಗಲಿದೆ.

    ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಫಿಲಂಸ್ ಈ ಸಿನಿಮಾವನ್ನು ನಿರ್ಮಿಸಿದೆ. ಇನ್ನು ಈ ಸಿನಿಮಾದ ಹಾಡುಗಳು ಅದ್ಭುತ ರೀತಿಯಲ್ಲಿ ಮೂಡಿ ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ನಲ್ಲಿತ್ತು.

     

    ಬರ್ತಿದೆ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ “ಸಲಾರ್” ಇದೇ ಭಾನುವಾರ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ತಪ್ಪದೇ ವೀಕ್ಷಿಸಿ ಮಿಸ್ಸ್ ಮಾಡದೆ ಕಾಂಟೆಸ್ಟ್ ನಲ್ಲಿ ಭಾಗವಹಿಸಿ.

  • ‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್

    ‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್

    ಹುಮುಖ ಪ್ರತಿಭೆ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ‘ಸಲಾರ್’ (Salaar) ಸಿನಿಮಾದ ಸಕ್ಸಸ್ ನಂತರ ‘ಆಡು ಜೀವಿತಂ’ (Aadujeevitham) ಚಿತ್ರದ ಟ್ರೈಲರ್ ಮೂಲಕ ಸದ್ದು ಮಾಡ್ತಿದ್ದಾರೆ. ಟ್ರೈಲರ್‌ನಲ್ಲಿ ಪೃಥ್ವಿರಾಜ್ ಬೆಚ್ಚಿ ಬೀಳಿಸುವ ಅವತಾರ ಮತ್ತು ಅವರ ನಟನೆ ನೋಡಿ ಪ್ರಭಾಸ್ (Prabhas) ಭೇಷ್ ಎಂದಿದ್ದಾರೆ. ಇದನ್ನೂ ಓದಿ:‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ ಯಾವಾಗ, ಎಲ್ಲಿ?

    ‘ಆಡು ಜೀವಿತಂ’ ಇದೇ ಮಾರ್ಚ್ 28ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಪೃಥ್ವಿರಾಜ್- ಅಮಲಾ ಪೌಲ್ (Amala Paul) ನಟಿಸಿರುವ ಈ ಚಿತ್ರದಲ್ಲಿ ಈ ಹಿಂದೆ ಎಂದೂ ಕಾಣಿಸಿಕೊಂಡಿರದ ಶೇಡ್‌ನಲ್ಲಿ ಪೃಥ್ವಿರಾಜ್ ನಟಿಸಿದ್ದಾರೆ. ಅವರ ಲುಕ್ ಭಯಂಕರವಾಗಿದೆ. ಸಲಾರ್ ನಟನ ನಯಾ ಲುಕ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಇನ್ನೂ ಟ್ರೈಲರ್‌ನಲ್ಲಿ ಪೃಥ್ವಿರಾಜ್ ಅಲಿಯಾಸ್ ‘ಸಲಾರ್’ ಚಿತ್ರದ ವರದರಾಜ್ ಮನ್ನಾರ್ ಅವರ ಈ ಗೆಟಪ್ ಕಂಡು ಪ್ರಭಾಸ್ ಶಾಕ್ ಆಗಿದ್ದಾರೆ. ವರದರಾಜ ಮನ್ನಾರ್ ಪಾತ್ರ ಮಾಡಿದ್ದು, ಇದೇ ವ್ಯಕ್ತಿನಾ ಅಂತ ನಂಬಲಾಗುತ್ತಿಲ್ಲ ಎಂದಿದ್ದಾರೆ. ಪೃಥ್ವಿರಾಜ್ ಅವರಿಗೆ ಮನಪೂರ್ವಕವಾಗಿ ಶುಭಾಶಯವನ್ನೂ ಕೋರಿದ್ದಾರೆಕ್ಸಿನಿಮಾ ಬ್ಲ್ಯಾಕ್ ಬಸ್ಟರ್ ಗ್ಯಾರಂಟಿ ಎಂದು ಪ್ರಭಾಸ್ ಭವಿಷ್ಯ ನುಡಿದಿದ್ದಾರೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ `ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.

     

    View this post on Instagram

     

    A post shared by Amala Paul (@amalapaul)

    ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ‘ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.

    ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.

    ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.

  • ಪ್ರಭಾಸ್ ಜಾತಕದಲ್ಲಿ ದೋಷ- ಜ್ಯೋತಿಷಿ ಭವಿಷ್ಯಕ್ಕೆ ಫ್ಯಾನ್ಸ್ ಶಾಕ್

    ಪ್ರಭಾಸ್ ಜಾತಕದಲ್ಲಿ ದೋಷ- ಜ್ಯೋತಿಷಿ ಭವಿಷ್ಯಕ್ಕೆ ಫ್ಯಾನ್ಸ್ ಶಾಕ್

    ಟಾಲಿವುಡ್ ಪ್ರಭಾಸ್ (Prabhas) ಫ್ಯಾನ್ಯ್‌ಗೆ ಮತ್ತೆ ಆತಂಕ ಹುಟ್ಟಿಸಿದ್ದಾರೆ ಖ್ಯಾತ ಜ್ಯೋತಿಷಿ ವೇಣುಸ್ವಾಮಿ. ‘ಸಲಾರ್’ (Salaar) ಹಿಟ್ ಆಗಿದೆ. 700 ಕೋಟಿ ಗಳಿಸಿದೆ. ಹೀಗಿರುವಾಗ ಮತ್ಯಾಕೆ ಡಾರ್ಲಿಂಗ್ ಬದುಕಿನಲ್ಲಿ ಸಮಸ್ಯೆ ಬರಲಿವೆ ಎಂದಿದ್ದಾರೆ ವೇಣು ಸ್ವಾಮಿ? ಇನ್ಯಾವ ಅವಘಡ ಪ್ರಭಾಸ್ ಜೀವನದಲ್ಲಿ ಬರಲಿದೆ? ಫ್ಯಾನ್ಸ್ ಕೆಂಡ ಕಾರಿದ್ದೇಕೆ? ಇಲ್ಲಿದೆ ಮಾಹಿತಿ.

    ನಟ ಪ್ರಭಾಸ್ (Prabhas) ಜೂಮ್‌ನಲ್ಲಿದ್ದಾರೆ. ಈಗಾಗಲೇ ಅವರು ಯುರೋಪ್‌ಗೆ ಹೋಗಿದ್ದಾರೆ. ಅದಕ್ಕೆ ಕಾರಣ ಶಸ್ತ್ರ ಚಿಕಿತ್ಸೆ. ಹಿಂದೊಮ್ಮೆ ಮಂಡಿ ನೋವಿನ ಆಪರೇಶನ್ ಯುರೋಪ್‌ನಲ್ಲಿಯೇ ಮಾಡಿಸಿಕೊಂಡಿದ್ದರು. ಈಗ ಮತ್ತೆ ಅದೇ ದೇಶಕ್ಕೆ ಹೋಗಿದ್ದಾರೆ. ಆರೋಗ್ಯದಲ್ಲಿ ಮತ್ಯಾಕೆ ಹೀಗೆ? ಉತ್ತರ ಗೊತ್ತಿಲ್ಲ. ಆದರೆ ಇದೇ ಸಮಯದಲ್ಲಿ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಭವಿಷ್ಯ ನುಡಿದಿದ್ದಾರೆ. ಅದನ್ನು ಕೇಳಿ ಪ್ರಭಾಸ್ ಭಕ್ತಗಣ ಸಿಟ್ಟಾಗಿದ್ದಾರೆ. ಇದೆಲ್ಲ ಸುಳ್ಳು ಸುದ್ದಿ ಎನ್ನುತ್ತಿದ್ದಾರೆ. ಆದರೆ ವೇಣುಸ್ವಾಮಿ ಮಾತ್ರ ನಾನು ಹೇಳಿರುವುದು ಎಲ್ಲವೂ ನಿಜ ಎಂದಿದ್ದಾರೆ. ಹಾಗಿದ್ದರೆ ಅವರು ಹೇಳಿದ್ದೇನು? ಇದನ್ನೂ ಓದಿ:ಸುದೀಪ್ ಗಾಗಿ ರಕ್ಷಿತ್ ಶೆಟ್ಟಿ ಸಿನಿಮಾ: ಕಿಚ್ಚ ಹೇಳಿದ್ದೇನು?

    ‘ಸಲಾರ್’ (Salaar Film) ಸಿನಿಮಾವನ್ನು ಬರೀ ಅವರ ಅಭಿಮಾನಿಗಳು ಮಾತ್ರ ನೋಡುತ್ತಾರೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಈಗ ಇನ್ನೊಂದು ಸತ್ಯ ಇದೆ. ಅದೇ ಪ್ರಭಾಸ್ ಆರೋಗ್ಯ. ಅವರ ಆರೋಗ್ಯದಲ್ಲಿ ಏರುಪೇರಾಗಲಿದೆ. ಜೊತೆಗೆ ವೈಯಕ್ತಿಕ ಬದುಕಿನಲ್ಲಿ ಅನೇಕ ಅಡೆತಡೆ ಬರಲಿವೆ. ಇದು ಸತ್ಯವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ:ಸಿಂಗಲ್ ಆಗಿರೋ ತ್ರಿಶಾಗೆ ರೋಸ್ ಕೊಟ್ಟಿದ್ಯಾರು?

    ಮೂರು ವರ್ಷಗಳ ಹಿಂದೆಯೇ ವೇಣುಸ್ವಾಮಿ ಇದೇ ರೀತಿ ಪ್ರಭಾಸ್ ಹಿಂದೆ ಬಿದ್ದಿದ್ದರು. ಮೂರು ಸಿನಿಮಾ ಸೋಲಲಿದೆ. ಸಲಾರ್ ಗೆದ್ದರೂ ಅದನ್ನು ಅಭಿಮಾನಿಗಳು ಮಾತ್ರ ನೋಡುತ್ತಾರೆ ಎಂದಿದ್ದರು. ನಂತರ ಪ್ರಭಾಸ್ ಮದುವೆ ಆಗಲ್ಲ. ಅವರಿಗೆ ಆ ಯೋಗ ಇಲ್ಲ ಎಂದಿದ್ದರು. ಅದಕ್ಕೂ ಫ್ಯಾನ್ಸ್ ಕಿಡಿಕಾರಿದ್ದರು. ಈಗ ‘ಸಲಾರ್’ ಗೆದ್ದಿದೆ. ‘ಕಲ್ಕಿ’ ಸಿನಿಮಾ ಬರಲಿದೆ. ಹಾಗಿದ್ದರೆ ಪ್ರಭಾಸ್ ವೈಯಕ್ತಿಕ ಬದುಕಿನಲ್ಲಿ ಏನಾಗಲಿದೆ? ಅದು ಆರೋಗ್ಯದ ವಿಷಯವಾ ಅಥವಾ ಮದುವೆ ಲೆಕ್ಕಾಚಾರನಾ ಅಥವಾ ಅದನ್ನು ಮೀರಿದ್ದಾ? ಸಮಯವೇ ಎಲ್ಲದಕ್ಕೂ ಉತ್ತರ ಕೊಡಲಿದೆ.