Tag: salary

  • 27 ತಿಂಗಳಿನಿಂದ ಸಂಬಳ ಇಲ್ಲ – ಪಂಚಾಯತ್‌ ಕಚೇರಿ ಮುಂದೆಯೇ ವಾಟರ್‌ಮ್ಯಾನ್‌ ನೇಣಿಗೆ ಶರಣು

    27 ತಿಂಗಳಿನಿಂದ ಸಂಬಳ ಇಲ್ಲ – ಪಂಚಾಯತ್‌ ಕಚೇರಿ ಮುಂದೆಯೇ ವಾಟರ್‌ಮ್ಯಾನ್‌ ನೇಣಿಗೆ ಶರಣು

    ಚಾಮರಾಜನಗರ: 27 ತಿಂಗಳಿಂದ ಸಂಬಳ (Salary) ನೀಡದ್ದಕ್ಕೆ ಬೇಸತ್ತು ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದಲ್ಲಿ ನಡೆದಿದೆ.

    ವಾಟರ್‌ಮ್ಯಾನ್‌ ಚಿಕ್ಕೂಸನಾಯಕ (60) ಅವರು ಗ್ರಾಮ ಪಂಚಾಯತ್‌ (Village Panchayat) ಕಚೇರಿ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಆತ್ಮಹತ್ಯೆಗೆ ಶರಣಾಗುವ ಮುನ್ನ ಚಿಕ್ಕೂಸನಾಯಕ ಡೆತ್ ನೋಟ್ ಬರೆದು ಗೋಡೆಗೆ ಅಂಟಿಸಿದ್ದಾರೆ. ಗ್ರಾಪಂ ಅಧ್ಯಕ್ಷೆಯ ಪತಿ ಮೋಹನ್‌ಕುಮಾರ್, ಪಿಡಿಒ ರಾಮೇಗೌಡ ನನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ನನಗೆ ರಜೆ ಬೇಕೆಂದರೂ ಕೊಡದೇ ಕಿರುಕುಳ ಕೊಡುತ್ತಿದ್ದರು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ವರೆಗೂ ಕೆಲಸ ಮಾಡಿಸುತ್ತಿದ್ದರು. ಎಷ್ಟು ಬಾರಿ ಮನವಿ ಮಾಡಿದರೂ ಸಂಬಳ ಕೊಡದೇ ಕಿರುಕುಳ ನೀಡುತ್ತಿದ್ದರು.

    ಬಿಲ್ ಕಲೆಕ್ಷನ್ ಮಾಡಿಕೊಂಡು ಬಂದರಷ್ಟೇ ಸಂಬಳ ಕೊಡುವುದಾಗಿ ಪಿಡಿಒ ರಾಮೇಗೌಡ ಪೀಡಿಸಿಸುತ್ತಿದ್ದರು ಎಂದು ಉಲ್ಲೇಖಿಸಿದ್ದಾರೆ.

    ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಡಿಒ ಹಾಗೂ ಗ್ರಾ.ಪಂ.ಅಧ್ಯಕ್ಷನ ವಿರುದ್ಧ ಕ್ರಮ ಜರುಗಿಸಲು ಕುಟುಂಬಸ್ಥರ ಆಗ್ರಹಿಸಿದ್ದಾರೆ.

  • ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 2ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

    ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.12.25 ರಿಂದ ಶೇ.14.25 ಗೆ ಏರಿಕೆ ಮಾಡಿದೆ.  ಇದನ್ನೂ ಓದಿ:  ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ಸಾಮಾನ್ಯವಾಗಿ ರಾಜ್ಯ ಸರ್ಕಾರವೂ ಏರಿಕೆ ಮಾಡುತ್ತದೆ. ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಹೆಚ್ಚುವರಿ 3% ತುಟ್ಟಿ ಭತ್ಯೆ ನೀಡಲು ಒಪ್ಪಿಗೆ ನೀಡಿತ್ತು.  ಇದನ್ನೂ ಓದಿ:  ಕೇದಾರನಾಥ ಯಾತ್ರಿಗಳಿಗೆ ಗುಡ್ ನ್ಯೂಸ್ – 12.9 ಕಿಮೀ ರೋಪ್‌ವೇ ನಿರ್ಮಿಸಲಿದೆ ಅದಾನಿ ಕಂಪನಿ

    ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿತ್ತು.

  • ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ – ಡಿಎ 3% ಏರಿಕೆ

    ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ – ಡಿಎ 3% ಏರಿಕೆ

    ನವದೆಹಲಿ: ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗಿಫ್ಟ್‌ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ 3% ತುಟ್ಟಿ ಭತ್ಯೆ (Dearness Allowance) ನೀಡಲು ಒಪ್ಪಿಗೆ ನೀಡಿದೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿದೆ.

     

    ಈ ವರ್ಷದಲ್ಲಿ ಮಾರ್ಚ್ ತಿಂಗಳಿನಲ್ಲಿ 2% ರಷ್ಟು ಡಿಎ ಏರಿಕೆ ಮಾಡಲಾಗಿತ್ತು. ಈಗ ಮೊತ್ತೊಮ್ಮೆ ಡಿಕೆ ಏರಿಕೆ ಮಾಡಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಇದು ಮೂಲ ವೇತನ/ಪಿಂಚಣಿಯ 55% ಹಾಲಿ ದರಕ್ಕಿಂತ 3% ಹೆಚ್ಚಳವಾಗಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ 1,0083.96 ಕೋಟಿ ರೂ.ಗಳ ಹೊರೆ ಬೀಳಲಿದೆ. ಇದನ್ನೂ ಓದಿ: RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

    7ನೇ ಕೇಂದ್ರ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಜೀವನ ವೆಚ್ಚ ಏರಿಕೆಗೆ ಅನುಗುಣವಾಗಿ ತುಟ್ಟಿಭತ್ಯೆಯನ್ನು ಪ್ರತಿ ವರ್ಷ ನೀಡಲಾಗುತ್ತದೆ. ಕೇಂದ್ರದ ನಿರ್ಧಾರದಿಂದ ಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.

    ಗ್ರಾಹಕರ ಬೆಲೆ ಸೂಚ್ಯಂಕದ ಆಧಾರದ ಮೇಲೆ ವರ್ಷದಲ್ಲಿ 2 ಬಾರಿ ಕೇಂದ್ರ ಸರ್ಕಾರ ಡಿಎ ಏರಿಕೆ ಮಾಡುತ್ತೆ. ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಿನಲ್ಲಿ ಡಿಎ, ಡಿಆರ್ ನೀಡಲಾಗುತ್ತದೆ.

  • ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ

    ಜೈನ ಮಂದಿರಗಳ ಅರ್ಚಕರಿಗೆ ವೇತನ – ಅಧಿಕೃತ ಆದೇಶ

    ಬೆಂಗಳೂರು: ಜೈನ ಮಂದಿರಗಳ (Jain Temples) ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರಿಗೆ (Priests) ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.

    ರಾಜ್ಯದ 1,043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರಿಗೆ ತಲಾ 5 ಸಾವಿರ ರೂ. ವೇತನ ನೀಡಲಾಗುವುದು. ಇದನ್ನೂ ಓದಿ: ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಮಡಿಕೇರಿ ದಸರಾಕ್ಕೆ ಚಾಲನೆ

    ಇದೇ ಮೊದಲ ಬಾರಿಗೆ ಜೈನ ಮಂದಿರಗಳ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ 1,043 ಪ್ರಸ್ತಾವನೆ ಬಂದಿದ್ದು, ಸಚಿವ ಜಮೀರ್ ಅಹಮದ್ ಖಾನ್ ಅವರು ಎಲ್ಲ ಪ್ರಸ್ತಾವನೆಗೆ ಒಪ್ಪಿಗೆ ನೀಡಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ದಸರಾ ವಿಶೇಷ | ಮೈಸೂರು ಸಿಂಗರಿಸಿದ ದೀಪಾಲಂಕಾರ, ಆಹಾರ ಮೇಳಕ್ಕೆ ಚಾಲನೆ

    ಇದೇ ಸಂದರ್ಭದಲ್ಲಿ ಬೆಂಗಳೂರು ಗಾಂಧಿ ನಗರದ ಮಹಾಬೋಧಿ ಸೊಸೈಟಿ ಅಭಿವೃದ್ಧಿ ಗೆ ಒಂದು ಕೋಟಿ ರೂ. ಬಿಡುಗಡೆ ಮಾಡಲು ಸಚಿವರು ಆದೇಶ ಹೊರಡಿಸಿದರು. ಇದನ್ನೂ ಓದಿ: Photo Gallery | ಹೂವು ಚೆಲುವೆಲ್ಲಾ ತನ್ನದೆನ್ನುತ್ತಿದೆ.. ಸಂಗೀತ ಝೇಂಕಾರ ಮನಮುಟ್ಟುತ್ತಿದೆ – ದಸರಾ ಸೊಬಗು ಕಣ್ತುಂಬಿಕೊಳ್ಳಿ

  • ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?

    ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?

    – ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ
    – ಬಿಜೆಪಿ ಸರ್ಕಾರ ಪ್ರತ್ಯೇಕ ನಿಧಿ ಹಂಚಿಕೆ ಮಾಡಿಲ್ಲ

    ಬೆಂಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ (Salary Hike) ಇರಲು ಬಿಜೆಪಿ ಸರ್ಕಾರದ ಆದೇಶವೇ ಕಾರಣ ಎಂದು ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ದೂರಿದ್ದಾರೆ.

    ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಜಾರಿ ಮಾಡಬಹುದು ಅಂತಾ ಆದೇಶದಲ್ಲಿ ಇದೆ. ಬಿಜೆಪಿ (BJP) ಸರ್ಕಾರದ ಆದೇಶದಿಂದ ಹಿಂಬಾಕಿ ತಡವಾಗಿದೆ ಎಂದು ಹೇಳಿದ್ದಾರೆ.

    ಏನಿದು ಆದೇಶ ಗೊಂದಲ?
    ಪ್ರತಿ 4 ವರ್ಷಗಳಿಗೊಮ್ಮೆ ಸಾರಿಗೆ ನೌಕರರ ವೇತನ ಪರಿಷ್ಕರಣೆ ನಡೆಯುತ್ತದೆ. ಈ ಹಿಂದೆ 2012-2016ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2012ರಿಂದ ಜಾರಿಗೆ ಬರುವುದಾಗಿ, 2016-2020ರ ವರೆಗೆ ವೇತನ ಹೆಚ್ಚಳ ಮಾಡಿದಾಗ 2016ರಿಂದ ಜಾರಿಗೆ ಬರುವಂತೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖವಾಗಿತ್ತು.

    2023ರ ಆದೇಶದಲ್ಲಿ 2023ರ ಮಾರ್ಚ್ 1ರಿಂದ ಜಾರಿಗೆ ಬರುವಂತೆ ಎಂದು ಉಲ್ಲೇಖಿಸಿದೆ. ಈ ಆದೇಶದಲ್ಲಿ 2020 ರಿಂದ ಎಂದು ಉಲ್ಲೇಖ ಮಾಡಿಲ್ಲ. ಈ ಆದೇಶದ ಅನ್ವಯ ಮುಂದಿನ 4 ವರ್ಷ ಅಂದರೆ 2027 ರವರೆಗೆ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ. ಆದೇಶದಲ್ಲಿ ಎಲ್ಲಿಯೂ ಸ್ಪಷ್ಟವಾಗಿ 2020 ರಿಂದಲೇ ಜಾರಿಗೆ ಬರುವಂತೆ ಎಂದು ಉಲ್ಲೇಖ ಮಾಡದ ಕಾರಣ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂಬ ವಾದವನ್ನು ಕಾಂಗ್ರೆಸ್‌ ಸರ್ಕಾರ ಮುಂದಿಟ್ಟಿದೆ. ಇದನ್ನೂ ಓದಿ: ಟೆಕ್ಕಿಗಳಿಗೆ ಗುಡ್‌ನ್ಯೂಸ್‌ – ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

    ಪ್ರತ್ಯೇಕ ನಿಧಿ ಇಲ್ಲ
    2020 ರಿಂದ‌ ಅನ್ವಯವಾಗುವಂತಿದ್ದರೆ ಇದಕ್ಕಾಗಿ‌ ಯಾವುದೇ ಪ್ರತ್ಯೇಕ ನಿಧಿಯನ್ನು ಹಿಂದಿನ ಸರ್ಕಾರ ಹಂಚಿಕೆ‌ ಮಾಡಿಲ್ಲ. ಈ‌ ಹಿಂದಿನ ಸರ್ಕಾರದ ಆದೇಶವನ್ನು ಮಾರ್ಪಾಡಿಸಲು ಸಾಧ್ಯವಿಲ್ಲ. 2023 ರಿಂದ 2027 ರವರೆಗೆ ನಾಲ್ಕು ವರ್ಷಗಳ ಅವಧಿಯವರೆಗೂ ಬಿಜೆಪಿ ಸರ್ಕಾರದ ಆದೇಶ‌ ಅನ್ವಯವಾಗುತ್ತದೆ. ಯಾವುದೇ ನಿಧಿಯನ್ನು ಮೀಸಲಿಡದ ಕಾರಣ 2027 ರಿಂದಲೇ ಮುಂದಿನ ವೇತನ‌ ಪರಿಷ್ಕರಣೆ ಜಾರಿಯಾಗಲು ಸಾಧ್ಯ ಎಂಬ ನಿಲುವಿಗೆ ಸರ್ಕಾರ ಬಲವಾಗಿ ಅಂಟಿಕೊಂಡಿದೆ.

    2020ರಲ್ಲಿ ಏನಾಗಿತ್ತು?
    ಕೋವಿಡ್‌ ಲಾಕ್‌ಡೌನ್‌ ಕಾರಣದಿಂದ 2020 ರಲ್ಲಿ ಕೆಲ ತಿಂಗಳು ಬಸ್ಸುಗಳ ಸಂಚಾರವನ್ನು ಬಂದ್‌ ಮಾಡಲಾಗಿತ್ತು. ನಂತರ ಸೇವೆ ಆರಂಭಗೊಂಡಿದ್ದರೂ ಜನ ಕಡಿಮೆ ಪ್ರಮಾಣದಲ್ಲಿ ಸಂಚರಿಸುತ್ತಿದ್ದರು. ಕೋವಿಡ್ ಸಮಯದಲ್ಲಿ ಪೂರ್ಣ/ ಅಪೂರ್ಣ ಪ್ರಮಾಣದಲ್ಲಿ ಬಸ್ಸುಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದರಿಂದ ಸಾರಿಗೆ ಇಲಾಖೆ ಮುಳುಗುವ ಹಂತದಲ್ಲಿತ್ತು.

    ಈ ಕಠಿಣ ಪರಿಸ್ಥಿತಿಯಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳ‌ ಸಿಬ್ಬಂದಿ ವೇತನ‌ ಹಾಗೂ ಇತರೇ ಭತ್ಯೆಗಳನ್ನು ಸರ್ಕಾರ ಪಾವತಿ ಮಾಡಿತ್ತು. ಆದರೆ ಸಂಬಳವನ್ನು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಂಡಿರಲಿಲ್ಲ. ಕೋವಿಡ್‌ ನಂತರ ಬಸ್ಸುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಇಳಿದ ಬಳಿಕ 2023 ರಲ್ಲಿ ಬಿಜೆಪಿ ಸರ್ಕಾರ ವೇತನ ಪರಿಷ್ಕರಣೆ ಮಾಡಿತ್ತು.

    ನೌಕರರ ವಾದ ಏನು?
    ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿಲ್ಲ ಮತ್ತು ಕಡಿಮೆ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದರು. ಆದರೆ ಈಗ ಬಸ್ಸುಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡಿದ್ದರೂ ನಿರ್ವಾಹಕರು ಟಿಕೆಟ್‌ ಹರಿಯುತ್ತಾರೆ. ಉಚಿತ ಟಿಕೆಟ್‌ ಹಣವನ್ನು ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ಪಾವತಿ ಮಾಡಬೇಕು.

    ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿ ಮೈಲಿಗಲ್ಲು ಸ್ಥಾಪಿಸಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ಆದಾಯವೂ ಜಾಸ್ತಿಯಾಗಿದೆ. ಆದಾಯ ಜಾಸ್ತಿಯಾಗಿರುವ ಕಾರಣ ಸರ್ಕಾರ ಸಂಬಳ ಏರಿಕೆ ಮಾಡಲೇಬೇಕು ಎಂದು ಆಗ್ರಹಿಸುತ್ತಿದ್ದಾರೆ.

     

  • ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ನವದೆಹಲಿ: ಕೇಂದ್ರ ಸರ್ಕಾರ ಸಂಸದರ ಸಂಬಳವನ್ನು (Salary) 24% ಏರಿಕೆ ಮಾಡಿದೆ. ಏಪ್ರಿಲ್‌ 1 ರಿಂದ ಇದು ಜಾರಿಗೆ ಬರಲಿದೆ.

    ಸಂಸದೀಯ ವ್ಯವಹಾರಗಳ ಸಚಿವಾಲಯದ (Ministry of Parliamentary Affairs) ಸುತ್ತೋಲೆಯ ಪ್ರಕಾರ, ಸಂಸದರ ಮಾಸಿಕ ವೇತನವು 1,00,000 ರೂ.ಗಳಿಂದ 1,24,000 ರೂ.ಗಳಿಗೆ ಏರಿಕೆಯಾಗಿದೆ.  ದೈನಂದಿನ ಭತ್ಯೆ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.

    ಸಂಸದರು ಮತ್ತು ಮಾಜಿ ಸಂಸದರ ಮಾಸಿಕ ಪಿಂಚಣಿಯನ್ನು 25,000 ರೂ.ಗಳಿಂದ 31,000 ರೂ.ಗಳಿಗೆ ಪರಿಷ್ಕರಿಸಲಾಗಿದೆ. ಹೆಚ್ಚುವರಿಯಾಗಿ ಮಾಜಿ ಸಂಸದರ ಹೆಚ್ಚುವರಿ ಪಿಂಚಣಿಯನ್ನು ವರ್ಷಕ್ಕೆ 2,000 ರೂ.ಗಳಿಂದ 2,500 ರೂ.ಗಳಿಗೆ ಏರಿಕೆ ಮಾಡಲಾಗಿದೆ.

    ಬೇರೆ ಏನೇನು ಸಿಗುತ್ತೆ?
    ಕ್ಷೇತ್ರದೊಳಗಿನ ತಿರುಗಾಟದ ಖರ್ಚಿಗಾಗಿ ಕ್ಷೇತ್ರದ ಭತ್ಯೆಯಾಗಿ ಪ್ರತಿ ತಿಂಗಳು 70,000 ರೂ. ಸಿಗುತ್ತದೆ. ಕಚೇರಿ ನಿರ್ವಹಣೆಗಾಗಿ ಪ್ರತಿ ತಿಂಗಳು 60,000 ರೂ. ಸಿಗುತ್ತದೆ

    ಸಂಸದರಿಗೆ ಪ್ರತಿವರ್ಷ ತಾವೂ ಸೇರಿದಂತೆ ಕುಟುಂಬ ಸದಸ್ಯರು 34 ಬಾರಿ ಉಚಿತವಾಗಿ ವಿಮಾನ ಪ್ರಯಾಣ ಕೈಗೊಳ್ಳಬಹುದು. ಅದೇ ರೀತಿ ವೈಯಕ್ತಿಕವಾಗಿ ಹಾಗೂ ಸಂಸದರ ಕಾರ್ಯಗಳಿಗಾಗಿ ಉಚಿತವಾಗಿ ಫಸ್ಟ್‌ ಕ್ಲಾಸ್‌ ರೈಲು ಪ್ರಯಾಣ ಮಾಡಬಹುದು. ಅಷ್ಟೇ ಅಲ್ಲ ತಮ್ಮ ಕ್ಷೇತ್ರ ಸುತ್ತಾಟಕ್ಕಾಗಿ ಮೈಲೇಜ್‌ ಭತ್ಯೆಯನ್ನು ಪಡೆಯಬಹುದಾಗಿದೆ.

     

  • ಗ್ಯಾರಂಟಿಯಿಂದ ಸರ್ಕಾರಿ ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ: ತೆಲಂಗಾಣ ಸಿಎಂ

    ಗ್ಯಾರಂಟಿಯಿಂದ ಸರ್ಕಾರಿ ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ: ತೆಲಂಗಾಣ ಸಿಎಂ

    – ಹಿಮಾಚಲದ ಬಳಿಕ ತೆಲಂಗಾಣ ಸರ್ಕಾರಕ್ಕೆ ಸಂಕಷ್ಟ
    – ಆರ್‌ಬಿಐನಿಂದ 4 ಸಾವಿರ ಕೋಟಿ ಕೈ ಸಾಲ

    ಹೈದರಾಬಾದ್‌: ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗಾಗಲೇ ಹಿಮಾಚಲ ಪ್ರದೇಶದಲ್ಲಿರುವ (Himachal Pradesh) ಕಾಂಗ್ರೆಸ್‌ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ತೆಲಂಗಾಣದಲ್ಲಿರುವ (Telangana) ರೇವಂತ್‌ ರೆಡ್ಡಿ (Revanth Reddy) ಸರ್ಕಾರವೂ ಸಂಕಷ್ಟಕ್ಕೆ ತುತ್ತಾಗಿದ್ದು ಸರ್ಕಾರಿ ನೌಕರರಿಗೆ ಸಂಬಳ ನೀಡಲು ದುಡ್ಡಿಲ್ಲ ಎಂದು ಹೇಳಿದೆ.

    ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರಿಂದ ಈಗ ಸರ್ಕಾರದ ಬಳಿ ಸಂಬಳ ಕೊಡುವುದಕ್ಕೂ ಹಣ ಇಲ್ಲ. ನಮ್ಮ ಸರ್ಕಾರ ಸಾಲದ ಹೊರೆ ಮತ್ತು ಇತರ ಕಾರಣಗಳಿಂದ ಹಣಕಾಸಿನ ಕೊರತೆಯನ್ನು ಎದುರಿಸುತ್ತಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಆರ್‌ಬಿಐಯಿಂದ 4 ಸಾವಿರ ಕೋಟಿ ರೂ. ಕೈ ಸಾಲ ಪಡೆದಿದ್ದೇವೆ ಎಂದು ಸಿಎಂ ರೇವಂತ್‌ ರೆಡ್ಡಿ ಅವರೇ ಅಧಿಕೃತವಾಗಿ ತಿಳಿಸಿದ್ದಾರೆ.

     

     

     

    ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಅವರು, ಹಣ ಇಲ್ಲದ ಕಾರಣ ರಾಜ್ಯ ನೌಕರರಿಗೆ ಪ್ರತೀ ತಿಂಗಳ ಆರಂಭದಲ್ಲಿ ವೇತನ (Salary) ನೀಡಲು ಕಷ್ಟವಾಗುತ್ತಿದೆ. ನೌಕರರ ತುಟ್ಟಿ ಭತ್ಯೆ (ಡಿಎ) ಬೇಡಿಕೆ ನ್ಯಾಯಯುತವಾದದ್ದೇ. ಆದರೆ ಪ್ರಸ್ತುತ ಕಠಿಣ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಾಗಿ ಒತ್ತಾಯಿಸಬೇಡಿ. ಮುಂದೆ ಸರ್ಕಾರದ ಹಣಕಾಸು ಪರಿಸ್ಥಿತಿಯ ಸಂಪೂರ್ಣ ವಿವರವನ್ನು ನೀಡುತ್ತೇನೆ. ಸರ್ಕಾರಿ ನೌಕರರು ಮುಂದಿನ ದಿನಗಳಲ್ಲಿ ತಮ್ಮ ಕೆಲಸಗಳನ್ನು ಸೇವೆಯಂತೆ ಮಾಡಬೇಕು. ನೌಕರರು ದಯವಿಟ್ಟು ಸರ್ಕಾರದ ಜೊತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಹೊಡೆತಕ್ಕೆ ತತ್ತರ – ದೇವಸ್ಥಾನದ ಹಣಕ್ಕೆ ಕೈ ಹಾಕಿತಾ ಹಿಮಾಚಲ ಸರ್ಕಾರ?

     

     

    ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ರೇವಂತ್‌ ರೆಡ್ಡಿ ರಾಜ್ಯದ ಕರಾಳ ಆರ್ಥಿಕ ಪರಿಸ್ಥಿತಿಯನ್ನು ತೆರೆದಿಟ್ಟಿದ್ದರು. ರಾಜ್ಯದ ಸಾಲದ ಮೊತ್ತ ಈಗ 7 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ರಾಜ್ಯದ ಮಾಸಿಕ ಆದಾಯ 18,500 ಕೋಟಿ ರೂ. ಇದೆ. ಅದರಲ್ಲಿ 6,500 ಕೋಟಿ ರೂ. ವೇತನ ಮತ್ತು ಪಿಂಚಣಿ ಪಾವತಿಗೆ ಹೋಗುತ್ತಿದೆ. 6,500 ಕೋಟಿ ರೂ. ಸಾಲ ಮತ್ತು ಬಡ್ಡಿ ಮರುಪಾವತಿಗೆ ಬೇಕು. ಉಳಿದ ಕೇವಲ 5,000 ಕೋಟಿ ರೂ. ಮೊತ್ತವನ್ನು ವಿವಿಧ ಯೋಜನೆಗಳಿಗೆ ಬಳಸಲಾಗುತ್ತಿದೆ. ಹೀಗಾಗಿ ಉಳಿದ ವೆಚ್ಚಗಳಿಗೆ ಸರ್ಕಾರದ ಬಳಿ ದುಡ್ಡೇ ಇಲ್ಲ ಎಂದಿದ್ದರು.

    2023ರ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 5 ಗ್ಯಾರಂಟಿಗಳನ್ನು ಪ್ರಕಟಿಸಿ ಅಧಿಕಾರಕ್ಕೆ ಏರಿತ್ತು. ಇದರಿಂದ ಉತ್ತೇಜನಗೊಂಡ ಕಾಂಗ್ರೆಸ್‌ ತೆಲಂಗಾಣ ಚುನಾವಣೆಯಲ್ಲೂ ಗ್ಯಾರಂಟಿ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಏರಿತ್ತು. ಇದನ್ನೂ ಓದಿ: ಗ್ಯಾರಂಟಿ ಹೊಡೆತಕ್ಕೆ ಹಿಮಾಚಲ ತತ್ತರ – ಮಂತ್ರಿಗಳು, ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ಸಂಬಳ ಕಟ್‌

    ಕೆಲ ತಿಂಗಳ ಹಿಂದೆ ಕಾಂಗ್ರೆಸ್‌ ಆಡಳಿತದ ಮತ್ತೊಂದು ರಾಜ್ಯವಾದ ಹಿಮಾಚಲಪ್ರದೇಶದಲ್ಲೇ ಇದೇ ಪರಿಸ್ಥಿತಿ ನಿರ್ಮಾಣವಾಗಿ, ಇತಿಹಾಸದಲ್ಲೇ ಮೊದಲ ಬಾರಿಗೆ ವೇತನ, ಪಿಂಚಣಿ ಪಾವತಿ ವಿಳಂಬವಾಗಿತ್ತು. ಸಿಎಂ, ಶಾಸಕರ ವೇತನ ಪಾವತಿ ಮುಂದೂಡಲಾಗಿತ್ತು.

     

  • ಶಾಸಕರ ಸಂಬಳ ಹೆಚ್ಚಳಕ್ಕೆ ತೀರ್ಮಾನ – ಈಗ ಎಷ್ಟಿದೆ? ಎಷ್ಟು ಏರಿಕೆ ಆಗುತ್ತೆ?

    ಶಾಸಕರ ಸಂಬಳ ಹೆಚ್ಚಳಕ್ಕೆ ತೀರ್ಮಾನ – ಈಗ ಎಷ್ಟಿದೆ? ಎಷ್ಟು ಏರಿಕೆ ಆಗುತ್ತೆ?

    ಬೆಂಗಳೂರು: ಶಾಸಕರ ವೇತನವನ್ನು (Salary Hike) 50%ನಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಇದರೊಂದಿಗೆ ಶಾಸಕರ ಕ್ಲಬ್‌ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ.

    ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ ಅಧಿವೇಶನದಲ್ಲಿ (Session) ಸರ್ಕಾರ ಮಂಡಿಸಲಿದೆ. ಇದಕ್ಕೆ ಒಪ್ಪಿಗೆ ಸಿಕ್ಕ ತಕ್ಷಣ ಜನಪ್ರತಿನಿಧಿಗಳ ವೇತನ 50% ಹೆಚ್ಚಾಗಲಿದೆ. ಇದರ ಜೊತೆ ಇತರೆ ಭತ್ಯೆಗಳ ಮೊತ್ತವೂ ಹೆಚ್ಚಲಿದೆ.

    ಕಳೆದ ಅಧಿವೇಶನದಲ್ಲಿ ಶಾಸಕರ ವೇತನ ಹೆಚ್ಚಳ ಮಾಡುವಂತೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಪ್ರಸ್ತಾಪ ಮಾಡಿದ್ದರು. ಮಸೂದೆಗೆ ಒಪ್ಪಿಗೆ ಸಿಕ್ಕಿದರೆ ಶಾಸಕರ ವೇತನ 80 ಸಾವಿರ ರೂ.ಗೆ ಏರಿಕೆಯಾಗಲಿದೆ.

    ಸದ್ಯ ಶಾಸಕರ ತಿಂಗಳ ವೇತನ/ಭತ್ಯೆ ಎಷ್ಟಿದೆ?
    * ವೇತನ – 40,000 ರೂ.
    * ಕ್ಷೇತ್ರ ಭತ್ಯೆ – 60,000 ರೂ.
    * ಪ್ರಯಾಣ ಭತ್ಯೆ – 60,000 ರೂ
    * ಆಪ್ತ ಸಹಾಯಕರ ವೇತನ – 20,000 ರೂ.
    * ದೂರವಾಣಿ ವೆಚ್ಚ – 20,000 ರೂ.
    * ಅಂಚೆ ವೆಚ್ಚ – 5000 ರೂ
    * ಒಟ್ಟು ಮೊತ್ತ – 2,05,000 ರೂ.

    ಪ್ರಸ್ತುತ ಇರುವ ಸಂಬಳ ಎಷ್ಟು?
    ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಪತಿ – 75,000 ರೂ.
    ಮುಖ್ಯಮಂತ್ರಿ – 75,000 ರೂ.
    ಉಪ ಸ್ಪೀಕರ್ ಮತ್ತು ಉಪ ಸಭಾಪತಿ – 60,000 ರೂ.
    ಕ್ಯಾಬಿನೆಟ್ ಸಚಿವರು – 60,000 ರೂ.
    ವಿಪಕ್ಷ ನಾಯಕರು – 60,000 ರೂ.
    ರಾಜ್ಯ ಸಚಿವ ದರ್ಜೆ – 50,000 ರೂ.
    ಸರ್ಕಾರ-ವಿಪಕ್ಷ ಮುಖ್ಯ ಸಚೇತಕ -50,000 ರೂ.
    ಎಂಎಲ್‌ಸಿ – 40,000 ರೂ.

  • ಕೇವಲ 11 ವರ್ಷದಲ್ಲಿ ಶೂನ್ಯದಿಂದ 5 ಕೋಟಿ ಸಂಪತ್ತು – ಕೋಟ್ಯಧಿಪತಿಯಾದ ಮಧ್ಯಮ ವರ್ಗದ ಟೆಕ್ಕಿ ಕಥೆ ಓದಿ

    ಕೇವಲ 11 ವರ್ಷದಲ್ಲಿ ಶೂನ್ಯದಿಂದ 5 ಕೋಟಿ ಸಂಪತ್ತು – ಕೋಟ್ಯಧಿಪತಿಯಾದ ಮಧ್ಯಮ ವರ್ಗದ ಟೆಕ್ಕಿ ಕಥೆ ಓದಿ

    ನವದೆಹಲಿ: ಕೇವಲ 11 ವರ್ಷದಲ್ಲಿ ಶೂನ್ಯದಿಂದ 5 ಕೋಟಿ ರೂ. ಸಂಪತ್ತು ಗಳಿಸುವ ಮೂಲಕ ದೆಹಲಿಯ (Delhi) ಗುರುಗ್ರಾಮದ ಟೆಕ್ಕಿಯೊಬ್ಬರು ಸುದ್ದಿಯಲ್ಲಿದ್ದಾರೆ.

    ಆಕ್ಸೆಂಚರ್ (Accenture) ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಗುರ್ಜೋತ್ ಅಹ್ಲುವಾಲಿಯಾ ತಮ್ಮ ಮೈಲಿಗಲ್ಲನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ಅವರು 2024 ಹಣಕಾಸು ವರ್ಷದ ಅತಿದೊಡ್ಡ ಸಾಧನೆ ಎಂದು ಬಣ್ಣಿಸಿದ್ದಾರೆ.


    ಹಣಕಾಸು ಟ್ರ್ಯಾಕಿಂಗ್ ಅಪ್ಲಿಕೇಶನ್‌ನ ಸ್ಕ್ರೀನ್‌ಶಾಟ್ ಅನ್ನು ಅವರು ಪೋಸ್ಟ್ ಮಾಡಿದ್ದಾರೆ. ಅಹ್ಲುವಾಲಿಯಾ ಅವರು 2.7 ಲಕ್ಷ ರೂ. ಸಾಲ ಇದ್ದರೆ ಇದ್ದರೆ 5 ಕೋಟಿ ರೂ. ಮೌಲ್ಯದ ಸಂಪತ್ತನ್ನು ಹೊಂದಿದ್ದಾರೆ.

    ವೃತ್ತಿಜೀವನದ ಪ್ರಗತಿ, ಶಿಸ್ತುಬದ್ಧ ಉಳಿತಾಯ ಮತ್ತು ಇಕ್ವಿಟಿ ಹೂಡಿಕೆಗಳೇ ಈ ಹಣಕಾಸು ಸಾಧನೆಗೆ ಕಾರಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ದರ್ಶನ್‌ರನ್ನು ಮದುವೆಗೆ ಯಾಕೆ ಕರೆದಿಲ್ಲ? – ಖಡಕ್ ಪ್ರಶ್ನೆಗೆ ಡಾಲಿ ಧನಂಜಯ್ ಉತ್ತರ

    ಈ ಪೋಸ್ಟ್‌ ಮಾಡಿದ ನಂತರ  ಹಲವು ಮಂದಿ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಅವರು, ನಾನು ಮಧ್ಯಮ ವರ್ಗದ ಕುಟುಂಬದಿಂದ ಬಂದಿದ್ದೇನೆ. ನನ್ನ ಶಿಕ್ಷಣಕ್ಕೆ ಪೋಷಕರು ಹಣ ನೀಡಿದ್ದರಿಂದ ಯಾವುದೇ ಸಾಲ ಇಲ್ಲ. ನಾನು ಪೋಷಕರ ಜೊತೆ ವಾಸಿಸುತ್ತಿರುವುದರಿಂದ ಬಾಡಿಗೆ ಪಾವತಿಸುತ್ತಿಲ್ಲ ಎಂದು ತಿಳಿಸಿದ್ದಾರೆ.


    ನಾನು ಯಾವುದೇ ರಿಯಲ್ ಎಸ್ಟೇಟ್, ಆಭರಣ ಇತ್ಯಾದಿಗಳಲ್ಲಿ ಹೂಡಿಕೆ ಮಾಡಿಲ್ಲ. ಮುಖ್ಯವಾಗಿ ಷೇರುಗಳು, ಮ್ಯೂಚುವಲ್‌ ಫಂಡ್‌, ಬಾಂಡ್‌ಗಳು, NPS, EPF, ಉಳಿತಾಯದಲ್ಲಿ ಹೂಡಿಕೆ ಮಾಡಿದ್ದೇನೆ ಎಂದಿದ್ದಾರೆ.

    ಇತ್ತೀಚಿಗೆ ಷೇರು ಮಾರುಕಟ್ಟೆಯಲ್ಲಿ ಕುಸಿತ ಉಂಟಾಗುತ್ತಿರುವುದರಿಂದ ನಿವ್ವಳ ಮೌಲ್ಯದಲ್ಲಿ 8-10% ಇಳಿಕೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಅಹ್ಲುವಾಲಿಯಾ ಅವರು ಷೇರು ಹೂಡಿಕೆಯ ಬಗ್ಗೆ ಪೋಸ್ಟ್‌ ಹಾಕುತ್ತಿರುತ್ತಾರೆ. ನಾನು ಈಕ್ವಿಟಿ, ವೈಯಕ್ತಿಕ ಹಣಕಾಸು, ಹಣದ ಹ್ಯಾಕ್‌ಗಳು ಮತ್ತು ನನ್ನ ಹವ್ಯಾಸಗಳ ಬಗ್ಗೆ ಬರೆಯುತ್ತೇನೆ ಎಂದು ತಿಳಿಸಿದ್ದಾರೆ.

  • 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ

    12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ

    ನವದೆಹಲಿ: ಕೇಂದ್ರ ಬಜೆಟ್‌ನಲ್ಲಿ (Union Budget) ಮಧ್ಯಮವರ್ಗ ಮತ್ತು ವೇತನಜೀವಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. 12 ಲಕ್ಷ ಆದಾಯದವರೆಗೂ ಯಾವುದೇ ತೆರಿಗೆ (Tax) ಪಾವತಿ ಮಾಡುವ ಅಗತ್ಯವಿಲ್ಲದೇ ರಿಬೆಟ್ ಪ್ರಕಟಿಸಲಾಗಿದೆ.

    ಬಜೆಟ್‌ನಲ್ಲಿ ಆದಾಯ ತೆರಿಗೆ ಸ್ಲಾಬ್‌ಗಳನ್ನು ಬದಲಿಸಲಾಗಿದೆ. ಇದಕ್ಕೆ 75ಸಾವಿರ ಸ್ಟಾಂಡರ್ಡ್ ಡಿಡಕ್ಷನ್ (Standard deduction) ಸೇರಿಸಿದರೆ 12.75 ಲಕ್ಷ ರೂಪಾಯಿಗೆ ತೆರಿಗೆ ಇರುವುದಿಲ್ಲ. ಆದರೆ ಷೇರು ಮತ್ತು ಸಾಲಪತ್ರಗಳಿಂದ ಬರುವ ಕ್ಯಾಪಿಟಲ್ ಗೈನ್ಸ್‌ ಪ್ರತ್ಯೇಕ ಆದಾಯ ಹೊರತುಪಡಿಸಿ ಸರಾಸರಿ ತಿಂಗಳಿಗೆ 1 ಲಕ್ಷ ರೂ. ಆದಾಯ ಹೊಂದಿರುವವರು ಯಾವುದೇ ತೆರಿಗೆ ಕಟ್ಟಬೇಕಿಲ್ಲ.

    ಕೇಂದ್ರದ ಈ ನಿರ್ಧಾರದಿಂದ ಸುಮಾರು 1 ಕೋಟಿ ಮಂದಿಗೆ ಅನುಕೂಲ ಆಗಲಿದೆ. ಹಳೆ ತೆರಿಗೆ ವಿಧಾನವನ್ನು ನಿರ್ಮಲಾ ಸೀತಾರಾಮನ್‌ ಮುಟ್ಟಲು ಹೋಗಿಲ್ಲ. ಈ ಮೂಲಕ ಜನರು ಸ್ವಯಂಪ್ರೇರಿತವಾಗಿ ಹೊಸ ತೆರಿಗೆ ಸ್ಲ್ಯಾಬ್‌ ಅಳವಡಿಸಿಕೊಳ್ಳಲು ಪ್ರೋತ್ಸಾಹ ನೀಡುತ್ತಿದ್ದಾರೆ. ಜನರ ಕೈಯಲ್ಲಿ ನಗದು ಹೆಚ್ಚಿಸಲು, ಹೊಸ ತೆರಿಗೆ ವಿಧಾನವನ್ನು ಆಕರ್ಷಣಿಯವಾಗಿಸಲು ಈ ನಿರ್ಣಯವನ್ನು ಕೇಂದ್ರ ತೆಗೆದುಕೊಂಡಿದೆ.

    ಕೇಂದ್ರದ ಈ ಐತಿಹಾಸಿಕ ನಿರ್ಧಾರದಿಂದ ಮಧ್ಯಮ ವರ್ಗದ ಈ ಉಳಿಕೆ ಆದಾಯ ಮ್ಯೂಚುವಲ್ ಫಂಡ್‌, ಸ್ಟಾಕ್ ಮಾರ್ಕೆಟ್, ರಿಯಲ್ ಎಸ್ಟೇಟ್ ರಂಗಕ್ಕೆ ಬಿಗ್ ಬೂಸ್ಟ್ ಸಿಗುವ ಸಾಧ್ಯತೆಯಿದೆ.

    12 ಲಕ್ಷಕ್ಕೆ ಯಾವುದೇ ತೆರಿಗೆ ಇಲ್ಲ ಹೇಗೆ?
    ನಿಮ್ಮ ಅದಾಯ 12 ಲಕ್ಷ ಇದೆ ಎಂದಿಟ್ಟುಕೊಳ್ಳಿ. ಹೊಸ ಆದಾಯ ತೆರಿಗೆ ಸ್ಲ್ಯಾಬ್‌ ಪ್ರಕಾರ 0-4 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಪಾವತಿಸುವ ಅಗತ್ಯವಿಲ್ಲ. 4 ಲಕ್ಷದಿಂದ 8 ಲಕ್ಷ ರೂ.ವರೆಗಿನ ಆದಾಯಕ್ಕೆ 5% ತೆರಿಗೆ ಇದೆ. ಅಂದರೆ 20 ಸಾವಿರ ರೂ. ತೆರಿಗೆ ಬೀಳುತ್ತದೆ.

    8 ಲಕ್ಷದಿಂದ 12 ಲಕ್ಷ ರೂ.ವರೆಗಿನ ಆದಾಯಕ್ಕೆ 10% ತೆರಿಗೆ ಇದೆ. ಈ ಲೆಕ್ಕಾಚಾರ ಮಾಡಿದರೆ 40 ಸಾವಿರ ರೂ. ತೆರಿಗೆ ಬೀಳುತ್ತದೆ. ಈಗ ಒಟ್ಟು ತೆರಿಗೆ ಲೆಕ್ಕ ಹಾಕಿದರೆ 60 ಸಾವಿರ ರೂ. ಆಗುತ್ತದೆ. ಆದರೆ ಸ್ಟ್ಯಾಡರ್ಡ್‌ ಡಿಡಕ್ಷನ್‌ ರಿಬೆಟ್ 75 ಸಾವಿರ ರೂ. ಇರುವ ಕಾರಣ ಒಟ್ಟು 12 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ. ಇದನ್ನೂ ಓದಿ: Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    ಸ್ಟ್ಯಾಂಡರ್ಡ್ ಡಿಡಕ್ಷನ್ ಅನ್ನು 50,000 ರೂ.ನಿಂದ 75,000 ರೂ.ಗೆ ಹೆಚ್ಚಿಸಲಾಗಿದೆ. ಅಂದರೆ ನಿಮ್ಮ ಒಟ್ಟಾರೆ ಆದಾಯದಲ್ಲಿ 75,000 ರೂ ಹಣವನ್ನು ಹೊರಗಿಡಬಹುದು. ಇದು ಹೊಸ ಆದಾಯ ತೆರಿಗೆ ಸ್ಲಾಬ್‌ ಬಳಸುವ ತೆರಿಗೆ ಪಾವತಿದಾರರಿಗೆ ಮಾತ್ರ ಅನ್ವಯವಾಗುತ್ತದೆ. ಹಳೆ ತೆರಿಗೆ ಸ್ಲ್ಯಾಬ್‌ನಲ್ಲಿ 50,000 ರೂ. ಸ್ಟ್ಯಾಂಡರ್ಡ್ ಡಿಡಕ್ಷನ್ ಇದ್ದು ಯಾವುದೇ ಬದಲಾವಣೆ ಮಾಡಿಲ್ಲ. ಇದನ್ನೂ ಓದಿ: ಮಧ್ಯಮ ವರ್ಗಕ್ಕೆ ಮತ್ತೊಂದು ಸಿಹಿ – ಎರಡನೇ ಮನೆಗೂ ತೆರಿಗೆ ಪಾವತಿಯಿಂದ ವಿನಾಯಿತಿ

    ಸ್ಟ್ಯಾಂಡರ್ಡ್ ಡಿಡಕ್ಷನ್ ಸಂಬಳದ ಆದಾಯದಿಂದ ಕಡಿತಗೊಳಿಸಲಾಗುವ ಸ್ಥಿರ ಮೊತ್ತವಾಗಿದ್ದು ಹೂಡಿಕೆ ಮಾಡಿದ್ದಕ್ಕೆ ಪುರಾವೆ ಇತ್ಯಾದಿ ದಾಖಲೆಗಳನ್ನು ನೀಡುವ ಅಗತ್ಯವಿಲ್ಲ.