Tag: salary

  • ಸ್ಟಾರ್ ನಟರ ಸಂಭಾವನೆ ಇಳಿಕೆ ಸೇರಿದಂತೆ ನಾನಾ ಬದಲಾವಣೆಗಾಗಿ ತೆಲುಗು ಚಿತ್ರೋದ್ಯಮ ಬಂದ್

    ಸ್ಟಾರ್ ನಟರ ಸಂಭಾವನೆ ಇಳಿಕೆ ಸೇರಿದಂತೆ ನಾನಾ ಬದಲಾವಣೆಗಾಗಿ ತೆಲುಗು ಚಿತ್ರೋದ್ಯಮ ಬಂದ್

    ಗಸ್ಟ್ 1 ರಿಂದ ತೆಲುಗು ಸಿನಿಮಾ ರಂಗವನ್ನು ಬಂದ್ ಮಾಡುವುದಾಗಿ ಎಟಿಎಫ್ಪಿಜಿ (ಆಕ್ಟಿವ್ ತೆಲುಗು ಫಿಲ್ಮ್ ಪ್ರೊಡ್ಯುಸರ್ಸ್ ಗಿಲ್ಡ್) ತಿಳಿಸಿದೆ. ಕೊರೊನಾ ನಂತರದಲ್ಲಿ ತೆಲುಗು ಚಿತ್ರೋದ್ಯಮ ಭಾರೀ ನಷ್ಟವನ್ನು ಅನುಭವಿಸುತ್ತಿದೆಯಂತೆ. ಈಗಾಗಲೇ ಹಲವಾರು ಚಿತ್ರಮಂದಿರಗಳು ಮುಚ್ಚಿದ್ದು, ಮತ್ತಷ್ಟು ಚಿತ್ರಮಂದಿರಗಳು ಮುಚ್ಚುವ ಹಂತದಲ್ಲಿವೆ. ಜೊತೆಗೆ ನಾನಾ ಸಮಸ್ಯೆಗಳಿಂದಾಗಿ ಸಿನಿಮಾಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ. ಇಂತಹ ಅನೇಕ ಕಾರಣಗಳಿಂದಾಗಿ ಚಿತ್ರೋದ್ಯಮ ಬಂದ್ ಮಾಡಲು ನಿರ್ಧರಿಸಲಾಗಿದೆ.

    ಕೊರೋನಾ ನಂತರ ಸಿನಿಮಾ ಟಿಕೆಟ್ ದರದ ನಿಯಂತ್ರಣ, ಸ್ಟಾರ್ ನಟರ ಸಂಭಾವನೆ, ಮಿತಿಮೀರಿದ ಖರ್ಚು ಹಾಗೂ ಸರಕಾರದ ಕೆಲ ನಡೆಗಳಿಂದಾಗಿ ನಿರ್ಮಾಪಕರು ಸಂಕಷ್ಟಕ್ಕೆ ಸಿಲುಕಿದ್ದಾರಂತೆ. ಅಲ್ಲದೇ, ತೆಲುಗಿನ ಕೆಲ ಸ್ಟಾರ್ ನಟರು ಸಂಭಾವನೆಯನ್ನು ಹೆಚ್ಚಿಸಿಕೊಂಡು ನಿರ್ಮಾಪಕರಿಗೆ ಹೊರೆಯಾಗಿದ್ದಾರಂತೆ. ಇವೆಲ್ಲವೂ ಸರಿ ಹೋಗುವತನಕ ಸಿನಿಮಾ ಶೂಟಿಂಗ್ ನಡೆಸಬಾರದು ಎಂದು ನಿರ್ಮಾಪಕರಿಗೆ ತಿಳಿಸಲಾಗಿದೆ. ಹೊಸ ಸಿನಿಮಾ ಶುರು ಮಾಡಬಾರದು ಎಂದೂ ತಿಳಿಸಲಾಗಿದೆ. ಇದನ್ನೂ ಓದಿ:ರಾಕೇಶ್ ಬಾಪಟ್ ಜೊತೆ ಬ್ರೇಕಪ್ ಮಾಡಿಕೊಂಡ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ

    ಮೊದ ಮೊದಲು ಸರಕಾರ ಮತ್ತು ಸಿನಿಮಾ ರಂಗದ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಟಿಕೆಟ್ ದರದ ವಿಚಾರದಲ್ಲಂತೂ ಸರಕಾರ ಮತ್ತು ನಿರ್ಮಾಪಕರ ನಡುವೆ ಹಲವು ಸಭೆಗಳು ನಡೆದರೂ, ಅದನ್ನು ಸರಿ ಮಾಡಲು ಆಗದೇ ಇರುವಂತಹ ವಾತಾವರಣ ಅಲ್ಲಿ ಸೃಷ್ಟಿಯಾಗಿತ್ತು. ಇದರಿಂದ ಬೇಸತ್ತ ಹಲವು ನಿರ್ಮಾಪಕರು ಸಿನಿಮಾ ಮಾಡುವುದನ್ನೆ ನಿಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ ಬಜೆಟ್ ಕೂಡ ಹಿಗ್ಗುತ್ತಿರುವುದರಿಂದ ಬಂದ್ ಮಾಡುವುದು ಅನಿವಾರ್ಯ ಎಂದು ನಿರ್ಮಾಪಕರ ಗಿಲ್ಡ್ ಪತ್ರಿಕಾ ಪ್ರಕಟಣೆಯನ್ನೂ ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ‘ಬಿಗ್ ಬಾಸ್’ ನಿರೂಪಣೆಗೆ ಸಲ್ಮಾನ್ ಖಾನ್ ಪಡೆಯೋದು 350 ಕೋಟಿ.  ಕಿಚ್ಚ ಸುದೀಪ್ ಸಂಭಾವನೆ ಎಷ್ಟು?

    ‘ಬಿಗ್ ಬಾಸ್’ ನಿರೂಪಣೆಗೆ ಸಲ್ಮಾನ್ ಖಾನ್ ಪಡೆಯೋದು 350 ಕೋಟಿ. ಕಿಚ್ಚ ಸುದೀಪ್ ಸಂಭಾವನೆ ಎಷ್ಟು?

    ಹಿಂದಿ ಬಿಗ್ ಬಾಸ್ ಕಾರ್ಯಕ್ರಮವನ್ನು ನಡೆಸಿಕೊಡಲು ಈ ಹಿಂದೆ ಸಲ್ಮಾನ್ ಖಾನ್ 350 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದಾರೆ ಎನ್ನಲಾಗುತ್ತಿದೆ.  ಇದೀಗ ಹಿಂದಿ ಬಿಗ್ ಬಾಸ್ ಸೀಸನ್ 16ಕ್ಕೆ ಕ್ಷಣಗಣನೆ ಶುರುವಾಗಿದ್ದು, ಮತ್ತೆ ಸಲ್ಮಾನ್ ಖಾನ್ ಸಂಭಾವನೆಯ ಬಗ್ಗೆ ಚರ್ಚೆ ಶುರುವಾಗಿದೆ. ಈ ಬಾರಿ ಓಟಿಟಿ ಮತ್ತು ಟಿವಿಯಲ್ಲಿ ಪ್ರತ್ಯೇಕ ಕಾರ್ಯಕ್ರಮವನ್ನು ನಡೆಸಿ ಕೊಡಬೇಕಾಗಿದ್ದರಿಂದ ಸಲ್ಮಾನ್ ಖಾನ್ ಬರೋಬ್ಬರಿ ಸಾವಿರ ಕೋಟಿ ಸಂಭಾವನೆ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಲ್ಮಾನ್ ಖಾನ್ ಅಷ್ಟೊಂದು ಸಂಭಾವನೆ ಕೇಳಿದ್ದಾರೆ ಎಂದು ಸುದ್ದಿ ಆಗುತ್ತಿದ್ದಂತೆಯೇ ಕನ್ನಡದಲ್ಲಿ ಬಿಗ್ ಬಾಸ್ ನಡೆಸಿಕೊಡುವ ಕಿಚ್ಚ ಸುದೀಪ್ ಅವರ ಸಂಭಾವನೆ ಬಗ್ಗೆಯೂ ಸ್ಯಾಂಡಲ್ ವುಡ್ ನಲ್ಲಿ ಚರ್ಚೆ ಶುರುವಾಗಿದೆ. ಹಿಂದಿ ಬಿಗ್ ಬಾಸ್ ಮತ್ತು ಕನ್ನಡದ ಬಿಗ್ ಬಾಸ್ ಬಗ್ಗೆ ಹೋಲಿಕೆ ಮಾಡುವುದಕ್ಕೆ ಸಾಧ್ಯವಿಲ್ಲವಾದರೂ, ಕಿಚ್ಚನ ಸಂಭಾವನೆ ಕೂಡ ಕಡಿಮೆ ಇಲ್ಲ ಎನ್ನುತ್ತಾರೆ ಆಪ್ತರು. ಸುದೀಪ್ ಕೂಡ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ನೂರು ಕೋಟಿಯಲ್ಲಿ ಬೇರೆ ಬೇರೆ ಲೆಕ್ಕಾಚಾರಗಳು ಇರುತ್ತವೆ ಎನ್ನುತ್ತವೆ ಮೂಲಗಳು. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಹಿಂದಿಯಲ್ಲಿ ಒಂದು ರೀತಿಯಲ್ಲಿ ಸಂಭಾವನೆ ಫಿಕ್ಸ್ ಆದರೆ, ಕನ್ನಡದಲ್ಲಿ ಬೇರೆ ರೀತಿಯ ಲೆಕ್ಕಾಚಾರಗಳನ್ನು ಹಾಕಿ ಸಂಭಾವನೆ ನಿಗದಿ ಮಾಡಲಾಗುತ್ತದೆ ಅಂತೆ. ಹಾಗಾಗಿ ಕನ್ನಡದಲ್ಲಿ ಒಂದೇ ಸಲ ನೂರು ಕೋಟಿ ಕೊಡುವುದಕ್ಕೆ ಸಾಧ್ಯವೇ ಇಲ್ಲ ಎನ್ನುತ್ತವೆ ಮೂಲಗಳು. ಬಿಗ್ ಬಾಸ್ ಮಾತ್ರವಲ್ಲ, ರಿಯಾಲಿಟಿ ಶೋಗಳನ್ನು ನಡೆಸಿಕೊಡುವ ಕಲಾವಿದರ ಸಂಭಾವನೆ ನಿಗದಿ ಆಗುವುದು, ಕೇವಲ ಆ ಶೋಗೆ ಮಾತ್ರ ಆಗಿರುವುದಿಲ್ಲ. ಅವರ ಸಿನಿಮಾಗಳು ಸೇರಿದಂತೆ ಒಟ್ಟಾರೆ ಸಂಭಾವನೆ ನಿಗದಿ ಆಗುತ್ತವಂತೆ. ಹಾಗಾಗಿ ಕಿಚ್ಚ ಸುದೀಪ್ ಕೂಡ ನೂರಾರು ಕೋಟಿ ಸಂಭಾವನೆ ಪಡೆಯುವುದರಲ್ಲಿ ಅನುಮಾನವಿಲ್ಲ ಎಂದು ಹೇಳಲಾಗುತ್ತಿದೆ.

    ಆದರೆ, ವಾಹಿನಿಯಾಗಲಿ ಮತ್ತು ಸುದೀಪ್ ಅವರಾಗಲಿ ಈ ಬಗ್ಗೆ ಯಾವತ್ತೂ ಮಾತೂ ಆಡಿಲ್ಲ. ಅಧಿಕೃತವಾಗಿ ಘೋಷಣೆಯನ್ನೂ ಮಾಡಿಲ್ಲ. ಆಪ್ತರಲ್ಲಿ ಮಾತ್ರ ಈ ರೀತಿಯ ಗುಸುಗುಸು ಕೇಳಬಹುದಷ್ಟೇ. ಏನೇ ಆಗಲಿ, ನೂರಾರು ಕೋಟಿ ಸಂಭಾವನೆ ಪಡೆದುಕೊಂಡು ಕಾರ್ಯಕ್ರಮ ನಡೆಸಿಕೊಡುವಂತಹ ಅದೃಷ್ಟ ಸಿಗುವುದು ಕೆಲವೇ ಕೆಲವು ಜನರಿಗೆ. ಅದರಲ್ಲಿ ಸುದೀಪ್ ಕೂಡ ಒಬ್ಬರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪೌರ ಕಾರ್ಮಿಕರು ರಜೆ ಹಾಕಿದ್ರೆ ಸಂಬಳವೇ ಕಟ್- ರೆಸ್ಟ್‌ಲೆಸ್ ವರ್ಕರ್ಸ್‍ಗೆ ಇದೆಂಥಾ ಅನ್ಯಾಯ..?

    ಪೌರ ಕಾರ್ಮಿಕರು ರಜೆ ಹಾಕಿದ್ರೆ ಸಂಬಳವೇ ಕಟ್- ರೆಸ್ಟ್‌ಲೆಸ್ ವರ್ಕರ್ಸ್‍ಗೆ ಇದೆಂಥಾ ಅನ್ಯಾಯ..?

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತೀ ಹೆಚ್ಚು ವಿಶ್ರಾಂತಿಯೇ ಪಡೆಯದೇ ಕರ್ತವ್ಯ ಮಾಡುವವರಲ್ಲಿ ಅಗ್ರ ಗಣ್ಯರು ಅಂದ್ರೆ ಪಾಲಿಕೆ ಪೌರಕಾರ್ಮಿಕರು. ಇವರಿಗೆ ಒಂದು ವೀಕಾಫ್ ಇರಲ್ಲ. ಸಣ್ಣ ಜ್ವರ, ಮನೆಯಲ್ಲಿ ಯಾರಾದ್ರೂ ಸತ್ರು ಅಂತ ರಜೆ ಹಾಕಿದ್ರೆ ಮುಗಿತು ಸಂಬಳ ಕಟ್.

    ಅಚ್ಚರಿಯೆನ್ನಿಸಿದ್ರು ನಿಜ. ಇವರು ವಾರದ 7 ದಿನ ಪಕ್ಕಾ ಕೆಲಸಕ್ಕೆ ಹಾಜರಾಗುತ್ತಾರೆ. ಇದಕ್ಕೆ ಸಾಕ್ಷಿ ರಸ್ತೆಗಳು, ಮನೆಯಿಂದ ಖಾಲಿ ಆಗುವ ಕಸವೇ ಸಾಕ್ಷಿ. ಹೀಗಿರುವಾಗ ಅನಿವಾರ್ಯತೆ ಎಲ್ಲರಿಗೂ ಇರುತ್ತೆ. ಅಪ್ಪಿ ತಪ್ಪಿ ಒಂದು ದಿನ ರಜೆ ಹಾಕಿದರೂ ಸಂಬಳಕ್ಕೆ ಕತ್ತರಿ. ಬಯೋ ಮೆಟ್ರಿಕ್ ಹಾಕದಿದ್ದರೆ ಸಂಬಳ ಕೊಡಲ್ಲ. ಗಂಡನ ಸಾವಿನ ಹಿನ್ನೆಲೆಯಲ್ಲಿ ತಿಂಗಳು ರಜಾ ಹಾಕಿದ್ರು ಸಂಬಳ ಒಂದೂ ದಿನದು ಕೊಡದೇ ಕಟ್ ಮಾಡುತ್ತಾರೆ.

    ಈ ಕಾಟ ಬಿಬಿಎಂಪಿಗೆ ಸೀಮಿತವಾಗಿಲ್ಲ. ಅದು ಪಿಡಬ್ಲ್ಯೂಡಿ ಸ್ವಚ್ಛತಾ ಸಿಬ್ಬಂದಿಗೂ ಇದೆ. ಶಕ್ತಿಸೌಧ ಸುತ್ತಮುತ್ತ ಸ್ವಚ್ಛತೆ ಮಾಡುವ ಸಿಬ್ಬಂದಿಗೆ ಕೂಡ ಇದೇ ಗತಿ. ಹಾಗಂತ ಇವರಿಗೆ ಮತ್ತೊಂದು ಐಡಿಯಾ ಮಾಡಿದ್ದಾರೆ. ಈ ಪ್ರಕಾರ ಬುಧವಾರ, ಭಾನುವಾರ 11 ಗಂಟೆವರೆಗೂ ಕೆಲಸ ಆಮೇಲೆ ರಜೆ ಅಂತಾ ಹೇಳಿದ್ದಾರೆ. ಹೀಗಾಗಿ ಒಂದು ಊರು, ಒಂದ್ ಫಂಕ್ಷನ್, ನೆಂಟರ ಮನೆಗೆ ಒಂದು ದಿನ ಹೋಗಿಲ್ಲ, ಉಳಿದಿಲ್ಲ. ಇದು ಬಿಟ್ಟು ಕಾಯಿಲೆ ಬಂದರೂ ರಜೆ ಹಾಕುವಂತಿಲ್ಲ. ಅದಕ್ಕೂ ರೂಲ್ಸ್ ಇದೆ. ಅದುವೇ ಇಎಸ್‍ಐ ಹೋಗಿ ಆರೋಗ್ಯ ಸಂಬಂಧ ಚೀಟಿ ಪಡೆಯಬೇಕು. ಆಮೇಲೆ ಬೇಕಾದರೆ ಬೇರೆ ಯಾವುದೇ ಸಣ್ಣ ಪುಟ್ಟ ಆಸ್ಪತ್ರೆ ತೊರಿಸಬಹುದು. ಮನೆ ಹತ್ತಿರ ಗೊತ್ತು ಅಂತಾ ಹೋಗಿ ತೋರಿಸಿ ಚೀಟಿ ಕೊಟ್ಟರೆ ಒಪ್ಪುವ ಮಾತೇ ಇಲ್ಲ. ರಜೆಗೆ ಸಂಬಳ ಕಟ್ ಇಲ್ಲ ಸಜೆ ಫಿಕ್ಸ್.

    16800 ಖಾಯಂ ಪೌರಕಾರ್ಮಿಕರಿಲ್ಲವಾದ್ರೆ ನಿಜ ರಸ್ತೆ, ಚರಂಡಿ, ಮನೆ ಕಸ ಕ್ಲಿಯರ್ ಆಗಲ್ಲ ಒಪ್ಪಿಕೊಳ್ಳೋನ. ಆದರೆ ಹಾಗಂತ ಕಾಯಿಲೆ, ಜ್ವರಕ್ಕೂ ಚಿಕಿತ್ಸೆ ಪಡೆದಾಗ ಚೀಟಿ ಕೊಟ್ರು ಸಂಬಳ ಕೊಡದ ಈ ಸ್ಥಿತಿ ಯಾರಿಗೂ ಬೇಡ. ಅದಕ್ಕೆ ಪೌರಕಾರ್ಮಿಕರ ತ್ಯಾಗಕ್ಕೆ ಸರಿ ಸಾಟಿಯೇ ಇಲ್ಲ. ಒಟ್ಟಿನಲ್ಲಿ ಇನ್ನಾದರೂ ಪಾಲಿಕೆ ಅವರ ರಜೆ ಹಾಗೂ ಕಾಯಿಲೆ ಸಂಬಂಧಿತ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ವಿದ್ಯಾರ್ಥಿಗಳು ತರಗತಿಗೆ ಬರುತ್ತಿಲ್ಲ ಎಂದು 24 ಲಕ್ಷ ರೂ. ಸಂಬಳವನ್ನೇ ಹಿಂದಿರುಗಿಸಿದ ಪ್ರಾಧ್ಯಾಪಕ

    ವಿದ್ಯಾರ್ಥಿಗಳು ತರಗತಿಗೆ ಬರುತ್ತಿಲ್ಲ ಎಂದು 24 ಲಕ್ಷ ರೂ. ಸಂಬಳವನ್ನೇ ಹಿಂದಿರುಗಿಸಿದ ಪ್ರಾಧ್ಯಾಪಕ

    ಪಾಟ್ನಾ: ವಿದ್ಯಾರ್ಥಿಗಳು ತರಗತಿಗೆ ಬರುತ್ತಿಲ್ಲ. ಹೀಗಾಗಿ ನನಗೆ ಸಂಬಳ ಬೇಡ ಎಂದು ಪ್ರಾಧ್ಯಾಪಕರೊಬ್ಬರು 24 ಲಕ್ಷ ರೂ. ಸಂಬಳವನ್ನು ಹಿಂದಿರುಗಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.

    ಪಾಠ ಮಾಡಲು ವಿದ್ಯಾರ್ಥಿಗಳೇ ಇಲ್ಲ. ಹಾಗಾದರೆ ಸಂಬಳ ಏಕೆ? ನನಗೆ ಸಂಬಳ ಬೇಡ ಎಂದು ಪ್ರಾಧ್ಯಾಪಕರೊಬ್ಬರು ತಮ್ಮ ಎರಡು ವರ್ಷ ಮತ್ತು ಒಂಬತ್ತು ತಿಂಗಳ ಸಂಬಳವನ್ನು (23.8 ಲಕ್ಷ ರೂ.) ಹಿಂದಿರುಗಿಸಿದ್ದಾರೆ.

    TEACHERS TRANSFER

    ಮುಜಾಫರ್‌ಪುರದ ನಿತೀಶ್ವರ್ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಲಲ್ಲನ್ ಕುಮಾರ್ ಅವರು ಸಂಬಳವನ್ನು ಹಿಂದಿರುಗಿಸಿದ್ದಾರೆ. ನನ್ನನ್ನು ಬೇರೆ ಕಾಲೇಜಿಗೆ ವರ್ಗಾಯಿಸದಿದ್ದರೆ ʼಶೈಕ್ಷಣಿಕ ಸಾವಿನʼ ಭಯ ಕಾಡುತ್ತದೆ ಎಂದು ಹೇಳಿಕೊಂಡಿದ್ದಾರೆ.

    ಸ್ನಾತಕೋತ್ತರ ತರಗತಿಗಳಿಗೆ ಪಾಠ ಮಾಡುವ ಕಾಲೇಜುಗಳಿಗೆ ನನ್ನನ್ನು ನಿಯೋಜಿಸಲಿಲ್ಲ. ಆಯ್ಕೆ ಪ್ರಕ್ರಿಯೆಯಲ್ಲಿ ಕಡಿಮೆ ರ‍್ಯಾಂಕ್‌ ಪಡೆದವರನ್ನೇ ಅಂತಹ ಕಾಲೇಜುಗಳಿಗೆ ನಿಯೋಜಿಸಲಾಗಿದೆ. ನಾನಿರುವ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ಬರುತ್ತಿಲ್ಲ. ವರ್ಗಾವಣೆ ಪಟ್ಟಿಯಿಂದ ಹಲವು ಬಾರಿ ನನ್ನ ಹೆಸರನ್ನು ತೆಗೆದು ಹಾಕಲಾಗಿದೆ ಎಂದು ಪ್ರಾಧ್ಯಾಪಕ ಲಲ್ಲನ್‌ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ಬೇಡಿಕೆ ಈಡೇರದಿದ್ದಲ್ಲಿ ಧರಣಿ ಕೂರುತ್ತೇನೆ ಎಂದು ತಿಳಿಸಿದ್ದಾರೆ.

    ಪ್ರಾಧ್ಯಾಪಕರ ಆರೋಪ ಕುರಿತು ಮಾತನಾಡಿರುವ ಕಾಲೇಜು ಪ್ರಾಂಶುಪಾಲ ಮನೋಜ್ ಕುಮಾರ್, ಶೂನ್ಯ ಹಾಜರಾತಿ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಎರಡು ವರ್ಷಗಳಿಂದ, ಕೊರೊನಾ ಸಾಂಕ್ರಾಮಿಕ ಕಾರಣದಿಂದಾಗಿ ತರಗತಿಗಳು ಸರಿಯಾಗಿ ನಡೆಯುತ್ತಿಲ್ಲ. ವರ್ಗಾವಣೆ ಬೇಕಿದ್ದರೆ ಲಲ್ಲನ್‌ ಕುಮಾರ್‌ ಅವರು ನಮ್ಮನ್ನು ನೇರವಾಗಿಯೇ ಕೇಳಬಹುದಿತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

    ತರಗತಿಗಳು ನಡೆಯುತ್ತಿಲ್ಲ ಎಂಬ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಈ ಬಗ್ಗೆ ವಿಚಾರಣೆ ನಡೆಸುತ್ತೇವೆ. ಪ್ರೊಫೆಸರ್ ಲಲ್ಲನ್ ಕುಮಾರ್ ತಮ್ಮ ವರ್ಗಾವಣೆ ಬೇಡಿಕೆಯ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಅವರು ನಮಗೆ ಚೆಕ್ ನೀಡಿದ್ದಾರೆ. ಆದರೆ ನಾವು ಅದನ್ನು ಸ್ವೀಕರಿಸಿಲ್ಲ ಎಂದು ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಬಿಹಾರ ವಿಶ್ವವಿದ್ಯಾಲಯದ ಉಪಕುಲಪತಿ ಆರ್.ಕೆ.ಠಾಕೂರ್ ತಿಳಿಸಿದ್ದಾರೆ.

    ಪಿಎಚ್‌ಡಿ ಪದವಿ ಪಡೆದಿರುವ ಲಲ್ಲನ್ ಕುಮಾರ್ ಅವರು ದೆಹಲಿ ವಿಶ್ವವಿದ್ಯಾಲಯ ಮತ್ತು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುತ್ತಿಗೆ, ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸುಧಾಕರ್

    ಗುತ್ತಿಗೆ, ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸುಧಾಕರ್

    ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

    ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಸುಧಾಕರ್, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು. ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಭ್ರಷ್ಟಾಚಾರದ ಇನ್ನೊಂದು ಮುಖವೇ ಕಾಂಗ್ರೆಸ್: ರೇಣುಕಾಚಾರ್ಯ

    ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಖಾಯಂ ನೌಕರರಿಗೆ ಕೊಡುವಷ್ಟೇ ವೇತನವನ್ನು ನಮಗೂ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ 49 ಕಾರ್ಯಕ್ರಮಗಳನ್ನು ನಿರ್ದಿಷ್ಟ ಸಮಯದ ತನಕ ಮಾಡಲಿದೆ. ಹೀಗಾಗಿ ಅವರನ್ನು ಖಾಯಂ ನೌಕರರನ್ನಾಗಿ ಮಾಡಿಕೊಳ್ಳಲು ಅಡಚಣೆಗಳಿವೆ. ಅಷ್ಟೇ ಅಲ್ಲದೆ, ಖಾಯಂ ನೌಕರರಂತೆ ಸಮಾನ ವೇತನ ಕೊಡಲು ಸಾಧ್ಯವಾಗುತ್ತಿಲ್ಲ. ಆದರೆ ಈಗಿರುವ ವೇತನವನ್ನು ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

    ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಆರೋಗ್ಯ ವಿಮೆ ವಿಸ್ತರಣೆ, 10 ದಿನಗಳ ವೇತನ ಸಹಿತ ರಜೆಯ ಬೇಡಿಕೆಗಳನ್ನು ಇಟ್ಟಿದ್ದಾರೆ. ಇದಕ್ಕೆ ಸರ್ಕಾರ ಸಕರಾತ್ಮಕವಾಗಿ ಸ್ಪಂದಿಸಲಿದೆ. ಪ್ರತಿಭಟನಾ ನಿರತ ನೌಕಕರು ಕೇಳಿರುವ ಎಲ್ಲಾ ಬೇಡಿಕೆಗಳಿಗೆ ಸ್ಪಂದಿಸುವ ಪ್ರಮಾಣಿಕ ಪ್ರಯತ್ನ ಮಾಡಲಿದ್ದೇವೆ. ಸರ್ಕಾರ ಅವರ ಪರವಾಗಿ ಕೆಲಸ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಿರತೆ ದಾಳಿಗೆ ಬಲಿಯಾದ ತನ್ನ ಕರುವನ್ನು ಪತ್ತೆಹಚ್ಚಿದ ತಾಯಿ!

    ಸರ್ಕಾರಿ ಆರೋಗ್ಯ ವ್ಯವಸ್ಥೆಯ ಬಗ್ಗೆ ಜನರು ಬಹಳ ವಿಶ್ವಾಸ ಇಟ್ಟಿದ್ದಾರೆ. ಕೇವಲ ಮೂಲಭೂತ ಸೌಲಭ್ಯಗಳಿಂದ ಮಾತ್ರ ಜನರಿಗೆ ವಿಶ್ವಾಸ ಬರುವುದಿಲ್ಲ. ಬದಲಾಗಿ ಇಂತಹ ನೌಕರರಿಂದ ಆರೋಗ್ಯ ಸೇವೆಗೆ ಉತ್ತಮ ಹೆಸರು ಬಂದಿದೆ. ಅವರಿಗೆ ನೋವು ಕೊಟ್ಟು ನಾವು ಮುಂದುವರಿಯುವುದು ಅಸಾಧ್ಯ. ಕೆಲವು ಬೇಡಿಕೆ ಈಡೇರಿಸಲು ಕಾನೂನಾತ್ಮಕ, ತಾಂತ್ರಿಕ ತೊಡಕುಗಳಿವೆ. ಇವೆಲ್ಲವನ್ನೂ ಸಮರ್ಪಕವಾಗಿ ನಿಭಾಯಿಸಿ, ಸಾಧ್ಯವಿರುವ ಎಲ್ಲಾ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ. ದೇಶದಲ್ಲೇ ಆರೋಗ್ಯ ಸೇವೆ ನೀಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಅದಕ್ಕೆ ಪೂರಕವಾಗಿ ಕೆಲಸ ನಡೆಯಬೇಕು. ನೌಕರರು ಮುಷ್ಕರ ಕೈ ಬಿಟ್ಟು ಶೀಘ್ರದಲ್ಲೇ ಸೇವೆಗೆ ಹಿಂದಿರುಗಬೇಕು ಎಂದು ಸಚಿವರು ಮನವಿ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • 45,000 ಸಾವಿರ ಬದಲಿಗೆ 1.42 ಕೋಟಿ ಸ್ಯಾಲರಿ ಹಾಕಿದ ಕಂಪನಿ – ಹಣ ಜೊತೆ ಉದ್ಯೋಗಿ ಎಸ್ಕೇಪ್

    45,000 ಸಾವಿರ ಬದಲಿಗೆ 1.42 ಕೋಟಿ ಸ್ಯಾಲರಿ ಹಾಕಿದ ಕಂಪನಿ – ಹಣ ಜೊತೆ ಉದ್ಯೋಗಿ ಎಸ್ಕೇಪ್

    ಸ್ಯಾಂಟಿಯಾಗೊ: ಚಿಲಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗೆ ಕಳೆದ ತಿಂಗಳು 43 ಸಾವಿರ ರೂಪಾಯಿ ಸಂಬಳದ ಬದಲಿಗೆ ಆಕಸ್ಮಿಕವಾಗಿ 286 ಬಾರಿ 1.42 ಕೋಟಿ ರೂ.ಯನ್ನು ಕಂಪನಿ ಪಾವತಿಸಿದೆ. ಇದೇ ಖುಷಿಯಲ್ಲಿ ವ್ಯಕ್ತಿ ಕಂಪನಿಗೆ ರಾಜೀನಾಮೆ ನೀಡಿ ಹಣದ ಜೊತೆಗೆ ಎಸ್ಕೇಪ್ ಆಗಿದ್ದಾನೆ.

    ಚಿಲಿಯಲ್ಲಿ ಕೋಲ್ಡ್ ಕಟ್‌ಗಳ ಅತಿದೊಡ್ಡ ಉತ್ಪಾದಕ ಸಂಸ್ಥೆ ಕನ್ಸೋರ್ಸಿಯೊ ಇಂಡಸ್ಟ್ರಿಯಲ್ ಡಿ ಅಲಿಮೆಂಟೋಸ್ (ಸಿಯಾಲ್) ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ 45,000 ಸಾವಿರ ರೂಪಾಯಿ (500,000 ಪೆಸೊ) ಸಂಬಳದ ಬದಲಿಗೆ 1.42 ಕೋಟಿ ರೂ. (165,398,851 ಚಿಲಿಯ ಪೆಸೊ)ಯನ್ನು ಕಂಪನಿ ಪಾವತಿಸಿದೆ. ನಂತರ ಕಂಪನಿಯ ಆಡಳಿತವು ಅವರ ದಾಖಲೆಗಳನ್ನು ಪರಿಶೀಲಿಸಿದಾಗ ಅದರಲ್ಲಿ ದೋಷ ಕಂಡಿದೆ. ಹೀಗಾಗಿ ಕಂಪನಿಯು ಉದ್ಯೋಗಿಗೆ ಹಣ ಹಿಂದಿರುಗಿಸುವಂತೆ ಮನವಿ ಮಾಡಿದೆ. ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಸರ್ಕಾರದಿಂದ ಗುಡ್‍ನ್ಯೂಸ್- 2,500 ರೂ. ಗೌರವ ಧನ ಹೆಚ್ಚಿಸಿ ಆದೇಶ

    ಬಳಿಕ ಬ್ಯಾಂಕ್‌ಗೆ ಭೇಟಿ ನೀಡಿ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ ವ್ಯಕ್ತಿ, ಕರೆ ಮಾಡಿದರೆ ನಾನು ನಿದ್ದೆ ಮಾಡುತ್ತಿದ್ದೆ. ಶೀಘ್ರದಲ್ಲಿಯೇ ಬಂದು ಹಣ ಪಾವತಿಸುತ್ತೇನೆ ಎಂದು ಹೇಳಿದ್ದನು. ಆದರೆ ನಂತರ ಕಂಪನಿ ನೀಡಿದ ಸಂದೇಶಗಳಿಗೆ ಪ್ರತಿಕ್ರಿಯಿಸಲಿಲ್ಲ. ಅಲ್ಲದೇ ಜೂನ್ 2ರಂದು ತನ್ನ ಕೆಲಸಕ್ಕೆ ರಾಜೀನಾಮೆ ನೀಡಿ, ಹಣದೊಂದಿಗೆ ನಾಪತ್ತೆಯಾಗಿದ್ದಾನೆ. ಇದೀಗ ಹಣವನ್ನು ವಸೂಲಿ ಮಾಡಲು ಕಂಪನಿಯು ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್‌ – ಯಾವುದೇ ಫೀಸ್‌ ಕಟ್ಟುವ ಅಗತ್ಯವಿಲ್ಲ

    Live Tv

  • ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ – 921 ಕೋಟಿ ನೀಡಲು ಮುಂದಾದ ಗೂಗಲ್‌

    ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ – 921 ಕೋಟಿ ನೀಡಲು ಮುಂದಾದ ಗೂಗಲ್‌

    ಸ್ಯಾನ್‌ಫ್ರಾನ್ಸಿಸ್ಕೋ: ಮಹಿಳಾ ಉದ್ಯೋಗಿಗಳಿಗೆ ಸಂಬಳದ ವಿಚಾರದಲ್ಲಿ ತಾರತಮ್ಯ ಮಾಡಿದ್ದಕ್ಕೆ ಗೂಗಲ್‌ 118 ದಶಲಕ್ಷ ಡಾಲರ್‌(ಅಂದಾಜು 921 ಕೋಟಿ ರೂ.) ಪರಿಹಾರ ನೀಡಲು ಒಪ್ಪಿಕೊಂಡಿದೆ.

    ಕ್ಯಾಲಿಫೋರ್ನಿಯಾದಲ್ಲಿ ಕೆಲಸ ಮಾಡುತ್ತಿರುವ 15,500 ಮಹಿಳಾ ಉದ್ಯೋಗಿಗಳು ನಮಗೆ ಸಂಬಳದಲ್ಲಿ ಅನ್ಯಾಯವಾಗಿದೆ. ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ನಮ್ಮ ಸಂಬಳ ಕಡಿಮೆ ಎಂದು ಆರೋಪಿಸಿದ್ದರು.

    ಈ ಸಂಬಂಧ ಮಾಜಿ ಮಹಿಳಾ ಉದ್ಯೋಗಿಗಳು 2017ರಲ್ಲಿ ಗೂಗಲ್‌ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಇನ್ಮುಂದೆ ಅಮೆಜಾನ್‌ನಲ್ಲಿ ಶೂ ಕೊಳ್ಳುವುದಕ್ಕೂ ಮೊದಲು ವರ್ಚುವಲ್ ಆಗಿ ಟ್ರೈಮಾಡಿ

    ಗೂಗಲ್‌ ಎಲ್ಲ ಆರೋಪಗಳನ್ನು ತಿರಸ್ಕರಿಸಿ, ಉದ್ಯೋಗಿಗೆ ಸಂಬಂಧಿಸಿದ ಎಲ್ಲ ಕಾನೂನುಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆ ಎಂದು ಹೇಳಿತ್ತು. ಈಗ ಎಲ್ಲ ಮಾಜಿ ಉದ್ಯೋಗಿಗಳಿಗೆ ಪರಿಹಾರ ನೀಡುವುದಾಗಿ ಗೂಗಲ್‌ ಕೋರ್ಟ್‌ ಮುಂದೆ ಹೇಳಿದೆ.

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಗೂಗಲ್‌, 5 ವರ್ಷಗಳ ಕಾಲ ನಡೆದ ಈ ಕಾನೂನು ಹೋರಾಟಕ್ಕೆ ಕೊನೆ ಹಾಡಲು ಮುಂದಾಗಿದ್ದೇವೆ. ಎರಡು ಕಡೆಯುವರು ಸಹಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದೆ.

  • ಇನ್ಫೋಸಿಸ್ ಸಿಇಒ ಸಂಬಳ ಭಾರೀ ಏರಿಕೆ – ಶೇ.88 ಹೆಚ್ಚಳ

    ಇನ್ಫೋಸಿಸ್ ಸಿಇಒ ಸಂಬಳ ಭಾರೀ ಏರಿಕೆ – ಶೇ.88 ಹೆಚ್ಚಳ

    ಬೆಂಗಳೂರು: ಇನ್ಫೋಸಿಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಸಲೀಲ್ ಪರೇಖ್ ಈ ವರ್ಷ ತಮ್ಮ ವೇತನವನ್ನು ಬರೋಬ್ಬರಿ ಶೇ.88 ರಷ್ಟು ಹೆಚ್ಚಿಸಿಕೊಂಡಿದ್ದಾರೆ. ಈ ಹೆಚ್ಚಳದೊಂದಿಗೆ ಪರೇಖ್ ಇದೀಗ ವರ್ಷಕ್ಕೆ 79.75 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ.

    ಈ ಹಿಂದೆ ಪರೇಖ್ 42 ಕೋಟಿ ರೂ. ವಾರ್ಷಿಕ ವೇತನವನ್ನು ಪಡೆಯುತ್ತಿದ್ದರು. ಇದೀಗ ತಮ್ಮ ಸಂಭಾವನೆಯಲ್ಲಿ ಭಾರೀ ಏರಿಕೆ ಕಂಡಿರುವುದರೊಂದಿಗೆ ದೇಶದಲ್ಲೇ ಅತೀ ಹೆಚ್ಚು ಮೊತ್ತದ ಸಂಭಾವನೆ ಪಡೆಯುವ ಸಿಇಒ ಎನಿಸಿಕೊಂಡಿದ್ದಾರೆ.

    ಇನ್ಫೋಸಿಸ್ ತನ್ನ ಷೇರುದಾರರ ವಾರ್ಷಿಕ ವರದಿಯಲ್ಲಿ ಸಿಇಒ ವೇತನದ ವಿವರಗಳನ್ನು ಬಹಿರಂಗಪಡಿಸಿದೆ. ಇತ್ತೀಚೆಗೆ ಇನ್ಫೋಸಿಸ್ ಕಂಪನಿಯ ಉದ್ಯಮದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದ್ದು, ಇದರಲ್ಲಿ ಪರೇಖ್ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಹಿನ್ನೆಲೆ ಅವರ ವೇತನವನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಸ್ಕ್‌ನಿಂದ ಟ್ವಿಟ್ಟರ್ ಖರೀದಿ ಯೋಜನೆ – ಮಂಡಳಿಯಿಂದ ಹೊರನಡೆದ ಮಾಜಿ ಸಿಇಒ

    ಪರೇಖ್ ಇನ್ಫೋಸಿಸ್‌ನ ಸಿಇಒ ಆಗಿ ಮರುನೇಮಕಗೊಂಡ ಕೆಲವೇ ದಿನಗಳಲ್ಲಿ ಅವರ ವೇತನ ಹೆಚ್ಚಳವಾಗಿದೆ. ಪರೇಖ್ 2022 ಜುಲೈ 1 ರಿಂದ 2027 ಮಾರ್ಚ್ 31ರ ವರೆಗೆ 5 ವರ್ಷಗಳ ಕಾಲ ಇನ್ಫೋಸಿಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮುಂದುವರಿಯಲಿದ್ದಾರೆ.

    ಇತ್ತೀಚಿನ ವರ್ಷಗಳಲ್ಲಿ ಟೆಕ್ ಉದ್ಯಮದಲ್ಲಿ ಪರೇಖ್ ಮಾತ್ರವೇ ತಮ್ಮ ಸಂಬಳವನ್ನು ಹೆಚ್ಚಿಸಿಕೊಳ್ಳದೇ, ಹಲವು ಇತರ ಟೆಕ್ ಕಂಪನಿಗಳೂ ತಮ್ಮ ಉದ್ಯೋಗಿಗಳ ವೇತನವನ್ನು ಹೆಚ್ಚಿಸಿದೆ. ಜಾಗತಿಕವಾಗಿ ಅದರಲ್ಲೂ ಮುಖ್ಯವಾಗಿ ಭಾರತದಲ್ಲಿ ತಂತ್ರಜ್ಞಾನದ ಉದ್ಯಮದಲ್ಲಿ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಹಾಗೂ ಈ ವರ್ಷ ಕಂಪನಿಗಳು ಉದ್ಯಮದಲ್ಲಿ ಪ್ರಗತಿ ಕಾಣುತ್ತಿವೆ. ಇದನ್ನೂ ಓದಿ: ಸಿನಿಮಾಗಾಗಿ ಕಂಬಳದ ಕೋಣ ಓಡಿಸಿದ ರಿಯಲ್ ಹೀರೋ ಶ್ರೀನಿವಾಸ್ ಗೌಡ

  • ಪತ್ನಿ ಸಂಬಳ ನೀಡದಿದ್ದಕ್ಕೆ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿ ಮೇಲೆ ಪತಿಯಿಂದ ಹಲ್ಲೆ

    ಪತ್ನಿ ಸಂಬಳ ನೀಡದಿದ್ದಕ್ಕೆ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿ ಮೇಲೆ ಪತಿಯಿಂದ ಹಲ್ಲೆ

    ಭುವನೇಶ್ವರ: ಕಳೆದ ನಾಲ್ಕು ವರ್ಷಗಳಿಂದ ಸಂಬಳ ನೀಡದೇ ಕೆಲಸ ಮಾಡಿಸುತ್ತಿದ್ದ ಶಿಕ್ಷಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಶಾಲಾ ಶಿಕ್ಷಕಿಯ ಪತಿ ಹಲ್ಲೆ ನಡೆಸಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಇದೀಗ ದೂರಿನ ಆಧಾರದ ಮೇಲೆ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.

    ಬೆಳ್ಳಗುಂಟಾದ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿಲತಾ ಸಾಹು ಅವರು ತಮ್ಮ ವೇತನ ನೀಡುವಂತೆ ಒತ್ತಾಯಿಸಿ ನಾಲ್ಕು ತಿಂಗಳಿಂದ ಜಿಲ್ಲಾ ಶಿಕ್ಷಣಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದರು. ಮಂಗಳವಾರ ಮಧ್ಯಾಹ್ನ ಊಟಕ್ಕೆ ಹೋಗುತ್ತಿದ್ದ ಡಿಇಒ ಅವರನ್ನು ದಂಪತಿ ಅಡ್ಡಗಟ್ಟಿ ಸಂಬಳ ಕೇಳಿದ್ದಾರೆ. ಇದನ್ನೂ ಓದಿ: ರಥೋತ್ಸವದಲ್ಲಿ ವಿದ್ಯುತ್ ತಗುಲಿ ಇಬ್ಬರು ಮಕ್ಕಳು ಸೇರಿ 11 ಮಂದಿ ದುರ್ಮರಣ

    POLICE JEEP

    ಡಿಇಒ ಅವರೊಂದಿಗೆ ಶಾಂತಿಲತಾ ಸಾಹು ಅವರು ಮಾತನಾಡುತ್ತಿದ್ದಂತೆಯೇ, ಅವರ ಪತಿ ಅಧಿಕಾರಿಯ ಮುಖಕ್ಕೆ ಹೊಡೆದಿದ್ದಾರೆ. ನಂತರ ಈ ಕುರಿತಂತೆ ಡಿಇಒ ಅವರು ದೂರು ನೀಡಿದ್ದು, ಇಬ್ಬರನ್ನು ವ್ಯಾನ್‍ಗೆ ಕರೆದೊಯ್ಯುವಾಗ ಶಾಂತಿಲತಾ ಸಾಹು ತಮಗೆ ಸಂಬಳ ನೀಡುವುದನ್ನು ನಿಲ್ಲಿಸಿದ್ದಾರೆ. ಅಧಿಕಾರಿಗಳು ನನಗೆ ಯಾವುದೇ ನೋಟಿಸ್‌ ನೀಡಲ್ಲ ಮತ್ತು ಕೆಲಸದಿಂದಲೂ ಅಮಾನತುಗೊಳಿಸಿಲ್ಲ ಎಂದು ಆರೋಪಿಸಿ ಗಳಗಳ ಅತ್ತಿದ್ದಾರೆ. ಇದನ್ನೂ ಓದಿ: ಮೊಮ್ಮಗಳು ಜನಿಸಿದ ಖುಷಿಯಲ್ಲಿ ಕರೆತರಲು ಹೆಲಿಕಾಪ್ಟರ್ ಬುಕ್ ಮಾಡಿದ ರೈತ

    ಈ ವಿಚಾರವಾಗಿ ಡಿಇಒ ಕಚೇರಿಯ ಅಧಿಕಾರಿಯೊಬ್ಬರು ಸಂಬಳ ಕೇಳಿದಾಗಲಿಂದಲೂ ಶಾಂತಿಲತಾ ಸಾಹು ಕೆಲಸಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದೀಗ ಈ ಸಂಬಂದ ತನಿಖೆ ನಡೆಸಲಾಗುತ್ತಿದೆ ಎಂದು ಬೆರ್ಹಾಂಪುರ ಉಪವಿಭಾಗದ ಪೊಲೀಸ್ ಅಧಿಕಾರಿ ಬಿಷ್ಣು ಪ್ರಸಾದ್ ಪತಿ ತಿಳಿಸಿದ್ದಾರೆ.

  • ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ

    ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ

    ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರ ಮಾಸಿಕ ಸಂಬಳವನ್ನು ಏರಿಕೆ ಮಾಡಲಾಗಿದೆ.

    ಮಾಸಿಕ ವೇತನವನ್ನು 12 ಸಾವಿರದಿಂದ 13 ಸಾವಿರಕ್ಕೆ ಹೆಚ್ಚಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಈ ವರ್ಷದ ಬಜೆಟ್‌ನಲ್ಲಿ ಘೋಷಣೆಯಾದಂತೆ ಏಪ್ರಿಲ್‌ 1 ರಿಂದಲೇ ಇದು ಜಾರಿಯಾಗಲಿದೆ. ಇದನ್ನೂ ಓದಿ: ಮಧ್ಯಪ್ರದೇಶಲ್ಲಿ ಜೆಸಿಬಿ ಘರ್ಜನೆ – ರಾಮನವಮಿ ಕಲ್ಲುತೂರಾಟ, 20 ಅಕ್ರಮ ಕಟ್ಟಡಗಳು ನೆಲಸಮ

    ಕರ್ನಾಟಕ ಗ್ರಾಮ ಕಚೇರಿಗಳ ರದ್ದತಿ ಕಾಯ್ದೆ 1961 ಜಾರಿಯಾದ ಬಳಿಕ 1963ರಿಂದ ಅನ್ವಯವಾಗುವಂತೆ ವಂಶಪಾರಂಪರ್ಯದ ಎಲ್ಲ ಗ್ರಾಮೀಣ ಹಂತದ ವಿಲೇಜ್‌ ಆಫೀಸರ್ಸ್‌ ಹುದ್ದೆಗಳು ರದ್ದಾಗಿದ್ದರಿಂದ ಕೆಳ ಹಂತದ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಿಸಲಾಗುತ್ತದೆ.