Tag: Saleem Ahmed

  • ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

    ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

    – ಕೀಚಕನಿಗೆ ಗುಂಡೇಟು- ಲೇಡಿ ಪಿಎಸ್‌ಐ- ಪೊಲೀಸರ ಕಾರ್ಯಕ್ಕೆ ಜೈಕಾರ

    ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ.

    ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಕಾಮುಕ ಆರೋಪಿಯನ್ನು ಎನ್‌ಕೌಂಟರ್ ಮಾಡಲಾಗಿದೆ. ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿಯಾಗಿದ್ದಾನೆ.

    ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದಾನೆ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ.

    ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ ಅವರು ಹಾರಿಸಿದ ಗುಂಡು ಎದೆಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದಿದೇ ಆರೋಪಿ ರಿತೇಶ್ ಜೀವ ಹೋಗಿದೆ.

    ಇನ್ನೂ, ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ, ಸಿಬ್ಬಂದಿ ಆರೋಗ್ಯ ವಿಚಾರಿಸಿದ್ರು. ಪೊಲೀಸರ ಕಾರ್ಯಕ್ಕೆ ಜನರು ಜೈಕಾರ ಹಾಕಿದ್ದಾರೆ. ಇನ್ನೂ, ಬಾಲಕಿ ಹಾಗೂ ಆರೋಪಿ ಹಿತೇಶ್ ಮೃತದೇಹ ಇನ್ನೂ, ಕಿಮ್ಸ್ ಆಸ್ಪತ್ರೆಯಲ್ಲೇ ಇದ್ದು, ಇಂದು ಕುಟುಂಬಸ್ಥರಿಗೆ ಹಸ್ತಾಂತರಿಲಾಗುತ್ತದೆ.

  • ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ (CBI) ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Cheluvarayaswamy) ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಲ್ಲರ ಮೇಲೆ ಮುಗಿಬೀಳ್ತಿದೆ. ಕೇಂದ್ರ ಸರ್ಕಾರ ತನ್ನ ಕೆಲಸ ಮಾಡಬೇಕು. ಇದು ಒಕ್ಕೂಟ ವ್ಯವಸ್ಥೆ. ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ ಆಗ್ತಿದೆ. ಹೀಗಾಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ಕೋಳಿವಾಡ (K.B Koliwada) ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ (Congress) ಇದ್ದಾಗ ತನಿಖಾ ಸಂಸ್ಥೆಗಳ ದುರುಪಯೋಗ ಆಗಿರಲಿಲ್ಲ, ಈಗ ಆಗ್ತಿದೆ. ಕೋಳಿವಾಡ ಅವರು ಯಾಕೆ ಆ ರೀತಿ ಹೇಳಿದರು ಎನ್ನುವುದನ್ನು ಅವರೇ ಹೇಳಬೇಕು. ಎಲ್ಲರನ್ನೂ ಕಂಟ್ರೋಲ್ ಮಾಡಕ್ಕಾಗಲ್ಲ. ಸಿದ್ದರಾಮಯ್ಯ ಜತೆ ನಮ್ಮ ಸಚಿವರು, ಶಾಸಕರು, ಹೈಕಮಾಂಡ್‌ವರು ಇದ್ದಾರೆ. ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಲ್ಲ, ಅವರೇ ಮುಂದುವರೀತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಇದೇ ವೇಳೆ ಪರಿಷತ್ ಸದಸ್ಯ ಸಲೀಂ ಅಹಮದ್ (Saleem Ahmed) ಮಾತನಾಡಿ, ರಾಜ್ಯಪಾಲರಿಗೆ ಸಂಪುಟದಲ್ಲೇ ಚರ್ಚಿಸಿ ಉತ್ತರ ಕೊಡಬೇಕು. ಈ ತೀರ್ಮಾನ ಒಳ್ಳೆಯದು, ಸ್ವಾಗತಾರ್ಹ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ಕೊಡಲ್ಲ, ಕೊಡಲೂಬಾರದು. ಕೋಳಿವಾಡ ಹೇಳಿಕೆ ಅವರ ವೈಯಕ್ತಿಕವಾದ ಹೇಳಿಕೆಯಾಗಿದೆ. ಆದರೆ ನಮ್ಮ ನಾಯಕರು, ಕಾರ್ಯಕರ್ತರು ಸಿಎಂ ಪರ ಒಟ್ಟಾಗಿ ಇದ್ದೀವಿ ಎಂದರು.ಇದನ್ನೂ ಓದಿ: ಸ್ವಚ್ಛ ಭಾರತ್ ಮಿಷನ್ ಯೋಜನೆ – ಕೋಲಾರ ನಗರಸಭೆಯಲ್ಲಿ ಭಾರಿ ಗೋಲ್‌ಮಾಲ್!

  • ರಾಜಭವನ ಬಿಜೆಪಿ ಕಚೇರಿ ಆಗಿದೆ, ರಾಜ್ಯಪಾಲರಿಂದ ಪಕ್ಷಪಾತ: ಸಲೀಂ ಅಹಮದ್

    ರಾಜಭವನ ಬಿಜೆಪಿ ಕಚೇರಿ ಆಗಿದೆ, ರಾಜ್ಯಪಾಲರಿಂದ ಪಕ್ಷಪಾತ: ಸಲೀಂ ಅಹಮದ್

    ಬೆಂಗಳೂರು: ರಾಜಭವನ ಬಿಜೆಪಿ (BJP) ಕಚೇರಿಯಾಗಿದೆ. ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್ (Saleem Ahmed) ಕಿಡಿಕಾರಿದ್ದಾರೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಅರವಿಂದ್ ಬೆಲ್ಲದ್

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾರೋ ಒಬ್ಬ ಸಂಶಯಾಸ್ಪದ ಗುಣ ಇರುವ ವ್ಯಕ್ತಿ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ. ರಾಜ್ಯಪಾಲರು ಆ ಪತ್ರದ ಆಧಾರದಲ್ಲಿ 12 ಗಂಟೆಯೊಳಗೆ ಸಿಎಂ (CM) ವಿರುದ್ದ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೊಡುತ್ತಾರೆ. ಇದು ರಾಜ್ಯಪಾಲರ ದುರಂತದ ನಡೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜ್ಯಪಾಲರ ಬಳಿ ದೂರು ಬಂದ ಕೂಡಲೇ ಮುಖ್ಯ ಕಾರ್ಯದರ್ಶಿಗಳಿಗೆ ವಿವರಣೆ ಕೇಳಿ ಕಳಿಸಿಕೊಡುತ್ತಾರೆ. ರಾಜ್ಯಪಾಲರು ಪಕ್ಷಪಾತ ಮಾಡುತ್ತಿದ್ದಾರೆ. ರಾಜ್ಯಪಾಲರು (Governer) ಪಕ್ಷಪಾತ ಮಾಡಬಾರದು. ರಾಜಭವನ ಒಂದು ಪವಿತ್ರವಾದ ಜಾಗ. ಅಲ್ಲಿ ಯಾವುದೇ ರಾಜಕಾರಣ ಮಾಡಬಾರದು. ರಾಜಭವನ ರಾಜಕೀಯ ಮೀರಿ ಇರಬೇಕು. ಆದರೆ ರಾಜಭವನದಲ್ಲಿ ರಾಜಕೀಯ ನಡೆಯುತ್ತಿದೆ. ರಾಜಭವನ ಬಿಜೆಪಿ ಕಚೇರಿ ಆಗಿದೆ ಎಂದು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಬಾಲಿವುಡ್ ಸಿನಿಮಾ ಶೂಟಿಂಗ್‌ಗಾಗಿ ಹಂಪಿಗೆ ಬರಲಿದ್ದಾರೆ ರಶ್ಮಿಕಾ ಮಂದಣ್ಣ

  • ಬಿಜೆಪಿ-ಜೆಡಿಎಸ್ ಪಾದಯಾತ್ರೆ ರಾಜಕೀಯ ನಾಟಕ: ಸಲೀಂ ಅಹಮದ್

    ಬಿಜೆಪಿ-ಜೆಡಿಎಸ್ ಪಾದಯಾತ್ರೆ ರಾಜಕೀಯ ನಾಟಕ: ಸಲೀಂ ಅಹಮದ್

    ಬೆಂಗಳೂರು: ಬಿಜೆಪಿ-ಜೆಡಿಎಸ್ (BJP-JDS) ನಾಯಕರು ಪಾದಯಾತ್ರೆ ಮೂಲಕ ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ (Saleem Ahmed) ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ‌ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಮಾಡ್ತಿದ್ದಾರೆ ಗೊತ್ತಿಲ್ಲ.ಇದು ರಾಜಕೀಯ ನಾಟಕ ಯಾತ್ರೆ. ಎರಡು ಹಗರಣಗಳ ಬಗ್ಗೆ ಬಿಜೆಪಿ-ಜೆಡಿಎಸ್ ಹೇಳ್ತಿದ್ದಾರೆ. ಸದನದಲ್ಲಿ ಸಿಎಂ ಉತ್ತರ ಕೊಡಲು ಮುಂದಾದಾಗ ಅವರಿಗೆ ಉತ್ತರ ನೀಡಲು ಅವಕಾಶ ಕೊಡಲಿಲ್ಲ. ಅಧಿವೇಶನದಲ್ಲಿ ಚರ್ಚೆ ಮಾಡದೇ ಬಿಜೆಪಿ-ಜೆಡಿಎಸ್ ಪಲಾಯನ ಮಾಡಿದೆ. ಸದನದ ಬಾವಿಗಳಿದು ಸಿಎಂ ಉತ್ತರ ಕೊಡದಂತೆ ಮಾಡಿ ಸದನದ ಸಮಯ ಹಾಳು ಮಾಡಿದ್ದಾರೆ ಅಂತ ಕಿಡಿಕಾರಿದರು. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

     

    ಬಿಜೆಪಿ-ಜೆಡಿಎಸ್‌ನವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.4 ವರ್ಷ ಅಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ (Corruption) ‌ಮಾಡಿದ್ದಾರೆ. ಅದಕ್ಕೆ ಜನ ಕಾಂಗ್ರೆಸ್‌ಗೆ ಅವಕಾಶ ನೀಡಿದ್ದಾರೆ. ರಾಜ್ಯದಲ್ಲಿ 40% ಬಿಜೆಪಿ ಸರ್ಕಾರ ಇತ್ತು. ನಿರ್ದಿಷ್ಟ ದಾಖಲೆ ಇಲ್ಲದೇ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ಕುಮಾರಸ್ವಾಮಿ (HD Kumaraswamy) ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಬಿಜೆಪಿ ಶೂಟ್ ಮಾಡಿ ಓಡಿ ಹೋಗೋ ಕೆಲಸ ಮಾಡ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Wayanad Landslides: ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು, ಸಾವಿನ ಸಂಖ್ಯೆ 54ಕ್ಕೆ ಏರಿಕೆ

    40 ವರ್ಷ ರಾಜಕೀಯದಲ್ಲಿ ಯಾವುದೇ ಆರೋಪ ಇಲ್ಲದೆ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ.ಸಿದ್ದರಾಮಯ್ಯ ಮೇಲಿನ ಆರೋಪ ನಿರಾಧಾರ. ಕೇಂದ್ರ ಸರ್ಕಾರ ಮೋದಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ದ ಷಡ್ಯಂತ್ರ ಮಾಡ್ತಿದ್ದಾರೆ.ನಮ್ಮ ಸರ್ಕಾರ ಉತ್ತಮವಾಗಿ ಕೆಲಸ ಮಾಡ್ತಿದೆ. ಇದನ್ನ ಸಹಿಸಲು ಸಾಧ್ಯವಾಗ್ತಿಲ್ಲ.ಕೇಂದ್ರ ಸರ್ಕಾರ ನಮ್ಮ ಮೇಲೆ ಷಡ್ಯಂತ್ರ ಮಾಡ್ತಿದ್ದಾರೆ. ಇದಕ್ಕೆ ನಾವು ಭಯ ಬೀಳೊಲ್ಲ.ಬಿಜೆಪಿ ಭ್ರಷ್ಟಾಚಾರವನ್ನು ಬಯಲಿಗೆಳೆಯೋ ಕೆಲಸ ಮಾಡ್ತೀವಿ.ಬಿಜೆಪಿಯವರ ಅಕ್ರಮ ಬೆತ್ತಲೆ ಮಾಡೋ ಕೆಲಸ ಮಾಡ್ತೀವಿ ಅಂತ ಸವಾಲ್ ಹಾಕಿದ್ರು.

     

    ವಾಲ್ಮೀಕಿ ಹಗರಣ ಗೊತ್ತಾಗದ ಕೂಡಲೇ ಸಿಎಂ SIT ತನಿಖೆ ಆದೇಶ ಮಾಡಿದ್ರು.‌ಮುಡಾ ಕೇಸ್ ನಲ್ಲಿ ಸ್ವತಃ ಸಿಎಂ ಅವರು ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದಾರೆ. ಸಿಎಂ ಈಗಾಗಲೇ ಹೇಳಿದ್ದಾರೆ. ಯಾರೇ ತಪ್ಪು ಮಾಡಿದ್ರು ಕ್ರಮ ತೆಗೆದುಕೊಳ್ತೀವಿ ಅಂತ ಹೇಳಿದ್ದಾರೆ.ಬಿಜೆಪಿ ಅವರು ರಾಜಕೀಯ ಮಾಡಲು ಹೊರಟಿದ್ದಾರೆ.ಬಿಜೆಪಿ-ಜೆಡಿಎಸ್ ಅಕ್ರಮ ಬಯಲಿಗೆ ಎಳೆಯುತ್ತೇವೆ. ಆಗ ಏನ್ ಮಾಡ್ತಾರೆ ನೋಡೋಣ ಅಂತ ಸವಾಲ್ ಹಾಕಿದ್ರು.

    ಬಿಜೆಪಿ ಅವಧಿಯಲ್ಲಿ 21 ಹಗರಣ ಆಗಿದೆ. ಇದರ ಬಗ್ಗೆ ನಾವು ತನಿಖೆ ‌ಮಾಡುತ್ತೇವೆ. ಬಿಜೆಪಿ-ಜೆಡಿಎಸ್ ಕರ್ಮಕಾಂಡ ಮುಚ್ಚಿ ಹಾಕಿಕೊಳ್ಳಲು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ.‌ ಬಿಜೆಪಿ-ಜೆಡಿಎಸ್ ಪಾದಯಾತ್ರೆಯನ್ನು ದೆಹಲಿಗೆ ಮಾಡಲಿ. ರಾಜ್ಯದಿಂದ 19 ಜನ ಸಂಸದರು ಇದ್ದರೂ ಬಜೆಟ್‌ನಲ್ಲಿ ಅನ್ಯಾಯವಾಗಿದೆ. ಹೀಗಾಗಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

     

    ಸುಪ್ರೀಂಕೋರ್ಟ್ ಸೂಚನೆಯ ನಂತರ ಬರ ಪರಿಹಾರ ನೀಡಿದರು. 5 ಜನ ಮಂತ್ರಿಗಳು ಏನ್ ಮಾಡಿದ್ದೀರಿ? ಮಹದಾಯಿ, ಮೇಕೆದಾಟು ಏನು ಆಯ್ತು? ನಿರ್ಮಲಾ ಸೀತಾರಾಮನ್ ತಾಯಿ ಹೃದಯ ಕರಗಲಿಲ್ಲವಾ?

    ಆಂಧ್ರ, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಸರ್ಕಾರ ಉಳಿಸಿದ್ದಕ್ಕೆ ನೀಡಿದ್ದಾ? ಮೋದಿ 400 ಸ್ಥಾನ ಸಿಗಲಿದೆ ಎಂದರು. ಆದರೆ ಜನ 200ಕ್ಕೆ ಇಳಿಸಿದರು. ಕೊನೆದಾಗಿ ಜೆಡಿಯು, ಟಿಡಿಪಿ ಬೆಂಬಲ ಪಡೆದು ಸರ್ಕಾರ ರಚನೆ ಮಾಡಿದರು. ಕೇಂದ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

    2028ರವರೆಗೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ‌ಇರಲಿದೆ. ಬಿಜೆಪಿ-ಜೆಡಿಎಸ್ ಷಡ್ಯಂತ್ರಗಳಿಗೆ ನಾವು ಉತ್ತರ ನೀಡುತ್ತೇವೆ. ಬಿಜೆಪಿ-ಜೆಡಿಎಸ್ ಕಾಲದ ಹಗರಣಗಳನ್ನ ರಾಜ್ಯದ ಜನರಿಗೆ ಹೇಳುತ್ತೇವೆ ಎಂದರು.

  • ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬೊಮ್ಮಾಯಿ

    ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬೊಮ್ಮಾಯಿ

    ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಬರೀ ಕುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಕುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರ ಬೀಳುತ್ತದೆ ಎಂದು‌ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದರು. ಸಲೀಂ ಅಹ್ಮದ್‌ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..? ಮಂತ್ರಿ-ಮಂತ್ರಿಗಳ ನಡುವೆ ಏನಾಗುತ್ತದೆ..? ಸಿಎಂ, ಡಿಸಿಎಂ ನಡುವೇ ಏನಾಗುತ್ತಿದೆ ಎಂದು ತಿಳಿದುಕೊಳ್ಳಲಿ ಅವರಿಗೆ ಎಲ್ಲವು ಗೊತ್ತಿದ್ದು, ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೋ ನನಗೆ ಗೊತ್ತಿಲ್ಲ. ಸಲೀಂ ಅಹ್ಮದ್‌ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಬೊಮ್ಮಾಯಿ ಹೇಳಿದರು.

    ಶಾಸಕರಿಗೆ ನೀಡುವ ಭತ್ಯೆ ಚಹಾ ಕುಡಿಯಲಿಕ್ಕೆ ಸಾಲಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯು.ಟಿ ಖಾದರ್ ಯಾವ ಆಧಾರದ ಮೇಲೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂದರು. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

    ಡೆಂಗ್ಯೂ ಮುನ್ನೆಚ್ಚರಿಕೆ ವಹಿಸಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಹಾವಳಿ ಕುರಿತು ಮಾತನಾಡಿದ ಅವರು, ಒಂದು ಕಾಲದಲ್ಲಿ ಹೇಗೆ ಕಾಲರಾ, ಮಲೇರಿಯಾ ಹೇಗೆ ಬಂದಿತ್ತೊ ಹಾಗೆ ಈಗ ಡೆಂಗ್ಯೂ ಬಂದಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಬೇಕು. ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮ ತೆಗೆದು ಕೊಳ್ಳುವುದಿಲ್ಲ. ಹೀಗಾಗಿ ಡೆಂಗ್ಯೂ ಉಲ್ಬಣವಾಗುತ್ತದೆ. ಆಗ ಮೇಲಾಧಿಕಾರಿಗಳ ಗಮನಕ್ಕೆ ತರುತ್ತಾರೆ. ನಾನು ಡಿಸಿ, ಡಿಎಚ್ಓ, ಡಿ.ಎಸ್ ಗೆ ಆಗ್ರಹ ಮಾಡುತ್ತೇನೆ. ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಸೂಕ್ತ ಚಿಕಿತ್ಸೆ ನೀಡಬೇಕು ಬೊಮ್ಮಾಯಿ ಎಂದರು.

    ಡೆಂಗ್ಯೂ ಡೇತ್ ಕೇಸ್ ಮರೆಮಾಚುತ್ತಿದ್ದಾರೆ ಎಂಬ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡೆಂಗ್ಯೂನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಅಧಿಕಾರಿಗಳು ಸರ್ಕಾರಿ ಆಸ್ಪತ್ರೆಯ ಸಂಖ್ಯೆ ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ. ಡೆಂಗ್ಯೂ ಸೋಂಕಿತರು ಹುಬ್ಬಳ್ಳಿ ದಾವಣಗೆರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

  • ನ.9 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ: ಸಲೀಂ ಅಹ್ಮದ್

    ನ.9 ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇವಾದಳ ಶತಮಾನೋತ್ಸವ ಕಾರ್ಯಕ್ರಮ: ಸಲೀಂ ಅಹ್ಮದ್

    ಬೆಂಗಳೂರು: ನವೆಂಬರ್ 9 ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ (Seva Dal Centenary) ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ (Saleem Ahmed) ಹೇಳಿದ್ದಾರೆ.

    ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸಚಿವರು, ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಇದೇ ತಿಂಗಳ 28 ರಂದು ಸೇವಾದಳ 100 ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡಬೇಕು ಎಂದು ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.

    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜನೆ ಮಾಡಲಾಗಿದ್ದು, 75% ರಷ್ಟು ಸಚಿವರು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಮುಂದಿನ ಒಂದು ವಾರದಲ್ಲಿ ಮಂತ್ರಿಗಳು ಹಾಗೂ ವೀಕ್ಷಕರು ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕುರಿತು ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ಸಚಿವರಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ ನಮ್ಮ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ ಎಂದರು. ಇದನ್ನೂ ಓದಿ: ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್

    ಮುಂಬರುವ ಜನವರಿ 2ನೇ ವಾರದಲ್ಲಿ ಲೋಕಸಭೆ ಅಭ್ಯರ್ಥಿಗಳ ಘೋಷಣೆ ಆಗಲಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಾವು ಲೋಕಸಭೆ ಚುನಾವಣೆ ತಯಾರಿ ಮಾಡಿದ್ದೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಮ್ಮ 4 ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

    ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ 17,900 ಕೋಟಿ ರೂ. ಹಣವನ್ನು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕೇಂದ್ರದಿಂದ ಸ್ಪಂದನೆ ಸಿಗದಿರುವುದು ದುರ್ದೈವ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರು ಹಾಗೂ 5 ಜನ ಕೇಂದ್ರ ಸಚಿವರಿದ್ದು ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ. ಕೆಪಿಸಿಸಿ ಅಧ್ಯಕ್ಷರು ದೆಹಲಿಗೆ ತೆರಳಿದ್ದು, ಕಾರ್ಯಾಧ್ಯಕ್ಷರ ಬದಲಾವಣೆ ಬಗ್ಗೆ, ನಮ್ಮ ಅಧ್ಯಕ್ಷರು ದೆಹಲಿಗೆ ಹೋಗಿ, ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವಿಚಾರವಾಗಿ ಅವರೇ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಾತಾಳಕ್ಕೆ ಹೋಗಿ ಯಾರಾದ್ರು ಬೀಳ್ತಾರಾ?- ಆಪರೇಷನ್ ಕಮಲಕ್ಕೆ ಖಂಡ್ರೆ ವ್ಯಂಗ್ಯ

  • ನರೇಂದ್ರ ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

    ನರೇಂದ್ರ ಮೋದಿ ಸರ್ಕಾರ ಸ್ವರ್ಗ ತೋರಿಸ್ತೀನಿ ಅಂತ ಜನರಿಗೆ ನರಕ ತೋರಿಸಿದ್ದಾರೆ: ಸಲೀಂ ಅಹಮದ್

    ಬೆಂಗಳೂರು: ನರೇಂದ್ರ ಮೋದಿ (Narendra Modi) ಸರ್ಕಾರ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿ ಬೆಲೆ ಏರಿಕೆ ಮಾಡಿ ನರಕ ತೋರಿಸಿದ್ದಾರೆ ಎಂದು ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸಲೀಂ ಅಹಮದ್ (Saleem Ahmed) ಬಿಜೆಪಿ (BJP) ವಿರುದ್ಧ ಕಿಡಿಕಾರಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕನಿಷ್ಠ 20 ಸ್ಥಾನ ಗೆಲ್ಲಬೇಕು ಎಂದು ಗುರಿ ಇದೆ. ಈಗಾಗಲೇ ದೆಹಲಿಯಲ್ಲಿ (Delhi) ನಡೆದ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಎಂದು ನಿರ್ಧಾರ ಆಗಿದೆ. 20 ಸ್ಥಾನ ಗೆಲ್ಲುವ ಗುರಿ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ ರೀತಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕು. ಇದಕ್ಕೆ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗೆ ಮೋದಿ ಚಾಲನೆ

    ಬಿಜೆಪಿ ಮತ್ತೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಯಾವ ಮಹಾ ಘನಕಾರ್ಯ ಮಾಡಿದ್ದೀರಾ ಎಂದು ಜನ ನಿಮಗೆ ಮತ ಹಾಕುತ್ತಾರೆ? ನಾವು ಬಂದ ಎರಡು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದ್ದೇವೆ. ನುಡಿದಂತೆ ನಾವು ನಡೆದಿದ್ದೇವೆ. ಮುಂದಿನ ಆರು ತಿಂಗಳು ಇದನ್ನು ಮನೆ ಮನೆಗೆ ತಲುಪಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: 7 ಎಕರೆಯಲ್ಲಿ ಟೊಮೆಟೋ ಬೆಳೆದು ಕೋಟಿ ರೂ. ಸಂಪಾದಿಸಿದ ರೈತ

    ಬಿಜೆಪಿ ಬರೀ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಗೆ ಆಸ್ಕರ್ ಪ್ರಶಸ್ತಿ ಕೊಡಬಹುದು. 15 ಲಕ್ಷ ಹಣ ಪ್ರತಿಯೊಬ್ಬರ ಖಾತೆಗೆ ಕೊಡುತ್ತೇವೆ ಎಂದು ಕೊಡಲಿಲ್ಲ. ನಮ್ಮ ಸರ್ಕಾರ ಬಂದರೆ ರೈತರಿಗೆ ಡಬಲ್ ಹಣ ಮಾಡುತ್ತೇವೆ ಎಂದು ಏನೂ ಮಾಡಲಿಲ್ಲ. ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಮೋಸ ಮಾಡಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಚಿತ್ರದುರ್ಗ ಶಾಸಕನಿಂದ ಮತ್ತೊಂದು ಯಡವಟ್ಟು – ಬೆಂಕಿಯಿಡಲು ಪ್ರಚೋದಿಸಿದ ವಿಡಿಯೋ ವೈರಲ್

    ದೇಶದ ಜನ ಬದಲಾವಣೆ ಬಯಸಿದ್ದಾರೆ. ಈ ಬಾರಿ ದೇಶದಲ್ಲಿ ಇಂಡಿಯಾ ಅಧಿಕಾರಕ್ಕೆ ಬರುತ್ತೆ. ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಮೃತ್ ಭಾರತ್; ರಾಜ್ಯದ 13 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ – ಮೋದಿಯಿಂದ ಇಂದು ಚಾಲನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ ಅಹ್ಮದ್

    ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ: ಸಲೀಂ ಅಹ್ಮದ್

    ಹಾವೇರಿ: ಕೆಲವೊಂದು ಕೋಮುವಾದಿ ಸಂಘಟನೆಗಳು ನಿರಂತರವಾಗಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕೋಮು ಸಾಮರಸ್ಯದ ನಾಡಿನಿಂದ ಬಂದಿದ್ದಾರೆ. ಕೂಡಲೇ ಸಿಎಂ ಅವರು ಸಮಾಜ ಒಡೆಯುವ ಕೆಲಸ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದರು.

    ಹಾವೇರಿಯಲ್ಲಿ ಕೋಮು ಗಲಭೆ ಕುರಿತು ಮಾತನಾಡಿದ ಅವರು, ಸಮಾಜ ಒಡೆಯುವ ಸಂಘಟನೆಗಳನ್ನು ನಿಷೇಧ ಮಾಡಬೇಕು. ಅಂತಹ ಸಂಘಟನೆಗಳ ವ್ಯಕ್ತಿಗಳನ್ನು ಬಂಧಿಸಬೇಕು. ಸರ್ಕಾರ RSS ಹಿಡಿತದಲ್ಲಿದೆ. ಪ್ರತಿದಿನ ಗಲಭೆ ಮಾಡುವ ಕೆಲಸವನ್ನು ಕೆಲವರು ನಿರಂತರವಾಗಿ ಮಾಡುತ್ತಿದ್ದಾರೆ. ಈ ಸರ್ಕಾರ ಜನರ ದಾರಿ ತಪ್ಪಿಸಲು ಇಂತಹ ಕೆಲಸ ಮಾಡುತ್ತಿದೆ. ಅರ್ಕಾವತಿ ಕುರಿತು ಕಾಂಗ್ರೆಸ್ ವಿರುದ್ಧ ಯಾವುದೇ ತನಿಖೆಗೂ ಸಿದ್ಧರಿದ್ದೇವೆ. ಮೊದಲು 40% ಕಮೀಷನ್ ನಿಲ್ಲಿಸಿ. ಈಗ ನಿಮಗೆ ಅರ್ಕಾವತಿ ನೆನಪಿಗೆ ಬಂದಿತಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ವರ ಧೋತಿ-ಕುರ್ತಾ ಬದಲು ಶೇರ್ವಾನಿ ಧರಿಸಿದ್ದಕ್ಕೆ ಮದುವೆ ಮನೆಯಾಯ್ತು ರಣರಂಗ

    ಪ್ರತಿದಿನ ಭ್ರಷ್ಟಾಚಾರ, ಮಂತ್ರಿಮಂಡಲ ಬಿಟ್ಟರೆ ನಿಮಗೆ ಬೇರೆ ಕೆಲಸವೇ ಇಲ್ಲದಂತೆ ಆಗಿದೆ. ಬಿಜೆಪಿ ಸರ್ಕಾರ ಲೂಟಿಕೋರರ ಸರ್ಕಾರ. ಪ್ರತಿದಿನ ರಾಜಕಾರಣಿಗಳು, ಅಧಿಕಾರಿಗಳ ಭ್ರಷ್ಟಾಚಾರ ಬರ್ತಿದೆ. ದೇಶದಲ್ಲಿ ತಲೆತಗ್ಗಿಸುವ ಕೆಲಸ ಆಗುತ್ತಿದೆ. ಕರ್ನಾಟಕ ಭ್ರಷ್ಟಾಚಾರದ ರಾಜಧಾನಿ ಆಗಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಈ ಸರ್ಕಾರ ಕಳೆದುಕೊಂಡಿದೆ ಎಂದು ಆರೋಪಿಸಿದರು.

    ಸಿಎಂ ಸ್ಥಾನಕ್ಕೆ 2,500 ಕೋಟಿ ಕೊಡಬೇಕು ಎಂದು ಬಿಜೆಪಿ ಶಾಸಕ ಯತ್ನಾಳ್ ಹೇಳುತ್ತಿದ್ದಾರೆ. ಭ್ರಷ್ಟಾಚಾರದ ಮೂಲಕ ಉದಯಿಸಿದ ಈ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆ. ಜನರು ಬಿಜೆಪಿ ಸರ್ಕಾರದ ಬಗ್ಗೆ ನೊಂದಿದ್ದಾರೆ. ಈಗಾಗಲೇ ಬಿಜೆಪಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿಯ 40% ಕಮೀಷನ್ ಸರ್ಕಾರದ ವಿರುದ್ಧ ಜನಜಾಗೃತಿ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ:  ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಅರೆಸ್ಟ್ 

    ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುತ್ತೇವೆ. ಭ್ರಷ್ಟ ಸರ್ಕಾರವನ್ನು ತೆಗೆಯುವುದು ನಮ್ಮ ಉದ್ದೇಶವಾಗಿದೆ. ಯಾರು ಸಿಎಂ ಆಗುತ್ತಾರೆ ಎಂಬುದು ಮುಂದಿನ ವಿಚಾರ. ಶಾಸಕರು ಹಾಗೂ ಹೈಕಮಾಂಡ್ ಸೇರಿಕೊಂಡು ಯಾರು ಸಿಎಂ ಆಗಬೇಕು ಎಂಬುದನ್ನು ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

  • ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

    ಬೆಂಗಳೂರು: ಹಿಜಬ್ ವಿವಾದದ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಕಾರಣವಾಯಿತು. ಬಜೆಟ್ ಚರ್ಚೆ ವೇಳೆ ಕಾಂಗ್ರೆಸ್‍ನ ಸದಸ್ಯ ಸಲೀಂ ಅಹಮದ್, ತೀರ್ಪು ಯಾಕೆ ಈ ರೀತಿ ಬಂದಿತು ಎನ್ನುವ ಕುರಿತು ಚರ್ಚೆ ನಡೆಯಬೇಕು ಎಂದರು. ಈ ವಿಚಾರಕ್ಕೆ ಸದನದಲ್ಲಿ ಗಲಾಟೆ ಪ್ರಾರಂಭ ಆಯಿತು.

    ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಏಕೆ ಬಂತು. ಹಿಜಬ್ ವಿಚಾರದಲ್ಲಿ ಕೋರ್ಟ್ ತೀರ್ಪು ಯಾಕೆ ಹೀಗೆ ಬಂತು. ಸರ್ಕಾರದ ಆದೇಶವನ್ನೇ ಕೋರ್ಟ್ ಎತ್ತಿ ಹಿಡಿಯಿತು. ಹಿಜಬ್, ಬುರ್ಕಾ ನೂರಾರು ವರ್ಷದಿಂದ ಇದೆ. ಇದು ನಮ್ಮ ಧರ್ಮದ ಪದ್ಧತಿ. ಆದ್ರೆ ವಿವಾದ ಈಗ ಯಾಕಾಯಿತು ಎಂದು ಪ್ರಸ್ತಾಪಿಸಿದರು.

    ಈ ವೇಳೆ ಮಧ್ಯ ಪ್ರವೇಶ ಮಾಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಹೈಕೋರ್ಟ್ ತೀರ್ಪನ್ನು ಒಪ್ಪುತ್ತೀರಾ ಅಥವಾ ವಿರೋಧಿಸುತ್ತೀರಾ? ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಹರಿ ಪ್ರಸಾದ್, ನಮ್ಮ ನಿಲುವನ್ನು ಸುಪ್ರೀಂ ಕೋರ್ಟ್‍ಗೆ ಹೇಳುತ್ತೇವೆ. ನಾವು ಇಲ್ಲಿ ಅದನ್ನು ಹೇಳಬೇಕಿಲ್ಲ, ನಮ್ಮ ಸದಸ್ಯರು ಮಾತನಾಡುವುದನ್ನು ಕೇಳಿಸಿಕೊಳ್ಳಲು ಹೇಳಿ ಎಂದು ಆಗ್ರಹಿಸಿದರು.

    ಮತ್ತೆ ಮಾತು ಮುಂದುವರೆಸಿದ ಹರಿಪ್ರಸಾದ್, ಭಾಷಣದ ನಡುವೆ ನಮ್ಮ ಸದಸ್ಯರು ಸಮ್ಮತಿಸಲಿಲ್ಲ ಎಂದರೆ ಪ್ರತಿಪಕ್ಷ ನಾಯಕರಾಗಲಿ, ಸಭಾನಾಯಕರಿಗಾಗಲಿ ಮಧ್ಯದಲ್ಲಿ ಮಾತನಾಡಲು ಅವಕಾಶವಿಲ್ಲ. ಅವರಿಗೇನು ಕೊಂಬಿಲ್ಲ. ರೂಲ್ ಬುಕ್‍ನಲ್ಲಿಯೂ ಅವಕಾಶವಿಲ್ಲ ಎಂದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಇದು ಕೊಂಬಿನ ವಿಷಯ ಅಲ್ಲ. ಯಾರಿಗೇನು ಕೊಂಬು ಇಲ್ಲ. ಸರ್ಕಾರದ ವಿರುದ್ಧ ಆರೋಪ ಬಂದಾಗ ನಾವು ಕೆಲವೊಂದು ಸ್ಪಷ್ಟೀಕರಣ ನೀಡಬೇಕು ಆಗ ಮಾತನಾಡಬೇಕಾಗಲಿದೆ. ಅದಕ್ಕೆ ಎದ್ದು ನಿಂತಾಗ ಸಭಾಪತಿಗಳ ಸಮ್ಮತಿ ಮೇರೆಗೆ ಪ್ರತಿಪಕ್ಷ ನಾಯಕ, ಸಭಾ ನಾಯಕರಿಗೆ ಮಾತನಾಡಲು ಅವಕಾಶ ಕೊಡುವ ಸಂಪ್ರದಾಯ ಇದೆ ಎಂದು ಪ್ರತಿಪಾದಿಸಿದರು.

    ಭಾಷಣ ಮುಂದುವರೆಸಿದ ಸಲೀಂ ಅಹಮದ್, ಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಒಪ್ಪಬೇಕು. ನಾವು ಒಪ್ಪುತ್ತೇವೆ. ಆದರೆ ಈ ಘಟನೆ ಯಾಕಾಯಿತು? ಕೇಸರಿ ಶಾಲು ಪದ್ಧತಿ ಮೊದಲು ಇತ್ತಾ? ಅಣ್ಣ, ತಮ್ಮಂದಿರ ರೀತಿ ಇದ್ದ ವಿದ್ಯಾರ್ಥಿಗಳು ಈಗ ಮುಖ ಕೊಟ್ಟು ಮಾತನಾಡದ ಸ್ಥಿತಿ ಇದೆ. ಇದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

    ಇದಕ್ಕೆ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ನೆಮ್ಮದಿಯಿಂದ ಇದ್ದ ಮಕ್ಕಳು ಇವರ ಚಿತಾವಣೆಯಿಂದ ಹಿಜಬ್ ಧರಿಸಿ ಹೋದರು ಎಂದು ಕಾಂಗ್ರೆಸ್ ವಿರುದ್ಧ ನೇರ ಆರೋಪ ಮಾಡಿದರು. ಈ ವೇಳೆ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದನ್ನೂ ಓದಿ: ಎಸ್‍ಎಫ್‍ಐ ಉಗ್ರರ ಸಂಘಟನೆಯಾಗಿದ್ದು ಬ್ಯಾನ್ ಮಾಡಿ: ಕಾಂಗ್ರೆಸ್ ಸಂಸದ ಆಕ್ರೋಶ

    ಮತ್ತೆ ಮಾತನಾಡಿದ ಸಲೀಂ ಅಹಮದ್, ಇಂದು ಕೋಮು ಸಾಮರಸ್ಯಕ್ಕೆ ಧಕ್ಕೆ ಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮಕ್ಕಳಲ್ಲಿ ಬೇಧ ಭಾವ ತಂದಿದ್ದಾರೆ ಇದಕ್ಕೆ ಯಾರು ಕಾರಣ? ವಿದ್ಯಾರ್ಥಿಗಳಲ್ಲಿ ಕಂದಕ ತರುವ ಹಿಂದೂ, ಮುಸ್ಲಿಂ ಯಾವುದೇ ಸಂಘಟನೆ ಇರಲಿ ಬ್ಯಾನ್ ಮಾಡಲಿ ಎಂದಿದ್ದೇವೆ. ಈ ಸರ್ಕಾರಕ್ಕೆ ಧಮ್ ಇದೆಯಾ? ಅಂತ ಪ್ರಶ್ನೆ ಮಾಡಿದ್ರು. ಶಿವಮೊಗ್ಗ ಹರ್ಷ ಕೊಲೆಗೆ 25 ಲಕ್ಷ ರೂ. ಕೊಟ್ಟರು. ಗದಗದಲ್ಲಿ ಮುಸ್ಲಿಂ ವ್ಯಕ್ತಿ ಕೊಲೆಗೆ ಪರಿಹಾರ ಕೊಟ್ಟಿಲ್ಲ. ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು. ಮತ್ತೆ ಸದನದಲ್ಲಿ ಗದ್ದಲ ಗಲಾಟೆ ಆಗಿ ಸಭಾಪತಿಗಳು ಮಧ್ಯೆ ಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಕಾಶ್ಮೀರ್ ಫೈಲ್ಸ್ ಡೌನ್ಲೋಡಿಂಗ್ ಲಿಂಕ್ ಕ್ಲಿಕ್ ಮಾಡಿದ್ರೆ ಬ್ಯಾಂಕ್ ಖಾತೆಗೆ ಕನ್ನ