Tag: Saleem Ahmed

  • ನವೀನ್ ಕುಟುಂಬಸ್ಥರಿಗೆ 1 ಲಕ್ಷ ರೂ. ಚೆಕ್ ವಿತರಿಸಿದ ಸಲೀಂ ಅಹಮದ್

    ನವೀನ್ ಕುಟುಂಬಸ್ಥರಿಗೆ 1 ಲಕ್ಷ ರೂ. ಚೆಕ್ ವಿತರಿಸಿದ ಸಲೀಂ ಅಹಮದ್

    ಹಾವೇರಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಕನ್ನಡಿಗ ನವೀನ್ ಮೃತಪಟ್ಟ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭೇಟಿ ನೀಡಿದ್ದಾರೆ.

    ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರೋ ನಿವಾಸಕ್ಕೆ ಭೇಟಿ ನೀಡಿ, ನವೀನ್ ಭಾವಚಿತ್ರಕ್ಕೆ ಹೂಮಾಲೆ ಹಾಕಿ ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ಕುಟುಂಬಸ್ಥರಿಗೆ ಸಲೀಂ 1 ಲಕ್ಷ ರೂ. ಚೆಕ್ ವಿತರಿಸಿದರು. ಈ ವೇಳೆ ನವೀನ್ ಪಾರ್ಥೀವ ಶರೀರ ತರಬೇಕೆಂಬುದು ಕುಟುಂಬಸ್ಥರು ಸಲೀಂ ಮುಂದೆ ಆಗ್ರಹಿಸಿದರು. ಇದನ್ನೂ ಓದಿ: ಮೃತ ನವೀನ್ ಕುಟುಂಬಕ್ಕೆ ಸಾಂತ್ವನ ಹೇಳಿ 25 ಲಕ್ಷ ರೂ. ಚೆಕ್ ಕೊಟ್ಟ ಸಿಎಂ

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ, ಆದಷ್ಟು ಬೇಗ ಸರ್ಕಾರ ನವೀನ್ ಪಾರ್ಥಿವ ಶರೀರ ತರುವ ಕೆಲಸ ಮಾಡಬೇಕು. ಮೃತದೇಹ ತರುವುದರ ಜೊತೆಗೆ ಉಕ್ರೇನ್ ನಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಮಾಡಬೇಕು. ನವೀನ್ ಸಾವು ಸಾಕಷ್ಟು ದುಃಖ ತಂದಿದೆ. ನಮ್ಮಲ್ಲಿನ ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ನವೀನ್ ಸಾವು ರಾಜ್ಯಕ್ಕೆ ಒಂದು ಸಂದೇಶ ಕೊಟ್ಟಿದೆ ಎಂದು ಹೇಳಿದರು.

  • ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸ ಮಾಡ್ತಿದ್ದಾರೆ- ಸಲೀಂ ಅಹ್ಮದ್

    ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯೋ ಕೆಲಸ ಮಾಡ್ತಿದ್ದಾರೆ- ಸಲೀಂ ಅಹ್ಮದ್

    ಹಾವೇರಿ: ಎಚ್‌.ಡಿ.ಕುಮಾರಸ್ವಾಮಿ ಅವರು ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಪರಿಷತ್‌ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿದೆ. ಆದರೆ ಕಾಂಗ್ರೆಸ್‌ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಏನು ಹೇಳುತ್ತಿದ್ದಾರೆ ಎನ್ನುವುದು ನಮಗೆ ಅರ್ಥ ಆಗುತ್ತಿಲ್ಲ. ಅವರದೇನಿದ್ದರೂ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಸಿಟಿ ರವಿ ಅಲ್ಲ ಲೂಟಿ ರವಿ, ಡಿಕೆ ಅಲ್ಲ ಕೆಡಿ – ಪರಸ್ಪರ ವಾಗ್ದಾಳಿ ನಡೆಸಿದ ನಾಯಕರು

    ನಿನ್ನೆ ಪರಿಷತ್‌ನ 15 ಕಾಂಗ್ರೆಸ್‌ ಸದಸ್ಯರನ್ನು ಅಮಾನತುಗೊಳಿಸಿದರು. ಸಚಿವ ಭೈರತಿ ಬಸವರಾಜ ಅವರ ಭೂ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ಕೇಳಿದರೆ ನಮ್ಮವರನ್ನೇ ಅಮಾನತು ಮಾಡುತ್ತಾರೆ. ಭೂ ಹಗರಣ ಮಾಡಿರುವ ಭೈರತಿ ಬಸವರಾಜ್‌ ಕೂಡಲೇ ರಾಜೀನಾಮೆ ನೀಡಬೇಕು. ಅವರನ್ನು ಸಚಿವ ಸಂಪುಟದಿಂದ ಸಿಎಂ ಬೊಮ್ಮಾಯಿ ಅವರು ಕೂಡಲೇ ಕೈಬಿಡಬೇಕು ಎಂದು ಸಲೀಂ ಅಹ್ಮದ್‌ ಆಗ್ರಹಿಸಿದ್ದಾರೆ.

    ಪರ್ಸೆಂಟೇಜ್‌ ಬಗ್ಗೆ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದಿದ್ದು, ಇತಿಹಾಸದಲ್ಲೇ ಪ್ರಥಮ. ಪ್ರಧಾನಿಯವರಿಗೆ ಬದ್ಧತೆ ಇದ್ದರೆ ಕೂಡಲೇ ಈ ಬಗ್ಗೆ ಸಿಬಿಐ ತನಿಖೆಗೆ ಕೊಡಬೇಕಿತ್ತು. ಪರಿಷತ್ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ. ಕುಮಾರಸ್ವಾಮಿ ಏನು ಹೇಳ್ತಾರೆ ಅನ್ನೋದು ನಮಗೆ ಅರ್ಥ ಆಗೋದಿಲ್ಲ. ಸಿದ್ದರಾಮಯ್ಯ ಯಾವುದೇ ಭ್ರಷ್ಟಾಚಾರ, ಆರೋಪಗಳಿಲ್ಲದೆ ಐದು ವರ್ಷ ಸರ್ಕಾರವನ್ನು ನಡೆಸಿದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡ ಧ್ವಜಕ್ಕೆ ಬೆಂಕಿ – ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೆಚ್‍ಡಿಕೆ ಆಗ್ರಹ

    ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಪರ್ಸೆಂಟೇಜ್ ಬಗ್ಗೆ ತನಿಖೆ ಮಾಡುತ್ತೇವೆ ಎನ್ನುವುದನ್ನು ಸ್ವಾಗತಿಸುತ್ತೇವೆ. ನಮ್ಮ ಮುಖಂಡರು ಯಾವುದೇ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.

  • ಕಟೀಲ್ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಸಲೀಂ ಅಹಮ್ಮದ್

    ಕಟೀಲ್ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಸಲೀಂ ಅಹಮ್ಮದ್

    ಹಾವೇರಿ: ನಳಿನ್ ಕುಮಾರ್ ಕಟೀಲ್ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ.

    ಹಾವೇರಿಯಲ್ಲಿ ಮಾತನಾಡಿದ ಅವರು, ಇದೆಲ್ಲಾ ವಿಚಾರ ನಳೀನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿಲ್ಲ. ಅವರ ಈ ಮಾತುಗಳು ದುರ್ದೈವ, ಅದು ಅವರ ವ್ಯಕ್ತಿತ್ವ ತೋರಿಸುತ್ತಿದೆ. ಇಂದಿರಾಗಾಂಧಿ ಅವರು ದೇಶದ ಐಕ್ಯತೆಗೆ ಪ್ರಾಣ ಕೊಟ್ಟಿದ್ದಾರೆ. 16 ವರ್ಷ ಈ ರಾಷ್ಟ್ರವನ್ನು ಆಳಿ, ಇಡೀ ಪ್ರಪಂಚದಲ್ಲಿ ಉಕ್ಕಿನ ಮಹಿಳೆ ಎಂದು ಬಿರುದು ಪಡೆದಿದ್ದರು ಎಂದರು.

    ಬಿಜೆಪಿಯ ಪ್ರಧಾನಮಂತ್ರಿ ಆಗಿದ್ದ ವಾಜಪೇಯಿ ಅವರು ಇಂದಿರಾಗಾಂಧಿ ಅವರಿಗೆ ದುರ್ಗೆ ಎಂದು ಕರೆದಿದ್ದರು. ರಾಜೀವ್ ಗಾಂಧಿ ಅವರು ದೇಶದ ಐಕ್ಯತೆಗಾಗಿ ಪ್ರಾಣಾರ್ಪಣೆ ಮಾಡಿದರು. ಇಂತಹ ಪರಿವಾರದ ಬಗ್ಗೆ ಕಟೀಲು ಮಾತನಾಡಿರುವುದು ನಿಜವಾಗಿಯೂ ಕೀಳು ಭಾಷೆ. ಕಟೀಲ್ ಅವರ ಈ ಮಾತುಗಳನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯನಿಗೆ ಹೃದಯಾಘಾತ

    ಅರ್ಥ ಮಾಡಿಕೊಳ್ಳಬೇಕು, ಒಂದು ಪಕ್ಷದ ಅಧ್ಯಕ್ಷರಾಗಿ ಎಷ್ಟು ಮಾತಾಡಬೇಕು ಅಷ್ಟು ಮಾತಾಡಬೇಕು. ಜಾಸ್ತಿ ಮಾತಾಡಿದ್ರೆ ಜನ ನಗುತ್ತಾರೆ ಎಂದು ಕಿಡಿಕಾರಿದ್ದಾರೆ. ಇನ್ನೂ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸೀಟುಗಳು ಬರುತ್ತೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆಡಳಿತದಿಂದ ಬೇಸತ್ತು ಹೋಗಿದ್ದಾರೆ ಎಂದರು.

  • ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

    ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ 35 ಸ್ಥಾನ ಗೆಲ್ಲಲಿದೆ: ಸಲೀಂ ಅಹಮದ್ ವಿಶ್ವಾಸ

    ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಚುನಾಣೆಯ 55 ಸ್ಥಾನಗಳ ಪೈಕಿ ಕನಿಷ್ಠ 35 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    SALEEM AHMED

    ಕಲಬುರಗಿ ಮಹಾನಗರ ಚುನಾವಣೆ ಹಿನ್ನೆಲೆ ಡಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಜನರ ಹಿತ ಕಾಪಾಡಲು ವಿಫಲವಾಗಿವೆ. ಸುಮಾರು 2,000 ಕೋಟಿಯಷ್ಟು ರಾಜ್ಯ ಸರ್ಕಾರ ಭ್ರಷ್ಟಾಚಾರ ಎಸಗಿದೆ. ಕೋವಿಡ್ ಎರಡನೇ ಅಲೆಯನ್ನು ಎದುರಿಸಲು ಸರ್ಕಾರ ವಿಫಲವಾಗಿದ್ದು, ಸಾವಿನ ಸಂಖ್ಯೆ ಕಡಿಮೆ ತೋರಿಸುವ ಮೂಲಕ ಜನರಿಗೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಸಾವಿನ ಸಂಖ್ಯೆ ಕುರಿತು ಆಂತರಿಕ ತನಿಖೆ ನಡೆಸುತ್ತಿದೆ. ರಾಜ್ಯ ಸರ್ಕಾರ ಕೋವಿಡ್‍ನಿಂದ ನಿಧನರಾದ ವ್ಯಕ್ತಿಗಳ ಕುಟುಂಬದವರಿಗೆ ತಲಾ ರೂ. 5 ಲಕ್ಷ ಪರಿಹಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

    SALEEM AHMED

    ಮೊಟ್ಟೆ ಹಗರಣದಲ್ಲಿಭಾಗಿಯಾಗಿರುವ ಶಶಿಕಲಾ ಜೊಲ್ಲೆ ಪ್ರಮಾಣ ಸ್ವೀಕಾರಕ್ಕೆ ಬರಲು ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಬರಲು ಜೀರೋ ಟ್ರಾಫಿಕ್ ಮಾಡಿದ್ದು ನೋಡಿದರೆ ಸರ್ಕಾರದ ನೈತಿಕತೆ ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ. ಇತ್ತೀಚಿಗೆ ನಾಲ್ವರು ಕೇಂದ್ರ ಸಚಿವರು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಸಿದರು. ಯಾವ ಪುರುಷಾರ್ಥಕ್ಕೆ ಈ ಕಾರ್ಯಕ್ರಮ ನಡೆಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಂದ ಅಪಾರ ಜನರು ಸಾವು ನೋವು ಅನುಭವಿಸಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಜನರಿಗೆ ಅಚ್ಚೇದಿನ್ ಭರವಸೆ ನೀಡಿ ಅತ್ಯಂತ ಕೆಟ್ಟ ದಿನಗಳಲ್ಲಿ ನರಳುವಂತೆ ಮಾಡಿದ್ದಕ್ಕೆ, ಸುಮಾರು 13,000 ಕೋಟಿ ಜಿಎಸ್‍ಟಿ ಅನುದಾನ ಬಿಡುಗಡೆ ಮಾಡಿಸಲು ಸಾಧ್ಯವಾಗದ್ದಕ್ಕೆ ಬಿಜೆಪಿ ಮಂತ್ರಿಗಳು ಕ್ಷಮೆ ಕೇಳುವ ಯಾತ್ರೆ ನಡೆಸಬೇಕಿತ್ತು ಎಂದಿದ್ದಾರೆ. ಇದನ್ನೂ ಓದಿ:ಚಾಮುಂಡಿ ದೇವಿಯ ತಪ್ಪಲಿನಲ್ಲಿ ಅತ್ಯಾಚಾರ ಆಗಿರುವುದು ಅಪಮಾನ: ಜಯ ಮೃತ್ಯುಂಜಯ ಸ್ವಾಮೀಜಿ

    ಯಾದಗಿರಿಯಲ್ಲಿ ಕೇಂದ್ರ ಸಚಿವರ ಸ್ವಾಗತ ಸಮಯದಲ್ಲಿ ಗಾಳಿಯಲ್ಲಿ ಗುಂಡುಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಲೀಂ ಅಹಮದ್ ಅವರು ಉತ್ತರ ಪ್ರದೇಶ ಹಾಗೂ ಬಿಹಾರದ ಸಂಸ್ಕೃತಿಯನ್ನು ಬಿಜೆಪಿ ರಾಜ್ಯದಲ್ಲಿ ಪರಿಚಯಿಸುತ್ತಿದೆ ಇದು ನಾಚಿಕೆಗೇಡು. ಮಾಜಿ ಸಚಿವರೊಬ್ಬರ ಅಣತಿಯಂತೆ ಆ ಘಟನೆ ನಡೆದಿದ್ದು, ಹೋಂ ಮಿನಿಸ್ಟರ್ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

    ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡುವಾಗ ಗೃಹ ಸಚಿವರು ಉಢಾಫೆಯಾಗಿ ಉತ್ತರಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಾಜ್ಯದ ಜನರು ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನವಿರೋಧಿ ನೀತಿಯಿಂದಾಗಿ ರೋಸಿ ಹೋಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಆರಿಸಿ ಕಳಿಸುವ ಮೂಲಕ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಒಂದು ಹೊಸತನಕ್ಕೆ ನಾಂದಿ ಹಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದು ನುಡಿದಿದ್ದಾರೆ. ಇದನ್ನೂ ಓದಿ:ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್​ಗಳು

    ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆ ಟಿಕೆಟ್ ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಾಗಿದೆ. ಅತೃಪ್ತರೆಲ್ಲ ಬೇರೆ, ಬೇರೆ ಪಕ್ಷ ಸೇರಿದ್ದಾರೆ. ಇದು ಪಕ್ಷಕ್ಕೆ ಹಿನ್ನೆಡೆಯಾಗಲಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಜೊತೆಗೆ ಯುವಕರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. 55 ಸೀಟುಗಳಲ್ಲಿ 36 ಜನ ಹೊಸಬರಿಗೆ ಅವಕಾಶ ನೀಡಲಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಸಹಜವಾಗಿ ಎಲ್ಲ ಪಕ್ಷದಲ್ಲಿ ಅಸಮಾಧಾನ ಇದ್ದೇ ಇರುತ್ತದೆ. ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸಲಾಗಿದೆ. ಇಷ್ಟಾಗಿಯೂ ಕೆಲವರು ಎಂಐಎಂ ಹಾಗೂ ಜೆಡಿಎಸ್‍ಗೆ ಹೋಗಿದ್ದಾರೆ. ಆದರೂ ಕೂಡಾ ನಮ್ಮ ಪಕ್ಷಕ್ಕೆ ನಷ್ಟವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

    ಇದೇ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಶಾಸಕ ಅಜಯ್ ಸಿಂಗ್ ಅವರು ನಮ್ಮ ಪಕ್ಷದಲ್ಲಿ ಟಿಕೆಟ್ ಹಂಚಿಕೆಯಾದ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಬಿಜೆಪಿಯಲ್ಲಿ ಅಭ್ಯರ್ಥಿಗಳು ಸಿಗದೆ ಕೆಲಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹಾಕಲು ವಿಫಲವಾಗಿದೆ ಎಂದಿದ್ದಾರೆ. ಇದನ್ನೂ ಓದಿ:ಜನರ ಮರ್ಯಾದೆಯನ್ನೆ ಬಂಡವಾಳ ಮಾಡಿಕೊಂಡಿದ್ದ ಗ್ಯಾಂಗ್ ರೇಪ್ ಕಿರಾತಕರು

    ರಾಷ್ಟ್ರೀಯ ಪಕ್ಷ ಎಂದು ಹೇಳುವ ಬಿಜೆಪಿ ತನ್ನ ಬಿ ಟೀಮ್ ಆದ ಎಂಐಎಂಗೆ ಸ್ಥಾನ ಬಿಟ್ಟುಕೊಟ್ಟಿದೆ ಎಂದು ಕುಟುಕಿದ ಸಲೀಂ ಅಹಮದ್, ಇದು ಆ ಪಕ್ಷದ ಚುನಾವಣಾ ನೀತಿಯನ್ನು ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂಎಲ್‍ಸಿ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಮತ್ತಿತರಿದ್ದರು.

  • ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

    ಇದು ಜನಾಶೀರ್ವಾದ ಅಲ್ಲ, ಜನರ ಕ್ಷಮೆ ಕೋರುವ ಯಾತ್ರೆ ಆಗಬೇಕು: ಸಲೀಂ ಅಹ್ಮದ್

    ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ರಾಜ್ಯಕ್ಕೆ ನಿರಂತರ ಅನ್ಯಾಯ ಮಾಡುತ್ತಿದ್ದು, ಅವರು ಜನಾಶೀರ್ವಾದ ಯಾತ್ರೆ ಬದಲು ಜನರ ಕ್ಷಮೆ ಕೋರುವ ಯಾತ್ರೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕಿಡಿಕಾರಿದ್ದಾರೆ.

    ನಗರದ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯ ವೇಳೆ ಮಾತನಾಡಿದ ಅವರು, ಕೋವಿಡ್ 2ನೇ ಅಲೆಯಲ್ಲಿ ಲಕ್ಷಾಂತರ ಜನರ ಸಾವಿಗೆ ಕಾರಣರಾಗಿದ್ದಕ್ಕೆ, ಸ್ವರ್ಗ ತೋರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದು ಜನರಿಗೆ ನರಕ ತೋರಿಸುತ್ತಿರುವುದಕ್ಕೆ, ಕೇಂದ್ರದ ಮಲತಾಯಿ ಧೋರಣೆ, ರಾಜ್ಯಕ್ಕೆ ಬರಬೇಕಾದ ಅನುದಾನ ತರಲು ವಿಫಲರಾಗಿರುವುದಕ್ಕೆ, 2019ರಿಂದ ಆಗುತ್ತಿರುವ ನೆರೆಗೆ ಪರಿಹಾರ ನೀಡದಿರುವುದಕ್ಕೆ, ಜಿಎಸ್‍ಟಿ ಪಾಲು 13 ಸಾವಿರ ಕೋಟಿ ನೀಡದಿರುವುದಕ್ಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಬಿಜೆಪಿ ನಾಯಕರು ರಾಜ್ಯದ ಜನರ ಮುಂದೆ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಜನ ಬಿಜೆಪಿ ವಿರುದ್ಧ ಆಕ್ರೋಶದ ಯಾತ್ರೆ ನಡೆಸುತ್ತಾರೆ’ ಎಂದು ಎಚ್ಚರಿಸಿದರು.

    2ನೇ ಅಲೆ ಎಚ್ಚರಿಕೆ ನೀಡಿದ ನಂತರವೂ ಬಿಜೆಪಿ ಸರ್ಕಾರ ಉಪಚುನಾವಣೆ, ನಾಯಕತ್ವ ಬದಲಾವಣೆ ವಿಚಾರವಾಗಿ ಮೈಮರೆಯಿತು. ಪರಿಣಾಮ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ಉತ್ತರಿಸಬೇಕು. ಮೂರನೇ ಅಲೆ ತಡೆಯಲು ಯಾವ ಕ್ರಮ ಕೈಗೊಂಡಿದ್ದಾರೆ ಯಾರಿಗೂ ಗೊತ್ತಿಲ್ಲ ಎಂದರು.

    ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದ್ದು, ರಾಜ್ಯದ 25 ಸಂಸದರು ಆಯ್ಕೆಯಾಗಿದ್ದು ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುತ್ತಾರೆ. ಇಲ್ಲಿ ಹುಲಿಗಳಂತೆ ಮಾತನಾಡುವ ಸಂಸದರು ಮೋದಿ ಮುಂದೆ ಇಲಿಗಳಾಗುತ್ತಾರೆ. ರಾಜ್ಯಕ್ಕೆ ಬರಬೇಕಾದ ಪಾಲು ತರಲು ಹೋರಾಟ ಮಾಡುತ್ತಿಲ್ಲ. ಹೀಗಿರುವಾಗ ಜನ ಇವರಿಗೆ ಯಾಕೆ ಆಶೀರ್ವಾದ ಮಾಡುತ್ತಾರಾ? ಎಂದು ಪ್ರಶ್ನಿಸಿದರು.

    ಈ ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ಅನುಮತಿ ನಿರಾಕರಿಸಿ ಮುಖ್ಯ ಕಾರ್ಯದರ್ಶಿ ಪತ್ರ ಬರೆಯುತ್ತಾರೆ. ಆದರೆ ಸಾವಿರಾರು ಜನ ಸೇರಿಸಿ ಜನಾಶೀರ್ವಾದ ಯಾತ್ರೆ ಮಾಡಲು ಅನುಮತಿ ನೀಡುತ್ತಾರೆ. ಕೋವಿಡ್ ಮೂರನೇ ಅಲೆ ಬಂದರೆ, ಅದರಿಂದ ಅನಾಹುತ ಆದರೆ ಅದಕ್ಕೆಲ್ಲ ಈ ನಾಲ್ಕು ಜನ ಕೇಂದ್ರ ಸಚಿವರೇ ಹೊಣೆಯಾಗುತ್ತಾರೆ ಎಂದು ಟೀಕಿಸಿದರು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಗೃಹ ಸಚಿವರ ಹೆಗಲ ಮೇಲಿದೆ. ಬಿಜೆಪಿ ಮಾಜಿ ಸಚಿವರು ನಾಡ ಬಂದೂಕಿನಿಂದ ಗುಂಡು ಹಾರಿಸಲು ಅವಕಾಶ ಕೊಟ್ಟಿದ್ದು ಯಾರು? ಅದು ಎಲ್ಲಿಂದ ಬಂತು? ಇದನ್ನು ಗೃಹ ಸಚಿವರು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಸಮರ್ಥನೆಗೆ ಮುಂದಾಗಿ, ಬಿಹಾರ ಹಾಗೂ ಉತ್ತರ ಪ್ರದೇಶದ ಸಂಸ್ಕೃತಿಯನ್ನು ತರಲು ಮುಂದಾಗಬಾರದು. ನಮ್ಮದು ಶಾಂತಿ ಪ್ರಿಯ ರಾಜ್ಯ. ಇದನ್ನು ನೋಡಿ ಬೇರೆಯವರು ಕಲಿಯ ಬಾರದು. ಮೊದಲ ಬಾರಿಗೆ ಸಚಿವರಾಗಿರುವ ಗೃಹಮಂತ್ರಿಗಳು ಕಾನೂನು ಪುಸ್ತಕ ಓದಬೇಕು ಎಂದು ಟೀಕಿಸಿದರು.

  • ಬಿಜೆಪಿ ಜನರಿಗೆ ನರಕ ದರ್ಶನ ಮಾಡಿಸುತ್ತಿದೆ: ಸಲೀಂ ಅಹಮದ್

    ಬಿಜೆಪಿ ಜನರಿಗೆ ನರಕ ದರ್ಶನ ಮಾಡಿಸುತ್ತಿದೆ: ಸಲೀಂ ಅಹಮದ್

    ಚಿತ್ರದುರ್ಗ: ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣೆ ಪೂರ್ವದಲ್ಲಿ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿದ್ದರು. ಇದೀಗ ನರಕ ತೋರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಆರೋಪಿಸಿದ್ದಾರೆ.

    ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಧಿಕಾರ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ. ಹೀಗಂತ ಬಿಜೆಪಿ ಮುಖಂಡರೇ ಮುಖ್ಯಮಂತ್ರಿಗಳ ಮೇಲೆ ಆರೋಪಿಸುತ್ತಿದ್ದಾರೆ. ಇದು ಸರ್ಕಾರದ ಕಾರ್ಯವೈಖರಿಯನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದರು.

    ಕೊರೊನಾದಿಂದ ಸುಮಾರು 3 ಲಕ್ಷ ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆದರೆ ರಾಜ್ಯ ಸರ್ಕಾರ 30 ಸಾವಿರ ಜನ ಮಾತ್ರ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ವರದಿ ನೀಡುತ್ತಿದೆ. ಅಲ್ಲದೆ ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದು, ಈ ಮರಣವನ್ನು ರಾಜ್ಯ ಸರ್ಕಾರ ನೆಡೆಸಿದ ಕೊಲೆ ಎಂದು ನಾವು ಪರಿಗಣಿಸುತ್ತೇವೆ ಎಂದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಬೇಕು. ಬೆಲೆ ಏರಿಕೆ ಖಂಡಿಸಿ ಜು.7ರಂದು ರಾಜ್ಯದ್ಯಂತ ಸೈಕಲ್ ಜಾಥಾ ನಡೆಸಲಿದ್ದೇವೆ. ಪಾರ್ಲಿಮೆಂಟ್ ನಿಂದ ಗ್ರಾಮ ಪಂಚಾಯಿತಿವರಿಗೆ ಸಹಾಯ ಹಸ್ತ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ನಡೆಸುತ್ತಿದೆ. ಕೋವಿಡ್ ಬಾಧಿತ ಕುಟುಂಬಗಳನ್ನು ಭೇಟಿ ಮಾಡುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಜನರ ಕೊರೊನಾ ವಾರಿಯರ್ಸ್ ನೇಮಕ ಮಾಡುತ್ತೇವೆ ಎಂದು ಹೇಳಿದರು.

    ಅಧಿಕಾರ ಮತ್ತು ಹಣಕ್ಕಾಗಿ ನಮ್ಮ ಪಕ್ಷದ ಕೆಲವು ಶಾಸಕರು ಮಾತೃ ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ. ಆದರೂ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ. ಸದ್ಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ನಾವು ಹೆಚ್ಚಿನ ಒತ್ತುಕೊಟ್ಟು ಕೆಲಸ ಮಾಡಲಿದ್ದೇವೆ ಎಂದರು. ಈ ವೇಳೆ ಶಾಸಕ ರಘುಮೂರ್ತಿ, ಮಾಜಿ ಸಚಿವ ಆಂಜನೇಯ, ಮಾಜಿ ಶಾಸಕರಾದ ಎಸ್.ತಿಪ್ಪೇಸ್ವಾಮಿ, ಉಮಾಪತಿ, ಬಿಜಿ ಗೋವಿಂದಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್ ಹಾಜರಿದ್ದರು.

  • ರಾಜ್ಯದಲ್ಲಿ ಯಡಿಯೂರಪ್ಪ, ವಿಜಯೇಂದ್ರ ಸೇರಿ ಇಬ್ಬರು ಸಿಎಂಗಳು: ಸಲೀಂ ಅಹ್ಮದ್

    ರಾಜ್ಯದಲ್ಲಿ ಯಡಿಯೂರಪ್ಪ, ವಿಜಯೇಂದ್ರ ಸೇರಿ ಇಬ್ಬರು ಸಿಎಂಗಳು: ಸಲೀಂ ಅಹ್ಮದ್

    ತುಮಕೂರು: ರಾಜ್ಯದಲ್ಲಿ ಈಗ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ, ಒಂದು ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೊಂದು ಡಿಫ್ಯಾಕ್ಟ್ ಸಿಎಂ ವಿಜಯೇಂದ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವ್ಯಂಗ್ಯವಾಡಿದ್ದಾರೆ.

    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಅಹ್ಮದ್ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‍ಗೂ ಪಾಲು ಇದೆ ಎಂಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ಅಲ್ಲಗಳೆದರು. ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಇದನ್ನು ನಾವು ಹೇಳುತ್ತಿಲ್ಲ, ಅವರ ಪಕ್ಷದ ಮುಖಂಡರು ಹೇಳುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಹಮಾರ ಕುತ್ತಾ ಹಮಾರ ಗಲ್ಲಿ ಮೇ ಷೇರ್ ತರಹ ಬಿಎಸ್‌ವೈ: ಸಿದ್ದರಾಮಯ್ಯ

    ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ತನಿಖೆ ಮಾಡಿ ಎಂದು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಟೆಂಡರ್ ಪ್ರಕ್ರಿಯೆಯಲ್ಲಿ ಹಣಲೂಟಿ ಮಾಡಿದ್ದಾರೆ ಎಂದು ಮಂತ್ರಿಗಳು, ಮಾಜಿ ಮಂತ್ರಿಗಳು ಹೇಳುತ್ತಿದ್ದಾರೆ. ಹೀಗಾಗಿ ಇದೊಂದು ಭ್ರಷ್ಟ ಸರ್ಕಾರ ನಾಯಕನಿಲ್ಲದ ಸರ್ಕಾರವಾಗಿದೆ ಎಂದು ಟೀಕಿಸಿದರು.

  • ಜಮೀರ್ ಅಹ್ಮದ್ ಪೊಲಿಟಿಕಲ್ ಟ್ರಯಲ್- ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿ

    ಜಮೀರ್ ಅಹ್ಮದ್ ಪೊಲಿಟಿಕಲ್ ಟ್ರಯಲ್- ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿ

    ಉಡುಪಿ: ಸಾಂಕ್ರಾಮಿಕ ರೋಗ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ದೊಡ್ಡ ಗೋಲ್ಮಾಲ್ ಆಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಡಿಜೆಹಳ್ಳಿ ಮತ್ತು ಡ್ರಗ್ಸ್ ಜಾಲದ ಕಾರ್ಯಾಚರಣೆ ಇದಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ದೂರಿದರು.

    ಡ್ರಗ್ಸ್ ಬೆಳವಣಿಗೆಯನ್ನು ಚರ್ಚೆಗೆ ತಂದು ಉಳಿದೆಲ್ಲಾ ವೈಫಲ್ಯ ಮರೆ ಮಾಚಿಸುವ ಯತ್ನ ನಡೆಯುತ್ತಿದೆ. ದಿಕ್ಕು ತಪ್ಪಿಸುವ ಯತ್ನದಲ್ಲಿ ರಾಜ್ಯ ಸರ್ಕಾರ ತಲ್ಲೀನ ಆಗಿದೆ. ಸಿಟಿ ರವಿಗೆ ಯಾರಿಂದ ಒತ್ತಡ ಇದೆ ಹೇಳಲಿ. ನೀವು ಸಿಎಂ ಅಲ್ಲ, ಗೃಹ ಸಚಿವ ಕೂಡಾ ಅಲ್ಲ. ಕಾಂಗ್ರೆಸ್ ಒತ್ತಡ ಯಾವತ್ತೂ ಹೇರಲ್ಲ. ಕೇಂದ್ರ ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಇದೆ ತನಿಖೆ ಮಾಡಿ. ತನಿಖೆಗೆ ಬೆಂಬಲ ಕೊಡುತ್ತೇವೆ. ಕೇವಲ ಹೇಳಿಕೆಯಿಂದ ವ್ಯವಸ್ಥೆ ಸರಿ ಮಾಡಲು ಸಾಧ್ಯವಿಲ್ಲ. ರಾಗಿಣಿ ಬಿಜೆಪಿಯ ಕಾರ್ಯಕರ್ತೆ. ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.

    ನೆರೆ ಹಾವಳಿ ಪರಿಹಾರ ಬಂದಿಲ್ಲ. ನಮ್ಮ ರಾಜ್ಯದ ಎಂಪಿಗಳು ಇಲ್ಲಿ ಹುಲಿಯಂತೆ ವರ್ತಿಸುತ್ತೀರಿ. ಮೋದಿ ಮುಂದೆ ಬೆಕ್ಕಿನ ನಿಲ್ಲುತ್ತೀರಿ. ಮೊದಲು ಮಾತನಾಡಲು ಕಲಿಯಿರಿ. ರಾಜ್ಯದ ಹಿತಾಸಕ್ತಿ ಕಾಪಾಡಿ ಪಲಾಯನ ವಾದ ಮಾಡುದರಲ್ಲಿ ಕಾಲ ಕಳೆಯಬೇಡಿ. ರಾಜ್ಯ ಸರ್ಕಾರದ ಹಗರಣ, ವೈಫಲ್ಯ ವಿಚಾರದಲ್ಲಿ ಜೆಡಿಎಸ್ ಮೌನದ ಬಗ್ಗೆ ಅವರನ್ನೇ ಕೇಳಿ. ಯಡಿಯೂರಪ್ಪ ಕುಮಾರಸ್ವಾಮಿ ಭೇಟಿ ಬಗ್ಗೆ ಅವರೇ ಬಹಿರಂಗಪಡಿಸಲಿ ಎಂದರು.

    ಕಾಂಗ್ರೆಸ್ ಸರ್ಜರಿ ನ್ಯಾಚುರಲ್ ಪ್ರಾಸೆಸ್. ಬದಲಾವಣೆ ಆಗುತ್ತಿರಬೇಕು. ಹೊಸಬರ ಆಗಮನ ಆಗಬೇಕು. ಹಿರಿಯರ ಮಾರ್ಗದರ್ಶನ ಜೊತೆಗಿರಬೇಕು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಮ್ಮ ಶಾಸಕ. ಅವರ ತಂದೆ ಕೂಡಾ ಕಾಂಗ್ರೆಸ್ ಮುಖಂಡ. ಅವರಿಗೆ ಕಾಂಗ್ರೆಸ್ ಮುಂದೆನೂ ಸಪೋರ್ಟ್ ಮಾಡುತ್ತದೆ. ಅವರು ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದರು.

    ಜಮೀರ್ ವಿಚಾರದಲ್ಲಿ ಮಾಧ್ಯಮಗಳ ಮೂಲಕ ದಾರಿ ತಪ್ಪಿಸಲಾಗುತ್ತಿದೆ. ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ಮೀಡಿಯಾ ಟ್ರಯಲ್ ಸರಿಯಲ್ಲ. ಡ್ರಗ್ಸ್ ಪೊಲಿಟಿಕಲ್ ಟ್ರಯಲ್ ಆಗಬಾರದು. ಬಿಜೆಪಿ ನಾಯಕರು ಪೊಲೀಸರ ತರ, ತನಿಖಾಧಿಕಾರಿಗಳ ತರ ವರ್ತಿಸುತ್ತಾರೆ. ಸ್ಟೇಟ್ ಮೆಂಟ್ ಸಾಕು, ಕೆಲಸ ಮಾಡಿ ಎಂದು ಸಲೀಂ ಹೇಳಿದರು.