Tag: samajwadi

  • ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

    ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್ ಯಾದವ್

    ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಯುವ ಹಾಗೂ ಮಹಿಳಾ ವಿಭಾಗ ಸೇರಿದಂತೆ ಎಲ್ಲ ಘಟಕಗಳ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಸಂಘಗಳನ್ನು ವಿಸರ್ಜಿಸಿದ್ದಾರೆ.

    ಈ ನಿರ್ಧಾರಕ್ಕೆ ಯಾವುದೇ ಅಧಿಕೃತ ಕಾರಣಗಳನ್ನು ಈವರೆಗೆ ನೀಡಿಲ್ಲ. ಆದರೆ ಪಕ್ಷದ ಭದ್ರಕೋಟೆಗಳಾದ ರಾಂಪುರ ಮತ್ತು ಅಜಂಗಢದಲ್ಲಿ ಲೋಕಸಭೆ ಉಪಚುನಾವಣೆ ಸೋಲಿನ ನಂತರ ಸಮಾಜವಾದಿ ಪಕ್ಷವನ್ನು ಪುನಃ ಕಟ್ಟಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.

    ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಅಧ್ಯಕ್ಷ ನರೇಶ್ ಉತ್ತಮ್ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯುತ್ತಾರೆ ಎಂದು ಪಕ್ಷ ಹೇಳಿದೆ. ಈ ಬಗ್ಗೆ ಸಮಾಜವಾದಿ ಪಕ್ಷ ಟ್ವಿಟ್ಟರ್‌ನಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಪಕ್ಷದ ರಾಜ್ಯಾಧ್ಯಕ್ಷರನ್ನು ಹೊರತುಪಡಿಸಿ, ಪಕ್ಷದ ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಕಾರ್ಯಕಾರಿ ಘಟಕಗಳನ್ನು ವಿಸರ್ಜಿಸಿದ್ದಾರೆ ಎಂದು ತಿಳಿಸಿದೆ.

    ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ಯುವಜನ, ಮಹಿಳಾ ಘಟಕ ಸೇರಿದಂತೆ ಪಕ್ಷದ ಎಲ್ಲ ಸಂಘಟನೆಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸ್ಪೀಕರ್ ಆಗಿ ಆಯ್ಕೆಯಾದ ರಾಹುಲ್ ನಾರ್ವೇಕರ್ ಯಾರು?

    2024ರ ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷವು ಸಜ್ಜಾಗುತ್ತಿದ್ದು, ಬಿಜೆಪಿಯನ್ನು ಸಂಪೂರ್ಣ ಬಲದಿಂದ ಎದುರಿಸಲು ಸಂಘಟನೆಯನ್ನು ಬಲಪಡಿಸುವತ್ತ ಗಮನ ಹರಿಸಲಾಗಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    Live Tv

  • ಯೋಗಿ ಆದಿತ್ಯನಾಥ್‍ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಯುವತಿ ಸಮಾಜವಾದಿ ಪಕ್ಷದ ಅಭ್ಯರ್ಥಿ

    ಯೋಗಿ ಆದಿತ್ಯನಾಥ್‍ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಯುವತಿ ಸಮಾಜವಾದಿ ಪಕ್ಷದ ಅಭ್ಯರ್ಥಿ

    ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ್ದ 25 ವರ್ಷದ ವಿದ್ಯಾರ್ಥಿನಿ ಪೂಜಾ ಶುಕ್ಲಾ ಈಗ ಲಕ್ನೋ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

    ಜೂನ್ 2017ರಲ್ಲಿ ಇತರ 10 ಮಂದಿ ವಿದ್ಯಾರ್ಥಿಗಳೊಂದಿಗೆ ಲಕ್ನೋ ವಿಶ್ವವಿದ್ಯಾಲಯದ ರಸ್ತೆಯಲ್ಲಿ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟಿಸಿ ಕಪ್ಪು ಬಾವುಟ ಪ್ರದರ್ಶಿಸಿ ಆದಿತ್ಯನಾಥ್ ಅವರ  ಬೆಂಗಾವಲು ವಾಹನವನ್ನು  ತಡೆದಿದ್ದರು. ಈ ವಿಚಾರವಾಗಿ ಇವರನ್ನು ಬಂಧನ ಮಾಡಲಾಗಿತ್ತು.  ಬಳಿಕ 20 ದಿನಗಳ ನಂತರ ಜೈಲಿನಿಂದ ಹೊರಬಂದ ನಂತರ ಪೂಜಾ ಶುಕ್ಲಾ ಅವರು ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿಯಾಗಿದ್ದರು. ಬಳಿಕ ಪಕ್ಷದ ವಿದ್ಯಾರ್ಥಿ ವಿಭಾಗವಾದ ಸಮಾಜವಾದಿ ಛತ್ರ ಸಭಾಕ್ಕೆ ಸೇರ್ಪಡೆಗೊಂಡಿದ್ದರು.

    ಈ ವಿಚಾರವಾಗಿ ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಪೂಜಾ ಶುಕ್ಲಾ, ಹಿಂದಿ ಸ್ವರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಯೋಗಿ ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‍ಗೆ ತೆರಳುತ್ತಿದ್ದಾಗ, ಅಖಿಲ ಭಾರತ ವಿದ್ಯಾರ್ಥಿ ಸಂಘ, ಭಾರತೀಯ ವಿದ್ಯಾರ್ಥಿ ಒಕ್ಕೂಟ ಮತ್ತು ಸಮಾಜವಾದಿ ಛತ್ರ ಸಭಾದ ವಿದ್ಯಾರ್ಥಿಗಳು ಒಟ್ಟಾಗಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದೆವು. ಯೋಗಿ ಅವರ ಬೆಂಗಾವಲು ವಾಹನವನ್ನು ತಡೆದಿದ್ದೆವು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದೆವು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಜನಸ್ನೇಹಿ ಬಜೆಟ್, ಎಲ್ಲರಿಗೂ ಸಹಾಯವಾಗುವ ಕಾರ್ಯಕ್ರಮಗಳು: ಆರ್.ಅಶೋಕ್

    ಪ್ರತಿಭಟನೆಗೆ ಪ್ರಜಾಸತ್ತಾತ್ಮಕ ವಿಧಾನಗಳನ್ನು ಬಳಸಿದ್ದರೂ ನಮ್ಮ ಬಂಧನವಾಗಿತ್ತು. ನಾವು ಬಂಧನಕ್ಕೊಳಗಾಗುತ್ತೇವೆ ಎಂದು ಎಂದಿಗೂ ಯೋಚಿಸಿರಲಿಲ್ಲ. ಆದರೆ ಆ ಘಟನೆ ಒಳ್ಳೆಯದ್ದಕ್ಕಾಗಿ ಹೋರಾಡುವ ನನ್ನ ನಂಬಿಕೆಯನ್ನು ಮತ್ತಷ್ಟು ದೃಢಗೊಳಿಸಿತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ನರೇಗಾ ವಿಶ್ವಕ್ಕೆ ಮಾದರಿ: ಕೆ.ಎಸ್.ಈಶ್ವರಪ್ಪ

  • ಪಕ್ಷ ಅಧಿಕಾರಕ್ಕೆ ಬಂದ್ರೆ ಮೃತ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ : ಅಖಿಲೇಶ್ ಯಾದವ್

    ಪಕ್ಷ ಅಧಿಕಾರಕ್ಕೆ ಬಂದ್ರೆ ಮೃತ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ : ಅಖಿಲೇಶ್ ಯಾದವ್

    – ಸೂಕ್ತ ಸರ್ಕಾರ ಬೇಕು, ಯೋಗಿ ಸರ್ಕಾರವಲ್ಲ

    ಲಕ್ನೋ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೃತ ರೈತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿತ್ತೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

    ಉತ್ತರಪ್ರದೇಶ ಚುನಾವಣೆಗೂ ಮುನ್ನವೇ ಮತದಾರರ ಮನಗೆಲ್ಲಲು ಸಮಾಜವಾದಿ ಪಕ್ಷ ದೊಡ್ಡ ಆಶ್ವಾಸನೆಯನ್ನು ನೀಡಿದೆ. ಅಧಿಕಾರಕ್ಕೆ ಬಂದರೆ ಮೃತರ ಕುಟುಂಬಗಳಿಗೆ 25 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: OMICRON ಸೋಂಕಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

    ರೈತ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಆದರೆ ಕೃಷಿ ಕಾಯಿದೆ ಜಾರಿಗೆ ತಂದಾಗ ಬಿಜೆಪಿ ನಿಲುವು ಏನಿತ್ತು ಮತ್ತು ಕಾನೂನು ಹಿಂಪಡೆದಾಗ ಅದು ರೈತರ ಪರವಾಗಿ ಹೇಗೆ ಆಯಿತು ಎನ್ನುವುದು ಕೇಂದ್ರ ಸರ್ಕಾರ ಹೆಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು-WHO

    MONEY

    ಪ್ರತಿಭಟನೆ ವೇಳೆ ಮೃತ ರೈತ ಕುಟುಂಬಕ್ಕೆ ಯಾರು ಸಹಾಯ ಮಾಡಿದರು? ಹೀಗಾಗಿ ಸಮಾಜವಾದಿ ಪಕ್ಷ ನಿರ್ಧಾರ ಮಾಡಿದೆ ಉತ್ತರ ಪ್ರದೇಶದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ರೈತ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಲು. ಜನರಿಗೆ ಸೂಕ್ತ ಸರ್ಕಾರ ಬೇಕು, ಯೋಗಿ ಸರ್ಕಾರವಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.