Tag: Samarjit Lankesh

  • ಇಂದ್ರಜಿತ್ ಲಂಕೇಶ್ ಪುತ್ರನ ಚಿತ್ರಕ್ಕೆ ‘ಗೌರಿ’ ಟೈಟಲ್ ಫೈನಲ್-‌ ಆ.31ಕ್ಕೆ ಮುಹೂರ್ತ ಫಿಕ್ಸ್

    ಇಂದ್ರಜಿತ್ ಲಂಕೇಶ್ ಪುತ್ರನ ಚಿತ್ರಕ್ಕೆ ‘ಗೌರಿ’ ಟೈಟಲ್ ಫೈನಲ್-‌ ಆ.31ಕ್ಕೆ ಮುಹೂರ್ತ ಫಿಕ್ಸ್

    ಪಿ.ಲಂಕೇಶ್ ಮೊಮ್ಮಗ, ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ (Samarjit Lankesh) ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡ್ತಿದ್ದಾರೆ. ಸಮರ್ಜಿತ್ ಚೊಚ್ಚಲ ಸಿನಿಮಾಗೆ ಹೀರೋಯಿನ್ ಆಗಿ ಬಿಗ್ ಬಾಸ್ (Bigg Boss) ಬೆಡಗಿ ಸಾನ್ಯ ಅಯ್ಯರ್ (Saanya Iyer) ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಗೌರಿ’ (Gowri) ಎಂದು ಟೈಟಲ್ ಫಿಕ್ಸ್ ಆಗಿದೆ. ಇದೇ ಆಗಸ್ಟ್ 31ಕ್ಕೆ ಚಿತ್ರದ ಮುಹೂರ್ತ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಯಾಗಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ.

    ಮಗನ ಮೊದಲ ಸಿನಿಮಾಗೆ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ನಿರ್ದೇಶನ ಮಾಡ್ತಿದ್ದಾರೆ. ‘ಗೌರಿ’ (Gowri) ಸಿನಿಮಾ ಸಲುವಾಗಿ ಸಮರ್ಜಿತ್ ಲಂಕೇಶ್ ಅವರು ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಸಿಕ್ಸ್ ಪ್ಯಾಕ್ ಆ್ಯಬ್ಸ್ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಅವರ ಫೋಟೋಗಳು ಈಗಾಗಲೇ ಹೈಲೈಟ್ ಆಗಿವೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಆಗಸ್ಟ್ 31ರಂದು ಬೆಳಗ್ಗೆ 10:30ಕ್ಕೆ ಗೌರಿ ಸಿನಿಮಾದ ಮುಹೂರ್ತ ನೆರವೇರಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಇದನ್ನೂ ಓದಿ:‘ನಿಂಬಿಯಾ ಬನಾದ ಮ್ಯಾಗ’ ಬೆರಗು ಮೂಡಿಸಿದ ಅಶೋಕ್ ಕಡಬ!

    ಈ ಸಿನಿಮಾಗಾಗಿ ಸಮರ್ಜಿತ್ ಲಂಕೇಶ್ ಅವರು ಡ್ಯಾನ್ಸ್, ಫೈಟಿಂಗ್, ಕುದುರೆ ಸವಾರಿ ಸೇರಿದಂತೆ ಅನೇಕ ಕಲೆಗಳನ್ನು ಕಲಿತು ಬಂದಿದ್ದಾರೆ. ಜಾಹೀರಾತು ಕ್ಷೇತ್ರದಲ್ಲಿ ಅವರಿಗೆ ಅನುಭವ ಇದೆ. ಗೌರಿ ಚಿತ್ರದಲ್ಲಿ ಸಮರ್ಜಿತ್ ಲಂಕೇಶ್‌ಗೆ ಜೋಡಿಯಾಗಿ ಸಾನ್ಯ ಅಯ್ಯರ್ ಅವರು ನಟಿಸಲಿದ್ದಾರೆ. ಇವರಿಬ್ಬರ ಫೋಟೋಶೂಟ್ ಕೂಡ ಮಾಡಿಸಲಾಗಿದೆ. ಅಷ್ಟಕ್ಕೂ ಈ ಸಿನಿಮಾಗೆ ‘ಗೌರಿ’ ಎಂದು ಶೀರ್ಷಿಕೆ ಇಟ್ಟಿರುವುದು ಯಾಕೆ ಈ ಪ್ರಶ್ನೆಗೆ ಮುಹೂರ್ತದ ಸಂದರ್ಭದಲ್ಲಿ ಉತ್ತರ ಸಿಗುವ ನಿರೀಕ್ಷೆ ಇದೆ.

    ಸಮರ್ಜಿತ್- ಸಾನ್ಯ ಅಯ್ಯರ್ (Saanya Iyer) ಇಬ್ಬರಿಗೂ ಮೊದಲ ಸಿನಿಮಾ ಆಗಿರುವ ಕಾರಣ, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚಿತ್ರರಂಗದಲ್ಲಿ ನಾಯಕಿಯಾಗಿ ಮಿಂಚಬೇಕು ಎಂದು ಕನಸು ಕಂಡಿದ್ದ ಸಾನ್ಯಗೆ ಇದೀಗ ಸೂಕ್ತ ಕಥೆಯೊಂದು ಸಿಕ್ಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿತ್ರರಂಗಕ್ಕೆ ಲಂಕೇಶ್ ಮೊಮ್ಮಗ ಸಮರ್ಜಿತ್ ಗ್ರ್ಯಾಂಡ್ ಎಂಟ್ರಿ

    ಚಿತ್ರರಂಗಕ್ಕೆ ಲಂಕೇಶ್ ಮೊಮ್ಮಗ ಸಮರ್ಜಿತ್ ಗ್ರ್ಯಾಂಡ್ ಎಂಟ್ರಿ

    ಸಾಹಿತ್ಯ ಮತ್ತು ಸಿನಿಮಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಲಂಕೇಶ್ ಅವರ ಮೊಮ್ಮಗ ಸಮರ್ಜಿತ್ ಲಂಕೇಶ್ ಗ್ಯಾಂಡ್ ಆಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಲಂಕೇಶ್ ಅವರ ಪುತ್ರ ಇಂದ್ರಜಿತ್ ಲಂಕೇಶ್ (Indrajit Lankesh) ಮತ್ತು ಪುತ್ರಿ ಕವಿತಾ ಲಂಕೇಶ್ ಸಿನಿಮಾ ರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೊಸ ಬಗೆಯ ಸಿನಿಮಾಗಳನ್ನು ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಿಂಚಿದ್ದಾರೆ. ಇದೀಗ ಇಂದ್ರಜಿತ್ ಪುತ್ರ ಸಮರ್ಜಿತ್ (Samarjit Lankesh) ಮೂರನೇ ತಲೆಮಾರಾಗಿ ಸ್ಯಾಂಡಲ್ ವುಡ್ (Sandalwood) ಪ್ರವೇಶ (Entry) ಮಾಡುತ್ತಿದ್ದಾರೆ.

    ತಂದೆ ಸಿನಿಮಾ ನಿರ್ದೇಶಕ ಅನ್ನುವ ಕಾರಣಕ್ಕಾಗಿ ಸಮರ್ಜಿತ್ ಚಿತ್ರರಂಗ ಪ್ರವೇಶ ಮಾಡುತ್ತಿಲ್ಲ. ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡೇ ಅಖಾಡಕ್ಕೆ ಇಳಿಯುತ್ತಿದ್ದಾರೆ. ಹಾಗಾಗಿ ಎಂಟ್ರಿಯಲ್ಲೇ ಭರವಸೆ ಮೂಡಿಸುತ್ತಾರೆ. ಈಗಾಗಲೇ ರಂಗಭೂಮಿಯಲ್ಲೂ ಕೆಲಸ ಮಾಡಿದ ಅನುಭವವೂ ಅವರ ಜೊತೆಗಿದೆ. ಇದನ್ನೂ ಓದಿ:‘ಪುನರ್ ವಿವಾಹ’ ನಟ ಅಥರ್ವ್‌ ಹೊಸ ಚಿತ್ರಕ್ಕೆ ಸುದೀಪ್ ಸಾಥ್

    ನ್ಯೂಯಾರ್ಕ್ ಅಕಾಡೆಮಿಯಲ್ಲಿ ಸಿನಿಮಾ ಸಂಬಂಧಿಸಿದ ಕೋರ್ಸ್ ಮಾಡಿರುವ ಸಮರ್ಜಿತ್, ಅಲ್ಲಿ ನಟನಾ ತರಬೇತಿಯನ್ನು ಪಡೆದಿದ್ದಾರೆ. ಚೇತನ್ ಡಿಸೋಜಾ ಬಳಿ ಸಾಹಸ ಕಲೆಯನ್ನು ಕಲಿತುಕೊಂಡರೆ, ಮುರಳಿ ಬಳಿ ಡಾನ್ಸ್ ಮತ್ತು ಇಬ್ಬರು ನೀನಾಸಂ ಶಿಕ್ಷಕರು ಸಮರ್ಜಿತ್ ತರಬೇತಿ ನೀಡಿದ್ದಾರೆ.

    ಜೊತೆಗೆ ಯೋಗರಾಜ್ ಭಟ್ ಅವರ ಬಳಿ ಎರಡು ಸಿನಿಮಾಗಳಿಗೆ ಸಮರ್ಜಿತ್ ಅಸಿಸ್ಟೆಂಟ್ ಡೈರೆಕ್ಟರ್ ಆಗಿ  ಕೆಲಸ ಮಾಡಿದ ಅನುಭವ ಕೂಡ ಇದೆ. ಇಷ್ಟೆಲ್ಲ ತರಬೇತಿಯ ಜೊತೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಮತ್ತು ಜಾಹೀರಾತು ಕ್ಷೇತ್ರದಲ್ಲೂ ಒಂದಷ್ಟು ಅನುಭವ ಪಡೆದಿದ್ದಾರೆ. ಈ ರೀತಿ ತಯಾರಿ ಮಾಡಿಕೊಂಡು ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ.

    ಸಮರ್ಜಿತ್ ನಟನೆಯ ಸಿನಿಮಾ ನಿರ್ದೇಶಕರು ಯಾರು, ಯಾರು ನಿರ್ಮಾಣ ಮಾಡುತ್ತಾರೆ ಇತ್ಯಾದಿ ವಿಷಯಗಳನ್ನು ಸದ್ಯಕ್ಕೆ ಬಹಿರಂಗಗೊಳಿಸಿಲ್ಲ. ಆದರೆ, ಅದ್ದೂರಿಯಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುವುದನ್ನು ಸಮರ್ಜಿತ್ ಅವರ ತಂದೆ, ನಿರ್ದೇಶಕ ಇಂದ್ರಜಿತ್ ಖಚಿತ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

     

    ಸಮರ್ಜಿತ್ ಸಿನಿಮಾ ರಂಗಕ್ಕೆ ಬರುತ್ತಿರುವುದು ನಿಜ. ಎಲ್ಲ ರೀತಿಯ ತರಬೇತಿಯನ್ನು ಪಡೆದುಕೊಂಡೇ ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದಾರೆ. ನಟನೆಯ ಜೊತೆ ಜೊತೆಗೆ ತಾಂತ್ರಿಕ ಅಂಶಗಳನ್ನು ತಿಳಿದುಕೊಂಡು ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿರುವುದು ಖುಷಿಯಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಇಂದ್ರಜಿತ್ ಲಂಕೇಶ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]