Tag: Samarth B Kadakol

  • ಮತ್ತೆ ನಿರೀಕ್ಷೆ ಮೂಡಿಸಿದ ದೂದ್ ಪೇಡಾ ದಿಗಂತ್

    ಮತ್ತೆ ನಿರೀಕ್ಷೆ ಮೂಡಿಸಿದ ದೂದ್ ಪೇಡಾ ದಿಗಂತ್

    ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾದ ಮೊದಲ ಝಲಕ್ ರಿಲೀಸ್ ಆಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ ಟೀಸರ್  (Teaser)ರಿಲೀಸ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಕುತೂಹಲಕಾರಿ ಅಂಶಗಳಿಂದ ಕೂಡಿರುವ ಟೀಸರ್ ನಲ್ಲಿ ಎಡಗೈಯೇ ಬಳಸುವವನ ತೊಂದರೆಗಳನ್ನು ಕಟ್ಟಿಕೊಡಲಾಗಿದೆ. ಟೀಸರ್ ನಲ್ಲಿ ಬರುವ ಒಂದಷ್ಟು ಟ್ವಿಸ್ಟ್ ಅಂಡ್ ಟರ್ನ್ ಅಂಶಗಳು ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿದೆ.

    ಎಡಗೈ ಬಳಸುವವರನ್ನೇ ಗಮನದಲ್ಲಿಟ್ಟುಕೊಂಡು, ಅವರ ಜೀವನ ಶೈಲಿ ಕುರಿತು ಈ ಸಿನಿಮಾ ಮಾಡಲಾಗಿದೆ. ದೂದ್ ಪೇಡ ದಿಗಂತ್ (Digant) ನಾಯಕನಾಗಿ ನಟಿಸಿದ್ದು, ಯುವನಟಿ ಧನು ಹರ್ಷ ನಾಯಕಿಯಾಗಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ, ರಾಧಿಕಾ ನಾರಾಯಣ್, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್, ನಿರೂಪ್ ಭಂಡಾರಿ ತಾರಾಬಳಗದಲ್ಲಿದ್ದಾರೆ.

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಸಮರ್ಥ್ ಬಿ ಕಡಕೊಳ್ (Samarth B Kadakol) ನಿರ್ದೇಶನ ಮಾಡಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಈ ಸಿನಿಮಾದಲ್ಲಿದೆ. ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾವನ್ನು ಹೈಫನ್ ಪಿಕ್ಚರ್ಸ್ ಹಾಗೂ ಗುರುದತ್ ಗಾಣಿಗ ಫಿಲ್ಮಂಸ್ ಬ್ಯಾನರ್ ನಡಿ  ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಇದೆ.

    ಈ ಸಿನಿಮಾದಲ್ಲಿ ಪ್ರತಿ ಕೆಲಸಕ್ಕೂ ಎಡಗೈ ಬಳಸುವವರ ಸಮಸ್ಯೆಗಳ ಬಗ್ಗೆಯೇ ಬಿಂಬಿಸಲಾಗಿದೆ. ಅವರು ದಿನನಿತ್ಯದ ಜೀವನದಲ್ಲಿ ಎದುರಿಸುವ ಸವಾಲುಗಳ ಕುರಿತಾಗಿಯೇ ಫೋಕಸ್ ಮಾಡಲಾಗಿದೆ. ಮೇಲ್ನೋಟಕ್ಕೆ ಈ ಸಿನಿಮಾ ಸ್ಯಾಂಡಲ್‌ವುಡ್‌ನಲ್ಲಿ ಟ್ರೆಂಡ್ ಹುಟ್ಟಾಕುವ ಸಾಧ್ಯತೆಯಿದೆ. ಟೀಸರ್ ರಿಲೀಸ್ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಿರುವ ಚಿತ್ರತಂಡ ಫೆಬ್ರವರಿಗೆ ಸಿನಿಮಾವನ್ನು ರಿಲೀಸ್ ಮಾಡಲು ಸಜ್ಜಾಗಿದೆ.

  • ಎಡಗೈ ಬಳಸುವವರ ಕೈ ಹಿಡಿಯಲಿದ್ದಾರೆ ದಿಗಂತ್

    ಎಡಗೈ ಬಳಸುವವರ ಕೈ ಹಿಡಿಯಲಿದ್ದಾರೆ ದಿಗಂತ್

    ಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ ಬಳಸುವವರ ಸುತ್ತ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ. ಅದೇ ಎಡಗೈ ಅಪಘಾತಕ್ಕೆ ಕಾರಣ (Edagai Apaghatakke Karana). ದೂದ್ ಪೇಡಾ ದಿಗಂತ್ (Digant) ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಟ್  ವೇಗ ಹೆಲ್ಮೆಟ್ ಕಂಪನಿಯವರಿಗೆ ಬಹಳ ಇಷ್ಟವಾಗಿದೆ. ಹೀಗಾಗಿ ಸಿನಿಮಾಗೆ ‘ವೇಗ’ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ. ಅದೇಗೇ ಅಂತೀರಾ?  ಇದೇ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ (Helmet) ಕಂಪನಿ ಎಗಡೈ ಬಳಸುವವರರಿಗಾಗಿ ಹೊಸ ಹೆಲ್ಮೆಟ್ ಲಾಂಚ್ ಮಾಡುತ್ತಿದೆ. ಇದೆ ಅಲ್ವಾ ಒಂದು ಸಿನಿಮಾದ ಸೋಷಿಯಲ್ ಇಂಪ್ಯಾಕ್ಟ್ ಅಂದರೆ.

    ಕನ್ನಡ ಸಿನಿಮಾಗಳ ಮಾರುಕಟ್ಟೆ ಈಗ ವಿಸ್ತರಿಸಿದೆ. ವಿಭಿನ್ನ ಬಗೆಯ ಕಥಾಹಂದರದ ಕನ್ನಡ ಚಿತ್ರಗಳು ಈಗ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಂತೆ ಎಡಗೈ ಅಪಘಾತ ಕಾರಣಕ್ಕೆ ಸಿನಿಮಾದ ಐಡಿಯಾ, ಕಾನ್ಸೆಪ್ಟ್ ವೇಗ ಹೆಲ್ಮೆಟ್ ಕಂಪನಿಯರನ್ನು ತಲುಪಿದೆ. ಅಂದ್ರೆ ಇಡೀ ಚಿತ್ರತಂಡ ಮಾತ್ರವಲ್ಲ ಇಡೀ ಇಂಡಸ್ಟ್ರಿಯೇ ಖುಷಿ ಪಡಬೇಕಾದ ವಿಚಾರ. ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ತಂಡದ ಜೊತೆ ವೇಗ ಹೆಲ್ಮೆಟ್ ಕಂಪನಿ ಕೈ ಜೋಡಿಸಿದ್ದಾರೆ. ಎಡಗೈ ಬಳಸುವವರಿಗೆ ಹೊಸ ಹೆಲ್ಮೆಟ್ ಪರಿಚಯಿಸುತ್ತಿದೆ.

    ಅಂದಹಾಗೇ ಸಮರ್ಥ್ ಬಿ ಕಡಕೊಳ್ (Samarth B Kadakol) ಎಡಗೈ ಅಪಘಾತಕ್ಕೆ ಕಾರಣ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]