Tag: Samarth Kadakol

  • ದಿಗಂತ್ ನಟನೆಯ ಸಿನಿಮಾದಲ್ಲಿ ನಿರೂಪ್ ಭಂಡಾರಿ ಸ್ಪೆಷಲ್ ಪಾತ್ರ

    ದಿಗಂತ್ ನಟನೆಯ ಸಿನಿಮಾದಲ್ಲಿ ನಿರೂಪ್ ಭಂಡಾರಿ ಸ್ಪೆಷಲ್ ಪಾತ್ರ

    ದಿಗಂತ್​ ಮಂಚಾಲೆ (Digant) ನಟನೆಯ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಸಿನಿಮಾ ವಿಭಿನ್ನವಾದ ಕಾನ್ಸೆಪ್ಟ್​ ಮೂಲಕ ಈಗಾಗಲೇ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಇತ್ತೀಚೆಗಷ್ಟೆ ಆಗಸ್ಟ್​ 13ರಂದು ‘ವಿಶ್ವ ಎಡಗೈ ದಿನ’ದಂದು ಎಗಡೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್​ ಕೂಡ ಲಾಂಚ್​ ಮಾಡಲಾಗಿತ್ತು. ವಿನೂತನ ಸಬ್ಜೆಕ್ಟ್ ಮೂಲಕ ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿರುವ ‘ಎಡಗೈ’ ತಂಡಕ್ಕೆ ಮತ್ತೋರ್ವ ಖ್ಯಾತ ನಟ ಎಂಟ್ರಿ ಕೊಟ್ಟಿದ್ದಾರೆ. ಅದು ಮತ್ತ್ಯಾರು ಅಲ್ಲ ‘ರಂಗಿತರಂಗ’ ಖ್ಯಾತಿಯ ನಟ ನಿರೂಪ್ ಭಂಡಾರಿ (Nirup Bhandari). ಮೊದಲ ಬಾರಿಗೆ ನಿರೂಪ್ ಮತ್ತು  ದಿಗಂತ್  ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    ಇತ್ತೀಚಿನ  ದಿನಗಳಲ್ಲಿ ಸ್ಟಾರ್ ಕಲಾವಿದರು ಒಟ್ಟಿಗೆ ಸಿನಿಮಾ ಮಾಡುವುದು ತೀರ ಅಪರೂಪವಾಗಿದೆ. ಮಲ್ಟಿಸ್ಟಾರರ್ ಸಿನಿಮಾಗಳಿಗೆ ಖ್ಯಾತ  ಕಲಾವಿದರನ್ನು ಸೇರಿಸಿ ಸಿನಿಮಾ ಮಾಡುವುದು ನಿರ್ಮಾಪಕರಿಗೂ ಸಹ ದೊಡ್ಡ ಸವಾಲಾಗಿದೆ. ಹೀಗಿರುವಾಗ ದಿಗಂತ್ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕಾಣಿಸಿಕೊಂಡಿರುವುದು ವಿಶೇಷ. ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅಷ್ಟಕ್ಕೂ ಹೀರೋ ಆಗಿ ಅಬ್ಬರಿಸುತ್ತಿದ್ದ ನಿರೂಪ್ ಭಂಡಾರಿ, ದಿಗಂತ್ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್. ಇದನ್ನೂ ಓದಿ:ಕರ್ನಾಟಕದವರು ಸತ್ತಿಲ್ಲ, ಬದುಕಿದ್ದೇವೆ- ಕಾವೇರಿ ಪರ ಧ್ವನಿಯೆತ್ತಿದ ಸಾ ರಾ ಗೋವಿಂದು

    ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂತದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆಸ್ ಆಗಿದ್ದಾರೆ. ಇನ್ನು ಯಂಗ್ ಅಂಡ್ ಎನರ್ಜಿಟಿಕ್ ಆಗಿರುವ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಗಿರುತ್ತೆ ಎಂದು ‘ಎಡಗೈ ಅಪಘಾತಕ್ಕೆ ಕಾರಣ’ಸಿನಿಮಾತಂಡದ ಜೊತೆ ಕೈಜೋಡಿಸಿದ್ದಾರೆ ನಿರೂಪ್.

    ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ (Samarth Kadakol) ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಶೀರ್ಷಿಕೆಯೇ ಹೇಳುವಂತೆ ಇದು ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾವಾಗಿದೆ. ‘ಹೈಫನ್ ಪಿಕ್ಚರ್ಸ್ ಬ್ಯಾನರ್’ ಅಡಿಯಲ್ಲಿ ‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ (Gurdutt Ganiga) ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರಿಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಇನ್ನು ಈ ಸಿನಿಮಾದಲ್ಲಿ ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿಗಂತ್ ಹುಟ್ಟು ಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್

    ದಿಗಂತ್ ಹುಟ್ಟು ಹಬ್ಬಕ್ಕೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದ ಕ್ಯಾರೆಕ್ಟರ್ ಪೋಸ್ಟರ್

    ಸ್ಯಾಂಡಲ್ ವುಡ್ ಅಂಗಳದ ದೂದ್ ಪೇಡ ದಿಗಂತ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅದರ ವಿಶೇಷವಾಗಿ ದಿಗಂತ್ ನಟಿಸುತ್ತಿರುವ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ಚಿತ್ರದ ನಾಯಕ ನಟನಿಗೆ ಶುಭ ಕೋರಿದೆ.

    ದಿಗಂತ್ ಅವರ ಕ್ಯಾರೆಕ್ಟರ್ ಪೋಸ್ಟರ್ ರಿವೀಲ್ ಮಾಡುವ ಮೂಲಕ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರತಂಡ ಹುಟ್ಟುಹಬ್ಬಕ್ಕೆ ಶುಭ ಕೋರಿದೆ. ದಿಗಂತ್ ಅವರಿಗೆ ಇಲ್ಲಿವರೆಗೆ ಚಾಕೋಲೇಟ್ ಬಾಯ್. ರೋಮ್ಯಾಂಟಿಕ್ ಹೀರೋ ಇಮೇಜ್ ಇತ್ತು ಆದ್ರೆ ಈ ಸಿನಿಮಾದಿಂದ ಕಂಪ್ಲೀಟ್ ಡಿಫ್ರೆಂಟ್ ಇಮೇಜ್ ನಲ್ಲಿ ದಿಗಂತ್ ಕಾಣಸಿಗುತ್ತಾರೆ. ಬರ್ತ್ ಡೇ ಗೆ ಡಿಫ್ರೆಂಟ್ ಕ್ಯಾರೆಕ್ಟರ್ ಪೋಸ್ಟರ್ ಬಿಡುಗಡೆ ಮಾಡಬೇಕೆಂದು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ವಿ ಅದರಂತೆ ಇಂದು ಅನಾವರಣ ಮಾಡಿದ್ದೇವೆ ಎಂದು ನಿರ್ದೇಶಕ ಸಮರ್ಥ್ ಬಿ ಕಡಕೊಳ್ ತಿಳಿಸಿದ್ದಾರೆ. ಇದನ್ನೂ ಓದಿ: ದಿವ್ಯಾಳ ಆಸೆಯಂತೆ ದೊಡ್ಮನೆಗೆ ಎಂಟ್ರಿ ಕೊಟ್ಟ ಅರವಿಂದ್ ಕೆ.ಪಿ

    ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಜನವರಿ ಕೊನೆಯಲ್ಲಿ ಚಿತ್ರೀಕರಣ ಕಂಪ್ಲೀಟ್ ಆಗಲಿದೆ.  ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಕಥಾಹಂದರ ಚಿತ್ರದಲ್ಲಿದೆ. ಹೆಸರೇ ಹೇಳುವಂತೆ ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಚಿತ್ರವಿದು. ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ನವನಟಿ ಧನು ಹರ್ಷ ನಟಿಸುತ್ತಿದ್ದು, ರಾಧಿಕಾ ನಾರಾಯಣ್, ನಿಧಿ ಸುಬ್ಬಯ್ಯ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

    ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇಕಡಾ 90ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದೂದ್ ಪೇಡ ದಿಗಂತ್ ಗೆ ಜೊತೆಯಾದ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್

    ದೂದ್ ಪೇಡ ದಿಗಂತ್ ಗೆ ಜೊತೆಯಾದ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್

    ದೂದ್ ಪೇಡ ದಿಗಂತ್ ಅಭಿನಯದ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಇತ್ತೀಚೆಗೆ ಸಿನಿಮಾ ತಂಡವನ್ನು ನಟಿ ನಿಧಿ ಸುಬ್ಬಯ್ಯ ಸೇರಿಕೊಂಡಿದ್ರು. ಇದೀಗ ಮತ್ತೊಂದು ಲೇಟೆಸ್ಟ್ ಸುದ್ದಿ ಹೊರಬಿದ್ದಿದೆ. ಮತ್ತೊಬ್ಬ ಸ್ಟಾರ್ ನಟಿ ಈ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.

    ರಂಗಿತರಂಗ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಟಿ ರಾಧಿಕಾ ನಾರಾಯಣ್ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್ ನಿರ್ವಹಿಸಲಿದ್ದು, ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಸಿನಿಮಾ ಬಗೆಗಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ ಚಿತ್ರತಂಡ. ಇದನ್ನೂ ಓದಿ: ನಟಿ ಅದಿತಿ ಪ್ರಭುದೇವ ಮದುವೆ ಡೇಟ್ ಫಿಕ್ಸ್

    ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಬ್ಲ್ಯಾಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಸಿನಿಮಾದಲ್ಲಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ.

    ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇಕಡಾ 80ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

    Live Tv
    [brid partner=56869869 player=32851 video=960834 autoplay=true]