Tag: samit dravid

  • ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆ| ಎಲ್ಲಾ ಕನ್ನಡಿಗರಿಗೆ ನಮಸ್ಕಾರ : ಸಮಿತ್ ದ್ರಾವಿಡ್ ಮೊದಲ ಪ್ರತಿಕ್ರಿಯೆ

    ಅಂಡರ್ 19 ಕ್ರಿಕೆಟ್ ತಂಡಕ್ಕೆ ಆಯ್ಕೆ| ಎಲ್ಲಾ ಕನ್ನಡಿಗರಿಗೆ ನಮಸ್ಕಾರ : ಸಮಿತ್ ದ್ರಾವಿಡ್ ಮೊದಲ ಪ್ರತಿಕ್ರಿಯೆ

    ಬೆಂಗಳೂರು: ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ (Rahul Dravid) ಅವರ ಮಗ ಸಮಿತ್ ದ್ರಾವಿಡ್ (Samit Dravid) ಅವರು 19 ವರ್ಷದೊಳಗಿನ ಭಾರತ ಕ್ರಿಕೆಟ್ (Team India) ತಂಡಕ್ಕೆ ಆಯ್ಕೆಯಾಗಿದ್ದಾರೆ.

    ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೊಟ್ಟ ಮೊದಲ ಬಾರಿಗೆ ನಾನು ಆಯ್ಕೆಯಾಗಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ಶುಭಾಶಯ ತಿಳಿಸಿದ ನಿಮ್ಮೆಲ್ಲರಿಗೆ ಧನ್ಯವಾದಗಳು. ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಇಲ್ಲಿವರೆಗೆ ಬರುವುದಕ್ಕೆ ನಾನು ತುಂಬಾ ಕಠಿಣ ಪರಿಶ್ರಮಪಟ್ಟಿದ್ದೇನೆ. ಎಲ್ಲಾ ಕನ್ನಡಿಗರಿಗೆ ಧನ್ಯವಾದಗಳು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಆಸ್ಟ್ರೇಲಿಯಾ (Australia) ವಿರುದ್ಧ ನಡೆಯಲಿರುವ ಏಕದಿನ ಪಂದ್ಯಕ್ಕೆ ಬಿಸಿಸಿಐ ಸಮಿತ್ ದ್ರಾವಿಡ್ ಅವರನ್ನು ಆಯ್ಕೆ ಮಾಡಿದೆ. ಇದನ್ನೂ ಓದಿ: ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌, ಅಭಿಮಾನಿಗಳ ಮೆಚ್ಚುಗೆ

    18 ವರ್ಷದ ಸಮಿತ್ ವೇಗಿ ಬೌಲರ್ ಮತ್ತು ಆಲ್ ರೌಂಡರ್ ಆಟಗಾರರಾಗಿದ್ದಾರೆ. ಕಳೆದ ವರ್ಷದ ದೇಶಿಯ ಮತ್ತು ಪ್ರಾದೇಶಿಕ ಕ್ರಿಕೆಟ್ ಆಟದಲ್ಲಿ ಇವರು ಮಿಂಚಿದ್ದರು. ಇತ್ತೀಚಿಗೆ ಕರ್ನಾಟಕದಲ್ಲಿ ನಡೆದ ಮಹರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ‍್ಸ್ ತಂಡದ ಪರವಾಗಿ ಆಟವಾಡಿದ್ದರು. ಮೈಸೂರು ತಂಡ ಈ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

  • ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌, ಅಭಿಮಾನಿಗಳ ಮೆಚ್ಚುಗೆ

    ದ್ರಾವಿಡ್ ಪುತ್ರನ ಸಿಕ್ಸ್ – ವಿಡಿಯೋ ವೈರಲ್‌, ಅಭಿಮಾನಿಗಳ ಮೆಚ್ಚುಗೆ

    ಬೆಂಗಳೂರು: ಭಾರತ ಕ್ರಿಕೆಟ್ (Team India) ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಮಗ ಸಮಿತ್ ದ್ರಾವಿಡ್ ಸಿಕ್ಸ್ (Six) ಬಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಸಮಿತ್, ಕೆಎಸ್‌ಸಿಎ ಆಯೋಜಿಸುತ್ತಿರುವ ಮಹಾರಾಜ ಟಿ20 ಕ್ರಿಕೆಟ್ ಪಂದ್ಯಗಳಲ್ಲಿ ಮೈಸೂರು ವಾರಿಯರ್ಸ್ ತಂಡದ ಪರವಾಗಿ ಆಡುತ್ತಿದ್ದಾರೆ. ಬೆಂಗಳೂರು ಬ್ಲಾಸ್ಟರ್ ವಿರುದ್ಧದ ಪಂದ್ಯದಲ್ಲಿ ಅವರು ಬಾರಿಸಿದ ಸಿಕ್ಸ್‌  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದ್ದು ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

    ವಿಡಿಯೋ ನೋಡಿದ ಎಲ್ಲರೂ ದ್ರಾವಿಡ್ ಮತ್ತು ಸಮಿತ್ (Samit Dravid) ನಡುವೆ ಹೋಲಿಕೆ ಮಾಡುತ್ತಿದ್ದಾರೆ. ಸಮಿತ್‌ರನ್ನು ಜೂನಿಯರ್ ರಾಹುಲ್ ದ್ರಾವಿಡ್ ಎಂದು ಅಭಿಮಾನಿಗಳು ಹೊಗಳುತ್ತಿದ್ದಾರೆ.

    ಮೈಸೂರು ವಾರಿಯರ್ಸ್ ತಂಡ ದೊಡ್ಡ ಮೊತ್ತದ ರನ್ ಗಳಿಸಿದರೂ 4 ರನ್‌ಗಳಿಂದ ಸೋಲು ಕಂಡಿತು. ಪಂದ್ಯಕ್ಕೆ ಸ್ವಲ್ಪ ಹೊತ್ತು ಮಳೆಯೂ ಅಡ್ಡಿಪಡಿಸಿತು.

    ಕಳೆದ ಜೂನ್ ತಿಂಗಳಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ (T20 World Cup) ಗೆದ್ದ ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

     

  • ಮಗನ ಆಟ ಕಣ್ತುಂಬಿಕೊಳ್ಳಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್

    ಮಗನ ಆಟ ಕಣ್ತುಂಬಿಕೊಳ್ಳಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್

    ಮೈಸೂರು: ಏಕದಿನ ವಿಶ್ವಕಪ್‌ (World Cup) ಟೂರ್ನಿಯ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಅವರು ತಮ್ಮ ಮಗನ ಸಲುವಾಗಿ ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ.

    ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮೈಸೂರು ವಲಯ ಆಯೋಜಿಸಿದ್ದ U-19 ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯು ಮೈಸೂರಿನ (Mysuru) ಮಾನಸ ಗಂಗೋತ್ರಿಯ SDNR (ಶ್ರೀ ಕಂಠದತ್ತ ನರಸಿಂಹರಾಜ) ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ದ್ರಾವಿಡ್‌ ಅವರ ಹಿರಿಯ ಪುತ್ರ ಸಮಿತ್‌ ದ್ರಾವಿಡ್‌ 19 ವಯೋಮಿತಿ ಕೂಚ್‌ ಬೆಹರ್‌ ಟ್ರೋಫಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಾರೆ.

    ಕರ್ನಾಟಕ ಹಾಗೂ ಉತ್ತರಾಖಂಡ ನಡುವೆ ಮೈಸೂರಿನಲ್ಲಿ ಪಂದ್ಯ ನಡೆಯುತ್ತಿದ್ದು ಅದನ್ನು ವೀಕ್ಷಿಸುವ ನಿಟ್ಟಿನಲ್ಲಿ ದ್ರಾವಿಡ್‌ ಆಗಮಿಸಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಉತ್ತರಾಖಂಡ್‌ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್‌ಗೆ 232 ರನ್‌ ಪೇರಿಸಿದೆ. 5 ಓವರ್‌ ಬೌಲಿಂಗ್‌ ಮಾಡಿರುವ ಸಮಿತ್‌ ದ್ರಾವಿಡ್‌ 2 ಮೇಡನ್‌ ಎಸೆದು 11 ರನ್‌ ನೀಡಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಭಾನುವಾರ ರಾತ್ರಿ 11:45ರ ವರೆಗೂ ಮೆಟ್ರೋ ವಿಸ್ತರಣೆ

    ಆಲ್ರೌಂಡಡರ್ ಆಗಿರುವ ಸಮಿತ್ ಆಟವನ್ನು ನೋಡಲು ರಾಹುಲ್ ದ್ರಾವಿಡ್ ಮತ್ತು ಪತ್ನಿ ಡಾ.ವಿಜೇತ ಅವರೊಂದಿಗೆ ಮೈಸೂರಿಗೆ ಆಗಮಿಸಿದ್ದಾರೆ. ಕ್ರೀಡಾಂಗಣದ ಕಲ್ಲು ಹಾಸಿನ ಮೇಲೆ ಕುಳಿತು ದ್ರಾವಿಡ್‌ ಮಗನ ಆಟವನ್ನು ಗಮನಿಸಿದ್ದಾರೆ. ಈ ಸಂದರ್ಭದಲ್ಲಿ ಪತ್ರಕರ್ತರ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದ ಅವರು ತಾವು ಇತರ ಮಕ್ಕಳ ಪೋಷಕರಂತೆ ನಾನು ಬಂದಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 2009ರಿಂದ ಸ್ಟೇಡಿಯಂ ಕರೆಂಟ್‌ ಬಿಲ್‌ ಕಟ್ಟಿಲ್ಲ – ಭಾರತ-ಆಸೀಸ್‌ 4ನೇ T20 ಪಂದ್ಯಕ್ಕೆ ಹೊಸ ತಲೆನೋವು!

  • ತಂದೆಯ ಹುಟ್ಟುಹಬ್ಬದಂದೇ ಹೆಮ್ಮೆಪಡಿಸಿದ ದ್ರಾವಿಡ್ ಪುತ್ರ

    ತಂದೆಯ ಹುಟ್ಟುಹಬ್ಬದಂದೇ ಹೆಮ್ಮೆಪಡಿಸಿದ ದ್ರಾವಿಡ್ ಪುತ್ರ

    ಬೆಂಗಳೂರು: ಕ್ರಿಕೆಟ್‍ನ ‘ದಿ-ವಾಲ್’ ಭಾರತ ತಂಡದ ಮಾಜಿ ನಾಯಕ, ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಹುಟ್ಟುಹಬ್ಬದಂದೇ ಅವರ ಮಗ ಸಮಿತ್ ತಮ್ಮ ತಂದೆಯನ್ನು ಹೆಮ್ಮೆಪಡಿಸಿದ್ದಾರೆ. ಸಮಿತ್ ಕರ್ನಾಟಕ ತಂಡಕ್ಕೆ ಎಂಟ್ರಿ ಆಗುವ ಮೂಲಕ ತಮ್ಮ ತಂದೆಯ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ್ದಾರೆ.

    ಇಂದು ರಾಹುಲ್ ದ್ರಾವಿಡ್ ಅವರು ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಇದೇ ವೇಳೆ ಸಮಿತ್ ಕರ್ನಾಟಕದ ಅಂಡರ್ 14 ತಂಡಕ್ಕೆ ಆಯ್ಕೆಯಾಗಿದ್ದು, ತಂದೆಯ ಹಾದಿಯಲ್ಲಿ ಕ್ರಿಕೆಟ್ ಜೀವನ ಆರಂಭ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ದಕ್ಷಿಣ ವಲಯದ ಅಂಡರ್ 14 ಟೂರ್ನಮೆಂಟ್‍ಗೆ ಸಮಿತ್ ಆಯ್ಕೆಯಾಗಿದ್ದಾರೆ. ತಂದೆಯಂತೆ ಬಲಗೈ ಬ್ಯಾಟ್ಸ್ ಮನ್ ಆಗಿರುವ ಸಮಿತ್ ಅತ್ಯುತ್ತಮ ಆಟಗಾರ.

    ತಂಡದ ಆಯ್ಕೆಗೆ ಕೆಎಸ್‍ಸಿಎ ನಡೆಸಿದ ಪಂದ್ಯದಲ್ಲಿ ಸಮಿತ್ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಟೂರ್ನಿಯೊಂದರಲ್ಲಿ ದ್ವಿಶತಕ ಮತ್ತು 94 ರನ್ ಗಳಿಸಿ ಎಲ್ಲರ ಗಮನ ಸೆಳೆದಿದ್ದರು. ಸಮಿತ್ ಪ್ರತಿಭೆಗೆ ಈಗ ಕರ್ನಾಟಕ ತಂಡದಲ್ಲಿ ಸ್ಥಾನ ಸಿಕ್ಕಿದ್ದು, ಜನವರಿ 16 ರಿಂದ 18ವರೆಗೆ ಬೆಂಗಳೂರು ದಕ್ಷಿಣ ವಲಯ ಟೂರ್ನಮೆಂಟ್ ನಡೆಯಲಿದ್ದು, ತಮ್ಮ ಪ್ರತಿಭೆ ಪ್ರದರ್ಶನ ಮಾಡಲಿದ್ದಾರೆ.

    ಮನೆಯೇ ಮೊದಲ ಪಾಠ ಶಾಲೆ ಎಂಬಂತೆ ಸಮಿತ್‍ಗೆ ತಂದೆ ರಾಹುಲ್ ದ್ರಾವಿಡ್ ಮೊದಲ ಗುರು. ಕ್ರಿಕೆಟ್‍ನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ದ್ರಾವಿಡ್ ಮಗನನ್ನು ಕ್ರಿಕೆಟ್ ಆಟಗಾರರನ್ನಾಗಿ ಮಾಡಿದ್ದಾರೆ. ಸದ್ಯ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ(NCA) ಮುಖ್ಯಸ್ಥರಾಗಿರುವ ದ್ರಾವಿಡ್ ಆಟಗಾರರು ಫಿಟ್ ಇರುವಂತೆ ನೋಡಿಕೊಳ್ಳುತ್ತಿದ್ದಾರೆ.