Tag: Samyukta Menon

  • ಪುರಿ ಜಗನ್ನಾಥ್ ನಿರ್ದೇಶನದ ಚಿತ್ರಕ್ಕೆ ಸಂಯುಕ್ತ ಮೆನನ್ ಎಂಟ್ರಿ

    ಪುರಿ ಜಗನ್ನಾಥ್ ನಿರ್ದೇಶನದ ಚಿತ್ರಕ್ಕೆ ಸಂಯುಕ್ತ ಮೆನನ್ ಎಂಟ್ರಿ

    ಡ್ಯಾಶಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಅವರ ಬಹುನಿರೀಕ್ಷಿತ ಸಿನಿಮಾದಿಂದ ಮತ್ತೊಂದು ಅಪ್‌ಡೇಟ್ ಸಿಕ್ಕಿದೆ. ಈಗಾಗಲೇ ತಾರಾ ಬಳಗದ ಮೂಲಕ ಸುದ್ದಿಯಾಗಿರುವ ಚಿತ್ರಕ್ಕೀಗ ಪ್ರತಿಭಾನ್ವಿತ ನಟಿ ಸಂಯುಕ್ತ ಮೆನನ್ (Samyuktha Menon) ಎಂಟ್ರಿ ಕೊಟ್ಟಿದ್ದಾರೆ.

    ಪುರಿ ಕನೆಕ್ಟ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ (Puri Jagannadh) ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಟಬು, ದುನಿಯಾ ವಿಜಯ್ (Duniya Vijay) ನಟಿಸುವುದು ಖಚಿತವಾಗಿದೆ. ಇದೀಗ ನಟಿ ಸಂಯುಕ್ತ ಮೆನನ್ ಅವರನ್ನು ಚಿತ್ರತಂಡ ಸ್ವಾಗತಿಸಿದೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಸಂಯುಕ್ತ ನಾಯಕಿ ಪಾತ್ರವನ್ನು ಪೋಷಣೆ ಮಾಡುತ್ತಿಲ್ಲ. ಬದಲಾಗಿ ಪ್ರಮುಖ ಪಾತ್ರವೊಂದಲ್ಲಿ ಅಭಿನಯಿಸಲಿದ್ದಾರೆ. ಕಥೆ ಮತ್ತು ಅವರ ಪಾತ್ರದಿಂದ ರೋಮಾಂಚನಗೊಂಡಿರುವ ಸಂಯುಕ್ತ ಚಿತ್ರೀಕರಣವನ್ನು ಪ್ರಾರಂಭಿಸಲು ಉತ್ಸುಕರಾಗಿದ್ದಾರೆ. ಇದನ್ನೂ ಓದಿ: ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ: ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

    ಮೊದಲ ಹಂತದ ಚಿತ್ರೀಕರಣವನ್ನು ಚಿತ್ರತಂಡ ಹೈದರಾಬಾದ್ ಹಾಗೂ ಚೆನ್ನೈನಲ್ಲಿ ಮಾಡಲು ಸಿದ್ಧವಾಗಿದ್ದು, ಜೂನ್ ಕೊನೆಯ ವಾರದಲ್ಲಿ ರೆಗ್ಯೂಲರ್ ಚಿತ್ರೀಕರಣ ಪ್ರಾರಂಭವಾಗಲಿದೆ. ಇದನ್ನೂ ಓದಿ: KRS ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ನಿರ್ಮಾಣಕ್ಕೆ ಮಾಜಿ ಸಂಸದೆ ಸುಮಲತಾ ವಿರೋಧ

    ಈ ಪ್ಯಾನ್ ಇಂಡಿಯಾ ಸಿನಿಮಾವು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸದ್ಯ ಘಟಾನುಘಟಿ ಕಲಾವಿದರ ಎಂಟ್ರಿಯಿಂದಾಗಿ ಪಾತ್ರವರ್ಗದ ತೂಕ ಹೆಚ್ಚುತ್ತಿದೆ.

  • ಅಭಿಮಾನಿಗಳಿಗೆ ಗುಡ್ ನ್ಯೂಸ್ : ಯಶ್ ಹೊಸ ಸಿನಿಮಾ ಅಕ್ಟೋಬರ್ 19ಕ್ಕೆ

    ಅಭಿಮಾನಿಗಳಿಗೆ ಗುಡ್ ನ್ಯೂಸ್ : ಯಶ್ ಹೊಸ ಸಿನಿಮಾ ಅಕ್ಟೋಬರ್ 19ಕ್ಕೆ

    ರಾಕಿಂಗ್ ಸ್ಟಾರ್ ಯಶ್ ನಟನೆಯ ಹೊಸ ಸಿನಿಮಾದ ಅಪ್ ಡೇಟ್ ಬಗ್ಗೆ ಅಭಿಮಾನಿಗಳು ಹಲವು ತಿಂಗಳಿಂದ ಕಾಯುತ್ತಲೇ ಇದ್ದಾರೆ. ಈಗಾಗಲೇ ಹಲವು ವಿಷಯಗಳು ಗಾಂಧಿನಗರದಲ್ಲಿ ಹರಿದಾಡುತ್ತಿದ್ದರೂ, ಅವು ಯಾವವೂ ಅಧಿಕೃತ ಮಾಹಿತಿಯಲ್ಲ. ಇದೀಗ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಅಕ್ಟೋಬರ್ (October) 19ಕ್ಕೆ ಯಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಸರ್ವ ಸಿದ್ಧತೆಯನ್ನು ಟೀಮ್ ಮಾಡಿಕೊಂಡಿದೆ.

    ಅಧಿಕೃತ ಮಾಹಿತಿಯನ್ನು ಯಶ್ ಹಂಚಿಕೊಳ್ಳದೇ ಇದ್ದರೂ ಚಿತ್ರದ ನಿರ್ದೇಶಕರು, ನಿರ್ಮಾಣ ಸಂಸ್ಥೆ, ನಾಯಕಿಯ ಹೆಸರು ಎಲ್ಲವೂ ಒಂದೊಂದೆ ಆಚೆ ಬಂದಿವೆ. ಅವೆಲ್ಲವೂ ಎಷ್ಟು ನಿಜವೋ, ಸುಳ್ಳೋ ಗೊತ್ತಿಲ್ಲ. ಆದರೂ, ದಿನಕ್ಕೊಂದು ಮಾಹಿತಿಯಂತೂ ಸಿಗುತ್ತಿದೆ. ಅದನ್ನು ಓದಿಕೊಂಡು, ಕೇಳಿಕೊಂಡು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ಮೊನ್ನೆಯಷ್ಟೇ ಸಿನಿಮಾದ ನಾಯಕಿಯ ಹೆಸರು ಬಹಿರಂಗವಾಗಿತ್ತು. ಇದೀಗ ಸಿನಿಮಾದ ಶೂಟಿಂಗ್ ವಿವರಗಳು ಸಿಗುತ್ತಿವೆ. ಈಗಾಗಲೇ ಕಥೆ ಲಾಕ್ ಆಗಿದ್ದು, ಅಕ್ಟೋಬರ್ ನಲ್ಲಿ ಅಧಿಕೃತ ಘೋಷಣೆ ಮಾಡಿ, ಡಿಸೆಂಬರ್ 23ರಿಂದ ಚಿತ್ರೀಕರಣಕ್ಕೆ ಹೋಗಲು ಚಿತ್ರತಂಡ ರೆಡಿಯಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಟ್ವಿಟರ್ ನಲ್ಲಿ ಈ ವಿಷಯ ಟ್ರೆಂಡಿಂಗ್ ನಲ್ಲಿಯೂ ಇತ್ತು.

    ಈ ಚಿತ್ರಕ್ಕೆ ನಾಯಕಿಯಾಗಿ ಮಲಯಾಳಂ ನಟಿ ಸಂಯುಕ್ತಾ ಮೆನನ್ (Samyukta Menon)  ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಯಾವುದೇ ಮಾಹಿತಿ ಹೊರ ಬರದಿದ್ದರೂ, ಸಂಯುಕ್ತಾ ಹೆಸರು ಮಾತ್ರ ಜೋರಾಗಿ ಕೇಳಿ ಬರುತ್ತಿದೆ.

     

    ಯಶ್ 19 (Yash 19) ಸಿನಿಮಾಗಾಗಿ ರಾಕಿಭಾಯ್ ತೆರೆಮರೆಯಲ್ಲಿ ತಯಾರಿ ಮಾಡ್ತಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಅಧಿಕೃತವಾಗಿ ಅನೌನ್ಸ್ ಆಗುವವರೆಗೂ ತಮ್ಮ ಪ್ರಾಜೆಕ್ಟ್ ಬಗ್ಗೆ ಎಲ್ಲಿಯೂ ಲೀಕ್ ಆಗದಂತೆ ನಟ ನೋಡಿಕೊಳ್ತಿದ್ದಾರೆ. ಕೆಲವೇ ದಿನಗಳಲ್ಲಿ ಯಶ್ ಮುಂದಿನ ಸಿನಿಮಾ ಬಗ್ಗೆ ಉತ್ತರ ಸಿಗಲಿದೆ ಎನ್ನಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಶ್ 19 ಚಿತ್ರಕ್ಕೆ ಸಂಯುಕ್ತಾ ಮೆನನ್ ನಾಯಕಿ: ಈ ತಿಂಗಳಲ್ಲೇ ಘೋಷಣೆ?

    ಯಶ್ 19 ಚಿತ್ರಕ್ಕೆ ಸಂಯುಕ್ತಾ ಮೆನನ್ ನಾಯಕಿ: ಈ ತಿಂಗಳಲ್ಲೇ ಘೋಷಣೆ?

    ರಾಕಿಂಗ್ ಸ್ಟಾರ್ ಯಶ್ ನಟನೆಯ ಹೊಸ ಸಿನಿಮಾದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಯಾವುದು ನಿಜ, ಯಾವುದು ಸುಳ್ಳು ಎಂದು ಅರ್ಥವಾಗದೇ ಇದ್ದರೂ, ಸುದ್ದಿಗಳಿಗೆ ಮಾತ್ರ ಬರವಿಲ್ಲ. ಇದೀಗ ಯಶ್ 19 ಸಿನಿಮಾದ ಬಗ್ಗೆ ಮತ್ತೊಂದು ಹೊಸ ಸುದ್ದಿ ಸಿಕ್ಕಿದ್ದು, ಈ ಸಿನಿಮಾಗೆ ನಾಯಕಿಯಾಗಿ ಮಲಯಾಳಂ ನಟಿ ಸಂಯುಕ್ತಾ ಮೆನನ್ (Samyukta Menon)  ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಯಾವುದೇ ಮಾಹಿತಿ ಹೊರ ಬರದಿದ್ದರೂ, ಸಂಯುಕ್ತಾ ಹೆಸರು ಮಾತ್ರ ಜೋರಾಗಿ ಕೇಳಿ ಬರುತ್ತಿದೆ.

    ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಸಿನಿಮಾದಿಂದ ನ್ಯಾಷನಲ್ ಸ್ಟಾರ್ ಯಶ್(Yash) ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬಕ್ಕೆ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. ಸದ್ಯ ಯಶ್ ಜೊತೆ ಸಮುದ್ರ ತೀರದಲ್ಲಿ ಕಾಲ ಕಳೆಯುತ್ತಿರುವ ಸುಂದರ ಫೋಟೋವನ್ನು ರಾಧಿಕಾ ಪಂಡಿತ್ (Radhika Pandit) ಹಂಚಿಕೊಂಡಿದ್ದಾರೆ. ನಟಿಯ ಹೊಸ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    ರಾಧಿಕಾ ಪಂಡಿತ್ ಅವರು ಪ್ರತಿ ವಾರಾಂತ್ಯ ಫ್ಯಾನ್ಸ್‌ಗಾಗಿ ಹೊಸ ಪೋಸ್ಟ್ ಶೇರ್ ಮಾಡುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ. ಅವರ ಕುಟುಂಬದ ಚೆಂದದ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

    ಯಶ್ 19 (Yash 19) ಸಿನಿಮಾಗಾಗಿ ರಾಕಿಭಾಯ್ ತೆರೆಮರೆಯಲ್ಲಿ ತಯಾರಿ ಮಾಡ್ತಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಅಧಿಕೃತವಾಗಿ ಅನೌನ್ಸ್ ಆಗುವವರೆಗೂ ತಮ್ಮ ಪ್ರಾಜೆಕ್ಟ್ ಬಗ್ಗೆ ಎಲ್ಲಿಯೂ ಲೀಕ್ ಆಗದಂತೆ ನಟ ನೋಡಿಕೊಳ್ತಿದ್ದಾರೆ. ಅಕ್ಟೋಬರ್‌ನಲ್ಲಿ ಯಶ್ ಮುಂದಿನ ಸಿನಿಮಾ ಬಗ್ಗೆ ಉತ್ತರ ಸಿಗಲಿದೆ ಎನ್ನಲಾಗುತ್ತಿದೆ.

    ಸ್ಯಾಂಡಲ್‌ವುಡ್ (Sandalwood) ಸಿಂಡ್ರೆಲಾ ರಾಧಿಕಾ ಪಂಡಿತ್ (Radhika Pandit) ನಟನೆಯ ಮೊಗ್ಗಿನ ಮನಸ್ಸು (Moggina Manasu) ಟು ಆದಿಲಕ್ಷ್ಮಿ ಪುರಾಣ ಸಿನಿಮಾವರೆಗೂ ಉತ್ತಮ ಸಿನಿಮಾಗಳನ್ನ ನೀಡಿ ಅಭಿಮಾನಿಗಳ ಪಾಲಿಗೆ ನೆಚ್ಚಿನ ನಾಯಕಿಯಾಗಿ ಮಿಂಚಿದವರು. ಈಗ ಮದುವೆ, ಸಂಸಾರ ಅಂತಾ ಕುಟುಂಬದ ಕಡೆಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಸಿನಿಮಾಗೆ ಕಮ್‌ಬ್ಯಾಕ್ ಆಗುವ ಬಗ್ಗೆ ನಟಿ ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ.