Tag: Sanalwood

  • ಕ್ಯಾಮೆರಾ ಕಣ್ಣಿಗೆ ಮುದ್ದಾದ ನಗು ಬೀರಿದ ಯಶ್ ಮಗಳು ಐರಾ

    ಕ್ಯಾಮೆರಾ ಕಣ್ಣಿಗೆ ಮುದ್ದಾದ ನಗು ಬೀರಿದ ಯಶ್ ಮಗಳು ಐರಾ

    ಸ್ಯಾಂಡಲ್‌ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಸಿನಿಮಾಗಳಿಂದ ಬ್ರೇಕ್ ಪಡೆದು, ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಇರುವ ರಾಧಿಕಾ ಈಗ ಐರಾ ಮತ್ತು ಯಥರ್ವ್ನ ಮುದ್ದಾದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಈಗ ಸಖತ್ ವೈರಲ್ ಆಗುತ್ತಿದೆ.

    ಯಶ್ ಮತ್ತು ರಾಧಿಕಾ ದಂಪತಿಗೆ ಐರಾ ಮತ್ತು ಯಥರ್ವ್ ಎಂಬ ಮುದ್ದಾದ ಮಕ್ಕಳಿದ್ದಾರೆ. ಸಮಯ ಸಿಕ್ಕಾಗಲೆಲ್ಲಾ ಮಕ್ಕಳ ಜೊತೆ ಸಮಯ ಕಳೆಯೋಕೆ ಮೀಸಲಿಡುತ್ತಾರೆ. ಮಕ್ಕಳ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಮಕ್ಕಳು ಮಾಡುವ ಕೀಟಲೆಯನ್ನು ಆಗಾಗ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಖುಷಿ ನೀಡುತ್ತಿರುತ್ತಾರೆ. ಇದೀಗ ಮುದ್ದು ಮಕ್ಕಳ ಮುದ್ದಾದ ಫೋಟೋವನ್ನು ನಟಿ ರಾಧಿಕಾ ಹಂಚಿಕೊಂಡಿದ್ದಾರೆ. ಕೆಜಿಎಫ್ 2 ಚಿತ್ರದ 50ನೇ ದಿನಕ್ಕೆ ಯಶ್ ನಟನೆಯ ಹೊಸ ಸಿನಿಮಾ ಅನೌನ್ಸ್?

     

    View this post on Instagram

     

    A post shared by Radhika Pandit (@iamradhikapandit)

    ಸಹೋದರ ಯಥರ್ವ್‌ ಜೊತೆಯಿರೋ ಐರಾ ಕ್ಯಾಮೆರಾ ಕಣ್ಣಿಗೆ ಮುದ್ದಾದ ನಗು ಬೀರಿದ್ದಾಳೆ. ಈ ಫೋಟೋ ಜೊತೆ ಮಂಡೇ ಬ್ಲ್ಯೂಸ್ ಎನ್ನುವ ಕ್ಯಾಪ್ಷನ್ ನೀಡಿದ್ದಾರೆ. ಒಟ್ನಲ್ಲಿ ಐರಾ ಕ್ಯೂಟ್‌ನೆಸ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. 2016ರಲ್ಲಿ ಯಶ್ ಜೊತೆ ರಾಧಿಕಾ ಹಸೆಮಣೆ ಏರಿದ್ದರು. ಬಳಿಕ 2019ರಲ್ಲಿ `ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ ರಾಧಿಕಾ ನಾಯಕಿಯಾಗಿ ಮಿಂಚಿದ್ದರು. ಆ ನಂತರ ಮಕ್ಕಳ ಆರೈಕೆಯಲ್ಲಿರುವ ರಾಧಿಕಾ, ಈಗ ಮತ್ತೆ ಸಿನಿಮಾಗೆ ವಾಪಸ್ ಆಗುತ್ತಾರೆ ಎಂಬ ಮಾಹಿತಿ ಸಿಕ್ಕಿದೆ. ಸೂಕ್ತ ಕಥೆ ಜೊತೆ ರಾಧಿಕಾ ಬೆಳ್ಳಿಪರದೆಯಲ್ಲಿ ಮಿಂಚೋದು ಗ್ಯಾರೆಂಟಿ.

  • ದುನಿಯಾ ವಿಜಯ್ ಜೊತೆ ಕುಸ್ತಿಗಿಳಿದ ಅದಿತಿ ಪ್ರಭುದೇವ!

    ದುನಿಯಾ ವಿಜಯ್ ಜೊತೆ ಕುಸ್ತಿಗಿಳಿದ ಅದಿತಿ ಪ್ರಭುದೇವ!

    ಬೆಂಗಳೂರು: ದುನಿಯಾ ವಿಜಯ್ ಮಾಸ್ತಿಗುಡಿ ಚಿತ್ರದ ನಂತರ ನಟಿಸುತ್ತಿರುವ ಚಿತ್ರ ಕುಸ್ತಿ. ಪ್ರತಿಭಾವಂತ ನಿರ್ದೇಶಕ ರಾಘು ಶಿವಮೊಗ್ಗ ನಿರ್ದೇಶನದ ಈ ಚಿತ್ರ ಈಗಾಗಲೇ ಟೀಸರ್ ಮೂಲಕ ವ್ಯಾಪಕ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರತಂಡ ಇದರ ಪ್ರತೀ ಪಾತ್ರಗಳಿಗೂ ಹುಡುಕಾಟದ ನಂತರವೇ ನಟ ನಟಿಯರನ್ನು ಆಯ್ಕೆ ಮಾಡಿಕೊಳ್ಳುತ್ತಿದೆ. ಅಂಥಾದ್ದೇ ವ್ಯಾಪಕ ಹುಡುಕಾಟದ ನಂತರ ಕುಸ್ತಿ ಚಿತ್ರಕ್ಕೆ ನಾಗಕನ್ನಿಕೆ ಖ್ಯಾತಿಯ ಅದಿತಿ ಪ್ರಭುದೇವ ನಾಯಕಿಯಾಗಿ ಆಯ್ಕೆಯಾಗಿದ್ದಾರೆ!

    ಇದು ಅದಿತಿ ಪಾಲಿಗೆ ಬಿಗ್ ಬ್ರೇಕ್‍ನಂಥಾ ಅವಕಾಶ. ಕಿರುತೆರೆಯ ನಾಗಕನ್ನಿಕೆ ಧಾರಾವಾಹಿಯ ಮೂಲಕವೇ ನಾಯಕಿಯಾಗಿ ನಟನೆಗೆ ಎಂಟ್ರಿ ಕೊಟ್ಟಿದ್ದವರು ಅದಿತಿ. ಆ ನಂಥರದಲ್ಲಿ ಅಜೇಯ್ ರಾವ್ ಜೊತೆ ಧೈರ್ಯಂ ಚಿತ್ರದಲ್ಲಿ ನಟಿಸೋ ಮೂಲಕ ಅವರು ನಾಯಕಿಯಾಗಿ ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದರು. ಅದಾದ ನಂತರ ಸಿಂಪಲ್ ಸುನಿ ನಿರ್ದೇಶನದ ಬಜಾರ್ ಚಿತ್ರದಲ್ಲಿಯೂ ಅದಿತಿ ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ವಿಚಾರವಾಗಿಯೂ ಅವರು ಭರವಸೆ ಮೂಡಿಸಿದ್ದಾರೆ. ಇದೀಗ ಅದಿತಿ ಕುಸ್ತಿ ಚಿತ್ರದ ಅಖಾಡಕ್ಕಿಳಿದಿದ್ದಾರೆ.

    ಗರಡಿ ಮನೆಯ ದೇಸೀ ಕುಸ್ತಿಯ ಸುತ್ತಲಿನ ರೋಚಕ ಕಥೆ ಹೊಂದಿರುವ ಚಿತ್ರ ಕುಸ್ತಿ. ಇದರ ಮುಖ್ಯ ಪಾತ್ರವೊಂದರ ಮೂಲಕ ದುನಿಯಾ ವಿಜಯ್ ಅವರ ಪುತ್ರನೂ ನಟನಾಗಿ ಎಂಟ್ರಿ ಕೊಡುತ್ತಿದ್ದಾನೆ. ಇದಕ್ಕಾಗಿ ತಾವೇ ಮುಂದೆ ನಿಂತು ವಿಜಿ ಮಗನಿಗೆ ದೈಹಿಕ ಕಸರತ್ತನ್ನು ಮಾಡಿಸಿದ್ದಾರೆ. ಫಿಟ್ನೆಸ್ ಬಗ್ಗೆ ಗಂಭೀರವಾಗಿರುವ ವಿಜಯ್ ಅವರು ಕುಸ್ತಿ ಚಿತ್ರಕ್ಕಾಗಿ ಮತ್ತಷ್ಟು ಕಸರತ್ತು ನಡೆಸಿದ್ದಾರೆ. ಇದೀಗ ಈ ಚಿತ್ರಕ್ಕೆ ಅದಿತಿ ಪ್ರಭುದೇವ್ ಎಂಟ್ರಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗನಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಸಹಾಯ ಕೇಳಿದ ನಟಿ ಸುಹಾಸಿನಿ

    ಮಗನಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಸಹಾಯ ಕೇಳಿದ ನಟಿ ಸುಹಾಸಿನಿ

    ಬೆಂಗಳೂರು: ಬಹುಭಾಷ ನಟಿ ಸುಹಾಸಿನಿಯ ಮಗ ನಂದನ್ ಅವರನ್ನ ಇಟಲಿಯ ಬೆಲ್ಯುನೊ ನಗರದಲ್ಲಿ ದರೋಡೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಹಾಸಿನಿ ತನ್ನ ಮಗನಿಗಾಗಿ ಸಹಾಯ ಕೇಳಿದ್ದರು.

    ವೆನಿಸ್ ಏರ್‍ಪೋರ್ಟ್ ಹತ್ತಿರ ಯಾರಾದರೂ ಇದ್ದರೆ ನನ್ನ ಮಗನಿಗೆ ಸಹಾಯ ಮಾಡಲು ಆಗುತ್ತಾ? ಬೆಲ್ಯುನೊ ನಗರದಲ್ಲಿ ಆತನನ್ನು ದರೋಡೆ ಮಾಡಲಾಗಿದೆ. ಮಗ ಏರ್‍ಪೋರ್ಟ್‍ಗೆ ಹೋಗಲು ಸಹಾಯ ಮಾಡಿ ಎಂದು ಟ್ವೀಟ್ ಮಾಡುತ್ತಾ ನಂದನ್‍ಯಿರುವ ಜಾಗವನ್ನು ವಿವರಿಸಿದ್ದರು. ವೆನಿಸ್ ಸ್ಟ ಮಾರ್ಕ್ ಸ್ಕ್ವೇರ್ ಪೊಲೀಸ್ ಸ್ಟೇಷನ್ ಹತ್ತಿರ ಇರುವವರು ಅವನಿಗೆ ಸಹಾಯ ಮಾಡಿ ಎಂದು ಟ್ವಿಟರ್‍ನಲ್ಲಿ ಪೋಸ್ಟ್ ಮಾಡಿದ್ದರು.

    ಸಹಾಯ ಮಾಡುವ ಬದಲು ಜನರು ಸುಹಾಸಿನಿಯವರ ಮಗನಿಗೆ ಅನಾವಶ್ಯಕವಾಗಿ ಕರೆಗಳನ್ನು ಮಾಡುತ್ತಿದ್ದರು. ಕರೆ ಮಾಡುವುದನ್ನು ನಿಲ್ಲಿಸಿ ಎಂದು ಮನವಿ ಮಾಡುತ್ತಾ ವೆನಿಸ್‍ನಲ್ಲಿರುವ ಜನರು ಸಹಾಯ ಮಾಡಲು ಆಗುವುದ್ದಿಲ್ಲ ಎಂದರೆ ನಾನು ಮೊದಲು ಪೋಸ್ಟ್ ಮಾಡಿದ ನಂಬರ್‍ಗೆ ಕರೆ ಮಾಡಬೇಡಿ. ಅವನ ಮೊಬೈಲ್ ಬ್ಯಾಟರಿ ಕಡಿಮೆಯಾಗುತ್ತಿದೆ. ಹೀಗಾಗಿ ಅವನು ಎಲ್ಲರ ಕಾಂಟ್ಯಾಕ್ಟ್ ಕಳೆದುಕೊಳುತ್ತಾನೆ. ಈಗಾಗಲೇ ತೊಂದರೆಯಲ್ಲಿ ಇರುವ ವ್ಯಕ್ತಿಗೆ ಅನಾವಶ್ಯಕವಾಗಿ ಕರೆ ಮಾಡುವ ಮೂಲಕ ತೊಂದರೆ ನೀಡುವುದನ್ನು ನಿಲ್ಲಿಸಿ ಎಂದು ಮತ್ತೆ ಟ್ವೀಟ್‍ನಲ್ಲಿ ಬರೆದುಕೊಂಡಿದ್ದರು.

    ಬಹಳ ಬೇಗ ವ್ಯಕ್ತಿಯೊಬ್ಬ ನಂದನ್‍ಗೆ ಸಹಾಯ ಮಾಡಲು ಒಪ್ಪಿಕೊಂಡಿದ್ದಾರೆ. ನಂತರ ಸಹಾಯಕ್ಕಾಗಿ ಬಂದ ಜನರಿಗೆ ಸುಹಾಸಿನಿ ಧನ್ಯವಾದ ತಿಳಿಸಿದ್ದಾರೆ. ನಮ್ಮ ಮಗ ಇಂದು ರಾತ್ರಿ ಸುರಕ್ಷಿತವಾಗಿ ಹೋಟೆಲ್ ತಲುಪಿದ್ದಾನೆ ಎಂದು ಸುಹಾಸಿನಿ ತಮ್ಮ ಕೊನೆಯ ಟ್ವೀಟ್ ಪೋಸ್ಟ್ ಮಾಡಿದ್ದರು.