Tag: Sanatan Dharma

  • `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿ – ಇಂದು ಬೆಂಗ್ಳೂರು ಕೋರ್ಟ್‌ಮುಂದೆ ಹಾಜರ್‌ ಸಾಧ್ಯತೆ

    `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿ – ಇಂದು ಬೆಂಗ್ಳೂರು ಕೋರ್ಟ್‌ಮುಂದೆ ಹಾಜರ್‌ ಸಾಧ್ಯತೆ

    ಬೆಂಗಳೂರು: ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರಿಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (Representatives Speical Court) ಮುಂದೆ ಹಾಜರಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ 5 ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು. ಆದ್ರೆ ಕಾರಣಾಂತರದಿಂದ ಗೈರಾಗಿದ್ದ ಉದಯನಿಧಿ ಸ್ಟಾಲಿನ್‌ ಅವರಿಂದು ಬೆಳಗ್ಗೆ 10:30ರ ವೇಳೆಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್‌ ಜಾರಿಗೊಳಿಸಿತ್ತು.

    ಏನಿದು ಪ್ರಕರಣ?
    2023ರ ಸೆಪ್ಟೆಂಬರ್‌ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ – ಉದಯನಿಧಿ ಸ್ಟಾಲಿನ್‌ಗೆ ಹೈಕೋರ್ಟ್‌ ರಿಲೀಫ್‌

    ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು. ಇದರ ಹೊರತಾಗಿಯೂ ಉದಯನಿಧಿ ಸ್ಟಾಲಿನ್‌ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.

  • ಭಾರತ ದೇಶವಲ್ಲ, ಜೈ ಶ್ರೀರಾಮ್ ಘೋಷಣೆಯನ್ನು ಒಪ್ಪಲ್ಲ; ಡಿಎಂಕೆ ಸಂಸದನ ವಿವಾದಾತ್ಮಕ ಹೇಳಿಕೆ

    ಭಾರತ ದೇಶವಲ್ಲ, ಜೈ ಶ್ರೀರಾಮ್ ಘೋಷಣೆಯನ್ನು ಒಪ್ಪಲ್ಲ; ಡಿಎಂಕೆ ಸಂಸದನ ವಿವಾದಾತ್ಮಕ ಹೇಳಿಕೆ

    – ನಾವು ಶ್ರೀರಾಮಚಂದ್ರನ ಶತ್ರುಗಳು ಎಂದ ಸಂಸದ ಎ.ರಾಜ

    ನವದೆಹಲಿ: ಭಾರತ (India) ದೇಶವಲ್ಲ. ನಾವು ಜೈ ಶ್ರೀರಾಮ್ (Jai Shree Ram) ಘೋಷಣೆಯನ್ನು ಒಪ್ಪಲ್ಲ ಎಂದು ಹಿಂದೂ ಧರ್ಮ ಮತ್ತು ಸನಾತನದ (Sanatan) ಬಗ್ಗೆ ಹೇಳಿಕೆ ನೀಡಿ ಡಿಎಂಕೆ (DMK) ಸಂಸದ ಎ.ರಾಜ (A.Raja) ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಮಧುರೈನಲ್ಲಿ ಹಿಂದೂ ಧರ್ಮ ಮತ್ತು ಸನಾತನ ಧರ್ಮದ ಬಗ್ಗೆ ಮಾತನಾಡಿದ ಅವರು, ನಾವು ಶ್ರೀರಾಮನ ಶತ್ರುಗಳು. ನಾವು ರಾಮಾಯಣದಲ್ಲಿ ನಂಬಿಕೆಯನ್ನು ಇಟ್ಟುಕೊಳ್ಳದವರು. ಜೈ ಶ್ರೀರಾಮ್ ಎನ್ನುತ್ತಾರೆ, ‘ಛೀ’ ಎಂದು ಕಟುವಾಗಿ ಟೀಕಿಸಿದರು. ಅಲ್ಲದೇ ನಾವು ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಒಪ್ಪಲ್ಲ. ನಮಗೆ ರಾಮಾಯಣದಲ್ಲಿ ನಂಬಿಕೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 24, ಕಾಂಗ್ರೆಸ್‌ ಗೆಲ್ಲಲಿದೆ 4 ಸ್ಥಾನ

    ದೇಶವೆಂದರೆ ಒಂದೇ ಭಾಷೆ ಮತ್ತು ಸಂಸ್ಕೃತಿಯನ್ನು ಒಳಗೊಂಡಿರುತ್ತದೆ. ಭಾರತದಲ್ಲಿ ಹಲವಾರು ಸಂಪ್ರದಾಯ ಮತ್ತು ಸಂಸ್ಕೃತಿಗಳಿವೆ. ಹಾಗಾಗಿ ಭಾರತ ದೇಶವಲ್ಲ. ಭಾರತ ಒಂದು ಉಪಖಂಡ. ತಮಿಳುನಾಡೇ ಒಂದು ದೇಶ, ಕೇರಳವೇ ಒಂದು ದೇಶ. ಒರಿಯಾವೇ ಒಂದು ದೇಶ, ಒಂದು ನಾಡು. ಈ ಎಲ್ಲಾ ದೇಶಗಳು ಸೇರಿ ಭಾರತವಾಗಿದೆ. ಹೀಗಾಗಿ ಭಾರತ ಒಂದು ಉಪಖಂಡ ಎಂದರು. ಅವರ ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯುಪಿ ಪೊಲೀಸ್ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ – ನೇಮಕಾತಿ ಮಂಡಳಿಯ ಅಧ್ಯಕ್ಷೆ ರೇಣುಕಾ ಮಿಶ್ರಾ ವಜಾ

    ಈ ಕುರಿತು ಬಿಜೆಪಿ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ (Amit Malviya), ಡಿಎಂಕೆ ನಾಯಕ ಭಾರತದ ವಿಭಜನೆಗೆ ಕರೆ ನೀಡಿದ್ದು, ಭಗವಾನ್ ರಾಮನನ್ನು ಅಪಹಾಸ್ಯ ಮಾಡಿದ್ದಾರೆ. ಅಲ್ಲದೇ ಮಣಿಪುರಿಗಳ ಬಗ್ಗೆ ಅವಹೇಳನಾಕಾರಿ ಕಾಮೆಂಟ್‌ಗಳನ್ನು ಮಾಡಿ ಭಾರತದ ಪರಿಕಲ್ಪನೆಯನ್ನು ಪ್ರಶ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಜೈಲಿನಲ್ಲಿದ್ದುಕೊಂಡೇ ಸಹ ಕೈದಿಗಳನ್ನು ಸೆಳೆದು ಉಗ್ರ ಚಟುವಟಿಕೆಗೆ ಬಳಕೆ – ದೇಶದ 17 ಕಡೆ ಎನ್‌ಐಎ ದಾಳಿ

    ಈ ಹಿಂದೆ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸಿ ಲೇವಡಿ ಮಾಡಿದ್ದರು. ಅವರ ಈ ವಿವಾದಾತ್ಮಕ ಹೇಳಿಕೆ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: 140 ಕೋಟಿ ಜನರೇ ನನ್ನ ಕುಟುಂಬ: ಲಾಲೂಗೆ ಮೋದಿ ತಿರುಗೇಟು

  • `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಬೆಂಗ್ಳೂರು ಕೋರ್ಟ್‌ನಿಂದ ಸಮನ್ಸ್

    `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಬೆಂಗ್ಳೂರು ಕೋರ್ಟ್‌ನಿಂದ ಸಮನ್ಸ್

    – ಖುದ್ದು ವಿಚಾರಣೆಗೆ ಹಾಜರಾಗಲು ಸೂಚನೆ

    ಬೆಂಗಳೂರು: ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಅಂತ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರು ಕೋರ್ಟ್ (Bengaluru Court) ಸಮನ್ಸ್ ನೀಡಿದೆ.

    ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ಗೆ (Udhayanidhi Stalin) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ನೀಡಿದ್ದು, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ. ಇದನ್ನೂ ಓದಿ: ಸನಾತನ ಧರ್ಮವನ್ನು ಕೊನೆವರೆಗೂ ವಿರೋಧಿಸುತ್ತೇನೆ: ಉದಯನಿಧಿ ಸ್ಟಾಲಿನ್‌

    ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ ಸಮನ್ಸ್‌ ಜಾರಿಗೊಳಿಸಿದೆ. ಇದನ್ನೂ ಓದಿ: ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಏನಿದು ಪ್ರಕರಣ?
    2023ರ ಸೆಪ್ಟೆಂಬರ್‌ 3 ರಂದು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಉದಯನಿಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಬಿಜೆಪಿ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಖರ್ಗೆ ಹೇಳಿಕೆಗೆ ಜೋರಾಗಿ ನಕ್ಕ ಪ್ರಧಾನಿ

    ಸನಾತನ ಧರ್ಮದ ನಿರ್ಮೂಲನೆ ಆಗಬೇಕು. ಅದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಕರೆ ನೀಡಿದ್ದರು. “ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ. ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾ ವೈರಸ್ ಅನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಈ ಸಂಬಂಧ ದೇಶಾದ್ಯಂತ ಪ್ರತಿಪಕ್ಷ ನಾಯಕರಿಂದ ವಿರೋಧ ವ್ಯಕ್ತವಾಗಿತ್ತು.

  • ನಮ್ಮ ಮೈಯಲ್ಲಿ ಸನಾತನ ಧರ್ಮದ ರಕ್ತ ಹರಿಯುತ್ತಿದೆ, ನಮ್ಮನ್ಮು ತಡವಿದರೆ ಸುಮ್ಮನೆ ಕೂರುವುದಿಲ್ಲ: ಬೊಮ್ಮಾಯಿ ಗುಡುಗು

    ನಮ್ಮ ಮೈಯಲ್ಲಿ ಸನಾತನ ಧರ್ಮದ ರಕ್ತ ಹರಿಯುತ್ತಿದೆ, ನಮ್ಮನ್ಮು ತಡವಿದರೆ ಸುಮ್ಮನೆ ಕೂರುವುದಿಲ್ಲ: ಬೊಮ್ಮಾಯಿ ಗುಡುಗು

    ಹಾವೇರಿ: ಸನಾತನ ಧರ್ಮವನ್ನು (Sanatan Dharma) ಮಲೇರಿಯಾ ರೋಗಕ್ಕೆ ಹೋಲಿಕೆ ಮಾಡುವುದನ್ನು ಕೇಳಿ ನಾವೆಲ್ಲಾ ಸುಮ್ಮನೇ ಕುಳಿತುಕೊಳ್ಳಬೇಕೇ? ನಮ್ಮ ಮೈಯಲ್ಲಿ ಸನಾತನ ಹಿಂದೂ (Hindu) ಧರ್ಮದ ರಕ್ತ ಹರಿಯುತ್ತಿದೆ. ನಮ್ಮನ್ಮು ತಡವಿದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗುಡುಗಿದ್ದಾರೆ

    ಶನಿವಾರ ಬಂಕಾಪುರದಲ್ಲಿ (Bankapura) ಹಿಂದೂ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತ‌ನಾಡಿದ ಅವರು, ಹಿಂದೂ ಗಣಪತಿ ತಡೆಯುವ ಪ್ರಯತ್ನ ಇಲ್ಲಿ ನಡೆಯಿತು. ಅದಕ್ಕೆ ಗಣಪತಿ ಶಕ್ತಿ ಇಡೀ ಕನ್ನಡ ನಾಡಿಗೆ ಗೊತ್ತಾಯಿತು. ಗಣಪತಿ ಇಟ್ಟಿದ್ದೇ ಮಾರ್ಗ. ಯಾರೂ ಕೂಡಾ ಗಣಪತಿಯನ್ನು ತಡೆಯುವ ಶಕ್ತಿ ಹೊಂದಿಲ್ಲ. ಇದು ಗಣಪತಿ ಭಕ್ತರ ಶಕ್ತಿ. ಗಣೇಶನ ಶಕ್ತಿ ತೋರಿಸಿದರೆ ಏನಾಗುತ್ತೆ ಎನ್ನುವುದು ಎಲ್ಲರಿಗೂ ಗೊತ್ತು ಎಂದರು.

    ಸನಾತನ ಧರ್ಮ ವಿಶ್ವದ ಮಾನವರ ಕಲ್ಯಾಣ ಧರ್ಮ‌. ಎಲ್ಲಾ ಧರ್ಮಿಯರು ಈ ದೇಶದಲ್ಲಿ ಇದ್ದಾರೆ. ಪಾಕಿಸ್ತಾನ, ಅಪಘಾನಿಸ್ತಾನದಲ್ಲಿ ಇರುವುದು ಒಂದೇ ಒಂದು ಧರ್ಮ. ಅಲ್ಲಿ ಜೀವಂತ ಬದುಕಲು ಸಾಧ್ಯವಿಲ್ಲ. ನಾವು ಎಲ್ಲರನ್ನೂ ಒಪ್ಪಿಕೊಂಡು ಬಾಳುತ್ತಿದ್ದೇವೆ. ಇಂಥ ವಿಶಾಲ ಧರ್ಮಕ್ಕೆ ಡೆಂಗ್ಯೂ ಮಲೇರಿಯಾ ಅಂತಾರಲ್ವಾ ಇವರು. ಇದೇ ಮಾತು ಬೇರೆ ಧರ್ಮದ ಬಗ್ಗೆ ಹೇಳಲಿ. ಇಷ್ಟೊತ್ತಿಗೆ ಅವರ ಗತಿ ಏನಾಗ್ತಿತ್ತು? ಇದಕ್ಕೆಲ್ಲಾ ಒಂದೇ ಪರಿಹಾರ ನಾವೆಲ್ಲಾ ಒಂದಾಗಬೇಕು, ಜಾಗೃತಿ ಆಗಬೇಕು ಎಂದು ಹೇಳಿದರು.

    ಸರ್ವೇ ಜನಾ ಸುಖಿನೋಭವಂತು ಎನ್ನುವ ಮಾತು ಎತ್ತಿ ಹಿಡಿಯಬೇಕು. ಕೆಲವರಿಗೆ ಭಾರತ ಶಕ್ತಿಶಾಲಿ ಅಭಿವೃದ್ಧಿಯಾಗುವುದು ಬೇಕಿಲ್ಲ. ನಮ್ಮ ಸರ್ಕಾರ ಇದ್ದಾಗ ಯಾವ ದುಷ್ಟ ಶಕ್ತಿಗೂ ತಲೆ ಎತ್ತಲು ಬಿಟ್ಟಿಲ್ಲ. ಕೆ.ಜೆ ಹಳ್ಳಿ ಡಿ.ಜಿ ಹಳ್ಳಿಯಲ್ಲಿ ತಪ್ಪು ಮಾಡಿದವರನ್ನು ಬಿಡಲಿಲ್ಲ. ಆದರೆ ಅಮಾಯಕರ ಮೇಲಿನ ಕೇಸು ರದ್ದು ಮಾಡಿ ಎಂದು ಪತ್ರ ಬರೆಯುತ್ತಾರೆ. ದಾಳಿಕೋರರ ಮೇಲಿನ ಕೇಸು ತಗೆಯಿರಿ ಎಂದು ಪತ್ರ ಬರೆಯುತ್ತಾರೆ. ಇಂಥ ಶಕ್ತಿಗಳನ್ನು ನಾವು ಧಮನ ಮಾಡದೇ ಇದ್ದರೆ ಸರ್ವೆ ಜನಾ ಸುಖಿನೋ ಭವಂತೂ ಆಗುವುದಿಲ್ಲ ಎಂದರು.

    ರಾಜ್ಯದಲ್ಲಿ ಅರಾಜಕತೆ ಇದೆ, ಎಲ್ಲಾ ಕಡೆ ಕೋಮ ಗಲಭೆ ಆಗುತ್ತಿದೆ. ಕಾಂಗ್ರೆಸ್ ಬಂದ ತಕ್ಷಣ ಬರಗಾಲ ಗ್ಯಾರಂಟಿ. ಕಾಂಗ್ರೆಸ್ ಆರಿಸಿಬಂದ ದಿನ ಬೆಳಗಾವಿಯಲ್ಲಿ ಪಾಕಿಸ್ತಾನ ಧ್ವಜ ಹಾರಿದೆ. ಪಾಕಿಸ್ತಾನದ ಧ್ವಜ ಹಿಡಿದವರು ಸರ್ಕಾರದ ಮೊಮ್ಮಕ್ಕಳು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ನ ಚೀಪ್ ಯೋಜನೆಗಳಿಂದಾಗಿ ಸಿದ್ದರಾಮಯ್ಯನವ್ರು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಸುರೇಶ್ ಗೌಡ

    ಶಿವಮೊಗ್ಗದಲ್ಲಿ ಪೋಲೀಸರ ಮೇಲೂ ಕಲ್ಲು ತೂರಿದ್ದಾರೆ. ಆದರೆ ಗೃಹ ಸಚಿವರು ಅದು ಸಣ್ಣ ಘಟನೆ ಎನ್ನುತ್ತಾರೆ. ಅವರ ಪೊಲೀಸರೇ ಲಾಠಿ ಚಾರ್ಜ್ ಮಾಡಿದರೆ ಸಣ್ಣ ಘಟನೆ ಅನ್ನುತ್ತಾರೆ. ಯಾಕೆಂದರೆ ಅದನ್ನು ಸರ್ಕಾರದ ಮೊಮ್ಮಕ್ಕಳು ಮಾಡಿದ್ದಾರೆ. ರಾಗಿ ಗುಡ್ಡದಲ್ಲಿ ಗಣೇಶೋತ್ಸವ ನಡೆದಾಗ ಒಂದು ಸಣ್ಣ ಘಟನೆ ನಡೆಯಲಿಲ್ಲ. ಆದರೆ ಒಂದು ವಾರದ ಬಳಿಕ ಈದ್ ಮಿಲಾದ್ ಬಳಿಕ ಕಲ್ಲು ತೂರಾಟ ಆಯಿತು. ಬಿಜೆಪಿಯವರೇ ಅಂಥ ವೇಷ ಹಾಕಿಕೊಂಡು ಈ ತರ ಮಾಡುತ್ತಾರೆ ಅಂತ ಮಂತ್ರಿ ಹೇಳಿದ್ದಾರೆ. ಆದರೆ, ನಮ್ಮ ಹುಡುಗರು ಇನ್ನೊಂದು ವೇಷ ಹಾಕಿಕೊಳ್ಳುವ ಹೇಡಿಗಳಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

    ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

    ನವದೆಹಲಿ: ಸನಾತನ ಧರ್ಮದ (Sanatana Dharma Row) ತತ್ವಗಳ ವಿರುದ್ಧ ಹೋರಾಡಲು ಇಂಡಿಯಾ (I.N.D.I.A) ಒಕ್ಕೂಟ ರಚಿಸಿದೆ. ನಮ್ಮ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ ಸನಾತನ ಧರ್ಮದ ವಿರುದ್ಧದ ಹೋರಾಟದಲ್ಲಿ 26 ಪಕ್ಷಗಳು ಒಂದಾಗಿವೆ. ಸನಾತನ ಧರ್ಮದ ವಿರುದ್ಧ ಹೋರಾಡಲು ರಾಜಕೀಯ ಶಕ್ತಿ ಬೇಕು. ಅದಕ್ಕಾಗಿ ಐಎನ್‌ಡಿಐಎ ಒಕ್ಕೂಟ ರಚಿಸಿದೆ ಎಂದು ಡಿಎಂಕೆ ಸರ್ಕಾರದ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ (K.Ponmudy) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರಾದ ಉದಯನಿಧಿ ಸ್ಟಾಲಿನ್, ಎ. ರಾಜಾ ನೀಡಿರುವ ಹೇಳಿಕೆಯಿಂದ ಐಎನ್‌ಡಿಐಎ ಒಕ್ಕೂಟದ ನಾಯಕರು ಅಂತರ ಕಾಯ್ದುಕೊಳ್ಳುತ್ತಿರುವ ಹೊತ್ತಲ್ಲಿ ಕೆ. ಪೊನ್ಮುಡಿ ಐಎನ್‌ಡಿಐಎ ಒಕ್ಕೂಟವನ್ನು ವಿವಾದದ ಒಳಗೆ ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ.

    ಸನಾತನ ಧರ್ಮ ನಿರ್ಮೂಲನೆ ಕಾರ್ಯಕ್ರದಲ್ಲಿ ಕೆ. ಪೊನ್ಮುಡಿ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ವೀಡಿಯೋದಲ್ಲಿ ಈ ಸಮ್ಮೇಳನದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ ಸಂಘಟಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಸನಾತನ ಧರ್ಮವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಿ ಎಂದು ಕರೆದಿದ್ದಕ್ಕಾಗಿ ನಾನು ಸಂಘಟಕರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮತ್ತೊಂದು ವಿವಾದ – ಸನಾತನ ಧರ್ಮವನ್ನ HIV, ಕುಷ್ಠರೋಗಕ್ಕೆ ಹೋಲಿಸಿದ ಸಂಸದ ಎ. ರಾಜಾ

    ಸನಾತನ ಧರ್ಮ ನಿರ್ಮೂಲನೆ ಮಾಡುವುದು ನಮ್ಮ ಮೊದಲ ಕೆಲಸವಾಗಬೇಕು. ಸನಾತನಂ ಎಂಬ ಹೆಸರು ಸಂಸ್ಕೃತದಿಂದ ಬಂದಿದೆ. ಸನಾತನಂ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಉದಯನಿಧಿ ಸ್ಟಾಲಿನ್ ಮಾತು ಉಲ್ಲೇಖಿಸಿ, ಸನಾತನ ಧರ್ಮವನ್ನು ಅನುಸರಿಸುತ್ತಿರುವ ಜನರ “ಜನಾಂಗೀಯ ಹತ್ಯೆಗೆ ಎಂದಿಗೂ ಕರೆ ನೀಡಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

    ಡಿಎಂಕೆ ನಾಯಕನ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (J.P. Nadda) ತಿರುಗೇಟು ನೀಡಿದ್ದಾರೆ. ಐಎನ್‌ಡಿಐಎ ಒಕ್ಕೂಟ ಪಾಲುದಾರಾದ ಉದಯನಿಧಿ ಸ್ಟಾಲಿನ್ (Udayanidhi Stalin), ಪ್ರಿಯಾಂಕಾ ಖರ್ಗೆ (Priyank Kharge) ಹೇಳಿಕೆ ‌ನೀಡಿದರು. ಸತಾತನ ಧರ್ಮದ ವಿರುದ್ಧ ಹೋರಾಡಲು ಒಕ್ಕೂಟ ರಚಿಸಿದೆ ಎಂದು ಕೆ. ಪೊನ್ಮುಡಿ ಹೇಳಿದ್ದಾರೆ. ಇದು ಕಾಂಗ್ರೆಸ್ (Congress), ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi) ಅವರ ತಂತ್ರದ ಭಾಗವಾಗಿದೆ. ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಮತ್ತು ಐಎನ್‌ಡಿಐಎ ಒಕ್ಕೂಟ ತಮ್ಮ ಅಭಿಪ್ರಾಯ ಹೇಳಬೇಕು ಎಂದು ನಡ್ಡಾ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಯಾವುದೇ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಲು ಸಂವಿಧಾನದಲ್ಲಿ ಹಕ್ಕು ಇದೆಯೇ ಎಂದು ಅವರಿಗೆ ತಿಳಿಸಬೇಕು. ಐಎನ್‌ಡಿಐಎ ಮೈತ್ರಿಕೂಟ, ಕಾಂಗ್ರೆಸ್, ಸೋನಿಯಾ ಮತ್ತು ರಾಹುಲ್ ಸನಾತನ ಧರ್ಮದ ವಿರುದ್ಧ ದ್ವೇಷದ ಸರಕುಗಳನ್ನು ಪ್ರೀತಿಯ ಅಂಗಡಿಯ ಹೆಸರಿನಲ್ಲಿ ಏಕೆ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಬೇಕು. ಈ ದ್ವೇಷದ ಮೆಗಾ ಮಾಲ್ ಕೇವಲ ಅಧಿಕಾರಕ್ಕಾಗಿ, ಒಡೆದು ಆಳುವುದಾಗಿದೆ ಎಂದು ಟಾಂಗ್‌ ಕೊಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ – ಮುತಾಲಿಕ್ ಕಿಡಿ

    ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ – ಮುತಾಲಿಕ್ ಕಿಡಿ

    ಧಾರವಾಡ: ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ (Pramod Muthalik) ತಿಳಿಸಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ (Udhayanidhi Stalin) ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

    ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಆಕ್ರೋಶ; ಆನ್‌ಲೈನ್ ಮೂಲಕ ದೂರು ದಾಖಲಿಸಲು ಮುಂದಾದ ಹಿಂದೂ ಸಂಘಟನೆಗಳು

    ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಶ್ಲೀಲ ವಿಡಿಯೋ ಹರಿಬಿಡುವ ಬೆದರಿಕೆ – ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವು

    ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾವ್ದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ – ಬಿಜೆಪಿಗೆ ಎಂ.ಕೆ ಸ್ಟಾಲಿನ್ ಪುತ್ರ ಸವಾಲ್

    ಯಾವ್ದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ – ಬಿಜೆಪಿಗೆ ಎಂ.ಕೆ ಸ್ಟಾಲಿನ್ ಪುತ್ರ ಸವಾಲ್

    ಚೆನ್ನೈ: ಸನಾತನ ಧರ್ಮವು (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನ ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ಬಿಜೆಪಿ ನಾಯಕರಿಗೆ ಮತ್ತೊಂದು ಸವಾಲ್ ಹಾಕಿದ್ದಾರೆ.

    ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದ್ದಂತೆ ಬಿಜೆಪಿ ನಾಯಕರು ತಿರುಗಿಬಿದ್ದಿದ್ದರು. ಪಿಎಂ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಉದಯನಿಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ ಉದಯನಿಧಿ ನನ್ನ ವಿರುದ್ಧ ಬಿಜೆಪಿ (BJP) ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ನಾನ್ ರೆಡಿ ಎಂದು ಸವಾಲ್ ಎಸೆದಿದ್ದಾರೆ. ಇದನ್ನೂ ಓದಿ: INDIA ಹಿಂದೂ ಧರ್ಮವನ್ನ ದ್ವೇಷಿಸುತ್ತಿದೆ, ಪರಂಪರೆಯ ಮೇಲೆ ದಾಳಿ ಮಾಡ್ತಿದೆ: ಶಾ ಗುಡುಗು

    ನಾನು ಸನಾತನ ಧರ್ಮವನ್ನ ಮಾತ್ರ ಟೀಕಿಸಿದ್ದೇನೆ. ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ಇದನ್ನ ನಿರಂತರವಾಗಿ ಹೇಳುತ್ತೇನೆ. ಆದ್ರೆ ನಾನು ನರಮೇಧಕ್ಕೆ ಆಹ್ವಾನ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಇನ್ನೂ ಕೆಲವರು ದ್ರಾವಿಡಂ (ದ್ರಾವಿಡರು) ನಿರ್ಮೂಲನೆಯಾಗಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ರೆ ಡಿಎಂಕೆ ಪಕ್ಷದವರನ್ನ ಕೊಲ್ಲಬೇಕೇ? ಈ ಹಿಂದೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಅಂತಾ ಕರೆ ಕೊಟ್ಟಿದ್ದರು. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ಸಿಗರನ್ನು ಕೊಲ್ಲಬೇಕು ಎಂದು ಅರ್ಥವೇ ಎಂದು ಪ್ರಶ್ನಿಸಿದ್ದಾರೆ.

    ಬಿಜೆಪಿ ನನ್ನ ಹೇಳಿಕೆಯನ್ನ ತಿರುಚಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಬಿಜೆಪಿಗೆ INDIA ಒಕ್ಕೂಟವನ್ನ ಕಂಡ್ರೆ ಭಯ. ಐಎನ್‌ಡಿಐಎ ಮೈತ್ರಿಗೆ ಹೆದರಿ ಹೀಗೆಲ್ಲಾ ಹೇಳುತ್ತಿದೆ. ನಾನು ನರಮೇಧಕ್ಕೆ ಕರೆ ಕೊಟ್ಟಿಲ್ಲ. ಬಿಜೆಪಿಯವರು ನನ್ನ ವಿರುದ್ಧ ಯಾವುದೇ ಕೇಸ್ ಹಾಕಿದ್ರೂ ಫೇಸ್ ಮಾಡೋಕೆ ರೆಡಿ ಇದ್ದೀನಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    ಉದಯನಿಧಿ ಸ್ಟಾಲಿನ್ ಹೇಳಿದ್ದೇನು?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    ಚೆನ್ನೈ: ಸನಾತನನ ಧರ್ಮವು (Sanatan Dharma) ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು ಎಂದು ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (M.K.Stalin) ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಸುವ ಮೂಲಕ ಬಿಜೆಪಿ ನಾಯಕರನ್ನು ತೀವ್ರವಾಗಿ ಟೀಕಿಸಿದ್ದು, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದನ್ನೂ ಓದಿ: ನಿದ್ರೆಗೆ ಜಾರಿದ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌, ಪ್ರಗ್ಯಾನ್‌ ರೋವರ್‌

    ಸಾಮಾಜಿಕ ಜಾಲಾತಾಣದಲ್ಲಿ ಇವರ ಹೇಳಿಕೆ ಕುರಿತು ಅನೇಕ ಕಾಮೆಂಟ್‌ಗಳು ಬರತೊಡಗಿದ್ದು, ನೆಟ್ಟಿಗರು ತಮಿಳುನಾಡು ಮುಖ್ಯಮಂತ್ರಿಯ ಮಗನ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ (Amit Malviya) ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ (Rahul Gandhi) ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ ಕಾಂಗ್ರೆಸ್‌ನ ಮಿತ್ರಪಕ್ಷವಾದ ಡಿಎಂಕೆಯ ಕುಡಿ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್‌ನ ಮೌನ ಈ ನರಮೇಧದ ಕರೆಗೆ ಬೆಂಬಲವಾಗಿದೆ. INDIA ಒಕ್ಕೂಟಕ್ಕೆ ಒಂದು ಅವಕಾಶವನ್ನು ನೀಡಿದರೆ ಅದು ನಮ್ಮ ಸಹಸ್ರಮಾನದ ನಾಗರಿಕತೆಯನ್ನು ನಾಶಪಡಿಸುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರತ ಹಿಂದೂ ರಾಷ್ಟ್ರವಲ್ಲ, ಆಗಿರಲೂ ಇಲ್ಲ: RSS ವಿರುದ್ಧ ಎಸ್‌ಪಿ ನಾಯಕ ಕಿಡಿ

    ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ. ಆದರೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಚೆನ್ನೈನಲ್ಲಿ (Chennai) ನಡೆದ ಲೇಖಕರ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿದ್ದರು. ಈ ಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ವಾದಿಸಿದ್ದರು. ಇದನ್ನೂ ಓದಿ: ಚಂದ್ರ, ಸೂರ್ಯ ಮಿಷನ್‌ ಆಯ್ತು; ಇಸ್ರೋ ಮುಂದಿನ ಆಪರೇಷನ್‌ ಯಾವುದು?

    ಮಾಳವೀಯ ಅವರ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತು ಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿ ಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದ ಜನರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: G20ಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ

    ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ನಾನು ಭಾಷಣದಲ್ಲಿ ಏನು ಹೇಳಿದ್ದೇನೆ ಎಂಬುದನ್ನು ಮತ್ತೊಮ್ಮೆ ಹೇಳುತ್ತೇನೆ. ಸೊಳ್ಳೆಗಳಿಂದ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂದು ನಾನು ನಂಬುತ್ತೇನೆ ಎಂದು ಮತ್ತೊಮ್ಮೆ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಜಿ20ಗೂ ಮುನ್ನ ಮೋದಿ – ಬೈಡೆನ್ ನಡುವೆ ದ್ವಿಪಕ್ಷೀಯ ಮಾತುಕತೆ

    ಅಲ್ಲದೇ ನ್ಯಾಯಾಲಯ ಅಥವಾ ಜನತಾ ನ್ಯಾಯಾಲಯದಲ್ಲಿ ನನ್ನ ಮುಂದೇ ಯಾವುದೇ ಸವಾಲುಗಳು ಎದುರಾದರೂ ಅದನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ಯಾಚಾರ ಆರೋಪ ಇರೋ ಮಠಾಧೀಶರನ್ನು ಕೈಬಿಟ್ಟ ಸನಾತನ ಧರ್ಮ ಸಂವರ್ಧಿನೀ ಸಭಾ

    ಅತ್ಯಾಚಾರ ಆರೋಪ ಇರೋ ಮಠಾಧೀಶರನ್ನು ಕೈಬಿಟ್ಟ ಸನಾತನ ಧರ್ಮ ಸಂವರ್ಧಿನೀ ಸಭಾ

    ಚಿಕ್ಕಮಗಳೂರು: ಶೃಂಗೇರಿಯಲ್ಲಿ ನಡೆದ ಸನಾತನ ಧರ್ಮ ಸಂವರ್ಧಿನೀ ಸಭಾದ ಸಭೆಯಲ್ಲಿ ಅತ್ಯಾಚಾರ ಆರೋಪ ಹೊತ್ತ ಸ್ವಾಮೀಜಿಗಳನ್ನು ಸಭಾದಿಂದ ಕೈಬಿಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಶ್ರೀ ಮಠದ ಜಗದ್ಗುರು ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸನಾತನ ಧರ್ಮ ಸಂವರ್ಧನೆಗೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮಠಗಳು ಯೋಗ್ಯರಾದ ನಿಷ್ಕಳಂಕ ವ್ಯಕ್ತಿಗಳಿಂದ ಮುಂದುವರಿಯಬೇಕೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

    ಸಭೆಯಲ್ಲಿ ಶೃಂಗೇರಿಯ ಶಾರದಾಪೀಠದ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿ, ಶ್ರೀ ವಿಧುಶೇಖರಭಾರತೀ ಮಹಾಸ್ವಾಮೀಜಿ, ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ, ಯಡತೊರೆ ಕೃಷ್ಣರಾಜನಗರದ ಮಠದ ಶಂಕರಭಾರತೀ ಸ್ವಾಮೀಜಿ, ಹರಿಪುರ ಮಠದಿಂದ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ. ಶಿವಗಂಗಾ ಮಠದಿಂದ ಪರುಷೋತ್ತಮಭಾರತೀ ಸ್ವಾಮೀಜಿ, ಎಡನೀರು ಮಠದಿಂದ ಕೇಶವಾನಂದ ಭಾರತೀ ಸ್ವಾಮಿಗಳು ಭಾಗವಹಿಸಿದ್ದರು.

    ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
    ಸನಾತನ ಧರ್ಮದ ಉದ್ಧಾರಕ್ಕಾಗಿ ಶ್ರೀ ಶಂಕರಭಗವತ್ಪಾದಕರು ನಮ್ಮ ದೇಶದ ಉದ್ದಗಲಕ್ಕೂ ಕಾಲ್ನಡಿಗೆಯಿಂದ ಸಂಚರಿಸಿ ಧರ್ಮಜಾಗೃತಿಯ ಜೊತೆ ರಾಷ್ಟ್ರದಲ್ಲಿ ಏಕತೆಯನ್ನೂ ಸಾಧಿಸಿದರು. ಈ ರೀತಿ ಸಂಚಾರದ ಸಂದರ್ಭದಲ್ಲಿ ಶ್ರೀ ಶಂಕರರು ಸಂಚರಿಸಿದ ಶ್ರೀಶೈಲ ಮುಂತಾದ ಎಲ್ಲ ಪ್ರಮುಖ ಕ್ಷೇತ್ರಗಳಲ್ಲಿ ಸನಾತನ ಧರ್ಮ ಸಂವರ್ಧನೆಗಾಗಿ ವಿಶೇಷ ಸ್ಮಾರಕಗಳನ್ನು ನಿರ್ಮಿಸಲು ತೀರ್ಮಾನ.

    ಇತ್ತೀಚೆಗೆ ಮಧ್ಯಪ್ರದೇಶ ಸರ್ಕಾರ ಶ್ರೀ ಶಂಕರರ ಸಾರಿದ ಏಕಾತ್ಮಕತೆಯನ್ನು ಸಮಾಜಕ್ಕೆ ತಿಳಿಸಲು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕಾರ್ಯಕ್ರಮ ಹಮ್ಮಿಕೊಂಡಂತೆ ನಮ್ಮ ದೇಶದ ಉಳಿದ ರಾಜ್ಯಗಳಲ್ಲೂ ಹಮ್ಮಿಕೊಳ್ಳುವುದು ದೇಶದ ದೃಷ್ಟಿಯಿಂದ ಅತ್ಯಂತ ಅವಶ್ಯಕ ಎಂದು ಅಭಿಪ್ರಾಯ ವ್ಯಕ್ತವಾಯಿತು.

    ಮನುಷ್ಯನ ಶ್ರೇಯಸ್ಸಿಗೆ ವೇದೋಪನಿಷತ್ತುಗಳೇ ಪ್ರಮಾಣ ಎಂದು ಭಗವಂತ ಗೀತೆಯಲ್ಲಿ ಉಪದೇಶಿಸಿದ್ದಾನೆ. ಇಂತಹ ಉಪದೇಶಗಳನ್ನು ತಿಳಿಸಿ, ಸನಾತನ ಧರ್ಮ ಸಂವರ್ಧನೆಗಾಗಿ ಸನಾತನ ಧರ್ಮ ಸಂವರ್ಧಿನಿ ಸಭಾ ಪ್ರಯತ್ನಿಸುತ್ತಿದೆ. ಸಂನ್ಯಾಸಾಶ್ರಮ ಧರ್ಮಪಾಲನೆಗೆ ವೇದೋಪನಿಷತ್ತು ಮೊದಲಾದವುಗಳು ಪ್ರಮಾಣ ಹಾಗೂ ಮಠಾಧೀಶರಾಗಿರುವುವವರಿಗೆ ಶ್ರೀ ಶಂಕರರಿಂದ ವಿರಚಿತವಾದ ಮಠಾಮ್ನಾಯ ಪ್ರಮಾಣ. ಇದಕ್ಕೆ ವ್ಯತಿರಿಕ್ತವಾದ ಜೀವನ ನಡೆಸುವ ಹಾಗೂ ಅತ್ಯಾಚಾರ, ಅನೈತಿಕ ಸಂಬಂಧ ಮೊದಲಾದ ಗಂಭೀರ ಆರೋಪಗಳನ್ನು ಹೊತ್ತ ಮಠಾಧೀಶರನ್ನು ನಮ್ಮ ಸಂಸ್ಥೆಯಿಂದ ಕೈಬಿಡಲು ತೀರ್ಮಾನಿಸಲಾಯಿತು. ಆದರೆ ಆ ಮಠಗಳು ಯೋಗ್ಯರಾದ ನಿಷ್ಕಳಂಕ ವ್ಯಕ್ತಿಗಳಿಂದ ಮುಂದುವರಿಯಬೇಕೆಂದು ಸಂಸ್ಥೆ ಅಭಿಪ್ರಾಯ ಪಟ್ಟಿದೆ.

    ವೈಶಾಖ ಶುಕ್ಲ ಪಂಚಮಿ ಶ್ರೀ ಶಂಕರಜಯಂತ್ಯುತ್ಸವ. ಈ ಉತ್ಸವದಲ್ಲಿ ಶ್ರೀ ಶಂಕರರ ಅಷ್ಟೋತ್ತರ ಪಾರಾಯಣದ ಜೊತೆ ಭಾಷ್ಯ-ಪ್ರಕರಣಗ್ರಂಥ-ಸ್ತೋತ್ರ ಹಾಗೂ ಶಂಕರ ದಿಗ್ವಿಜಯಗಳ ಪಾರಾಯಣವನ್ನು ಐದು ದಿನಗಳ ಕಾಲ ಎಲ್ಲ ಆಸ್ತಿಕರು ಮಾಡುವಂತೆ ತಮ್ಮ ತಮ್ಮ ಮಠಗಳ ಶಿಷ್ಯರುಗಳಲ್ಲಿ ಜಾಗೃತಿ ಮೂಡಿಸಬೇಕೆಂದು ನಿರ್ಣಯವನ್ನು ಕೈಗೊಳ್ಳಲಾಯಿತು.