ಕಾರವಾರ: ಉತ್ತರ ಕನ್ನಡ (Uttar Kannada) ಜಿಲ್ಲೆಯ ಶಿರಸಿಯ (Sirsi) ಶಿಂಗನಳ್ಳಿ ಗ್ರಾಮದಲ್ಲಿನ ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧ ಮರವನ್ನು ಕಡಿದು ಕಳ್ಳತನ ಮಾಡುತ್ತಿದ್ದ ಮೂವರು ಮರಗಳ್ಳರನ್ನ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ.ಜಿ.ಆರ್.ಜಾನ್ಮನೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರೀಶ್.ಸಿ.ಎನ್. ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಶಿವಾನಂದ ನಿಂಗಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಜೂಜಾಟ ಪ್ರಕರಣ – ಐವರು ಪೊಲೀಸರು ಅಮಾನತು
ಕರ್ನಾಟಕ ಅರಣ್ಯ ಕಾಯ್ದೆ 1963ರ 00 24(3), 84, 85, 87 ಆರ್/ಡಬ್ಲ್ಯೂ 86 ಮತ್ತು 1969 ಡಿ ನಿಯಮ 144, 145ರಂತೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೆಜಿಎಫ್ -2 (KGF-2) ಸಕ್ಸಸ್ ಬಳಿಕ ಮುಂದಿನ ಸಿನಿಮಾದ (Cinema) ತಯಾರಿಯಲ್ಲಿ ರಾಕಿಂಗ್ ಸ್ಟಾರ್ (RockingStar) ಯಶ್ ಫುಲ್ ಬ್ಯುಸಿಯಾಗಿದ್ದಾರೆ. ಈ ನಡುವೆ ಯಶ್ ರಾಜಕೀಯಕ್ಕೆ ಬರುತ್ತಾರೆ ಅನ್ನೋ ಚರ್ಚೆ ಹುಟ್ಟಿಕೊಂಡಿವೆ.
ಈಗಾಗಲೇ ಅಂಬರೀಶ್, ಜಗ್ಗೇಶ್ (Jaggesh), ಶೃತಿ, ರಮ್ಯಾ (Ramya) ಹಾದಿಯಾಗಿ ಅನೇಕ ಸಿನಿ ದಿಗ್ಗಜರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗೆಯೇ ಕೆಜಿಎಫ್-2 ಸಕ್ಸಸ್ ಬಳಿಕ ಅಭಿಮಾನಿಗಳ ಅಲೆ ಎದ್ದಿರೋದ್ರಿಂದ ಯಶ್ (Yash) ಕೂಡ ರಾಜಕೀಯಕ್ಕೆ (Politics) ಬರುತ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಯಶ್ ಅವರೇ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಯಶ್ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: ಕೊನೆಗೂ KGF-3 ರಹಸ್ಯ ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್
`ಮೊದಲಿಗೆ ನಾನು ನನ್ನಲ್ಲಿ ಮತ್ತು ನನ್ನ ಸಿನಿ ಉದ್ಯಮದಲ್ಲಿ ಬಹಳಷ್ಟು ಬದಲಾವಣೆ ತರಲು ಬಯಸುತ್ತೇನೆ. ನನ್ನ ಮಿತಿಯಲ್ಲಿ, ನಾನು ಸಮಾಜದ ಕೆಲ ವಿಷಯಗಳನ್ನು ಬದಲಾಯಿಸಲು ಪ್ರಯತ್ನಿಸುತ್ತೇನೆ. ಅವಶ್ಯಕತೆಯಿದ್ದ ಕೆಲಸಗಳನ್ನು ಈಗಾಗಲೇ ಮಾಡುತ್ತಿದ್ದೇವೆ. ಅದರಿಂದ ಕೆಲವರ ಜೀವನ ಬದಲಾಯಿಸಿದೆ. ಅದಕ್ಕೆ ರಾಜಕೀಯವೇ ಬೇಕು ಅನ್ನುವಂತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೈವ ನರ್ತಕರ ಪವಿತ್ರ ಆಚರಣೆ ಗೌರವಿಸಿ- ಲಲಿತಾ ನಾಯಕ್‌ಗೆ ಖಾದರ್ ತಿರುಗೇಟು
ಬಹಳಷ್ಟು ಜನ ರಾಜಕೀಯ ಕೆಟ್ಟದ್ದು, ಬರೀ ಭ್ರಷ್ಟಾಚಾರ ಅಂತಾರೆ, ರಾಜಕಾರಣಿಗಳು ಜನರ ದುಡ್ಡಲ್ಲೇ ಬದುಕುತ್ತಿದ್ದಾರೆ ಅಂತಾರೆ. ಅದು ಎಷ್ಟರಮಟ್ಟಿಗೆ ಸತ್ಯ ಅನ್ನೋದು ನನಗೆ ಗೊತ್ತಿಲ್ಲ. ಆದರೆ ನಾನು ಎಂದಿಗೂ ನಟನಾಗಿ ಇರುತ್ತೇನೆ. ರಾಜಕೀಯ ಕೃತಜ್ಞತೆಯಿಲ್ಲದ ಕೆಲಸ. ಅಲ್ಲಿಗೆ ನಾನು ಬರೋದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ನೇತೃತ್ವದಲ್ಲಿ `ಪುನೀತ ಪರ್ವ’ (Puneetha Parva) ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ (SandalWood) ಜೊತೆಗೆ ಬಹುಭಾಷಾ ತಾರೆಯರು ಕೂಡ ಸಾಥ್ ನೀಡಿದ್ದಾರೆ. ಹಾಡಿ ಕುಣಿದು ಸಂಭ್ರಮಿಸಿದ್ದಾರೆ. ಇದೇ ವೇಳೆ ಮಾತನಾಡಿರುವ ನಟ ರಾಕಿಂಗ್ ಸ್ಟಾರ್ ಯಶ್ (Rocking Star Yash), ಗಂಧದ ಗುಡಿ ಸಿನಿಮಾ ಎಲ್ಲಾ ಸಿನಿಮಾ (Cinema) ರೆಕಾರ್ಡ್ಸ್‌ಗಳನ್ನ ಧೂಳ್ ಮಾಡ್ಬೇಕು ಎಂದಿದ್ದಾರೆ.
ಇಂದು ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, `ಗಂಧದ ಗುಡಿ (GandhadaGudi) ಸಿನಿಮಾ ಎಲ್ಲಾ ರೆಕಾರ್ಡ್ಸ್ಗಳನ್ನ ಧೂಳ್ ಮಾಡಬೇಕು. ಕೆಜಿಎಫ್ (KGF Cinema) ರೆಕಾರ್ಡ್ಸ್ ಕೂಡ ಇರಬಾರದು. ಅರ್ಥ ಆಯ್ತಾ? ಮನೆ ಮನೆಯಲ್ಲಿ ಪ್ರತಿಯೊಬ್ಬರೂ ನೋಡಬೇಕಾದ ಸಿನಿಮಾ ಇದು. ಇಂಥ ಒಳ್ಳೆ ಜೀವದೊಂದಿಗೆ ಸಿನಿಮಾ ಸಂಭ್ರಮಿಸೋಣ ಅಂತಾ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಕಾಂತಾರ ನೋಡಿ, ಆದ್ರೆ ಓ.. ಎಂದು ಕೂಗ್ಬೇಡಿ – ಆಚಾರಕ್ಕೆ ಧಕ್ಕೆಯಾಗುತ್ತೆ ಎಂದ ರಿಷಬ್
ನಮ್ಮದೆಲ್ಲಾ ಏನೋ ಸಾಧನೆ ಅನ್ನುವಾಗ, ಸಾಧನೆ ಅಂದ್ರೆ ಇದು ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಆ ಉದ್ದೇಶಕ್ಕಾದರೂ ಸಿನಿಮಾ ಗೆಲ್ಲಿಸಬೇಕು ಎಂದು ಪ್ರತಿಯೊಬ್ಬರು ಸಿನಿಮಾ ನೋಡಿ ಎಂದು ಯಶ್ ಮನವಿ ಮಾಡಿಕೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ವಾರ್ಷಿಕ ಚುನಾವಣೆಯು ಸಂಘದ ಬೈಲಾ ಪ್ರಕಾರ ನಡೆದಿಲ್ಲವೆಂದು, ಅಲ್ಲಿ ಅಕ್ರಮಗಳು ನಡೆದಿವೆ ಎಂದು ಸಾ.ರಾ.ಗೋವಿಂದು, ಬಿ.ಕೆ. ಜಯಸಿಂಹ ಮುಸುರಿ, ರಮೇಶ್ ಕಶ್ಯಪ್ ಹಾಗೂ ಕೆ.ಎಂ. ವೀರೇಶ್ ಅವರು ಸಹಾಕ ಸಂಘಟಗಳ ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ, ಯಾವುದೇ ಶಾಸನಾತ್ಮಕ ಹಾಗೂ ಆರ್ಥಿಕ ತೀರ್ಮಾನಗಳನ್ನು ತಗೆದುಕೊಳ್ಳದಂತೆ ಮಂಡಳಿಗೆ ಮಧ್ಯಂತರ ಆದೇಶ ನೀಡಲಾಗಿದೆ.
ಈ ಕುರಿತಂತೆ ಸಹಕಾರಿ ಸಂಘಗಳ ಜಿಲ್ಲಾ ನೋಂದಣಿ ಅಧಿಕಾರಿಗಳು ವಿಚಾರಣೆ ನಡೆಸಿ, ಸದರಿ ದೂರಿನ ಅರ್ಜಿ ಇತ್ಯರ್ಥವಾಗುವವರೆಗೂ ಹಾಗೂ ಮುಂದಿನ ನಿರ್ದೇಶನ ಬರುವತನಕ ಯಾವುದೇ ತೀರ್ಮಾನಗಳನ್ನು ತಗೆದುಕೊಳ್ಳದಿರಲು ನೋಟಿಸ್ ಜಾರಿ ಮಾಡಲಾಗಿದೆ. ಜೂ.28 ರಂದು ವಾಣಿಜ್ಯ ಮಂಡಳಿಗೆ ನಡೆದ ಚುನಾವಣೆಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಸಂರಕ್ಷಿಸಡಬೇಕು ಎಂದು ನೋಟಿಸ್ ನಲ್ಲಿ ಹೇಳಲಾಗಿದೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ
ಈ ಕುರಿತು ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ‘ಮಧ್ಯಂತರ ಆದೇಶವಾಗಿದ್ದು ನಿಜ. ಹಾಗಂತ ನಮ್ಮ ಕೆಲಸಕ್ಕೆ ಯಾವುದೇ ರೀತಿಯಲ್ಲಿ ಅದು ತೊಂದರೆ ಮಾಡದು. ಹೊಸ ಸದಸ್ಯರಾಗಿ ಬರುವ ನಿರ್ಮಾಪಕರಿಗೆ ಸದಸ್ಯತ್ವ ಮಾಡುವುದಕ್ಕೆ ಆಗುವುದಿಲ್ಲ ಮತ್ತು ಟೈಟಲ್ ನೋಂದಣಿಗೂ ಅಧಿಕಾರಿ ಇಲ್ಲ. ನಾವೂ ಕೂಡ ಕಾನೂನಿನ ಮೊರೆ ಹೋಗುತ್ತೇವೆ’ ಎಂದಿದ್ದಾರೆ.
ಸತೀಶ್ ನೀನಾಸಂ ನಟನೆಯ ಡಿಯರ್ ವಿಕ್ರಮ್ ಸಿನಿಮಾ ಇದೇ ಜೂನ್ 30 ರಂದು ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಆಗುತ್ತಿದೆ. ಪೂರ್ವಿಭಾವಿಯಾಗಿ ಸಿನಿಮಾ ತಂಡವು ಹಲವು ಗಣ್ಯರಿಗೆ ಈ ಚಿತ್ರವನ್ನು ವೀಕ್ಷಿಸಲು ಸಿದ್ಧತೆ ಮಾಡಿಕೊಂಡಿದ್ದು ನಾಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಿನಿಮಾವನ್ನು ವೀಕ್ಷಿಸಲಿದ್ದಾರೆ. ಇದೊಂದು ಜೀವಪರ ಕಥೆಯನ್ನು ಹೊಂದಿರುವ ಚಿತ್ರವಾಗಿದೆ. ಹಾಗಾಗಿ ಸಿದ್ದರಾಮಯ್ಯ ಅವರನ್ನು ಸಿನಿಮಾ ತಂಡ ಆಹ್ವಾನಿಸಿದೆ.
ನಿನ್ನೆಯಷ್ಟೇ ಸಿದ್ದರಾಮಯ್ಯ ಅವರನ್ನು ನಟ ಸತೀಶ್ ನೀನಾಸಂ, ನಿರ್ದೇಶಕ ನಂದೀಶ್ ಮತ್ತು ಲೇಖಕ ನಟರಾಜ್ ಹುಳಿಯಾರ್ ಭೇಟಿಯಾಗಿ ಸಿನಿಮಾ ವೀಕ್ಷಿಸುವಂತೆ ಆಹ್ವಾನಿಸಿದ್ದಾರೆ. ಈ ಕುರಿತು ಸ್ವತಃ ಸಿದ್ದರಾಮಯ್ಯ ಅವರೇ ಟ್ವೀಟ್ ಮಾಡಿದ್ದು, ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದಾರೆ. ರಾಜಕೀಯ ಚಟುವಟಿಕೆಗಳ ನಡುವೆ ಅವರು ಡಿಯರ್ ವಿಕ್ರಮ್ ಸಿನಿಮಾವನ್ನು ವೀಕ್ಷಿಸಲಿದ್ದಾರೆ. ಇದನ್ನೂ ಓದಿ:ಮಲಯಾಳಂ ನಟಿ ಅಂಬಿಕಾ ರಾವ್ ನಿಧನ
ನಂದೀಶ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸತೀಶ್ ನಾಯಕನಾಗಿ ನಟಿಸಿದ್ದಾರೆ. ಶ್ರದ್ಧಾ ಶ್ರೀನಾಥ್ ನಾಯಕಿ. ವಸಿಷ್ಠ ಸಿಂಹ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ವ್ಯವಸ್ಥೆಯ ವಿರುದ್ಧದ ಹೋರಾಟಗಾರನೊಬ್ಬನ ಕಥೆಯನ್ನು ಈ ಸಿನಿಮಾ ಹೊಂದಿದೆ ಎಂದು ಹೇಳಲಾಗುತ್ತಿದೆ.
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟ್ರೈಲರ್ ಜೂನ್ 23 ರಂದು ದೇಶಾದ್ಯಂತ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಅಭಿಮಾನಿಗಳು ಟ್ರೈಲರ್ ರಿಲೀಸ್ ಗಾಗಿ ಕಾಯುತ್ತಿದ್ದು, ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಕಲಾವಿದರು ಈ ಟ್ರೈಲರ್ ಅನ್ನು ರಿಲೀಸ್ ಮಾಡಲಿದ್ದಾರೆ. ಹಿಂದಿ, ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಈ ಟ್ರೈಲರ್ ಬಿಡುಗಡೆ ಆಗಲಿದೆ.
ಈಗಾಗಲೇ ತಮಿಳು ಭಾಷೆಯ ಟ್ರೈಲರ್ ಅನ್ನು ತಮಿಳಿನ ಖ್ಯಾತ ನಟ ಧನುಷ್ಯ ಬಿಡುಗಡೆ ಮಾಡಲಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಆದರೆ, ಇತರ ಭಾಷೆಯಲ್ಲಿ ಮೂಡಿ ಬಂದಿರುವ ವಿಕ್ರಾಂತ್ ರೋಣ ಸಿನಿಮಾದ ಟ್ರೈಲರ್ ಯಾರಿಂದ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಮೂಡಲಿದೆ. ಹಿಂದಿಯಲ್ಲಿ ಈ ಸಿನಿಮಾಗೆ ಸಲ್ಮಾನ್ ಖಾನ್ ಸಾಥ್ ನೀಡಿರುವುದರಿಂದ ಮತ್ತೊಬ್ಬ ಬಿಗ್ ಸ್ಟಾರ್ ಈ ಟ್ರೈಲರ್ ರಿಲೀಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಚಾರ್ಲಿ 777 ತೆರಿಗೆ ವಿನಾಯತಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅಸಮಾಧಾನ ಏಕೆ?
ಕಿಚ್ಚ ಸುದೀಪ್ ನಟನೆಯ ಬಹುಕೋಟಿ ಬಜೆಟ್ ಸಿನಿಮಾ ಇದಾಗಿದ್ದು, 2 ಡಿ ಮತ್ತು 3 ಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಭಾರತೀಯ ಭಾಷೆಗಳಿಗೆ ಮಾತ್ರವಲ್ಲ, ಇಂಗ್ಲಿಷ್ ಗೂ ಈ ಸಿನಿಮಾ ಡಬ್ ಆಗಿ ಹಾಲಿವುಡ್ ನಲ್ಲೂ ರಿಲೀಸ್ ಆಗುತ್ತಿದೆ. ಹೀಗಾಗಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆ ಹೊಂದಲಾಗಿದೆ. ಈಗಾಗಲೇ ರಿಲೀಸ್ ಆಗಿರುವ ‘ರಾ ರಾ ರಕ್ಕಮ್ಮ’ ಹಾಡು ದಾಖಲೆ ರೀತಿಯಲ್ಲಿ ಜನರಿಗೆ ತಲುಪಿದ್ದು, ಟ್ರೈಲರ್ ಅನ್ನು ಅದೇ ಮಟ್ಟಕ್ಕೆ ರೀಚ್ ಮಾಡಿಸುವ ಪ್ಲ್ಯಾನ್ ಅಭಿಮಾನಿಗಳು ಮಾಡಿದ್ದಾರಂತೆ. ಇಂದು ಅಥವಾ ನಾಳೆ ಬೇರೆ ಭಾಷೆಯ ಟ್ರೈಲರ್ ಅನ್ನು ಯಾರು ಬಿಡಗಡೆ ಮಾಡಲಿದ್ದಾರೆ ಎನ್ನುವುದು ಗೊತ್ತಾಗಲಿದೆ.
ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ” ಅಶೋಕ ಬ್ಲೇಡ್” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಪಿ.ಶೇಷಾದ್ರಿ ಆರಂಭಫಲಕ ತೋರಿದರು. ಟಿ.ಎನ್.ಸೀತಾರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದನ್ನೂ ಓದಿ: ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!
ನಾನು ಹಲವಾರು ವರ್ಷಗಳಿಂದ ಕಿರುತೆರೆ ಮತ್ತು ಹಿರಿತೆರೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಪಿ. ಶೇಷಾದ್ರಿ, ಟಿ.ಎನ್. ಸೀತಾರಾಂ ಅವರ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕ ಮತ್ತು ನಿರ್ದೇಶಕರಾಗಿ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ವರ್ಧನ್ ಮತ್ತು ದೀಪಕ್ ನಾಯ್ಡು ಅವರ ಪರಿಚಯವಾಯಿತು. ಮೂರು ಜನ ಸೇರಿ 10 ವರ್ಷಗಳ ಹಿಂದೆ ಒಂದು ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿ, ಹಲವು ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದೇವೆ. ಒಂದು ಚಿತ್ರ ನಿರ್ಮಾಣ ಮಾಡುವ ಯೋಚನೆ ಇತ್ತು. ಟಿ.ಕೆ. ದಯಾನಂದ್ ಅವರ ಹತ್ತಿರ ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾಯಿತು. ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಇದೇ ನಮ್ಮ ಸಂಸ್ಥೆಯ ಮೊದಲ ಚಿತ್ರವಾಗಬೇಕು ಎಂದು ತೀರ್ಮಾನಿಸಿ ಚಿತ್ರ ಮಾಡುತ್ತಿದ್ದೇವೆ. ಸತೀಶ್ ನೀನಾಸಂ ಸಹ ಕೈ ಜೋಡಿಸಿದ್ದಾರೆ. ವರ್ತಕರು ಮತ್ತು ಕಾರ್ಮಿಕರ ನಡುವೆ ನಡೆಯುವ ಯುದ್ಧದ ಕುರಿತು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಿರ್ದೇಶಕ ವಿನೋದ್ ದೋಂಡಾಳೆ ಮಾಹಿತಿ ನೀಡಿದರು.
ದಿನ ಬೆಳಗಾದರೆ ಹಲವು ನಿರ್ದೇಶಕರು ಬಂದು ಕಥೆ ಹೇಳುತ್ತಾರೆ. ಆದರೆ, ಈ ಕಥೆ ಹುಡುಕಿದ್ದು ನಾನೇ. ಸ್ನೇಹಿತರ ಮೂಲಕ ದಯಾನಂದ್ ಅವರ ಬಳಿ ಒಳ್ಳೆಯ ಕಥೆ ಇದೆ ಎಂದು ಕೇಳಿದೆ. ತರಿಸಿ ಓದಿದೆ. ತಕ್ಷಣ ಈ ಚಿತ್ರವನ್ನು ಮಾಡಬೇಕು ಎಂದನಿಸಿತು. ಇದೊಂದು ದೊಡ್ಡ ಕ್ಯಾನ್ವಾಸ್ನ ಚಿತ್ರ. ಒಂದು ಐತಿಹಾಸಿಕ ಯುದ್ಧವಿದೆ. 10 ನಿಮಿಷಗಳ ಕಾಲ ಸಾವಿರ ಜನ ಭಾಗವಹಿಸುವ ಯುದ್ಧ. ಅದನ್ನು ವಿನೋದ್ ಸಮರ್ಥವಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಇದೆ. ಈ ಯುದ್ಧದಲ್ಲಿ ಒಬ್ಬ ಸೂಪರ್ ಸ್ಟಾರ್ ಕಾಣಿಸಿಕೊಳ್ಳಲಿದ್ದಾರೆ. ಉತ್ತರಾಖಂಡ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ನಾಳೆಯಿಂದ ಚಿತ್ರೀಕರಣ ಶುರುವಾಗಲಿದ್ದು, ನಾನು ಜುಲೈನಲ್ಲಿ ಚಿತ್ರತಂಡ ಸೇರಿಕೊಳ್ಳಲಿದ್ದೇನೆ ಎನ್ನುತ್ತಾರೆ ನೀನಾಸಂ ಸತೀಶ್. ಇನದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ
ಮೊದಲ ಬಾರಿಗೆ ಇನ್ಸ್ಪೆಕ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹಳ ಒಳ್ಳೆಯ ಪಾತ್ರ ಇದು. ಚಿತ್ರವು ಎರಡು ಕಾಲಘಟ್ಟದಲ್ಲಿ ನಡೆಯಲಿದೆ. ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದರು ಕಾವ್ಯ ಶೆಟ್ಟಿ. ದಯಾನಂದ್ ಅವರು ಈ ಕಥೆ ಹೇಳಿದ ತಕ್ಷಣ ನಮಗೆ ಹಾಗೂ ನಿರ್ದೇಶಕ ವಿನೋದ್ ಅವರಿಗೆ ಹಿಡಿಸಿತು. ಇದೇ ಕಥೆಯನ್ನು ಸಿನಿಮಾ ಮಾಡಲು ತೀರ್ಮಾನಿಸಿದ್ದೆವು. ಇದೊಂದು ಬಿಗ್ ಬಜೆಟ್ ಸಿನಿಮಾ ಆಗಲಿದೆ ಎಂದಿದ್ದಾರೆ ನಿರ್ಮಾಪಕ ನರಹರಿ. ಇದನ್ನೂ ಓದಿ: ಟಗರು-2ನಲ್ಲಿ ಶಿವಣ್ಣನ ಜತೆ ನಟಿಸಬೇಕಿತ್ತು ಅಪ್ಪು!
ನನಗೆ ಈ ಕಥೆ ಬಹಳ ವಿಶೇಷ. ಮೈಸೂರು ಸೀಮೆಯಲ್ಲಿ 70ರ ದಶಕದಲ್ಲಿ ನಡೆದ ಒಂದು ಘಟನೆ ಬಗ್ಗೆ ಕೇಳಿದ್ದೆ. ಅದು ಎಲ್ಲೂ ದಾಖಲಾಗಿಲ್ಲ. ಎಲ್ಲೂ ಅದರ ಬಗ್ಗೆ ಉಲ್ಲೇಖವಿಲ್ಲ. ಕೊನೆಗೆ ಆ ಕಥೆಯ ವಿವರಗಳನ್ನು ಹುಡುಕಿಕೊಂಡು ಹೋದಾಗ ಹಲವು ಮಹತ್ವದ ವಿಷಯಗಳು ಗೊತ್ತಾಯಿತು. ಇದು ಕನ್ನಡ ನೆಲದ ವೀರರ ಕಥೆ. ಯುದ್ಧ ಎಂದರೆ ಯುದ್ಧಭೂಮಿ ಅಥವಾ ಸಾಮ್ರಾಜ್ಯ ವಿಸ್ತರಣೆಯ ಕಥೆಯಲ್ಲ. ಎರಡು ಸಮುದಾಯಗಳ ಕುರಿತ ಕಥೆ ಇದೆ. ವ್ಯಾಪಾರಿಗಳು ಮತ್ತು ಕಾರ್ಮಿಕರ ನಡುವಿನ ಕಥೆ ಇದೆ. ಇದರಲ್ಲಿ ಭಾಗವಹಿಸಿದ ಕೆಲವರನ್ನು ಹುಡುಕಿ ಮಾತಾಡಿಸಿದೆ. ಒಂದಿಷ್ಟು ಮಾಹಿತಿ ಸಿಕ್ಕಿತು. ಅದನ್ನು ಬೆಳೆಸಿ ಚಿತ್ರಕಥೆ ಮಾಡಿದ್ದೇನೆ. ಈ ಕಥೆ ಎಲ್ಲರಿಗೂ ಇಷ್ಟವಾಗಿದೆ ಎಂದು ಚಿತ್ರದ ಕಥೆಯ ಬಗ್ಗೆ ಟಿ.ಕೆ.ದಯಾನಂದ್ ಮಾತನಾಡಿದರು. ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಲವಿತ್ ಹಾಗೂ ನಟ ಬಿ.ಸುರೇಶ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಗಾಳಿಪಟ 2 ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿ, ಇದೀಗ ಗರಡಿ ಚಿತ್ರದ ಚಿತ್ರೀಕರಣದಲ್ಲಿ ತೊಡಗಿರುವ ಯೋಗರಾಜ್ ಭಟ್ಟರು ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಭಟ್ಟರ ಗರಡಿಯಿಂದ ಬಂದಿದೆ. ಈ ಸಿನಿಮಾ ಆಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕಾದರೂ, ಕೆಲ ಕಾರಣಗಳಿಂದಾಗಿ ಈ ಸುದ್ದಿ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ : ವಿಜಯ್ ದುನಿಯಾದಲ್ಲಿ ‘ಭೀಮ’ ಎಂಟ್ರಿ : ನಟಿ ಮಾಲಾಶ್ರೀ ಬಳಿ ಇತ್ತು ಭೀಮ ಟೈಟಲ್
ಹೊಸ ಸುದ್ದಿಯ ಪ್ರಕಾರ ಯೋಗರಾಜ್ ಭಟ್ ನಿರ್ದೇಶನದ ಈ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ್ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಕೆಲ ತಿಂಗಳ ಹಿಂದೆಷ್ಟೇ ಪ್ರಭುದೇವ್ ನಟನೆಯ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಪಾತ್ರ ಮಾಡಿದ್ದರು. ಇದೀಗ ಪುನೀತ್ ಅವರ ಸಹೋದರ ಶಿವರಾಜ್ ಕುಮಾರ್ ಜತೆ ಪ್ರಭದೇವ ನಟಿಸಲಿದ್ದಾರೆ ಎನ್ನುವುದು ಕುತೂಹಲದ ಸಂಗತಿ. ಇದನ್ನೂ ಓದಿ : ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ
ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದ್ಧೂರಿಯ ತಾರಾಗಣವೇ ಸಿನಿಮಾದಲ್ಲಿ ಇರಲಿದೆಯಂತೆ. ರಾಕ್ ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಭಾರೀ ಬಜೆಟ್ ನಲ್ಲಿಯೇ ತಯಾರು ಆಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಬಿಡುಗಡೆಗೆ ರೆಡಿಯಾಗಿದೆ. ಗರಡಿ ಅರ್ಧಕರ್ಧ ಶೂಟಿಂಗ್ ಮುಗಿಸಿದೆ. ಈ ಎರಡೂ ಚಿತ್ರಗಳು ತೆರೆಗೆ ಬಂದ ಮೇಲೆ ಹೊಸ ಸಿನಿಮಾದ ಕೆಲಸ ಶುರುವಾಗಲಿದೆಯಂತೆ. ಈಗಾಗಲೇ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಯೋಗರಾಜ್ ಭಟ್ ಅವರು ಕಥೆ ಬರೆದಿದ್ದು. ಏಕಕಾಲಕ್ಕೆ ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ಮಾಡಲಿದ್ದಾರಂತೆ ಭಟ್.
ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಪಿ.ಆರ್.ಕೆ ಪ್ರೊಡಕ್ಷನ್ ಈಗಾಗಲೇ 9 ಚಿತ್ರಗಳನ್ನು ಕನ್ನಡ ಸಿನಿಮಾ ರಂಗಕ್ಕೆ ನೀಡಿದೆ. 10 ನೇ ಸಿನಿಮಾ ನಿರ್ಮಾಣಕ್ಕೂ ಮುನ್ನ ಪುನೀತ್ ಅವರು ಅಗಲಿದರು. ಹಾಗಾಗಿ ಈ ನಿರ್ಮಾಣ ಸಂಸ್ಥೆಯು ಮುಂದುವರೆಯುತ್ತಾ ಇಲ್ಲವಾ ಎನ್ನುವ ಚರ್ಚೆ ಕೂಡ ಶುರುವಾಗಿತ್ತು. ಪತಿಯ ಕನಸನ್ನು ಮುಂದುವರೆಯಿಸಿಕೊಂಡು ಹೋಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಸಿದ್ಧರಾಗಿದ್ದಾರೆ. ತಮ್ಮ ಸಂಸ್ಥೆಯ 10ನೇ ಸಿನಿಮಾವನ್ನು ಅನೌನ್ಸ್ ಕೂಡ ಮಾಡಿದ್ದಾರೆ. ವಿಶೇಷವೆಂದರೆ, ಈ ಸಿನಿಮಾದಲ್ಲಿ ಬಹುತೇಕ ಮಹಿಳೆಯರೇ ಕೆಲಸ ಮಾಡುತ್ತಿದ್ದಾರೆ. ಮೊದಲ ಬಾರಿಗೆ ಪಿ.ಆರ್.ಕೆ ಬ್ಯಾನರ್ ನಿಂದ ನಿರ್ದೇಶಕಿಯನ್ನು ಪರಿಚಯಿಸಲಾಗುತ್ತಿದೆ. ಚಿತ್ರಕ್ಕೆ ‘ಆಚಾರ್ ಅಂಡ್ ಕೋ’ ಎಂದು ಹೆಸರಿಡಲಾಗಿದ್ದು, ಸಿಂಧು ಶ್ರೀನಿವಾಸ್ ಮೂರ್ತಿ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ. ಇದನ್ನೂ ಓದಿ : ಉಪೇಂದ್ರ ಮೆಚ್ಚಿಕೊಂಡ ಓ ಮೈ ಲವ್ ಸಾಂಗ್
ಯಾರಿದು ಸಿಂಧು ಶ್ರೀನಿವಾಸ್ ಮೂರ್ತಿ?
ಮೂಲತಃ ಬೆಂಗಳೂರಿನವರೇ ಆಗಿರುವ ಸಿಂಧು ಶ್ರೀನಿವಾಸ್ ಮೂರ್ತಿ ಬೆಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ಓದಿದವರು. ಜ್ಯೋತಿ ನಿವಾಸ ಕಾಲೇಜು ಮತ್ತು ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಪದವಿ ಪೂರೈಸಿದ್ದಾರೆ. ಕಾಲೇಜು ದಿನಗಳಿಂದಲೇ ರಂಗಭೂಮಿಯತ್ತ ಆಸಕ್ತಿ. ಹಾಗೂ ಬರವಣಿಗೆಯಲ್ಲೂಇವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ನಟನೆ ಮೇಲಿನ ಒಲವಿನಿಂದಾಗಿ ಹಲವು ಸಂಸ್ಥೆಗಳ ಜತೆಯೂ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ : ಮತ್ತೆ ನಿರ್ದೇಶನದತ್ತ ಐಶಾನಿ ಶೆಟ್ಟಿ : ಬೋಲ್ಡ್ ಅಂಡ್ ಬ್ಯೂಟಿಫುಲ್ ಮಾತುಕತೆ
ಸಿನಿಮಾ ರಂಗ ಪ್ರವೇಶ
ಕೌಶಿಕ್ ಮುಖರ್ಜಿ ನಿರ್ದೇಶನದ ‘ಬ್ರಹ್ಮನ್ ನಮನ್’ ಸಿನಿಮಾದ ಮೂಲಕ 2016ರಲ್ಲಿ ಸಿನಿಮಾ ರಂಗ ಪ್ರವೇಶ ಮಾಡಿದ ಇವರು, ನಂತರದಲ್ಲಿ ಪನ್ನಗಾಭರಣ ನಿರ್ದೇಶನ ಮಾಡಿದ ಹಾಗೂ ಪುನೀತ್ ರಾಜ್ ಕುಮಾರ್ ನಿರ್ಮಾಣದ ಫ್ರೆಂಚ್ ಬಿರಿಯಾನಿ ಚಿತ್ರದಲ್ಲಿ ನಟಿಸಿದ್ದಾರೆ. ನಾಯಕನ ತಂಗಿಯಾಗಿ ಈ ಸಿನಿಮಾದಲ್ಲಿ ಸಿಂಧು ಕಾಣಿಸಿಕೊಂಡಿದ್ದಾರೆ. ಅಲ್ಲದೇ, 2016 ರಲ್ಲಿ ಬೆಟರ್ ಲೈಫ್ ಫೌಂಡೇಶನ್ ನಿರ್ಮಾಣ ಮಾಡಿರುವ ವೆಬ್ ಸರಣಿಯಲ್ಲೂ ಕೆಲಸ ಮಾಡಿದ ಅನುಭವ ಸಿಂಧು ಅವರದ್ದು. ಕನ್ನಡದಲ್ಲಿ ಮಾತ್ರವಲ್ಲ, ತೆಲುಗಿನಲ್ಲೂ ಇವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಕಡಿಮೆ ಬಜೆಟ್‍ನಲ್ಲಿ ತಯಾರಾಗಿ, ಅಪಾರ ಜನಮನ್ನಣೆ ಪಡೆದಿದ್ದ ಸಿನಿಮಾ ಬಂಡಿ ಚಿತ್ರದಲ್ಲಿ ಇವರು ನಟಿಸಿದ್ದಾರೆ. ಅಲ್ಲದೇ, ಬರಹಗಾರರ ತಂಡಲ್ಲೂ ಕೆಲಸ ಮಾಡಿದ್ದಾರೆ. ಇದನ್ನೂ ಓದಿ : ಮತ್ಸ್ಯಕನ್ಯೆ ಸ್ಟೈಲ್‍ನಲ್ಲಿ ಸೋನಾಕ್ಷಿ ಫುಲ್ ಮಿಂಚಿಂಗ್
ಚೊಚ್ಚಲು ನಿರ್ದೇಶನದ ಚಿತ್ರ
ಸಿಂಧು ಅವರಿಗೆ ಆಚಾರ್ ಅಂಡ್ ಕೋ ಮೊದಲ ನಿರ್ದೇಶನದ ಸಿನಿಮಾ. ಕಾಸ್ಟಿಂಗ್ ಡೈರೆಕ್ಟರ್ ಮತ್ತು ಬರಹಗಾರರಾಗಿ, ನಟಿಯಾಗಿ ಇದೀಗ ನಿರ್ದೇಶನಕ್ಕೂ ಇಳಿದಿದ್ದಾರೆ. ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ನಾನಾ ವಿಭಾಗಗಳಲ್ಲಿ ಬಹುತೇಕ ಮಹಿಳೆಯರೇ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿಂದುಮಾಲಿನಿ ಅವರ ಸಂಗೀತ ಸಂಯೋಜನೆ ಇದ್ದರೆ, ಕ್ರಿಯೇಟಿವ್ ಪ್ರೊಡ್ಯುಸರ್ ಡಾನ್ನಿಲಾ ಕೊರ್ರೆಯಾ, ಸ್ಟೈಲಿಸ್ಟ್ ಇಂಚರಾ ಸುರೇಶ್ ಇವರನ್ನೊಳಗೊಂಡಿದೆ ಚಿತ್ರತಂಡ. ಇದನ್ನೂ ಓದಿ : ಮತ್ತೆ ನಿರ್ದೇಶನದತ್ತ ಐಶಾನಿ ಶೆಟ್ಟಿ : ಬೋಲ್ಡ್ ಅಂಡ್ ಬ್ಯೂಟಿಫುಲ್ ಮಾತುಕತೆ
ಸಿನಿಮಾಗಾಗಿ ವಿಶೇಷ ಕಥೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದು, 60ರ ದಶಕದಲ್ಲಿ ನಡೆದ ಘಟನೆಯನ್ನು ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಗಾಗಿ 60ರ ದಶಕದ ಬೆಂಗಳೂರನ್ನು ಪ್ರೇಕ್ಷಕರು ತೆರೆಯ ಮೇಲೆ ನೋಡಬಹುದಾಗಿದೆ. ಈ ಕುರಿತು ಟ್ವಿಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ‘ಆಚಾರ್ ಅಂಡ್ ಕೋ ಪಿ.ಆರ್.ಕೆ ಪ್ರೊಡಕ್ಷನ್ನ 10ನೇ ಚಿತ್ರ. 60ನೇ ದಶಕದ ಬೆಂಗಳೂರನ್ನು ನಿಮ್ಮ ಮುಂದೆ ತರಲು ಒಂದು ಪ್ರಯತ್ನ. ಇದು ನಮ್ಮ ಸಂಸ್ಥೆಯಿಂದ ಮಹಿಳಾ ನಿರ್ದೇಶನದ ಮೊದಲ ಚಿತ್ರವಾಗಿದ್ದು, ಮುಂಚೂಣಿಯಲ್ಲಿ ಹಲವಾರು ಮಹಿಳೆಯರನ್ನು ಇದು ಒಳಗೊಂಡಿದೆ’ ಎಂದು ಟ್ವಿಟ್ ಮಾಡಿದ್ದಾರೆ. ತಾರಾಗಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾದರೂ, ಅತೀ ಶೀಘ್ರದಲ್ಲೇ ಹೆಚ್ಚಿನ ವಿವರವನ್ನು ಕೊಡಲಿದೆ ಪಿ.ಆರ್.ಕೆ ಪ್ರೊಡಕ್ಷನ್.
ಪಿ.ಆರ್.ಕೆ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ 10ನೇ ಚಿತ್ರಕ್ಕೆ ‘ಆಚಾರ್ ಅಂಡ್ ಕೋ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಸಿಂಧು ಶ್ರೀನಿವಾಸ್ ಎಂಬ ನವ ನಿರ್ದೇಶಕಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪಿ.ಆರ್.ಕೆ ಬ್ಯಾನರ್ ಇದೇ ಮೊದಲ ಬಾರಿಗೆ ಮಹಿಳಾ ನಿರ್ದೇಶಕಿಯ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಿರ್ದೇಶಕರ ಚೊಚ್ಚಲು ಸಿನಿಮಾ ಇದಾಗಿದೆ. ಇದನ್ನೂ ಓದಿ: ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದು ಹೇಳಿ ನಾಚಿ ನೀರಾದ ಆಲಿಯಾ
ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ನಾನಾ ವಿಭಾಗಗಳಲ್ಲಿ ಬಹುತೇಕ ಮಹಿಳೆಯರೇ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಬಿಂದುಮಾಲಿನಿ ಅವರ ಸಂಗೀತ ಸಂಯೋಜನೆ ಇದ್ದರೆ, ಕ್ರಿಯೇಟಿವ್ ಪ್ರೊಡ್ಯುಸರ್ ಡಾನ್ನಿಲಾ ಕೊರ್ರೆಯಾ, ಸ್ಟೈಲಿಸ್ಟ್ ಇಂಚರಾ ಸುರೇಶ್ ಇವರನ್ನೊಳಗೊಂಡಿದೆ ಚಿತ್ರತಂಡ. ಇದನ್ನೂ ಓದಿ : ನೀನಾಸಂ ಸತೀಶ್ ಫಸ್ಟ್ ಫೋಟೋ ಶೂಟ್ ಸ್ಟೋರಿ ವಿತ್ ಫೋಟೋ ಆಲ್ಬಂ
ಸಿನಿಮಾಗಾಗಿ ವಿಶೇಷ ಕಥೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದು, 60ರ ದಶಕದಲ್ಲಿ ನಡೆದ ಘಟನೆಯನ್ನು ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಹಾಗಾಗಿ 60ರ ದಶಕದ ಬೆಂಗಳೂರನ್ನು ಪ್ರೇಕ್ಷಕರು ತೆರೆಯ ಮೇಲೆ ನೋಡಬಹುದಾಗಿದೆ. ಈ ಕುರಿತು ಟ್ವಿಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್ ‘ಆಚಾರ್ ಅಂಡ್ ಕೋ ಪಿ.ಆರ್.ಕೆ ಪ್ರೊಡಕ್ಷನ್ನ 10ನೇ ಚಿತ್ರ. 60ನೇ ದಶಕದ ಬೆಂಗಳೂರನ್ನು ನಿಮ್ಮ ಮುಂದೆ ತರಲು ಒಂದು ಪ್ರಯತ್ನ. ಇದು ನಮ್ಮ ಸಂಸ್ಥೆಯಿಂದ ಮಹಿಳಾ ನಿರ್ದೇಶನದ ಮೊದಲ ಚಿತ್ರವಾಗಿದ್ದು, ಮುಂಚೂಣಿಯಲ್ಲಿ ಹಲವಾರು ಮಹಿಳೆಯರನ್ನು ಇದು ಒಳಗೊಂಡಿದೆ’ ಎಂದು ಟ್ವಿಟ್ ಮಾಡಿದ್ದಾರೆ. ತಾರಾಗಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾದರೂ, ಅತೀ ಶೀಘ್ರದಲ್ಲೇ ಹೆಚ್ಚಿನ ವಿವರವನ್ನು ಕೊಡಲಿದೆ ಪಿ.ಆರ್.ಕೆ ಪ್ರೊಡಕ್ಷನ್.