Tag: Sandeep Patil

  • ಬಿಟ್‌ಕಾಯಿನ್‌ ಕೇಸ್‌ ತನಿಖೆ IPS ಅಧಿಕಾರಿ ಬುಡಕ್ಕೆ – ಸಂದೀಪ್ ಪಾಟೀಲ್‌ಗೆ ನೋಟಿಸ್!

    ಬಿಟ್‌ಕಾಯಿನ್‌ ಕೇಸ್‌ ತನಿಖೆ IPS ಅಧಿಕಾರಿ ಬುಡಕ್ಕೆ – ಸಂದೀಪ್ ಪಾಟೀಲ್‌ಗೆ ನೋಟಿಸ್!

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸರೇ ಹಗರಣದ ದಿಕ್ಕು ತಪ್ಪಿಸಿದ್ದಲ್ಲದೇ ಬಿಟ್‌ಕಾಯಿನ್ ಹಗರಣದಲ್ಲಿ (Bit Coin Case) ಭಾಗಿಯಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್ ಸರ್ಕಾರ (Congress Government) ಬಿಟ್‌ಕಾಯಿನ್‌ ತನಿಖೆಯ ಹೊಣೆಯನ್ನು ಎಸ್‌ಐಟಿ ವಹಿಸಿದ್ದು, ಇದೀಗ ಬಿಟ್‌ಕಾಯಿನ್‌ ತನಿಖೆ ಹಿರಿಯ ಐಪಿಎಸ್ ಅಧಿಕಾರಿಯ ವಿಚಾರಣೆ ಹಂತಕ್ಕೆ ತಲುಪಿದೆ.

    ಬಿಟ್‌ಕಾಯಿನ್ (Bit Coin) ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ. ಈತನನ್ನು ಸಿಸಿಬಿ ಅಧಿಕಾರಿಗಳು (CCB Officers) ಪದೇ ಪದೇ ವಿಚಾರಣೆ ನಡೆಸಿದ್ದಾರೆ. ಎಸ್‌ಐಟಿ ಸಹ ತನಿಖೆಯ ಜವಾಬ್ದಾರಿ ವಹಿಸಿದ ಮೇಲೆ ಶ್ರೀಕಿಯ ವಿಚಾರಣೆಯನ್ನು ಮಾಡಿತ್ತು. ಇದೀಗ ಬಿಟ್‌ಕಾಯಿನ್ ಹಗರಣ ತನಿಖೆಗೆ ಹಾಜರಾಗುವಂತೆ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ.

    ಇನ್ನೂ ಬಿಟ್‌ಕಾಯಿನ್ ಹಗರಣದ ತನಿಖೆ ಎಸ್‌ಐಟಿ ಕೈಗೊಳ್ಳುತ್ತಿದ್ದಂತೆ ಇನ್ಸ್‌ಪೆಕ್ಟರ್ ಪ್ರಶಾಂತ್ ಬಾಬು, ಸಂತೋಷ್‌ರನ್ನು ವಿಚಾರಣೆ ಮಾಡಿ ಬಂಧಿಸಲಾಗಿತ್ತು. ಈ ಹಗರಣ ನಡೆದ ವೇಳೆ ಸಿಸಿಬಿಯ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ಗೂ ಹಲವು‌ ಮಾಹಿತಿಗಳು ನೀಡಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವ್ಳು ಪರಪುರುಷನ ಜೊತೆ ಡೇಟಿಂಗ್- ರೊಚ್ಚಿಗೆದ್ದ ಪತಿ ಮಚ್ಚಿನಿಂದ ಅಟ್ಯಾಕ್

    ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್‌ ಅವರ ಹೇಳಿಕೆ ಪಡೆಯುವ ಉದ್ದೇಶದಿಂದ ನೊಟೀಸ್ ನೀಡಲಾಗಿದೆ. ಬಿಟ್‌ಕಾಯಿನ್‌ನ ಸತ್ಯಾಂಶ ಏನು ಅನ್ನೋದು ಹೊರಬರಬೇಕಿದೆ. ಇದನ್ನೂ ಓದಿ: 84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

  • ವಿಚಾರಣೆ ಮುಗಿಸಿ ಹೊರಟ ದಿಗಂತ್, ಐಂದ್ರಿತಾಗೆ ಮುಗಿದಿಲ್ಲ ಸಂಕಷ್ಟ

    ವಿಚಾರಣೆ ಮುಗಿಸಿ ಹೊರಟ ದಿಗಂತ್, ಐಂದ್ರಿತಾಗೆ ಮುಗಿದಿಲ್ಲ ಸಂಕಷ್ಟ

    ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿರುವ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ನಟಿ ಐಂದ್ರಿತಾ ರೇ, ನಟ ದಿಗಂತ್ ಸಿಸಿಬಿ ಎದುರು ಮೊದಲ ದಿನದ ಪ್ರಾಥಮಿಕ ವಿಚಾರಣೆಯನ್ನು ಪೂರ್ಣಗೊಳಿಸಿದ್ದಾರೆ. ಇದರ ಬೆನಲ್ಲೇ ಸ್ಟಾರ್ ದಂಪತಿಗೆ ಬಿಗ್ ಶಾಕ್ ಎದುರಾಗಿದೆ.

    ಇಂದು ಬೆಳಗ್ಗೆ ಐಂದ್ರಿಯಾ ಹಾಗೂ ದಿಗಂತ್ ಸಿಸಿಬಿ ಕಚೇರಿಗೆ ಆಗಮಿಸಿದ್ದರು. ಅವರು ಕಚೇರಿಗೆ ಆಗಮಿಸುತ್ತಿದ್ದಂತೆ ಸಿಸಿಬಿ ಪೊಲೀಸರು ಅವರ ಬಳಿ ಇದ್ದ ಮೊಬೈಲ್‍ಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸದ್ಯ ವಶಕ್ಕೆ ಪಡೆದಿರುವ ಮೊಬೈಲ್‍ಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್‍ಎಸ್‍ಎಲ್) ಕಳುಹಿಸಿಕೊಡಲಿದ್ದಾರೆ ಎನ್ನಲಾಗಿದೆ. ದಿಗಂತ್ ಬಳಿ ಇದ್ದ ಎರಡು ಮೊಬೈಲ್ ಹಾಗೂ ಐಂದ್ರಿತಾ ಬಳಿ ಇದ್ದ ಒಂದು ಮೊಬೈಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಮೊಬೈಲ್ ಹಿಂದಿರುಗಿಸುವ ಸಾಧ್ಯತೆ ಇದೆ.

    ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿಗಂತ್ ಹಾಗೂ ಐಂದ್ರಿತಾ, ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಾವು ಕೂಡ ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತೇವೆ. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇವೆ. ತನಿಖೆ ಕುರಿತು ಬೇರೆ ಯಾವುದೇ ಮಾಹಿತಿಯನ್ನು ಹೇಳಬಾರದು ಎಂದು ಸಿಸಿಬಿ ಅವರು ಹೇಳಿದ್ದಾರೆ ಎಂದು ತಿಳಿಸಿದರು. ಸುಮಾರು 4 ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಸ್ಟಾರ್ ದಂಪತಿಗೆ ಮೊಬೈಲ್ ಸಾಕ್ಷ್ಯವೇ ಕಂಟಕವಾಗುತ್ತಾ ಎಂಬ ಅನುಮಾನ ಮೂಡಿದೆ. ಇದನ್ನೂ ಓದಿ: ಸ್ಟಾರ್ ದಂಪತಿ ದಿಗಂತ್, ಐಂದ್ರಿತಾ ರೇಗೆ ಬಿಗ್ ರಿಲೀಫ್

    ಸಿಸಿಬಿ ಪೊಲೀಸರು ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್, ಆಫ್ರಿಕಾ ಮೂಲದ ಬೆನಾಲ್ಡ್ ಉಡೇನ್ ಎಂಬಾತನನ್ನು ನಿನ್ನೆಯೇ ಬಂಧಿಸಿದ್ದರು. ಈತ ನಗರದಲ್ಲಿ ನಡೆಯುತ್ತಿದ್ದ ದೊಡ್ಡ ದೊಡ್ಡ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ಆರೋಪಿ ನೀಡಿದ ಮಾಹಿತಿ ಮೇರೆಗೆ ಪೊಲೀಸರು ದಿಗಂತ್ ಹಾಗೂ ಐಂದ್ರಿತಾ ಅವರಿಗೆ ನೋಟಿಸ್ ನೀಡಿದ್ದರು ಎನ್ನಲಾಗಿದೆ. ಸದ್ಯ ದಂಪತಿಯಿಂದ ವಶಕ್ಕೆ ಪಡೆದಿರುವ ಮೊಬೈಲ್‍ಗಳಲ್ಲಿ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿರುವ, ಸೇವನೆ ಮಾಡಿರುವ ಕುರಿತ ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕುವ ಉದ್ದೇಶವನ್ನು ಹೊಂದಿದ್ದಾರೆ.

  • ಸ್ಟಾರ್ ದಂಪತಿ ದಿಗಂತ್, ಐಂದ್ರಿತಾ ರೇಗೆ ಬಿಗ್ ರಿಲೀಫ್

    ಸ್ಟಾರ್ ದಂಪತಿ ದಿಗಂತ್, ಐಂದ್ರಿತಾ ರೇಗೆ ಬಿಗ್ ರಿಲೀಫ್

    ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಇಂದು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

    ವಿಚಾರಣೆ ಕುರಿತಂತೆ ಮಾಹಿತಿ ನೀಡಿದ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಡ್ರಗ್ಸ್ ಪ್ರಕರಣದಲ್ಲಿ ದಿಗಂತ್ ಮತ್ತು ಐಂದ್ರಿತಾ ಅವರಿಗೆ ನೋಟಿಸ್ ನೀಡಿದ್ದೆವು. ಅವರು ಕೂಡ ಇಂದು ವಿಚಾರಣೆಗೆ ಹಾಜರಾಗಿದ್ದರು. ಬೆಳಗ್ಗೆಯಿಂದ ಅವರ ವಿಚಾರಣೆ ನಡೆಸಿದ್ದು, ಸಾಕಷ್ಟು ಮಾಹಿತಿ ಲಭಿಸಿದೆ. ಇನ್ನೂ ಸ್ವಲ್ಪ ಸಮಯ ವಿಚಾರಣೆ ನಡೆಯಲಿದ್ದು, ಆ ಬಳಿಕ ಅವರಿಗೆ ಸಮನ್ಸ್ ನೀಡಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡುತ್ತೇವೆ ಎಂದರು.

    ಈ ಹಿಂದೆ ನಟಿ ರಾಗಿಣಿ ಹಾಗೂ ಸಂಜನಾ ಅವರಿಗೆ ನೋಟಿಸ್ ನೀಡಿದ್ದ ಸಿಸಿಬಿ ಪೊಲೀಸರು ವಿಚಾರಣೆಗೆ ನಡೆಸಿ ಅವರನ್ನು ಬಂಧಿಸಿದ್ದರು. ಇಂದು ಕೂಡ ದಿಗಂತ್ ಹಾಗೂ ಐಂದ್ರಿತಾ ಅವರ ಬಂಧನವಾಗುತ್ತಾ ಎಂಬ ಅನುಮಾನ ಮೂಡಿತ್ತು. ಸದ್ಯ ಸಂದೀಪ್ ಪಾಟೀಲ್ ಅವರು ಸ್ಪಷ್ಟನೆ ನೀಡಿರುವುದರಿಂದ ಸ್ಟಾರ್ ದಂಪತಿಗೆ ಬಿಗ್ ರಿಲೀಫ್ ಸಿಕ್ಕಿದೆ.

    ಡ್ರಗ್ಸ್ ಪ್ರಕರಣದ ತನಿಖೆ ಕುರಿತಂತೆ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಗೃಹ ಸಚಿವ ಬೊಮ್ಮಾಯಿ ಅವರು, ಮುಂದಿನವಾರ ಡಗ್ಸ್ ಪ್ರಕರಣದ ವಿಚಾರಣೆ ಮಹತ್ವದ ಪಡೆದಿದೆ ಎಂದಿದ್ದರು. ಇತ್ತ ದಿಗಂತ್, ಐಂದ್ರಿತಾ ವಿಚಾರಣೆ ಬಳಿಕ ಮಾತನಾಡಿರುವ ಸಂದೀಪ್ ಪಾಟೀಲ್ ಅವರು, ವಿಚಾರಣೆಯ ಸಂದರ್ಭದಲ್ಲಿ ಸಾಕಷ್ಟು ಮಾಹಿತಿಗಳು ಸಿಕ್ಕಿದ್ದು, ಕೆಲವೊಂದು ಮಾಹಿತಿ ಹೇಳಿದ್ದಾರೆ ಎಂದಿದ್ದಾರೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಪೆಡ್ಲರ್ ಅನ್ನು ಬಂಧಿಸಿದ್ದಾಗಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಆಫ್ರಿಕನ್ ಪ್ರಜೆ  ಬೆನಾಲ್ಡ್ ಉಡೆನ್ನ ಎಂಬಾತನನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ತನಿಖೆ ನಡೆಸಿದ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಕೊಕೇನ್ ಕೂಡ ವಶಕ್ಕೆ ಪಡೆದಿದ್ದಾರೆ. ಮೂರು ಮೊಬೈಲ್ ಬಳಕೆ ಮಾಡುತ್ತಿದ್ದ ಆರೋಪಿ, ಬೇರೆ ಬೇರೆ ಹೆಸರುಗಳೊಂದಿಗೆ ದೊಡ್ಡ ದೊಡ್ಡ ಪಾರ್ಟಿಗಳಿಗೆ ನಗರದಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ.

  • ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣ- ಎಸ್‍ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ

    ಡಿಜೆ ಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣ- ಎಸ್‍ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ

    ಬೆಂಗಳೂರು: ನಗರದ ಡಿಜೆಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಸಿಸಿಬಿ ಅಧಿಕಾರಿಗಳ ಕಂಡ ಎಸ್‍ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

    ಗಲಭೆಯಲ್ಲಿ ಎಸ್‍ಡಿಪಿಐ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಈಗಾಗಲೇ 32 ಮಂದಿ ಕಾರ್ಯಕರ್ತರ ಬಂಧನವಾಗಿದೆ. ಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ, ಹಲಸೂರು ಗೇಟ್‍ನ ಎಸ್‍ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ನ್ಯಾಯಾಲಯದಿಂದ ಸರ್ಚ್  ವಾರೆಂಟ್ ಪಡೆದು ಪೊಲೀಸರ ತಂಡ ಪರಿಶೀಲನೆ ನಡೆಸಿದೆ.

    ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಮೂರು ಪ್ರಕರಣಗಳ ಸಿಸಿಬಿ ವರ್ಗಾವಣೆ ಆಗಿದ್ದವು. ಅದರ ಸಂಬಂಧ ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆ ಭಾಗವಾಗಿ ಮೂರು ಎಸ್‍ಡಿಪಿಐ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ದಾಳಿ ಮುಂದುವರಿದಿದ್ದು, ಈಗ ತನಿಖಾ ಹಂತದಲ್ಲಿದ್ದು ಹೆಚ್ಚಿನ ವಿಚಾರಗಳನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಏಕಕಾಲಕ್ಕೆ ಮೂರು ಕಡೆಗಳಲ್ಲೂ ದಾಳಿಯಾಗಿದೆ. ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳ ತಂಡಗಳಿಂದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹಲಸೂರು ಗೇಟ್‍ನ ಎಸ್‍ಡಿಪಿಐನ ಮುಖ್ಯ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.