Tag: Sandip Ghosh

  • ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ

    ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ

    ಕೋಲ್ಕತ್ತಾ: ಇಲ್ಲಿನ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯವು (CFSL) ಕೇಂದ್ರೀಯ ತನಿಖಾ ದಳಕ್ಕೆ (CBI) ವರದಿ ಅಂಶಗಳು ಬಹಿರಂಗಗೊಂಡಿದೆ. ಆದ್ರೆ ವರದಿಯ ಅಂಶಗಳು ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ.

    ಟ್ರೈನಿ ವೈದ್ಯೆ ಮೃತದೇಹ ಪತ್ತೆಯಾದ ಸೆಮಿನಾರ್‌ ಹಾಲ್‌ನಲ್ಲಿ ಘರ್ಷಣೆ ಪ್ರತಿರೋಧ ನಡೆದಿರುವ ಬಗ್ಗೆ ಸ್ಪಷ್ಟ ಚಿತ್ರಣಗಳಿಲ್ಲ ಎಂದು ತನ್ನ ವರದಿಯಲ್ಲಿ ಸಿಎಫ್‌ಎಸ್‌ಎಲ್‌ನಲ್ಲಿ ಉಲ್ಲೇಖಿಸಿರಿವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: Kolkata Horror | ಕ್ರಿಮಿನಲ್‌ ಮನಸ್ಥಿತಿ ಬರೋದು ಏಕೆ? ಮನೋವಿಜ್ಞಾನಿಗಳು ಏನ್‌ ಹೇಳ್ತಾರೆ?

    ಸಿಬಿಐಗೆ ಸಲ್ಲಿಸಿದ ವರದಿಯಲ್ಲಿ ಸಾಕ್ಷ್ಯಗಳಿಲ್ಲದಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೌದು. ದೆಹಲಿಯ ಸಿಎಫ್‌ಎಸ್‌ಎಲ್‌ನ ತಜ್ಞರು ಕಳೆದ ಆಗಸ್ಟ್‌ 14ರಂದು ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಪರಾಧ ನಡೆದ ಸ್ಥಳದಲ್ಲಿ ಪರಿಶೀಲಿಸಿದ್ದರು. ಈ ವೇಳೆ ಅತ್ಯಾಚಾರಿ ಎದುರು ಸಂತ್ರಸ್ತೆ ತೋರಿಸಿದ ಸಂಭಾವ್ಯ ಹೋರಾಟ ಅಥವಾ ಅವರ ನಡುವಿನ ಪ್ರತಿರೋಧದ ಸಾಕ್ಷ್ಯವು ಸ್ಥಳದಲ್ಲಿ ಕಾಣೆಯಾಗಿದೆ. ಕೆಲವು ಪ್ರಮುಖ ಸಾಕ್ಷ್ಯಗಳು ಸ್ಥಳದಲ್ಲಿ ಕಂಡುಬಂದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ ಎಂದು ಸಿಬಿಐ ಮೂಲಗಳು ಕೋರ್ಟ್‌ಗೆ ತಿಳಿಸಿವೆ.

    ಕಳೆದ ಆಗಸ್ಟ್‌ನಲ್ಲಿ ಪ್ರಕರಣ ನಡೆದ ಬಳಿಕ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಪ್ರಗತಿ ವರದಿಯನ್ನ ಸಲ್ಲಿಸಲು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಗಡುವು ನೀಡಿತ್ತು. ಮತ್ತೆ ಗಡುವು ನೀಡಿದ್ದ ಅವಧಿಯನ್ನು ವಿಸ್ತರಣೆ ಮಾಡಿತ್ತು. ಇದನ್ನೂ ಓದಿ: ಕ್ರಿಸ್‌ಮಸ್‌ ಸಂಭ್ರಮ – ನೀವೂ ವಿಶ್‌ ಮಾಡ್ಬೇಕಾ? ವಾಟ್ಸಪ್‌ ಸ್ಟೇಟಸ್‌ಗೆ ಇಲ್ಲಿದೆ ಸಿಂಪಲ್‌ ಟಿಪ್ಸ್‌

    ಮೊದಲು ತನಿಖೆ ನಡೆಸಿದ್ದ ಕೋಲ್ಕತ್ತಾ ಪೊಲೀಸರು, ಆಗಸ್ಟ್ 9 ರಂದು ಸಂತ್ರಸ್ತೆಯ ದೇಹವನ್ನು ಗುರುತಿಸಿದ ಸೆಮಿನಾರ್ ಹಾಲ್‌ನಿಂದ 40 ವಸ್ತುಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿತ್ತು. ನಂತರ ಪ್ರಕರಣವನ್ನ ಸಿಬಿಐ ತನಿಖೆಗೆ ವರ್ಗಾಯಿಸಲಾಗಿತ್ತು. ಅದಾದ ಬಳಿಕ ವಶಕ್ಕೆ ಪಡೆದಿದ್ದ ವಸ್ತುಗಳನ್ನು ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು.

    ಇದಕ್ಕೂ ಮೊದಲು ಆಗಸ್ಟ್ 14 ರಂದು, CFSL ತಜ್ಞರ ತಂಡವು ಅಪರಾಧ ನಡೆದ ಸೆಮಿನಾರ್ ಹಾಲ್ ಅನ್ನು ಭೌತಿಕವಾಗಿ ಪರೀಕ್ಷಿಸಿತ್ತು. ಆಗ ವಶಪಡಿಸಿಕೊಂಡ ವಸ್ತುಗಳ ವಿಧಿವಿಜ್ಞಾನ ವರದಿಗಳ ಆಧಾರದ ಮೇಲೆ ಸಿಬಿಐಗೆ ವರದಿ ಸಲ್ಲಿಸಿತು. ಇದನ್ನೂ ಓದಿ: 4 ಮಕ್ಕಳೊಂದಿಗೆ ಪಾಕ್‌ನಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಗರ್ಭಿಣಿ

  • ಟ್ರೈನಿ ವೈದ್ಯೆ ಅತ್ಯಾಚಾರ ಕೇಸನ್ನ ಆತ್ಮಹತ್ಯೆ ಅಂತ ಬಿಂಬಿಸಲು ಯತ್ನಿಸಿದ್ದರು: ಸಿಬಿಐ ರಿಮ್ಯಾಂಡ್‌ ಕಾಪಿಯಲ್ಲಿ ರಹಸ್ಯ ಸ್ಫೋಟ!

    ಟ್ರೈನಿ ವೈದ್ಯೆ ಅತ್ಯಾಚಾರ ಕೇಸನ್ನ ಆತ್ಮಹತ್ಯೆ ಅಂತ ಬಿಂಬಿಸಲು ಯತ್ನಿಸಿದ್ದರು: ಸಿಬಿಐ ರಿಮ್ಯಾಂಡ್‌ ಕಾಪಿಯಲ್ಲಿ ರಹಸ್ಯ ಸ್ಫೋಟ!

    ಕೋಲ್ಕತ್ತಾ: ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು (RG Kar Medical College) ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ (Sandip Ghosh) ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಆತ್ಮಹತ್ಯೆ ಅಂತ ಬಿಂಬಿಸಲು ಪ್ರಯತ್ನಿಸಿದ್ದರು. ಅದಕ್ಕಾಗಿ ಸಾಕ್ಷಿ ನಾಶಕ್ಕೆ ಯತ್ನಿಸಿದ್ದಾರೆ ಎಂಬುದಾಗಿ ಸಿಬಿಐ ಕೋರ್ಟ್‌ಗೆ ಸಲ್ಲಿಸಿದ ತನ್ನ ರಿಮ್ಯಾಂಡ್‌ ಕಾಪಿಯಲ್ಲಿ ತಿಳಿಸಿದೆ.

    ಆರ್‌.ಜಿ ಕರ್‌ ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರ ಮತ್ತು ʻಹ್ಯತ್ಯಾʼಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ (Evidence) ನಾಶ ಆರೋಪದ ಮೇಲೆ ಸಂದೀಪ್‌ ಘೋಷ್‌ ಅವರನ್ನ ಸಿಬಿಐ (CBI) ಬಂಧಿಸಿದೆ. ಈ ಕೇಸ್‌ನಲ್ಲಿ ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದಕ್ಕಾಗಿ ತಲಾ ಠಾಣೆಯ ಪೊಲೀಸ್‌ ಅಧಿಕಾರಿ ಅಭಿಜಿತ್‌ ಮೊಂಡಲ್‌ ಅವರನ್ನೂ ಸಹ ಬಂಧಿಸಲಾಗಿದೆ. ಇದನ್ನೂ ಓದಿ: ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್‌ -5 ಕಲಿಗಳು ಯಾರು?

    ಈ ಪ್ರಕರಣದ ಕುರಿತು ಸಿಬಿಐ ಕೋರ್ಟ್‌ಗೆ ಸಲ್ಲಿಸಿದ ರಿಮ್ಯಾಂಡ್‌ ಕಾಪಿಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಡಾ. ಸಂದೀಪ್‌ ಘೋಷ್‌ ಆಗಸ್ಟ್‌ 9ರಂದು ಬೆಳಗ್ಗೆ 9:58ರ ವೇಳೆಗೆ ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರೂ ತಕ್ಷಣ ಆಸ್ಪತ್ರೆ ತಲುಪಲಿಲ್ಲ. ಪೊಲೀಸರಿಗೆ ದೂರು ಸಹ ದಾಖಲಿಸಲಿಲ್ಲ. ಸಂತ್ರಸ್ತೆಯ ದೇಹದ ಮೇಲೆ ಗಾಯದ ಗುರುತುಗಳಿದ್ದರೂ ಅದನ್ನು ಆತ್ಮಹತ್ಯೆ ಅಂತ ಬಿಂಬಿಸಲು ಹೊರಟಿದ್ದರು. ಆಸ್ಪತ್ರೆಯಿಂದ ಸಂತ್ರಸ್ತೆ ಪೋಷಕರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಅಂತ ತಿಳಿಸಿದ್ದರು ಎಂದು ಸಿಬಿಐ ತನ್ನ ರಿಮ್ಯಾಂಡ್‌ ಕಾಪಿಯಲ್ಲಿ ಉಲ್ಲೇಖಿಸಿದೆ.

    ಮುಂದುವರಿದು, ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಾದ ನಂತರ ಘೋಷ್‌ ಪೊಲೀಸ್‌ ಅಧಿಕಾರಿ ಮತ್ತು ವಕೀಲರೊಂದಿಗೆ ಸಂಪರ್ಕದಲ್ಲಿದ್ದರು. ಸಂತ್ರಸ್ತೆ ಪೋಷಕರು ಆಸ್ಪತ್ರೆಗೆ ಬಂದಾಗಲೂ ಅವರನ್ನು ಭೇಟಿಯಾಗಲಿಲ್ಲ. ಘಟನೆ ನಂತರ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳ ಬಗ್ಗೆ ಗಮನ ಹರಿಸಲಿಲ್ಲ. ಮೃತದೇಹವನ್ನು ತಕ್ಷಣವೇ ಶವಾಗಾರಕ್ಕೆ ಕಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ಸಿಬಿಐ ಕೋರ್ಟ್‌ಗೆ ತಿಳಿಸಿದೆ. ಇದನ್ನೂ ಓದಿ: ವರದಕ್ಷಿಣೆಯಾಗಿ ಬೈಕ್ ಕೇಳಿದ್ದ ಪತಿ – ಕೊಡದಿದ್ದಕ್ಕೆ ತವರು ಮನೆಯಿಂದ ಕರೆತಂದು ಪತ್ನಿಯನ್ನೇ ಕೊಂದ!

    ಇನ್ನೂ ಪೊಲೀಸ್‌ ಅಧಿಕಾರಿ ಮೊಂಡಲ್‌ ಸಹ ಮಾಹಿತಿ ಪಡೆದ ಒಂದು ಗಂಟೆ ನಂತರ ಘಟನಾ ಸ್ಥಳಕ್ಕೆ ತಲುಪಿದರು. ಘೋರ ಸ್ವರೂಪದಲ್ಲಿ ಕೊಲೆಯಾಗಿರುವುದು ಕಂಡುಬಂದರೂ ಸೂಕ್ತ ಸಮಯಕ್ಕೆ ಎಫ್‌ಐಆರ್‌ ದಾಖಲಿಸಲಿಲ್ಲ. ತಡರಾತ್ರಿ ಎಫ್‌ಐಆರ್‌ ದಾಖಲಿಸಲಾಗಿದೆ, ಸುಪ್ರೀಂ ಕೋರ್ಟ್‌ ಮತ್ತು ಕೋಲ್ಕತ್ತಾ ಹೈಕೋರ್ಟ್‌ ಪದೇ ಪದೇ ಹೇಳಿದರೂ ಪ್ರಕರಣದ ಕುರಿತು ತಲೆ ಕೆಡಿಸಿಕೊಂಡಿಲ್ಲ. ಕುಟುಂಬದ ಸದಸ್ಯರು ಮತ್ತೆ ಶವಪರೀಕ್ಷೆಗೆ ಒತ್ತಾಯಿಸಿದರೂ ಶವದ ಅಂತ್ಯಸಂಸ್ಕಾರಕ್ಕೆ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ ಎಂದು ಘಟನಾ ವಿವರವನ್ನು ಸಿಬಿಐ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

    ಸದ್ಯ ಕೋಲ್ಕತ್ತಾ ಹೈಕೋರ್ಟ್‌ ಡಾ.ಘೋಷ್ ಮತ್ತು ಪೊಲೀಸ್‌ ಅಧಿಕಾರಿ ಮೊಂಡಲ್ ಇಬ್ಬರನ್ನು ಎರಡು ದಿನಗಳ ಸಿಬಿಐ ಕಸ್ಟಡಿಗೆ ನೀಡಿದೆ. ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್‌ ಘೋಷ್‌ ಸೇರಿ ಸಿಬಿಐನಿಂದ ಇಬ್ಬರ ಬಂಧನ

  • Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್‌ ಘೋಷ್‌ ಸೇರಿ ಸಿಬಿಐನಿಂದ ಇಬ್ಬರ ಬಂಧನ

    Kolkata Horror | ಸಾಕ್ಷಿ ನಾಶ, FIR ದಾಖಲಿಸಲು ವಿಳಂಬ; ಸಂದೀಪ್‌ ಘೋಷ್‌ ಸೇರಿ ಸಿಬಿಐನಿಂದ ಇಬ್ಬರ ಬಂಧನ

    – ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

    ಕೋಲ್ಕತ್ತಾ: ಹಣಕಾಸು ಅವ್ಯವಹಾರ ಪ್ರಕಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರನ್ನ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ.

    ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ನಾಶ ಆರೋಪಕ್ಕೆ ಆರೋಪದ ಮೇಲೆ ಸಂದೀಪ್‌ ಘೋಷ್‌ ಅವರನ್ನ ಬಂಧಿಸಿರುವುದಾಗಿ ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಭೀಕರ ಅಪಘಾತ – 6 ಯಾತ್ರಾರ್ಥಿಗಳು ದುರ್ಮರಣ

    ಜೊತೆಗೆ ಎಫ್‌ಐಆರ್‌ ದಾಖಲಿಸಲು ವಿಳಂಬ ಹಾಗೂ ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪದ ಮೇಲೆ ತಲಾ ಪೊಲೀಸ್ ಠಾಣೆಯ ಅಧಿಕಾರಿ ಅಭಿಜಿತ್‌ ಮೊಂಡಲ್‌ ಅವರನ್ನೂ ಸಿಬಿಐ ಬಂಧಿಸಿದೆ. ಇದನ್ನೂ ಓದಿ: ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ

    ಇದೇ ತಿಂಗಳ ಸೆಪ್ಟೆಂಬರ್‌ 2ರಂದು ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಬಂಧಿಸಿತ್ತು. ಬಳಿಕ ಆರ್ಥಿಕ ಅವ್ಯವಹಾರಗಳ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ ಕೋಲ್ಕತ್ತಾ ಹೈಕೋರ್ಟ್‌ (Kolkata High Court) ಆದೇಶವನ್ನು ಪ್ರಶ್ನಿಸಿ ಘೋಷ್ (Sandip Ghosh) ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

    ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹ:
    ಸದ್ಯ ಪೊಲೀಸ್‌ ಅಧಿಕಾರಿ ಮೊಂಡಲ್‌ ಅವರ ಬಂಧನದ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಕೋಲ್ಕತ್ತಾ ಪೊಲೀಸ್‌ ಆಯುಕ್ತರನ್ನ ತಕ್ಷಣವೇ ಕರ್ತವ್ಯದಿಂದ ಅಮಾನತುಗೊಳಿಸಬೇಕು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

    ಕಳೆದ ತಿಂಗಳು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಲು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಮೂರು ವಾರಗಳ ಗಡುವು ನೀಡಿತ್ತು. ಸೆ.17ರಂದು ಗಡುವು ಮುಕ್ತಾಯವಾಗಲಿದ್ದು, ಅಂದೇ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

  • ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ

    ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ

    ನವದೆಹಲಿ: ಆರ್ಥಿಕ ಅವ್ಯವಹಾರಗಳ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ ಕೋಲ್ಕತ್ತಾ ಹೈಕೋರ್ಟ್‌ (Kolkata High Court) ಆದೇಶವನ್ನು ಪ್ರಶ್ನಿಸಿ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ (Sandip Ghosh) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ತನಿಖೆಯನ್ನು ವರ್ಗಾವಣೆ ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿತು. ಇದನ್ನೂ ಓದಿ: ಅಗ್ಗದ ದರದಲ್ಲಿ ವಿದ್ಯುತ್ ಉತ್ಪಾದಿಸುತ್ತಿದೆ ಭಾರತ – ಶಕ್ತಿ ಪರಿವರ್ತನಾ ಶೃಂಗಸಭೆಯಲ್ಲಿ ಜೋಶಿ ಶ್ಲಾಘನೆ

    ಘೋಷ್ ಪರ ಹಿರಿಯ ವಕೀಲ ಮೀನಾಕ್ಷಿ ಅರೋರಾ ವಾದ ಮಂಡಿಸಿದರು. ಅರ್ಜಿದಾರರು ವಿಚಾರಣೆಗೆ ಆಕ್ಷೇಪಣೆ ಸಲ್ಲಿಸುತ್ತಿಲ್ಲ. ಆದರೆ ಹೈಕೋರ್ಟ್ ಮಾಡಿದ ಕೆಲವು ಪ್ರತಿಕೂಲ ಹೇಳಿಕೆಗಳಿಂದ ಅಸಮಾಧಾನಗೊಂಡಿದ್ದಾರೆ. ಆ.9 ರಂದು ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆಯೊಂದಿಗೆ ಆರೋಪಿತ ಅಕ್ರಮಗಳನ್ನು ಜೋಡಿಸುವ ಹೈಕೋರ್ಟ್‌ನ ಕಲ್ಪನೆ ಬಗ್ಗೆ ಆಕ್ಷೇಪವಿದೆ ಎಂದು ಅವರು ಹೇಳಿದರು.

    ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಸಿಜೆಐ ಇದು ತನಿಖೆಯ ವಿಷಯವಾಗಿದೆ. ಬಯೋಮೆಡಿಕಲ್ ತ್ಯಾಜ್ಯದ ಸಮಸ್ಯೆಯು ಒಂದು ಪ್ರಚೋದಕವಾಗಿದೆ. ಆದ್ದರಿಂದ ಈ ವಿಷಯದಲ್ಲಿ ತಾರ್ಕಿಕ ತೀರ್ಮಾನಕ್ಕೆ ಬರಬೇಕು ಎನ್ನುವುದು ಹೈಕೋರ್ಟ್ ಬಯಸುತ್ತದೆ. ಇದರಲ್ಲಿ ನಾವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸಿಜೆಐ ಹೇಳಿದರು. ಇದನ್ನೂ ಓದಿ: ಮುಂಬೈನ ಟೈಮ್ಸ್ ಟವರ್‌ನಲ್ಲಿ ಅಗ್ನಿ ಅವಘಡ

    ಇದಕ್ಕೆ ಪ್ರತಿಕ್ರಿಯಿಸಿದ ಅರೋರಾ, ಹೈಕೋರ್ಟ್ ಈ ಬಗ್ಗೆ ಸ್ಪಷ್ಟವಾದ ತೀರ್ಮಾನಕ್ಕೆ ಬರುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದರು. ಇದಕ್ಕೆ ಪ್ರತ್ಯುತ್ತರ ನೀಡಿದ ಸಿಜೆಐ ನಾವು ತನಿಖೆಯನ್ನು ಸ್ತಬ್ಧಗೊಳಿಸಬಾರದು. ನಮ್ಮ ಮುಂದೆ ಸ್ಥಿತಿ ವರದಿಗಳನ್ನು ಸಲ್ಲಿಸುವಂತೆ ನಾವು ಸಿಬಿಐಗೆ ಸೂಚಿಸುತ್ತೇವೆ ಎಂದರು.

    ಹೈಕೋರ್ಟ್ ಮಾಡಿದ ಅವಲೋಕನಗಳನ್ನು ಆದೇಶದಿಂದ ತೆಗೆದುಹಾಕಬೇಕು ಎಂದು ಅರೋರಾ ಒತ್ತಾಯಿಸಿದರು. ಈ ಹಂತದಲ್ಲಿ ಅರ್ಜಿದಾರರು ಪೂರ್ವಾಗ್ರಹ ಪೀಡಿತರಾಗಿರುವುದರಿಂದ ಇವುಗಳನ್ನು ಪ್ರಾಥಮಿಕ ಅವಲೋಕನಗಳು ಎಂದು ನ್ಯಾಯಾಲಯವು ದಾಖಲಿಸಬಹುದು ಎಂದು ಅರೋರಾ ವಿನಂತಿಸಿದರು. ಆದರೆ ಅದಕ್ಕೆ ಪೀಠ ನಿರಾಕರಿಸಿತು. ಇದನ್ನೂ ಓದಿ: Kolkata Horror | ಆರ್‌.ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲನ ಮನೆ ಸೇರಿ 7 ಕಡೆ ಇಡಿ ದಾಳಿ!

    ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಅವರು ಮಾಜಿ ಪ್ರಾಂಶುಪಾಲ ಡಾ. ಘೋಷ್ ವಿರುದ್ಧ ಕೋಲ್ಕತ್ತಾ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೃತದೇಹಗಳ ದುರುಪಯೋಗ, ಜೈವಿಕ ತ್ಯಾಜ್ಯವನ್ನು ಮುಕ್ತ ಮಾರುಕಟ್ಟೆಯಲ್ಲಿ ಮರು ಮಾರಾಟ, ಸಾರ್ವಜನಿಕ ನಿಧಿಯ ದುರುಪಯೋಗ ಮುಂತಾದ ಗಂಭೀರ ಅಕ್ರಮಗಳನ್ನು ಮಾಡಿದ್ದರು. ಆರೋಪದ ಹಿನ್ನೆಲೆ ಹೈಕೋರ್ಟ್ ತನಿಖೆಗೆ ನೀಡಿದೆ.

  • Kolkata Horror | ಆರ್‌.ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲನ ಮನೆ ಸೇರಿ 7 ಕಡೆ ಇಡಿ ದಾಳಿ!

    Kolkata Horror | ಆರ್‌.ಜಿ ಕರ್‌ ಕಾಲೇಜಿನ ಮಾಜಿ ಪ್ರಾಂಶುಪಾಲನ ಮನೆ ಸೇರಿ 7 ಕಡೆ ಇಡಿ ದಾಳಿ!

    ಕೋಲ್ಕತ್ತಾ: ಇಲ್ಲಿನ ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ (Sandip Ghosh) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.

    ಸಂದೀಪ್‌ ಘೋಷ್‌ ಮನೆ ಮಾತ್ರವಲ್ಲದೇ ಅವರ ನಿಕಟವರ್ತಿಗಳ ಮನೆ ಮೇಲೂ ದಾಳಿ ನಡೆಯುತ್ತಿದೆ. ಕೋಲ್ಕತ್ತಾ (Kolkata) ಮತ್ತು ಹೌರಾದ ಒಟ್ಟು 7 ಕಡೆಗಳಲ್ಲಿ ಇಡಿ ತಂಡ ದಾಳಿ ನಡೆಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟಿಫಿನ್ ಬಾಕ್ಸ್‌ನಲ್ಲಿ ಬಿರಿಯಾನಿ ತಂದಿದ್ದಕ್ಕೆ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ ಪ್ರಾಂಶುಪಾಲ

    ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (RG Kar MCH) ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇತ್ತೀಚೆಗಷ್ಟೇ ಸಂದೀಪ್‌ ಘೋಷ್‌ ಅವರನ್ನ ಸಿಬಿಐ ಬಂಧಿಸಿದೆ. ಸತತ 2 ವಾರಗಳ ಕಾಲ ನಡೆದ ವಿಚಾರಣೆಯ ಬಳಿಕ ಮಾಜಿ ಪ್ರಾಂಶುಪಾಲನ ಬಂಧನವಾಗಿತ್ತು. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

    ವೈದ್ಯಕೀಯ ಕಾಲೇಜಿನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ರ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಅಪ್ರಾಮಾಣಿಕತೆ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಅಲ್ಲದೇ ಪ್ರಕರಣ ಜಾಮೀನು ರಹಿತ ಸ್ವರೂಪದ್ದಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದರು. ಇದನ್ನೂ ಓದಿ: ಮದುವೆಯಾಗ್ತೀನಿ ಅಂತಾ ಎಣ್ಣೆ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುರುಳ

    ಸಂದೀಪ್‌ ಘೋಷ್‌, 2021ರ ಫೆಬ್ರವರಿಯಿಂದ 2023ರ ಸೆಪ್ಟೆಂಬರ್‌ ವರೆಗೆ RG ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಅಕ್ಟೋಬರ್ 2023 ರಲ್ಲಿ ವರ್ಗಾವಣೆಯಾಗಿದ್ದರು. ಇದಾದ ಒಂದೇ ತಿಂಗಳಲ್ಲಿ ಮತ್ತೆ ಅದೇ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದರು. ಕಳೆದ ತಿಂಗಳು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ದಿನದವರೆಗೂ ಅವರು ಹುದ್ದೆಯಲ್ಲಿದ್ದರು. ಆಗಸ್ಟ್ 9 ರಂದು ಟ್ರೈನಿ ವೈದ್ಯೆಯ ಮೃತ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಬಂಗಾಳ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದಿತು. ಬೆನ್ನಲ್ಲೇ ಸಂದೀಪ್‌ ಘೋಷ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದಾದ ಬಳಿಕ ಈ ಬೆನ್ನಲ್ಲೇ ಭಾರತೀಯ ವೈದ್ಯಕೀಯ ಸಂಘವು ಡಾ.ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿತು.

  • Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

    Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅರೆಸ್ಟ್‌

    ಕೋಲ್ಕತ್ತಾ: ಕಳೆದ ತಿಂಗಳು ಟ್ರೈನಿ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದ್ದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ನನ್ನ (Sandip Ghosh) ಕೇಂದ್ರೀಯ ತನಿಖಾ ದಳ (CBI) ಸೋಮವಾರ ಬಂಧಿಸಿದೆ.

    ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಸಂದೀಪ್‌ ಘೋಷ್‌ ಅವರನ್ನ ಸೋಮವಾರ (ಇಂದು ಸಂಜೆ) ಬಂಧಿಸಿದೆ. ಸತತ 2 ವಾರಗಳ ಕಾಲ ನಡೆದ ವಿಚಾರಣೆಯ ಬಳಿಕ ಮಾಜಿ ಪ್ರಾಂಶುಪಾಲರ ಬಂಧನವಾಗಿದೆ. ಇದನ್ನೂ ಓದಿ: Kolkata Horror | ಕ್ರಿಮಿನಲ್‌ ಮನಸ್ಥಿತಿ ಬರೋದು ಏಕೆ? ಮನೋವಿಜ್ಞಾನಿಗಳು ಏನ್‌ ಹೇಳ್ತಾರೆ?

    ವೈದ್ಯಕೀಯ ಕಾಲೇಜಿನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ರ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಅಪ್ರಾಮಾಣಿಕತೆ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಅಲ್ಲದೇ ಪ್ರಕರಣ ಜಾಮೀನು ರಹಿತ ಸ್ವರೂಪದ್ದಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Kolkata Horror | ಕಿರಿಯ ವೈದ್ಯರಿಗೆ ನಾನು ಎಂದಿಗೂ ಬೆದರಿಕೆ ಹಾಕಿಲ್ಲ: ಮಮತಾ ಬ್ಯಾನರ್ಜಿ

    ಕೋಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಪೊಲೀಸರ ವಿಶೇಷ ತನಿಖಾ ತಂಡದಿಂದ ಸಿಬಿಐ ತನಿಖೆ ಹೊಣೆ ವಹಿಸಿಕೊಂಡಿತ್ತು. ಬಳಿಕ ಎಫ್‌ಐಆರ್‌ ದಾಖಲಿಸಿದ್ದ ಸಿಬಿಐ ಕಳೆದ 2 ವಾರಗಳಿಂದ 150ಕ್ಕೂ ಹೆಚ್ಚುಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

    ಸಂದೀಪ್‌ ಘೋಷ್‌, 2021ರ ಫೆಬ್ರವರಿಯಿಂದ 2023ರ ಸೆಪ್ಟೆಂಬರ್‌ ವರೆಗೆ RG ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. ಅಕ್ಟೋಬರ್ 2023 ರಲ್ಲಿ ವರ್ಗಾವಣೆಯಾಗಿದ್ದರು. ಇದಾದ ಒಂದೇ ತಿಂಗಳಲ್ಲಿ ಮತ್ತೆ ಅದೇ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾದರು. ಕಳೆದ ತಿಂಗಳು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ದಿನದವರೆಗೂ ಅವರು ಹುದ್ದೆಯಲ್ಲಿದ್ದರು. ಆಗಸ್ಟ್ 9 ರಂದು ಟ್ರೈನಿ ವೈದ್ಯೆಯ ಮೃತ ದೇಹವು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಬಳಿಕ ಬಂಗಾಳ ಸೇರಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಭುಗಿಲೆದ್ದಿತು.

    ಈ ಬೆನ್ನಲ್ಲೇ ಸಂದೀಪ್‌ ಘೋಷ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದಾದ ಬಳಿಕ ಈ ಬೆನ್ನಲ್ಲೇ ಭಾರತೀಯ ವೈದ್ಯಕೀಯ ಸಂಘವು ಡಾ.ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿತು. ಇದನ್ನೂ ಓದಿ: Kolkata Horror | 36 ಗಂಟೆಗಳ ಅಮಾನುಷ ಶಿಫ್ಟ್ ಸರಿಯಲ್ಲ ಎಂದ ಸುಪ್ರೀಂ – ಸುಳ್ಳುಪತ್ತೆ ಪರೀಕ್ಷೆಗೆ ಅಸ್ತು!

  • ವೈದ್ಯೆ ಅತ್ಯಾಚಾರ-ಕೊಲೆ ಕೇಸ್; ಐಎಂಎ ಸದಸ್ಯತ್ವದಿಂದ ಆರ್‌ಜಿ ಕರ್‌ ಆಸ್ಪತ್ರೆ ಮಾಜಿ ವೈದ್ಯ ಡಾ. ಸಂದೀಪ್‌ ಅಮಾನತು‌

    ವೈದ್ಯೆ ಅತ್ಯಾಚಾರ-ಕೊಲೆ ಕೇಸ್; ಐಎಂಎ ಸದಸ್ಯತ್ವದಿಂದ ಆರ್‌ಜಿ ಕರ್‌ ಆಸ್ಪತ್ರೆ ಮಾಜಿ ವೈದ್ಯ ಡಾ. ಸಂದೀಪ್‌ ಅಮಾನತು‌

    ನವದೆಹಲಿ: ಕೋಲ್ಕತ್ತಾದ (Kolkata Doctor Rape-Murder) ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್ (Sandip Ghosh) ಅವರ ಸದಸ್ಯತ್ವವನ್ನು ಭಾರತೀಯ ವೈದ್ಯಕೀಯ ಸಂಘ ಅಮಾನತುಗೊಳಿಸಿದೆ.

    ಸೋಮವಾರ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾದ ಡಾ. ಘೋಷ್, ಮಹಿಳೆಯ ಶವ ಪತ್ತೆಯಾದಾಗ ಪೊಲೀಸ್ ದೂರು ದಾಖಲಿಸಲು ವಿಫಲವಾದುದೂ ಸೇರಿದಂತೆ ನಿರ್ಲಕ್ಷ್ಯ ಧೋರಣೆ ತಳೆದ ಆರೋಪ ಹೊತ್ತಿದ್ದಾರೆ. ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಹತ್ಯೆಗೆ ಸಂಬಂಧಿಸಿದಂತೆ ಅವರು ಆರೋಪ ಎದುರಿಸುತ್ತಿಲ್ಲ. ಆದರೆ, ಜಾಮೀನು ರಹಿತ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಪಾಕ್‌-ಚೀನಾ ಯುದ್ಧ, ನಕ್ಸಲರ ದಾಳಿ, ಕೋಮು ಗಲಭೆಗಳಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆಯೇ ಹೆಚ್ಚಿದೆ: ಗಡ್ಕರಿ

    ಆದಾಗ್ಯೂ, ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರದ ಆರೋಪಗಳಿವೆ. ಮಾಜಿ ಉದ್ಯೋಗಿಯೊಬ್ಬರು, ಡಾ. ಘೋಷ್ ಅವರು ಮೃತದೇಹಗಳು ಮತ್ತು ಬಯೋಮೆಡಿಕಲ್ ತ್ಯಾಜ್ಯಗಳ ಕಳ್ಳಸಾಗಣೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಸಿಬಿಐ, ಘೋಷ್‌ ಅವರ ಕೋಲ್ಕತ್ತಾದ ಮನೆಯಲ್ಲಿ 11 ಗಂಟೆಗಳ ಸಮಗ್ರ ಶೋಧವನ್ನು ನಡೆಸಿತು. ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಇದುವರೆಗೆ ಸುಮಾರು 90 ಗಂಟೆಗಳ ಕಾಲ ಡಾ. ಘೋಷ್ ಅವರನ್ನು ಪ್ರಶ್ನೆಗೊಳಪಡಿಸಿದೆ. ಇದನ್ನೂ ಓದಿ: 12 ನೂತನ ಕೈಗಾರಿಕಾ ಸ್ಮಾರ್ಟ್ ಸಿಟಿ, 10 ಲಕ್ಷ ಹೊಸ ಉದ್ಯೋಗ ಸೃಷ್ಟಿ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

    IMA ಕೂಡ ಬಂಗಾಳದ ವೈದ್ಯರ ಆರೋಪಗಳನ್ನು ಉಲ್ಲೇಖಿಸಿದೆ. ಡಾ. ಘೋಷ್ ಅವರು ತಮ್ಮ ಕಾರ್ಯಗಳಿಂದ ವೃತ್ತಿಗೆ ಅಪಖ್ಯಾತಿ ತಂದಿದ್ದಾರೆ. ಶಿಸ್ತು ಸಮಿತಿಯು ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.