Tag: Sandlalwood

  • ಆಸ್ಪತ್ರೆಗೆ ದಾಖಲಾಗಿ ಡಿಂಪಲ್ ಕ್ವೀನ್ ರಚಿತಾ ಡಿಸ್ಚಾರ್ಜ್

    ಆಸ್ಪತ್ರೆಗೆ ದಾಖಲಾಗಿ ಡಿಂಪಲ್ ಕ್ವೀನ್ ರಚಿತಾ ಡಿಸ್ಚಾರ್ಜ್

    ಬೆಂಗಳೂರು: ಚಂದನವನದ ಡಿಂಪಲ್ ಕ್ವಿನ್ ರಚಿತಾರಾಮ್ ಆಸ್ಪತ್ರೆಗೆ ದಾಖಲಾಗಿ, ಡಿಸ್ಚಾರ್ಜ್ ಆಗಿದ್ದಾರೆ. ರಚಿತಾ ರಾಮ್ ಅವರು ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ಒತ್ತಡದಿಂದ ಅತಿಯಾದ ಆಯಾಸಕ್ಕೆ ಒಳಗಾಗಿದ್ದು, ಶೀತ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಚಿತ್ರದ ಪ್ರಚಾರಕ್ಕೆ ಹೋಗಿ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

    ಶಿವಮೊಗ್ಗದಲ್ಲಿ ತಮ್ಮ ಹೊಸ ಚಿತ್ರ ಏಕ್ ಲವ್ ಯಾ ಸಾಂಗ್ ಇವೆಂಟ್ ವೇಳೆ ಮಾತನಾಡಿದ್ದ ರಚಿತಾ, ಡಿಸೆಂಬರ್31 ರಂದು ನನ್ನ ಸಿನಿಮಾ ಲವ್ ಯೂ ರಚ್ಚು ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕಾಗಿ ನಮ್ಮ ನಿರ್ಮಾಪಕರು ತುಂಬ ಫೈಟ್ ಮಾಡುತ್ತಿದ್ದಾರೆ. ನಿರ್ಮಾಪಕರು ಒಂದು ಸಿನಿಮಾ ಮಾಡಲು ಎಲ್ಲೆಲ್ಲಿಂದಲೋ ದುಡ್ಡು ತಂದು ಕಷ್ಟ ಪಟ್ಟು ಇಷ್ಟ ಪಟ್ಟು ಸಿನಿಮಾ ಮಾಡಿರುತ್ತಾರೆ. ಆದರೆ ಈ ನಡುವೆ ನೈಟ್ ಕರ್ಫ್ಯೂ, ಬಂದ್ ಮಾಡುವುದರಿಂದ ತೊಂದರೆಯಾಗುತ್ತದೆ ಎಂದಿದ್ದರು. ಇದನ್ನೂ ಓದಿ: ನ್ಯೂ ಇಯರ್ ಸೆಲೆಬ್ರೆಷನ್‍ಗೆ ಮಾಲ್ಡೀವ್ಸ್‌ಗೆ ಹಾರಿದ ಬಾಲಿವುಡ್ ಲವ್​ ಬರ್ಡ್ಸ್

    ಒಂದು ಕಡೆ ನಮ್ಮ ರಾಜ್ಯಕೋಸ್ಕರ ಸಪೋರ್ಟ್ ಮಾಡುತ್ತಾ ನಿಲ್ಲಬೇಕಾಗುತ್ತದೆ. ಇನ್ನೊಂದು ಕಡೆ ಸಿನಿಮಾ. ಹೀಗಾಗಿ ಏನು ಹೇಳಬೇಕು ಅಂತಾ ಗೊತ್ತಾಗುತ್ತಿಲಲ್ಲ. ಒಂದು ಕಡೆ ನಮ್ಮ ಪ್ರೊಡ್ಯೂಸರ್, ಇನ್ನೊಂದು ಕಡೆ ನಮ್ಮ ರಾಜ್ಯ. ಸಪೋರ್ಟ್ ಎರಡು ಕಡೆಯೂ ಇರುತ್ತದೆ. ಆದರೆ ಹೆಚ್ಚು ಸಪೋರ್ಟ್ ನಮ್ಮ ರಾಜ್ಯಕೋಸ್ಕರ ಇರುತ್ತದೆ ಎಂದು ಹೇಳಿದ್ದರು. ಇದನ್ನೂ ಓದಿ: ಗೋವಾದಲ್ಲಿ ಸ್ನೇಹಿತರ ಜೊತೆ ಎಂಜಾಯ್ ಮೂಡ್‍ನಲ್ಲಿ ಸಮಂತಾ

  • ನಟ ಸಂಚಾರಿ ವಿಜಯ್ ನಿಧನಕ್ಕೆ ಸಿಎಂ ಸಂತಾಪ

    ನಟ ಸಂಚಾರಿ ವಿಜಯ್ ನಿಧನಕ್ಕೆ ಸಿಎಂ ಸಂತಾಪ

    ಬೆಂಗಳೂರು : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಅವರು ಇಂದು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

    ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ: ಲಾಕ್‍ಡೌನ್ ಮೊದಲು ಮಾತನಾಡಿದ್ದೆ, ಈಗ ಆಘಾತಗೊಂಡಿದ್ದೇನೆ: ಸುದೀಪ್