Tag: Sanganabasava Samiji

  • ಜೈನಮುನಿ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀ ಆಗ್ರಹ

    ಜೈನಮುನಿ ಹತ್ಯೆಯ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀ ಆಗ್ರಹ

    ವಿಜಯಪುರ: ಚಿಕ್ಕೋಡಿಯಲ್ಲಿ (Chikkodi) ನಡೆದ ಜೈನಮುನಿ (Jain Muni) ಹತ್ಯೆಯನ್ನು ವಿಜಯಪುರದ ಮನಗೂಳಿ ಹಿರೇಮಠದ ಸಂಗನಬಸವ ಶ್ರೀಗಳು (Sanganabasava Swamiji) ಖಂಡಿಸಿದ್ದಾರೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಮಾಜಕ್ಕಾಗಿ ಜೀವನವನ್ನೆ ಮುಡಿಪಾಗಿಟ್ಟ ಸ್ವಾಮೀಜಿಗಳ ಹತ್ಯೆಯಾದರೆ ಹೇಗೆ. ರಾಜ್ಯದಲ್ಲಿ ಸ್ವಾಮೀಜಿಗಳಿಗೆ ರಕ್ಷಣೆ ಇದೆಯೇ ಎಂದ ಮನಗೂಳಿ ಶ್ರೀ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು, ಉಸ್ತುವಾರಿ ಸಚಿವರು ಸುಮ್ಮನೆ ಕೂರಬಾರದು. ಸರ್ಕಾರ ತಕ್ಷಣವೇ ಆ ಆರೋಪಿಗಳ ವಿರುದ್ಧ ಕಠಿಣ ಕ್ರಮ‌ ತೆಗೆದುಕೊಳ್ಳಬೇಕು. ಮುನಿಗಳ ಹಂತಕರನ್ನ ಗಲ್ಲಿಗೇರಿಸಬೇಕು. ಮುನಿಗಳ ಹತ್ಯೆ ವಿಚಾರದಲ್ಲಿ ಸರ್ಕಾರ ಎಚ್ಚರವಹಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಹಿರಿಯ ಮುನಿಗಳು, ಜೈನ ಸಮುದಾಯದ ಭಕ್ತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

    ಜುಲೈ 6ರಿಂದ ನಂದಿ ಪರ್ವತ ಆಶ್ರಮದ ಜೈನಮುನಿಗಳು ನಾಪತ್ತೆಯಾಗಿದ್ದರು. ಸ್ವಾಮೀಜಿಯ ನಾಪತ್ತೆಯ ಕುರಿತು ಭಕ್ತರು ಚಿಕ್ಕೋಡಿ ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರು ಅನುಮಾನದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಸ್ವಾಮೀಜಿಯನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಜೈನಮುನಿಯ ಮೃತದೇಹವನ್ನು ಖಟಕಬಾವಿಯ ಗದ್ದೆಯಲ್ಲಿದ್ದ ತೆರೆದ ಕೊಳವೆಬಾವಿಗೆ ಹಾಕಿರುವುದಾಗಿ ಮಾಹಿತಿ ನೀಡಿದ್ದರು. ಇದನ್ನೂ ಓದಿ: ಕರೆಂಟ್ ಶಾಕ್ ಕೊಟ್ಟು, ಕತ್ತು ಹಿಸುಕಿ ಜೈನಮುನಿ ಹತ್ಯೆ – ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಶುಕ್ರವಾರ ರಾತ್ರಿಯಿಂದ ಖಟಕಬಾವಿಯಲ್ಲಿ ಶೋಧಕಾರ್ಯ ನಡೆಸಿದ್ದರು. ಸ್ವಾಮೀಜಿ ಮೃತದೇಹ ಪತ್ತೆಯಾಗದ ಹಿನ್ನೆಲೆ ಶನಿವಾರವೂ ಜೆಸಿಬಿ ಸಹಾಯದಿಂದ ಶೋಧ ಕಾರ್ಯ ಮುಂದುವರೆಸಿ ಕೊಳವೆ ಬಾವಿಯ 20 ಅಡಿ ಆಳದಲ್ಲಿ ಸ್ವಾಮೀಜಿ ಮೃತದೇಹ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]