Tag: Sangolli Rayanna Brigade

  • ಇನ್ನೂ ನಾನು ಬಿಜೆಪಿಯಲ್ಲೇ ಇದ್ದೇನೆ: ಈಶ್ವರಪ್ಪ

    ಇನ್ನೂ ನಾನು ಬಿಜೆಪಿಯಲ್ಲೇ ಇದ್ದೇನೆ: ಈಶ್ವರಪ್ಪ

    ಶಿವಮೊಗ್ಗ: ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ. ಆದರೆ ತುರ್ತಾಗಿ ಬಿಜೆಪಿ (BJP) ಸೇರುವ ಚಿಂತನೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S EShwarappa) ಹೇಳಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಮುಂದೆ ರಾಯಣ್ಣ ಬ್ರಿಗೇಡ್ (Sangolli Rayanna Brigade) ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮುಖಭಂಗ

    ರಾಹುಲ್ ಗಾಂಧಿಯವರು ಸಂಸತ್‍ನಲ್ಲಿ ಮಾಡಿದ ಭಾಷಣದ ಕುರಿತು, ನೇರವಾಗಿ ಹಿಂದೂ ಸಮಾಜ ಟೀಕೆ ಮಾಡುವ ಧೈರ್ಯವನ್ನು ಇದುವರೆಗೂ ಯಾರು ಮಾಡಿರಲಿಲ್ಲ. ಈಗ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಹಿಂದೂ ಧರ್ಮದ ಬಗ್ಗೆ ಟೀಕೆ ಮಾಡ್ತಿದ್ದಾರೆ. ಹಿಂದೂಗಳಿಗೆ ಅವರು ನೋವುಂಟು ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಗೌರವ ಬರುವ ರೀತಿ ಅವರು ನಡೆದುಕೊಳ್ಳಲಿ. ಇಲ್ಲದಿದ್ದರೆ ಇಡೀ ಹಿಂದೂ ಸಮಾಜ ಅವರ ವಿರುದ್ಧ ತಿರುಗಿ ಬೀಳಲಿದೆ ಎಂದು ಅವರು ಎಚ್ಚರಿಕೆ ನಿಡಿದ್ದಾರೆ.

    ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ, ಈ ಹಗರಣ ಇಡೀ ದೇಶದ ಗಮನ ಸೆಳೆದಿದೆ. ಇಷ್ಟಾದರೂ ನಿಗಮದ ಅಧ್ಯಕ್ಷ ರಾಜೀನಾಮೆ ನೀಡಿಲ್ಲ. ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ಮುಡಾ ಹಗರಣದಲ್ಲಿ ಸಿಎಂ ಸಿಕ್ಕಿ ಬಿದ್ದಿದ್ದಾರೆ. ಮನೆಯಲ್ಲಿದ್ದ ಹೆಣ್ಣು ಮಕ್ಕಳನ್ನು ಬೀದಿಗೆ ತಂದಿದ್ದಾರೆ. ಈ ಹಗರಣದಲ್ಲಿ ಅವರ ಕುಟುಂಬದವರು ಭಾಗಿಯಾಗಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಅಲ್ಲದೇ ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

  • ಈಶ್ವರಪ್ಪ ಬಣದ ಬಂಡಾಯಕ್ಕೆ ಯಡಿಯೂರಪ್ಪ ಥಂಡಾ!

    ಈಶ್ವರಪ್ಪ ಬಣದ ಬಂಡಾಯಕ್ಕೆ ಯಡಿಯೂರಪ್ಪ ಥಂಡಾ!

    ಬೆಂಗಳೂರು: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಈಶ್ವರಪ್ಪ ಅವರ ಬಣದ ಬಂಡಾಯವನ್ನು ಶಮನ ಮಾಡಲು ಬಿಎಸ್‍ವೈ ಮುಂದಾಗಿದ್ದು ಬೆಂಗಳೂರಿನ ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಅವರ ಅಮಾನತು ಆದೇಶ ನಾಲ್ಕೇ ತಿಂಗಳಿನಲ್ಲಿ ರದ್ದಾಗಿದೆ.

    ಬಿಎಸ್ ಯಡಿಯೂರಪ್ಪ ಅವರ ಸೂಚನೆ ಹಿನ್ನಲೆಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಪಿಎನ್ ಸದಾಶಿವ ಅಮಾನತು ಆದೇಶ ವಾಪಸ್ ಪಡೆದಿದ್ದಾರೆ. ವೆಂಕಟೇಶ್ ಮೂರ್ತಿ ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿರುತ್ತಾರೆ ಎಂಬ ಭರವಸೆಯಿಂದ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ ಎಂದು ಹೇಳಲಾಗಿದೆ.

    ಪರಿಷತ್ ಸದಸ್ಯ ಈಶ್ವರಪ್ಪ ನೇತೃತ್ವದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‍ನಲ್ಲಿ ಗುರುತಿಸಿಕೊಂಡ ಕಾರಣಕ್ಕೆ ಜನವರಿ 9ರಂದು ವೆಂಕಟೇಶ್ ಮೂರ್ತಿ ಅವರನ್ನ ಅಮಾನತು ಮಾಡಲಾಗಿತ್ತು. ಆದ್ರೆ ಅಸಮಾಧಾನಿತರ ಬಂಡಾಯಕ್ಕೆ ಮಣಿದ ಬಿಎಸ್‍ವೈ ನಾಲ್ಕೇ ತಿಂಗಳಿಗೆ ವೆಂಕಟೇಶ್ ಅವರ ಅಮಾನತು ಆದೇಶ ವಾಪಸ್ ಪಡೆದಿದ್ದಾರೆ ಅಂತ ಹೇಳಲಾಗಿದೆ.

    ವೆಂಕಟೇಶ್ ಮೂರ್ತಿ ಅಮಾನತುಗೊಂಡಾಗ ಇದು ಬಿಜೆಪಿಯ ಟೆಸ್ಟ್ ಡೋಸ್. ಮುಂದಿನ ದಿನಗಳಲ್ಲಿ ರಾಯಣ್ಣ ಬ್ರಿಗೇಡ್ ಜೊತೆ ಗುರುತಿಸಿಕೊಂಡಿರುವ ಮತ್ತಷ್ಟು ನಾಯಕರ ಮೇಲೆ ಬಿಜೆಪಿ ಕ್ರಮ ಕೈಗೊಳ್ಳಲಿದೆ ಎನ್ನುವ ಮಾತುಗಳು ಅಂದು ಕೇಳಿ ಬಂದಿತ್ತು.