Tag: sanjana

  • ಅದ್ದೂರಿಯಾಗಿ ನಡೆಯಿತು ‘ಗೀತಾ’ ಸೀರಿಯಲ್ ಹೀರೋ ಧನುಷ್ ಎಂಗೇಜ್‌ಮೆಂಟ್

    ಅದ್ದೂರಿಯಾಗಿ ನಡೆಯಿತು ‘ಗೀತಾ’ ಸೀರಿಯಲ್ ಹೀರೋ ಧನುಷ್ ಎಂಗೇಜ್‌ಮೆಂಟ್

    ಕಿರುತೆರೆಯ ಜನಪ್ರಿಯ ಸೀರಿಯಲ್ ‘ಗೀತಾ’ (Geetha) ಹೀರೋ ಧನುಷ್ ಗೌಡ್ (Dhanush Gowda) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಂಜನಾ ಜೊತೆ ಅದ್ದೂರಿಯಾಗಿ ಧನುಷ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ‘ಗೀತಾ’ ಸೀರಿಯಲ್ ಮೂಲಕ ಮನೆಮಾತಾದ ವಿಜಯ್ ಅಲಿಯಾಸ್ ಧನುಷ್ ಗೌಡ ಅವರು ಗ್ರ್ಯಾಂಡ್‌ ಆಗಿ ಸಂಜನಾ (Sanjana Prabhu) ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಗಾಸಿಪ್‌ಗೆಲ್ಲಾ ಬ್ರೇಕ್ ಹಾಕಿದ್ದಾರೆ.

    ಬೆಂಗಳೂರಿನ ಖಾಸಗಿ ರೆಸಾರ್ಟ್‌ವೊಂದರಲ್ಲಿ ಧನುಷ್-ಸಂಜನಾ ಎಂಗೇಜ್‌ಮೆಂಟ್ ಕಾರ್ಯಕ್ರಮ ನಡೆದಿದೆ. ‘ಗೀತಾ’ ಸಹನಟಿ ಭವ್ಯಾ ಗೌಡ ಮತ್ತು ಕುಟುಂಬಸ್ಥರು, ಆಪ್ತರು ಅಷ್ಟೇ ಈ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಮಾರ್ಕ್ ಆ್ಯಂಟನಿ’ ಚಿತ್ರ ನಿರ್ದೇಶಕ ಅಧಿಕ್

    ಸೋಷಿಯಲ್ ಮೀಡಿಯಾದಲ್ಲಿ ನಟಿ ಭವ್ಯಾ ಗೌಡ (Bhavya Gowda) ಅವರು ಧನುಷ್-ಸಂಜನಾ ಜೊತೆಗಿನ ಫೋಟೋ ಹಂಚಿಕೊಂಡು ಹೊಸ ಬಾಳಿಗೆ ಶುಭಕೋರಿದ್ದಾರೆ. ಧನುಷ್ ಎಂಗೇಜ್‌ಮೆಂಟ್ ಫೋಟೋ ವೈರಲ್ ಆಗ್ತಿದ್ದಂತೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಅಂದಹಾಗೆ ಧನುಷ್‌ ನಿಶ್ಚಿತಾರ್ಥದ ಸುಂದರ ಫೋಟೋಗಳು ಸುಜಯ್‌ ನಾಯ್ಡು ಅವರ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

    ಇನ್ನೂ ‘ಗೀತಾ’ (Geetha) ಧಾರಾವಾಹಿಯ ಭವ್ಯಾ- ಧನುಷ್ ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ. ಲವ್‌ನಲ್ಲಿದ್ದಾರೆ ಎಂದೇ ಹೇಳಲಾಗಿತ್ತು. ಇಬ್ಬರೂ ಈ ವಿಚಾರವನ್ನು ತಳ್ಳಿಹಾಕಿದ್ದರು. ನಾವಿಬ್ಬರು ಬೆಸ್ಟ್ ಫ್ರೆಂಡ್ಸ್ ನಮ್ಮ ನಡುವೆ ಏನಿಲ್ಲ ಎಂದು ಸ್ಪಷ್ಟನೆ ನೀಡಿದ್ದರು ಈ ಜೋಡಿ. ಸಂಜನಾ ಜೊತೆ ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲಾ ಅಂತೆ ಕಂತೆ ಗಾಸಿಪ್‌ಗೆ ಬ್ರೇಕ್ ಹಾಕಿದ್ದಾರೆ ನಟ ಧನುಷ್.

  • ಒಂದು ದಿನದ ಬ್ರಿಟಿಷ್ ಡೆಪ್ಯೂಟಿ ಕಮಿಷನರ್ ಆಗಿ ಕಾರ್ಯ ನಿರ್ವಹಿಸಿದ ಹುಬ್ಬಳ್ಳಿಯ ಸಂಜನಾ

    ಒಂದು ದಿನದ ಬ್ರಿಟಿಷ್ ಡೆಪ್ಯೂಟಿ ಕಮಿಷನರ್ ಆಗಿ ಕಾರ್ಯ ನಿರ್ವಹಿಸಿದ ಹುಬ್ಬಳ್ಳಿಯ ಸಂಜನಾ

    ಹುಬ್ಬಳ್ಳಿ: ಭಾರತ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ (British Deputy Commissioner) ಆಗಿ ಹುಬ್ಬಳ್ಳಿ (Hubballi) ಮೂಲದ 23 ವರ್ಷದ ಸಂಜನಾ ಹಿರೇಮಠ್ (Sanjana Hiremath) ಅವರು  ಬೆಂಗಳೂರಿನಲ್ಲಿ ಒಂದು ದಿನ ಕಾರ್ಯ ನಿರ್ವಹಿಸುವ ಮೂಲಕ ರಾಜತಾಂತ್ರಿಕರಾಗಿ ಕರ್ತವ್ಯ ನಿರ್ವಹಿಸಿದ ಅನುಭವವನ್ನು ಪಡೆದು ಕಿರಿಯ ವಯಸ್ಸಿನಲ್ಲೇ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

    ಭಾರತದಲ್ಲಿನ ಬ್ರಿಟಿಷ್ ಹೈಕಮಿಷನ್ ಪ್ರತಿವರ್ಷ ಅಕ್ಟೋಬರ್ 11 ರಂದು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಣೆ ಮಾಡುತ್ತದೆ. ಇದರ ಭಾಗವಾಗಿ 2017 ರಿಂದ 18 ರಿಂದ 23 ವರ್ಷದೊಳಗಿನ ಹೆಣ್ಣು ಮಕ್ಕಳ ಸಬಲೀಕರಣ ದೃಷ್ಟಿಯಿಂದ ಅವರಿಗೆ ರಾಜತಾಂತ್ರಿಕ ಅನುಭವದ ಜೊತೆಗೆ, ನಾಯಕತ್ವ ಗುಣ ಬೆಳಸುವ ನಿಟ್ಟಿನಲ್ಲಿ, ಒಂದು ದಿನದ ಹೈಕಮಿಷನರ್ ಎಂಬ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ನಮ್ಮ ದೇಶದ ಎಲ್ಲಾ ರಾಜ್ಯದ ಹೆಣ್ಣು ಮಕ್ಕಳು ಭಾಗವಹಿಸಬಹುದು.

    ಅಂದರಂತೆ ಸಂಜನಾ ಹಿರೇಮಠ ಸೇರಿ ಈ ವರ್ಷ ಒಟ್ಟು 180 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಾಧ್ಯಮ ಮತ್ತು ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಪ್ರಸ್ತುತ ಲಂಡನ್ ಸ್ಟಾಕ್ ಎಕ್ಸ್ಚೇಂಜ್ ಗ್ರೂಪ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಸಂಜನಾ ಈ ಸ್ಪರ್ಧೆಯಲ್ಲಿ ಭಾಗವಹಿಸಿ ಯುವತಿಯರಿಗೆ ತಮ್ಮ ಹಕ್ಕುಗಳ ಬಗ್ಗೆ ಜಾಗೃತಿ ಮತ್ತು ನಾಯಕತ್ವದ ಪಾತ್ರದ ಪ್ರಾಮುಖ್ಯತೆಯನ್ನು ವಿವರಿಸಿದರು.

    ಸಂಜನಾಳ ಪ್ರತಿಭೆ ಮತ್ತು ಚಿಂತನೆಗಳನ್ನು ಕಂಡ ಕರ್ನಾಟಕ ಮತ್ತು ಕೇರಳದ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಅವರು, ಸಂಜನಾಳನ್ನು ಆಯ್ಕೆ ಮಾಡಿ ಅವರ ಅವರ ಸ್ಥಾನದಲ್ಲಿ ಒಂದು ದಿನ ಕಾರ್ಯನಿರ್ವಹಿಸುವ ಅವಕಾಶ ನೀಡಿದ್ದಾರೆ. ಅಂದರಂತೆ ಸಂಜನಾ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್? ಒಂದು ದಿನ ಕಾರ್ಯ ನಿರ್ವಹಿಸಿದ್ದಾರೆ.

    ಒಂದು ದಿನದ ದಿನಚರಿ: ಪ್ರಸ್ತುತ ಬ್ರಿಟಿಷ್ ಹೈಕಮಿಷನರ್ ಚಂದ್ರು ಅಯ್ಯರ್ ಅವರ ಬೆಂಗಳೂರು ನಿವಾಸದಲ್ಲಿ ಉಪಾಹಾರ ಸೇವನೆಯೊಂದಿಗೆ ಅವರ ದಿನ ಪ್ರಾರಂಭವಾಯಿತು. ನಂತರ ಆಯೋಗದ ಕಚೇರಿಗೆ ಭೇಟಿ ಮಹಿಳೆಯರು ವಾಣಿಜ್ಯ ಸುಸ್ಥಿರ ಅಭಿವೃದ್ಧಿ, ಗುರಿಗಳು, ಅವುಗಳನ್ನು ಮುನ್ನಡೆಸುವ ಕುರಿತು ಅಧಿಕಾರಗಳೊಂದಿಗೆ ಚರ್ಚೆ ನಡೆಸಲಾಯಿತು.

    ಮಧ್ಯಾಹ್ನದ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್ ಗೀಚಿ ಅವರೊಂದಿಗೆ ಬಸವೇಶ್ವರ ಖಾನಾವಳಿಯ ಜೋಳದ ರೊಟ್ಟಿ ಮತ್ತು ಹೋಳಿಗೆ ಊಟ. ಈ ಸಮಯದಲ್ಲಿ ಉತ್ತರ ಕರ್ನಾಟಕದ ವಿಶಿಷ್ಟ ಪಾಕಪದ್ಧತಿಯ ಬಗ್ಗೆ ಸಂಜನಾಳ ವಿದೇಶಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ವಿಶೇಷವಾಗಿತ್ತು. ಬಳಿಕ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಸಭೆಯೊಂದಿಗೆ ಒಂದು ದಿನ ಬ್ರಿಟಿಷ್ ಡೆಪ್ಯುಟಿ ಕಮೀಷನರ್ ಆಗಿ ಸಂಜನಾ ಅವರ ಅಧಿಕಾರ ಮುಕ್ತಾಯಗೊಂಡಿದೆ. ಈ ಬಗ್ಗೆ ಸಂಜನಾ ಅವರು ಟ್ವಿಟರ್ ನಲ್ಲಿ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಜನಾ ಗಲ್ರಾನಿ ಮಗುವಿನ ನಾಮಕರಣ: ಹೆಸರೇನು ಗೊತ್ತಾ?

    ಸಂಜನಾ ಗಲ್ರಾನಿ ಮಗುವಿನ ನಾಮಕರಣ: ಹೆಸರೇನು ಗೊತ್ತಾ?

    ಸ್ಯಾಂಡಲ್‌ವುಡ್ ನಟಿ ಸಂಜನಾ ವೈವಾಹಿಕ ಜೀವನಕ್ಕೆ ಕಾಲಿಟ್ಟ ಮೇಲೆ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದರು. ಈಗ ಮಗುವಿನ ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಮನೆಗೆ ಹೊಸ ಅತಿಥಿ, ಸಂಜನಾ ಮುದ್ದು ಮಗನ ಆಗಮನವಾಗಿ, ಒಂದು ತಿಂಗಳು ಕಳೆದಿದೆ. ಇದೇ ಖುಷಿಯಲ್ಲಿ ಮಗುವಿಗೆ ನಾಮಕರಣ ಮಾಡಿದ್ದಾರೆ.

    ನಟಿ ಸಂಜನಾ ಕಳೆದ 2020ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಅಜೀಜ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಗಂಡು ಮಗುವಿಗೆ ತಾಯಿಯಾಗಿ ಮಗುವಿನ ಪೋಷಣೆಯಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಮಗುವಿನ ನಾಮಕರಣ ನೆರವೇರಿದ್ದು, ʻಅಲಾರಿಕ್ʼ ಎಂಬ ಹೆಸರನ್ನು ಇಡಲಾಗಿದೆ. ಈ ಕುರಿತು ಸಂಜನಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದು, ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಕಬ್ಬನ್ ಪಾರ್ಕ್‌ನಲ್ಲಿ ಜುಲೈ 1 ರಿಂದ ಸಾಕು ನಾಯಿ ಬ್ಯಾನ್ : ಮರುಪರಿಶೀಲನೆಗೆ ನಟಿ ಐಂದ್ರಿತಾ ರೇ ಮನವಿ

    ಸಂಜನಾ ಪತಿ ಅಜೀಜ್ ಮಗುವಿನ ಆರೈಕೆ ಮಾಡುತ್ತಿರುವ ವಿಡಿಯೋ ಶೇರ್ ಮಾಡಿ, ಮುದ್ದು ಮಗನ ಹೆಸರನ್ನು ಅನೌನ್ಸ್ ಮಾಡಿದ್ದಾರೆ. ಒಟ್ನಲ್ಲಿ ಈ ಸುದ್ದಿ ಕೇಳಿ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.

    Live Tv

  • ವೈರಲ್ ಆಯ್ತು ಸಂಜನಾ ಗಲ್ರಾನಿ ಬೇಬಿ ಶವರ್ ಸಮಾರಂಭದ ಫೋಟೋಗಳು

    ವೈರಲ್ ಆಯ್ತು ಸಂಜನಾ ಗಲ್ರಾನಿ ಬೇಬಿ ಶವರ್ ಸಮಾರಂಭದ ಫೋಟೋಗಳು

    ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಇತ್ತೀಚೆಗೆ ಸೀಮಂತದ ಸಂಭ್ರಮದ ಕ್ಷಣಗಳನ್ನು ಮತ್ತು ಬೇಬಿ ಬಂಪ್ ಫೋಟೋಶೂಟ್‌ನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಸಂಜನಾ ಅವರ ಬೇಬಿ ಶವರ್ ಸಮಾರಂಭ ಫೋಟೋಗಳು ಭಾರೀ ವೈರಲ್ ಆಗುತ್ತಿದೆ.

    `ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ನಟಿ ಸಂಜನಾ, ಬಳಿಕ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ್ರು. ಬಳಿಕ ಅಜೀಜ್ ಪಾಷಾ ಅವರೊಂದಿಗೆ ಸಂಜನಾ ವಿವಾಹವಾಗಿದ್ದರು. ಇತ್ತೀಚೆಗೆ ಸೀಮಂತ ಶಾಸ್ತ್ರದ ಸಂಭ್ರಮ ಕ್ಷಣಗಳನ್ನ ಸಂಜನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಬಳಿಕ ಬೇಬಿ ಬಂಪ್ ಫೋಟೋಗಳು ಕೂಡ ಅಭಿಮಾನಿಗಳ ಗಮನ ಸೆಳೆದಿತ್ತು. ವಿಶ್ವ ಅಮ್ಮಂದಿರ ದಿನದಂದು ಸಂಜನಾ ಅವರ ಬೇಬಿ ಶವರ್ ಸಮಾರಂಭ ನಡೆದಿದೆ. ನಟಿಯ ಸಂಭ್ರಮದ ಕ್ಷಣದ ಫೋಟೋಗಳು ಭಾರೀ ವೈರಲ್ ಆಗುತ್ತಿದೆ.

    ಸಂಜನಾ ಗಲ್ರಾನಿ ಈಗ 9 ತಿಂಗಳ ತುಂಬು ಗರ್ಭಿಣಿಯಾಗಿದ್ದು, ತಮ್ಮ ತಾಯ್ತನದ ಸುಂದರ ಕ್ಷಣಗಳನ್ನು ಅಭಿಮಾನಿಗಳ ಜತೆಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ತಿದ್ದಾರೆ. ಇದೀಗ ಮದರ್ಸ್ ಡೇಯಂದು ಸಂಜನಾ ತಾಯ್ತನದ ಅಮೂಲ್ಯ ಕ್ಷಣಗಳು ವೈರಲ್ ಆಗುತ್ತಿದೆ. ಪತಿ ಜತೆಯಿರೋ ಸಂಜನಾ ಬೇಬಿ ಶವರ್ ಸಮಾರಂಭದ ಫೋಟೋಗಳು ವೈರಲ್ ಆಗುತ್ತಿದೆ.

  • ಸಂಜನಾ ತಲೆ ಬೋಳಿಸಿಕೊಂಡಿದ್ದು ಸುಳ್ಳೇ ಸುಳ್ಳು : ಭಾವನೆಗಳ ಜೊತೆ ಆಟವಾಡಿದ ನಟಿಗೆ ಕ್ಲಾಸ್ ತಗೆದುಕೊಂಡ ನೆಟ್ಟಿಗರು

    ಸಂಜನಾ ತಲೆ ಬೋಳಿಸಿಕೊಂಡಿದ್ದು ಸುಳ್ಳೇ ಸುಳ್ಳು : ಭಾವನೆಗಳ ಜೊತೆ ಆಟವಾಡಿದ ನಟಿಗೆ ಕ್ಲಾಸ್ ತಗೆದುಕೊಂಡ ನೆಟ್ಟಿಗರು

    ಮಾಜಮುಖಿ ಕಾರ್ಯಕ್ಕಾಗಿ ನಟಿ ಸಂಜನಾ ಗರ್ಲಾನಿ ಕೇಶಮುಂಡನ ಮಾಡಿಸಿಕೊಂಡಿದ್ದಾರೆ ಎಂಬ ಸುದ್ದಿ ಎರಡ್ಮೂರು ದಿನಗಳಿಂದ ಹರಿದಾಡುತ್ತಿತ್ತು. ತುಂಬು ಗರ್ಭಿಣಿಯಾಗಿರುವ ಸಂಜನಾ ಹೀಗೇಕೆ ಮಾಡಿಕೊಂಡರು ಎನ್ನುವ ಚರ್ಚೆ ಕೂಡ ನಡೆದಿತ್ತು. ಅವರು ಮದುವೆ ಆಗಿದ್ದು ಬೇರೆ ಧರ್ಮದ ಹುಡುಗನಾಗಿದ್ದರಿಂದ, ಆ ಕುಟುಂಬ ತಲೆ ಬೋಳಿಸಿಕೊಳ್ಳಲು ಒಪ್ಪುತ್ತದಾ ಎನ್ನುವ ಅನುಮಾನವೂ ಮೂಡಿತ್ತು. ಏನೇ ಆದರೂ, ಒಳ್ಳೆಯ ಕೆಲಸಕ್ಕಾಗಿ ಅವರು ಕೇಶಮುಂಡನ ಮಾಡಿಸಿದ್ದರಿಂದ ನಾಡಿಗೆ ನಾಡೇ ಅವರನ್ನು ಹೊಗಳಿತ್ತು. ಇದೀಗ ನಂಬಿದ ಎಲ್ಲರಿಗೂ ಸಂಜನಾ ಫೂಲ್ ಮಾಡಿದ್ದಾರೆ. ಇದನ್ನೂ ಓದಿ: ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದು ಹೇಳಿ ನಾಚಿ ನೀರಾದ ಆಲಿಯಾ

    ದೇವರಿಗೆ ಹರಕೆ ಹೊತ್ತಿರಬಹುದು ಅಥವಾ ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿರಬಹುದು ಎಂದು ನಂಬಿದ್ದ ಜನಕ್ಕೆ ಸಂಜನಾ ಫೂಲ್ ಮಾಡಿದ್ದರ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಈ ರೀತಿ ಭಾವನಾತ್ಮಕವಾಗಿ ಯಾರೊಂದಿಗೂ ಆಟ ಆಡಬಾರದು ಎಂದು ಕೆಲವರು ಕಟುವಾಗಿಯೇ ತಿವಿದಿದ್ದರೆ, ಇದು ಫೇಕ್ ಎಂದು ಮೊದಲೇ ಗೊತ್ತಿತ್ತು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಟ್ರೋಲ್ ಪೇಜ್ ಗಳು ಮಾತ್ರ ಸಂಜನಾ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿವೆ. ಇದೊಂದು ಭಾವನಾತ್ಮಕ ವಿಷಯವಾಗಿದ್ದರಿಂದ ಈ ರೀತಿಯಾಗಿ ಜನರನ್ನು ಮೂರ್ಖರನ್ನಾಗಿ ಮಾಡಬಾರದು ಎಂದು ಅಭಿಮಾನಿಗಳು ಗರಂ ಆಗಿದ್ದಾರೆ.

     

    ಸಂಜನಾ ತಲೆ ಬೋಳಿಸಿಕೊಂಡಿದ್ದು ಸುಳ್ಳು, ಅದು ಕೇವಲ ಏಪ್ರಿಲ್ ಫೂಲ್ ಗಾಗಿ ಮಾಡಿದ್ದು ಎಂದು ಮನವರಿಕೆ ಮಾಡಿಕೊಡಲು ಸಂಜನಾ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.  ಅದಕ್ಕೂ ಮುನ್ನ ಬೋಳು ತಲೆಯ  ಫೋಟೋ ಹಾಕಿ ‘ಚೆಲುವು ಎನ್ನುವುದು ನೋಡುವವರ ಕಣ್ಣಿನಲ್ಲಿದೆ. ನಾನು ದೇವರ ಮೇಲಿಟ್ಟ ನಂಬಿಕೆಗಾಗಿ ನನ್ನ ತಲೆಗೂದಲನ್ನು ನಾನು ತ್ಯಾಗ ಮಾಡಿದ್ದೇನೆ.  ನಾನು ಈಗಾಗಲೇ ಅನೇಕ ಸಂಕಷ್ಟಗಳನ್ನು ದಾಟಿಕೊಂಡು ಬಂದಿದ್ದೇನೆ. ಅವೆಲ್ಲದಕ್ಕೂ ಶಕ್ತಿ ಕೊಟ್ಟಿದ್ದು ದೇವರು. ಹಾಗಾಗಿ ನಾನು ದೇವರಿಗೆ ಅವುಗಳನ್ನು ಅರ್ಪಿಸಿದ್ದೇನೆ. ನನ್ನ ಮಗುವಿಗಾಗಿ ನಾನು ಹರಕೆ ತೀರಿಸಿದ್ದೇನೆ’ ಹೀಗೆ ಭಾವನಾತ್ಮಕವಾಗಿ ಕರಳು ಹಿಂಡುವಂತೆ ಫೋಟೋ ಜತೆ ಬರೆದುಕೊಂಡಿದ್ದರು. ಇದನ್ನೂ ಓದಿ : ನೀನಾಸಂ ಸತೀಶ್ ಫಸ್ಟ್ ಫೋಟೋ ಶೂಟ್ ಸ್ಟೋರಿ ವಿತ್ ಫೋಟೋ ಆಲ್ಬಂ

    ತಮಗೆ ಪ್ರಚಾರದ ಅಗತ್ಯವಿಲ್ಲವೆಂದು ಹಲವಾರು ಭಾರೀ ಸಂಜನಾ ಹೇಳಿಕೊಂಡಿದ್ದರೂ, ತಲೆ ಬೋಳಿಸಿದ ಫೋಟೋವನ್ನು ಹಾಕಿರುವುದು ಏತಕ್ಕೆ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ತಲೆ ಬೋಳಿಸಿಕೊಂಡಿರುವ ಫೋಟೋ ಅಷ್ಟೇ ಹಾಕಿದ್ದರೆ  ಇಷ್ಟೊಂದು ಸಮಸ್ಯೆ ಆಗುತ್ತಿರಲಿಲ್ಲ. ಆ ಫೋಟೋ ಜತೆ ಹಾಕಿರುವ ಅಕ್ಷರಗಳ ಸಾಲುಗಳು ಅಭಿಮಾನಿಗಳನ್ನು ಕೆರಳಿಸಿವೆ. ಧಾರ್ಮಿಕ ಹೆಸರಿನಲ್ಲಿ ಈ ರೀತಿ ಆಟ ಆಡುವುದು ಸರಿಯಲ್ಲ ಎಂದು ಖಾರವಾಗಿಯೇ ಕೆಲವರು ಪ್ರತಿಕ್ರಿಯೆ ನೀಡಿದ್ದಾರೆ.

  • ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಫ್ಯಾಶನ್ ಐಕಾನ್ ಪ್ರಸಾದ್ ಬಿದ್ದಪ್ಪ ಪುತ್ರ ಆಡಂ ಬಿದ್ದಪ್ಪ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ ನಟಿ ಸಂಜನಾ. ಮಾಧ್ಯಮಗಳ ಜತೆ ಮಾತನಾಡಿದ ಅವರು, “ಆಡಂ ನನಗೆ ನೇರವಾಗಿ ಪರಿಚಯವೇ ಇಲ್ಲ. ಅವರ ತಂದೆಯೊಂದಿಗೆ ನಾನು ಕೆಲಸ ಮಾಡಿದ್ದೇನೆ. ಅವರು ತುಂಬಾ ಒಳ್ಳೆಯವರು. ಆದರೆ, ಈ ಹುಡುಗನಿಗೆ ಏನಾಗಿದೆ ಅಂತ ನನಗೆ ಗೊತ್ತಿಲ್ಲ. ರಾತ್ರಿಯೆಲ್ಲ ಅಶ್ಲೀಲ ಮಸೇಜ್ ಕಳಿಸ್ತಾನೆ. ತನ್ನೊಂದಿಗೆ ಚಾಟ್ ಮಾಡುವಂತೆ ಒತ್ತಾಯಿಸುತ್ತಾನೆ. ಖಾರವಾಗಿ ನಾನು ರಿಯಾಕ್ಟ್ ಮಾಡಿದಾಗ, ನನ್ನ ಮುಗಿಸ್ಬಿಡ್ತೀನಿ ಅಂತ ಹೆದರಿಸುತ್ತಾನೆ’ ಎಂದು ನಟ ಸಂಜನಾ ಆರೋಪಿಸುತ್ತಾರೆ. ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಇಂತಹ ಕಿರಿಕಿರಿಯಿಂದಲೇ ಅವರು ಅನೇಕ ಬಾರಿ ಮೊಬೈಲ್ ನಂಬರ್ ಬದಲಾಯಿಸಿದ್ದಾರಂತೆ. ಮತ್ತೆ ಮತ್ತೆ ನಂಬರ್ ಬದಲಾಯಿಸಿದರೆ, ವೃತ್ತಿಗೆ ತೊಂದರೆ ಆಗುವುದರಿಂದ ಇನ್ಮುಂದೆ ಇಂತಹ ಘಟನೆಗಳನ್ನು ಅವರು ಗಂಭೀರವಾಗಿಯೇ ತಗೆದುಕೊಳ್ಳುತ್ತಾರಂತೆ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಪ್ರಕರಣವನ್ನು ಅಂತ್ಯದವರೆಗೂ ತಗೆದುಕೊಂಡು ಹೋಗುವುದಾಗಿಯೂ ಅವರು ಮಾತನಾಡಿದ್ದಾರೆ. ಏಳು ತಿಂಗಳು ಗರ್ಭಿಣಿಯಾಗಿರುವ ಸಂಜನಾಗೆ ತುಂಬಾ ಮಾನಸಿಕ ಹಿಂಸೆ ಕೊಡುವಂತಹ ಕೆಲಸಗಳು ನಡೆಯುತ್ತಿವೆಯಂತೆ. ಹಾಗಾಗಿ ಪೊಲೀಸ್ ರ ಮೊರೆ ಹೋಗುವುದು ಅನಿವಾರ್ಯ ಅಂದಿದ್ದಾರೆ. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು

    ಪ್ರಸಾದ್ ಬಿದ್ದಪ್ಪ ಪುತ್ರ ಆಡಂನನ್ನು ಈಗಾಗಲೇ ಇಂದಿರಾ ನಗರ ಪೊಲೀಸ್ ರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಆಗಲೇ ಅವನು ಸಂಜನಾ ಜತೆ ಮಾಡಿದ್ದ ಚಾಟ್ ಗಳನ್ನು ಡಿಲಿಟ್ ಮಾಡಿದ್ದಾನೆ ಎನ್ನಲಾಗುತ್ತಿದೆ. ಡಿಲಿಟ್ ಆದ ಚಾಟ್ ಅನ್ನು ಮತ್ತೆ ಪಡೆಯುವ ಪ್ರಯತ್ನ ಮಾಡುತ್ತಿದ್ದಾರಂತೆ ಪೊಲೀಸ್ ಅಧಿಕಾರಿಗಳು.

  • ನಟಿಯರಿಗೆ ಸಂಕಷ್ಟ: ಎಫ್‌ಎಸ್‌ಎಲ್‌ ವರದಿಯಲ್ಲಿ ಡ್ರಗ್ಸ್‌ ಸೇವನೆ ಸಾಬೀತು

    ನಟಿಯರಿಗೆ ಸಂಕಷ್ಟ: ಎಫ್‌ಎಸ್‌ಎಲ್‌ ವರದಿಯಲ್ಲಿ ಡ್ರಗ್ಸ್‌ ಸೇವನೆ ಸಾಬೀತು

    ಬೆಂಗಳೂರು: ಡ್ರಗ್ಸ್‌ ಸೇವನೆ ಪ್ರಕರಣದಲ್ಲಿ ಸ್ಯಾಂಡಲ್‍ವುಡ್ ನಟಿಯರಾದ ರಾಗಿಣಿ, ಸಂಜನಾ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಆರೋಪಿಗಳು ಡ್ರಗ್ಸ್‌ ಸೇವಿಸಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿಯಲ್ಲಿ ಸಾಬೀತಾಗಿದೆ.

    ಎಫ್‌ಎಸ್‌ಎಲ್‌ ವರದಿ ಆಧಾರಿಸಿ ಆರೋಪಿಗಳ ವಿರುದ್ಧ ಸಿಸಿಬಿ ಅಧಿಕಾರಿಗಳು 2,500 ಪುಟಗಳ ಹೆಚ್ಚುವರಿ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಹೈಕೋರ್ಟ್‍ಗೆ ಸಲ್ಲಿಸಿರುವ ಹೆಚ್ಚುವರಿ ಚಾರ್ಜ್‍ಶೀಟ್‍ನಲ್ಲಿ ಡ್ರಗ್ ಪೆಡ್ಲರ್ ಲೂಮ್ ಪೆಪ್ಪರ್ ಜೊತೆ ನಟಿಯರು ನೇರ ಸಂಪರ್ಕ ಹೊಂದಿರುವ ಬಗ್ಗೆಯೂ ಉಲ್ಲೇಖವಾಗಿದೆ.

    ಮನೆಯಲ್ಲಿ ಸಿಕ್ಕ ವಸ್ತುಗಳಲ್ಲಿ, ಹೇರ್‌ ಫೋಲಿಕಲ್‌ ಟೆಸ್ಟ್‌ನಲ್ಲಿ ಡ್ರಗ್ಸ್ ಅಂಶ ಸಾಬೀತಾಗಿದೆ. ಇದರ ಆರೋಪಿಗಳ ಮಧ್ಯೆ ಹಣ ವರ್ಗಾವಣೆಯಾಗಿದ್ದಕ್ಕೆ ಬ್ಯಾಂಕ್‌ ಸ್ಟೇಟ್‌ಮೆಂಟ್‌ ದಾಖಲೆಗಳನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ರಾಗಿಣಿ ಕೇಸ್ ಉಲ್ಲೇಖ, ಆರ್ಯನ್‍ಗೆ ಜಾಮೀನು ನೀಡಿ – ಮುಕುಲ್ ರೊಹ್ಟಗಿ ವಾದ

    ಇದುವರೆಗೂ 4,000 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆಯಾಗಿದ್ದು, ಇನ್ನೂ 1,500 ಪುಟಗಳ ಹೆಚ್ಚುವರಿ ಚಾರ್ಜ್‍ಶೀಟ್ ಸಲ್ಲಿಸಲು ಸಿಸಿಬಿ ತಯಾರಿ ನಡೆಸಿದೆ. ಇದನ್ನೂ ಓದಿ: ಡ್ರಗ್ಸ್‌ ನಟಿಯರಿಗೆ ಹೇರ್ ಫೋಲಿಕಲ್ ಟೆಸ್ಟ್‌ – ಏನಿದು ಟೆಸ್ಟ್‌? ನಿಖರ ಹೇಗೆ?

  • ಆಸ್ತಿಗಾಗಿ ಸಂಜನಾ, ರಾಗಿಣಿ ಜಾಮೀನಿಗಾಗಿ ಬೆದರಿಕೆ ಪತ್ರ – ಇಬ್ಬರ ಬಂಧನ

    ಆಸ್ತಿಗಾಗಿ ಸಂಜನಾ, ರಾಗಿಣಿ ಜಾಮೀನಿಗಾಗಿ ಬೆದರಿಕೆ ಪತ್ರ – ಇಬ್ಬರ ಬಂಧನ

    ತುಮಕೂರು: ಬೆಂಗಳೂರಿನ ಎನ್‍ಡಿಪಿಎಸ್ ಕೋರ್ಟಿನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರರಕಣದಲ್ಲಿ ಟ್ವಿಸ್ಟ್ ಲಭಿಸಿದ್ದು, ಕೌಟುಂಬಿಕ ಕಲಹದ ದ್ವೇಷದ ಕಾರಣದಿಂದ ಬಾಂಬ್ ಬೆದರಿಕೆ ಹಾಕಲಾಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಪಟೂರು ಮೂಲದ ರಾಜಶೇಖರ್ ಹಾಗೂ ಗುಬ್ಬಿ ತಾಲೂಕು ಹಾಗಲವಾಡಿ ಮೂಲದ ವೇದಾಂತ ಎಂಬವರನ್ನು ಬಂಧಿಸಲಾಗಿದೆ. ಕೌಟುಂಬ ಕಲಹದ ದ್ವೇಷ ಕಾರಣದಿಂದ ರಾಜಶೇಖರ್ ಪತ್ರವನ್ನು ಕಳುಹಿಸಿದ್ದ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭಿಸಿದೆ.

    ಕೌಟುಂಬಿಕ ಕಲಹ: ಸದ್ಯ ಬಂಧನವಾಗಿರುವ ರಾಜಶೇಖರ್, ರಮೇಶ್ ಎಂಬಾತನ ಮೇಲೆ ದ್ವೇಷ ಸಾಧಿಸಲು ಪತ್ರ ಕಳುಹಿಸಿದ್ದ ಎನ್ನಲಾಗಿದೆ. ಈ ಇಬ್ಬರು ಒಂದೇ ಕುಟುಂಬದಲ್ಲಿ ಮದುವೆಯಾಗಿದ್ದಾರೆ. ಕೆಲ ಸಮಯದಿಂದ ರಾಜಶೇಖರ್ ಹಾಗೂ ರಮೇಶ್ ನಡುವೆ ಆಸ್ತಿ ವಿಚಾರವಾಗಿ ಜಗಳವಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ರಮೇಶ್‍ನನ್ನು ಸಿಲುಕಿಸಲು ಪ್ಲಾನ್ ಮಾಡಿದ್ದ ರಾಜಶೇಖರ್, ವೇದಾಂತನ ಸಹಾಯ ಪಡೆದು ಪತ್ರ ಬರೆಯಿಸಿದ್ದ. ಆ ಬಳಿಕ ಚೇಳೂರು ಅಂಚೆ ಕಚೇರಿಯಿಂದ ಪೋಸ್ಟ್ ಮಾಡಿದ್ದ.

    ರಾಜಶೇಖರ್ ಮಾವನ ಮನೆಯ ಆಸ್ತಿಗಾಗಿ ಅವರ ಇಬ್ಬರು ಮಕ್ಕಳನ್ನು ಮದುವೆ ಆಗಬೇಕು ಎಂದು ಪ್ಲಾನ್ ಮಾಡಿದ್ದ. ಆದರೆ ಅದು ಫಲಕಾರಿ ಆಗಿರಲಿಲ್ಲ. ಕಳೆದ 9 ತಿಂಗಳ ಹಿಂದೆ ರಮೇಶ್ ಅದೇ ಮನೆಯಲ್ಲಿ ಮದುವೆಯಾಗಿದ್ದ, ಪರಿಣಾಮ ಆತನ ವಿರುದ್ಧ ಪಿತೂರಿ ಮಾಡಿದ್ದ ರಾಜಶೇಖರ್ ಪತ್ರ ಬರೆದಿದ್ದ. ಸದ್ಯ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

    ರಾಜಶೇಖರ್ ಆಸ್ತಿಗಾಗಿ ಕಳೆದ ವರ್ಷಗಳಿಂದ ನಾಟಕ ಮಾಡುತ್ತಿದ್ದ. ಅತ್ತೆ, ಹೆಂಡತಿ, ಮಾವ, ನಾದಿನಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡುತ್ತಿದ್ದ. ಈ ಹಿಂದೆ 2019ರಲ್ಲಿ ನಕಲಿ ಛಾಪಾ ಕಾಗದ ಸೃಷ್ಟಿ ಮಾಡಿ ರಮೇಶ್ ಹಾಗೂ ಮಾವನ ಮೇಲೆ ಆರೋಪ ಮಾಡಿದ್ದ. ಛಾಪಾಕಾಗದಲ್ಲಿ ಒಂದೂವರೆ ಲಕ್ಷಕ್ಕೆ ಮಗಳನ್ನೇ ಮಾರಾಟ ಮಾಡಿದ್ದಾರೆ ಎಂದು ಸೃಷ್ಟಿಸಿ ಆರೋಪಿಸಿದ್ದ. ಈ ವೇಳೆ ನಕಲಿ ಛಾಪಾಕಾಗದ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಈ ವೇಳೆ ಚೇಳೂರು ಪೊಲೀಸರು ರಾಜಶೇಖರನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಪೊಲೀಸರ ಎಚ್ಚರಿಕೆಯನ್ನು ಲಘುವಾಗಿ ಪರಿಗಣಿಸಿದ ರಾಜಶೇಖರ್ ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದ ಎರಡು ಪ್ರಮುಖ ಪ್ರಕರಣಗಳ ಹೆಸರು ಬಳಿಸಿಕೊಂಡು ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬರೆದು ಆ ಆರೋಪವನ್ನು ರಮೇಶ್ ಮೇಲೆ ಹೋಗುವಂತೆ ಮಾಡಿದ್ದ ಎಂಬ ಮಾಹಿತಿ ಲಭಿಸಿದೆ.

  • ರಾಗಿಣಿ, ಸಂಜನಾ ಜಾಮೀನಿಗಾಗಿ ಬೆದರಿಕೆ ಪತ್ರ – ನಾಲ್ವರು ಪೊಲೀಸರ ವಶಕ್ಕೆ

    ರಾಗಿಣಿ, ಸಂಜನಾ ಜಾಮೀನಿಗಾಗಿ ಬೆದರಿಕೆ ಪತ್ರ – ನಾಲ್ವರು ಪೊಲೀಸರ ವಶಕ್ಕೆ

    ಬೆಂಗಳೂರು: ರಾಗಿಣಿ ಮತ್ತು ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

    ಡ್ರಗ್ಸ್ ಕೇಸಿನಲ್ಲಿ ಅರೆಸ್ಟ್ ಆಗಿರುವ ನಟಿಯಾರ ರಾಗಿಣಿ ಮತ್ತು ಸಂಜಾನ ಅವರಿಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂದು ನಿನ್ನೆ ಬೆದರಿಕೆ ಪತ್ರವನ್ನು ಬರೆಯಲಾಗಿತ್ತು. ಜೊತೆಗೆ ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, ಜಂಟಿ ಪೊಲೀಸ್ ಆಯುಕ್ತ, ಸಂದೀಪ್ ಪಾಟೀಲ್ ಮತ್ತು ಡಿಸಿಪಿ ರವಿಕುಮಾರಿಗೆ ಪತ್ರ ಬರೆದಿದ್ದರು.

    ಈ ಬೆದರಿಕೆ ಪತ್ರವನ್ನು ದ್ವೇಷದ ಹಿನ್ನೆಲೆಯಲ್ಲಿ ಬರೆಯಲಾಗಿದೆ ಎಂದು ಶಂಕಿಸಲಾಗಿದೆ. ಪತ್ರ ಕಳುಹಿಸಿರುವ ವ್ಯಕ್ತಿ ಪತ್ರದ ಜೊತೆಗೆ ವ್ಯಕ್ತಿಯೊಬ್ಬರ ವೋಟರ್ ಐಡಿ ಮತ್ತು ಎರಡು ಮೊಬೈಲ್ ನಂಬರ್ ಕಳುಹಿಸಿದ್ದ. ಪತ್ರದಲ್ಲಿರುವ ವೋಟರ್ ಐಡಿ ಕೊಡಿಯಳ್ಳಿ ಪಂಚಾಯತ್, ಹರಿವೇಸಂದ್ರ ಗ್ರಾಮ ಶಿವಪ್ರಕಾಶ್ ಎಂಬ ಹೆಸರಿನಲ್ಲಿದೆ. ಈ ಬೆದರಿಕೆ ಪತ್ರಗಳು ನಿನ್ನೆ ಸಂಜೆ ಐದು ಗಂಟೆ ವೇಳೆ ಬಂದಿದ್ದವು.

    ಎನ್‍ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಪತ್ರ ಬಂದಿದ್ದು, ನಟಿ ಸಂಜನಾ ಮತ್ತು ರಾಗಿಣಿಗೆ ಜಾಮೀನು ನೀಡಬೇಕು. ಇಲ್ಲವಾದಲ್ಲಿ ಕಾರು ಉಡಾಯಿಸೋದಾಗಿ ಹೇಳಲಾಗಿದೆ. ಇದಲ್ಲದೆ ಸಿಸಿಬಿ ಡಿಸಿಪಿ ರವಿಕುಮಾರ್ ಮತ್ತು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಗೆ ಸಹ ಬೆದರಿಕೆ ಪತ್ರ ಬಂದಿದೆ. ಡ್ರಗ್ ಕೇಸ್ ಹಾಗು ಡಿಜೆ ಹಳ್ಳಿ ಕೇಸ್ ತನಿಖೆ ನಿಲ್ಲಿಸದಿದ್ರೆ ಸರಿ ಇರೋದಿಲ್ಲ ಅಂತಾ ಕೂಡ ಎಚ್ಚರಿಸಲಾಗಿದೆ. ತುಮಕೂರಿನಿಂದ ಬಂದಿರುವ ಅನಾಮಧೇಯ ಪತ್ರದಲ್ಲಿ ಬಾಂಬ್ ಇದೆ ಅಂತಾ ಹೆದರಿಸಲಾಗಿತ್ತು. ಪತ್ರದ ಒಳಗೆ ಕೇಬಲ್ ವೈರ್ ಮತ್ತು ಬಂಡೆ ಕತ್ತರಿಸಲು ಬಳಸುವ ಡಿಟೋನೇಟರ್ ಇತ್ತು.

  • ಪರಪ್ಪನ ಅಗ್ರಹಾರ ಜೈಲಲ್ಲೇ ಸಂಜನಾ ಹುಟ್ಟುಹಬ್ಬ

    ಪರಪ್ಪನ ಅಗ್ರಹಾರ ಜೈಲಲ್ಲೇ ಸಂಜನಾ ಹುಟ್ಟುಹಬ್ಬ

    ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ. ಇದನ್ನೂ ಓದಿ: ನಟಿ ಸಂಜನಾ ಹೆಸರಲ್ಲಿದೆ ಬರೋಬ್ಬರಿ 11 ಬ್ಯಾಂಕ್ ಅಕೌಂಟ್!

    ‘ಗಂಡ ಹೆಂಡತಿ’ ಬೆಡಗಿಯ ವಿಶೇಷ ದಿನಕ್ಕೆ ಡ್ರಗ್ಸ್ ಮಾಫಿಯಾ ಕಾವು ತಟ್ಟಿದೆ. ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ.  ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಲ್ಲಿ ರಾಗಿಣಿ, ಸಂಜನಾಗೆ ರಾಜಾತಿಥ್ಯ

    ಸಾಮಾನ್ಯವಾಗಿ ಸಂಜನಾ ತಮ್ಮ ಹುಟ್ಟುಹಬ್ಬಕ್ಕೂ ಎರಡು ದಿನದ ಮುಂಚೆಯೇ ಬರ್ತ್ ಡೇ ಸೆಲೆಬ್ರೇಷನ್‍ನಲ್ಲಿ ಬ್ಯುಸಿಯಾಗುತ್ತಿದ್ದರು. ಪ್ರತಿವರ್ಷ ಸಂಜನಾ ಹುಟ್ಟುಹಬ್ಬಕ್ಕಾಗಿ ನಟಿಯ ಆಪ್ತ ರಾಹುಲ್ ಅದ್ಧೂರಿಯಾಗಿ ಪಾರ್ಟಿಯನ್ನು ಏರ್ಪಡಿಸುತ್ತಿದ್ದ. ಆದರೆ ಇಂದು ರಾಹುಲ್ ಕೂಡ ಜೈಲಿನಲ್ಲಿದ್ದು, ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಲು ಕೂಡ ಸಾಧ್ಯವಾಗಿಲ್ಲ.

    ಕಳೆದ ವರ್ಷ ಬೆಂಗಳೂರು ಹಾಗೂ ಮುಂಬೈನಲ್ಲಿ ಸಂಜನಾ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದರು. ಅಲ್ಲದೇ ಕಳೆದ ಬಾರಿಯ ಸಂಜನಾ ಬರ್ತ್ ಡೇ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ. ಆದರೆ ಈ ಬಾರಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಸಂಜನಾ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಬೇಕಾಗಿದೆ.

    ಕಳೆದ ಒಂದೂವರೆ ತಿಂಗಳಿಂದ ಜೈಲಿನಲ್ಲಿರುವ ನಟಿಯರಾದ ಸಂಜನಾ ಮತ್ತು ರಾಗಿಣಿಗೆ ಶುಕ್ರವಾರ ಕೂಡ ಜಾಮೀನು ಸಿಗಲಿಲ್ಲ. ಬದಲಿಗೆ ಇಬ್ಬರು ನಟಿಯರ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗಿದೆ. ಅಕ್ಟೋಬರ್ 23ರವರೆಗೆ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ವಿಸ್ತರಿಸಿ ಎನ್‍ಡಿಪಿಎಸ್ ವಿಶೇಷ ಕೋರ್ಟ್ ಆದೇಶ ನೀಡಿದೆ.