Tag: Sanjay Raut

  • ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋದಿ ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ: ಸಂಜಯ್ ರಾವತ್

    ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋದಿ ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ: ಸಂಜಯ್ ರಾವತ್

    – 2029ರಲ್ಲೂ ಮೋದಿಯೇ ಪ್ರಧಾನಿ, ಸಂಜಯ್ ರಾವತ್‌ಗೆ ಮೊಘಲರ ಮನಸ್ಥಿತಿ ಎಂದ ಫಡ್ನವಿಸ್

    ನವದೆಹಲಿ: ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ (Narendra Modi) ಭಾನುವಾರ ನಾಗ್ಪುರದ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆರ್‌ಎಸ್‌ಎಸ್ ಕಚೇರಿಗೆ ಪ್ರಧಾನಿ ಭೇಟಿಯನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಟೀಕಿಸಿದ್ದಾರೆ.

     

    ಪ್ರಧಾನಿ ಮೋದಿಗೆ ಸೆಪ್ಟೆಂಬರ್ 17ಕ್ಕೆ 75 ವರ್ಷ ತುಂಬಲಿದೆ. ಅವರ ಪಕ್ಷದ ನಿಯಮದಂತೆ ನಿವೃತ್ತರಾಗಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ, ತಮ್ಮ ನಿವೃತ್ತಿ ಅರ್ಜಿಯನ್ನು ಆರ್‌ಎಸ್‌ಎಸ್ ಕಚೇರಿಯಲ್ಲಿ ಸಲ್ಲಿಸಿರಬಹುದು. ಅಲ್ಲಿ ಗೌಪ್ಯವಾಗಿ ಚರ್ಚೆಯೂ ನಡೆದಿದೆ. ಅಲ್ಲದೇ ಸಂಘ ಪರಿವಾರವೂ ದೇಶದ ನಾಯಕತ್ವದಲ್ಲಿ ಬದಲಾವಣೆ ಬಯಸಿದೆ. ಪ್ರಧಾನಿ ಮೋದಿ ಕಾಲ ಮುಗಿದಿದೆ. ಅವರೂ ಕೂಡ ಬದಲಾವಣೆ ಬಯಸುತ್ತಾರೆ ಎಂದು ಸಂಜಯ್ ರಾವತ್ (Sanjay Raut) ಹೇಳಿದ್ದಾರೆ. ಇದನ್ನೂ ಓದಿ: ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ‌

    ಸಂಜಯ್ ಮಾತಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) ಕಿಡಿಕಾರಿದ್ದಾರೆ. ಮೋದಿ ಉತ್ತರಾಧಿಕಾರಿಯನ್ನು ಹುಡುಕುವ ಪ್ರಶ್ನೆಯೇ ಇಲ್ಲ. ಮೋದಿ ನಮ್ಮ ನಾಯಕರು, ಅವರೇ ಮುಂದುವರಿಯುತ್ತಾರೆ. ಒಬ್ಬ ನಾಯಕ ಸಕ್ರಿಯನಾಗಿದ್ದಾಗ, ಅವನ ಉತ್ತರಾಧಿಕಾರದ ಬಗ್ಗೆ ಮಾತನಾಡುವುದು ಸರಿಯಲ್ಲ. ನಮ್ಮ ಸಮಾಜದಲ್ಲಿ ತಂದೆ ಜೀವಂತವಾಗಿರುವಾಗ, ನಾವು ಉತ್ತರಾಧಿಕಾರದ ಬಗ್ಗೆ ಮಾತನಾಡುವುದಿಲ್ಲ. ಇದು ಮೊಘಲ್ ಸಂಸ್ಕೃತಿ, ನಮ್ಮದಲ್ಲ. ಅದರ ಸಮಯ ಇನ್ನೂ ಬಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಏ.2ಕ್ಕೆ ವಕ್ಫ್ ತಿದ್ದುಪಡಿ ಬಿಲ್‌ಗೆ ಕೇಂದ್ರ ಸಿದ್ಧತೆ – ಈಗ ಏನಿದೆ? ಏನು ಬದಲಾಗಲಿದೆ?

  • ಮುಂಬೈ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಶಿವಸೇನೆ ಉದ್ಧವ್ ಬಣ – ಸಂಜಯ್ ರಾವತ್ ಸುಳಿವು

    ಮುಂಬೈ ಪಾಲಿಕೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಶಿವಸೇನೆ ಉದ್ಧವ್ ಬಣ – ಸಂಜಯ್ ರಾವತ್ ಸುಳಿವು

    ಮುಂಬೈ: ಪಾಲಿಕೆ ಚುನಾವಣೆಯಲ್ಲಿ ಶಿವಸೇನೆ ಉದ್ಧವ್‌ ಠಾಕ್ರೆ (Uddhav Thackeray) ಬಣ ಏಕಾಂಗಿಯಾಗಿ ಸ್ಪರ್ಧಿಸುವ ಬಗ್ಗೆ ಸಂಜಯ್‌ ರಾವತ್‌ (Sanjay Raut) ಸುಳಿವು ನೀಡಿದ್ದಾರೆ.

    ಬೃಹತ್‌ ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಬಹುದು. ಕಾರ್ಯಕರ್ತರು ಏಕಾಂಗಿ ಹೋರಾಟ ಬಯಸಿದ್ದಾರೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಹಿಂಟ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಹೇಳಿಕೆಗೆ ತಿರುಗೇಟು – ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

    ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆಗಿಂತ ಹೆಚ್ಚಿನ ಆಕಾಂಕ್ಷಿಗಳು ಇದ್ದಾರೆ. ಆದ್ದರಿಂದ ಪಕ್ಷದ ಕಾರ್ಯಕರ್ತರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಬೇಕೆಂದು ಬಯಸಿದ್ದಾರೆಂದು ತಿಳಿಸಿದ್ದಾರೆ.

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, MVA ಮೈತ್ರಿಯು ಭಿನ್ನಾಭಿಪ್ರಾಯದ ನಿದರ್ಶನಗಳಿಗೆ ಸಾಕ್ಷಿಯಾಗಿದೆ. ಮೈತ್ರಿ ಪಾಲುದಾರರು ಸಮನ್ವಯದ ಕೊರತೆ ಮತ್ತು ಲೋಕಸಭೆ ಚುನಾವಣೆಯ ಆವೇಗವನ್ನು ಬಳಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಪರಸ್ಪರ ಆರೋಪಿಸಿಕೊಂಡಿದ್ದಾರೆ. ಹಿನ್ನಡೆಯ ನಡುವೆಯೂ ಎಂವಿಎ ಪ್ರಬಲವಾಗಿದೆ ಎಂದು ಮೈತ್ರಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ಚುನಾವಣೆಗೂ ಮುನ್ನವೇ ಕೇಜ್ರಿವಾಲ್‌ಗೆ ದೊಡ್ಡ ಸಂಕಷ್ಟ – ಇಡಿ ತನಿಖೆಗೆ ರಾಜ್ಯಪಾಲರು ಅಸ್ತು

    ಮುಂಬೈ ಪಾಲಿಕೆ ಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗವು ಇನ್ನೂ ಘೋಷಿಸಿಲ್ಲ. 2025 ರ ಆರಂಭದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗಿದೆ.

  • ಬಿಜೆಪಿ ನಾಯಕನ ಪತ್ನಿ ವಿರುದ್ಧ ಮಾನಹಾನಿ ಹೇಳಿಕೆ – ಸಂಜಯ್ ರಾವತ್‍ಗೆ 15 ದಿನಗಳ ಜೈಲು!

    ಬಿಜೆಪಿ ನಾಯಕನ ಪತ್ನಿ ವಿರುದ್ಧ ಮಾನಹಾನಿ ಹೇಳಿಕೆ – ಸಂಜಯ್ ರಾವತ್‍ಗೆ 15 ದಿನಗಳ ಜೈಲು!

    ಮುಂಬೈ: ಸಂಸದ ಮತ್ತು ಶಿವಸೇನೆ (UBT) ನಾಯಕ ಸಂಜಯ್ ರಾವತ್ ಅವರನ್ನು ಮಾನನಷ್ಟ ಪ್ರಕರಣದಲ್ಲಿ (Defamation Case) ದೋಷಿ ಎಂದು ಮಜಗಾಂವ್‍ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ನೀಡಿ, 25,000 ರೂ.ದಂಡ ಹಾಗೂ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

    ಬಿಜೆಪಿ (BJP) ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿತ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು.

    ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದ 100 ಕೋಟಿ ರೂ. ಹಗರಣದಲ್ಲಿ ತಾನು ಮತ್ತು ತನ್ನ ಪತಿ ಭಾಗಿಯಾಗಿದ್ದಾರೆ ಎಂದು ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ರಾವತ್ ಮಾಡಿದ್ದಾರೆ ಎಂದು ಆರೋಪಿಸಿ ಮೇಧಾ ಸೋಮಯ್ಯ ಅರ್ಜಿ ಸಲ್ಲಿಸಿದ್ದರು.

    ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು, 25,000 ರೂ. ದಂಡ ವಿಧಿಸಿಸಿದೆ ಎಂದು ಡಾ.ಮೇಧಾ ಸೋಮಯ್ಯ ಪರ ವಕೀಲ ವಿವೇಕಾನಂದ ಗುಪ್ತಾ ಹೇಳಿದ್ದಾರೆ.

  • ಕಾಂಗ್ರೆಸ್‌ ಇಲ್ಲದೇ ಇದ್ದಿದ್ರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ: ಸಂಜಯ್‌ ರಾವತ್‌

    ಕಾಂಗ್ರೆಸ್‌ ಇಲ್ಲದೇ ಇದ್ದಿದ್ರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ: ಸಂಜಯ್‌ ರಾವತ್‌

    – ಬಿಜೆಪಿ ಇಲ್ಲದೇ ಇದ್ದಿದ್ರೆ ದೇಶದಲ್ಲಿ ಗಲಭೆ, ಹಗರಣಗಳು ನಡೆಯುತ್ತಿರಲಿಲ್ಲ ಎಂದು ಟಾಂಗ್‌

    ಮುಂಬೈ: ಕಾಂಗ್ರೆಸ್‌ ನಾಯಕತ್ವವಿಲ್ಲದೇ ದೇಶವು ಸ್ವಾತಂತ್ರ್ಯ ಗಳಿಸುತ್ತಿರಲಿಲ್ಲ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರಲಿಲ್ಲ ಎಂದು ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಬಣದ ನಾಯಕ ಸಂಜಯ್‌ ರಾವುತ್‌ (Sanjay Raut) ಅಭಿಪ್ರಾಯಪಟ್ಟಿದ್ದಾರೆ.

    ದೇಶವನ್ನು ಒಗ್ಗಟ್ಟಿನಿಂದ ಇರಿಸಿದ್ದಕ್ಕಾಗಿ ಕಾಂಗ್ರೆಸ್‌ಗೆ (Congress) ಗೌರವ ಸಲ್ಲಿಸಿದ ರಾವುತ್‌, ಕಾಂಗ್ರೆಸ್ ಇಲ್ಲದಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ದೇಶಕ್ಕೆ ನಾಯಕತ್ವ ಸಿಗುತ್ತಿರಲಿಲ್ಲ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವು ಪ್ರಗತಿ ಸಾಧಿಸುತ್ತಿರಲಿಲ್ಲ. ಬಿಜೆಪಿಗೆ ಎಂದಿಗೂ ಅರ್ಥವಾಗದ ಇಂತಹ ಹಲವು ವಿಷಯಗಳಿವೆ. ಏಕೆಂದರೆ ಅವರು ದೇಶಕ್ಕಾಗಿ ಯೋಚಿಸುವುದಿಲ್ಲ. ಅವರು ಉದ್ಯಮಿಗಳ ಬಗ್ಗೆ ಮಾತ್ರ ಯೋಚಿಸುತ್ತಾರೆ ಎಂದು ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಸೋಮವಾರ ಬಿಜೆಪಿ ಸೇರ್ಪಡೆ: ಡಾ. ಮಂಜುನಾಥ್‌

    ಕಾಂಗ್ರೆಸ್ ಇಲ್ಲದಿದ್ದರೆ, ಪಾಕಿಸ್ತಾನವು ಎರಡು ಭಾಗಗಳಾಗಿ ವಿಭಜನೆಯಾಗುತ್ತಿರಲಿಲ್ಲ. ದೇಶವು ಒಗ್ಗಟ್ಟಾಗಿ ಉಳಿಯುತ್ತಿರಲಿಲ್ಲ. ಆದರೆ ಬಿಜೆಪಿ ದೇಶವನ್ನು ಬಡವಾಗಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ‘ಬಿಜೆಪಿ (BJP) ಇಲ್ಲದಿದ್ದಲ್ಲಿ ಬೇರೆ ವಿಷಯಗಳೇ ಇರುತ್ತಿರಲಿಲ್ಲ. ದೇಶದಲ್ಲಿ ಗಲಭೆಗಳು ನಡೆಯುತ್ತಿರಲಿಲ್ಲ. ದೇಶದ ರೂಪಾಯಿ ಗಟ್ಟಿಯಾಗುತ್ತಿತ್ತು. ಸಾಲವೂ ಕಡಿಮೆಯಾಗುತ್ತಿತ್ತು. ರಫೇಲ್‌ನಿಂದ ಚುನಾವಣಾ ಬಾಂಡ್‌ವರೆಗೆ ಹಗರಣಗಳು ನಡೆಯುತ್ತಿರಲಿಲ್ಲ ಎಂದು ರಾವುತ್‌ ಟೀಕಿಸಿದ್ದಾರೆ. ಇದನ್ನೂ ಓದಿ: ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ – ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮತ್ತು ನಟಿ ಸ್ವರಾ ಭಾಸ್ಕರ್ ಭಾನುವಾರ ಮುಂಬೈನ ಮಣಿ ಭವನ ಸಂಗ್ರಹಾಲಯದಿಂದ ‘ಜನ್ ನ್ಯಾಯ್ ಪಾದಯಾತ್ರೆ’ ನಡೆಸಿದರು. ಯಾತ್ರೆಯು ಮಣಿಭವನದಿಂದ ಆಗಸ್ಟ್ ಕ್ರಾಂತಿ ಮೈದಾನದವರೆಗಿನ ನಡೆಯಿತು.

  • ಬಿಜೆಪಿಯವರು ರಾಮ ನಮ್ಮ ಅಭ್ಯರ್ಥಿ ಅಂತಾ ಘೋಷಿಸೋದು ಒಂದೇ ಬಾಕಿ: ಸಂಜಯ್‌ ರಾವತ್

    ಬಿಜೆಪಿಯವರು ರಾಮ ನಮ್ಮ ಅಭ್ಯರ್ಥಿ ಅಂತಾ ಘೋಷಿಸೋದು ಒಂದೇ ಬಾಕಿ: ಸಂಜಯ್‌ ರಾವತ್

    ಮುಂಬೈ: ಬಿಜೆಪಿಯು (BJP) ಚುನಾವಣೆಗೆ ಭಗವಾನ್ ರಾಮನೇ (Lord Rama) ನಮ್ಮ ಅಭ್ಯರ್ಥಿ ಎಂದು ಘೋಷಿಸುವುದು ಮಾತ್ರ ಉಳಿದಿದೆ ಎಂದು ಹೇಳುವ ಮೂಲಕ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ (Sanjay Raut) ಟೀಕಿಸಿದ್ದಾರೆ.

    ಅಯೋಧ್ಯೆಯ ರಾಮಜನ್ಮಭೂಮಿ (Ayodhya Ram Mandir) ದೇಗುಲದ ಉದ್ಘಾಟನಾ ಸಮಾರಂಭದ ಆಹ್ವಾನದ ಕುರಿತು ಪ್ರತಿಕ್ರಿಯಿಸಿದ ಅವರು, ರಾಮನ ಹೆಸರಿನಲ್ಲಿ ರಾಜಕೀಯ ಮಾಡಲಾಗುತ್ತಿದೆ. ಸದ್ಯ ಬಿಜೆಪಿಯವರು ರಾಮನೇ ನಮ್ಮ ಚುನಾವಣೆಯ ಅಭ್ಯರ್ಥಿ ಎಂದು ಹೇಳುವುದು ಒಂದೇ ಬಾಕಿಯಿರುವುದು ಎಂದು ಅವರು ವಾಗ್ದಾಳಿಗಳನ್ನು ನಡೆಸಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ (Congress) ಝೀರೋದಿಂದ ಆರಂಭವಾಗಬೇಕು ಎಂಬ ತಮ್ಮ ಮೇಲಿನ ಆರೋಪದ ಕುರಿತು ಮಾತನಾಡಿ, ಕಾಂಗ್ರೆಸ್ ಶೂನ್ಯ ಎಂದು ನಾನು ಹೇಳಿಲ್ಲ. ಕಾಂಗ್ರೆಸ್‌ಗೆ ಮಹಾರಾಷ್ಟ್ರದಲ್ಲಿ ಒಬ್ಬನೇ ಒಬ್ಬ ಸಂಸದ ಇಲ್ಲ. ನಮ್ಮಲ್ಲಿ 18 ಸಂಸದರಿದ್ದು, ಅದರಲ್ಲಿ ಕೆಲವರು ಹೋಗಿದ್ದಾರೆ. ಈಗ ನಮ್ಮಲ್ಲಿ 6 ಸಂಸದರಿದ್ದಾರೆ ಎಂದರು. ಇದನ್ನೂ ಓದಿ: ರಾಮಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ: ಫಾರೂಕ್‌ ಅಬ್ದುಲ್ಲಾ

    ನಮ್ಮ ಮೈತ್ರಿ ಕಾಂಗ್ರೆಸ್‌ನೊಂದಿಗೆ ಇದೆ ಮತ್ತು ಮಹಾ ವಿಕಾಸ್ ಅಘಾಡಿ ಸುಮಾರು 40 ಸ್ಥಾನಗಳನ್ನು ಗೆಲ್ಲುತ್ತಾರೆ. ಇನ್ನು ಬಿಜೆಪಿಗೆ ಗೆಲ್ಲಲು ಇವಿಎಂ (EVM) ಬೇಕು, ಅವರಿಗೆ ಒಂಟಿಯಾಗಿ ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ ಇವಿಎಂ ಜೊತೆ ಅವರ ಮೈತ್ರಿ ಇದೆ ಎಂದು ಸಂಜಯ್‌ ರಾವತ್‌ ಟಾಂಗ್‌ ಕೊಟ್ಟರು.

  • ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್

    ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್

    ನವದೆಹಲಿ: ಒಂದು ವೇಳೆ ಕೇಂದ್ರದಲ್ಲಿ ಬೇರೆ ಪಕ್ಷ ಅಧಿಕಾರದಲ್ಲಿ ಇರುತ್ತಿದ್ದರೆ ಮೋಕ್ ಬಾಂಬ್ ಪ್ರಕರಣ ಸಂಬಂಧ ಬಿಜೆಪಿಯವರು (BJP) ಇಡೀ ದೆಹಲಿಯನ್ನು ಬಂದ್ ಮಾಡಿಸುತ್ತಿದ್ದರು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ (Sanjay Raut) ವಾಗ್ದಾಳಿ ನಡೆಸಿದ್ದಾರೆ.

    ಸಂಸತ್ತಿನ ಭದ್ರತಾ ಉಲ್ಲಂಘನೆಯ (Security breach in Lok Sabha) ಘಟನೆಯ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರದಲ್ಲಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರುತ್ತಿದ್ದರೆ, ಈ ವಿಷಯದ ಬಗ್ಗೆ ಬಿಜೆಪಿ ಇಡೀ ದೆಹಲಿಯನ್ನು ಬಂದ್ ಮಾಡುತ್ತಿತ್ತು. ಆದರೆ ಘಟನೆ ಸಂಬಂಧ ಬಿಜೆಪಿ ಸಂಸದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

    ಆರೋಪಿಗಳನ್ನು ಸಂಸತ್ತಿಗೆ ಪ್ರವೇಶಿಸಲು ಯಾರು ಕೊಟ್ಟರು?. ರಾಷ್ಟ್ರೀಯ ಭದ್ರತೆಯ ಈ ವಿಷಯದಲ್ಲಿ ಯಾವುದೇ ರಾಜಕೀಯ ಮಾಡಬಾರದು. ಪ್ರಧಾನಿಯವರು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಮಾತನಾಡಬೇಕು ಎಂದು ಸಂಜಯ್ ರಾವತ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

    ನಡೆದಿದ್ದೇನು..?: ಡಿಸೆಂಬರ್ 13ರ ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:15 ರವರೆಗೆ ಕಲಾಪ ವೀಕ್ಷಣೆಗೆ ಸಮಯ ನೀಡಲಾಗಿತ್ತು. 45 ನಿಮಿಷಗಳವರೆಗೆ ಪಾಸ್ ಪಡೆದ ಮನೋಂಜನ್ ಮತ್ತು ಸಾಗರ್ ಶರ್ಮಾ ಸುಮಾರು 2 ಗಂಟೆಗಳ ಕಾಲ ಕಲಾಪ ವೀಕ್ಷಣೆ ಮಾಡಿದ್ದರು. ಸಂಸತ್‍ನಲ್ಲಿ ಕಲಾಪ ನಡೆಯಲಿ, ನಡೆಯದೇ ಇರಲಿ 45 ನಿಮಿಷಗಳ ಅವಧಿ ಮುಗಿದ ಕೂಡಲೇ ವೀಕ್ಷಕರ ಗ್ಯಾಲರಿಯಿಂದ ತೆರಳಬೇಕಾಗುತ್ತದೆ. ಈ ನಿರ್ದೇಶನವಿದ್ದರೂ ಇಬ್ಬರನ್ನು 2 ಗಂಟೆಗಳ ಕಾಲ ಕಲಾಪ ವೀಕ್ಷಣೆಗೆ ಅನುಮತಿ ನೀಡಿದ್ದೇ ಅತಿದೊಡ್ಡ ಭದ್ರತಾಲೋಪ. ವೀಕ್ಷಕರ ಜಾಗ ಖಾಲಿ ಇದ್ದ ಕಾರಣ ಭದ್ರತಾ ಸಿಬ್ಬಂದಿ ಈ ವಿಷಯವನ್ನು ಗಮನಿಸದ ಕಾರಣ ಈ ಲೋಪ ಉಂಟಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

    ಸುಮಾರು ಎರಡು ಗಂಟೆಗಳ ಕಾಲ ಪ್ರೇಕ್ಷಕರ ಗ್ಯಾಲರಿಯಲ್ಲಿ ಇದ್ದ ಇವರು ಮಧ್ಯಾಹ್ನ 1:01ರ ವೇಳೆಗೆ ಗ್ಯಾಲರಿಯಿಂದ ಕೆಳಗಡೆ ಜಿಗಿದು ಹಳದಿ ಬಣ್ಣದ ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಕೆಳಗಡೆ ಜಿಗಿದ ಬಳಿಕ ಮೂರು ಸಾಲುಗಳನ್ನು ದಾಟಿ ಸೀಟಿನ ಕಡೆಗೆ ತಲುಪಿ ಶೂ ಒಳಗಿದ್ದ ವಸ್ತುವನ್ನು ಹೊರತೆಗೆದಿದ್ದಾನೆ. ನಂತರ ಸದನದಲ್ಲಿ ಹಳದಿ ಬಣ್ಣದ ಹೊಗೆ ಏಳಲಾರಂಭಿಸಿದೆ. ಈ ವೇಳೆ ಮೊದಲು ಗಾಬರಿಗೊಂಡರೂ ನಂತರ ಸಂಸದರೆಲ್ಲಾ ಸೇರಿ ಆರೋಪಿಗಳನ್ನು ಹಿಡಿದು ಥಳಿಸಿದ್ದಾರೆ.

  • ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹದ ಕೇಸ್‌

    ಮೋದಿ ವಿರುದ್ಧ ಆಕ್ಷೇಪಾರ್ಹ ಲೇಖನ – ಸಂಜಯ್‌ ರಾವತ್‌ ವಿರುದ್ಧ ದೇಶದ್ರೋಹದ ಕೇಸ್‌

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಆಕ್ಷೇಪಾರ್ಹ ಲೇಖನ ಪ್ರಕಟಿಸಿದ್ದಕ್ಕೆ ಶಿವಸೇನೆ (Shiv Sena) ಉದ್ದವ್‌ ಠಾಕ್ರೆ (Uddhav Thackeray) ಬಣದ ನಾಯಕ ಸಂಜಯ್‌ ರಾವತ್‌ (Sanjay Raut) ವಿರುದ್ಧ ದೇಶದ್ರೋಹದ (Sedition) ಪ್ರಕರಣ ದಾಖಲಾಗಿದೆ.

    ಪಕ್ಷದ ಮುಖವಾಣಿ ಸಾಮ್ನಾದಲ್ಲಿ (Saamana) ಡಿ.11 ರಂದು ಪ್ರಕಟವಾದ ಲೇಖನ ದೂರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಬಿಜೆಪಿ ಯವತ್ಮಾಲ್ ಸಂಚಾಲಕ ನಿತಿನ್ ಭೂತಾಡ್ ದೂರು ನೀಡಿದ್ದರು.

     

    ಉಮರಖೇಡ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ದೂರಿನ ಪ್ರಕಾರ ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.   ಇದನ್ನೂ ಓದಿ: ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ

    ರಾವತ್‌ ಅವರು ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಆಗಾಗ ಸಾಮ್ನಾದಲ್ಲಿ ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಡಿ.11 ರಂದು ಮಧ್ಯಪ್ರದೇಶ ಫಲಿತಾಂಶಕ್ಕೆ ಸಂಬಂಧಿಸಿದಂತೆ ಲೇಖನ ಪ್ರಕಟವಾಗಿತ್ತು.

    ತಮ್ಮ ‘ರೋಖ್‌ಥೋಕ್’ ಅಂಕಣದಲ್ಲಿ ತವರು ರಾಜ್ಯವಾದ ಮಧ್ಯಪ್ರದೇಶದಲ್ಲಿ ಶಿವರಾಜ್‌ ಸಿಂಗ್‌ ಅವರನ್ನು ಬಿಜೆಪಿ ಹೈಕಮಾಂಡ್‌ ಅವಮಾನಿಸಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಗುರಿ ಕಾಂಗ್ರೆಸ್ ಅನ್ನು ಸೋಲಿಸುವುದು ಅಲ್ಲ ಬದಲಾಗಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಸಂಪೂರ್ಣವಾಗಿ ತೊಡೆದು ಹಾಕುವುದು ಎಂದು ಬರೆದಿದ್ದರು.

     

  • ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲ್ತಾರೆ: ಸಂಜಯ್‌ ರಾವತ್‌

    ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಸ್ಪರ್ಧಿಸಿದರೆ ಪ್ರಧಾನಿ ಮೋದಿ ಸೋಲ್ತಾರೆ: ಸಂಜಯ್‌ ರಾವತ್‌

    ಮುಂಬೈ: ವಾರಣಾಸಿಯಲ್ಲಿ (Varanasi) ಪ್ರಿಯಾಂಕಾ ಗಾಂಧಿ (Priyanka Gandhi) ಸ್ಪರ್ಧಿಸಿದರೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಲಬಹುದು ಎಂದು ಶಿವಸೇನಾ ಸಂಸದ ಸಂಜಯ್‌ ರಾವತ್‌ (Sanjay Raut) ಹೇಳಿಕೆ ನೀಡಿದ್ದಾರೆ.

    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಪ್ರತಿನಿಧಿಸುವ ಕ್ಷೇತ್ರವಾದ ವಾರಣಾಸಿಯಿಂದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ, ಆಘಾತಕಾರಿ ಫಲಿತಾಂಶಗಳು ಬರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ

    ಭಾರತದಲ್ಲಿ ರಾಜಕೀಯ ಪರಿಸ್ಥಿತಿ ವೇಗವಾಗಿ ಬದಲಾಗುತ್ತಿದೆ. ಕಾಂಗ್ರೆಸ್ ಜನರಿಂದ ಬೆಂಬಲ ಪಡೆಯುತ್ತಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ, ಪ್ರಧಾನಿ ಮೋದಿ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟ. ಮೋದಿ ಅವರನ್ನು ಪ್ರಿಯಾಂಕಾ ಸೋಲಿಸಬಹುದು ಎಂದು ಮಾತನಾಡಿದ್ದಾರೆ.

    2014 ರಲ್ಲಿ ಠಾಕ್ರೆ ಮೈತ್ರಿ ಮುರಿದುಕೊಂಡರು ಎಂದು ಮಹಾರಾಷ್ಟ್ರದ ಸಂಸದರ ಸಭೆಯಲ್ಲಿ ಪಿಎಂ ಮೋದಿ ಹೇಳಿದ್ದರು. ಮಹಾರಾಷ್ಟ್ರದ ಎಲ್ಲರಿಗೂ ತಿಳಿದಿರುವಂತೆ ಅವರು ಸುಳ್ಳು ಹೇಳುತ್ತಿದ್ದಾರೆ. ಆಗಿನ ಬಿಜೆಪಿ ನಾಯಕ ಏಕನಾಥ್ ಖಾಡ್ಸೆ ಅವರು ಠಾಕ್ರೆ ಅವರಿಗೆ ಕರೆ ಮಾಡಿ ಮೈತ್ರಿ ಮುರಿಯುವ ಬಿಜೆಪಿಯ ನಿರ್ಧಾರವನ್ನು ತಿಳಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್‌ ಸಿಸ್ಟಮ್‌, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಜಯ್ ರಾವತ್, ಸಹೋದರನಿಗೆ ಕೊಲೆ ಬೆದರಿಕೆ- ಇಬ್ಬರ ಬಂಧನ

    ಸಂಜಯ್ ರಾವತ್, ಸಹೋದರನಿಗೆ ಕೊಲೆ ಬೆದರಿಕೆ- ಇಬ್ಬರ ಬಂಧನ

    ಮುಂಬೈ: ಶಿವಸೇನಾ (Shiv Sena UBT)) ಮುಖಂಡ ಸಂಜಯ್ ರಾವತ್ (Sanjay Raut) ಮತ್ತು ಅವರ ಸಹೋದರ ಸುನೀಲ್ ರಾವತ್ ಅವರಿಗೆ ಕೊಲೆ ಬೆದರಿಕೆ (Death Threats) ಹಾಕಿರುವ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    ಒಬ್ಬ ಆರೋಪಿ ಆಟೋ ಚಾಲಕ ಹಾಗೂ ಮತ್ತೊಬ್ಬ ಇಂಟೀರಿಯರ್ ಡಿಸೈನಿಂಗ್ ಕೆಲಸಗಾರ ಎಂದು ತಿಳಿದು ಬಂದಿದೆ. ಕುಡಿದ ಅಮಲಿನಲ್ಲಿ ರಾವತ್ ಸಹೋದರರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ವಿಚಾರವಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಐತಿಹಾಸಿಕ ಕ್ಷಣಕ್ಕೆ ಕರ್ನಾಟಕ ಸಾಕ್ಷಿ- 4 ಕಿ.ಮೀ ಬಸ್‍ನಲ್ಲಿ ಸಿಎಂ ಸಂಚಾರ

    ಮೊದಲು ಸುನಿಲ್ ರಾವತ್ ಅವರಿಗೆ ಕರೆ ಬಂದಿದ್ದು, ಸಂಜಯ್ ರಾವತ್ ಹಾಗೂ ಅವರ ಸಹೋದರನ ಮೇಲೆ ಗುಂಡಿನ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ರಾವತ್ ಸಹೋದರರು ನೀಡಿದ ಫೋನ್ ನಂಬರ್ ಹಾಗೂ ಕರೆಯ ರೆಕಾರ್ಡಿಂಗ್ ಆಧಾರದ ಮೇಲೆ ಫೋನ್‌ಗಳ ಸ್ಥಳವನ್ನು ಪತ್ತೆ ಹಚ್ಚಲಾಗಿದೆ. ಅಲ್ಲದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ನನ್ನ ಸಹೋದರನಿಗೆ ಬಂದಿರುವ ಬೆದರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ನನಗೆ ಬಂದಿರುವ ಬೆದರಿಕೆಯನ್ನಲ್ಲ. ಆದರೆ ಸರ್ಕಾರ ಅಂತಹ ಬೆದರಿಕೆಗಳನ್ನು ಬಯಸುತ್ತಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.

    ಬಂಧಿತ ಆರೋಪಿಗಳ ವಿರುದ್ಧ ಸೆಕ್ಷನ್ 506ರ ಅಡಿ ಕೊಲೆ ಬೆದರಿಕೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಮಸ್ಯೆ ಬಗೆಹರಿದರೆ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇನೆ: ಪಟ್ಟು ಬಿಡದ ಸಾಕ್ಷಿ ಮಲಿಕ್

  • ಶರದ್‌ ಪವಾರ್‌, ಸಂಜಯ್‌ ರಾವತ್‌ಗೆ ಕೊಲೆ ಬೆದರಿಕೆ

    ಶರದ್‌ ಪವಾರ್‌, ಸಂಜಯ್‌ ರಾವತ್‌ಗೆ ಕೊಲೆ ಬೆದರಿಕೆ

    ಮುಂಬೈ: ಎನ್‍ಸಿಪಿ ನೇತಾರ ಶರದ್ ಪವಾರ್ (Sharad Pawar) ಶಿವಸೇನೆ ಉದ್ಧವ್ ಬಣದ ಮುಖಂಡ ಸಂಜಯ್ ರಾವತ್‍ಗೆ (Sanjay Raut) ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.

    ವಿಚಾರವಾದಿ ನರೇಂದ್ರ ದಾಬೋಲ್ಕರ್‌ಗೂ ಆದ ಗತಿಯೇ ನಿಮಗೂ ಆಗಲಿದೆ ಎಂದು ಶರದ್ ಪವಾರ್‌ಗೆ ಟ್ವಿಟ್ಟರ್ ಮೂಲಕ ಹತ್ಯೆ ವಾರ್ನಿಂಗ್ ನೀಡಿದ್ದಾರೆ. ಇದೇ ವೇಳೆ ಪವಾರ್ ಪುತ್ರಿ, ಎನ್‍ಸಿಪಿ ಸಂಸದೆ ಸುಪ್ರಿಯಾ ಸುಳೆ (Supriya Sule) ಅವರ ವಾಟ್ಸಪ್ ನಂಬರ್‌ಗೆ ಪವಾರ್ ಅವರನ್ನು ಹತ್ಯೆ ಮಾಡುವುದಾಗಿ ಸಂದೇಶಗಳು ಬಂದಿವೆ.

    ಈ ಬೆದರಿಕೆ ಸಂದೇಶಗಳ ಸಂಬಂಧ ತನಿಖೆ ನಡೆಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಸುಪ್ರಿಯಾ ಸುಳೆ ಒತ್ತಾಯಿಸಿದ್ದಾರೆ. ಸಂಜಯ್ ರಾವತ್‍ರನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ರಾವತ್ ಸಹೋದರ, ಶಾಸಕ ಸುನೀಲ್ ದೂರು ನೀಡಿದ್ದಾರೆ.


    ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನಾವೀಸ್ ಪ್ರತಿಕ್ರಿಯಿಸಿ, ಯಾವುದೇ ನಾಯಕರಿಗೆ ಬೆದರಿಕೆ ಹಾಕುವುದನ್ನು ಸಹಿಸುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.