Tag: Sanjay Rawat

  • ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

    ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

    – ರಾಣಾ ಹಸ್ತಾಂತರ ಪ್ರಕ್ರಿಯೆ ಕಾಂಗ್ರೆಸ್‌ ಆಡಳಿತದಲ್ಲೇ ನಡೆದಿತ್ತು: ರಾವತ್‌
    – ಜನರ ಗಮನ ಬೇರೆಡೆ ಸೆಳೆಯುವ ಬಿಜೆಪಿ ಕುತಂತ್ರ: ಕನ್ಹಯ್ಯಾ

    ಪಾಟ್ನಾ: 2008ರ ಮುಂಬೈ ದಾಳಿಯ (Mumbai Attack) ಪ್ರಮುಖ ಸೂತ್ರಧಾರಿ ಲಷ್ಕರ್ ಉಗ್ರ ತಹವ್ವೂರ್‌ ರಾಣಾನನ್ನು (Tahawwur Rana) ಕೊನೆಗೂ ಭಾರತಕ್ಕೆ ಕರೆತರಲಾಗಿದೆ. ಈಗಾಗಲೇ ರಾಣಾನನ್ನ ಕೋರ್ಟ್‌ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ (NIA) ಕಸ್ಟಡಿಗೆ ನೀಡಿದ್ದು, ಎನ್‌ಐಎ ಮುಂದಿನ ವಿಚಾರಣೆ ಕೈಗೊಂಡಿದೆ. ದೇಶದ ಹಲವು ಭಾಗಗಳಿಗೆ ರಾಣಾನನ್ನ ಕರೆದೊಯ್ಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ರಾಜಕೀಯ ಜಟಾಪಟಿಯೂ ನಡೆದಿದೆ.

    ರಾಣಾ ಹಸ್ತಾಂತರ ವಿಚಾರ ಕುರಿತು ಮಾತನಾಡಿರುವ ಶಿವಸೇನಾ (UTB) ಸಂಸದ ಸಂಜಯ್‌ ರಾವತ್‌ (Sanjay Rawat), ರಾಣಾನನ್ನ ತಕ್ಷಣವೇ ಗಲ್ಲಿಗೇರಿಸಬೇಕು. ಆದ್ರೆ ಬಿಹಾರ ಚುನಾವಣೆ (Bihar Election) ಸಂದರ್ಭದಲ್ಲಿ ಕೇಂದ್ರ ಸರ್ಕಾರ ಗಲ್ಲಿಗೇರಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೈಟೆಕ್‌ ವಿಮಾನ, ಬುಕಾರೆಸ್ಟ್‌ನಿಂದ 11 ಗಂಟೆ ಪ್ರಯಾಣ – ಉಗ್ರ ರಾಣಾನನ್ನ ಅಮೆರಿಕದಿಂದ ಭಾರತಕ್ಕೆ ಕರೆತಂದಿದ್ದು ಹೇಗೆ?

    ಕ್ರೆಡಿಟ್‌ ತೆಗೆದುಕೊಳ್ಳುವ ಅಗತ್ಯವಿಲ್ಲ
    ರಾಣಾನನ್ನು ಭಾರತಕ್ಕೆ ಕರೆತರಲು 16 ವರ್ಷ ಬೇಕಾಯಿತು. ಆದ್ರೆ ಅವನನ್ನು ಹಸ್ತಾಂತರಿಸುವ ಪ್ರಕ್ರಿಯೆ ಕಾಂಗ್ರೆಸ್‌ ಆಡಳಿತದಲ್ಲೇ ಪ್ರಾರಂಭವಾಯಿತು. ಆದ್ದರಿಂದ ಅವನನ್ನು ಮರಳಿ ಕರೆತಂದ ಕ್ರೆಡಿಟ್‌ ದೇಶಕ್ಕೆ ಸಲ್ಲುತ್ತದೆ. ಯಾರೂ ವೈಯಕ್ತಿಕವಾಗಿ ಕ್ರೆಡಿಟ್‌ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ. ಅಲ್ಲದೇ ತಹವ್ವೂರ್‌ ರಾಣಾ ಭಾರತಕ್ಕೆ ಹಸ್ತಾಂತರಿಸಲಾದ ಮೊದಲ ಆರೋಪಿಯಲ್ಲ. ಇದಕ್ಕೂ ಮುನ್ನ 1993ರ ಸರಣಿ ಸ್ಫೋಟದ ಆರೋಪಿ ಅಬು ಸಲೇಂನನ್ನು ಕೂಡ ಭಾರತಕ್ಕೆ ಹಸ್ತಾಂತರಿಸಲಾಗಿತ್ತು ಎಂದು ನುಡಿದಿದ್ದಾರೆ.  ಇದನ್ನೂ ಓದಿ:  18 ದಿನಗಳ ಕಾಲ NIA ಕಸ್ಟಡಿಗೆ ರಾಣಾ – ಮಧ್ಯರಾತ್ರಿ ಕೋರ್ಟ್‌ನಲ್ಲಿ ವಾದ ಏನಿತ್ತು?

    ಇದೇ ವೇಳೆ ಕಾಂಗ್ರೆಸ್‌ ನಾಯಕ ಕನ್ಹಯ್ಯಾ ಕುಮಾರ್ ಮಾತನಾಡಿ, ತಹವ್ವೂರ್‌ ರಾಣಾ ಹಸ್ತಾಂತರ ರಾಜತಾಂತ್ರಿಕ ಯಶಸ್ಸಲ್ಲ. ಸಾರ್ವಜನಿಕ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಬಿಜೆಪಿಯ ಕುತಂತ್ರವಾಗಿದೆ ಎಂದು ಲೇವಡಿ ಮಾಡಿದ್ದಾರೆ.  ಇದನ್ನೂ ಓದಿ: ಮುಂಬೈ ದಾಳಿ ಮಾಸ್ಟರ್‌ಮೈಂಡ್‌ ತಹವ್ವೂರ್‌ ರಾಣಾ ಅರೆಸ್ಟ್‌

  • ಪತ್ರಾ ಚಾವ್ಲ್ ಭೂ ಹಗರಣ: ಸಂಜಯ್ ರಾವತ್ ನಿವಾಸದ ಮೇಲೆ ಇಡಿ ದಾಳಿ

    ಪತ್ರಾ ಚಾವ್ಲ್ ಭೂ ಹಗರಣ: ಸಂಜಯ್ ರಾವತ್ ನಿವಾಸದ ಮೇಲೆ ಇಡಿ ದಾಳಿ

    ಮುಂಬೈ: ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ಮಾಡಿದ್ದಾರೆ.

    1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು. ಇದನ್ನೂ ಓದಿ: ಭದ್ರತಾ ಪಡೆಗಳ ಎನ್‍ಕೌಂಟರ್‌ನಲ್ಲಿ ಎಲ್‍ಇಟಿ ಉಗ್ರ ಬಲಿ

    ಇಂದು ಬೆಳಗ್ಗೆ ಮುಂಬೈನ ಬಂಡಪ್‍ನಲ್ಲಿರುವ ರಾವತ್ ಅವರ ಮನೆಗೆ ತನಿಖಾ ಸಂಸ್ಥೆ ತಂಡವು ಸಿಆರ್‌ಪಿಎಫ್ ಅಧಿಕಾರಿಗಳ ಜೊತೆ ದಾಳಿ ಮಾಡಿದೆ. ಸದ್ಯ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

    ಮುಂಬೈನ ಪತ್ರಾ ಚಾಲ್‍ನ ಮರು-ಅಭಿವೃದ್ಧಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾವತ್‍ಗೆ ಸಮನ್ಸ್ ನೀಡಿತ್ತು. ಆದರೆ ಅವರು ಈ ಸಮನ್ಸ್ ನಿರಾಕರಿಸಿ ಇದು ರಾಜಕೀಯ ದ್ವೇಷದ ಕಾರಣದಿಂದ ನನ್ನನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದರು.

    ಜುಲೈ 1 ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‍ಎ) ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಏಪ್ರಿಲ್‍ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದನ್ನೂ ಓದಿ:  Commonwealth Games 2022: ಭಾರತಕ್ಕೆ ನಾಲ್ಕನೇ ಪದಕ – ವೇಟ್‍ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಬಿಂದ್ಯಾರಾಣಿ ದೇವಿ

    Live Tv
    [brid partner=56869869 player=32851 video=960834 autoplay=true]

  • ಎಷ್ಟು ದಿನ ಗುವಾಹಟಿಯಲ್ಲೇ ಅಡಗಿರುತ್ತೀರಿ?: ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಟಾಂಗ್

    ಎಷ್ಟು ದಿನ ಗುವಾಹಟಿಯಲ್ಲೇ ಅಡಗಿರುತ್ತೀರಿ?: ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಟಾಂಗ್

    ಮುಂಬೈ: ಮಹಾರಾಷ್ಟ್ರದ ರಾಜಕೀಯ ಸ್ಥಿತಿ ನಾಟಕೀಯವಾಗಿ ತಿರುವು ಮುರುವುಗಳನ್ನು ಪಡೆದುಕೊಳ್ಳುತ್ತಿರುವುದರ ನಡುವೆಯೇ ಶಿವಸೇನೆಯ ನಾಯಕ ಸಂಜಯ್ ರಾವತ್ ಅವರು ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುವಾಹಟಿಯಲ್ಲಿ ಎಷ್ಟು ದಿನ ಅಡಗಿಕೊಳ್ಳುತ್ತೀರಿ ಎಂದು ಟಾಂಗ್ ನೀಡಿದ್ದಾರೆ.

    ಬಂಡಾಯ ಶಾಸಕರ ಕುರಿತು ಟ್ವೀಟ್ ಮಾಡಿರುವ ಸಂಜಯ್ ರಾವತ್, ಎಷ್ಟು ದಿನ ನೀವು ಗುವಾಹಟಿಯಲ್ಲೇ ಅಡಗುತ್ತೀರಿ? ನೀವು ಚೌಪಾಟಿಗೆ ಮರಳಲೇ ಬೇಕು ಎಂದು ಟಾಂಗ್ ನೀಡಿದ್ದಾರೆ.

    ಏಕನಾಥ್ ಶಿಂಧೆ ಅವರು ಭಾನುವಾರ ಮಧ್ಯಾಹ್ನ ಶಾಸಕರ ಸಭೆ ಕರೆದಿದ್ದಾರೆ. ಅವರ ಮುಂದಿನ ನಡೆಯ ಬಗ್ಗೆ ಚರ್ಚಿಸಲು ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

    ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯ ಎದ್ದಿರುವ ಶಿವಸೇನೆಯ 16 ಶಾಸಕರಿಗೆ ವಿಧಾನಸಭಾ ಕಾರ್ಯಲಯ ನೋಟಿಸ್ ನೀಡಿದೆ. ಸೋಮವಾರ ಸಂಜೆ ಒಳಗೆ ಲಿಖಿತ ಪ್ರತಿಕ್ರಿಯೆ ನೀಡಬೇಕು ಎಂದು ನೋಟಿಸ್‌ನಲ್ಲಿ ಹೇಳಲಾಗಿದ್ದು, ಈ ಹಿನ್ನೆಲೆ ಏಕನಾಥ್ ಶಿಂಧೆ ಶಾಸಕರೊಂದಿಗೆ ಚರ್ಚಿಸಲಿದ್ದರೆ. ಇದನ್ನೂ ಓದಿ: ನಿಮಗೆ ತಾಕತ್ ಇದ್ರೆ ಚುನಾವಣೆಗೆ ಬನ್ನಿ: ರೆಬೆಲ್ ಶಾಸಕರಿಗೆ ಸವಾಲೆಸೆದ ಆದಿತ್ಯ ಠಾಕ್ರೆ

    ಮಹಾರಾಷ್ಟ್ರದ ಶಾಸಕಾಂಗ ಕಾರ್ಯದರ್ಶಿ ಬಂಡಾಯ ಶಾಸಕರಿಗೆ ಜೂನ್ 27ರ ಸಂಜೆಯ ಒಳಗಾಗಿ ಲಿಖಿತ ಉತ್ತರವನ್ನು ಕೋರಿ ಸಮನ್ಸ್ ಜಾರಿ ಮಾಡಿದೆ. ಮಹಾರಾಷ್ಟ್ರದ ವಿಧಾನ ಭವನದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಭಾಗವತ್ ಸಮನ್ಸ್ ಜಾರಿಗೊಳಿಸಿದ್ದಾರೆ. ಕೆಂದ್ರ ಸರ್ಕಾರ 15 ಬಂಡಾಯ ಶಾಸಕರಿಗೆ ವೈ ಪ್ಲಸ್ ವರ್ಗದ ಶಸ್ತ್ರಾಸ್ತ್ರ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಭದ್ರತೆ ಒದಗಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರೆಬೆಲ್ ಶಾಸಕರಿಗೆ ಕೇಂದ್ರದಿಂದ Y+ ಭದ್ರತೆ

    ಈ ನಡುವೆ ಶಿವಸೇನಾ ಹೆಸರಿಗಾಗಿ ಮೂಲ ಶಿವಸೇನೆ ನಾಯಕರು ಹಾಗೂ ಬಂಡಾಯ ಶಾಸಕರ ನಡುವೆ ಫೈಟ್ ಜೋರಾಗಿದ್ದು, ಶಿವಸೇನೆ ಮತ್ತು ಬಾಳಾ ಸಾಹೇಬ್ ಠಾಕ್ರೆ ಹೆಸರು ಬಳಕೆ ಮಾಡದಂತೆ ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದ ಶಿವಸೇನೆ ನಾಯಕರು ಬಂಡಾಯ ಶಾಸಕರಿಗೆ ಪಕ್ಷದ ಹೆಸರು ಮತ್ತು ಅದರ ನಾಯಕರ ಹೆಸರು ಬಳಸಿಕೊಳ್ಳುವ ಅವಕಾಶ ಇಲ್ಲ, ಮತ್ತು ಪಕ್ಷದ್ರೋಹ ಮಾಡಿದ ಏಕನಾಥ್ ಶಿಂಧೆ ವಿರುದ್ಧ ಕ್ರಮಕ್ಕೆ ತಿರ್ಮಾನ ಮಾಡಲಾಗಿತ್ತು. ಬಂಡಾಯ ಶಾಸಕರು ಶಿವಸೇನೆ ಬಾಳಾ ಸಾಹೇಬ್ ಠಾಕ್ರೆ ಹೆಸರು ಬಳಕೆ ಮಾಡದಿರಲು ಸೂಚಿಸುವಂತೆ ಮೂಲ ಶಿವಸೇನೆ ನಾಯಕರು ಚುನಾವಣೆ ಆಯೋಗದ ಮೊರೆ ಕೂಡಾ ಹೋಗಿದ್ದಾರೆ.

    Live Tv

  • ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ – ಸುಳಿವು ಕೊಟ್ಟ ಸಂಜಯ್ ರಾವತ್

    ಮಹಾರಾಷ್ಟ್ರ ವಿಧಾನಸಭೆ ವಿಸರ್ಜನೆ – ಸುಳಿವು ಕೊಟ್ಟ ಸಂಜಯ್ ರಾವತ್

    ಮುಂಬೈ: ಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆಯುತ್ತಿದ್ದು, ಶಿವಸೇನೆ ನಾಯಕ ಹಾಗೂ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡುವ ಮೂಲಕ ಹೊಸ ತಿರುವನ್ನು ಕೊಟ್ಟಿದ್ದಾರೆ.

    ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿ ಸರ್ಕಾರಕ್ಕೆ ಸಂಕಟ ಬಂದಿದೆ. ಈ ಹಿನ್ನೆಲೆ ನಿನ್ನೆಯಿಂದ ಈ ಕುರಿತು ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಸಂಜಯ್ ರಾವತ್ ಟ್ವೀಟ್ ಮಾಡಿದ್ದು, ವಿಧಾನಸಭೆಯ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣೆಗೆಗಳ ಪಯಣ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಶಾಸಕಾಂಗ ಸಭೆಯನ್ನು ವಿಸರ್ಜನೆ ಸುಳಿವು ಕೊಟ್ಟಿದ್ದಾರೆ. ಇದನ್ನೂ ಓದಿ:  ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ

    ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ಏಕನಾಥ್ ಶಿಂಧೆ ಅವರೊಂದಿಗಿರುವ ಮಾತುಕತೆ ನಡೆಸಲಾಗುತ್ತಿದೆ. ಎಲ್ಲರೂ ಶಿವಸೇನೆಯಲ್ಲಿಯೇ ಇರುತ್ತಾರೆ. ನಮ್ಮ ಪಕ್ಷ ಸತತ ಹೋರಾಟ ಮಾಡುತ್ತೆ. ಹೆಚ್ಚೆಂದರೆ ಅಧಿಕಾರ ಕಳೆದುಕೊಳ್ಳಬಹುದು ಆದರೆ ಹೋರಾಟ ಮುಂದುವರಿಸುತ್ತೇವೆ ಎಂದಿದ್ದರು.

    ಈ ಮಧ್ಯೆ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕ್ಷಣಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ಸರ್ಕಾರ ಮುಂದುವರೆಯುತ್ತಾ? ಪತನಗೊಳ್ಳುತ್ತಾ ಎಂಬ ಪ್ರಶ್ನೆಗೆ ಕೆಲ ದಿನಗಳಲ್ಲಿ ಉತ್ತರ ಸಿಗಲಿದೆ. ಇದನ್ನೂ ಓದಿ: ಇಬ್ಭಾಗದತ್ತ ಶಿವಸೇನೆ – ಮಹಾರಾಷ್ಟ್ರದಲ್ಲಿ ಮುಂದೇನಾಗಬಹುದು? ಅಂಕಿ ಸಂಖ್ಯೆ ಲೆಕ್ಕಾಚಾರ ಏನು?

    Live Tv

  • ಧ್ವನಿವರ್ಧಕ ಗಲಾಟೆ ಮುಗಿದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಿದೆ: ಸಂಜಯ್ ರಾವತ್

    ಧ್ವನಿವರ್ಧಕ ಗಲಾಟೆ ಮುಗಿದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಿದೆ: ಸಂಜಯ್ ರಾವತ್

    ಮುಂಬೈ: ಮಹಾರಾಷ್ಟ್ರದಲ್ಲಿ ಧ್ವನಿವರ್ಧಕದ ಗಲಾಟೆ ಮುಗಿದಿದ್ದು, ಶಾಂತಿ ನೆಲೆಸಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಶನಿವಾರ ಹೇಳಿದರು.

    ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಬಗ್ಗೆ ರಾಷ್ಟ್ರವ್ಯಾಪಿ ಭಾರೀ ಸದ್ದು ಮಾಡುತ್ತಿದೆ. ಈ ಹಿನ್ನೆಲೆ ಸಂಜಯ್ ಅವರು ಕೇಂದ್ರ ಸರ್ಕಾರಕ್ಕೆ ಕರೆ ಮಾಡಿ ಈ ಕುರಿತು ಮಾತನಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಶಾಂತಿ ನೆಲೆಸಿದೆ. ಕೆಲವರು ರಾಜ್ಯದಲ್ಲಿ ಶಾಂತಿ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರಿಗೆ ತಕ್ಕ ಉತ್ತರವನ್ನು ನೀಡಲಾಗಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‍ಎಸ್) ಮುಖ್ಯಸ್ಥ ರಾಜ್ ಠಾಕ್ರೆ ವಿರುದ್ಧ ವಾಗ್ದಾಳಿ ಮಾಡಿದರು.

    Raj Thackeray

    ಹಿಂದೂ ಸಮಾಜವನ್ನು ವಿಭಜಿಸಲು ಪ್ರಯತ್ನಿಸಲಾಗುತ್ತಿದೆ. ದೇವಾಲಯಗಳು ‘ಆರತಿ'(ಪ್ರಾರ್ಥನೆ)ಗಾಗಿ ಧ್ವನಿವರ್ಧಕಗಳನ್ನು ಬಳಸುವುದನ್ನು ನಿಲ್ಲಿಸಿರುವುದರಿಂದ ಸಮುದಾಯದ ಜನರು ಸಹ ಅಸಮಾಧಾನಗೊಂಡಿದ್ದಾರೆ ಎಂದರು. ಇದನ್ನೂ ಓದಿ: ಶಾಲಾ ಪಠ್ಯಕ್ರಮಗಳಲ್ಲಿ ‘ಸೈಬರ್ ಸುರಕ್ಷತೆ’ ಅಧ್ಯಯನ ಅಳವಡಿಕೆ 

    ವಿಲಾಸ್‍ರಾವ್ ದೇಶಮುಖ್, ಪೃಥ್ವಿರಾಜ್ ಚವಾಣ್ ಮತ್ತು ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಗಳಾಗಿದ್ದ 50 ವರ್ಷಗಳಲ್ಲಿ ಈ ಪ್ರಶ್ನೆಯನ್ನು ಏಕೆ ಎತ್ತಲಿಲ್ಲ? ಎಂದು ಪ್ರಶ್ನಿಸಿದ ಅವರು, ಎಂಎನ್‍ಎಸ್ ಮುಖ್ಯಸ್ಥರಿಗೆ ಆಗ ಧ್ವನಿವರ್ಧಕಗಳಿಂದ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ಅವರಿಗೆ ಈಗ ಈ ಸಮಸ್ಯೆ ಇದೆ. ಏಕೆಂದರೆ ಅವರ ಸಹೋದರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಕಿಡಿಕಾರಿದರು.

  • INS ವಿಕ್ರಾಂತ್ ಕೇಸ್ – ಬಿಜೆಪಿ ಮುಖಂಡ ಕಿರಿತ್ ಸೋಮಯ್ಯಗೆ ಮಧ್ಯಂತರ ಜಾಮೀನು

    INS ವಿಕ್ರಾಂತ್ ಕೇಸ್ – ಬಿಜೆಪಿ ಮುಖಂಡ ಕಿರಿತ್ ಸೋಮಯ್ಯಗೆ ಮಧ್ಯಂತರ ಜಾಮೀನು

    ಮುಂಬೈ: ಐಎನ್‌ಎಸ್ ವಿಕ್ರಾಂತ್ ಹೆಸರಲ್ಲಿ ಸಂಗ್ರಹಿಸಿದ್ದ ದೇಣಿಗೆಯನ್ನು ದುರುಪಯೋಗ ಪಡಿಸಿಕೊಂಡ ಆರೋಪದ ಅಡಿಯಲ್ಲಿ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ಅವರನ್ನು ಬಂಧಿಸದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಒಂದು ವೇಳೆ ಸೋಮಯ್ಯ ಅವರನ್ನು ಬಂಧಿಸಿದಲ್ಲಿ, 50,000 ರೂ. ವೈಯಕ್ತಿಕ ಬಾಂಡ್ ಮೇಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರ ಏಕಸದಸ್ಯ ಪೀಠ ಆದೇಶಿಸಿದೆ. ಇದನ್ನೂ ಓದಿ: ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    KIRIT SOMAYYA

    ಕಿರಿತ್ ಸೋಮಯ್ಯ ಅವರ ವಿರುದ್ಧ ಮಾಡಲಾದ ಆರೋಪಗಳು ಮಾಧ್ಯಮದ ವರದಿಗಳನ್ನು ಆಧರಿಸವೆ ಎಂದು ಎಫ್‌ಐಆರ್ ಸೂಚಿಸುತ್ತದೆ. 57 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿರುವ ಆರೋಪ ಇದ್ದರೂ ದೂರುದಾರರು ಯಾವ ಆಧಾರದ ಮೇಲೆ ಅಂಕಿ ಅಂಶಗಳನ್ನು ಬರೆದಿದ್ದಾರೆ ಎಂಬುದಕ್ಕೆ ದಾಖಲೆಗಳಿಲ್ಲ. 2013ರಲ್ಲಿ ಹಣ ಸಂಗ್ರಹಿಸಲಾಗಿದೆ ಎಂದು ಹೇಳಲಾಗಿದೆ. ಆದರೆ, ಈ ವರೆಗೆ ಯಾವುದೇ ದೂರು ದಾಖಲಾಗಿಲ್ಲ. 9 ವರ್ಷಗಳ ನಂತರ ದಾಖಲಾಗಿರುವ ಒಂದು ದೂರು ಸಹ ಅಸ್ಪಷ್ಟವಾಗಿದೆ. ಇದರಲ್ಲಿ ನಿಖರ ಆಧಾರವಿಲ್ಲ ಎಂದು ಏಕಸದಸ್ಯದ ಪೀಠ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ

    ಪ್ರಕರಣ ಕುರಿತ ತನಿಖೆಗೆ ಸಹಕರಿಸಬೇಕು. ಏ.18ರಿಂದ ನಾಲ್ಕು ದಿನಗಳ ಕಾಲ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂದು ಸೋಮಯ್ಯ ಅವರಿಗೆ ನಿರ್ದೇಶನ ನೀಡಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಏ.28ಕ್ಕೆ ಮುಂದೂಡಿದ್ದಾರೆ. ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಟ್ರಾಂಬೆ ಪೊಲೀಸರಿಗೆ ನಿರ್ದೇಶನ ನೀಡಿದೆ.

    ರಾಜ್ಯಸರ್ಕಾರದ ಪರ ಹಿರಿಯ ವಕೀಲ ಶಿರೀಶ್ ಗುಪ್ತೆ ಅವರು ಸೋಮಯ್ಯ ಅವರು ಜಾಮೀನಿಗೆ ಸಲ್ಲಿಸಿದ ಅರ್ಜಿಯನ್ನು ವಿರೋಧಿಸಿದ್ದಾರೆ. ತಂದೆ-ಮಗ ಇಬ್ಬರೂ ನಗರದಲ್ಲಿ ಇತರರೊಂದಿಗೆ ಹಲವಾರು ಕ್ಯಾಂಪೇನ್‌ಗಳನ್ನು ನಡೆಸಿದ್ದರಿಂದ ನಿಖರವಾದ ಮೊತ್ತ ಪತ್ತೆಹಚ್ಚಲು ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ನಡೆಸುವುದು ಅವಶ್ಯವಾಗಿದೆ ಎಂದು ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಹಿಜಬ್, ಹಲಾಲ್‍ನಿಂದಾಗಿ ಬೆಲೆ ಏರಿಕೆಯ ಗಮನ ದೂರವಾಗಿದೆ: ಶಶಿ ತರೂರ್

    KIRITH

    ಹಿನ್ನೆಲೆ ಏನು?
    ಐಎನ್‌ಎಸ್ ವಿಕ್ರಾಂತ್ ಅನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸುವ ಸಲುವಾಗಿ ಕಿರೀಟ್ ಸೋಮೈಯ ಅವರು 57 ಕೋಟಿ ಸಂಗ್ರಹಿಸಿದ್ದರು. ಈ ಹಣವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಸೇನೆಯ ಮಾಜಿ ಅಧಿಕಾರಿಯೊಬ್ಬರು ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 6ರಂದು ದೂರು ದಾಖಲಿಸಿದ್ದರು. ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಸೋಮಯ್ಯ ಹಾಗೂ ಪುತ್ರನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 406 (ನಂಬಿಕೆಗೆ ವಂಚಿಸಿ ಅಪರಾಧ), 420 (ಆಸ್ತಿ ವಿತರಣೆ ವಂಚನೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

  • ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ, ಪುತ್ರನ ವಿರುದ್ಧ ಪ್ರಕರಣ ದಾಖಲು

    ನವದೆಹಲಿ: ಐಎನ್‌ಎಸ್ ವಿಕ್ರಾಂತ್ ಉಳಿಸಲು ಕ್ರೌಡ್ ಫಂಡಿಂಗ್ ಅಭಿಯಾನಕ್ಕೆ ಸಂಬಂಧಿಸಿದಂತೆ ಶಿವಸೇನೆ ಹಾಗೂ ಬಿಜೆಪಿ ನಡುವೆ ಮಾತಿನ ಚಕಮಕಿ ನಡೆಯುತ್ತಿರುವ ಹೊತ್ತಿನಲ್ಲೇ ಐಎನ್‌ಎಸ್ ವಿಕ್ರಾಂತ್ ಹೆಸರಲ್ಲಿ ಸಂಗ್ರಹಿಸಿದ್ದ ದೇಣಿಗೆಯನ್ನು ದುರುಪಯೊಗ ಪಡಿಸಿಕೊಂಡ ಆರೋಪದ ಅಡಿಯಲ್ಲಿ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

    ಮಾಜಿ ಸೇನಾ ಸಿಬ್ಬಂದಿ ಬುಧವಾರ ಸಂಜೆ ಉಪನಗರ ಮನ್‌ಖುರ್ದ್ ನಲ್ಲಿರುವ ಟ್ರಾಂಬೆ ಪೊಲೀಸ್ ಠಾಣೆಯಲ್ಲಿ ೫೭ ಕೋಟಿ ರೂ.ಗೂ ಹೆಚ್ಚು ಹಣವನ್ನು ದುರುಪಯೋಗ ಮಾಡಿಕೊಂಡಿರುವುದಾಗಿ ಆರೋಪಿಸಿ, ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 406 (ನಂಬಿಕೆಗೆ ವಂಚಿಸಿ ಅಪರಾಧ), 420 (ಆಸ್ತಿ ವಿತರಣೆ ವಂಚನೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಟ್ರಾಂಬೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: XE ರೂಪಾಂತರಿ ಮುಂಬೈನಲ್ಲಿ ಪತ್ತೆಯಾಗಿಲ್ಲ: ಮಹಾರಾಷ್ಟ್ರ ಸ್ಪಷ್ಟನೆ

    SANJAY RAwath

    1961 ರಲ್ಲಿ ಕಾರ್ಯಾರಂಭ ಮಾಡಿದ ಭಾರತೀಯ ನೌಕಾಪಡೆಯ ಮೆಜೆಸ್ಟಿಕ್-ಕ್ಲಾಸ್ ವಿಮಾನವಾಹಕ ನೌಕೆ ಎಎನ್‌ಎಸ್ ವಿಕ್ರಾಂತ್, 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಪೂರ್ವ ಪಾಕಿಸ್ತಾನದ ನೌಕಾ ದಿಗ್ಬಂಧನವನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದನ್ನು 1997ರಲ್ಲಿ ರದ್ದುಗೊಳಿಸಲಾಯಿತು. ಜನವರಿ 2014ರಲ್ಲಿ, ಹಡಗನ್ನು ಆನ್‌ಲೈನ್ ಹರಾಜಿನ ಮೂಲಕ ಮಾರಾಟ ಮಾಡಲಾಯಿತು ಮತ್ತು ಅದೇ ವರ್ಷದ ನವೆಂಬರ್‌ನಲ್ಲಿ ರದ್ದುಗೊಳಿಸಲಾಯಿತು. ಆದ್ದರಿಂದ INS ವಿಕ್ರಾಂತ್ ಗೆ ನಿಧಿ ಸಂಗ್ರಹಿಸಲು ಕಿರಿತ್ ಸೋಮಯ್ಯ ಅಭಿಯಾನ ಆರಂಭಿಸಿದ್ದರು ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

    ಹಡಗು ಉಳಿಸಲು ಕಿರಿತ್ ಸೋಮಯ್ಯ ಅವರಿಗೆ ದೇಣಿಗೆ ನೀಡಿದ್ದೇನೆ ಮತ್ತು ಬಿಜೆಪಿ ನಾಯಕರು ಇದೇ ಉದ್ದೇಶಕ್ಕಾಗಿ 57 ಕೋಟಿಗೂ ಹೆಚ್ಚು ಸಂಗ್ರಹಿಸಿದ್ದಾರೆ. ಆದರೆ, ಮೊತ್ತವನ್ನು ಮಹಾರಾಷ್ಟ್ರ ರಾಜಭವನಕ್ಕೆ ಠೇವಣಿ ಮಾಡದೇ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಕಾಲಿಟ್ಟ ಹೊಸ ರೂಪಾಂತರಿ ʼXEʼ – ಮುಂಬೈನಲ್ಲಿ ಮೊದಲ ಪ್ರಕರಣ ಪತ್ತೆ

    ಈ ಆರೋಪವನ್ನು ತಳ್ಳಿಹಾಕಿದ ಕಿರಿತ್ ಸೋಮಯ್ಯ, ವಿಕ್ರಾಂತ್ ನಿಧಿ ಸಂಗ್ರಹದಲ್ಲಿ ಯಾವುದೇ ಹಗರಣ ನಡೆದಿಲ್ಲ, ನಾನು ಯಾವುದೇ ತಪ್ಪು ಮಾಡಿಲ್ಲ. ಸಂಜಯ್ ರಾವತ್ ಆರೋಪ ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಿಲ್ಲ. ಎಫ್‌ಐಆರ್ ಪ್ರತಿಯನ್ನೂ ನಾನು ಸ್ವೀಕರಿಸಿಲ್ಲ. ನಾನು ತನಿಖೆ ಎದುರಿಸಲು ಸಿದ್ಧನಿದ್ದೇನೆ. ರಾವತ್ ಅವರ ಬಳಿ ಸಾಕ್ಷ್ಯವಿದ್ದರೆ ಅದನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಹಸ್ತಾಂತರಿಸಲಿ ಎಂದು ತಿರುಗೇಟು ನೀಡಿದ್ದಾರೆ.

    ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ತನಿಖೆಗೆ ಒಳಪಟ್ಟಿರುವ ಸಂಜಯ್ ರಾವುತ್ ಅವರು ಬುಧವಾರ ಸೋಮಯ್ಯ ಅವರ ವಿರುದ್ಧ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಮಾಡಿದ್ದರು.

  • ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    ಮುಂಬೈ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮುಂಬರುವ ಚುನಾವಣೆಯಲ್ಲಿ ಯಾರಿಗೂ ಯಾವುದೇ ರಾಜಕೀಯ ಲಾಭವನ್ನು ನೀಡುವುದಿಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ.

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಾಜಕೀಯದ ಮೇಲೆ ಹೆಚ್ಚು ಪ್ರಭಾವ ಬೀರುತ್ತೆ ಎಂದು ಎಲ್ಲ ಕಡೆಯಿಂದ ಕೇಳಿಬರುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ರಾವತ್, ಕಾಶ್ಮೀರದಂತಹ ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ‘ದಿ ಕಾಶ್ಮೀರ್ ಫೈಲ್ಸ್’ ಕೇವಲ ಚಲನಚಿತ್ರವಾಗಿದೆ. ಮುಂಬರುವ ಚುನಾವಣೆಯಲ್ಲಿ ಇದು ಯಾರಿಗೂ ಯಾವುದೇ ರಾಜಕೀಯ ಲಾಭವನ್ನು ನೀಡುತ್ತದೆ ಎಂದು ನಾನು ಭಾವಿಸುವುದಿಲ್ಲ. ಚುನಾವಣೆ ಬರುವ ವೇಳೆಗೆ ಚಿತ್ರದ ವಿವಾದಗಳು ದೂರವಾಗಲಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ

    ಚಿತ್ರದಲ್ಲಿ ತೋರಿಸಿರುವ ಘಟನೆಗಳು ನಿಜವೋ ಅಲ್ಲವೋ ಎಂಬುದನ್ನು ನಂತರ ಚರ್ಚಿಸಬಹುದು. ಚಿತ್ರದಲ್ಲಿ ತೋರಿಸಿರುವ ಹಲವು ಸಂಗತಿಗಳು ನಿಜವಲ್ಲ ಎಂದು ಪ್ರಶ್ನಿಸಲಾಗುತ್ತಿದೆ. ತೋರಿಸದಿರುವ ಹಲವು ಸಂಗತಿಗಳು ಇವೆ ಎಂದೂ ಹಲವರು ಹೇಳುತ್ತಿದ್ದಾರೆ. ಆ ಸಮಯದಲ್ಲಿ ಸತ್ತವರಲ್ಲಿ ಮುಸ್ಲಿಮರೂ ಸೇರಿದ್ದಾರೆ. ಮುಸ್ಲಿಮರಿಂದ ಜೀವ ಉಳಿಸಿದ ಅನೇಕ ಅಧಿಕಾರಿಗಳು ಇದ್ದಾರೆ. ಇವೆಲ್ಲವೂ ಸಿನಿಮಾದಲ್ಲಿ ಇಲ್ಲ ಎಂದು ವಿವರಿಸಿದ್ದಾರೆ.

    ಮುಂದಿನ ದಿನಗಳಲ್ಲಿ ಸಿನಿಮಾಗೆ ರಾಷ್ಟ್ರಪ್ರಶಸ್ತಿ ಸಿಗಲಿದ್ದು, ಚಿತ್ರದ ನಿರ್ಮಾಪಕರಿಗೆ ಪದ್ಮಶ್ರೀ, ಪದ್ಮಭೂಷಣ ಇತ್ಯಾದಿ ಸಿಗಲಿದೆ ಎಂದು ತಿಳಿಸಿದರು. 1990 ರ ದಶಕದಲ್ಲಿ ಕಾಶ್ಮೀರದ ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ಕೇಂದ್ರೀಕರಿಸುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮಾರ್ಚ್ 11 ರಂದು ಬಿಡುಗಡೆಯಾಗಿದೆ. ಇದನ್ನೂ ಓದಿ: ಗ್ಯಾಂಗ್ ನೋಡಿ ಸ್ಥಳದಿಂದ ಕಾಲ್ಕಿತ್ತ ಪತಿ- ಮಕ್ಕಳ ಮುಂದೆಯೇ ದಲಿತ ಮಹಿಳೆ ಮೇಲೆ ಸಾಮೂಹಿಕ ರೇಪ್

  • ಯುಪಿಯಲ್ಲಿ 50-100 ಕ್ಷೇತ್ರಗಳಲ್ಲಿ ಶಿವಸೇನೆ ಸ್ಪರ್ಧೆ- ಮೈತ್ರಿ ಮಾಡಲ್ಲ ಎಂದ ರಾವತ್

    ಯುಪಿಯಲ್ಲಿ 50-100 ಕ್ಷೇತ್ರಗಳಲ್ಲಿ ಶಿವಸೇನೆ ಸ್ಪರ್ಧೆ- ಮೈತ್ರಿ ಮಾಡಲ್ಲ ಎಂದ ರಾವತ್

    ನವದೆಹಲಿ: ಉತ್ತರ ಪ್ರದೇಶದಲ್ಲಿ ಶಿವಸೇನೆ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಎಂದು ರಾಜ್ಯಸಭಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

    ಶಿವಸೇನೆ ಮೈತ್ರಿಕೂಟ ನಡೆಸುತ್ತ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜ್ಯದಲ್ಲಿ ಬದಲಾವಣೆಯನ್ನು ಬಯಸುತ್ತೇವೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಸಮಾಜವಾದಿ ಪಕ್ಷದೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯುಪಿಯಲ್ಲಿ ನಮ್ಮ ಪಕ್ಷವು ಹಲವು ವರ್ಷಗಳಿಂದ ಕೆಲಸ ಮಾಡುತ್ತಿದೆ. ಆದರೆ ಬಿಜೆಪಿಯನ್ನು ನೋಯಿಸಲು ಬಯಸದ ಕಾರಣ ನಾವು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ

    ಮಥುರಾಕ್ಕಾಗಿ ಯಾವುದೇ ಚಳುವಳಿ ನಡೆದರೆ ಶಿವಸೇನೆ ಭಾಗವಹಿಸಲು ಸಿದ್ಧವಾಗಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಶಿವಸೇನೆ 50-100 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದರು. ಉತ್ತರ ಪ್ರದೇಶದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ರಾಜ್ಯದಲ್ಲಿ ಬದಲಾವಣೆ ಖಂಡಿತಾ ಕಾಣುತ್ತೇವೆ ಎಂದರು.

    ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಇತರ ಮೂವರು ಶಾಸಕರ ಯುಪಿ ಸರ್ಕಾರವನ್ನು ಬಿಟ್ಟು ಹೋಗಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರ ಪ್ರದೇಶದಲ್ಲಿ ರಾಜಕೀಯ ಬದಲಾವಣೆಯತ್ತ ಸಾಗುತ್ತಿದೆ ಎಂದು ಸೂಚಿಸುತ್ತದೆ. ಆ ಪಕ್ಷ ತಮ್ಮ ಬಗ್ಗೆ ಏನೇ ಹೇಳಿಕೊಂಡರು ಆ ಪಕ್ಷದ ಸಚಿವರು ಮತ್ತು ಶಾಸಕರು ಆ ಪಕ್ಷವನ್ನು ಏಕೆ ಬಿಟ್ಟು ಹೋಗುತ್ತಿದ್ದಾರೆ. ಇದು ಏನನ್ನು ಸೂಚಿಸುತ್ತದೆ ಎಂದು ಪ್ರಶ್ನಿಸಿದ ಅವರು, ಏನೇ ಹೇಳಿದರು ವಾಸ್ತವವೇ ಬೇರೆ ಇದೆ ಎಂದು ತಿಳಿಸಿದರು.

    ಸ್ವಾಮಿ ಪ್ರಸಾದ್ ಮೌರ್ಯ ಅವರು ರಾಜಕೀಯವನ್ನು ಬಹಳ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅವರು ಸೋಲಲಿರುವ ಪಕ್ಷದೊಂದಿಗೆ ಎಂದಿಗೂ ಉಳಿಯುವುದಿಲ್ಲ. ಅದನ್ನು ತಿಳಿದುಕೊಂಡವರು ಪಕ್ಷವನ್ನು ತೊರೆಯುತ್ತಿದ್ದಾರೆ. ಯುಪಿ ರಾಜಕೀಯ ಬದಲಾವಣೆಯತ್ತ ಸಾಗುತ್ತಿದೆ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಯೋಗಿ, ಬಿಜೆಪಿಗೆ ಬಿಗ್‌ ಶಾಕ್‌ – ಸಚಿವ ಸೇರಿ 4 ಶಾಸಕರು ರಾಜೀನಾಮೆ, ಇಂದು ಎಸ್‌ಪಿ ಸೇರ್ಪಡೆ

    ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

  • ಗೋವಾದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ : ಸಂಜಯ್ ರಾವುತ್

    ಗೋವಾದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ : ಸಂಜಯ್ ರಾವುತ್

    ನವದೆಹಲಿ: ಕೊರೊನಾ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ವಿಚಾರವಾಗಿ ಮಾತನಾಡಿದ ಶಿವಸೇನಾ ಸಂಸದ ಸಂಜಯ್ ರಾವುತ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲರಿಗೂ ಮಾದರಿಯಾಗಿರಬೇಕು ಎಂದು ಸೂಚನೆ ನೀಡಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರ, ರೋಡ್ ಶೋಗಳನ್ನು ಜನವರಿ 15ರವರೆಗೆ ನಿರ್ಬಂಧಿಸಲಾಗಿದೆ. ಪ್ರಚಾರಕ್ಕೆ ನಿರ್ಬಂಧ ಹೇರಿರುವುದು ಎಲ್ಲರಿಗೂ ಅನ್ವಯಿಸಬೇಕು. ಇದಕ್ಕೆ ಮೋದಿ ಅವರು ಮಾದರಿಯಾಗಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾಕ್ವೆಲಿನ್ ಕುತ್ತಿಗೆ ಮೇಲೆ ಲವ್ ಬೈಟ್ – ಫೋಟೋ ವೈರಲ್

    ಉತ್ತರ ಪ್ರದೇಶ ಹಾಗೂ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಶಿವಸೇನಾ ಸ್ಪರ್ಧಿಸಲಿದೆ. ಗೋವಾದಲ್ಲಿ ಶಿವಸೇನಾ-ಎನ್‍ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್ ಕೂಡ ನಮ್ಮ ಜೊತೆಗಿರಲು ನಾವು ಬಯಸುತ್ತೇವೆ. ಆದರೆ ಸೀಟು ಹಂಚಿಕೆ ಸಮಸ್ಯೆಯಿದೆ. ಗೋವಾದಲ್ಲಿ ಸ್ವಂತ ಬಲದಲ್ಲಿ ಗೆಲ್ಲಬಹುದು ಎಂದು ಕಾಂಗ್ರೆಸ್ ಭಾವಿಸಿದ್ದರೆ ಅವರಿಗೆ ನಮ್ಮ ಶುಭಕಾಮನೆಗಳು. ಗೋವಾದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲು ಬಯಸುತ್ತಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಕುತ್ತಿಗೆ ಮೇಲೆ ಮೂಡಿರುವ ಲವ್ ಬೈಟ್ ಫೋಟೋ ಬಗ್ಗೆ ಜಾಕ್ವೆಲಿನ್ ಹೇಳಿದ್ದೇನು?

    ಪಶ್ಚಿಮ ಬಂಗಾಳದ ಚುನಾವಣೆ ಸಮಯದಲ್ಲಿ ಕೋವಿಡ್ ಎರಡನೇ ಅಲೆ ಉತ್ತುಂಗದಲ್ಲಿತ್ತು. ಕೆಲವು ಪಕ್ಷಗಳ ನಾಯಕರು ವಿಶೇಷವಾಗಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ಹೇಗೆ ಪ್ರಚಾರ ನಡೆಸಿದ್ದಾರೆ ಎಂಬುದನ್ನು ನಾವೆಲ್ಲ ನೋಡಿದ್ದೇವೆ. ಆದರೆ ಈ ಬಾರಿ ಪ್ರಧಾನಿ ಮಾದರಿ ಆಗಬೇಕು ಎಂದು ಹೇಳಿದ್ದಾರೆ.