Tag: Sanjay singh

  • ಕುಸ್ತಿ ಬಿಟ್ಟರೂ ಚಿಂತೆ ಶುರುವಾಗಿದೆ, ಕಿರಿಯರಿಗೆ ಏನು ಹೇಳ್ಬೇಕು ತಿಳಿಯುತ್ತಿಲ್ಲ: ಸಾಕ್ಷಿ ಮಲಿಕ್‌ ಭಾವುಕ

    ಕುಸ್ತಿ ಬಿಟ್ಟರೂ ಚಿಂತೆ ಶುರುವಾಗಿದೆ, ಕಿರಿಯರಿಗೆ ಏನು ಹೇಳ್ಬೇಕು ತಿಳಿಯುತ್ತಿಲ್ಲ: ಸಾಕ್ಷಿ ಮಲಿಕ್‌ ಭಾವುಕ

    ನವದೆಹಲಿ: ನಾನು ಕುಸ್ತಿ (Wrestling) ಬಿಟ್ಟಿದ್ದರೂ ಚಿಂತಿತಳಾಗಿದ್ದೇನೆ. ನನ್ನ ಕಿರಿಯ ಮಹಿಳಾ ಕುಸ್ತಿಪಟುಗಳಿಗೆ ಏನು ಹೇಳಬೇಕು ಅನ್ನೋದೇ ಗೊತ್ತಾಗುತ್ತಿಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್‌ (Sakshee Malikkh) ಬೇಸರ ವ್ಯಕ್ತಪಡಿಸಿದ್ದಾರೆ.

    2024ರ ಜೂನಿಯರ್‌ ನಾಷನಲ್‌ ಗೇಮ್ಸ್‌ ಕುರಿತು ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಸಾಕ್ಷಿ, ನಾನು ಕುಸ್ತಿಯನ್ನು ಬಿಟ್ಟಿದ್ದೇನೆ, ಆದರೂ ನಾನು ಚಿಂತಿತಳಾಗಿದ್ದೇನೆ. ಏಕೆಂದರೆ, ಏಪ್ರಿಲ್‌ 28 ರಿಂದ ಜೂನಿಯರ್‌ ನ್ಯಾಷನಲ್‌ ಲೆವೆಲ್‌ ಪಂದ್ಯಗಳು ನಡೆಯಲಿವೆ. ಉತ್ತರ ಪ್ರದೇಶದ ನಂದನಿನಗರ ಗೊಂಡಾದಲ್ಲಿ ಕುಸ್ತಿ ನಡೆಸಲು ನೂತನ ಕುಸ್ತಿ ಒಕ್ಕೂಟ ನಿರ್ಧರಿಸಿದೆ. ಈ ಬಗ್ಗೆ ನನ್ನ ಕಿರಿಯ ಮಹಿಳಾ ಕುಸ್ತಿಪಟುಗಳು ಕರೆ ಮಾಡಿ ತಿಳಿಸಿದ್ದಾರೆ. ಅವರಿಗೆ ಏನು ಹೇಳಬೇಕು ಅನ್ನೋದೆ ತಿಳಿಯುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

    ಗೊಂಡಾ ಬ್ರಿಜ್‌ಭೂಷಣ್‌ನ (Brij Bhushan Sharan Singh) ಭದ್ರಕೋಟೆ. ಈಗ ಜೂನಿಯರ್ ಮಹಿಳಾ ಕುಸ್ತಿಪಟುಗಳು ಯಾವ ಪರಿಸರದಲ್ಲಿ ಕುಸ್ತಿ ಮಾಡಲು ಹೋಗುತ್ತಾರೆ? ಅನ್ನೋದನ್ನ ಊಹಿಸಿ. ನಂದನಿನಗರ ಬಿಟ್ಟು ಬೇರೆಲ್ಲೂ ಆಯೋಜನೆ ಮಾಡಲು ಈ ದೇಶದಲ್ಲಿ ಜಾಗವಿಲ್ಲವೇ? ಏನು ಮಾಡಬೇಕೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

    ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ (Sanjay Singh) ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಕುಸ್ತಿಪಟು ಸಾಕ್ಷಿ ಮಲಿಕ್‌ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದರು.

    ಏನಾಗಿತ್ತು?:
    ಈ ಹಿಂದೆ ಕುಸ್ತಿ ಫೆಡರೇಷನ್‌ (Wrestling Federation of India) ಅಧ್ಯಕ್ಷರಾಗಿದ್ದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದಿದ್ದರಿಂದ ದೂರು ದಾಖಲಾಗಿತ್ತು. ನಂತರ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದವು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ವಿನೇಶ್‌ ಫೋಗಟ್‌, ಬಜರಂಗ್‌ ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದವು.

    ಕೊನೆಗೆ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಮಧ್ಯಪ್ರವೇಶಿಸಿ ಸಾಂಧಾನ ನಡೆಸಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದರು. ಈ ವರ್ಷಾರಂಭದಲ್ಲಿ ಬ್ರಿಜ್‌ ಭೂಷಣ್‌ ಅಧ್ಯಕ್ಷಗಿರಿಯಿಂದ ಕೆಳಗಿಳಿದಿದ್ದರು. ನಂತರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕುಸ್ತಿಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ.

    ವಾರಣಾಸಿ ಮೂಲದ ಸಂಜಯ್‌ ಸಿಂಗ್‌, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ.  ಇದನ್ನೂ ಓದಿ: ಟೆಕ್ವಾಂಡೋ: ರಾಷ್ಟ್ರಮಟ್ಟಕ್ಕೆ ಕಾಸರಗೋಡಿನ ಗಣ್ಯ – ಕೇರಳದಲ್ಲಿ ಅಗ್ರʻಗಣ್ಯʼಚಿನ್ನದ ಪದಕ..!

  • ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

    ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

    ನವದೆಹಲಿ: ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ಆಪ್ತ ಸಂಜಯ್‌ ಸಿಂಗ್‌ ಭಾರತ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅಸಮಾಧಾನ ಹೊರಹಾಕಿದ್ದಾರೆ.

    ಸಂಜಯ್‌ ಸಿಂಗ್‌ ಆಯ್ಕೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿನೇಶ್‌, ಈಗಲೂ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ಕನಿಷ್ಠ ನಿರೀಕ್ಷೆಯಲ್ಲಿದ್ದೇವೆ. ಭಾರತದ ಕುಸ್ತಿ ಭವಿಷ್ಯವು ಕತ್ತಲೆಯಲ್ಲಿದೆ ಎಂಬುದು ದುಃಖಕರವಾದ ಸಂಗತಿ. ನಮ್ಮ ದುಃಖವನ್ನು ಯಾರಿಗೆ ಹೇಳೋಣ? ಹಾಗಾಗಿಯೇ ನಾವಿನ್ನೂ ಹೋರಾಡುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಸಂಜಯ್‌ ಸಿಂಗ್‌ (Sanjay Singh) ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌, ಬಜರಂಗ್‌ ಪೂನಿಯಾ, ವಿನೇಶ್‌ ಫೋಗಟ್‌ ಸುದ್ದಿಗೋಷ್ಠಿ ನಡೆಸಿದ್ದರು. ಈ ಸಂದರ್ಭದಲ್ಲಿಯೇ ಸಾಕ್ಷಿ ಮಲಿಕ್‌ ಕುಸ್ತಿಗೆ ವಿದಾಯ ಹೇಳಿದರು. ಇದನ್ನೂ ಓದಿ: ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು‌, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!

    ಏನಾಗಿತ್ತು?:
    ಈ ಹಿಂದೆ ಕುಸ್ತಿ ಫೆಡರೇಷನ್‌ (Wrestling Federation of India) ಅಧ್ಯಕ್ಷರಾಗಿದ್ದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದಿದ್ದರಿಂದ ದೂರು ದಾಖಲಾಗಿತ್ತು. ನಂತರ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದವು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ವಿನೇಶ್‌ ಫೋಗಟ್‌, ಬಜರಂಗ್‌ ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದವು. ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    ಕೊನೆಗೆ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಮಧ್ಯಪ್ರವೇಶಿಸಿ ಸಾಂಧಾನ ನಡೆಸಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದರು. ಈ ವರ್ಷಾರಂಭದಲ್ಲಿ ಬ್ರಿಜ್‌ ಭೂಷಣ್‌ ಅಧ್ಯಕ್ಷಗಿರಿಯಿಂದ ಕೆಳಗಿಳಿದಿದ್ದರು. ನಂತರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್‌ ಭೂಷಣ್‌ ಆಪ್ತ ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕುಸ್ತಿಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ.

    ವಾರಣಾಸಿ ಮೂಲದ ಸಂಜಯ್‌ ಸಿಂಗ್‌, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ‌ ಸುರೇಶ್

  • ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು‌, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!

    ಬ್ರಿಜ್‌ ಭೂಷಣ್‌ ಆಪ್ತ ಕುಸ್ತಿ ಅಧ್ಯಕ್ಷ: ಶೂ ಬಿಚ್ಚಿಟ್ಟು‌, ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲಿಕ್!

    ನವದೆಹಲಿ: ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ (Sanjay Singh) ಭಾರತ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್‌ (Sakshee Malikkh) ಕುಸ್ತಿಗೆ ವಿದಾಯ ಘೋಷಿಸಿದ್ದಾರೆ.

    ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ, ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌‌ (Brij Bhushan Sharan Singh) ಬ್ಯುಸಿನೆಸ್‌ ಪಾರ್ಟನರ್‌ ಹಾಗೂ ಆಪ್ತರಾಗಿರುವ ಸಂಜಯ್‌ ಸಿಂಗ್‌ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ನಾನು ಕುಸ್ತಿ ಪಂದ್ಯಗಳಿಂದ ದೂರವಾಗುತ್ತಿದ್ದೇನೆ ಎಂದು ಕಣ್ಣೀರು ಹಾಕುತ್ತಾ ಘೋಷಿಸಿದರು. ಅಲ್ಲದೇ ಇದೇ ವೇಳೆ ಅವರು ತಮ್ಮ ಶೂ ಕಳಚಿ ಸುದ್ದಿಗೋಷ್ಠಿ ನಡೆಯುತ್ತಿದ್ದ ಟೇಬಲ್‌ ಮೇಲೆ ಇರಿಸಿ, ಕಣ್ಣೀರು ಸುರಿಸಿದರು. ಇದನ್ನೂ ಓದಿ: ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್‌ ಕಂಚಿನ ಪದಕ ವಿಜೇತರಾಗಿದ್ದರು.

    ಕಾಮನ್‌ವೆಲ್ತ್‌, ಏಷ್ಯನ್‌ ಗೇಮ್ಸ್‌ ಪದಕ ವಿಜೇತೆ ವಿನೇಷ್‌ ಫೋಗಟ್‌ ಕೂಡಾ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟರು. ಸಂಜಯ್‌ ಸಿಂಗ್‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿ ಪಟುಗಳ ಮೇಲೆ ದೌರ್ಜನ್ಯ ಮುಂದುವರಿಯಲಿದೆ. ನಮಗೆ ನ್ಯಾಯ ಸಿಗುವುದು ಹೇಗೆ ಎಂದು ನಮಗೆ ಗೊತ್ತಾಗುತ್ತಿಲ್ಲ. ನಮ್ಮ ಕುಸ್ತಿ ಭವಿಷ್ಯ ಹೇಗೆ ಎಂಬ ಚಿಂತೆ ಶುರುವಾಗಿದೆ. ಎಲ್ಲಿಗೆ ಹೋಗಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಫೋಗಟ್‌ ಹೇಳಿದರು.

    ಕೇಂದ್ರ ಸರ್ಕಾರವು ನಮಗೆ ನೀಡಿದ ಭರವಸೆಯನ್ನು ಈಡೇರಿಸದೇ ಇರುವುದು ದೌರ್ಭಾಗ್ತ ಎಂದು ಬಜರಂಗ್‌ ಪುನಿಯಾ ಹೇಳಿದ್ರು. ನಮಗೆ ಯಾವುದೇ ಪಕ್ಷದ ಜೊತೆ ಸಂಬಂಧವಿಲ್ಲ. ನಾವು ರಾಜಕೀಯಕ್ಕಾಗಿ ಇಲ್ಲಿಗೆ ಬಂದಿಲ್ಲ. ನಾವು ಸತ್ಯಕ್ಕಾಗಿ ಹೋರಾಡುತ್ತಿದ್ದೆವು. ಆದರೆ ಇಂದು ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಆಪ್ತ ಕುಸ್ತಿ ಫೆಡರೇಷನ್‌ ಅಧ್ಯಕ್ಷರಾದರು ಎಂದು ಪುನಿಯಾ ಹೇಳಿದರು. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಬ್ರಿಜ್ ಭೂಷಣ್‌ಗೆ ಬಿಗ್ ರಿಲೀಫ್

    ಏನಾಗಿತ್ತು?: ಈ ಹಿಂದೆ ಕುಸ್ತಿ ಫೆಡರೇಷನ್‌ (Wrestling Federation of India) ಅಧ್ಯಕ್ಷರಾಗಿದ್ದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದು ದೂರು ದಾಖಲಾಗಿತ್ತು. ನಂತರ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದವು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್‌, ವಿನೇಶ್‌ ಫೋಗಟ್‌, ಬಜರಂಗ್‌ ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದವು.

    ಕೊನೆಗೆ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಮಧ್ಯಪ್ರವೇಶಿಸಿ ಸಾಂಧಾನ ನಡೆಸಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದರು. ಇದನ್ನೂ ಓದಿ: ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ – ಕುಸ್ತಿಪಟುಗಳ ಸ್ಪಷ್ಟನೆ

  • ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷಗಿರಿಗೆ ಬ್ರಿಜ್ ಭೂಷಣ್ ಬೆಂಬಲಿತ ಅಭ್ಯರ್ಥಿ ಆಯ್ಕೆ

    ನವದೆಹಲಿ: ಭಾರತದ ಕುಸ್ತಿ ಫೆಡರೇಶನ್ (Wrestling Federation Of India) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ಬೆಂಬಲಿತ ಅಭ್ಯರ್ಥಿ ಸಂಜಯ್ ಸಿಂಗ್ (Sanjay Singh) ಗೆಲುವು ಸಾಧಿಸಿದ್ದಾರೆ.

    ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ. ಈ ಮೂಲಕ ಅನಿತಾ ಶೆರಾನ್ ಸೋಲು ಕಂಡಿದ್ದಾರೆ. ಸಂಜಯ್ ಸಿಂಗ್ ಡಬ್ಲ್ಯುಎಫ್‍ಐನ ಮಾಜಿ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಸಂಸದರಿಗೇ ರಕ್ಷಣೆ ಇಲ್ಲ, ಬೇರೆಯವ್ರಿಗೆ ಹೇಗೆ ಎಂದು ಪ್ರಶ್ನಿಸಿದ ನಮ್ಮನ್ನೂ ಅಮಾನತು ಮಾಡಿದ್ರು: ಡಿಕೆ‌ ಸುರೇಶ್

    ಹಿಂದಿನ ಡಬ್ಲ್ಯುಎಫ್‍ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದ ನಂತರ ಅವರ ವಿರುದ್ಧ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಬ್ರಿಜ್ ಭೂಷಣ್ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಹಾಗೂ ಅವರ ಕುಟುಂಬಸ್ಥರಿಗೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

    ಜೂನ್ 7 ರಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬ್ರಿಜ್ ಭೂಷಣ್ ಅವರ ಕುಟುಂಬದ ಸದಸ್ಯರು ಅಥವಾ ಆಪ್ತರು ಯಾರೂ ಡಬ್ಲ್ಯುಎಫ್‍ಐ ಚುನಾವಣಾ ಕಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಭರವಸೆ ನೀಡಿದಾಗ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಅಧಿಕೃತವಾಗಿ ಹಿಂಪಡೆದಿದ್ದರು.

    ಸಂಜಯ್ ಸಿಂಗ್ ವಾರಣಾಸಿ ಮೂಲದವರಾಗಿದ್ದು, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಇದನ್ನೂ ಓದಿ: ಡಿ.ಕೆ.ಸುರೇಶ್‌ ಸೇರಿ ಮತ್ತೆ ಮೂವರು ಸಂಸದರು ಲೋಕಸಭೆಯಿಂದ ಅಮಾನತು

  • ಸಂಜಯ್ ಸಿಂಗ್‍ಗೆ ನ್ಯಾಯಾಂಗ ಬಂಧನ- ರಾಜ್ಯಸಭೆಯ AAP ನಾಯಕನಾಗಿ ರಾಘವ್ ಛಡ್ಡಾ ಆಯ್ಕೆ

    ಸಂಜಯ್ ಸಿಂಗ್‍ಗೆ ನ್ಯಾಯಾಂಗ ಬಂಧನ- ರಾಜ್ಯಸಭೆಯ AAP ನಾಯಕನಾಗಿ ರಾಘವ್ ಛಡ್ಡಾ ಆಯ್ಕೆ

    ನವದೆಹಲಿ: ಸಂಸದ ಸಂಜಯ್ ಸಿಂಗ್ (Sanjay Singh) ಬದಲಿಗೆ ರಾಘವ್ ಛಡ್ಡಾ (Raghav Chadha) ಅವರನ್ನು ರಾಜ್ಯಸಭೆಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಿದೆ ಎಂದು ಆಮ್ ಅದ್ಮಿ ಪಕ್ಷ ತಿಳಿಸಿದೆ. ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿರುವ ಎಎಪಿ ಪಕ್ಷದ ನಾಯಕತ್ವವು ಸಂಜಯ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ರಾಘವ್ ಚಡ್ಡಾ ಅವರು ಇನ್ನು ಮುಂದೆ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಿರುತ್ತಾರೆ ಎಂದು ಉಲ್ಲೇಖಿಸಿದೆ.

    ಸಂಜಯ್ ಸಿಂಗ್ ಹೊಸ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೊಳಕ್ಕಾಗಿ ಸದ್ಯ ನ್ಯಾಯಂಗ ಬಂಧನದಲ್ಲಿದ್ದಾರೆ. ಅವರ ಜಾಮೀನು ಅರ್ಜಿಗಳು ವಜಾಗೊಂಡಿರುವ ಹಿನ್ನೆಲೆ ರಾಜ್ಯಸಭೆಯಲ್ಲಿ ಕಲಾಪಗಳಿಗೆ ಪೂರಕವಾಗುವಂತೆ ಹೊಸ ನಾಯಕತ್ವವನ್ನು ಆಯ್ಕೆ ಮಾಡಲಾಗಿದೆ.

    ಚಡ್ಡಾ ಅವರನ್ನು ಅದರ ಫ್ಲೋರ್ ಲೀಡರ್ ಆಗಿ ನೇಮಿಸುವ ಕುರಿತು ಎಎಪಿಯಿಂದ (AAP) ಪತ್ರವನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯಸಭಾ ಸಚಿವಾಲಯದ ಮೂಲಗಳು ಖಚಿತಪಡಿಸಿವೆ. ಪತ್ರವು ಅನುಷ್ಠಾನಕ್ಕಾಗಿ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಬಳಿ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನಿಮ್ಮ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಋಣಿ: ಮೋದಿ ವಿಶ್‍ಗೆ ಹೆಚ್‍ಡಿಕೆ ಧನ್ಯವಾದ

    ರಾಘವ್ ಚಡ್ಡಾ ಅವರು ರಾಜ್ಯಸಭೆಯ ಅತ್ಯಂತ ಕಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ನಿಯಮಗಳ ಉಲ್ಲಂಘನೆ ಹಿನ್ನೆಲೆ ಇತ್ತಿಚೇಗೆ ಕಲಾಪಗಳಿಂದ ಅಮಾನತುಗೊಳಿಸಲಾಗಿತ್ತು. ಸದ್ಯ ಅನಮಾತು ವಾಪಸ್ ಪಡೆಯಲಾಗಿದೆ. ಪ್ರಸ್ತುತ ರಾಜ್ಯಸಭೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ಅತಿದೊಡ್ಡ ಬಲವನ್ನು ಹೊಂದಿದೆ.

  • ಆಪ್ ಸಂಸದ ಸಂಜಯ್ ಸಿಂಗ್ ಅರೆಸ್ಟ್

    ಆಪ್ ಸಂಸದ ಸಂಜಯ್ ಸಿಂಗ್ ಅರೆಸ್ಟ್

    ನವದೆಹಲಿ: ಆಪ್ ಸಂಸದ ಸಂಜಯ್ ಸಿಂಗ್ (Sanjay Singh) ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

    ಇಂದು ಬೆಳಗ್ಗೆ ಸಂಜಯ್ ಸಿಂಗ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸುದೀರ್ಘ ಶೋಧದ ಬಳಿಕ ಇದೀಗ ಅಧಿಕಾರಿಗಳು ಸಂಸದರನ್ನು ಅರೆಸ್ಟ್ ಮಾಡಿದ್ದಾರೆ.

    ಹೊಸ ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಂಜಯ್ ಸಿಂಗ್ ಅವರನ್ನು ಕೇಂದ್ರ ತನಿಖಾ ಸಂಸ್ಥೆ ಅವರ ನಿವಾಸದಲ್ಲಿ 10 ಗಂಟೆಗಳ ಕಾಲ ವಿಚಾರಣೆ ನಡೆಸಿತು. ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ

    ಈ ಹಿಂದೆ ಪ್ರಕರಣದಲ್ಲಿ ಎಎಪಿ ಸಂಸದರಿಗೆ ನಿಕಟವಾಗಿರುವ ಹಲವರ ನಿವೇಶನಗಳನ್ನು ಶೋಧ ನಡೆಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿ ಅಬಕಾರಿ ನೀತಿ ಹಗರಣ – ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ED ದಾಳಿ

    ದೆಹಲಿ ಅಬಕಾರಿ ನೀತಿ ಹಗರಣ – ಆಪ್ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ED ದಾಳಿ

    ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ (Delhi Excise Policy Scam) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ ಸಂಸದ ಸಂಜಯ್ ಸಿಂಗ್ (Sanjay Singh) ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು (ಬುಧವಾರ) ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಶೋಧ ನಡೆಸಿದರು.

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಆಪ್ತ ಸಿಬ್ಬಂದಿ ಮತ್ತು ಅವರೊಂದಿಗೆ ಸಂಬಂಧ ಹೊಂದಿರುವವರನ್ನು ಈ ಹಿಂದೆ ಇಡಿ ವಿಚಾರಣೆ ನಡೆಸಿತ್ತು. ದಾಳಿ ಬಗ್ಗೆ ಮಾತನಾಡಿರುವ ಆಪ್ ವಕ್ತಾರೆ ರೀನಾ ಗುಪ್ತಾ, ಸಂಜಯ್ ಸಿಂಗ್ ಅವರು ಪ್ರಧಾನಿ ಮೋದಿ ಮತ್ತು ಅದಾನಿ ವಿಷಯದ ಬಗ್ಗೆ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುತ್ತಿದ್ದರಿಂದ ಅವರ ನಿವಾಸದ ಮೇಲೆ ದಾಳಿ ನಡೆಸಲಾಗುತ್ತಿದೆ. ಹಿಂದೆಯೂ ಏನೂ ಸಿಗಲಿಲ್ಲ, ಇಂದು ಏನೂ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೀನಾದಿಂದ ಅಕ್ರಮ ಹೂಡಿಕೆ – ನ್ಯೂಸ್‌ಕ್ಲಿಕ್ ಸಂಪಾದಕ, HR 7 ದಿನ ಪೊಲೀಸ್ ಕಸ್ಟಡಿಗೆ – ಏನಿದು ಪ್ರಕರಣ?

    ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರ ಲಂಚವನ್ನು ಪಡೆದಿದೆ. ಹಣ ಪಾವತಿಸಿದ ಕೆಲವು ಡೀಲರ್‌ಗಳಿಗೆ ಅದ್ಯತೆ ನೀಡಿದೆ ಎಂದು ಆರೋಪಿಸಲಾಗಿದೆ. ಆದರೆ ಇದನ್ನು ಆಪ್ ಬಲವಾಗಿ ನಿರಾಕರಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಮನೀಶ್ ಸಿಸೋಡಿಯ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ – ಲಾಲು ಕುಟುಂಬಕ್ಕೆ ಜಾಮೀನು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಯಕನಿಂದಲೇ ನಟಿ ಆಕಾಂಕ್ಷ ಕೊಲೆ : ತಾಯಿಯ ಗಂಭೀರ ಆರೋಪ

    ಗಾಯಕನಿಂದಲೇ ನಟಿ ಆಕಾಂಕ್ಷ ಕೊಲೆ : ತಾಯಿಯ ಗಂಭೀರ ಆರೋಪ

    ನಿನ್ನೆಯಷ್ಟೇ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ  ಭೋಜಪುರಿ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದೊಂದು ವ್ಯವಸ್ಥಿತಿ ಕೊಲೆ ಎಂದು ನಟಿಯ ತಾಯಿ ಆರೋಪ ಮಾಡಿದ್ದಾರೆ. ಗಾಯಕ ಸಮರ್ ಸಿಂಗ್ (Samar Singh) ಹಾಗೂ ಸಂಜಯ್ ಸಿಂಗ್  (Sanjay Singh)ಅವರೇ ತಮ್ಮ ಮಗಳನ್ನು ಕೊಂದಿರುವುದಾಗಿ (Murder) ಗಂಭೀರ ಆರೋಪ ಮಾಡಿದ್ದಾರೆ. ನಿರಂತರವಾಗಿ ಇಬ್ಬರೂ ತಮ್ಮ ಮಗಳಿಗೆ ಬೆದರಿಕೆ ಹಾಕುತ್ತಿದ್ದರು ಎಂದೂ ಹೇಳಿಕೆ ನೀಡಿದ್ದಾರೆ.

    ಭೋಜಪುರಿ ನಟಿ (Bhojapuri Actress) ಆಕಾಂಕ್ಷಾ ದುಬೆ (Akanksha Dubey) ಅವರು ಭಾನುವಾರದಂದು (ಮಾ.26) ವಾರಣಾಸಿ (Varanasi) ಹೋಟೆಲ್‌ವೊಂದರಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದರು. ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ನಟಿ ಶವ ಪತ್ತೆಯಾಗಿತ್ತು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾಕಷ್ಟು ಭೋಜಪುರಿ ಆಲ್ಬಂ ಹಾಡುಗಳಲ್ಲಿ ಆಕಾಂಕ್ಷಾ ಕಾಣಿಸಿಕೊಂಡಿದ್ದಾರೆ. ಕಿರುತೆರೆಯ ಕೆಲವು ಸೀರಿಯಲ್‌ಗಳಲ್ಲಿ ಕೂಡ ಆಕಾಂಕ್ಷಾ ನಟಿಸಿದ್ದಾರೆ. 25 ವರ್ಷದ ಯುವ ನಟಿ ಇದೀಗ ಆತ್ಮಹತ್ಯೆಗೆ ಶರಣಾಗಿರೋದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

    ಬೆಳಿಗ್ಗೆ 7:45ಕ್ಕೆ (ಮಾ.26) ಆಕಾಂಕ್ಷಾ ನಟಿಸಿರುವ ಹೊಸ ಆಲ್ಬಂ ಸಾಂಗ್‌ವೊಂದು ರಿಲೀಸ್ ಆಗಿದೆ. ಭಾನುವಾರದಂದೇ ಆಕಾಂಕ್ಷಾ ಉಳಿದುಕೊಂಡಿದ್ದ ಹೋಟೆಲ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸರು ನಟಿಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡರೂ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

    ಆಕಾಂಕ್ಷಾ ಸಿನಿಮಾ ಶೂಟಿಂಗ್‌ಗಾಗಿ ವಾರಣಾಸಿಗೆ ಬಂದಿದ್ದರು ಎನ್ನಲಾಗಿದೆ. ಒಂದು ದಿನದ ಹಿಂದೆ, ಶನಿವಾರ ರಾತ್ರಿ, ಆಕಾಂಕ್ಷಾ ತನ್ನ ಇನ್ಸ್ಟಾಗ್ರಾಂ ಅಕೌಂಟ್‌ನಲ್ಲಿ ತನ್ನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ, ಪ್ರೇಮಿಗಳ ದಿನದಂದು ಸೋಷಿಯಲ್ ಮೀಡಿಯಾದಲ್ಲಿ ನಟಿ ತನ್ನ ರಿಲೇಷನ್‌ಶಿಪ್ ಅಧಿಕೃತಗೊಳಿಸಿ ಸುದ್ದಿ ಮಾಡಿದರು. ಇದೀಗ ನಟಿಯ ಸಾವು ನಿಜಕ್ಕೂ ಕೊಲೆಯೋ ಅಥವಾ ಆತ್ಮಹತ್ಮೆನ ಎಂಬ ಅನುಮಾನ ಉಂಟಾಗಿದೆ. ತನಿಖೆ ಬಳಿಕ ಅಸಲಿ ವಿಚಾರ ಹೊರಬರಲಿದೆ.

  • ಪಾಲಿಕೆಗೆ ಆಯ್ಕೆಯಾದ ಆಪ್ ಕೌನ್ಸಿಲರ್‌ಗಳನ್ನು ಖರೀದಿಸಲು BJP ಯತ್ನ – ಆಪ್ ಆರೋಪ

    ಪಾಲಿಕೆಗೆ ಆಯ್ಕೆಯಾದ ಆಪ್ ಕೌನ್ಸಿಲರ್‌ಗಳನ್ನು ಖರೀದಿಸಲು BJP ಯತ್ನ – ಆಪ್ ಆರೋಪ

    ನವದೆಹಲಿ: ದೆಹಲಿಯ ಮಹಾನಗರ ಪಾಲಿಕೆಗೆ (MCD) ಆಯ್ಕೆಯಾದ ಕೌನ್ಸಿಲರ್‌ಗಳನ್ನು ಬಿಜೆಪಿ ಪಕ್ಷವು ಖರೀದಿಸಲು ಪ್ರಯತ್ನಿಸುತ್ತಿದೆ. ಈ ಮೂಲಕ ಬಿಜೆಪಿ (BJP) ತನ್ನ ಕೊಳಕು ರಾಜಕಾರಣವನ್ನು ಪ್ರದರ್ಶಿಸಿದೆ ಎಂದು ಆಮ್ ಆದ್ಮಿ ಪಕ್ಷ (AAP) ಆರೋಪಿಸಿದೆ.

    ಈ ಸಂಬಂಧ ಎಎಪಿ ನೂತನ ಕೌನ್ಸಿಲರ್‌ಗಳಾದ ಡಾ.ರೋನಾಕ್ಷಿ ಶರ್ಮಾ, ಅರುಣ್ ನವಾರಿಯಾ, ಜ್ಯೋತಿ ರಾಣಿ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ (Sanjay Singh) ಅವರಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಆಪ್ ಕೌನ್ಸಿಲರ್‌ಗಳನ್ನು ಖರೀದಿಸಲು ಬಿಜೆಪಿ (BJP) 100 ಕೋಟಿ ರೂ. ಬಜೆಟ್ ಅನ್ನು ಪ್ರಸ್ತಾಪಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂಡೀಗಢ ಬಿಜೆಪಿ, ಕಾಂಗ್ರೆಸ್‍ಗೆ ಮುಖಭಂಗ – ನಗರಪಾಲಿಕೆ ಚುನಾವಣೆಯಲ್ಲಿ ಎಎಪಿ ಮೇಲುಗೈ

    ಭಾರತೀಯ ಜನತಾ ಪಕ್ಷವು ಕರ್ನಾಟಕ, ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಗೋವಾ ಹಾಗೂ ಗುಜರಾತ್ ನಂತೆಯೇ ಚುನಾಯಿತ ಪ್ರತಿನಿಧಿಗಳನ್ನು ಖರೀದಿಸಿರುವ ಸೂತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ. ಹಣ ಹಾಗೂ ಬೆದರಿಕೆಯ ಮೂಲಕ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಹಾಗೂ ಜನಾದೇಶವನ್ನು ಅವಮಾನಿಸಲು ಪ್ರಯತ್ನಿಸುತ್ತಿದೆ. ಅಂತಹವರನ್ನು ಬಂಧಿಸಿ ಜೈಲಿಗಟ್ಟುವಂತೆ ದೆಹಲಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಳೆಬಿಲ್ಲು ಬಣ್ಣದ ಶರ್ಟ್ ಧರಿಸಿ ಬಂಧನವಾಗಿದ್ದ ಅಮೆರಿಕದ ಪತ್ರಕರ್ತ ಕತಾರ್‌ನಲ್ಲಿ ನಿಧನ

    ಬಿಜೆಪಿ ನಮಗಿಂತಲೂ 30 ಸ್ಥಾನಗಳನ್ನು ಕಡಿಮೆ ಪಡೆದಿದ್ದರೂ ನಾಚಿಕೆಯಿಲ್ಲದೇ ಮೇಯರ್ ಸ್ಥಾನವೂ ನಮ್ಮದೇ ಎಂದು ಹೇಳುತ್ತದೆ. ಅಧಿಕಾರಕ್ಕೆ ಬರಲೇಬೇಕು ಎಂಬ ಉದ್ದೇಶದಿಂದ 100 ಕೋಟಿ ರೂ. ಬಜೆಟ್ ಅನ್ನು ಪ್ರಸ್ತಾಪಿಸಿದ್ದಾರೆ. 10 ಕೌನ್ಸಿಲರ್‌ಗಳಿಗೆ ತಲಾ 10 ಕೋಟಿಯಂತೆ 100 ಕೋಟಿ ಹಣ ವ್ಯಯಿಸಲು ಮುಂದಾಗಿದೆ ಎಂದು ದೂರಿದ್ದಾರೆ.

    ಎಎಪಿ ಕೌನ್ಸಿಲರ್‌ಗಳು ಅರವಿಂದ್ ಕೇಜ್ರಿವಾಲ್ (Arvind Kejriwal) ಅವರೊಂದಿಗೆ ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಇದ್ದಾರೆ. ನಮ್ಮ ಕೌನ್ಸಿಲರ್‌ಗಳು ಅವರ ಎಲ್ಲಾ ತಂತ್ರಗಳನ್ನು ಬಹಿರಂಗಪಡಿಸುತ್ತಲೇ ಇರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಪ್‌ ಗೆದ್ದರೂ ದೆಹಲಿ ಮೇಯರ್‌ ಹುದ್ದೆ ಬಿಜೆಪಿಗೆ ಸಿಗುತ್ತಾ?

    ಇತ್ತೀಚೆಗೆ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್‌ನ 250 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 134 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ 15 ವರ್ಷಗಳ ಬಿಜೆಪಿ ಆಡಳಿತವನ್ನ ಕೊನೆಗೊಳಿಸಿತು. ಬಿಜೆಪಿ 104 ಸ್ಥಾನಗಳನ್ನು ಗೆದ್ದುಕೊಂಡರೆ, ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದು ಮಕಾಡೆ ಮಲಗಿತು.

    Live Tv
    [brid partner=56869869 player=32851 video=960834 autoplay=true]

  • ಸುದ್ದಿಗೋಷ್ಠಿ ವೇಳೆ ಮಾನನಷ್ಟ ನೋಟಿಸ್‍ನ್ನು ಹರಿದ ಆಪ್ ಸಂಸದ

    ಸುದ್ದಿಗೋಷ್ಠಿ ವೇಳೆ ಮಾನನಷ್ಟ ನೋಟಿಸ್‍ನ್ನು ಹರಿದ ಆಪ್ ಸಂಸದ

    ನವದೆಹಲಿ: ಖಾದಿ ಹಗರಣ ಹೇಳಿಕೆ ಹಿನ್ನೆಲೆಯಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ(VK Saxena) ಅವರು ಕಳುಹಿಸಿದ್ದ ಮಾನನಷ್ಟ ನೋಟಿಸ್ (Defamation Notice)ಅನ್ನು ಆಮ್ ಆದ್ಮಿ ಪಕ್ಷದ(AAP) ಸಂಸದ ಸಂಜಯ್ ಸಿಂಗ್(Sanjay Singh) ಹರಿದು ಹಾಕಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನವು ನನಗೆ ಸತ್ಯವನ್ನು ಮಾತನಾಡುವ ಹಕ್ಕನ್ನು ನೀಡಿದೆ. ರಾಜ್ಯಸಭೆಯ ಸದಸ್ಯನಾಗಿ ನನಗೆ ಸತ್ಯವನ್ನು ಮಾತನಾಡುವ ಹಕ್ಕಿದೆ. ಕಳ್ಳ, ಭ್ರಷ್ಟರು ಕಳುಹಿಸಿರುವ ಈ ನೋಟಿಸ್‍ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಅವರು ಅಲ್ಲೇ ಆ ನೋಟಿಸ್‍ನ್ನು ಹರಿದು ಹಾಕಿದ್ದಾರೆ. ನೋಟಿಸ್‍ನ್ನು ಹರಿದ ನಂತರ ಮಾತನಾಡಿದ ಅವರು, ನಾನು ಇಂತಹ ನೋಟಿಸ್‍ಗಳನ್ನು 10 ಬಾರಿ ಹರಿದು ಎಸೆಯಬಹುದು ಎಂದರು.

    ಈ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿರುವ ಮನೀಶ್ ಸಿಸೋಡಿಯಾ(Manish Sisodia) ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು. ಆ ಬಳಿಕ ಆಪ್‍ನ ಕೆಲ ನಾಯಕರು ಮಾತನಾಡಿ, ಕೇಂದ್ರ ಸರ್ಕಾರದಿಂದ ನೇಮಕಗೊಂಡಿರುವ ಲೆಫ್ಟಿನೆಂಟ್ ಗವರ್ನರ್ ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನದ ಮೇರೆಗೆ ಈ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಮಂಗೋಲಿಯಾ ಅಧ್ಯಕ್ಷನಿಂದ ರಾಜನಾಥ್ ಸಿಂಗ್‍ಗೆ ವಿಭಿನ್ನ ಉಡುಗೊರೆ

    ಅಷ್ಟೇ ಅಲ್ಲದೇ ಲೆಫ್ಟಿನೆಂಟ್ ಗವರ್ನರ್ ವಿರುದ್ಧ ಆಪ್ ಪಕ್ಷವು ಆರೋಪಗಳನ್ನು ಮಾಡಿದ್ದು, 2015 ರಿಂದ 2022ರ ಆರಂಭದವರೆಗೆ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷರಾಗಿದ್ದಾಗ ಸಕ್ಸೇನಾ ಹಲವಾರು ಅಕ್ರಮಗಳನ್ನು ಮಾಡಿದ್ದಾರೆ. 2016ರಲ್ಲಿ 1400 ಕೋಟಿ ರೂ. ಹಾಗೂ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

    ಈ ಹಿನ್ನೆಲೆಯಲ್ಲಿ ವಿಕೆ ಸಕ್ಸೇನಾ ಅವರು ಆಪ್ ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ದುರ್ಗೇಶ್ ಪಾಠಕ್, ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಜಾಸ್ಮಿನ್ ಶಾ ಅವರಿಗೆ ಮಾನನಷ್ಟ ನೋಟಿಸ್‍ನ್ನು ಕಳುಹಿಸಿದ್ದರು. ಇದನ್ನೂ ಓದಿ: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ಹೇಗಿದೆ?- 144 ಕ್ಷೇತ್ರಗಳ ಮೇಲೆ ಮೋದಿ ಕಣ್ಣು

    Live Tv
    [brid partner=56869869 player=32851 video=960834 autoplay=true]