Tag: Sanjiv Khanna

  • CJI ಹುದ್ದೆಗೆ ನ್ಯಾ. ಬಿ.ಆರ್ ಗವಾಯಿ ಹೆಸರು ಶಿಫಾರಸು

    CJI ಹುದ್ದೆಗೆ ನ್ಯಾ. ಬಿ.ಆರ್ ಗವಾಯಿ ಹೆಸರು ಶಿಫಾರಸು

    ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ (Sanjiv Khanna) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಬಿ.ಆರ್‌ ಗವಾಯಿ (BR Gavai) ಅವರ ಹೆಸರು ಶಿಫಾರಸು ಮಾಡಿದ್ದಾರೆ.

    ಮುಂದಿನ ತಿಂಗಳು ಮೇ 13ರಂದು ಸಿಜೆಐ ಹುದ್ದೆಯಿಂದ ಸಂಜೀವ್‌ ಖನ್ನಾ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಬಿ.ಆರ್‌ ಗವಾಯಿ ಅವರ ಹೆಸರನ್ನ ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಬಿ.ಆರ್‌ ಗವಾರಿ ಅವರು ಮೇ 14ರಂದು 52ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ

    Sanjiv Khanna DY Chandrachud

    ಕಳೆದ ವರ್ಷ ನವೆಂಬರ್‌ 10ರಂದು ಡಿ.ವೈ ಚಂದ್ರಚೂಡ್‌ ಅವರು ಸಿಜೆಐ ಸ್ಥಾನದಿಂದ ನಿವೃತ್ತರಾದರು. ಆ ಬಳಿಕ ಸಂಜೀವ್‌ ಖನ್ನಾ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸದ್ಯ ಅವರು ಮೇ 13ರಂದು ನಿವೃತ್ತಿ ಹೊಂದಿದ ಬಳಿಕ ಮೇ 14ರಂದು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಬಿ.ಆರ್‌ ಗವಾಯಿ ಅವರು 2025ರ ನವೆಂಬರ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ – ಇನ್ಮುಂದೆ ರೈಲಿನಲ್ಲೂ ಇರಲಿದೆ ಎಟಿಎಂ!

    2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್‌ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್‌ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ವಾರಂತ್ಯಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ ರಚನೆ?

    ಭೂಷಣ್ ರಾಮಕೃಷ್ಣ ಗವಾಯಿ ಯಾರು?
    2007ರಲ್ಲಿ ನ್ಯಾ. ಕೆ.ಜಿ ಬಾಲಕೃಷ್ಣನ್‌ ಅವರ ಬಳಿಕ ನ್ಯಾಯಮೂರ್ತಿ ಸ್ಥಾನ ಅಲಂಕರಿದ 2ನೇ ದಲಿತರೂ ಪ್ರಮುಖರಾಗಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಮೂಲದ ಗವಾಯಿ ಅವರು 1985 ರಲ್ಲಿ ಬ್ಯಾರಿಸ್ಟರ್ ರಾಜಾ ಭೋನ್ಸಾಲೆ ಅವರ ಬಳಿ ತಮ್ಮ ವಕೀಲ ವೃತ್ತಿ ಪ್ರಾರಂಭಿಸಿದರು. ಬಳಿಕ ಬಾಂಬೆ ಹೈಕೋರ್ಟ್‌ನಲ್ಲಿ ಸ್ವತಂತ್ರವಾಗಿ ಅಭ್ಯಾಸ ಶುರು ಮಾಡಿದರು. 1992 ರಲ್ಲಿ ಸಹಾಯಕ ಸರ್ಕಾರಿ ಪ್ಲೀಡರ್ ಮತ್ತು ಹೆಚ್ಚುವರಿ ಸಾರ್ವಜನಿಕ ಅಭಿಯೋಜಕರಾಗಿ ನೇಮಕಗೊಂಡ ಇವರು 2000 ಇಸವಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆದರು. ನಂತರ 2003ರಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಅವರ ವೃತ್ತಿ ಜೀವನ ಪ್ರಾರಂಭವಾಯಿತು. 2005ರಲ್ಲಿ ಖಾಯಂ ನ್ಯಾಯಾಧೀಶರಾದರು. 2019 ರಲ್ಲಿ ಅವರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿಹೊಂದಿದರು.

    ಗವಾಯಿ ಅವರು ಅಮರಾವತಿಯ ಡಾ. ಅಂಬೇಡ್ಕರ್ ಕಾಲೇಜ್ ಆಫ್ ಲಾದಿಂದ ಕಾನೂನು ಪದವಿಯನ್ನು ಪಡೆದರು. ತಮ್ಮ ಶಿಕ್ಷಣದ ಜೊತೆಗೆ, ಕಾನೂನು ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರ ವೃತ್ತಿಜೀವನದ ಗಮನಾರ್ಹ ತೀರ್ಪುಗಳಲ್ಲಿ ಒಂದು ಜಮ್ಮು ಮತ್ತು ಕಾಶ್ಮೀರದ 370 ನೇ ವಿಧಿಯನ್ನು ರದ್ದುಪಡಿಸುವುದು ಮತ್ತು ಅದನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದು. ಅವರು ನವೆಂಬರ್‌ನಲ್ಲಿ ನಿವೃತ್ತರಾಗುವ ಮೊದಲು ಸುಮಾರು ಆರು ತಿಂಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ.

  • ಧಾರ್ಮಿಕ ರಚನೆಗಳ ಬಗ್ಗೆ ಯಾವುದೇ ಆದೇಶ ನೀಡದಂತೆ ಕೆಳ ಹಂತದ ನ್ಯಾಯಾಲಯಗಳಿಗೆ ಸುಪ್ರೀಂ ನಿರ್ದೇಶನ

    ನವದೆಹಲಿ: ರಾಷ್ಟ್ರವ್ಯಾಪಿ ವಿಚಾರಣಾ ನ್ಯಾಯಾಲಯಗಳಲ್ಲಿ ಅಸ್ತಿತ್ವದಲ್ಲಿರುವ ಧಾರ್ಮಿಕ ರಚನೆಗಳ (Worship Act)  ಬಗ್ಗೆ ಯಾವುದೇ ಆದೇಶಗಳನ್ನು ನೀಡದಂತೆ ಅಥವಾ ಅವುಗಳ ಧಾರ್ಮಿಕ ಸ್ವರೂಪವನ್ನು ಪ್ರಶ್ನಿಸುವ ಪ್ರಕರಣಗಳಲ್ಲಿ ಸಮೀಕ್ಷೆಗಳನ್ನು ನಡೆಸಲು ಸೂಚನೆ ನೀಡದಂತೆ ಸುಪ್ರೀಂ ಕೋರ್ಟ್ (Supreme Court) ನಿರ್ದೇಶನ ನೀಡಿದೆ.

    ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ 1991ರ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿಗಳ ಒಂದು ಗುಂಪಿನ ವಿಚಾರಣೆಯ ಸಂದರ್ಭದಲ್ಲಿ, ಕಾಯಿದೆಯನ್ನು ಪ್ರಶ್ನಿಸುವ ಅರ್ಜಿಗಳನ್ನು ಆಲಿಸಿ ಮತ್ತು ಪರಿಹರಿಸುವವರೆಗೆ ಧಾರ್ಮಿಕ ಸ್ವರೂಪದ ಬಗ್ಗೆ ಯಾವುದೇ ಹೊಸ ದಾವೆಗಳನ್ನು ದಾಖಲಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಡಿಜಿಟಲ್ ಫ್ರಾಡ್, ಅರೆಸ್ಟ್ ಬಗ್ಗೆ ಜಾಗೃತಿ ಮೂಡಿಸಲು ಕ್ರಮ: ಪರಮೇಶ್ವರ್

    ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾ.ಪಿವಿ ಸಂಜಯ್ ಕುಮಾರ್ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ. ಈ ವಿಷಯವು ನ್ಯಾಯಾಲಯದ ಅಧೀನವಾಗಿರುವುದರಿಂದ ಯಾವುದೇ ಹೊಸ ಮೊಕದ್ದಮೆಗಳನ್ನು ನೋಂದಾಯಿಸಬಾರದು ಅಥವಾ ವಿಚಾರಣೆಗೆ ಆದೇಶಿಸಬಾರದು ಎಂದು ನಿರ್ದೇಶಿಸಲು ನಾವು ಸೂಕ್ತವೆಂದು ಪರಿಗಣಿಸುತ್ತೇವೆ. ಮುಂದುವರಿದು ಬಾಕಿ ಉಳಿದಿರುವ ಸೂಟ್‌ಗಳಲ್ಲಿ ನ್ಯಾಯಾಲಯಗಳು ಯಾವುದೇ ಪರಿಣಾಮಕಾರಿ ಆದೇಶ ಅಥವಾ ಅಂತಿಮ ಆದೇಶಗಳನ್ನು ನೀಡುವುದಿಲ್ಲ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಉಗ್ರ ಸಂಘಟನೆಗೆ ನೇಮಕಾತಿ ಕೇಸ್‌ | 5 ರಾಜ್ಯಗಳ 19 ಸ್ಥಳಗಳಲ್ಲಿ ಎನ್‌ಐಎ ಶೋಧ -ಮೂವರು ಅರೆಸ್ಟ್‌

    ವಿಚಾರಣೆ ವೇಳೆ ಕೇಂದ್ರವು ತನ್ನ ಪ್ರತಿ-ಅಫಿಡವಿಟ್ ಇನ್ನೂ ಸಲ್ಲಿಸಿಲ್ಲ ಎಂದು ಮು.ನ್ಯಾ.ಸಂಜೀವ್ ಖನ್ನಾ (Sanjiv Khanna) ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 1991ರ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಸಮಯಾವಕಾಶ ಬೇಕು ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೋರ್ಟ್ ನಾಲ್ಕು ವಾರಗಳಲ್ಲಿ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಕೇಂದ್ರಕ್ಕೆ ಆದೇಶಿಸಿತು. ಇದನ್ನೂ ಓದಿ: ರೈತ ಆತ್ಮಹತ್ಯೆ ಕೇಸ್‌ ಟ್ವೀಟ್‌ ವಿವಾದ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು

  • ತುರ್ತು ವಿಚಾರಣೆಗೆ ಇ-ಮೇಲ್ ಮಾಡಿ, ಮೌಖಿಕ ಮನವಿ ನಡೆಯಲ್ಲ: ನೂತನ ಸಿಜೆಐ ಸಂಜೀವ್ ಖನ್ನಾ ಸೂಚನೆ

    ತುರ್ತು ವಿಚಾರಣೆಗೆ ಇ-ಮೇಲ್ ಮಾಡಿ, ಮೌಖಿಕ ಮನವಿ ನಡೆಯಲ್ಲ: ನೂತನ ಸಿಜೆಐ ಸಂಜೀವ್ ಖನ್ನಾ ಸೂಚನೆ

    ನವದೆಹಲಿ: ಪ್ರಕರಣಗಳ ತುರ್ತು ಪಟ್ಟಿಗೆ ಮತ್ತು ವಿಚಾರಣೆಗೆ ಇನ್ನು ಮುಂದೆ ಮೌಖಿಕ ಮನವಿಗಳನ್ನು (Oral Mentioning) ಅನುಮತಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ನ (Supreme Court) ನೂತನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ (CJI Sanjiv Khanna) ಘೋಷಿಸಿದ್ದಾರೆ. ಅಂತಹ ಪ್ರಕರಣಗಳಿಗಾಗಿ ವಕೀಲರು ಇ-ಮೇಲ್ ಅಥವಾ ಲಿಖಿತ ಪತ್ರಗಳ ಮೂಲಕ ವಿನಂತಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ.

    ಸಾಂಪ್ರದಾಯಿಕವಾಗಿ, ವಕೀಲರು ತಮ್ಮ ಪ್ರಕರಣಗಳನ್ನು ಸಿಜೆಐ ನೇತೃತ್ವದ ಪೀಠದ ಮುಂದೆ ಪ್ರತಿನಿತ್ಯದ ವಿಚಾರಣೆಯ ಪ್ರಾರಂಭದಲ್ಲಿ ತುರ್ತು ಆಧಾರದ ಮೇಲೆ ಔಟ್-ಆಫ್-ಟರ್ನ್ ಪಟ್ಟಿಗಳು ಮತ್ತು ವಿಚಾರಣೆಗಳನ್ನು ಕೋರುತ್ತಿದ್ದರು. ಇನ್ನು ಮುಂದೆ ಯಾವುದೇ ಲಿಖಿತ ಅಥವಾ ಮೌಖಿಕ ಉಲ್ಲೇಖಗಳನ್ನು ಪರಿಗಣಿಸುವುದಿಲ್ಲ. ತುರ್ತು ಕಾರಣಗಳನ್ನು ತಿಳಿಸಿ ಇ-ಮೇಲ್‌ಗಳು ಅಥವಾ ಲಿಖಿತ ಸ್ಲಿಪ್‌ಗಳು ಅಥವಾ ಪತ್ರಗಳನ್ನು ಸಲ್ಲಿಸಿದರೆ ಮಾತ್ರ ಅದನ್ನು ಸ್ವೀಕರಿಸಲಾಗುತ್ತದೆ ಎಂದು ಸಿಜೆಐ ಹೇಳಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧರಾಗಿದ್ದರು: ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ

    ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ 51ನೇ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿ ಖನ್ನಾ, ನ್ಯಾಯಾಂಗ ಸುಧಾರಣೆಗಳಿಗೆ ಜನಕೇಂದ್ರಿತ ಕಾರ್ಯಸೂಚಿಯ ಮಹತ್ವವನ್ನು ಪುನರುಚ್ಚರಿಸಿದ್ದಾರೆ. ಜನರ ಸ್ಥಾನಮಾನವನ್ನು ಲೆಕ್ಕಿಸದೆ ಅವರಿಗೆ ಸುಲಭವಾಗಿ ನ್ಯಾಯ ಸಿಗುವಂತೆ ಮಾಡಲು ಮತ್ತು ಸಮಾನತೆಯನ್ನು ಖಚಿತಪಡಿಸುವುದು ನ್ಯಾಯಾಂಗದ ಸಾಂವಿಧಾನಿಕ ಕರ್ತವ್ಯವಾಗಿದೆ ಎಂದು ಅವರು ಒತ್ತಿ ಹೇಳಿದ್ದರು. ಇದನ್ನೂ ಓದಿ:  ವಕ್ಫ್ ಬೋರ್ಡ್ ವಿರುದ್ಧ ತಿರುಗಿ ಬಿದ್ದ ಅಥಣಿಯ 60 ಮುಸ್ಲಿಂ ಕುಟುಂಬಗಳು

  • ಸುಪ್ರೀಂ ಕೋರ್ಟ್‌ನ ನೂತನ ಸಿಜೆಐ ಆಗಿ ಸಂಜೀವ್‌ ಖನ್ನಾ ನೇಮಕ – ನ.11ರಂದು ಪ್ರಮಾಣ ವಚನ

    ಸುಪ್ರೀಂ ಕೋರ್ಟ್‌ನ ನೂತನ ಸಿಜೆಐ ಆಗಿ ಸಂಜೀವ್‌ ಖನ್ನಾ ನೇಮಕ – ನ.11ರಂದು ಪ್ರಮಾಣ ವಚನ

    ನವದೆಹಲಿ: ನ್ಯಾ. ಸಂಜೀವ್‌ ಖನ್ನಾ (Sanjiv Khanna) ಅವರನ್ನು ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯನ್ಯಾಮೂರ್ತಿಯನ್ನಾಗಿ (CJI) ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    ಭಾರತದ ಸಂವಿಧಾನದ 124ನೇ ವಿಧಿಯ ಷರತ್ತು (2)ರ ಅನ್ವಯ ನೀಡಲಾದ ಅಧಿಕಾರ ಚಲಾಯಿಸುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮುಂದಿನ ಸಿಜೆಐ ಆಗಿ ನ್ಯಾ. ಸಂಜೀವ್ ಖನ್ನಾ ಅವರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ. ಇದನ್ನೂ ಓದಿ: ಕಣ್ತೆರೆದ ನ್ಯಾಯದೇವತೆ – ಇಲ್ಲಿಯವರೆಗೂ ಕಣ್ಣಿಗೆ ಕಟ್ಟಿದ್ದ ಬಟ್ಟೆ ತೆರವುಗೊಳಿಸಿದ ಸುಪ್ರೀಂ ಕೋರ್ಟ್

    ನವೆಂಬರ್‌ 11ರಂದು ಸಿಜೆಐ ಹುದ್ದೆಯಿಂದ ಹಾಲಿ ಸಿಜೆಐ ಚಂದ್ರಚೂಡ್‌ (DY ChandraChud) ನಿವೃತ್ತಿಯಾಗಲಿದ್ದಾರೆ. ಅಂದೇ ಸಂಜೀವ್‌ ಖನ್ನಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದು, 2025ರ ಮೇ 13ರ ವರೆಗೆ ಕರ್ತವ್ಯ ನಿರ್ವಹಿಸಲಿದ್ದಾರೆ. 2019ರ ಜನವರಿ 18ರಂದು ನ್ಯಾ. ಸಂಜೀವ್‌ ಖನ್ನಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌‌ ಹುದ್ದೆಗೆ ನೇಮಿಸಲಾಗಿತ್ತು. ಇದನ್ನೂ ಓದಿ: ಬಿಹಾರ, ಆಂಧ್ರಕ್ಕೆ ಬಂಪರ್‌ ಗಿಫ್ಟ್‌ – 6,798 ಕೋಟಿ ಮೊತ್ತದ 2 ರೈಲ್ವೇ ಯೋಜನೆಗಳಿಗೆ ಕೇಂದ್ರ ಕ್ಯಾಬಿನೆಟ್ ಅಸ್ತು

    2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್‌ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್‌ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ಮಹಾ ಚುನಾವಣೆ: ಅಜಿತ್ ಪವಾರ್ ಬಣಕ್ಕೆ ಸಿಕ್ತು ಗಡಿಯಾರ ಚಿಹ್ನೆ – ಸುಪ್ರೀಂ ಕೋರ್ಟ್ ಅನುಮತಿ

  • CJI ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

    CJI ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

    ನವದೆಹಲಿ: ಸುಪ್ರೀಂ ಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ (DY Chandrachud) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಸಂಜೀವ್‌ ಖನ್ನಾ (Sanjiv Khanna) ಅವರ ಹೆಸರು ಶಿಫಾರಸು ಮಾಡಿದ್ದಾರೆ.

    ಮುಂದಿನ ನವೆಂಬರ್‌ 11ರಂದು ಸಿಜೆಐ ಹುದ್ದೆಯಿಂದ ಚಂದ್ರಚೂಡ್‌ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಮೊರಾಂಡಮ್ ಆಫ್ ಪ್ರೊಸೀಜರ್ ಪ್ರಕಾರ, ಮುಂದಿನ ಶಿಫಾರಸು ಕಳುಹಿಸುವಂತೆ ಕೇಂದ್ರ ಸರ್ಕಾರ (Central Government) ಕಳೆದ ಶುಕ್ರವಾರ ಚಂದ್ರಚೂಡ್‌ ಅವರಿಗೆ ಪತ್ರ ಬರೆದಿತ್ತು. ಇದಕ್ಕೆ‌ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಚಂದ್ರಚೂಡ್‌ ಅವರು ತಮ್ಮ ಉತ್ತರಾಧಿಕಾರಿಯಾಗಿ ಸಂಜೀವ್‌ ಖನ್ನಾ ಅವರ ಹೆಸರನ್ನ ಶಿಫಾರಸು ಮಾಡಿದ್ದಾರೆ. ಸರ್ಕಾರದ ಅನುಮೋದನೆ ನಂತರ ನ್ಯಾ. ಸಂಜೀವ್ ಖನ್ನಾ 51ನೇ ಸಿಜೆಐಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

    2022ರ ನವೆಂಬರ್ 8ರಂದು ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಿದ ಬಳಿಕ ಚಂದ್ರಚೂಡ್‌ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದ್ದರು. ಯುಯು ಲಲಿತ್‌ ಅವರಿಗೂ ಮುನ್ನ ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ಅಧಿಕಾರ ನಿರ್ವಹಿಸಿದ್ದರು. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ಚಂದ್ರಚೂಡ್ ಹಿನ್ನೆಲೆ ಏನು?
    ಎಲ್‌ಎಲ್‌ಎಂ ಪೂರ್ಣಗೊಳಿಸಿದ ನ್ಯಾ. ಚಂದ್ರಚೂಡ್ ಅವರು ಡಾಕ್ಟರ್ ಇನ್ ಜುಡಿಷಿಯಲ್ ಸೈನ್ಸಸ್ ಪದವಿಯನ್ನು ಅಮೆರಿಕದ ಹಾರ್ವರ್ಡ್ ಕಾನೂನು ಶಾಲೆಯಿಂದ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಬಿಎ ಪದವಿ ಪಡೆದಿದ್ದರು. ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದ ನ್ಯಾ. ಚಂದ್ರಚೂಡ್ ಅವರನ್ನು ಬಾಂಬೆ ಹೈಕೋರ್ಟ್ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. ಇದನ್ನೂ ಓದಿ: 2025-26ರ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ – ಎಷ್ಟು ಏರಿಕೆಯಾಗಿದೆ?

    2000 ಇಸವಿಯಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ನಂತರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ 2 ವರ್ಷ ಅಧಿಕಾರ ಪೂರೈಸಿದ ಸಾಧನೆ ಇವರದ್ದಾಗಲಿದೆ.  ಇದನ್ನೂ ಓದಿ: BMW i7 ಇವಿ ಕಾರಿಗೆ ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಪೂಜೆ ಸಲ್ಲಿಸಿದ ಜರ್ಮನ್ ರಾಯಭಾರಿ