ನಟಿ ರಚಿತಾ ರಾಮ್ (Rachita Ram) ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ (Film Chamber) ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದ ನಿರ್ದೇಶಕ ನಾಗಶೇಖರ್ (Nagashekar) ಒತ್ತಾಯಿಸಿದ್ದಾರೆ.
ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.
ನಮ್ಮ ಸಿನಿಮಾ ಪ್ರಚಾರಕ್ಕೆ ರಚಿತಾ ರಾಮ್ ಒಂಚೂರು ಸಪೋರ್ಟ್ ಕೊಟ್ಟಿಲ್ಲ. ರಾಕ್‌ಲೈನ್ ವೆಂಕಟೇಶ್ ಅವರು ಮನವೊಲಿಸಲು ಪ್ರಯತ್ನಿಸಿದ್ರು. ರಚಿತಾ ಒಪ್ಪಿಲ್ಲ. ರಮ್ಯಾ, ತಮನ್ನಾ ಎಲ್ಲರಿಗೂ ಸಿನಿಮಾ ಮಾಡಿದ್ದೀನಿ. ಆದ್ರೆ ಇಂತಹ ಸಮಸ್ಯೆ ಯಾವ ನಟಿಯೂ ಕೊಟ್ಟಿಲ್ಲ. ಸಿನಿಮಾಗೆ ಇಷ್ಟು ದಿನ ಪ್ರದರ್ಶನ ಕಂಡರೂ ಒಂದು ದಿನವೂ ಸಪೋರ್ಟ್ ಕೊಟ್ಟಿಲ್ಲ. ಶಿವಣ್ಣ, ಉಪೇಂದ್ರ, ಸುದೀಪ್ ಅಂಥವ್ರೇ ಈ ಸಿನಿಮಾಗೆ ಸಪೋರ್ಟ್ ಕೊಟ್ಟಿದ್ದಾರೆ. ನಾವು ಪೇಮೆಂಟ್ ಕಮ್ಮಿ ಕೊಟ್ಟಿಲ್ಲ. ನಟಿ ರಚಿತಾ ರಾಮ್ ವಿರುದ್ಧ ಹಾಗೂ ಕನ್ನಡ ಸಿನಿಮಾಗೆ ಥಿಯೇಟರ್ ಸಮಸ್ಯೆ ಕುರಿತು ತುಂಬಾ ನಷ್ಟ ಅನುಭವಿಸಿದ್ದೇವೆ ಅಂತ ಫಿಲ್ಮ್ ಚೇಂಬರ್ಗೆ ನಿರ್ದೇಶಕ ನಾಗಶೇಖರ್ ಮತ್ತು ನಟ ಶ್ರೀನಗರ ಕಿಟ್ಟಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಅಪಮಾನ ಪ್ರಕರಣ – ಹೇಳಿಕೆ ಕೊಡಲು ಪೊಲೀಸರನ್ನು ಸತಾಯಿಸುತ್ತಿರುವ ಸೋನು ನಿಗಮ್
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.
ಪವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ (Nagasekhar) ಅವರ ನಿರ್ದೇಶನದ ಈ ವರ್ಷದ ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. (Sanju Weds Geetha 2) ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ‘ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ ನಟ ಉಪೇಂದ್ರ, ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಕೂಡ ಹಾಜರಿದ್ದರು. ಕವಿರಾಜ್ ಅವರ ಸಾಹಿತ್ಯ ರಚನೆಯ ಈ ಹಾಡಿಗೆ ಶ್ರೀಧರ್ ವಿ.ಸಂಭ್ರಮ್ ಅದ್ಭುತವಾದ ಟ್ಯೂನ್ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ನಾಗಶೇಖರ್ ನಾನು ಈ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ಮೊದಲು ಹಾಡುಗಳನ್ನು ರೆಡಿ ಮಾಡಿಕೊಳ್ಳಬೇಕಾಗಿತ್ತು. ಒಟ್ಟು 6 ಸುಂದರ ಹಾಡುಗಳು ಚಿತ್ರದಲ್ಲಿದ್ದು, ಈ ಹಾಡಿನಲ್ಲಿ ಒಬ್ಬ ಸೈನಿಕನ ಪ್ರೇಮಕಥೆಯನ್ನು ಹೇಳಿದ್ದೇನೆ. ಸ್ವಿಟ್ಜರ್ ಲ್ಯಾಂಡ್ ಸೈನಿಕನೊಬ್ಬ ತನ್ನ ರಾಣಿ ಸೆಲ್ವಿಕ್ ಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಪ್ರೀತಿ ಮಾಡ್ತಿರ್ತಾನೆ. ಆತನಿಗೆ ತನ್ನ ಪ್ರೀತಿಯನ್ನು ಹೇಳಿಕೊಳ್ಳಲಿಕ್ಕೆ ಆಗ್ತಿರಲಿಲ್ಲ, ಏಕೆಂದರೆ ಆಕೆ ಮಹಾರಾಣಿ. ಆತನದು ಒನ್ ವೇ ಲವ್, ಒಮ್ಮೆ ಜರ್ಮನ್ ಸೈನಿಕರು ಸ್ವಿಟ್ಜರ್ ಲ್ಯಾಂಡ್ ಮೇಲೆ ಅಟ್ಯಾಕ್ ಮಾಡ್ತಾರೆ. ಆಗ ವೀರಾವೇಶದಿಂದ ಹೋರಾಡಿದ ಆ ಸೈನಿಕ ಅವರನ್ನು ಸೋಲಿಸಿ ವೀರಮರಣವನ್ನಪ್ಪುತ್ತಾನೆ, ತನ್ನ ರಾಣಿಗೆ ಆಕೆಯ ಕಿರೀಟವನ್ನು ಮತ್ತೆ ತಂದುಕೊಡುತ್ತಾನೆ. ಸಾಯೋ ಸಮಯದಲ್ಲಿ ಆತ ರಾಣಿಗೆ ತನ್ನ ರಕ್ತದಲ್ಲಿ “ಐ ಲವ್ ಯು ಫಾರೆವರ್” ಅಂತ ಒಂದು ಪತ್ರ ಬರೆಯುತ್ತಾನೆ. ಈ ಹಾಡು ಚಿತ್ರಕಥೆಯಲ್ಲಿ ಬಹಳ ಮುಖ್ಯವಾದ ಭಾಗವಾಗಿರುತ್ತದೆ. ಈ ಸಾಂಗ್ ನಲ್ಲಿ ಮೊದಲಬಾರಿಗೆ ಆಕ್ಷನ್ ಇಟ್ಟಿದ್ದೇನೆ ಎಂದು ಹೇಳಿದರು.
ಶ್ರೀಧರ್ ವಿ.ಸಂಭ್ರಮ್ ಮಾತನಾಡಿ ನಾಗಶೇಖರ್ ಅವರು ಈ ಥರದ ಕಥೆ ಇದೆ ಎಂದಾಗ ಖುಷಿಯಾಯ್ತು. ಅವರುಸುಲಭವಾಗಿ ಟ್ಯೂನ್ ಒಪ್ಪುವವರಲ್ಲ, ಆದರೆ ಈ ನಾನು ಈ ಟ್ಯೂನ್ ಕೊಟ್ಟ ಕೂಡಲೇ ಒಪ್ಪಿದರು. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿ ಮೂಡಿಬಂದಿವೆ ಎಂದರು. ಸಾಹಿತಿ ಕವಿರಾಜ್ ಮಾತನಾಡಿ ಇದು ಸಿನಿಮಾ ಕೆಲಸ ಅನಿಸೋದೇ ಇಲ್ಲ. ನಮಗೆ ಅಷ್ಟು ಫ್ರೀಡಂ ಕೊಟ್ಟಿರ್ತಾರೆ. ನಾಗಶೇಖರ್ ಸಿನಿಮಾಗೆ ಹಾಡುಗಳನ್ನು ಬರೀಬೇಕಾದ್ರೆ ತಾನಾಗೇ ಒಳ್ಳೊಳ್ಳೆ ಪದಗಳು ಹುಟ್ಟಿಕೊಳ್ಳುತ್ತವೆ. ನಿರ್ದೇಶಕರು ನಮಗೆಲ್ಲ ಒಂದು ರೆಸಾರ್ಟ್ ಬುಕ್ ಮಾಡಿ ಲಿರಿಕ್ ಬರೆಯಲು ಹೇಳಿದ್ದರು, ಈ ಚಿತ್ರದ ಸಾಂಗ್ ಬರೆಯಲು ಹೋದಾಗ ಏನೋ ಹೊಸ ಸ್ಪೂರ್ತಿ ಬರುತ್ತದೆ ಎಂದು ಹೇಳಿದರು.
ನಟ ಉಪೇಂದ್ರ ಮಾತನಾಡಿ ನನಗೆ ಮೊದಲು ಈ ಚಿತ್ರದ ಕ್ಲೈಮ್ಯಾಕ್ಸ್ ಏನು ಅಂತ ಗೊತ್ತಾಯ್ತು.ನಾನು ಅವತ್ತೇ ಹೇಳಿದೆ ಈ ಸಿನಿಮಾ ಸೂಪರ್ ಸಕ್ಸಸ್ ಅಂತ. ಈಗ ಈ ಹಾಡನ್ನು ನೋಡಿದಾಗ ಡಿಸೈಡ್ ಮಾಡಿದೆ. 100% ಹಿಟ್ ಆಗುತ್ತೆ ಎಂದು ಕಾನ್ಫಿಡೆಂಟಾಗಿ ಹೇಳಿದರು. ನಿರ್ಮಾಪಕ ಛಲವಾದಿ ಕುಮಾರ್, ಮಾತನಾಡುತ್ತ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಮುಂದಿನ ತಿಂಗಳು ಬಿಡುಗಡೆಯಾಗುತ್ತಿದೆ. ಖಂಡಿತ ಹಿಟ್ ಆಗುತ್ತೆ ಎಂಬ ಬಂಬಿಕೆಯಿದೆ ಎಂದರು. ನಾಯಕಿ ರಚಿತಾರಾಮ್ ಶೂಟಿಂಗ್ ನಲ್ಲಿದ್ದುದರಿಂದ ಬಂದಿರಲಿಲ್ಲ.
ವಿತರಕ ಗೋಕುಲರಾಜ್ ಮಾತನಾಡಿ ನನಗೆ ಚಿತ್ರದ ಸ್ಯಾಂಪಲ್ಸ್ ತೋರಿಸಿದರು. ತುಂಬಾ ಚೆನ್ನಾಗಿ ಬಂದಿದೆ. ಎಂದರು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ನಟ ಶ್ರೀನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ಹೆಸರಾಂತ ಕಲಾವಿದರೇ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ನ ಅದ್ಭುತವಾದ ಲೊಕೇಶನ್‌ಗಳಲ್ಲಿ 72 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ ಸಮಸ್ಯೆ, ಅಲ್ಲಿನ ಕಪ್ಪುಮಣ್ಣಿನ ಕಥೆಯನ್ನು ಈ ಚಿತ್ರದ ಮೂಲಕ ನಾಗಶೇಖರ್ ಹೇಳ ಹೊರಟಿದ್ದಾರೆ. ಈಗಿನ ಕಾಲದ ಲವ್‌ಸ್ಟೋರಿ ಜೊತೆಗೆ ಒಂದು ಸರ್ ಪ್ರೈಸ್ ಕೂಡ ಈ ಚಿತ್ರದಲ್ಲಿದೆ.
ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ ಮೊದಲಬಾರಿಗೆ ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.
ಇಂದು ಮಧ್ಯಾಹ್ನ 1:30ಕ್ಕೆ ಕಾರಿನಲ್ಲಿ ಹೋಗುತ್ತಿರುವಾಗ ಅಪಘಾತವಾಗಿದೆ. ಈ ವೇಳೆ ಓರ್ವ ಮಹಿಳೆಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಅವರ ಕಾಲಿಗೆ ಸಣ್ಣದಾಗಿ ಗಾಯವಾಗಿರೋದಾಗಿ ತಿಳಿಸಿದ್ದಾರೆ. ಕಾರಿನಲ್ಲಿ ಹೋಗುವಾಗ ಸ್ವಲ್ಪ ಕಣ್ಮುಚ್ಚಿದ ಪರಿಣಾಮ ಅಪಘಾತಕ್ಕೆ ಕಾರಣವಾಯಿತು. ಕಾರು ಡ್ಯಾಮೇಜ್ ಆಗಿದೆ, ಅದು ಬಿಟ್ಟರೆ ನನಗೇನು ತೊಂದರೆ ಆಗಿಲ್ಲ ಎಂದು ನಾಗಶೇಖರ್ ಮಾತನಾಡಿದ್ದಾರೆ.
ಅಂದಹಾಗೆ, ಮೈನಾ, ಸಂಜು ವೆಡ್ಸ್ ಗೀತಾ, ಅಮರ್ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಪ್ರಸ್ತುತ `ಸಂಜು ವೆಡ್ಸ್ ಗೀತಾ 2′ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ ನಾಗಶೇಖರ್.
ಇಂದು ಮಧ್ಯಾಹ್ನ 1:30ಕ್ಕೆ ನಿರ್ದೇಶಕ ನಾಗಶೇಖರ್ ಬೆಂಜ್ ಕಾರು ಡ್ರೈವ್ ಮಾಡಿಕೊಂಡು ಬರುವಾಗ ರಭಸವಾಗಿ ಬಂದು ಮರಕ್ಕೆ ಗುದ್ದಿದ್ದ ಪರಿಣಾಮ, ಓರ್ವ ಮಹಿಳೆಗೆ ಗಾಯವಾಗಿದೆ. ಅಪಘಾತದ (Car Accident) ನಂತರ ಮಹಿಳೆಯನ್ನು ಆಸ್ಪತ್ರೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಸ್ಥಳಕ್ಕೆ ಜ್ಞಾನಭಾರತಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಅಂದಹಾಗೆ, ಮೈನಾ, ಸಂಜು ವೆಡ್ಸ್ ಗೀತಾ, ಅಮರ್ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಪ್ರಸ್ತುತ `ಸಂಜು ವೆಡ್ಸ್ ಗೀತಾ 2′ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ ನಾಗಶೇಖರ್.
ಸ್ಯಾಂಡಲ್‌ವುಡ್‌ನಲ್ಲಿ (Sandalwood) ಮೋಡಿ ಮಾಡಿದ (Sanju Weds Geetha) ಚಿತ್ರದ ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ರಮ್ಯಾ ಕೆರಿಯರ್‌ನಲ್ಲಿ ಮೈಲಿಗಲ್ಲು ಸೃಷ್ಟಿಸಿದ ಚಿತ್ರ `ಸಂಜು ವೆಡ್ಸ್ ಗೀತಾ’ ಸಿನಿಮಾದ ಸೀಕ್ವೆಲ್ ಬರುತ್ತಿದೆ. ಮತ್ತೆ `ಸಂಜು ಮತ್ತು ಗೀತಾ’ ಲವ್ ಸ್ಟೋರಿ ತೆರೆಯ ಮೇಲೆ ಮೋಡಿ ಮಾಡಲಿದೆ.
ಸಂಜು ಐ ಲವ್ ಯೂ ಎಂಬ ಡೈಲಾಗ್, ಸಂಜು-ಗೀತಾ ಲವ್ ಕಹಾನಿ 2011ರಲ್ಲಿ ಸಿನಿ ಪ್ರೇಕ್ಷಕರಿಗೆ ಕಮಾಲ್ ಮಾಡಿತ್ತು. ಮತ್ತೆ ಈ ಜೋಡಿ ಅದ್ಯಾವಾಗ ಸಂಜು ಮತ್ತು ಗೀತಾ ಒಟ್ಟಿಗೆ ಬರಲಿದ್ದಾರೆ ಎಂದು ಕಾದು ಕುಳಿತಿದ್ದ ಫ್ಯಾನ್ಸ್‌ಗೆ ಈಗ ಸಿಹಿಸುದ್ದಿ ಸಿಕ್ಕಿದೆ. `ಸಂಜು ವೆಡ್ಸ್ ಗೀತಾ’ ಪಾರ್ಟ್ 2 ಬರಲಿದೆ ಎಂದು ಗಾಂಧಿನರದ ಅಡ್ಡಾದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ. ಇದಕ್ಕೆಲ್ಲಾ ಕಾರಣವಾಗಿರೋದು ವೀಕೆಂಡ್ ಶೋನಲ್ಲಿ ರಮ್ಯಾ (Ramya) ಜೊತೆ ಶ್ರೀನಗರ ಕಿಟ್ಟಿ (Srinagar), ನಾಗಶೇಖರ್ (Nagashekar) ಭಾಗಿಯಾಗಿರೋದು.
Weekend With Ramesh 5 ಶೋನಲ್ಲಿ ರಮ್ಯಾ ಮೊದಲ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ `ಸಂಜು ವೆಡ್ಸ್ ಗೀತಾ’ ಸಿನಿಮಾದ ತೆರೆ ಹಿಂದಿನ ಸಾಕಷ್ಟು ವಿಚಾರಗಳ ಬಗ್ಗೆ ನಿರ್ದೇಶಕ ನಾಗಶೇಖರ್, ಶ್ರೀನಗರ ಕಿಟ್ಟಿ ಮಾತನಾಡಿದರು. ಹಣದ ಅಭಾವದಿಂದ ನಿಂತು ಹೋಗಿದ್ದ ಈ ಚಿತ್ರಕ್ಕೆ ರಮ್ಯಾ ಬಂಡವಾಳ ಹಾಕಿ ಚಿತ್ರತಂಡಕ್ಕೆ ಸಾಥ್ ನೀಡಿದ್ದರ ಬಗ್ಗೆ ನಾಗಶೇಖರ್ ವೇದಿಕೆಯಲ್ಲಿ ಹಂಚಿಕೊಂಡರು. ಬಳಿಕ ಈ ಚಿತ್ರದ ಡೈಲಾಗ್‌ಗೆ ರಮ್ಯಾ-ಕಿಟ್ಟಿ ಆಕ್ಟ್ ಮಾಡುವ ಮೂಲಕ ಮತ್ತೆ ಅದೇ ಕ್ರೇಜ್ ಹುಟ್ಟು ಹಾಕಿದ್ದರು. ಈ ಬೆನ್ನಲ್ಲೇ ಈ ಸಿನಿಮಾ ಸೀಕ್ವೆಲ್ ಬಗ್ಗೆ ಸಖತ್ ಚರ್ಚೆಯಾಗುತ್ತಿದೆ. ಇದನ್ನೂ ಓದಿ:ಗಾಯಕನಿಂದಲೇ ನಟಿ ಆಕಾಂಕ್ಷ ಕೊಲೆ : ತಾಯಿಯ ಗಂಭೀರ ಆರೋಪ
ಈಗಾಗಲೇ ನಿರ್ದೇಶಕ ನಾಗಶೇಖರ್ ಮತ್ತು ಶ್ರೀನಗರ ಕಿಟ್ಟಿ ಭೇಟಿಯಾಗಿ ಒಂದು ಹಂತದ ಮಾತುಕತೆಯಾಗಿದೆ ಎಂದು ಹೇಳಲಾಗುತ್ತಿದೆ. `ಸಂಜು ವೆಡ್ಸ್ ಗೀತಾ’ ಪಾರ್ಟ್ 2 ಬರೋದು ಫಿಕ್ಸ್ ಎನ್ನಲಾಗುತ್ತಿದೆ. ಶ್ರೀನಗರ ಕಿಟ್ಟಿಗೆ ರಮ್ಯಾನೇ ನಾಯಕಿಯಾಗುತ್ತಾರಾ ಅಥವಾ ಬೇರೇ ನಾಯಕಿ ಜೊತೆ ರೊಮ್ಯಾನ್ಸ್ ಮಾಡುತ್ತಾರಾ ಎಂಬುದನ್ನ ಕಾದುನೋಡಬೇಕಿದೆ. ಸದ್ಯದಲ್ಲೇ ಈ ಬಗ್ಗೆ ಬಿಗ್ ಅಪ್‌ಡೇಟ್ ಸಿಗಲಿದೆ.
ಕಿರುತೆರೆಯ ಜನಪ್ರಿಯ Weekend With Ramesh 5 ಶೋ ನೋಡುವ ಕಾತರಕ್ಕೆ ಇದೀಗ ತೆರೆ ಬಿದ್ದಿದೆ. ಮೊದಲ ಸಂಚಿಕೆಯಲ್ಲಿಯೇ ರಮ್ಯಾ (Ramya) ಜೊತೆಗಿನ ಮಾತುಕತೆಯೊಂದಿಗೆ ಭರ್ಜರಿ ಓಪನಿಂಗ್ಸ್ ಪಡೆದುಕೊಂಡಿದೆ. ಸಾಧಕರ ಸಾಲಿನ ಮೊದಲ ಅತಿಥಿಯಾಗಿ ರಮ್ಯಾ ಅಲಂಕರಿಸಿದ್ದಾರೆ. ಬಾಲ್ಯ, ಶಾಲೆ, ಸಿನಿಮಾ ರಂಗ ಹೀಗೆ ಸಾಕಷ್ಟು ವಿಚಾರಗಳನ್ನ ನಟಿ ಬಿಚ್ಚಿದ್ದಾರೆ. ಅದರಲ್ಲೂ Sanju Weds Geetha ಚಿತ್ರದ ತೆರೆ ಹಿಂದಿನ ಅಸಲಿ ಕಥೆಯನ್ನ ಹೇಳಲಾಗಿದೆ.
ಪುನೀತ್‌ಗೆ (Puneeth Rajkumar) ನಾಯಕಿಯಾಗಿ ಅಭಿ ಚಿತ್ರದ ಮೂಲಕ ರಮ್ಯಾ ಎಂಟ್ರಿ ಕೊಟ್ಟರು. ಎರಡನೇ ಹಿಟ್ ಸಿನಿಮಾ `ಎಕ್ಸ್ಕ್ಯೂಸ್‌ಮಿ’ ಬಳಿಕ `ಸಂಜು ವೆಡ್ಸ್ ಗೀತಾ’ ಸಿನಿಮಾದ ಸಕ್ಸಸ್ ಸೀಕ್ರೆಟ್ ಹೇಳಲಾಯಿತು. ಚಿತ್ರದ ನಿರ್ದೇಶಕ ನಾಗಶೇಖರ್ ಅವರ ವಿಡಿಯೋ ಪ್ರಸಾರ ಮಾಡಲಾಯಿತು. ಅದು ಮುಗಿದಂತೆಯೇ ನಾಗಶೇಖರ್ (Director Nagashekar) ಹಾಗೂ ನಾಯಕ ಶ್ರೀನಗರ ಕಿಟ್ಟಿ (Srinagar Kitty) ವೀಕೆಂಡ್ ವೇದಿಕೆಗೆ ಆಗಮಿಸಿ ರಮ್ಯಾಗೆ ಅಚ್ಚರಿ ಮೂಡಿಸಿದರು.
ಹಣ ಖಾಲಿಯಾಗಿ `ಸಂಜು ವೆಡ್ಸ್ ಗೀತಾ’ ಸಿನಿಮಾ ನಿಂತು ಹೋಗಿತ್ತು. ಆಗ ರಮ್ಯಾ ತಮ್ಮ ಹಣ ಹಾಕಿ ಸಿನಿಮಾದ ಚಿತ್ರೀಕರಣ ಮುಗಿಯುವಂತೆ ಮಾಡಿದರು. ಆ ಸಿನಿಮಾ ಸೂಪರ್ ಹಿಟ್ ಆಗಿ ನನಗೆ ಒಂದು ನೆಲೆ ಕೊಟ್ಟಿತು. ನನ್ನ ಮನೆಯಲ್ಲಿ ನಾನು ದೇವರ ಜೊತೆಗೆ ವಸ್ತುವೊಂದನ್ನಿಟ್ಟು ಪೂಜಿಸುತ್ತೇನೆ ಅದನ್ನು ರಮ್ಯಾಗೆ ಉಡುಗೊರೆಯಾಗಿ ತಂದಿದ್ದೇನೆ ಎಂದು ರಮ್ಯಾಗೆ ನಾಗಶೇಖರ್ ಉಡುಗೊರೆ ಕೊಟ್ಟರು. ಉಡುಗೊರೆಯನ್ನು ಬಿಚ್ಚಿ ನೋಡಿದ ರಮ್ಯಾಗೆ ಶಾಕ್. ಅದು `ಸಂಜು ವೆಡ್ಸ್ ಗೀತಾ’ ಚಿತ್ರದ ಕ್ಲಾಪ್ ಬೋರ್ಡ್ ಆಗಿತ್ತು. ನಾಗಶೇಖರ್‌ಗೆ ಅದನ್ನು ತಾನೇ ಇಟ್ಟುಕೊಳ್ಳುವುದಾಗಿ ರಮ್ಯಾ ಹೇಳಿದರು. ಇದನ್ನೂ ಓದಿ: ಅಪ್ಪು ಹೆಸರಿನಲ್ಲಿ ಅಂಬುಲೆನ್ಸ್ ವಿತರಣೆ: ನುಡಿದಂತೆ ನಡೆದುಕೊಂಡ ಯಶ್, ಪ್ರಕಾಶ್ ರಾಜ್
ಈ ಸಿನಿಮಾದ ಶೂಟಿಂಗ್‌ಗಾಗಿ ಊಟಿಯಲ್ಲಿ ಬೀಡು ಬಿಟ್ಟಿದ್ದರು. ಯಾರ ಬಳಿಯೂ ಜಾಕೆಟ್, ಬೂಟ್ ಇಲ್ಲದ್ದನ್ನು ಕಂಡು ರಮ್ಯಾ ಹೋಗಿ ಎಲ್ಲರಿಗೂ ಜಾಕೆಟ್, ಬೂಟ್‌ಗಳನ್ನು ತಂದಿದ್ದನ್ನು ಸಹ ಇದೇ ಸಮಯದಲ್ಲಿ ನೆನಪಿಸಿಕೊಂಡರು. `ಸಂಜು ವೆಡ್ಸ್ ಗೀತಾ’ ಸಿನಿಮಾದ ಕತೆಯನ್ನು ರಮ್ಯಾರ ತಂದೆ ಮೊದಲು ಕೇಳಿ ಶುಭ ಹಾರೈಸಿದ್ದಲ್ಲದೆ, ಸಿನಿಮಾವನ್ನು ಮೊದಲು ನೋಡಿದ್ದು ಸಹ ಅವರೇ ಎಂಬುದನ್ನು ವೇದಿಕೆಯ ಮೇಲೆ ನಾಗಶೇಖರ್ ಬಿಚ್ಚಿಟ್ಟರು. ನಟ ಕಿಟ್ಟಿ ಸಹ ರಮ್ಯಾರ ಸ್ನೇಹವನ್ನು ನೆನಪಿಸಿಕೊಂಡರು. ರಮ್ಯಾ ಹಾಗೂ ಕಿಟ್ಟಿ ಸೇರಿ ಈ ಸಿನಿಮಾದ ದೃಶ್ಯವೊಂದನ್ನು ವೇದಿಕೆ ಮೇಲೆ ನಟಿಸಿದರು. ನಟಿ ರಮ್ಯಾ ಸಹ `ಸಂಜು ವೆಡ್ಸ್ ಗೀತಾ’ ಸಿನಿಮಾ ಚಿತ್ರೀಕರಣದ ನೆನಪುಗಳಿಗೆ ಜಾರಿದರು.
ಕಿರುತೆರೆಯ ಜನಪ್ರಿಯ ಶೋ Weekend With Ramesh ಸೀಸನ್ 5ರಲ್ಲಿ ರಮ್ಯಾ ಭಾಗಿಯಾಗಿದ್ದಾರೆ. ಈ ವಾರಾಂತ್ಯದಲ್ಲಿ ಪ್ರೇಕ್ಷಕರಿಗೆ ಹಬ್ಬದ ಎಂದೇ ಹೇಳಬಹುದು. ಸಾಕಷ್ಟು ಸಮಯ ತೆರೆಮರೆಯಲ್ಲಿದ್ದ ರಮ್ಯಾ ಮತ್ತೆ ಸ್ಯಾಂಡಲ್‌ವುಡ್ ಕಂಬ್ಯಾಕ್ ಆಗಿದ್ದಾರೆ. ಜೊತೆ ವೀಕೆಂಡ್‌ನಲ್ಲಿ ರಮೇಶ್ ಜೊತೆ ರಮ್ಯಾ (Ramya) ತಮ್ಮ ಜೀವನದ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ಈ ವೇಳೆ ಅಪ್ಪುನ (Appu) ನೆನೆದು ರಮ್ಯಾ ಕಣ್ಣೀರಿಟ್ಟಿದ್ದಾರೆ.
ರಮ್ಯಾ ಒಂದು ದಶಕಗಳ ಕಾಲ ಸ್ಯಾಂಡಲ್‌ವುಡ್ ಆಳಿದ ನಾಯಕಿ. ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬರುತ್ತಾರೆ ಎಂದಾಗ ಎಲ್ಲರ ನಿರೀಕ್ಷೆ ಹೆಚ್ಚಾಗಿತ್ತು. ಶೋ ಸಂಬಂಧಿಸಿದಂತೆ ರಮ್ಯಾ ಅವರ ಮೊದಲ ಪ್ರೋಮೋ ಬಿಟ್ಟಿದ್ದಾರೆ. ಲೈಟ್ ಬಣ್ಣದ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. `ಅಭಿ’ (Abhi) ಸಿನಿಮಾದಿಂದ ಶುರುವಾದ ಸಿನಿ ಜರ್ನಿ ರಾಜಕೀಯ ಕ್ಷೇತ್ರಕ್ಕೂ ಕಾಲಿಡುವ ಹಾಗೇ ಮಾಡಿತ್ತು. ಸಿನಿಮಾ-ರಾಜಕೀಯ ಎರಡಲ್ಲೂ ಗುರುತಿಸಿಕೊಂಡರು. ಈ ಬಗ್ಗೆ ನಟಿ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ.
ರಮ್ಯಾ ಅವರ ವೃತ್ತಿ ಜೀವನದಲ್ಲಿ ರಾಜ್‌ಕುಮಾರ್ ಕುಟುಂಬ ವಿಶೇಷವಾಗಿದೆ. ರಮ್ಯಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪಾರ್ವತಮ್ಮ. ಅವರಿಗೆ ರಮ್ಯಾ ಎಂದು ನಾಮಕರಣ ಮಾಡಿದ್ದೂ ಅವರೇ. ಇದನ್ನು ರಮ್ಯಾ ಉಲ್ಲೇಖ ಮಾಡಿದ್ದಾರೆ. ರಕ್ಷಿತಾ ಜೊತೆಗಿನ ಸ್ಪರ್ಧೆ ಬಗ್ಗೆ ಮಾತನಾಡಿದ್ದಾರೆ. ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಅಭಿನಯದ `ಸಂಜು ಮತ್ತು ಗೀತಾ’ ಸಿನಿಮಾ ಯಶಸ್ಸು ಕಂಡಿತ್ತು. ಶ್ರೀನಗರ ಕಿಟ್ಟಿ ಕೂಡ ವೇದಿಕೆ ಏರಿದ್ದಾರೆ. ಈ ವೇಳೆ `ಐ ಲವ್ ಯೂ ಸಂಜು’ ಎಂದಿದ್ದಾರೆ ರಮ್ಯಾ. ಪುನೀತ್ ಹಾಗೂ ರಮ್ಯಾ ಅವರದ್ದು ಹಿಟ್ ಕಾಂಬಿನೇಷನ್. ಆ ಬಗ್ಗೆಯೂ ರಮ್ಯಾ ಮಾತನಾಡಿದ್ದಾರೆ. ರಮ್ಯಾ ಪುನೀತ್ ನೆನೆದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಚಿತ್ರಕ್ಕೆ ರಾಗಿಣಿ ದ್ವಿವೇದಿ ಸಾಥ್
ʻಅಭಿʼ ಚಿತ್ರದಲ್ಲಿ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ಪರಿಚಿತರಾದ ರಮ್ಯಾ ಸಾಕಷ್ಟು ಹಿಟ್ ಸಿನಿಮಾ ನೀಡಿ ಸೈ ಎನಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಗಳಲ್ಲೂ ನಟಿಸಿ ಬಂದಿದ್ದಾರೆ.
ಸದಾ ಕಾಲ ಸುದ್ದಿಯಲ್ಲಿರುವ ನಟಿ ಎಂದರೆ ರಶ್ಮಿಕಾ ಮಂದಣ್ಣ,(Rashmika Mandanna) ಇದೀಗ ಮತ್ತೆ ಚಾಲ್ತಿಯಲ್ಲಿದ್ದಾರೆ. ಕರ್ನಾಟಕದಲ್ಲಿ ಬ್ಯಾನ್ ಆಕ್ರೋಶದ ಬೆನ್ನಲ್ಲೇ ʻಮೈನಾʼ ನಿರ್ದೇಶಕ ನಾಗಶೇಖರ್(Nagashekar) ಈ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾನ ಬ್ಯಾನ್ ಮಾಡಿದ್ರೆ ಕನ್ನಡ ಚಿತ್ರರಂಗಕ್ಕೆ ನಷ್ಟ ಎಂಬ ಹೇಳಿಕೆಯನ್ನ ನೀಡಿದ್ದಾರೆ.
ಸದ್ಯ ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ಬ್ಯುಸಿಯಿರುವ ನಟಿ ರಶ್ಮಿಕಾ (Rashmika Mandanna) ಇತ್ತೀಚೆಗೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಸಂದರ್ಶನವೊಂದರಲ್ಲಿ ನಟಿ ತಮ್ಮ ಚೊಚ್ಚಲ ಸಿನಿಮಾದ ನಿರ್ಮಾಣ ಸಂಸ್ಥೆಯ ಹೆಸರು ಹೇಳಿಲ್ಲ ಎಂದು ಕನ್ನಡಿಗರ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ರಿಷಬ್ ಶೆಟ್ಟಿ ಕೂಡ ತಮ್ಮದೇ ಶೈಲಿಯಲ್ಲಿ ನಟಿಗೆ ಟಾಂಗ್ ಕೊಟ್ಟಿದ್ದರು. ನಂತರ ರಶ್ಮಿಕಾ ಬ್ಯಾನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿತ್ತು. ಇದೀಗ ವಿಷ್ಯವಾಗಿ ನಿರ್ದೇಶಕ ನಾಗಶೇಖರ್ ಕೂಡ ರಿಯಾಕ್ಟ್ ಮಾಡಿದ್ದಾರೆ.
`ಸಂಜು ವೆಡ್ಸ್ ಗೀತಾ’, `ಮೈನಾ; ಖ್ಯಾತಿಯ ನಾಗಶೇಖರ್ ತೆಲುಗಿನ ತಮ್ಮ ಮುಂದಿನ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ ರಶ್ಮಿಕಾ ಬ್ಯಾನ್ ಮತ್ತು ಮೊದಲ ಚಿತ್ರದ ಅವಕಾಶದ ಬಗ್ಗೆ ನಿರ್ದೇಶಕ ನಾಗಶೇಖರ್ ಅವರಿಗೆ ಪ್ರಶ್ನೆ ಕೇಳಲಾಗಿದೆ. ಅವಕಾಶ ಕೊಟ್ಟವರನ್ನು ನೆನಪು ಇಟ್ಟುಕೊಳ್ಳಬೇಕು ಎಂದು ನಿರೀಕ್ಷೆ ಮಾಡುವುದೇ ತಪ್ಪು. ಅದನ್ನೆಲ್ಲಾ ನಿರೀಕ್ಷಿಸಬಾರದು ಎಂದಿದ್ದಾರೆ. ಇದನ್ನೂ ಓದಿ: ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು
ಇನ್ನೂ ನನಗೆ ಈ ಬಗ್ಗೆ ಗೊತ್ತಿಲ್ಲ. ಒಂದು ವೇಳೆ ರಶ್ಮಿಕಾ ಅವರನ್ನು ಚಿತ್ರರಂಗ ಬ್ಯಾನ್ ಮಾಡಿದರೆ ಚಿತ್ರರಂಗಕ್ಕೆ ನಷ್ಟ ಎಂದಿದ್ದಾರೆ. ಒಬ್ಬ ಒಳ್ಳೆಯ ಕಲಾವಿದೆಯನ್ನ ಬ್ಯಾನ್ ಮಾಡುವುದು ಸರಿಯಲ್ಲ. ಉದಾಹರಣೆಗೆ ಮುಂದಿನ ದಿನಗಳಲ್ಲಿ ನನ್ನ ಕನ್ನಡದ ಸಿನಿಮಾಗೆ ರಶ್ಮಿಕಾ ರೀತಿಯ ನಟಿ ಬೇಕು ಎಂದುಕೊಳ್ಳುತ್ತೇವೆ. ನೀವು ಆಕೆಯನ್ನು ಬ್ಯಾನ್ ಮಾಡಿದರೆ, ಫಿಲ್ಮ್ ಮೇಕರ್ಸ್‌ಗೆ ತೊಂದರೆಯಾಗುತ್ತದೆ ಎಂದು ನಾಗಶೇಖರ್ ಮಾತನಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]