Tag: Sankranti

  • ಮಂತ್ರಾಲಯದಲ್ಲಿ ಸಂಕ್ರಾಂತಿ ಸಂಭ್ರಮ – ತುಂಗಭದ್ರಾ ನದಿಯಲ್ಲಿ ಸಹಸ್ರಾರು ಭಕ್ತರ ಪುಣ್ಯಸ್ನಾನ

    ಮಂತ್ರಾಲಯದಲ್ಲಿ ಸಂಕ್ರಾಂತಿ ಸಂಭ್ರಮ – ತುಂಗಭದ್ರಾ ನದಿಯಲ್ಲಿ ಸಹಸ್ರಾರು ಭಕ್ತರ ಪುಣ್ಯಸ್ನಾನ

    ರಾಯಚೂರು: ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ (Makara Sankranti) ಹಿನ್ನೆಲೆ ಗುರುರಾಯರ ಸನ್ನಿಧಿ ಮಂತ್ರಾಲಯಕ್ಕೆ (Mantralaya) ಭಕ್ತ ಸಾಗರ ಹರಿದು ಬಂದಿದೆ. ರಾಯರ ದರ್ಶನ ಹಾಗೂ ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನಕ್ಕೆ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದಾರೆ.

    ಮಂತ್ರಾಲಯ ರಾಯರ ಮಠದಲ್ಲಿ ಸಂಕ್ರಾಂತಿ ಹಿನ್ನೆಲೆ ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದೆ. ತುಂಗಭದ್ರಾ ನದಿಯಲ್ಲಿ ಭಕ್ತರು ಮಿಂದೇಳುತ್ತಾ ಪುನೀತರಾಗುತ್ತಿದ್ದಾರೆ. ನದಿ ಪಾತ್ರದಲ್ಲಿ ಸುಮಾರು ಎರಡು ಕಿ.ಮೀವರೆಗೂ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ. ನದಿಯಲ್ಲಿ ನೀರಿನ ಕೊರತೆ ಹಿನ್ನೆಲೆ ಅಲ್ಪಸ್ವಲ್ಪ ನೀರಿನಲ್ಲೇ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದು, ನದಿಯಲ್ಲಿ ದೀಪಗಳನ್ನು ಹರಿಬಿಟ್ಟು ಹರಕೆಗಳನ್ನು ತೀರಿಸುತ್ತಿದ್ದಾರೆ. ಇದನ್ನೂ ಓದಿ: ಕಾರು ಅಪಘಾತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೆನ್ನುಮೂಳೆ ಮುರಿತ – ಸಚಿವೆ ಆರೋಗ್ಯದ ಬಗ್ಗೆ ವೈದ್ಯರು ಹೇಳೋದೇನು?

    ದೂರದ ಊರುಗಳಿಂದ ಬಂದ ಭಕ್ತರು ಪುಣ್ಯ ಸ್ನಾನದ ಬಳಿಕ ನದಿ ದಂಡೆಯಲ್ಲಿ ತಾವು ಕಟ್ಟಿಕೊಂಡು ಬಂದ ಬುತ್ತಿಯ ಊಟ ಮಾಡಿ ಸಂಕ್ರಾಂತಿ ಆಚರಿಸುತ್ತಿದ್ದಾರೆ. ಸಜ್ಜೆ ರೊಟ್ಟಿ, ಜೋಳದ ರೊಟ್ಟಿ, ಶೇಂಗಾ ಹೋಳಿಗೆ, ಬರ್ತಾ, ಬದನೆಕಾಯಿ ಪಲ್ಯ ಸೇರಿದಂತೆ ಬಗೆಬಗೆಯ ಖಾದ್ಯಗಳನ್ನ ತಯಾರಿಸಿಕೊಂಡು ಬಂದು ಸವಿಯುತ್ತಿದ್ದಾರೆ. ಇದನ್ನೂ ಓದಿ: ಎಂ.ಎಸ್.ಪಾಳ್ಯ ಟು ಯಲಹಂಕ ಲವ್‌ಸ್ಟೋರಿ – ಟಿಕೆಟ್ ಕೊಡುತ್ತಲೇ ಯುವತಿಯನ್ನ ಪಟಾಯಿಸಿದ್ದ ಕಂಡಕ್ಟರ್

  • ಹಸುವಿನ ಕೆಚ್ಚಲು ಕೊಯ್ದ ಪ್ರಕರಣ – ಇಂದು ಹಸು ಮಾಲೀಕನ ಮನೆಯಲ್ಲಿ ಬಿಜೆಪಿಯಿಂದ ಸಂಕ್ರಾಂತಿ

    ಹಸುವಿನ ಕೆಚ್ಚಲು ಕೊಯ್ದ ಪ್ರಕರಣ – ಇಂದು ಹಸು ಮಾಲೀಕನ ಮನೆಯಲ್ಲಿ ಬಿಜೆಪಿಯಿಂದ ಸಂಕ್ರಾಂತಿ

    – ನಾಳೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

    ಬೆಂಗಳೂರು: ಚಾಮರಾಜಪೇಟೆಯಲ್ಲಿ (Chamrajpet) ಹಸುವಿನ ಕೆಚ್ಚಲು (Cow’s Udder) ಕೊಯ್ದ ಘಟನೆಯಿಂದ ಹಿಂದೂಗಳ ಆಕ್ರೋಶದ ಕಟ್ಟೆ ಒಡೆದಿದೆ. ಒಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದರೆ ಮತ್ತೊಂದೆಡೆ ಬಿಜೆಪಿ (BJP) ನಾಯಕರು ಹೇಯ್ಯ ಕೃತ್ಯ ನಡೆದ ಸ್ಥಳದಲ್ಲಿ ಸಂಕ್ರಾಂತಿ (Sankranti) ಆಚರಿಸಲು ನಿರ್ಧರಿಸಿವೆ.

    ಘಟನೆಯನ್ನು ಖಂಡಿಸಿ ನಾಳೆ ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಚಾಮರಾಜಪೇಟೆಯ ಮೈಸೂರು ಬ್ಯಾಂಕ್ ಸರ್ಕಲ್, ಚಾಮರಾಜಪೇಟೆ ಅಂಗಡಿ ಬೀದಿ, ಸಿದ್ದಾಶ್ರಮ ಟ್ರಸ್ಟ್ ಈ ಮೂರು ಸ್ಥಳಗಳಲ್ಲಿ ಪೋಲಿಸ್ ಇಲಾಖೆ ಅನುಮತಿ ಕೊಟ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಯಲಿದೆ. ಜೊತೆಗೆ ಹಿಂದೂ ಜಾಗರಣಾ ವೇದಿಕೆಯಿಂದ ರಾಜ್ಯಾದ್ಯಂತ ಭಾನುವಾರದವರೆಗೆ ಪ್ರತಿಭಟನೆಗೆ ಕರೆ ಕೊಟ್ಟಿದೆ. ಈ ಪ್ರತಿಭಟನೆಯಲ್ಲಿ ವಿಎಚ್‌ಪಿ, ಭಜರಂಗದಳ, ಚಾಮರಾಜಪೇಟೆ ನಾಗರೀಕರ ಒಕ್ಕೂಟ, ಸೇರಿದಂತೆ ಸುಮಾರು 15-20 ಸಂಘಸಂಸ್ಥೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ. ಇದನ್ನೂ ಓದಿ: ಕಾಲುವೆಗೆ 4 ಮಕ್ಕಳು, ಹೆಂಡತಿಯನ್ನು ತಳ್ಳಿದ ಕೇಸ್‌ಗೆ ಟ್ವಿಸ್ಟ್‌ – ಪತಿಯ ಬಣ್ಣ ಬಯಲು ಮಾಡಿದ ಪತ್ನಿ

    ಸೋಮವಾರ ಸಂಜೆ ಸಂಸದ ಪಿ.ಸಿ ಮೋಹನ್ ಹಸುವಿನ ಮಾಲೀಕ ಕರ್ಣನ ಮನೆಗೆ ವಾದ್ಯ ಮೇಳಗಳೊಂದಿಗೆ ಹೋಗಿ ಎರಡು ಹಸು ಹಾಗೂ ಒಂದು ಕರುವನ್ನು ನೀಡಿ ಸಾಂತ್ವನ ಹೇಳಿದರು. ಇನ್ನೂ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಹಸು ಮಾಲೀಕನ ಮನೆಗೆ ಭೇಟಿ ನೀಡಲಿದ್ದು, ಚಾಮರಾಜಪೇಟೆಯಲ್ಲಿ ಸಂಕ್ರಾಂತಿ ಆಚರಿಸಲಿದ್ದಾರೆ. ಇದನ್ನೂ ಓದಿ: ಇಂದಿನಿಂದ ಉತ್ತರಾಯಣ ಆರಂಭ – ಶುಭ ಕಾರ್ಯಕ್ಕೆ ಮಂಗಳಕರ ಅವಧಿ ಯಾಕೆ?

    ಇನ್ನೂ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಕೆಜಿ ಕನ್ನಡ ಪ್ರಕಾಶ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ಘಟನೆ ನಡೆದ ಸ್ಥಳದಲ್ಲಿ ವಿಶೇಷ ಸಂಕ್ರಾತಿ ಆಚರಿಸಲು ನಿರ್ಧರಿಸಿವೆ. ಇದನ್ನೂ ಓದಿ: ಕಾಫಿನಾಡಿನಲ್ಲಿ ವರ್ಷದ ಮೊದಲ ಮಳೆ

  • ಸಚಿವ ಕಿಶನ್‌ ರೆಡ್ಡಿ ಮನೆಯಲ್ಲಿ ಸಂಕ್ರಾತಿ ಆಚರಿಸಿದ ಮೋದಿ!

    ಸಚಿವ ಕಿಶನ್‌ ರೆಡ್ಡಿ ಮನೆಯಲ್ಲಿ ಸಂಕ್ರಾತಿ ಆಚರಿಸಿದ ಮೋದಿ!

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸಚಿವ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ.ಕಿಶನ್ ರೆಡ್ಡಿಯವರ ನಿವಾಸದಲ್ಲಿ ನಡೆದ ಸಂಕ್ರಾಂತಿ ಆಚರಣೆಯಲ್ಲಿ ಭಾಗವಹಿಸಿದ್ದರು.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್‌ನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಾರೆ. ಇದು ನಮ್ಮ ಸಂಸ್ಕೃತಿಯ, ಕೃಷಿ ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿರುವ ನವೀಕರಣದ ಆಚರಣೆಯಾಗಿದೆ. ಸಂಕ್ರಾಂತಿ ಮತ್ತು ಪೊಂಗಲ್‌ಗೆ ನನ್ನ ಶುಭಾಶಯಗಳನ್ನು ಕೋರುತ್ತೇನೆ. ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಮುಂದೆ ಸಮೃದ್ಧ ಸುಗ್ಗಿಯ ಕಾಲ ಬರಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

    ಪ್ರಧಾನಿ ಜೊತೆ ತೆಲುಗು ಚಲನಚಿತ್ರ ನಟ ಚಿರಂಜೀವಿ, ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಮತ್ತು ಕೆಲವು ಕೇಂದ್ರ ಸಚಿವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಜರಿದ್ದರು.

    ವಿವಿಧ ಪ್ರದೇಶಗಳಲ್ಲಿ ವಿಭಿನ್ನ ಹೆಸರುಗಳಲ್ಲಿ ಆಚರಿಸಲಾಗುವ ಮತ್ತು ಸುಗ್ಗಿಯೊಂದಿಗೆ ಸಂಬಂಧ ಹೊಂದಿರುವ ಈ ಹಬ್ಬವನ್ನು ದೇಶದ ನಾನಾ ಭಾಗಗಳಲ್ಲಿ ಆವರಿಸಲಾಗುತ್ತದೆ. ದೇಶದ ಸಂಸ್ಕೃತಿ ಬಗ್ಗೆ ವಿಶೇಷ ಗೌರವ ಹೊಂದಿರುವ ಮೋದಿ, ವಿವಿಧ ಹಬ್ಬಗಳ ಆಚರಣೆ ವೇಳೆ ಅವರ ಕ್ಯಾಬಿನೆಟ್‌ನ ಸಚಿವರ ಮನೆಗಳಿಗೆ ಭೇಟಿ ನೀಡುತ್ತಿರುತ್ತಾರೆ.

  • Happy Makar Sankranti 2025: ವರ್ಷದ ಮೊದಲ ಹಬ್ಬಕ್ಕೆ ನೀವು ವಿಶ್‌ ಮಾಡ್ಬೇಕಾ? ವಾಟ್ಸಪ್‌ ಸ್ಟೇಟಸ್‌ಗೆ ಇಲ್ಲಿದೆ ಟಿಪ್ಸ್‌

    Happy Makar Sankranti 2025: ವರ್ಷದ ಮೊದಲ ಹಬ್ಬಕ್ಕೆ ನೀವು ವಿಶ್‌ ಮಾಡ್ಬೇಕಾ? ವಾಟ್ಸಪ್‌ ಸ್ಟೇಟಸ್‌ಗೆ ಇಲ್ಲಿದೆ ಟಿಪ್ಸ್‌

    ಮಕರ ಸಂಕ್ರಾಂತಿ ಹಬ್ಬವು ಮಾನವ ಚೈತನ್ಯ ಮತ್ತು ಜೀವನದ ಸಂತೋಷದ ಆಚರಣೆಯಾಗಿದೆ. ಕುಟುಂಬ ಮತ್ತು ಸ್ನೇಹಿತರು ಒಟ್ಟಾಗಿ ಸೇರಿ ಸಂಭ್ರಮಿಸುವ ಸಮಯವಿದು. ಈ ಹಬ್ಬದ ಸಮಯದಲ್ಲಿ, ಜನರು ಗಂಗಾ, ಯಮುನಾ, ಗೋದಾವರಿ, ಕೃಷ್ಣ ಮುಂತಾದ ಪವಿತ್ರ ನದಿಗಳಲ್ಲಿ ಸ್ನಾನ ಮಾಡುತ್ತಾರೆ. ಏಕೆಂದರೆ ಅದು ಮಾನವ ಪಾಪಗಳನ್ನು ತೊಳೆಯುತ್ತದೆ ಎಂಬ ನಂಬಿಕೆ ಜನರದ್ದು. ಅಲ್ಲದೇ, ರುಚಿಕರ ಊಟ ತಯಾರಿಸುತ್ತಾರೆ ಮತ್ತು ಮನೆಯ ಅಂಗಳದಲ್ಲಿ ನಿಂತು ಬಣ್ಣಬಣ್ಣ ಚಿತ್ತಾರದ ಗಾಳಿಪಟಗಳನ್ನು ಹಾರಿಸುವ ಮೂಲಕ ಒಟ್ಟಿಗೆ ಹಬ್ಬವನ್ನು ಆನಂದಿಸುತ್ತಾರೆ. ಈ ಹಬ್ಬದ ಸಂದರ್ಭದಲ್ಲಿ, ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ನೀವು ಶುಭ ಸಂದೇಶ ಕಳುಹಿಸಬೇಕೇ? ವಾಟ್ಸಪ್‌ನಲ್ಲಿ ವಿಶ್‌ ಮಾಡ್ಬೇಕಾ? ಇಲ್ಲಿದೆ ಹಾಗಾದ್ರೆ ಮುಂದೆ ನೋಡಿ….

     

  • ‘ಪೊಂಗಲ್’ ಅಂತ  ಕನ್ನಡದಲ್ಲಿ ವಿಶ್ ಮಾಡಿದ ರಶ್ಮಿಕಾ ಮಂದಣ್ಣ

    ‘ಪೊಂಗಲ್’ ಅಂತ ಕನ್ನಡದಲ್ಲಿ ವಿಶ್ ಮಾಡಿದ ರಶ್ಮಿಕಾ ಮಂದಣ್ಣ

    ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಂಕ್ರಾಂತಿ ದಿನದಂದು ಬರೋಬ್ಬರಿ ಆರು ಭಾಷೆಯಲ್ಲಿ ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ. ಕನ್ನಡದಲ್ಲಿ ಅವರು ಸಂಕ್ರಾಂತಿ ಬದಲು ಪೊಂಗಲ್ ಅಂತ ಬರೆದು ಶುಭಾಶಯ ಕೋರಿದ್ದಾರೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಆರು ಭಾಷೆಯಲ್ಲೂ ಅವರು ಸೋಷಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದಾರೆ.

    ಒಂದು ಕಡೆ ರಶ್ಮಿಕಾ ಶೂಟಿಂಗ್ ನಲ್ಲಿ ಬ್ಯೂಸಿಯಾಗಿದ್ದಾರೆ, ಮತ್ತೊಂದು ಕಡೆ ಅವರ ಮದುವೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ಎಂಗೇಜ್‌ಮೆಂಟ್ (Engagement) ಮಾಡಿಕೊಳ್ತಿದ್ದಾರೆ ಎಂದು ಸುದ್ದಿ ಹರಡಿದೆ.

    ‘ಗೀತ ಗೋವಿಂದಂ’ ಜೋಡಿ ಡೇಟಿಂಗ್ ಬಗ್ಗೆ ಸಾಕಷ್ಟು ಬಾರಿ ಸುದ್ದಿಯಾಗಿದೆ. ಇಬ್ಬರೂ ಜೊತೆಯಾಗಿರುವಾಗ ಸಾಕಷ್ಟು ಬಾರಿ ಪಾಪರಾಜಿಗಳ ಕಣ್ಣಿಗೆ ಒಟ್ಟಿಗೆ ತಗ್ಲಾಕೊಂಡಿದ್ದಾರೆ. ಆದರೂ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡಿದ್ದಾರೆ. ಇದುವರೆಗೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲಿಯೂ ಅಧಿಕೃತಗೊಳಿಸಿಲ್ಲ.

    ಈಗ ಹರಿದಾಡುತ್ತಿರೋ ಹೊಸ ಸುದ್ದಿ ಏನಪ್ಪಾ ಅಂದರೆ, ಇದೇ ಫೆಬ್ರವರಿ ಎರಡನೇ ವಾರದಲ್ಲಿ ವಿಜಯ್- ರಶ್ಮಿಕಾ ಜೋಡಿ ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಆಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರೂ ಇದರ ಬಗ್ಗೆ ತುಟಿಕ್ ಪಿಟಿಕ್ ಎಂದಿಲ್ಲ. ಅಷ್ಟಕ್ಕೂ ಈ ಸುದ್ದಿ ನಿಜನಾ? ಅಥವಾ ಗಾಸಿಪ್? ಇಬ್ಬರ ಕಡೆಯಿಂದ ಸ್ಪಷ್ಟನೆ ಸಿಗುವವರೆಗೂ ಕಾಯಬೇಕಿದೆ.

     

    ವಿಜಯ್ ನಟನೆಯ ‘ಫ್ಯಾಮಿಲಿ ಸ್ಟಾರ್’ (Family Star) ಸಿನಿಮಾ ಈ ವರ್ಷ ತೆರೆಗೆ ಬರಲಿದೆ. ಪುಷ್ಪ 2 ಚಿತ್ರ, ರೈನ್‌ಬೋ, ಚಾವಾ ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ.

  • ಸೋಮವಾರ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರ ದೇಗುಲ

    ಸೋಮವಾರ ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ ಗವಿಗಂಗಾಧರೇಶ್ವರ ದೇಗುಲ

    ಬೆಂಗಳೂರು: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ (Makar Sankranti) ಕ್ಷಣಗಣನೆ ಆರಂಭವಾಗಿದೆ. ಸಂಕ್ರಾತಿ ದಿನದಂದೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ (Gavi Gangadhareshwara Temple) ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.

    ಈ ದಿನ ಸೂರ್ಯರಶ್ಮಿ ಶಿವನನ್ನು ಸ್ಪರ್ಶಿಸುವ ವಿಶೇಷ ಕೌತುಕ ನಡೆಯಲಿದೆ. ಸೂರ್ಯ ದಕ್ಷಿಣಪಥ ದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಶಿವನ ಮೂರ್ತಿಯನ್ನು ಸ್ಪರ್ಶಿಸಲಿದ್ದಾನೆ. ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಹೊಸ ವರ್ಷದ ಭವಿಷ್ಯ ಇರಲಿದೆ ಅನ್ನೋದು ನಂಬಿಕೆ.

    ದೇವಸ್ಥಾನದಲ್ಲಿ ಬೆಳಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ಓಪನ್ ಇರಲಿದ್ದು, ನಂತ್ರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುದಿಲ್ಲ ಸಂಜೆ ಸೂರ್ಯರಶ್ಮಿ ಲಿಂಗವನ್ನ ಸ್ಮರ್ಶಿಸಿದ ನಂತ್ರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ. ಇದನ್ನೂ ಓದಿ: ಪಂಚೆ ಧರಿಸಿ ಪೊಂಗಲ್‌ ಆಚರಿಸಿದ ಪ್ರಧಾನಿ ಮೋದಿ- ವೀಡಿಯೋ ವೈರಲ್‌

    ಭಕ್ತಾಧಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಇರಲಿದೆ. ದೇವರನ್ನ ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನ ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಪ್ರವೇಶ ಇರುವುದಿಲ್ಲ ಎಂದು ದೇವಾಲಯದ ಪ್ರಧಾನ ಆರ್ಚಕ ಸೋಮಸುಂದರ್ ದೀಕ್ಷೀತ್ ಮಾಹಿತಿ ನೀಡಿದ್ದಾರೆ.

  • ಸಂಕ್ರಾಂತಿಗೆ ಒಂದೂ ಇಲ್ಲ ಕನ್ನಡ ಸಿನಿಮಾ

    ಸಂಕ್ರಾಂತಿಗೆ ಒಂದೂ ಇಲ್ಲ ಕನ್ನಡ ಸಿನಿಮಾ

    ದೇ ಮೊದಲ ಬಾರಿಗೆ ಸಂಕ್ರಾಂತಿ (Sankranti) ಹಬ್ಬದ ದಿನದಂದು ಕನ್ನಡದ (Kannada movie) ಯಾವುದೇ ಚಿತ್ರ ಬಿಡುಗಡೆ ಆಗುತ್ತಿಲ್ಲ. ಅಂದುಕೊಂಡಂತೆ ಆಗಿದ್ದರೆ, ಕನ್ನಡದ ರಂಗ ಸಮುದ್ರ ಸಿನಿಮಾ ರಿಲೀಸ್ ಆಗಬೇಕಿತ್ತು. ಪರಭಾಷೆಯ ಸಿನಿಮಾ ಹಾವಳಿಗೆ ತತ್ತರಿಸಿ ಈ ಸಿನಿಮಾ ಕೂಡ ರಿಲೀಸ್ ಆಗುತ್ತಿಲ್ಲ.

    ಸಂಕ್ರಾಂತಿ ಹಬ್ಬದ ದಿನದಂದು ಅಷ್ಟಕ್ಕೂ ಯಾಕೆ ಕನ್ನಡ ಸಿನಿಮಾ ರಿಲೀಸ್ ಆಗುತ್ತಿಲ್ಲ ಎನ್ನುವ ಪ್ರಶ್ನೆಗೆ ಸಿಕ್ಕ ಉತ್ತರ ಪರಭಾಷೆಯ ಎಂಟು ಅದ್ಧೂರಿ ಚಿತ್ರಗಳು ಬಿಡುಗಡೆ ಆಗುತ್ತಿವೆ. ಜೊತೆಗೆ ಕನ್ನಡದ ಕಾಟೇರ ಸಿನಿಮಾ ಕೂಡ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸುನಾಮಿಗೆ ಅಪ್ಪಚ್ಚಿ ಆಗಬಾರದು ಎನ್ನುವ ಕಾರಣಕ್ಕಾಗಿ ಯಾವುದೇ ಚಿತ್ರವನ್ನು ರಿಲೀಸ್ ಮಾಡದೇ ಹಿಂದಕ್ಕೆ ಸರಿದಿದ್ದಾರೆ ನಿರ್ಮಾಪಕರು.

    ಈ ಸಂಕ್ರಾಂತಿ ದಿನದಂದು ಶಿವರಾಜ್ ಕುಮಾರ್ ಮತ್ತು ಧನುಷ್ ಕಾಂಬಿನೇಷನ್ ನ ಕ್ಯಾಪ್ಟನ್ ಮಿಲ್ಲರ್, ಮಹೇಶ್‍ ಬಾಬು ಅಭಿನಯದ ‘ಗುಂಟೂರು ಖಾರಂ’, ವೆಂಕಟೇಶ್‍ ಅಭಿನಯದ ‘ಸೈಂಧವ’, ನಾಗಾರ್ಜುನ ಅಭಿನಯದ ‘ನಾ ಸಾಮಿ ರಂಗ’, ತೇಜ ಸಜ್ಜಾ ಅಭಿನಯದ ‘ಹನುಮ್ಯಾನ್‍’, ಶಿವಕಾರ್ತಿಕೇಯನ್‍ ಅಭಿನಯದ ‘ಆಯಲಾನ್‍’, ಅರುಣ್‍ ವಿಜಯ್‍ ಅಭಿನಯದ ‘ಮಿಷನ್‍ – ಚಾಪ್ಟರ್ 1’ ಮತ್ತು ಹಿಂದಿಯ ‘ಮೆರ್ರಿ ಕ್ರಿಸ್ಮಸ್‍’ ಚಿತ್ರಗಳು ಬಿಡುಗಡೆಯಾಗುತ್ತಿವೆ. ಇವುಗಳು ಬಹುತೇಕ ಸ್ಟಾರ್ ನಟರ ಚಿತ್ರಗಳು ಮತ್ತು ಅದ್ಧೂರಿ ಬಜೆಟ್ ನಲ್ಲಿ ತಯಾರಾಗಿರುವಂಥವು.

     

    ರಿಲೀಸ್ ಆಗಲಿರುವ ಚಿತ್ರಗಳು ಈಗಾಗಲೇ ನಿರೀಕ್ಷೆ ಮೂಡಿಸಿವೆ. ಕೆಲ ಚಿತ್ರಗಳು ಕನ್ನಡಕ್ಕೂ ಡಬ್ ಆಗಿ ಬಿಡುಗಡೆ ಆಗುತ್ತಿವೆ. ಸಹಜವಾಗಿಯೇ ಥಿಯೇಟರ್ ಸಮಸ್ಯೆ ಹೊಸಬರಿಗೆ ಎದುರಾಗುತ್ತವೆ. ಹೀಗಾಗಿ ಕನ್ನಡದ ಯಾವುದೇ ಚಿತ್ರಗಳನ್ನು ಸಂಕ್ರಾಂತಿಗೆ ಬಿಡುಗಡೆ ಮಾಡದಿರಲು ನಿರ್ಮಾಪಕರು ನಿರ್ಧರಿಸಿದ್ದಾರೆ.

  • ರಜನಿ ಅಭಿಮಾನಿಗಳಿಗೆ ನಿರಾಸೆ : ಸಂಕ್ರಾಂತಿಗೆ ಬರ್ತಿಲ್ಲ ‘ಲಾಲ್ ಸಲಾಂ’

    ರಜನಿ ಅಭಿಮಾನಿಗಳಿಗೆ ನಿರಾಸೆ : ಸಂಕ್ರಾಂತಿಗೆ ಬರ್ತಿಲ್ಲ ‘ಲಾಲ್ ಸಲಾಂ’

    ‘ಜೈಲರ್’ ಅಭೂತಪೂರ್ವ ಯಶಸ್ಸಿನ ಬಳಿಕ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’ (Laal Salaam) . ಈ ಚಿತ್ರವನ್ನು ರಜನಿ ಪುತ್ರಿ ಐಶ್ವರ್ಯ ರಜನಿಕಾಂತ್ (Aishwarya Rajinikanth) ನಿರ್ದೇಶಿಸುತ್ತಿದ್ದಾರೆ. ಸಂಕ್ರಾಂತಿ ಹಬ್ಬದಂದು ಚಿತ್ರ ತೆರೆ ತರುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದ್ರೀಗ ಲಾಲ್ ಸಲಾಂ ಬಿಡುಗಡೆ ಪೋಸ್ಟ್ ಪೋನ್ ಆಗಿದೆ.

    ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಂಕ್ರಾಂತಿ ಹಬ್ಬಕ್ಕೆ ತಲೈವಾ ಸಿನಿಮಾ ಎಂಟ್ರಿ ಕೊಡಬೇಕಿತ್ತು. ಆದ್ರೀಗ ಫೆಬ್ರವರಿ 9ರಂದು ಲಾಲ್ ಸಲಾಂ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಸ್ಪೋರ್ಟ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ವಿಘ್ನೇಶ್, ಲಿವಿಂಗ್ಸ್ಟನ್, ಸೆಂಥಿಲ್, ಜೀವಿತಾ, ಕೆ.ಎಸ್. ರವಿಕುಮಾರ್ ಮತ್ತು ತಂಬಿ ರಾಮಯ್ಯ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

    ರಜನಿಕಾಂತ್ ಅವರು ಮೊಯ್ದೀನ್ ಭಾಯ್ ಎಂಬ ಪವರ್‌ಫುಲ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಲಾಲ್ ಸಲಾಂ ಸಿನಿಮಾದ ಭಾಗವಾಗಿದ್ದಾರೆ. 2022 ನವೆಂಬರ್ ನಲ್ಲಿ ಟೈಟಲ್ ರಿವೀಲ್ ಮಾಡಲಾಯಿತು. ಆ ನಂತರ 2023ರ ಮಾರ್ಚ್ ನಲ್ಲಿ ಶೂಟಿಂಗ್ ಆರಂಭ ಮಾಡಲಾಯಿತು. ಆಗಸ್ಟ್ 2023ರಲ್ಲಿ ಚಿತ್ರೀಕರಣ ಮುಕ್ತಾಯವಾಗಿತು. ಲಾಲ್ ಸಲಾಂ ಸಿನಿಮಾಗೆ ಮಾಂತ್ರಿಕ ಎ. ಆರ್. ರೆಹಮಾನ್  ಸಂಗೀತ ಸಂಯೋಜನೆ, ವಿಷ್ಣು ರಂಗಸಾಮಿ ಛಾಯಾಗ್ರಹಣ ಮತ್ತು ಬಿ. ಪ್ರವೀಣ್ ಭಾಸ್ಕರ್ ಸಂಕಲನ ಒಳಗೊಂಡಿದೆ.

    ಲಾಲ್‌ ಸಲಾಂ ಚಿತ್ರವನ್ನು ಕಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ನ ಸುಭಾಸ್ಕರನ್‌ ನಿರ್ಮಿಸಿದ್ದು, ತಮಿಳುನಾಡಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುವ ಹಕ್ಕನ್ನು ರೆಡ್ ಜೈಂಟ್ ಸಂಸ್ಥೆ ಪಡೆದುಕೊಂಡಿದೆ. ಕನ್ನಡ, ತೆಲುಗು, ಹಿಂದಿ ಜತೆಗೆ ಮಲಯಾಳಂನಲ್ಲಿಯೂ ಈ ಸಿನಿಮಾ ಬಿಡುಗಡೆ ಆಗಲಿದೆ. ಅಂದಹಾಗೇ ರಜನಿಕಾಂತ್ ಪುತ್ರಿ ಐಶ್ವರ್ಯಾಗೆ ಇದು 3ನೇ ಸಿನಿಮಾ.

  • ಪೊಂಗಲ್ ಹಬ್ಬಕ್ಕೆ ಬರ್ತಿದ್ದಾನೆ ಕ್ಯಾಪ್ಟನ್ ಮಿಲ್ಲರ್

    ಪೊಂಗಲ್ ಹಬ್ಬಕ್ಕೆ ಬರ್ತಿದ್ದಾನೆ ಕ್ಯಾಪ್ಟನ್ ಮಿಲ್ಲರ್

    ಮಿಳು ನಟ ಧನುಷ್ (Dhanush) ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಬಹಳ ಸದ್ದು ಮಾಡ್ತಿದೆ. ರಜನಿಕಾಂತ್ ಜೈಲರ್ ನಲ್ಲಿ ನರಸಿಂಹ ಆಗಿ ದರ್ಶನ ಕೊಟ್ಟು ಕ್ರೇಜ್ ಕ್ರಿಯೇಟ್ ಮಾಡಿದ್ದ ಟಗರು ಶಿವನ ಹೊಸ ಅವತಾರ ನೋಡೋದಿಕ್ಕೆ ಫ್ಯಾನ್ಸ್ ಕಾತುರರಾಗಿದ್ದಾರೆ. ಇತ್ತ ಧನುಷ್ 49ನೇ ಚಿತ್ರ ಇದಾಗಿದ್ದು, ಹೀಗಾಗಿ ಸಹಜವಾಗಿ ನಿರೀಕ್ಷೆ ಹೆಚ್ಚಿದೆ. ಸದ್ಯ ಕ್ಯಾಪ್ಟನ್ ಮಿಲ್ಲರ್ ಬಿಡುಗಡೆಗೆ ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಗುಡ್ ನ್ಯೂಸ್ ಕೊಟ್ಟಿದೆ.

    ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಪೊಂಗಲ್ (Sankranti) ಹಬ್ಬದ ಸ್ಪೆಷಲ್ ಆಗಿ ಧನುಷ್-ಶಿವಣ್ಣ ಸಿನಿಮಾ ತೆರೆಗೆ ಬರಲಿದೆ. 2024, ಜನವರಿ 12ರಂದು ‘ಕ್ಯಾಪ್ಟನ್ ಮಿಲ್ಲರ್’ ವಿಶ್ವದಾದ್ಯಂತ ತೆರೆ ಕಾಣಲಿದೆ.  ಈ ಚಿತ್ರವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಜೋಡಿಯಾಗಿ ಪ್ರಿಯಾಂಕಾ ಮೋಹನನ್ ನಟಿಸಿದ್ದಾರೆ. ಇದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತೆರೆದುಕೊಳ್ಳುವ ಕಥೆ ಎಂದು ಹೇಳಲಾಗುತ್ತಿದೆ.

    ಈಗಾಗಲೇ ರಿಲೀಸ್ ಆಗಿರೋ ಟೀಸರ್ ಸಿನಿಪ್ರಿಯರಿಗೆ ಕಿಕ್ ಕೊಟ್ಟಿದೆ. ಧನುಷ್ ಉದ್ದ ಕೂದಲು, ಗಡ್ಡ ಮೀಸೆ ಬಿಟ್ಟು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಾರೆ. ಹಾಗೇ ಶಿವರಾಜ್‌ಕುಮಾರ್ ಕೂಡ ಕುದುರೆ ಏರಿ ಬರುವ ಸನ್ನಿವೇಶ ಅವರ ಅಭಿಮಾನಿಗಳಿಗೆ ಥ್ರಿಲ್ ಹೆಚ್ಚಿಸಿದೆ. ಸದ್ಯ ಈ ಸಿನಿಮಾಗೆ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಜಿವಿ ಪ್ರಕಾಶ್ ಈ ಸಿನಿಮಾಗೆ ಹಿನ್ನೆಲೆ ಸಂಗೀತ ಹಾಗೂ ಟ್ಯೂನ್‌ಗಳನ್ನು ಕಂಪೋಸ್ ಮಾಡಿದ್ದಾರೆ.

  • ಸಂಕ್ರಾಂತಿ ಹಬ್ಬಕ್ಕೆ ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್

    ಸಂಕ್ರಾಂತಿ ಹಬ್ಬಕ್ಕೆ ಧನುಷ್ ನಟನೆಯ ಕ್ಯಾಪ್ಟನ್ ಮಿಲ್ಲರ್

    ಹೆಸರಾಂತ ನಟ ಧನುಷ್ (Dhanush) ಮತ್ತು ಕನ್ನಡದ ಸೆಂಚ್ಯೂರಿ ಸ್ಟಾರ್ ಶಿವರಾಜ್ ಕುಮಾರ್ (Shivraj Kumar) ಕಾಂಬಿನೇಷನ್ ನ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಸಂಕ್ರಾಂತಿ (ಪೊಂಗಲ್) (Sankranti) ಹಬ್ಬಕ್ಕೆ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಸಿನಿಮಾದ ಪೋಸ್ಟರ್ (Poster) ರಿಲೀಸ್ ಆಗಿತ್ತು, ವಿವಿಧ ಬಗೆಯ ಬಂದೂಕು ಹಿಡಿದುಕೊಂಡಿರುವ ಇಬ್ಬರು ಸ್ಟಾರ್ ನಟರು ತೆರೆಯ ಮೇಲೆ ಕಾಳಗ ಮಾಡಲಿದ್ದಾರೆ ಎನ್ನುವ ಕುತೂಹಲವನ್ನು ಉಂಟು ಮಾಡಿತ್ತು.

    ಧನುಷ್ ಕೈಯಲ್ಲಿ ಒಂದು ಬಗೆಯ ಬಂದೂಕು ಇದ್ದರೆ, ಶಿವರಾಜ್ ಕುಮಾರ್ ಮತ್ತೊಂದು ಬಗೆಯ ಬಂದೂಕು ಹಿಡಿದಿದ್ದಾರೆ. ಇಬ್ಬರ ಲುಕ್ ಕೂಡ ಸಖತ್ ಕ್ಯಾಚಿ ಆಗಿದೆ. ಹೀಗಾಗಿ ತೆರೆಯ ಮೇಲೆ ಇಬ್ಬರೂ ಯಾವ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಇರುವ ಕಾತರ.

    ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

     

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ.