Tag: Sanna Marin

  • ಪತಿಗೆ ವಿಚ್ಛೇದನ ಘೋಷಿಸಿ, ಸ್ನೇಹಿತರಾಗಿ ಇರ್ತೀವಿ ಅಂದ ನಿರ್ಗಮಿತ ಪ್ರಧಾನಿ ಸನ್ನಾ ಮರಿನ್‌

    ಪತಿಗೆ ವಿಚ್ಛೇದನ ಘೋಷಿಸಿ, ಸ್ನೇಹಿತರಾಗಿ ಇರ್ತೀವಿ ಅಂದ ನಿರ್ಗಮಿತ ಪ್ರಧಾನಿ ಸನ್ನಾ ಮರಿನ್‌

    ಹೆಲ್ಸಿಂಕಿ: ಫಿನ್‌ಲ್ಯಾಂಡ್‌ನ ನಿರ್ಗಮಿತ ಪ್ರಧಾನಿ (Finland PM) ಸನ್ನಾ ಮರಿನ್‌ (Sanna Marin) ವಿಚ್ಛೇದನ ಘೋಷಣೆ ಮಾಡಿದ್ದು, ಪತಿ ಮಾರ್ಕಸ್‌ ರೈಕೊನೆನ್‌ ಅವರೊಂದಿಗೆ ಜೊತೆಯಾಗಿ ವಿಚ್ಛೇದಕ್ಕೆ ಅರ್ಜಿ ಸಲ್ಲಿಸಿದ್ದಾರೆ.

    19‌ ವರ್ಷಗಳ ನಮ್ಮ ಸುದೀರ್ಘ ಜೀವನಕ್ಕೆ ಹಾಗೂ ನಮ್ಮ ಪುಟ್ಟ ಮಗಳಿಗೆ ಕೃತಜ್ಞರಾಗಿರುತ್ತೇವೆ. ಉತ್ತಮ ಸ್ನೇಹಿತರಾಗಿ ಉಳಿಯುತ್ತೇವೆ. ತಮ್ಮ 5 ವರ್ಷದ ಮಗಳನ್ನು ಇಬ್ಬರೂ ಸಮಾನವಾಗಿ ನೋಡಿಕೊಳ್ಳುವುದಾಗಿ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಮ್ರಾನ್‌ ಖಾನ್‌ ಬೆನ್ನಲ್ಲೇ ಪಾಕ್‌ ವಿದೇಶಾಂಗ ಮಾಜಿ ಸಚಿವ ಅರೆಸ್ಟ್‌ – ಅಜ್ಞಾತ ಸ್ಥಳಕ್ಕೆ ಶಿಫ್ಟ್‌

    2020ರಲ್ಲಿ ಕೋವಿಡ್‌ (Covid) ಬಿಕ್ಕಟ್ಟಿನ ವೇಳೆ ರೈಕೊನೆನ್‌ ಹಾಗೂ ಮರಿನ್‌ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಬಳಿಕ ಇಬ್ಬರೂ ಪರಸ್ಪರ ಒಪ್ಪಿ ಮದುವೆಯಾಗಿದ್ದರು.

    ಮರಿನ್ ಮತ್ತು ಅವರ ಸೋಶಿಯಲ್ ಡೆಮಾಕ್ರಟಿಕ್ ಪಕ್ಷವು ಕಳೆದ ತಿಂಗಳು ಫಿನ್‌ಲ್ಯಾಂಡ್‌ನ ಸಂಸತ್ತಿನ ಚುನಾವಣೆಯಲ್ಲಿ ರಾಷ್ಟ್ರೀಯ ಒಕ್ಕೂಟದ ಪಕ್ಷ ಮತ್ತು ರಾಷ್ಟ್ರೀಯವಾದಿ ಫಿನ್ಸ್ ಪಕ್ಷದ ಎದುರು ಪರಾಭವಗೊಂಡಿತ್ತು. ಇದನ್ನೂ ಓದಿ: ಇಮ್ರಾನ್ ಖಾನ್ ಅರೆಸ್ಟ್- ಪ್ರತಿಭಟನೆಯಲ್ಲಿ 8 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    2019ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಮರಿನ್‌ ವಿಶ್ವದ ಕಿರಿಯ ಪ್ರಧಾನಿ ಹಾಗೂ ಹೊಸ ನಾಯಕರಿಗೆ ರೋಲ್‌ ಮಾಡೆಲ್‌ ಎನಿಸಿಕೊಂಡಿದ್ದರು.

  • ಫಿನ್‍ಲ್ಯಾಂಡ್ ಪ್ರಧಾನಿಯನ್ನು ಭೇಟಿ ಮಾಡಿದ ಮೋದಿ – ಕಾರಣವೇನು?

    ಫಿನ್‍ಲ್ಯಾಂಡ್ ಪ್ರಧಾನಿಯನ್ನು ಭೇಟಿ ಮಾಡಿದ ಮೋದಿ – ಕಾರಣವೇನು?

    ಬ್ರಸೆಲ್ಸ್: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತಮ್ಮ ಯುರೋಪ್ ಪ್ರವಾಸದಲ್ಲಿ ಫಿನ್‍ಲ್ಯಾಂಡ್ ಪ್ರಧಾನಿ ಸನ್ನಾ ಮರಿನ್ ಅವರನ್ನು ಭೇಟಿ ಮಾಡಿದರು.

    ಮೋದಿ ಅವರು ಟ್ವೀಟ್ ಮಾಡುವ ಮೂಲಕ ವಿಷಯವನ್ನು ತಿಳಿಸಿದ್ದು, ಸನ್ನಾ ಮರಿನ್ ಅವರನ್ನು ಭೇಟಿ ಮಾಡಿದ ಫೋಟೋ ಮತ್ತು ಔತಣಕ್ಕೆ ಕುಳಿತುಕೊಂಡಿದ್ದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ವೇಳೆ ಮೋದಿ ಅವರು ಫಿನ್‍ಲ್ಯಾಂಡ್ ಪ್ರಧಾನಿ ಜೊತೆ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದ್ದಾರೆ. ಈ ಕುರಿತು ಮೋದಿ ಅವರು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವತ್ಥ ನಾರಾಯಣ್ ಶಾಮೀಲು: ಸಿದ್ದು ಆರೋಪ 

    ಮೋದಿ ಅವರು ಟ್ವೀಟ್‍ನಲ್ಲಿ, ಇಂದು ಫಿನ್‍ಲ್ಯಾಂಡ್ ಪ್ರಧಾನಿ ಸನ್ನಾ ಮರಿನ್ ಅವರನ್ನು ಭೇಟಿ ಮಾಡಿದ್ದು ತುಂಬಾ ಅನುಕೂಲವಾಯಿತು. ಭಾರತ-ಫಿನ್‍ಲ್ಯಾಂಡ್ ಡಿಜಿಟಲ್ ಪಾಲುದಾರಿಕೆ, ವ್ಯಾಪಾರ ಪಾಲುದಾರಿಕೆ ಮತ್ತು ಹೂಡಿಕೆ ಸಂಬಂಧಗಳನ್ನು ವಿಸ್ತರಿಸು ಕುರಿತು ಮಾತುಕತೆ ಮಾಡಿದ್ದು, ಅದಕ್ಕೆ ಅಪಾರ ಸಾಮರ್ಥ್ಯವಿದೆ. ನಮ್ಮ ರಾಷ್ಟ್ರಗಳ ನಡುವಿನ ಸಾಂಸ್ಕೃತಿಕ ಸಂಬಂಧಗಳನ್ನು ಗಾಢವಾಗಿಸುವ ಮಾರ್ಗಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ ಎಂದು ಬರೆದು ಫೋಟೋ ಶೇರ್ ಮಾಡಿಕೊಂಡಿದ್ದಾರೆ.

    ಮೋದಿ ಅವರು ನಾರ್ವೆ, ಸ್ವೀಡನ್ ಮತ್ತು ಐಸ್‍ಲ್ಯಾಂಡ್‍ನ ತಮ್ಮ ಸಹವರ್ತಿಗಳೊಂದಿಗೆ ದ್ವಿಪಕ್ಷೀಯ ಸಭೆಗಳ ಸರಣಿಯನ್ನು ನಡೆಸಿದರು. ಇದನ್ನೂ ಓದಿ: ನಾನು ಧರಣಿ ಕುಳಿತರು ಸ್ಥಳಕ್ಕೆ ಡಿಸಿ ಬರಲಿಲ್ಲ, ನಾನೇನು ದನಕಾಯೋನ: ಹೆಚ್‍ಡಿ.ರೇವಣ್ಣ