Tag: Santhosh Ananddram

  • ಪುನೀತ್ ಸಿನಿಮಾದ ಕಥೆಗೆ ಯುವರಾಜ್ ಕುಮಾರ್ ನಾಯಕ?

    ಪುನೀತ್ ಸಿನಿಮಾದ ಕಥೆಗೆ ಯುವರಾಜ್ ಕುಮಾರ್ ನಾಯಕ?

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗಾಗಿ ಸಿದ್ಧಪಡಿಸಿದ್ದ ಚಿತ್ರ ಕಥೆಗೆ ಯುವರಾಜ್ ಕುಮಾರ್ ಆಯ್ಕೆಮಾಡಲಾಗಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

    ಪುನೀತ್ ರಾಜ್ ಕುಮಾರ್ ಅವರ ಕೈಯಲ್ಲಿ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳಿದ್ದವು. ಆದರೆ ಅಪ್ಪು ನಿಧನದಿಂದ ಎಲ್ಲ ಸಿನಿಮಾಗಳು ಹಾಗೆಯೇ ಉಳಿದಿದೆ. ಇನ್ನೂ ಪುನೀತ್ ರಾಜ್‌ಕುಮಾರ್‌ಗಾಗಿತ್  ಸಿದ್ಧಪಡಿಸಿದ್ದ ಕಥೆಗಳನ್ನು ಏನು ಮಾಡಬೇಕೆಂದು ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಗೊಂದಲವಾಗಿತ್ತು. ಇದೇ ಗೊಂದಲದಲ್ಲಿದ್ದ ನಿರ್ದೇಶಕರಲ್ಲಿ ಸಂತೋಷ್ ಆನಂದ್ ರಾಮ್ ಕೂಡ ಒಬ್ಬರು. ಇದನ್ನೂ ಓದಿ: ಫ್ರೆಂಡ್ಸ್ ಗ್ಯಾಂಗ್ ಜೊತೆ ರಾಯನ್ ರಾಜ್‌ ಸರ್ಜಾ

    ಸದ್ಯ ಸಂತೋಷ್ ಆನಂದ್ ರಾಮ್ ಅವರು ಪುನೀತ್‍ಗಾಗಿ ಬರೆದಿದ್ದ ಕಥೆಯಲ್ಲಿ ನಾಯಕ ನಟರಾಗಿ ಯುವರಾಜ್ ಕುಮಾರ್ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬೀನೇಷನ್‍ನಲ್ಲಿ ಬಂದ ರಾಜಕುಮಾರ ಹಾಗೂ ಯುವರತ್ನ ಎರಡು ಸಿನಿಮಾಗಳು ಪ್ರೇಕ್ಷಕರ ಮನಗೆಲ್ಲುವುದರ ಜೊತೆಗೆ ಸೂಪರ್ ಡೂಪರ್ ಹಿಟ್ ಆಗಿತ್ತು. ನಂತರ ಇಬ್ಬರು ಮತ್ತೊಮ್ಮೆ ಒಂದೇ ಸಿನಿಮಾದಲ್ಲಿ ಕೆಲಸಮಾಡುವ ಬಗ್ಗೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದರು. ಆದರೆ ವಿಧಿಯಾಟ ಪುನೀತ್ ಇಂದು ನಮ್ಮೊಂದಿಗಿಲ್ಲ.

    Yuvaraj Kumar

    ಹಾಗಾಗಿ ಪುನೀತ್‍ಗಾಗಿ ಬರೆದಿದ್ದ ಕಥೆಯನ್ನು ಯುವರಾಜ್‌ಕುಮಾರ್‌ಗೆ ಮಾಡಿ ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದರು. ಹೀಗಾಗಿ ಅಭಿಮಾನಿಗಳ ಬೇಡಿಕೆಗೆ ಸ್ಪಂದಿಸಿ ಸಂತೋಷ್ ಆನಂದ್ ರಾಮ್ ಯುವರಾಜ್ ಕುಮಾರ್ ಅವರನ್ನು ತಮ್ಮ ಸಿನಿಮಾಕ್ಕೆ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: 21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್

    ಈ ಮುನ್ನ ಖಾಸಗಿ ವಾಹಿನಿಯೊಂದರಲ್ಲಿ ಯುವರಾಜ್ ಕುಮಾರ್ ಅವರನ್ನು ಪುನೀತ್ ರಾಜ್ ಕುಮಾರ್ ಲಾಂಚ್ ಮಾಡಿದ್ದರು. ಇದೀಗ ಪುನೀತ್ ಅವರಿಗಾಗಿಯೇ ಮಾಡಿರುವ ಕಥೆಯ ಮೂಲಕ ಕನ್ನಡಚಿತ್ರರಂಗಕ್ಕೆ ಪಾದಾರ್ಪಾಣೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

  • ಪುನೀತ್ ಎಲ್ಲರ ಮನೆಯಲ್ಲೂ ಸದಾ ಬೆಳಗುತ್ತಿರುತ್ತಾರೆ: ಸಂತೋಷ್ ಆನಂದ್ ರಾಮ್

    ಪುನೀತ್ ಎಲ್ಲರ ಮನೆಯಲ್ಲೂ ಸದಾ ಬೆಳಗುತ್ತಿರುತ್ತಾರೆ: ಸಂತೋಷ್ ಆನಂದ್ ರಾಮ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗಿರುವ ಪೇಂಟಿಂಗ್‍ವೊಂದನ್ನು ಸಂತೋಷ್ ಆನಂದ್ ರಾಮ್ ತಮ್ಮ ಮನೆಯಲ್ಲಿ ಹಾಕಿಕೊಂಡಿರುವ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪುನೀತ್ ಅಗಲಿ ದಿನಗಳೇ ಕಳೆಯುತ್ತಿದ್ದರು, ಅವರ ನೆನಪು ಮಾತ್ರ ಇನ್ನೂ ಜೀವಂತವಾಗಿಯೇ ಇದೆ. ಅಪ್ಪು ಅಗಲಿಕೆಯ ನೋವಿನಿಂದ ಅಭಿಮಾನಿಗಳಿಗೆ ಇಂದಿಗೂ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಎಷ್ಟೋ ಅಭಿಮಾನಿಗಳು ಪುನೀತ್ ಅವರನ್ನು ತಮ್ಮ ಹೃದಯದಲ್ಲಿಟ್ಟುಕೊಂಡು ಪೂಜಿಸುತ್ತಿದ್ದಾರೆ.

    ಅಪ್ಪು ಅಭಿನಯಿಸಿದ್ದ ಹಲವಾರು ಸಿನಿಮಾಗಳು ಬಾಕ್ಸ್ ಆಫೀಸ್‍ನಲ್ಲಿ ಕೊಳ್ಳೆ ಹೊಡೆಯುವುದರ ಮೂಲಕ ಹಲವಾರು ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಕನ್ನಡ ಇಂಡಸ್ಟ್ರಿಯಲ್ಲಿ ಭದ್ರವಾಗಿ ನೆಲೆಯುರಲು ಸಹಾಯಕವಾಯಿತು. ಅಷ್ಟೇ ಅಲ್ಲದೇ ತಮ್ಮ ಬ್ಯಾನರ್‌ನಲ್ಲಿ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಲು ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದರು. ಹೀಗೆ ಬದುಕಿದ್ದಾಗ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದ ಅಪ್ಪು ಅವರ ಅನೇಕ ಉತ್ತಮ ಕೆಲಸಗಳು ನಮ್ಮೊಂದಿಗಿದೆ. ಇದನ್ನೂ ಓದಿ: ಸಿಎಂ ನಿಮಗೆ ನಾವು ಸದಾ ಆಭಾರಿ: ಅಶ್ವಿನಿ ಪುನೀತ್ ರಾಜ್‍ಕುಮಾರ್

    ಸದ್ಯ ಅಭಿಮಾನಿಯೊಬ್ಬರು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಪುನೀತ್ ಜೊತೆಗಿರುವ ಪೇಂಟಿಂಗ್‍ವೊಂದನ್ನು ನೀಡಿದ್ದರು. ಇದೀಗ ಈ ಪೇಂಟಿಂಗ್ ಅನ್ನು ಸಂತೋಷ್ ಆನಂದ್ ರಾಮ್ ಅವರು ತಮ್ಮ ಮನೆಗೆ ಗೋಡೆ ಮೇಲೆ ಹಾಕಿಕೊಂಡು ಅಪ್ಪು ಅವರನ್ನು ಆರಾಧಿಸುತ್ತಿದ್ದಾರೆ. ಇನ್ನೂ ಈ ಫೋಟೋವನ್ನು ಸಂತೋಷ್ ಆನಂದ್ ರಾಮ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದು, ಫೋಟೋ ಜೊತೆಗೆ ಹೊಸಬೆಳಕೊಂದು ಹೊಸಿಲಿಗೆ ಬಂದು ಬೆಳಗಿದೆ ಮನೆಯ ಮನಗಳ ಇಂದು ಆರಾಧಿಸೊ ರಾರಾಜಿಸೊ ರಾಜರತ್ನನು ಎಂಬ ಸಾಲುಗಳನ್ನು ಕ್ಯಾಪ್ಷನ್‍ನಲ್ಲಿ ಹಾಕಿ, ಪುನೀತ್ ಎಲ್ಲರ ಮನೆಯಲ್ಲೂ ಸದಾ ಬೆಳಗುತ್ತಿರುತ್ತಾರೆ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ:  ರಾಜ್‌ ಕುಟುಂಬದಿಂದ ಗಂಧದಗುಡಿ‌ಯ 3ನೇ ಪ್ರಯೋಗ

    2017ರಲ್ಲಿ ತೆರೆಕಂಡ ಪುನೀತ್ ರಾಜ್‍ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ರಾಮ್ ಕಾಂಬಿನೇಷನ್‍ನ ರಾಜಕುಮಾರ ಸಿನಿಮಾ ಕನ್ನಡಿಗರ ಮನ ಗೆದ್ದಿತ್ತು. ಇನ್ನೂ ಈ ಸಿನಿಮಾದ ಬೊಂಬೆ ಹೇಳುತೈತೆ ಸಾಂಗ್ ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರ ಫೇವರೆಟ್ ಸಾಂಗ್ ಆಗಿತ್ತು. ನಂತರ ಮತ್ತೆ ಇಬ್ಬರಿಬ್ಬರ ಕಾಂಬೀನೇಷನ್‍ನಲ್ಲಿ ಮೂಡಿ ಬಂದ ಯುವರತ್ನ ಸಿನಿಮಾ ಕೂಡ ಪ್ರೇಕ್ಷಕರ ಗಮನ ಸೆಳೆದಿತ್ತು.

  • ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಜಗ್ಗೇಶ್ ಜೊತೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ‘ರಾಘವೇಂದ್ರ ಸ್ಟೋರ್’

    ಸ್ಯಾಂಡಲ್‌ವುಡ್‌ನಲ್ಲಿ ಬಿಗ್ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡುವುದರಲ್ಲಿ ಖ್ಯಾತಿ ಪಡೆದಿರುವ ಹೊಂಬಾಳೆ ಫಿಲ್ಮ್ಸ್ ಈಗ ಮತ್ತೊಂದು ಚಿತ್ರಕ್ಕೆ ಚಾಲನೆ ಕೊಡಲು ಸಜ್ಜಾಗಿದೆ. ಇದು ಈ ಬ್ಯಾನರ್ ನ 12ನೇ ಸಿನಿಮಾವಾಗಿದೆ.

    ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರು ತಮ್ಮ ಬ್ಯಾನರ್ ನ 12ನೇ ಚಿತ್ರವನ್ನು ಇಂದು ಘೋಷಣೆ ಮಾಡಿದ್ದು, ಚಿತ್ರಕ್ಕೆ ರಾಘವೇಂದ್ರ ಸ್ಟೋರ್ ಎಂದು ಹೆಸರಿಟ್ಟಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನವಿದ್ದು, ನವರಸ ನಾಯಕ ಜಗ್ಗೇಶ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ.

    ಈ ಸಿನಿಮಾ ಫಸ್ಟ್ ಲುಕ್ ಹೊಂಬಾಳೆ ಫಿಲ್ಮ್ಸ್ ಕೂ ಹಾಗೂ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಫಸ್ಟ್ ಲುಕ್ ಪೋಸ್ಟರ್ ಗಮನಿಸಿದರೆ ಇದೊಂದು ಹೋಟೆಲ್ ಕುರಿತಾದ ಕಥೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದನ್ನೂ ಓದಿ: ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ

    ಸಾಲು ಸಾಲು ಚಿತ್ರ ಘೋಷಿಸಿರುವ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ಮೊದಲ ಚಿತ್ರ ‘ನಿನ್ನಿಂದಲೇ’. 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರ ತೆರೆಗೆ ಬಂದಿತ್ತು. ಬಳಿಕ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಮಾಸ್ಟರ್‌ ಪೀಸ್’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿತ್ತು.

    2017ರಲ್ಲಿ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ ‘ರಾಜಕುಮಾರ’ ಚಿತ್ರ ಸೂಪರ್ ಡ್ಯೂಪರ್ ಹಿಟ್ ಆಯ್ತು. ಕನ್ನಡ ಚಿತ್ರರಂಗದಲ್ಲೇ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರಗಳ ಪೈಕಿ ‘ರಾಜಕುಮಾರ’ ಚಿತ್ರವೂ ಒಂದು ಎನಿಸಿಕೊಂಡಿತು.

  • ಸರ್ಕಾರದ ಥಿಯೇಟರ್ ಮಿತಿ ನೀತಿಗೆ ಪವರ್ ಸ್ಟಾರ್ ಆಕ್ಷೇಪ

    ಸರ್ಕಾರದ ಥಿಯೇಟರ್ ಮಿತಿ ನೀತಿಗೆ ಪವರ್ ಸ್ಟಾರ್ ಆಕ್ಷೇಪ

    ಬೆಂಗಳೂರು: ಚಿತ್ರ ಮಂದಿರಗಳ ಸಾಮರ್ಥ್ಯವನ್ನು ಶೇ.50ಕ್ಕೆ ಇಳಿಸಲು ಸರ್ಕಾರ ನಿರ್ಧರಿಸಿದ್ದು, ದಯವಿಟ್ಟು ಶೇ.100ಕ್ಕೆ ಅವಕಾಶ ಮಾಡಿಕೊಡಿ. ಚುನಾವಣಾ ರ‍್ಯಾಲಿ ಸೇರಿದಂತೆ ವಿವಿಧ ರೀತಿಯ ಚಟುವಟಿಕೆಗಳಿಗೆ ನಿರ್ಬಂಧ ಹೇರಿಲ್ಲ ಆದರೆ ಸಿನಿಮಾ ರಂಗವನ್ನು ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ. ದಯವಿಟ್ಟು ಶೇ.100ರಷ್ಟು ಭರ್ತಿಗೆ ಅವಕಾಶ ಮಾಡಿಕೊಡಿ ಎಂದು ನಟ ಪುನೀತ್ ರಾಜ್‍ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್‍ರಾಮ್ ಕೇಳಿಕೊಂಡಿದ್ದಾರೆ.

    ಫೇಸ್ಬುಕ್ ಲೈವ್‍ನಲ್ಲಿ ಮಾತನಾಡಿರುವ ಅವರು, ಹೆಚ್ಚು ಜನ ಕುಟುಂಬ ಸಮೇತರಾಗಿ ಚಿತ್ರ ಮಂದಿಗಳಿಗೆ ಬಂದು ಸಿನಿಮಾ ನೋಡುತ್ತಿದ್ದಾರೆ. ಹೀಗಾಗಿ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕು. ಶೇ.100 ಭರ್ತಿಗೆ ಅವಕಾಶ ನೀಡಬೇಕು. ಇದರಿಂದ ನಮಗೆ ತುಂಬಾ ಕಷ್ಟವಾಗುತ್ತದೆ ಎಂದು ಅಪ್ಪು ಮನವಿ ಮಾಡಿದ್ದಾರೆ.

    ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿ, ಅರ್ಹರೆಲ್ಲರೂ ಕೊರೊನಾ ವ್ಯಾಕ್ಸಿನ್ ಪಡೆಯಿರಿ ಈ ಮೂಲಕ ಸುರಕ್ಷಿತವಾಗಿರಿ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಪೈರಸಿಯನ್ನು ದೂರವಿಡಿ, ನೀವೇ ಪವರ್ ಆಫ್ ಯೂತ್ ಎಂದು ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಯುವರತ್ನನಿಗೆ ಅಭಿಮಾನಿಯ ವಿಶೇಷ ಸ್ವಾಗತ

    ತುಂಬಾ ಪ್ರೀತಿಯಿಂದ ಯುವರತ್ನ ಚಿತ್ರವನ್ನು ಒಪ್ಪಿಕೊಂಡಿದ್ದೀರಿ, ಯಶಸ್ವಿಗೊಳಿಸಿದ್ದೀರಿ. ಹಬ್ಬದ ರೀತಿಯಲ್ಲಿ ಸಿನಿಮಾವನ್ನು ಸ್ವೀಕರಿಸಿ, ಸಂಭ್ರಮಿಸಿದ ರೀತಿ, ಪ್ರೀತಿ, ವಿಶ್ವಾಸಕ್ಕೆ ಏನು ಹೇಳಬೇಕೋ ತಿಳಿಯುತ್ತಿಲ್ಲ, ನಿಮ್ಮೆಲ್ಲರ ಪ್ರೀತಿಗೆ ಚಿರಋಣಿ ಎಂದು ಅಪ್ಪು ಭಾವುಕರಾಗಿದ್ದಾರೆ.

    ಪ್ರತಿ ಜಿಲ್ಲೆಯಲ್ಲೂ ಹೆಚ್ಚು ಜನ ಆಗಮಿಸಿ ಸಿನಿಮಾ ನೋಡುತ್ತಿದ್ದಾರೆ. ಸುರಕ್ಷಿತವಾಗಿ, ಚಿತ್ರ ಮಂದಿರಗಳಲ್ಲಿ ಸಹ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಕ್ಕಾಗಿಯೇ ಎಲ್ಲರೂ ಬಂದು ಸಿನಿಮಾ ನೋಡುತ್ತಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಕೇವಲ ಒಂದು ದಿನ ಕಳೆದಿದೆ. ಇದೀಗ ಇದ್ದಕ್ಕಿಂತೆ ಈ ನಿರ್ಧಾರ ಕೈಗೊಳ್ಳುವುದರಿಂದ ತುಂಬಾ ನಷ್ಟವಾಗುತ್ತದೆ. ಸಾಮಾಜಿಕ ಕಾಳಜಿ ಇರುವ, ಉತ್ತಮ ಸಂದೇಶ ಹೊಂದಿರುವ ಸಿನಿಮಾ ಇದಾಗಿದೆ ಎಂದು ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್ ಆನಂದರಾಮ್ ಲೈವ್‍ನಲ್ಲಿ ಹೇಳಿದ್ದಾರೆ.

    ಯಾವುದೇ ಮುನ್ಸೂಚನೆ ಇಲ್ಲದೆ ಈ ರೀತಿ ನಿರ್ಧಾರ ಕೈಗೊಂಡಿದ್ದಕ್ಕೆ ಆಘಾತವಾಗಿದೆ, ತುಂಬಾ ಕಷ್ಟದ ಪರಿಸ್ಥಿತಿ ಇದು. ಸಾರ್ವಜನಿಕರು ಇಷ್ಟಪಟ್ಟು ಸಿನಿಮಾ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ಈ ರೀತಿ ನಿರ್ಧಾರ ಕೈಗೊಳ್ಳಬಾರದು, ಪ್ರೇಕ್ಷಕರ ಬೆಂಬಲದ ಜೊತೆಗೆ ಸರ್ಕಾರದ ಬೆಂಬಲವೂ ಅಗತ್ಯವಾಗಿದೆ. ದೊಡ್ಡ ಸಂಖ್ಯೆಯಲ್ಲಿ ಜನ ಬಂದು ನೋಡಿದಾಗಲೇ ಸಿನಿಮಾ ಯಶಸ್ವಿಯಾಗಲು ಸಾಧ್ಯ. ದಯವಿಟ್ಟು ಶೇ.100ರಷ್ಟು ಭರ್ತಿಗೆ ಅವಕಾಶ ಮಾಡಿಕೊಡಿ ಎಂದು ಸಂತೋಷ್ ಕೇಳಿಕೊಂಡಿದ್ದಾರೆ.

  • ಇಂದಿನಿಂದ ‘ಯುವರತ್ನ’ ಅಬ್ಬರ ಆರಂಭ – ಥಿಯೇಟರ್‌ಗಳಿಗೆ ಅಭಿಮಾನಿಗಳ ಜಾತ್ರೆ

    ಇಂದಿನಿಂದ ‘ಯುವರತ್ನ’ ಅಬ್ಬರ ಆರಂಭ – ಥಿಯೇಟರ್‌ಗಳಿಗೆ ಅಭಿಮಾನಿಗಳ ಜಾತ್ರೆ

    – 2 ವರ್ಷದ ಬಳಿಕ ಪುನೀತ್ ಚಿತ್ರ ಬಿಡುಗಡೆ
    – ಬಹುತೇಕ ಚಿತ್ರಮಂದಿರಗಳಲ್ಲಿ 3 ದಿನಗಳ ಟಿಕೆಟ್ ಸೋಲ್ಡೌಟ್

    ಬೆಂಗಳೂರು: ಇಂದಿನಿಂದ ಥಿಯೇಟರ್‌ಗಳಲ್ಲಿ `ಯುವರತ್ನ’ನ ಅಬ್ಬರ ಆರಂಭವಾಗಿದೆ. ಲಾಕ್‍ಡೌನ್ ಬಳಿಕ ರಿಲೀಸ್ ಆಗುತ್ತಿರುವ ಮತ್ತೊಂದು ಬಿಗ್ ಬಜೆಟ್ ಮೂವಿ ಇದಾಗಿದ್ದು, 2 ವರ್ಷಗಳ ಬಳಿಕ ಪುನೀತ್ ಚಿತ್ರ ಬಿಡುಗಡೆಯಾಗಿದೆ.

    ಪೊಗರು, ರಾಬರ್ಟ್ ಬಳಿಕ ತೆರೆ ಮೇಲೆ `ಯುವರತ್ನ’ ಅಬ್ಬರ ಜೋರಾಗಿದ್ದು, ಬೆಳಗ್ಗೆ 5 ಗಂಟೆಯಿಂದಲೇ ಥಿಯೇಟರ್‌ಗಳಿಗೆ ಅಭಿಮಾನಿಗಳು ಎಂಟ್ರಿ ಕೊಟ್ಟಿದ್ದು, ಅಪ್ಪು ಕಟೌಟ್‍ಗೆ ಕ್ಷೀರಾಭಿಷೇಕ ಮಾಡಿದ್ದಾರೆ. ಬಹುತೇಕ ಚಿತ್ರಮಂದಿರಗಳಲ್ಲಿ 3 ದಿನಗಳ ಟಿಕೆಟ್ ಸೋಲ್ಡೌಟ್ ಆಗಿದೆ.

    ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸುಮಾರು 600 ಥಿಯೇಟರ್‌ಗಳ ಜೊತೆ ವಿದೇಶಗಳಲ್ಲೂ ‘ಯುವರತ್ನ’ನ ಆಟ ಆರಂಭವಾಗಿದೆ. ರಾಜ್ಯದಲ್ಲೇ 400ಕ್ಕೂ ಹೆಚ್ಚು ಥಿಯೇಟರ್‌ಗೆ ಯುವರತ್ನ ಲಗ್ಗೆ ಇಟ್ಟಿದ್ದಾನೆ.

    ಬಳ್ಳಾರಿ ಜಿಲ್ಲೆಯಲ್ಲಿ ನೂರಾರು ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ 1 ಸಾವಿರ ಲೀಟರ್ ಹಾಲಿನ ಅಭಿಷೇಕ ಮಾಡಿ ಚಿತ್ರವನ್ನು ಸ್ವಾಗತಿಸಿದ್ದಾರೆ. ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರಿನಲ್ಲೂ ಯುವರತ್ನನ ಫ್ಯಾನ್ಸ್ ಚಿತ್ರವೀಕ್ಷಣೆಗೆ ತುದಿಗಾಲಲ್ಲಿ ನಿಂತಿದ್ದಾರೆ. ಫಸ್ಟ್ ಡೇ ಫಸ್ಟ್ ಶೋ ನೋಡಲೇಬೇಕೆಂದು ಪಣ ತೊಟ್ಟಿದ್ದಾರೆ. ಥಿಯೇಟರ್ ಮುಂಭಾಗ ಬೃಹತ್ ಕಟೌಟ್ ಕಟ್ಟಿ ಸಂಭ್ರಮಿಸುತ್ತಿದ್ದಾರೆ.

    ಸಂತೋಷ್ ಆನಂದರಾಮ್ ನಿರ್ದೇಶನದ ಪುನೀತ್, ಸಯ್ಯೇಶಾ, ಸೋನುಗೌಡ, ಡಾಲಿ ಧನಂಜಯ್, ಪ್ರಕಾಶ್ ರಾಜ್, ದಿಗಂತ್, ಸಾಯಿ ಕುಮಾರ್ ಅಭಿನಯದ ಚಿತ್ರಕ್ಕೆ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದಾರೆ. ಥಮನ್ ಎಸ್ ಸಂಗೀತ ನಿರ್ದೇಶಿಸಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ಕೆಲದಿನಗಳಿಂದ ಹಾಡು, ಟ್ರೇಲರ್‌ ಮೂಲಕ ಸದ್ದು ಮಾಡುತ್ತಿರುವ ಯುವರತ್ನ ಟ್ರೇಲರ್ 90 ಲಕ್ಷಕ್ಕೂ ಅಧಿಕ ವ್ಯೂ ಆಗಿದೆ. ಸೂಪರ್ ಹಿಟ್ ಡೈಲಾಗ್ಸ್, ಸ್ಟಂಟ್‌ಗಳಿಂದ ಅಪ್ಪು ತಮ್ಮ ಅಭಿಮಾನಿಗಳಿಗೆ ರಸದೌತಣ ಉಣಬಡಿಸಿದ್ದಾರೆ.

  • ರಾಜಕುಮಾರ ಸಾರಥಿಯ ಮನೆಗೆ ಕುಲಪುತ್ರನ ಆಗಮನ

    ರಾಜಕುಮಾರ ಸಾರಥಿಯ ಮನೆಗೆ ಕುಲಪುತ್ರನ ಆಗಮನ

    ಬೆಂಗಳೂರು: ‘ರಾಜಕುಮಾರ’ ಸಿನಿಮಾ ಖ್ಯಾತಿಯ ನಿರ್ದೇಶಕ ಸಂತೋಷ್ ಆನಂದ್ ರಾಮ್ ತಂದೆಯಾದ ಸಂತಸದಲ್ಲಿದ್ದು, ಅವರ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಸಂತೋಷ್ ಆನಂದ್ ರಾಮ್ ಪತ್ನಿ ಸುರಭಿ ಹತ್ವಾರ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ನಿರ್ದೇಶಕರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕುಟುಂಬದವರು ಸಂಭ್ರಮ ಪಡುತ್ತಿದ್ದಾರೆ. ಈ ಬಗ್ಗೆ ಸಂತೋಷ್ ಸೋಶಿಯಲ್ ಮೀಡಿಯಾದಲ್ಲಿ ತಾವು ತಂದೆಯಾಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ.

    “ನಾನು ಗಂಡು ಮಗುವಿನ ತಂದೆಯಾಗಿದ್ದಾನೆ. ನಿಮ್ಮೆಲ್ಲರ ಶುಭಾಶಯಗಳಿಗಾಗಿ ನಮ್ಮ ಕುಟುಂಬದ ಪರವಾಗಿ ಧನ್ಯವಾದಗಳು. ಈ ಮೂಲಕ ನಮ್ಮ ಕುಟುಂಬ ದೊಡ್ಡದಾಗಿದೆ. ಅಮ್ಮ-ಮಗ ಕ್ಷೇಮವಾಗಿದ್ದಾರೆ. ನಿಮ್ಮ ಆಶೀರ್ವಾದ ನಮ್ಮ ಶ್ರೀರಕ್ಷೆ” ಎಂದು ಬರೆದುಕೊಳ್ಳುವ ಮೂಲಕ ತಂದೆಯಾಗಿರುವ ಖುಷಿಯನ್ನು ಶೇರ್ ಮಾಡಿಕೊಂಡಿದ್ದಾರೆ. ನಿರ್ದೇಶಕರು ಟ್ವೀಟ್ ಮಾಡಿದ ತಕ್ಷಣ ಅನೇಕರು ವಿಶ್ ಮಾಡುತ್ತಿದ್ದಾರೆ.

    ಸಂತೋಷ್ ಆನಂದ್ ರಾಮ್ ಫೆಬ್ರವರಿ 2018ರಲ್ಲಿ ಬಳ್ಳಾರಿ ಮೂಲದ ಸುರಭಿ ಹತ್ವಾರ್ ಜೊತೆ ಸಪ್ತಪದಿ ತುಳಿದಿದ್ದರು. ಬೆಂಗಳೂರಿನ ಜೆ.ಪಿ ನಗರದ ಸಿಂಧೂರಿ ಕನ್ವೆಂಷನ್ ಸೆಂಟರಿನಲ್ಲಿ ಆರತಕ್ಷತೆ ನಡೆದಿತ್ತು. ಅದ್ಧೂರಿಯಾಗಿ ನಡೆದ ಆರತಕ್ಷತೆ ಸಮಾರಂಭಕ್ಕೆ ಕನ್ನಡ ಚಿತ್ರೋದ್ಯಮದ ಅನೇಕ ಗಣ್ಯರು ಬಂದು ಶುಭಾಶಯ ತಿಳಿಸಿದ್ದರು.

    ಸ್ಯಾಂಡಲ್‍ವುಡ್‍ನಲ್ಲಿ ‘ಮಿಸ್ಟರ್ ಆ್ಯಂಡ್ ಮಿಸಸ್ ರಾಮಚಾರಿ’ ಸಿನಿಮಾದ ಮೂಲಕ ನಿರ್ದೇಶನಕ್ಕೆ ಎಂಟ್ರಿ ಕೊಟ್ಟ ಸಂತೋಷ್ ಆನಂದ್ ರಾಮ್ ಅವರ ಮೊದಲ ಚಿತ್ರವೇ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಎರಡನೇ ಚಿತ್ರ ‘ರಾಜಕುಮಾರ’ ಕೂಡ ಅದ್ಧೂರಿ ಹಿಟ್ ಚಿತ್ರ. ಇದೀಗ ಸಂತೋಷ್ ಆನಂದ್ ರಾಮ್, ಪುನೀತ್ ರಾಜ್‍ಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ.

  • ಖುಷಿ ತರದ ಈ ಬಾರಿಯ ‘ಯುವರತ್ನ’ನ ಅಪ್‍ಡೇಟ್

    ಖುಷಿ ತರದ ಈ ಬಾರಿಯ ‘ಯುವರತ್ನ’ನ ಅಪ್‍ಡೇಟ್

    ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಕುಂಟುತ್ತಾ ಸಾಗುತ್ತಿವೆ. ಚಂದನವನದ ಬಹು ನಿರೀಕ್ಷಿತ ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.

    ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ ಮತ್ತು ಮುಂಬೈ ಲಾಕ್‍ಡೌನ್ ನಲ್ಲಿವೆ.ಪರಿಸ್ಥಿತಿ ಹದವಾಗುವವರೆಗೂ ಯುವರತ್ನ ಹಾಡುಗಳು ಬರುವುದು ಕಷ್ಟ. ಸಂಗೀತ ನಿರ್ದೇಶಕ ಥಾಮನ್ ಅವರು ಚೆನ್ನೈನ ಲಾಕ್‍ಡೌನ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಅಭಿಮಾನಿಗಳು ದಯವಿಟ್ಟು ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

    ಯುವರತ್ನ ಸಿನಿಮಾ ಸೆಟ್ಟೇರಿದಾಗಿನಿಂದಲೂ ಗಾಂಧಿನಗರದಲ್ಲಿ ಸದ್ದು ಮಾಡುತ್ತಾ ಬಂದಿರುವ ಸಿನಿಮಾ. ಕೊರೊನಾ ಆತಂಕದಿಂದ ಸಿನಿಮಾದ ಚಿತ್ರೀಕರಣಕ್ಕೂ ಚಿತ್ರತಂಡ ಬ್ರೇಕ್ ಹಾಕಿದೆ. ಇದೀಗ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ರೂ ಕಲಾವಿದರು ನೆರೆಯ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದಾರೆ. ತಮಿಳುನಾಡಿನ ಚೆನ್ನೈ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ ‘ಯುವರತ್ನ’ ಸಿನಿಮಾ ಬಾರೀ ನಿರೀಕ್ಷೆ ಹುಟ್ಟುಹಾಕಿದೆ. ಯುವರತ್ನ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಯುರೋಪ್‍ಗೆ ತೆರಳಲು ಪ್ಲಾನ್ ಮಾಡಿಕೊಂಡಿತ್ತು. ಯುರೋಪ್‍ನ ಸ್ಲೋವೇನಿಯಾದಲ್ಲಿ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿತ್ತು.

    ಯುವರತ್ನ ಚಿತ್ರತಂಡ ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಯುರೋಪ್‍ಗೆ ತೆರಳಲು ಪ್ಲಾನ್ ಮಾಡಿಕೊಂಡಿತ್ತು. ಯುರೋಪ್‍ನ ಸ್ಲೋವೇನಿಯಾದಲ್ಲಿ ಹಾಡಿನ ಚಿತ್ರೀಕರಣ ಮಾಡಲು ಚಿತ್ರತಂಡ ಮುಂದಾಗಿತ್ತು. 3-4 ದಿನಗಳ ಕಾಲ ಯುರೋಪಿನಲ್ಲೇ ಚಿತ್ರತಂಡ ತಂಗಲು ಪ್ಲಾನ್ ಮಾಡಿದ್ದ ಹಿನ್ನೆಲೆ ಟಿಕೆಟ್, ಹೋಟೆಲ್ ಎಲ್ಲವೂ ಬುಕ್ ಮಾಡಲಾಗಿತ್ತು. ಆದರೆ ಮಹಾಮಾರಿ ಕೊರೊನಾ ಭೀತಿಯಿಂದ ‘ಯುವರತ್ನ’ನ ಯುರೋಪ್ ಪ್ರವಾಸ ರದ್ದು ಮಾಡಿದೆ. ಹಣ ಹೋದರೆ ಹೋಗಲಿ ಕೊರೊನಾ ಸಹವಾಸ ಬೇಡಪ್ಪ ಎಂದು ಚಿತ್ರತಂಡ ಸುಮ್ಮನಾಗಿದೆ.

    ‘ರಾಜಕುಮಾರ` ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಿಸಿದ ಸಂತೋಷ್ ಆನಂದ್ ರಾಮ್ ಅವರೇ `ಯುವರತ್ನ` ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾದಲ್ಲಿ ಪವರ್ ಸ್ಟಾರ್ ಗೆ ಜೋಡಿಯಾಗಿ ಸಯೇಷ ಸೈಗಲ್ ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಸೋನು, ಡಾಲಿ ಧನಂಜಯ್, ವಸಿಷ್ಠ ಸಿಂಹ ಸಿನಿಮಾದಲ್ಲಿ ನಟಿಸಲಿದ್ದಾರೆ.

  • ನನ್ನಲ್ಲಿದ್ದ ನಿರ್ದೇಶಕನನ್ನು ಬಡಿದೆಬ್ಬಿಸಿದ್ದವರು ಉಪ್ಪಿ: ಸಂತೋಷ್ ಅನಂದ್‍ರಾಮ್

    ನನ್ನಲ್ಲಿದ್ದ ನಿರ್ದೇಶಕನನ್ನು ಬಡಿದೆಬ್ಬಿಸಿದ್ದವರು ಉಪ್ಪಿ: ಸಂತೋಷ್ ಅನಂದ್‍ರಾಮ್

    ಬೆಂಗಳೂರು: ನನ್ನಲ್ಲಿದ್ದ ನಿರ್ದೇಶಕನನ್ನು ಬಡಿದೆಬ್ಬಿಸಿದವರು ರಿಯಲ್ ಸ್ಟಾರ್ ಉಪೇಂದ್ರ ಅವರು ಎಂದು ನಿರ್ದೇಶಕ ಸಂತೋಷ್ ಅನಂದ್‍ರಾಮ್ ಅವರು ಹೇಳಿದ್ದಾರೆ.

    ಇಂದು ನಿರ್ದೇಶಕರ ದಿನವಿದ್ದು, ಈ ದಿನದ ಸಲುವಾಗಿ ತನ್ನ ನೆಚ್ಚಿನ ನಿರ್ದೇಶಕನಿಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಜಕುಮಾರನಂತಹ ಬ್ಲಾಕ್ ಬಸ್ಟರ್ ಸಿನಿಮಾ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಸಂತೋಷ್ ಅನಂದ್‍ರಾಮ್ ಅವರು, ಉಪೇಂದ್ರ ಅವರು ನನ್ನ ನೆಚ್ಚಿನ ನಿರ್ದೇಶಕ ಎಂದು ಟ್ವೀಟ್ ಮಾಡಿದ್ದಾರೆ.

    ಈ ಸಲುವಾಗಿ ಉಪ್ಪಿಯವರ ಫೋಟೋವನ್ನು ಟ್ವೀಟ್ ಮಾಡಿರುವ ಸಂತೋಷ್ ಅನಂದ್‍ರಾಮ್, ನನ್ನಲ್ಲಿದ್ದ ನಿರ್ದೇಶಕನನ್ನು ಬಡಿದೆಬ್ಬಿಸಿದ ನಿರ್ದೇಶಕರ ನಿರ್ದೇಶಕನಿಗೆ ನಿರ್ದೇಶಕರ ದಿನದ ಶುಭಾಶಯಗಳು “ಉಪ್ಪಿಗಿಂತ ರುಚಿ ಬೇರೆ ಇಲ್ಲ, ಒಪ್ಪಿಕೊಂಡೋರು ದಡ್ಡರಲ್ಲ”, ಎಲ್ಲ ನನ್ನ ಕನ್ನಡದ ನಿರ್ದೇಶಕರಿಗೆ ನಿರ್ದೇಶಕ ದಿನದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

    ತನ್ನ ವಿಭಿನ್ನ ರೀತಿಯ ನಿರ್ದೇಶನದಿಂದ ಜನಮೆಚ್ಚುಗೆ ಪಾತ್ರರಾಗಿದ್ದ ಉಪೇಂದ್ರ ಅವರು, ಓಂ, ಉಪೇಂದ್ರ, ಎ ಸಿನಿಮಾಗಳಂತಹ ವಿಭಿನ್ನ ಸಿನಿಮಾ ಮಾಡಿ ಯುವ ನಿರ್ದೇಶಕರಿಗೆ ಸ್ಫೂರ್ತಿಯಾಗಿದ್ದರು. ಅವರು ಕೊನೆಯದಾಗಿ 2015ರಲ್ಲಿ ಉಪ್ಪಿ-2 ಸಿನಿಮಾ ನಿರ್ದೇಶನ ಮಾಡಿದ್ದರು. ಈಗ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಸಂತೋಷ್ ಅನಂದ್‍ರಾಮ್ ಕೂಡ ಉಪ್ಪಿ ನಮಗೆ ಸ್ಫೂರ್ತಿ ಎಂದು ಹೇಳಿದ್ದಾರೆ. ಈ ಟ್ವೀಟ್‍ಗೆ ಉಪ್ಪಿ ಕೂಡ ರೀಪ್ಲೇ ಮಾಡಿದ್ದಾರೆ.

    ಸಂತೋಷ್ ಅನಂದ್‍ರಾಮ್ ಅವರು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ರಾಜಕುಮಾರ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ, ಗಜಕೇಸರಿಯಂತಹ ಸಿನಿಮಾ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇವರ ನಿರ್ದೇಶನ ರಾಜಕುಮಾರ ಮತ್ತು ಮಿಸ್ಟರ್ ಆ್ಯಂಡ್ ಮಿಸಸ್ ರಾಮಾಚಾರಿ ಚಿತ್ರಗಳು ಸೂಪರ್ ಹಿಟ್ ಆಗಿ ದಾಖಲೆ ಬರೆದಿವೆ.

    ಈಗ ಸದ್ಯ ಸಂತೋಷ್ ಅನಂದ್‍ರಾಮ್ ಅವರು ಪುನೀತ್ ರಾಜ್‍ಕುಮಾರ್ ಅಭಿನಯದ ಯುವರತ್ನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದ್ದು, ಸ್ವಲ್ಪ ಕೆಲಸ ಮಾತ್ರ ಬಾಕಿ ಇತ್ತು. ಆದರೆ ಕೊರೊನಾ ಲಾಕ್‍ಡೌನ್ ಇರುವುದರಿಂದ ಚಿತ್ರೀಕರಣ ಮುಂದಕ್ಕೆ ಹೋಗಿದೆ. ಈ ಸಿನಿಮಾದಲ್ಲಿ ಅಪ್ಪು ಸಿನಿಮಾ ಬಳಿಕ ಪುನೀತ್ ಅವರು ಕಾಲೇಜು ಯುವಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

  • ಪುನೀತ್ ರಾಜ್‍ಕುಮಾರ್ ಅವರಿಂದ ಹ್ಯಾಂಡ್ ಶೇಕ್ ಚಾಲೆಂಜ್

    ಪುನೀತ್ ರಾಜ್‍ಕುಮಾರ್ ಅವರಿಂದ ಹ್ಯಾಂಡ್ ಶೇಕ್ ಚಾಲೆಂಜ್

    ಬೆಂಗಳೂರು: ಇತ್ತೀಚೆಗೆ ಚಾಲೆಂಜ್ ಗಳ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಸಿನಿಮಾರಂಗದಲ್ಲಿ ನಟ-ನಟಿ ಮತ್ತು ನಿರ್ದೇಶಕರಿಗೆ ಹೆಚ್ಚಾಗಿ ಚಾಲೆಂಜ್ ಹಾಕುತ್ತಿದ್ದಾರೆ. ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನೂತನವಾಗಿ `ಹ್ಯಾಂಡ್ ಶೇಕ್’ ಚಾಲೆಂಜ್ ಹಾಕಿದ್ದಾರೆ.

    ನಟ ಪುನೀತ್ ನೂತನವಾಗಿ ಹ್ಯಾಂಡ್ ಶೇಕ್ ಚಾಲೆಂಜ್ ಹಾಕಿದ್ದಾರೆ. ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ನಲ್ಲಿ ಶೇಕ್ ಹ್ಯಾಂಡ್ ಮಾಡುತ್ತಿರುವ ಫೋಟೋವನ್ನು ಹಾಕಿ ಚಾಲೆಂಜ್ ಹಾಕಿದ್ದಾರೆ. ನೀವು ನಿಮ್ಮ ಸ್ನೇಹಿತರಿಗೆ ವಿಶ್ವಾಸದಿಂದ ಹ್ಯಾಂಡ್ ಶೇಕ್ ಕೊಟ್ಟ ಫೋಟೋವೊಂದನ್ನು ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿ ಎಂದು ಬರೆದು ಈ ಚಾಲೆಂಜ್ ನನ್ನು ನಟ ರಕ್ಷಿತ್ ಶೆಟ್ಟಿ, ರಾಜಕುಮಾರ ಸಿನಿಮಾ ನಿರ್ದೇಶಕರಾದ ಸಂತೋಷ್ ಆನಂದ್ ರಾಮ್ ಮತ್ತು ನಟ ಡ್ಯಾನಿಶ್ ಸೇಠ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ಪ್ರತಿದಿನ ಸಿಗುವ ಜನರಿಗೆ ಮತ್ತು ತಮ್ಮ ಸ್ನೇಹಿತರಿಗೆ ಹ್ಯಾಂಡ್ ಶೇಕ್ ಮಾಡುವುದು ಸಾಮಾನ್ಯವಾಗಿದೆ. ಆದರೆ ನಾವು ಎಷ್ಟು ವಿಶ್ವಾಸದಿಂದ ಹ್ಯಾಂಡ್ ಶೇಕ್ ಮಾಡುತ್ತೇವೆ ಅನ್ನೋದು ಈ ಚಾಲೆಂಜ್ ನ ಉದ್ದೇಶವಾಗಿದೆ.

    ಹ್ಯಾಂಡ್ ಶೇಕ್ ಚಾಲೆಂಜ್:
    ಈ ಚಾಲೆಂಜ್ ನನ್ನು ಯಾರು ಬೇಕಾದರೂ ಸ್ವೀಕರಿಸಬಹುದು. ಪರಿಚಯವಿಲ್ಲದವರು, ಆತ್ಮೀಯರನ್ನು ಪರಿಚಯ ಮಾಡಿಕೊಳ್ಳುವಾಗ ಕೈ ಕುಲುಕುವ ಒಂದು ಫೋಟೋ ತೆಗೆದು ಅದಕ್ಕೆ #handshakechallenge (ಹ್ಯಾಂಡ್ ಶೇಕ್ ಚಾಲೆಂಜ್ ಹ್ಯಾಷ್ ಟ್ಯಾಗ್) ಹಾಕಿ ಫೇಸ್‍ಬುಕ್ ಗೆ ಅಪ್ಲೋಡ್ ಮಾಡುವುದು.

    ಈ ಹಿಂದೆ ಭಾರತವನ್ನು ಫಿಟ್ ಮಾಡಲು `ಹಮ್ ಫಿಟ್ ತೋ ಇಂಡಿಯಾ ಫಿಟ್ ಹೇ’ ಚಾಲೆಂಜ್ ಟ್ರೆಂಡ್ ಆಗಿದ್ದು, ಅನೇಕ ನಟ-ನಟಿಯರು ಈ ಚಾಲೆಂಜ್ ಸ್ವೀಕರಿಸಿ ಪೂರೈಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews