Tag: santhosh anandram

  • ಹೊಸಪೇಟೆಯಲ್ಲಿ ‘ಯುವ’ ಚಿತ್ರದ 2ನೇ ಸಾಂಗ್ ರಿಲೀಸ್

    ಹೊಸಪೇಟೆಯಲ್ಲಿ ‘ಯುವ’ ಚಿತ್ರದ 2ನೇ ಸಾಂಗ್ ರಿಲೀಸ್

    ಯುವರಾಜಕುಮಾರ್ ನಟನೆಯ ಯುವ ಚಿತ್ರದ ಎರಡನೇ ಹಾಡನ್ನು ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. 2ನೇ ಹಾಡನ್ನು ಹೊಸಪೇಟೆಯಲ್ಲಿ ಬಿಡುಗಡೆ ಮಾಡಲು ಯೋಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅದ್ಧೂರಿ ಇವೆಂಟ್ ಮಾಡಿ, ಅಲ್ಲಿ 2ನೇ ಹಾಡನ್ನು ಬಿಡುಗಡೆ ಮಾಡುವ ಚರ್ಚೆ ನಡೆದಿದೆ ಎನ್ನುತ್ತಿವೆ ಬಲ್ಲ ಮೂಲಗಳು. ಯುವ (Yuva) ಅಶ್ವಮೇಧಯಾಗಕ್ಕೆ ಸಜ್ಜಾಗಿದ್ದಾರೆ. ಕುದುರೆ ಏರಿ ಯುದ್ಧಕ್ಕೆ ಹೊರಡಲಿದ್ದಾರೆ. ಅದಕ್ಕೂ ಮುನ್ನ ಕರುನಾಡಿನ ಮುಂದೆ ಮಂಡಿ ಊರಿದ್ದಾರೆ. ನನ್ನನ್ನು ಹರಸಿ ಬೆಳೆಸಿ ಎಂದು ಕೇಳಿಕೊಂಡಿದ್ದಾರೆ. ಅ ಕಾರಣಕ್ಕಾಗಿಯೇ ಯುವ ಸಿನಿಮಾದ ಮೊದಲ ಹಾಡನ್ನು ಜನರ ಮುಂದೆ ಈಗಾಗಲೇ ಇಟ್ಟಿದ್ದಾರೆ.

    ಯುವ ಕಣ್ಣಲ್ಲಿ ಜನರು ಏನು ನೋಡಲು ಕಾಯುತ್ತಿದ್ದರೊ ಅದನ್ನೇ ಯುವ ತೋರಿಸಿದ್ದಾರೆ. ಅಪ್ಪು ಬಿಟ್ಟು ಹೋದ ಸಿಂಹಾಸನದಲ್ಲಿ ನೀನೇ ಕೂಡಬೇಕು ಎಂದು ಹೇಳಿದ್ದಾರೆ. ಅದಕ್ಕೆ ತಕ್ಕಂತಿದೆ ಯುವ ಹಾಡು. ಒಬ್ಬನೇ ಶಿವ ಒಬ್ಬನೇ ಯುವ. ಇದನ್ನು ಕೇಳುತ್ತಾ ಕೇಳುತ್ತಾ ನೀವು ಮೈಮರೆಯುತ್ತೀರಿ. ಎಲ್ಲವನ್ನೂ ಅಲ್ಲಲ್ಲೇ ಬಿಟ್ಟು ಎದ್ದು ನಿಲ್ಲುತ್ತೀರಿ. ಕಾರಣ ಹಾಡು ಹಾಗಿದೆ. ಕರುನಾಡನ್ನು ಹುಚ್ಚೆಬ್ಬಿಸಿದೆ.

    ಅದೇನು ಕುಣಿತ. ಯುವರಾಜ್‌ಕುಮಾರ್ (Yuvarajkumar) ಸುಮ್ಮನೆ ಆಗಿಲ್ಲ. ಸುಮ್ಮನೆ ಬಂದಿಲ್ಲ. ಏನಾದರೂ ಮಾಡಿ ಹೋಗಬೇಕು. ಏನಾದರೂ ಸಾಧಿಸಬೇಕು. ಅದೆಲ್ಲಕ್ಕಿಂತ ಹೆಚ್ಚಾಗಿ ಅಪ್ಪು ಚಿಕ್ಕಪ್ಪ ನನ್ನ ಮೇಲಿಟ್ಟಿದ್ದ ನಂಬಿಕೆಯನ್ನು ಉಳಿಸಿಸಕೊಳ್ಳಬೇಕು. ಅದೊಂದೇ ಉದ್ದೇಶ. ಅದೇ ಕಾಯಕ. ಹೀಗಂದುಕೊಂಡು ಯುವ ಬಣ್ಣದಲೋಕಕ್ಕೆ ಕಾಲಿಟ್ಟಿದ್ದಾರೆ. ಯುವ ಹಾಡು ನೋಡಿದ ಜನರು ಕೇಕೆ ಹಾಕುತ್ತಿದ್ದಾರೆ.

    ಚಾಮರಾಜನಗರ ಅದು ಅಣ್ಣಾವ್ರು ಹುಟ್ಟಿದ ಮಣ್ಣು. ಅದೇ ಮಣ್ಣಿನಲ್ಲಿ ನಿಂತು ಯುವ ಕರುನಾಡಿಗೆ ತಲೆ ಬಾಗಿದ್ದಾರೆ. ನನ್ನನ್ನು ಹರಸಿ, ಬೆಳೆಸಿ ಎಂದು ಕೇಳಿಕೊಂಡಿದ್ದಾರೆ. ರಾಜ್‌ಕುಮಾರ್ ಮೊಮ್ಮಗ ಎನ್ನುವ ಕಾರಣಕ್ಕೆ ಅಷ್ಟೇ ಅಲ್ಲ. ಅಪ್ಪು ಮಗ ಎನ್ನುವ ಕಾರಣಕ್ಕೂ ಅಲ್ಲ. ಅದೆಲ್ಲ ಮೀರಿದ್ದು ಕಲೆ. ಅದನ್ನು ಯುವ ರಕ್ತದಲ್ಲೇ ಬಸಿದುಕೊಂಡು ಬಂದಿದ್ದಾರೆ.

     

    ಒಬ್ಬನೇ ಶಿವ ಒಬ್ಬನೇ ಯುವ ಈ ಹಾಡನ್ನು ಸಂತೋಷ್ ಆನಂದ್ ರಾಮ್ (Santhosh Anandram) ಬರೆದಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ‘ರಾಜಕುಮಾರ’ ಸಿನಿಮಾದಲ್ಲಿ ಬೊಂಬೆ ಹೇಳುತ್ತೈತೆ ಹಾಡನ್ನು ಬರೆದಿದ್ದು ಇವರೇ. ಅದೇ ಸಂತೋಷ್ ಈಗ ಈ ಗೀತೆಗೆ ಸಾಲು ಹೆಣೆದಿದ್ದಾರೆ. ಒಬ್ಬ ನಯಾ ಹುಡುಗನನ್ನು ಹೇಗೆ ತೆರೆ ಮೇಲೆ ತೋರಿಸಬೇಕೆಂದು ಅವರಿಗೆ ಗೊತ್ತು. ಅದನ್ನು ನಿಯತ್ತಾಗಿ ಪಾಲಿಸಿದ್ದಾರೆ. ಸದ್ಯ ರಿಲೀಸ್ ಆಗಿರೋ ಯುವ ಹಾಡಿಗೆ ಸಖತ್ ರೆಸ್ಪಾನ್ಸ್ ಸಿಗುತ್ತಿದೆ. ಹಾಡಿಗೆ ಯುವನ ಖದರ್ ಫ್ಯಾನ್ಸ್ ಫಿದಾ ಆಗಿದ್ದಾರೆ. ಇನ್ನೇನು ಇದೇ ಮಾ.29ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ.

  • Breaking:ಸ್ಯಾಂಡಲ್‌ವುಡ್‌ನಲ್ಲಿ ಯುವ ಪರ್ವ ಆರಂಭ

    Breaking:ಸ್ಯಾಂಡಲ್‌ವುಡ್‌ನಲ್ಲಿ ಯುವ ಪರ್ವ ಆರಂಭ

    ಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಘಳಿಗೆಗೆ ಕೊನೆಗೂ ಬ್ರೇಕ್ ಬಿದ್ದಿದೆ. ಯುವ ರಾಜ್‌ಕುಮಾರ್ ಚೊಚ್ಚಲ ಸಿನಿಮಾದ ಟೀಸರ್ ಜೊತೆ ಪವರ್‌ಫುಲ್ ಟೈಟಲ್ ಕೂಡ ಅನಾವರಣವಾಗಿದೆ.

    ಡಾ.ರಾಜ್ ಕುಟುಂಬದ ಕುಡಿ ಯುವರಾಜ್ ಕುಮಾರ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡ್ತಿದ್ದಾರೆ. ಖ್ಯಾತ ನಿರ್ದೇಶಕ ಸಂತೋಷ್ ರಾಮ್ ಜೊತೆ ಯುವ ಕೈಜೋಡಿಸಿದ್ದಾರೆ. ಅಪ್ಪು ಅಭಿಮಾನಿಗಳ ಕನಸಿಗೆ ಹೊಂಬಾಳೆ ಸಂಸ್ಥೆ ಕೂಡ ಸಾಥ್ ನೀಡಿದೆ. ಇದೀಗ ಯುವ ನಟನೆಯ ಮೊದಲ ಸಿನಿಮಾ ಮುಹೂರ್ತ ನೆರವೇರಿದೆ. ಟೀಸರ್ ಜೊತೆ ಟೈಟಲ್ ಕೂಡ ರಿವೀಲ್ ಆಗಿದೆ. ಈ ಶುಭ ಸಂದರ್ಭದಲ್ಲಿ ಯುವ ಮತ್ತು ಚಿತ್ರತಂಡ ಜೊತೆ ಶಿವಣ್ಣ, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ರಾಘವೇಂದ್ರ ರಾಜ್‌ಕುಮಾರ್‌ ಸೇರಿದಂತೆ ಇಡೀ ಡಾ.ರಾಜ್‌ ಪರಿವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

    View this post on Instagram

     

    A post shared by Hombale Films (@hombalefilms)

    ಯುವ ರಾಜ್‌ಕುಮಾರ್ ಚೊಚ್ಚಲ ಸಿನಿಮಾ ಟೈಟಲ್ ಬಗ್ಗೆ ಗಾಂಧಿನಗರದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆಯಾಗಿತ್ತು. `ಜ್ವಾಲಾಮುಖಿ’ ಅಥವಾ `ಅಶ್ವಮೇಧ’ ಈ ಎರಡು ಟೈಟಲ್‌ನಲ್ಲಿ ಒಂದನ್ನ ಇಡಲಾಗುತ್ತದೆ ಎಂದು ಹೇಳಲಾಗಿತ್ತು. ಈ ಎಲ್ಲಾ ಕುತೂಹಲಕ್ಕೂ ಇದೀಗ ತೆರೆ ಬಿದ್ದಿದೆ.

    ಡಾ.ರಾಜ್ ಅವರ ಮೊಮ್ಮಗ `ಯುವ’ ನಟನೆಯ ಮೊದಲ ಚಿತ್ರಕ್ಕೆ ಯುವ ಎಂದೇ ಟೈಟಲ್ ಇಡಲಾಗಿದೆ. ಬೈಕ್‌ನಲ್ಲಿ ಯುವ ಕುಳಿತಿರುವ ಪೋಸ್ಟರ್ ಲುಕ್ ರಿವೀಲ್ ಆಗಿದ್ದು, ರಗಡ್ ಲುಕ್‌ನಲ್ಲಿ ಯುವ ಮಿಂಚಿದ್ದಾರೆ. ಫಸ್ಟ್ ಲುಕ್‌ಗೆ ಅಭಿಮಾನಿಗಳು ಬೋಲ್ಡ್ ಆಗಿದ್ದಾರೆ.

    ನೀವು ದಾಟಿರೋದು ಬ್ಲಡ್ ಲೈನ್, ರಕ್ತ ಹರಿದೆ ಹರಿಯುತ್ತದೆ ಎಂಬ ಖಡಕ್ ಡೈಲಾಗ್ ಹೇಳುವ ಮೂಲಕ `ಯುವ’ ಖಡಕ್ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಈ ವರ್ಷ ಡಿಸೆಂಬರ್‌ 22ಕ್ಕೆ ಸಿನಿಮಾ ತೆರೆಗೆ ಬರಲಿದೆ.

  • ಅಪ್ಪು ಹುಟ್ಟುಹಬ್ಬಕ್ಕೆ ಯುವರಾಜ್ ಚೊಚ್ಚಲ ಚಿತ್ರದ ಬಿಗ್ ಅಪ್‌ಡೇಟ್

    ಅಪ್ಪು ಹುಟ್ಟುಹಬ್ಬಕ್ಕೆ ಯುವರಾಜ್ ಚೊಚ್ಚಲ ಚಿತ್ರದ ಬಿಗ್ ಅಪ್‌ಡೇಟ್

    ರನಟ ರಾಜ್‌ಕುಮಾರ್ (Rajkumar) ಅವರ ಮೊಮ್ಮಗ ಯುವ ರಾಜ್‌ಕುಮಾರ್  (Yuva Rajkumar) ಅವರು ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಡಲು ತೆರೆಮರೆಯಲ್ಲಿ ಸಕಲ ತಯಾರಿ ನಡೆಯುತ್ತಿದೆ. ಆದರೆ ಯುವ ಚೊಚ್ಚಲ ಚಿತ್ರದ ಬಗ್ಗೆ ಯಾವುದೇ ಅಪ್‌ಡೇಟ್ ಸಿಗದೇ ಫ್ಯಾನ್ಸ್ ನಿರಾಶರಾಗಿದ್ದಾರೆ. ಈ ನಡುವೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಅಪ್ಪು (Appu)  ಹುಟ್ಟುಹಬ್ಬದಂದು ಯುವ ಸಿನಿಮಾ ಕುರಿತು ಬಿಗ್ ಅಪ್‌ಡೇಟ್ ಸಿಗಲಿದೆ.

    ಅಪ್ಪು ನಿಧನದ ನಂತರ ಯುವ ರಾಜ್‌ಕುಮಾರ್ ಅವರ ಚೊಚ್ಚಲ ಸಿನಿಮಾಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುವ ರಾಜ್‌ಕುಮಾರ್ ಅವರಲ್ಲಿ ಪುನೀತ್‌ ಅವರನ್ನ ಅಭಿಮಾನಿಗಳು ಕಾಣುತ್ತಿದ್ದಾರೆ. ಕಳೆದ ವರ್ಷ ಫೋಟೋಶೂಟ್ ಮೂಲಕ ಹೊಂಬಾಳೆ ಸಂಸ್ಥೆ (Homabale Films) ಯುವ ಚೊಚ್ಚಲ ಸಿನಿಮಾ ಬಗ್ಗೆ ಅನೌನ್ಸ್ ಮಾಡಿದ್ದರು. ಈಗ ಯುವ ಮೊದಲ ಚಿತ್ರದ ಬಗ್ಗೆ ಹೊಸ ಸುಳಿವು ಸಿಕ್ಕಿದೆ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ಯುವರಾಜ್‌ಕುಮಾರ್ ಚೊಚ್ಚಲ ಚಿತ್ರಕ್ಕೆ ಇನ್ನು ಟೈಟಲ್ ಫೈನಲ್ ಆಗಿಲ್ಲ. ಆದರೆ ಸಿನಿಮಾ ಪ್ರೀ ಪ್ರೊಡಕ್ಷನ್ ವರ್ಕ್ ನಡೀತಿದೆ. ತಾಜಾ ಸಮಾಚಾರ ಏನಪ್ಪಾ ಅಂದ್ರೆ, ಸದ್ದಿಲ್ಲದೇ ಚಿತ್ರದ ಟೀಸರ್ ಶೂಟಿಂಗ್ ನಡೀತಿದೆ ಎನ್ನಲಾಗ್ತಿದೆ. ಸ್ಪೆಷಲ್ ಟೀಸರ್ ರಿಲೀಸ್ ಮಾಡಿ ಯುವ ಚೊಚ್ಚಲ ಚಿತ್ರಕ್ಕೆ ಚಾಲನೆ ನೀಡುವ ಪ್ರಯತ್ನದಲ್ಲಿದೆಯಂತೆ ಚಿತ್ರತಂಡ. ಟೀಸರ್ ಜೊತೆ ಟೈಟಲ್ ಅನೌನ್ಸ್ ಆದರೂ ಅಚ್ಚರಿ ಪಡಬೇಕಿಲ್ಲ.

    ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದಂದು ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿದೆ. ಅದೇ ದಿನ ಟೀಸರ್ ಕೂಡ ರಿಲೀಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಹೊಂಬಾಳೆ ಸಂಸ್ಥೆ ಮೂಲಕ ರಾಜಕುಮಾರ, ಯುವರತ್ನ, ರಾಘವೇಂದ್ರ ಸ್ಟೋರ್ಸ್ ಚಿತ್ರವನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ (Santhosh anandram) ಡೈರೆಕ್ಷನ್ ಮಾಡಿದ್ದಾರೆ. ಯುವನ ಚೊಚ್ಚಲ ಚಿತ್ರಕ್ಕೂ ಇವರೇ ನಿರ್ದೇಶನ ಮಾಡುತ್ತಿದ್ದಾರೆ.

    ಸಂತೋಷ್ ಆನಂದ್ ರಾಮ್ – ಪುನೀತ್ ಕಾಂಬಿನೇಷನ್‌ನಲ್ಲಿ `ರಾಜಕುಮಾರ’ ಮತ್ತು `ಯುವರತ್ನ’ ಸಿನಿಮಾ ಸಕ್ಸಸ್ ಕಂಡಿತ್ತು. ಹಾಗಾಗಿ ಯುವ ರಾಜ್‌ಕುಮಾರ್ ಮೊದಲ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಬೆಟ್ಟದಷ್ಟಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೊಡ್ಮನೆ ಯುವ ರಾಜಕುಮಾರನಿಗೆ ಕಲ್ಯಾಣಿ ನಾಯಕಿ

    ದೊಡ್ಮನೆ ಯುವ ರಾಜಕುಮಾರನಿಗೆ ಕಲ್ಯಾಣಿ ನಾಯಕಿ

    ದೊಡ್ಮನೆಯ ಕುಡಿ ಯುವ ರಾಜಕುಮಾರ (Yuva Rajkumar) ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಡಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಇದರ ನಡುವೆ ಯುವನ ಹೊಸ ಸಿನಿಮಾ ಬಗ್ಗೆ ನಾನಾ ವಿಚಾರಗಳು ಸದ್ದು ಮಾಡ್ತಿದೆ. ಯುವಗೆ ಜೋಡಿಯಾಗಲು ನಟಿ ಕಲ್ಯಾಣಿ ಪ್ರಿಯದರ್ಶನ್ (Kalyani Priyadarshan)ಎಂಟ್ರಿ ಕೊಡ್ತಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಹೊಸ ಸಿನಿಮಾದಲ್ಲಿ‌  ಯುವರಾಜ್‌ಕುಮಾರ್ ನಟಿಸಲು ರೆಡಿಯಾಗಿದ್ದಾರೆ. ಈ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಯುವ ಕಾಲಿಡುತ್ತಿದ್ದಾರೆ. ಯುವನ ಡೆಬ್ಯೂ ಸಿನಿಮಾ ಬಗ್ಗೆ ಸಾಕಷ್ಟು ಕ್ಯೂರಿಯಸ್ ಆಗಿರುವ ಅಭಿಮಾನಿಗಳಿಗೆ ಮತ್ತೊಂದು ನ್ಯೂಸ್ ಸಿಕ್ಕಿದೆ. ದೊಡ್ಮನೆ ಯುವನಿಗೆ ಸೌತ್ ನಟಿ ಜೋಡಿಯಾಗುತ್ತಿದ್ದಾರೆ. ಇದನ್ನೂ ಓದಿ: ಯಾಕೆ ವಿಜಯ್ ಮರ್ಮಾ ಜೊತೆ ಡೇಟಿಂಗ್ ಮಾಡುತ್ತಿದ್ದೀರಾ: ತಮನ್ನಾಗೆ ನೆಟ್ಟಿಗರಿಂದ ಕ್ಲಾಸ್

    ತೆಲುಗು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ಕಲ್ಯಾಣಿ, ಈಗ ಸ್ಯಾಂಡಲ್‌ವುಡ್‌ಗೆ (Sandalwood) ಯುವನ ಹೊಸ ಚಿತ್ರದ ಮೂಲಕ ಪಾದಾರ್ಪಣೆ ಮಾಡ್ತಿದ್ದಾರೆ. ಹೀಗೊಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

    ಇನ್ನೂ ಯುವರಾಜಕುಮಾರ್‌ಗೆ ಸಂತೋಷ್ ಆನಂದ್‌ರಾಮ್ (Santhosh Anandram) ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇದೇ ಏಪ್ರಿಲ್‌ನಿಂದ ಶೂಟಿಂಗ್ ಶುರುವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಗ್ಗೇಶ್ ನಟನೆ `ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಬಗ್ಗೆ ಸ್ಪಷ್ಟನೆ ನೀಡಿದ ಸಂತೋಷ್‌ ಆನಂದ್‌ರಾಮ್

    ಜಗ್ಗೇಶ್ ನಟನೆ `ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಬಗ್ಗೆ ಸ್ಪಷ್ಟನೆ ನೀಡಿದ ಸಂತೋಷ್‌ ಆನಂದ್‌ರಾಮ್

    ನವರಸನಾಯಕ ಜಗ್ಗೇಶ್ (Navarasnayaka Jaggesh) ಚಿತ್ರರಂಗ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲೂ ಆಕ್ಟೀವ್ ಆಗಿದ್ದಾರೆ. ಜಗ್ಗೇಶ್ ನಟನೆ `ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಯಾವಾಗ ಎಂಬ ಅಭಿಮಾನಿಗಳ ಗೊಂದಲಕ್ಕೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ (Santhosh Anandram) ಸ್ಪಷ್ಟನೆ ನೀಡಿದ್ದಾರೆ.

    ಜಗ್ಗೇಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಸಿನಿಮಾ ಹೊಂಬಾಳೆ ಸಂಸ್ಥೆ ನಿರ್ಮಾಣದ `ರಾಘವೇಂದ್ರ ಸ್ಟೋರ್ಸ್’ (Raghavendra Stores) ವರಲಕ್ಷ್ಮಿ ಹಬ್ಬದ ಸಮಯದಲ್ಲಿ ʻರಾಘವೇಂದ್ರ ಸ್ಟೋರ್ಸ್ʼ ರಿಲೀಸ್ ಆಗಬೇಕಿತ್ತು. ಪ್ರೇಕ್ಷಕರು ಕಾದು ಕಾದು ಸುಸ್ತಾಗಿದ್ದರು. ಟ್ವಿಟ್ಟಿರ್‌ನಲ್ಲಿ ಇದೇ ಪ್ರಶ್ನೆಯನ್ನು ನೆಟ್ಟಿಗರೊಬ್ಬರು ನಿರ್ದೇಶಕ ಸಂತೋಷ್ ಆನಂದ್‌ರಾಮ್ ಮುಂದೆ ಇಟ್ಟಿದ್ದಾರೆ. ಅದಕ್ಕೆ `ರಾಜಕುಮಾರ’ ಸಿನಿಮಾ ನಿರ್ದೇಶಕರು ಪ್ರತಿಕ್ರಿಯಿಸಿದ್ದಾರೆ. ಸಿನಿಮಾ ರಿಲೀಸ್ ಬಗ್ಗೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    `ರಾಘವೇಂದ್ರ ಸ್ಟೋರ್ಸ್’ ಸಿನಿಮಾ ಮುಂದಿನ ವರ್ಷ ಬಿಡುಗಡೆ ಆಗುತ್ತದೆ. ಬಹಳ ತುಂಟತನ, ಮಜಾ ಇರುವಂತಹ ಈ ಸಿನಿಮಾ ಒಂದಷ್ಟು ಮೌಲ್ಯಗಳನ್ನು ಹೊತ್ತು ಬರಲಿದೆ ಎಂದು ಸಂತೋಷ್ ಆನಂದ್‌ರಾಮ್ ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ಇನ್ನೂ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಅಡುಗೆ ಭಟ್ಟನ ಪಾತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರದ ಟೀಸರ್ ಕೂಡ ನೆಟ್ಟಿಗರ ಗಮನ ಸೆಳೆದಿದೆ. ಶ್ವೇತಾ ಶ್ರೀವಾಸ್ತವ್ ಚಿತ್ರದಲ್ಲಿ ನವರಸ ನಾಯಕನಿಗೆ ಜೋಡಿಯಾಗಿ ಮಿಂಚಿದ್ದಾರೆ.

    ಹೋಟೆಲ್‌ನಲ್ಲಿ ಅಡುಗೆ ಭಟ್ಟನ ಕೆಲಸ ಮಾಡಿಕೊಂಡಿರುವ ನಾಯಕನಿಗೆ ವಯಸ್ಸು 40 ದಾಟಿದರೂ ಮದುವೆ ಆಗಿರಲ್ಲ. ಮದುವೆ ಆಗಲು ಆತ ಏನೆಲ್ಲಾ ಪಾಡು ಪಟ್ಟುತ್ತಾನೆ ಎನ್ನುವುದನ್ನು ತಮಾಷೆಯಾಗಿ ಸಂತೋಷ್ ಆನಂದ್‌ರಾಮ್ ಕಟ್ಟಿಕೊಟ್ಟಿದ್ದಾರೆ. ಜಗ್ಗಣ್ಣ ತಮ್ಮ ಅದ್ಭುತ ಅಭಿನಯದಿಂದ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ದೊಡ್ಮನೆ ಕುಡಿ ಯುವ ಚಿತ್ರದ ಬಗ್ಗೆ ಗುಡ್ ನ್ಯೂಸ್ ಕೊಟ್ರು ಸಂತೋಷ್ ಆನಂದ್‌ರಾಮ್

    ದೊಡ್ಮನೆ ಕುಡಿ ಯುವರಾಜ್‌ಕುಮಾರ್(Yuva Rajkumar) ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಕಲ ಸಿದ್ಧತೆ ನಡೆಸಿದ್ದಾರೆ. ಅಭಿಮಾನಿಗಳ ಮನದಾಸೆಯಂತೆ ಸಂತೋಷ್ ಆನಂದ್‌ರಾಮ್(Santhosh Anandram) ಮತ್ತು ಯುವ ಕಾಂಬಿನೇಷನ್‌ನಲ್ಲಿ ಸಿನಿಮಾ ಬರೋದು ಈ ಹಿಂದಯೇ ಅಧಿಕೃತವಾಗಿದೆ. ಈ ಚಿತ್ರದ ಬಗ್ಗೆ ಏನು ಅಪ್‌ಡೇಟ್ ಸಿಗದೇ ನಿರಾಸೆಯಾಗಿದ್ದ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್‌ವೊಂದು ಸಿಕ್ಕಿದೆ.

    `ಯುವ ರಣಧೀರ ಕಂಠೀರವ’ ಚಿತ್ರದ ಮೂಲಕ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ ಈ ಚಿತ್ರದ ಬದಲಾಗಿ ಯುವರತ್ನ ನಿರ್ದೇಶಕ ಸಂತೋಷ್ ನಿರ್ದೇಶನದ ಚಿತ್ರದಲ್ಲಿ ಯುವ ಲಾಂಚ್ ಆಗುತ್ತಿದ್ದಾರೆ. ಈ ಸಿನಿಮಾಗೆ ಹೊಂಬಾಳೆ ಸಂಸ್ಥೆ(Hombale Films) ಕೂಡ ಸಾಥ್ ಕೊಟ್ಟಿದೆ. ಕಳೆದ ಏಪ್ರಿಲ್ ಯುವನ ಭರ್ಜರಿ ಫೋಟೋಶೂಟ್ ಮಾಡಿಸಿ ಅಧಿಕೃತ ಅನೌನ್ಸ್ ಕೂಡ ಮಾಡಿದ್ದರು. ಬಳಿಕ ಈ ಚಿತ್ರದ ಯಾವುದೇ ಅಪ್‌ಡೇಟ್ ಕೂಡ ಅಭಿಮಾನಿಗಳಿಗೆ ಸಿಕ್ಕಿರಲಿಲ್ಲ. ಈಗ ಈ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಕ್ಕಿದೆ. ಇದನ್ನೂ ಓದಿ:ಮತ್ತೊಂದು ಮದುವೆಗೆ ಒಪ್ಕೊಂಡ್ರಾ ಮಲೈಕಾ?: ಯಸ್ ಅಂದೆ ಅಂತ ಪೋಸ್ಟ್ ಹಾಕಿದ ನಟಿ

    ಪುನೀತ್ ರಾಜ್‌ಕುಮಾರ್ ಹೊಂಬಾಳೆ ಬ್ಯಾನರ್ ಅಡಿ ಸಾಕಷ್ಟು ಸಿನಿಮಾಗಳನ್ನ ಮಾಡಿದ್ದರು. ಮತ್ತೆ ಮುಂಬರುವ ಪ್ರಾಜೆಕ್ಟ್ಗಳನ್ನ ಹೊಂಬಾಳೆ ಜೊತೆ ಪ್ಲ್ಯಾನ್ ಮಾಡಲಾಗಿತ್ತು. ಆದರೆ ಅಪ್ಪು ಅಗಲಿಕೆ ನಂತರ ಎಲ್ಲಾ ತಲೆಕೆಳಗಾಗಿತ್ತು. ಹೊಂಬಾಳೆ ನಿರ್ಮಾಣ ಸಂಸ್ಥೆ, ಸಂತೋಷ್ ನಿರ್ದೇಶನದಲ್ಲಿ ಯುವಗೆ ಡೈರೆಕ್ಷನ್ ಮಾಡಬೇಕು ಎಂಬುದು ಅಭಿಮಾನಿಗಳ ಬೇಡಿಕೆಯ ಜೊತೆ ಮಹಾದಾಸೆಯಾಗಿತ್ತು. ಅದರಂತೆಯೇ ಚಿತ್ರದ ಅನೌನ್ಸ್‌ಮೆಂಟ್ ಕೂಡ ನಡೆದಿತ್ತು.

    ಅನೌನ್ಸ್‌ಮೆಂಟ್ ನಂತರ ಚಿತ್ರದ ಬಗ್ಗೆ ಏನು ಅಪ್‌ಡೇಟ್ ಇಲ್ಲ ಎಂದು ಬೇಸರದಲ್ಲಿದ್ದ ಫ್ಯಾನ್ಸ್‌ಗೆ ನಿರ್ದೇಶಕ ಸಂತೋಷ್ ರಿಯಾಕ್ಟ್ ಮಾಡಿದ್ದಾರೆ. ನನ್ನ ಸಹೋದರ ಸಮಾನರಾದ ಎಲ್ಲಾ ಅಭಿಮಾನಿಗಳಿಗೆ ಅತೀ ಶೀಘ್ರದಲ್ಲಿ ನನ್ನ ಮತ್ತು ಯುವರಾಜ್‌ಕುಮಾರ್ ಕಾಂಬಿನೇಷನ್ ಚಿತ್ರದ ಎಲ್ಲಾ ಮಾಹಿತಿ ಹೊರಬರುತ್ತದೆ ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಚಿತ್ರದ ಅಪ್‌ಡೇಟ್ ಸಿಗಲಿದೆ ಎಂದು ಸೂಚನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುವ ರಾಜ್‌ಕುಮಾರ್ ಸಿನಿಮಾದ ಅಪ್‌ಡೇಟ್‌ಗಾಗಿ ಕಾಯುತ್ತಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

    ಯುವ ರಾಜ್‌ಕುಮಾರ್ ಸಿನಿಮಾದ ಅಪ್‌ಡೇಟ್‌ಗಾಗಿ ಕಾಯುತ್ತಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

    ಚಿತ್ರರಂಗಕ್ಕೆ ಅಣ್ಣಾವ್ರ ಕುಟುಂಬದ ಕಲಾ ಸೇವೆ ಅಪಾರ. ಇದೀಗ ಶಿವಣ್ಣ, ಅಪ್ಪು, ರಾಘಣ್ಣ ನಂತರ ದೊಡ್ಮನೆಯಿಂದ ಒಬ್ಬಬ್ಬರೇ ಸಿನಿಮಾರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಅಪ್ಪು ಅಗಲಿಕೆಯ ನಂತರ ಯುವ ರಾಜ್‌ಕುಮಾರ್ (Yuva Rajkumar) ಮೇಲೆ ಅಪಾರ ಅಭಿಮಾನ ಇಟ್ಟಿರುವ ಅಭಿಮಾನಿಗಳು ಯುವನ ಚೊಚ್ಚಲ ಚಿತ್ರಕ್ಕಾಗಿ ಕಾಯ್ತಿದ್ದಾರೆ.

    ರಾಘವೇಂದ್ರ ರಾಜಕುಮಾರ್ (Raghavendra Rajkumar) ಅವರ ಪುತ್ರ ಯುವ ರಾಜ್‌ಕುಮಾರ್ `ರಣಧೀರ ಕಂಠೀರವ’ ನಾಗಿ ಈಗಾಗಲೇ ಫೀಲ್ಡ್ಗೆ ಇಳಿಯಬೇಕಿತ್ತು. ಕೆಲ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಇದೀಗ ಹೊಂಬಾಳೆ ಬ್ಯಾನರ್ (Hombale Films) ಅಡಿ ಸಂತೋಷ್ ಆನಂದ್ ರಾಮ್ (Santhosh Anandram) ನಿರ್ದೇಶನದ ಚಿತ್ರದ ಮೂಲಕ ಯುವ ಎಂಟ್ರಿ ಕೊಡಲು ಸಕಲ ಸಿದ್ಧತೆ ಕೂಡ ನಡೆಸುತ್ತಿದ್ದಾರೆ. ಇದನ್ನೂ ಓದಿ:ಅರ್ಜುನ್ ಜನ್ಯ ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣ- ಉಪೇಂದ್ರ

    ನಿರ್ದೇಶಕ ಸಂತೋಷ್ ಆನಂದರಾಮ್, ಅಪ್ಪುಗಾಗಿ ಬರೆದ ಕಥೆಯಲ್ಲಿ ಯುವ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ ಅಸಲಿ ಕಥೆನೇ ಬೇರೆ, ಅಪ್ಪುಗೆ ಬರೆದ ಸ್ಟೋರಿ ಯುವ ಕಾಣಿಸಿಕೊಳ್ಳುತ್ತಿಲ್ಲ. ದೊಡ್ಮನೆ ಕುಡಿಗಾಗಿ ಬೇರೇ ಕಥೆಯನ್ನೇ ನಿರ್ದೇಶಕರು ಬರೆದಿದ್ದಾರೆ.

     

    View this post on Instagram

     

    A post shared by Yuva Rajkumar (@yuva_rajkumar)

    ಸಾಕಷ್ಟು ಬಿಗ್ ಹಿಟ್ ಚಿತ್ರಗಳನ್ನ ಕೊಟ್ಟಿರುವ ಸಂತೋಷ್ ಆನಂದರಾಮ್ ನಿರ್ದೇಶನದ ʻರಾಘವೇಂದ್ರ ಸ್ಟೋರ್ಸ್‌ʼ (Raghavendra Stores)  ರಿಲೀಸ್ ಆದ ಮೇಲೆ ದೊಡ್ಮನೆ ಕುಡಿ ಯುವಗೆ ಡೈರೆಕ್ಷನ್ ಮಾಡಲಿದ್ದಾರೆ. ಪವರ್‌ಫುಲ್ ಪಾತ್ರದ ಮೂಲಕ ಯುವನನ್ನು ತೋರಿಸಲಿದ್ದಾರೆ. ಯುವ ರಾಜ್‌ಕುಮಾರ್ ಅವರಲ್ಲಿ ಅಪ್ಪುನ ಕಾಣುತ್ತಿರುವ ಅಭಿಮಾನಿಗಳ ನಿರೀಕ್ಷೆಯನ್ನ ಪೂರ್ಣಗೊಳಿಸುತ್ತಾರಾ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]