Tag: santhosh lad

  • ಬಿಹಾರ ಚುನಾವಣೆಗಾಗಿ ಕೇಂದ್ರ ಜನಗಣತಿಗೆ ಮುಂದಾಗಿದೆ: ಸಂತೋಷ್ ಲಾಡ್

    ಬಿಹಾರ ಚುನಾವಣೆಗಾಗಿ ಕೇಂದ್ರ ಜನಗಣತಿಗೆ ಮುಂದಾಗಿದೆ: ಸಂತೋಷ್ ಲಾಡ್

    ಧಾರವಾಡ: ಕಳೆದ 5 ವರ್ಷಗಳಿಂದ ಜನಗಣತಿ ಆಗಬೇಕು ಎಂದು ರಾಹುಲ್ ಗಾಂಧಿ (Rahul Gandhi) ಒತ್ತಾಯಿಸುತ್ತಲೇ ಬಂದಿದ್ದರೂ ಕೇಂದ್ರ ಸರ್ಕಾರ ಮಾಡಿರಲಿಲ್ಲ. ಈಗ ಬಿಹಾರ ಚುನಾವಣೆ ಬಂದಿರುವುದರಿಂದ ಹೊಸದು ಏನಾದರೊಂದು ಮಾಡಬೇಕು ಎಂದು ಕೇಂದ್ರ ಸರ್ಕಾರ ಈಗ ಜನಗಣತಿ, ಜಾತಿ ಜನಗಣತಿಯನ್ನು ಮುಂದೆ ತಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ (Santhosh Lad) ಹೇಳಿದರು.

    ಧಾರವಾಡದಲ್ಲಿ (Dharwad) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಕೇಂದ್ರದವರು ಜನಗಣತಿ (Caste Census) ಮಾಡುವುದಿಲ್ಲ ಎಂದು ಹೇಳಿದ್ದರು. ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡಿದಾಗ ಅದಕ್ಕೆ ಕೇಂದ್ರದವರು ಟಿಪ್ಪಣಿ ಕೊಡುತ್ತಿದ್ದರು. ನಾವು ಹಿಂದುಳಿದ ಜಾತಿಗಳಿಗೆ 54 ಪ್ಯಾರಾ ಮೀಟರ್ ಸೆಟ್ ಮಾಡಿದ್ದೇವೆ. ಓಬಿಸಿಯವರು ಎಷ್ಟು ಜನ ಇದ್ದಾರೆ ಎಂದು ಬಿಜೆಪಿಯವರು ಕೇಳುತ್ತಿದ್ದರು. ಈಗ ಬಿಹಾರ ಚುನಾವಣೆ (Bihar Election) ಬಂದಿರುವುದರಿಂದ ಏನಾದರೊಂದು ಚರ್ಚೆಗೆ ತರಬೇಕು ಎಂದು ಜನಗಣತಿ ತಂದು ಕಾಂಗ್ರೆಸ್ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಕಿಡಿಕಾರಿದರು. ಇದನ್ನೂ ಓದಿ: ಜನಗಣತಿಯೊಂದಿಗೆ ಜಾತಿ ಗಣತಿ ಮೋದಿ ಅವರ ದಿಟ್ಟ ನಿರ್ಧಾರ: ಹೆಚ್‌ಡಿಕೆ

    ಕೇಂದ್ರದಲ್ಲಿ ಬಿಜೆಪಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಇದೆ. ಅಲ್ಲಿ ಅವರು ಗಣತಿ ಮಾಡಲಿ. ಇಲ್ಲಿ ನಾವು ಮಾಡುತ್ತೇವೆ. ರಾಜ್ಯ ಸರ್ಕಾರಕ್ಕೆ ಗಣತಿ ಮಾಡಬೇಡಿ ಎಂದು ಹೇಳುವ ಅಧಿಕಾರ ಇಲ್ಲ. ನಾವು ಗಣತಿ ಮಾಡಬೇಕು ಎಂದು ಉದ್ದೇಶಿಸಿದ್ದೆವು ಆ ಪ್ರಕಾರ ಮಾಡಿದ್ದೇವೆ. ಕೇಂದ್ರದವರು ಈಗ ಗಣತಿ ಮಾಡಲು ಮುಂದೆ ಬಂದಿದ್ದಾರೆ ಮಾಡಲಿ. ರಾಹುಲ್ ಗಾಂಧಿ ಅವರು ಮೊದಲಿನಿಂದಲೂ ಓಬಿಸಿ ಬಗ್ಗೆ ಮಾತನಾಡಿದ್ದಾರೆ. ಇದು ರಾಹುಲ್ ಗಾಂಧಿ ಅವರಿಗೆ ಸಿಕ್ಕ ಜಯ ಎಂದು ನಾನು ಭಾವಿಸುತ್ತೇನೆ ಎಂದರು. ಇದನ್ನೂ ಓದಿ: ಕೇಂದ್ರದ ಜಾತಿ ಜನಗಣತಿ ನಿರ್ಧಾರವನ್ನ ಸ್ವಾಗತ ಮಾಡ್ತೇನೆ: ರಾಹುಲ್ ಗಾಂಧಿ

    ಓಬಿಸಿ ಯಾರು ಎಂದು ಹೇಗೆ ಕಂಡು ಹಿಡಿಯುತ್ತಾರೆ. ಕೇಂದ್ರ ಸರ್ಕಾರ ಇದನ್ನು ಕಂಡು ಹಿಡಿಯುತ್ತಾ? ಓಬಿಸಿ ಎನ್ನುವುದು ಸ್ಟೇಟ್ ಸಬ್ಜೆಕ್ಟ್ ಆಗುತ್ತದೆ. ಕೇಂದ್ರಕ್ಕೆ ಓಬಿಸಿ ಬಗ್ಗೆ ಮಾಹಿತಿ ಇಲ್ಲ. ಇಲ್ಲಿ ಇರುವ ಓಬಿಸಿ ಮಹಾರಾಷ್ಟ್ರದಲ್ಲಿ (Maharashtra) ಬೇರೆ ಇರುತ್ತಾರೆ. ನಾವು ಪ್ಯಾರಾಮೀಟರ್ ಫಿಕ್ಸ್ ಮಾಡಿ ಮಾಡಿದ್ದೇವೆ. ಅದಕ್ಕೆ ಬಿಜೆಪಿಯವರು ವಿರುದ್ಧವಾಗಿ ಹೋಗುತ್ತಾರೆ ಎಂದು ನಾವು ಏನೂ ಮಾಡಲು ಆಗೋದಿಲ್ಲ. ಕೇಂದ್ರ ಸರ್ಕಾರ ಏಕೆ ವಿರುದ್ಧ ಹೋಗುತ್ತಿದೆಯೋ ಗೊತ್ತಿಲ್ಲ. ನಾವು ಮಾಡಿರುವ ಗಣತಿ ಸಮರ್ಪಕವಾಗಿದೆ. ಬೇಕಾದರೆ ಅವರು ಚೆಕ್ ಮಾಡಲಿ. ಸಲಹೆ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: ಮಧ್ಯರಾತ್ರಿ ಸುದ್ದಿಗೋಷ್ಠಿ- ಪಾಕ್‌ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ


    ತಮಿಳುನಾಡಿನಲ್ಲಿ (TamilNadu) ಗಣತಿ ಮಾಡಿ 69% ಮೀಸಲಾತಿ ತೆಗೆದುಕೊಂಡಿದ್ದಾರೆ. ಮೊನ್ನೆ ಬಿಹಾರದವರು ಮಾಡಿ ಕೇಂದ್ರಕ್ಕೆ ಕಳುಹಿಸಿದ್ದಾರೆ. ಬಿಜೆಪಿಯವರದ್ದು ಈಗ ಒನ್, ಟು, ತ್ರಿ ಆಲ್ ಇಂಡಿಯಾ ಫ್ರೀ ಎಂಬಂತೆ ನಿಲುವು ಇದೆ. ರಾಜ್ಯ ಸರ್ಕಾರಕ್ಕೆ ಗಣತಿ ಮಾಡಬೇಡಿ ಎಂದು ಹೇಳುವ ಅಧಿಕಾರ ಕೇಂದ್ರಕ್ಕೆ ಇಲ್ಲ. ನನ್ನ ಪ್ರಕಾರ ಗಣತಿ ಮಾಡುವ ಅಧಿಕಾರ ಎಲ್ಲ ರಾಜ್ಯಗಳಿಗೂ ಇದೆ ಎಂದರು.

  • ಉಪಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ನಿರ್ಣಯವೇ ಅಂತಿಮ: ಸಚಿವ ಲಾಡ್

    ಉಪಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ನಿರ್ಣಯವೇ ಅಂತಿಮ: ಸಚಿವ ಲಾಡ್

    ಧಾರವಾಡ: ಶಿಗ್ಗಾಂವಿ, ಸಂಡೂರು (Sandur) ಹಾಗೂ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

    ಧಾರವಾಡದಲ್ಲಿ 9Dharawada) ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಭಾನುವಾರ ಸಿಎಂ ಅವರು ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್‌ನಿಂದ ಅಂತಿಮ ತೀರ್ಮಾನ ಬರಲಿದೆ. ಶಿಗ್ಗಾಂವಿ ಟಿಕೆಟ್ ಹಂಚಿಕೆಯಲ್ಲೂ ನಾವು ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಕೊನೆಯದಾಗಿ ಹೈಕಮಾಂಡ್‌ನಿಂದ ಏನು ತೀರ್ಮಾನ ಬರುತ್ತದೋ ಅದುವೇ ಅಂತಿಮ ಎಂದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್‌ ಕಣಕ್ಕ

    ಸಿ.ಪಿ.ಯೋಗೇಶ್ವರ್ ( C P Yogeshwar) ಅವರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಭಾಗದಲ್ಲಿ ನನಗೆ ಜಾಸ್ತಿ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರಿಗೆ ಹಾಗೂ ಸಿಎಂಗೆ ಅಲ್ಲಿ ಹೆಚ್ಚಿನ ಜವಾಬ್ದಾರಿ ಇದೆ. ಹೈಕಮಾಂಡ್ ಜೊತೆ ಮಾತನಾಡಿ ಅವರೇ ಅಂತಿಮ ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನನಗೆ ಹೆಚ್ಚಿಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಮಾಸ್‌ ರೇಪಿಸ್ಟ್‌ ಎಂದ ರಾಹುಲ್‌ಗೆ ರಿಲೀಫ್‌ – ಅರ್ಜಿ ವಜಾ, 25 ಸಾವಿರ ದಂಡ

    ಈ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಚನ್ನಪಟ್ಟಣದಲ್ಲಿ( Channapatna) ಪಾರ್ಲಿಮೆಂಟ್ ಚುನಾವಣೆಯಲ್ಲಿ ನಾವೇ ಲೀಡ್ ಆಗಿದ್ದೇವೆ. ಶಿಗ್ಗಾಂವಿಯಲ್ಲೂ ಲೀಡ್ ಆಗಿದ್ದೇವೆ. ಸಂಡೂರಿನಲ್ಲೂ ಸಹ ಎರಡು ಬಾರಿ ಲೀಡ್ ಆಗಿದ್ದೇವೆ. ಹೀಗಾಗಿ ಮೂರಕ್ಕೆ ಮೂರೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಉಗ್ರದಾಳಿಯ ಹೊಣೆ ಹೊತ್ತ ಪಾಕ್ ಟಿಆರ್‌ಎಫ್ ಸಂಘಟನೆ

  • ನಾನು, ದ್ವಾರಕೀಶ್ ಸೇರಿ ಸಿನಿಮಾ ಮಾಡ್ಬೇಕು ಅಂದ್ಕೊಂಡಿದ್ದೆವು: ಸಂತೋಷ್‌ ಲಾಡ್‌

    ನಾನು, ದ್ವಾರಕೀಶ್ ಸೇರಿ ಸಿನಿಮಾ ಮಾಡ್ಬೇಕು ಅಂದ್ಕೊಂಡಿದ್ದೆವು: ಸಂತೋಷ್‌ ಲಾಡ್‌

    ಧಾರವಾಡ: ನಟ, ನಿರ್ದೇಶಕ ದ್ವಾರಕೀಶ್ ಅವರ ನಿಧನ ಬಹಳ ದುಃಖ ತರಿಸಿದೆ. ಅವರು, ನಾನು ಸೇರಿ ಸಿನಿಮಾ ಮಾಡಬೇಕು ಎಂದುಕೊಂಡಿದ್ದೆವು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ (Santhosh Lad) ಹೇಳಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ದ್ವಾರಕೀಶ್ ಅವರ ನಿಧನ ಸುದ್ದಿ ಬಹಳ ಆಘಾತಕಾರಿ. ಅವರು ನಟ, ನಿರ್ದೇಶಕರಾಗಿ ಕೆಲಸ ಮಾಡಿದವರು. ದ್ವಾರಕೀಶ್ ಅವರು ನನಗೆ ಬಹಳ ಹತ್ತಿರದ ಪರಿಚಯ. ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅವರು ತಮ್ಮದೇ ಕೊಡುಗೆ ನೀಡಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗಕ್ಕೆ ದೊಡ್ಡ ನಷ್ಟ ಉಂಟು ಮಾಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದರು.

    ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkish) ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

  • ಕಾರ್ಮಿಕರ ಮಕ್ಕಳೆಂದು ಲಕ್ಷಾಂತರ ಫೇಕ್ ಕಾರ್ಡ್- ತನಿಖೆಗೆ ಸೂಚಿಸಿದ ಸಂತೋಷ್ ಲಾಡ್

    ಕಾರ್ಮಿಕರ ಮಕ್ಕಳೆಂದು ಲಕ್ಷಾಂತರ ಫೇಕ್ ಕಾರ್ಡ್- ತನಿಖೆಗೆ ಸೂಚಿಸಿದ ಸಂತೋಷ್ ಲಾಡ್

     ಉಡುಪಿ: ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕುರಿತಂತೆ ಲಕ್ಷಾಂತರ ಫೇಕ್ ಕಾರ್ಡ್ ಗಳಿರೋದು ಗಮನಕ್ಕೆ ಬಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santhosh Lad) ಮಾಹಿತಿ ಬಹಿರಂಗಪಡಿಸಿದ್ದಾರೆ.

    ಉಡುಪಿಯಲ್ಲಿ (Udupi) ಮಾತನಾಡಿದ ಅವರು, ವೇತನ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನ ನಾವು ಕಡಿತ ಮಾಡಿಲ್ಲ. 2021 ರಲ್ಲಿ 2,000 ಇದ್ದ ವಿದ್ಯಾರ್ಥಿ ವೇತನ ಎಂಟು ಸಾವಿರಕ್ಕೆ ಏರಿಸಿದರು. 10,000 ನೀಡುವವರಿಗೆ 30,000 ಕೊಟ್ಟರು. ಮೂವತ್ತು ಸಾವಿರ ಕೊಡುವವರಿಗೆ ಒಂದು ಲಕ್ಷ ರೂ. ಕೊಟ್ಟರು. ಇದು ಅವೈಜ್ಞಾನಿಕ ಕ್ರಮವಾಗಿತ್ತು. ಕಳೆದ ಮೂರು ವರ್ಷಗಳಲ್ಲಿ ಏಕಾಏಕಿ 39 ಲಕ್ಷ ಕಾರ್ಡ್ ಬೇಡಿಕೆ ಬಂತು.

    ಹಾವೇರಿ (Haveri) ಜಿಲ್ಲೆಯಲ್ಲಿ ಮೂರು ಲಕ್ಷ ಕಾರ್ಡುಗಳಿವೆ. ಇದರಲ್ಲಿ ಅನೇಕ ನಕಲಿ ಕಾರ್ಡುಗಳಿವೆ. ಈ ಬಾರಿ 13 ಲಕ್ಷ ಅರ್ಜಿಗಳು ಬಂದಿವೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ 9 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇವೆ, ವೈಜ್ಞಾನಿಕ ರೀತಿಯಲ್ಲಿ ಈ ಸಮಸ್ಯೆ ನಿರ್ವಹಿಸುತ್ತೇವೆ ಎಂದರು. ನಿಜವಾದ ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ ಸಹಾಯ ಸಿಗಬೇಕು. ಈ ಹಿನ್ನೆಲೆಯಲ್ಲಿ ನಕಲಿ ಕಾರ್ಡ್ ಗಳು ಯಾವುದು ಎಂಬುದನ್ನು ಪತ್ತೆ ಹಚ್ಚುತ್ತೇವೆ. ಅಧಿಕಾರಿಗಳು ಈ ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಅಧಿಕಾರಿ, ಕಚೇರಿಗೆ ಜೀವ ಬೆದರಿಕೆ- ಭದ್ರತೆ ಹೆಚ್ಚಿಸಿದ ಪೊಲೀಸರು

  • ನಮ್ಮಲ್ಲಿ ಸಿಎಂ ಹುದ್ದೆಯೇ ಖಾಲಿ ಇಲ್ಲ: ಸಂತೋಷ್ ಲಾಡ್ ತಿರುಗೇಟು

    ನಮ್ಮಲ್ಲಿ ಸಿಎಂ ಹುದ್ದೆಯೇ ಖಾಲಿ ಇಲ್ಲ: ಸಂತೋಷ್ ಲಾಡ್ ತಿರುಗೇಟು

    ಬೀದರ್: ನಾವೆಲ್ಲಿ ಕುರ್ಚಿಗಾಗಿ ಕಿತ್ತಾಡುತ್ತಿದ್ದೇವೆ, ನಮ್ಮಲ್ಲಿ ಸಿಎಂ ಹುದ್ದೆಯೇ ಖಾಲಿ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santhosh Lad) ತಿರುಗೇಟು ನೀಡಿದ್ದಾನೆ.

    ಬೀದರ್ ನಲ್ಲಿ (Bidar) ಸಿಎಂ ಹಾಗೂ ಡಿಸಿಎಂ ಕುರ್ಚಿ ಕಿತ್ತಾಟ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿ, ವಿರೋಧ ಪಕ್ಷದವರ ವಿಪಕ್ಷ ನಾಯಕನ ಹುದ್ದೆ ಖಾಲಿ ಇದ್ದು ವಿಪಕ್ಷಗಳು ಕಿತ್ತಾಡುತ್ತಿವೆಯೇ ಹೊರತಾಗಿ ನಾವಲ್ಲಾ ಎಂದ್ರು ಕಿಡಿಕಾರಿದರು.

    ಮಧ್ಯಪ್ರದೇಶ ಹಾಗೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಈ ಬಗ್ಗೆ ಮಾತಾನಾಡಬೇಕಲ್ಲಾ ಅವರು. ಮಧ್ಯಪ್ರದೇಶದಲ್ಲಿ ಒಂದು ಮೊಬೈಲ್‍ನಿಂದ 7 ಲಕ್ಷ ಜನರು ಅದರ ಸದುಪಯೋಗ ಪಡೆದಿದ್ದಾರೆ. ಕತಾರ್‍ನಲ್ಲಿ ಮಾಜಿ ನೌಕಾಪಡೆಯ 8 ಜನ ಅಧಿಕಾರಿಗಳನ್ನು ಗಲ್ಲಿಗೇರಿಸಿದರು. ಇದರ ಬಗ್ಗೆ ಒಬ್ಬರಾದ್ರು ಮಾತನಾಡಿದ್ರಾ..? ಪ್ರಧಾನಿ ಮೋದಿ (Narendra Modi) ಸಾಹೇಬರು ಅವರ ಸಾಧನೆ ಬಗ್ಗೆ ಮಾತಾನಾಡಬೇಕು, ರಾಜ್ಯ ಸರ್ಕಾರದ ಟೀಕೆ ಮಾಡಿದ್ರೆ ಏನು ಸಿಗುತ್ತೆ ಎಂದು ಮೋದಿಗೆ ಟಾಂಗ್ ನೀಡಿದರು. ಇದನ್ನೂ ಓದಿ: ಡಿಕೆಶಿಗೆ ನಾಳೆಯೇ ಸಿಎಂ ಆಗಬೇಕೆಂಬ ತವಕ: ಕಾಗೇರಿ

    ನಮ್ಮ ಯೋಜನೆಗಳನ್ನು ಮೋದಿ ಕಾಪಿ ಮಾಡಿದ್ದು ಎಲ್ಲಾ ಕಾರ್ಯಕ್ರಮಗಳ ಹೆಸರು ಬದಲಾವಣೆ ಮಾಡಿ 70 ವರ್ಷದ ನಮ್ಮ ಯೋಜನೆ ಜಾರಿ ಮಾಡಿದ್ದಾರೆ. ಬೇರೆ ರಾಜ್ಯಕ್ಕೆ ಹೋಗಿ ನಮ್ಮ ರಾಜ್ಯದ ಬಗ್ಗೆ ಟೀಕೆ ಮಾಡುತ್ತಾರೆ. ನಮ್ಮ ರಾಜ್ಯದಲ್ಲಿ ಬರ ಬಂದಿದೆ. ಏನಾದ್ರು ಅನುದಾನ ಕೊಟ್ರಾ, ಅದಾನಿಗೂ ಸಾಲ ಕೊಡುತ್ತಾರೆ. ನಮಗೆ ಕೊಡೋಕೆ ಹಣ ಇಲ್ವಾ ಎಂದು ಸಂತೋಷ್ ಲಾಡ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೆಂಡಮಂಡಲರಾದರು.

  • ಮಂಗಳವಾರದಿಂದ ರಾಜ್ಯದಲ್ಲಿ 2ನೇ ವಂದೇ ಭಾರತ್ ರೈಲು ಸಂಚಾರ ಶುರು

    ಮಂಗಳವಾರದಿಂದ ರಾಜ್ಯದಲ್ಲಿ 2ನೇ ವಂದೇ ಭಾರತ್ ರೈಲು ಸಂಚಾರ ಶುರು

    ಬೆಂಗಳೂರು: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಬರುತ್ತಿದೆ. ಮಂಗಳವಾರದಿಂದ ಹುಬ್ಬಳ್ಳಿ-ಬೆಂಗಳೂರು  (Hubballi- Bengaluru Vande Bharat Train) ನಡುವೆ ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ.

    ಜೂನ್ 26ರ ಮಂಗಳವಾರ ಬೆಳಗ್ಗೆ 9 ಗಂಟೆಗೆ ವರ್ಚೂವಲ್ ಆಗಿ ಪ್ರಧಾನಿ ಮೋದಿ (Narendra Modi) ವಂದೇ ಭಾರತ್ ರೈಲಿಗೆ ಹಸಿರುನಿಶಾನೆ ತೋರಿಸಲಿದ್ದಾರೆ. ಆದರೆ ಧಾರವಾಡದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ ಹೋಗಿಲ್ಲ. ಈ ಬಗ್ಗೆ ಸಚಿವ ಸಂತೋಷ್ ಲಾಡ್ (Santhosh Lad) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ಮೋದಿ ರಾಷ್ಟ್ರಪತಿಗಳನ್ನೇ ಸೇರಿಸಿಕೊಳ್ಳುವುದಿಲ್ಲ..ಇನ್ನು ನಮ್ಮದೇನು ಮಹಾ? ಇದು ಸರ್ವಾಧಿಕಾರಿ ಧೋರಣೆ. ದೇವರು ಅವರಿಗೆ ಒಳ್ಳೆಯದು ಮಾಡ್ಲಿ ಎಂದು ಲೇವಡಿ ಮಾಡಿದ್ರು. ಈ ಮಧ್ಯೆ ಈ ವಂದೆ ಭಾರತ್ ರೈಲನ್ನು ಬೆಳಗಾವಿವರೆಗೂ ಓಡಿಸಬೇಕು ಎಂದು ಕರವೇ ಆಗ್ರಹಿಸಿದೆ. ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಡಿಸಿಗೆ ಮನವಿ ಪತ್ರ ಸಲ್ಲಿಸಿದೆ.

    ಅಂದ ಹಾಗೇ, ನಾಳೆ ಒಂದೇ ದಿನ ಕರ್ನಾಟಕದ್ದು ಸೇರಿ ಐದು ಹೊಸ ವಂದೇ ಭಾರತ್ ರೈಲುಗಳು ಹಳಿಯೇರಲಿದೆ. ಇದರೊಂದಿಗೆ ವಂದೇ ಭಾರತ್ ರೈಲುಗಳ ಸಂಖ್ಯೆ 24ಕ್ಕೇರಲಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ತೀವ್ರಗೊಂಡ ಒಳಜಗಳ- ವೇದಿಕೆಯಲ್ಲಿಯೇ ಯತ್ನಾಳ್, ನಿರಾಣಿ ಪರಸ್ಪರ ಟಾಂಗ್

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಕೊಟ್ಟ ಭರವಸೆಗಳನ್ನು ಈಡೇರಿಸುವುದೇ ನಮ್ಮ ಗುರಿ: ಸಂತೋಷ್ ಲಾಡ್

    ಕೊಟ್ಟ ಭರವಸೆಗಳನ್ನು ಈಡೇರಿಸುವುದೇ ನಮ್ಮ ಗುರಿ: ಸಂತೋಷ್ ಲಾಡ್

    ಧಾರವಾಡ: ಚುನಾವಣಾ ಸಮಯದಲ್ಲಿ ನಾವು ಏನು ಭರವಸೆಗಳನ್ನು ಕೊಟ್ಟಿದ್ದೆವೋ ಅವುಗಳನ್ನು ಈಡೇರಿಸುವುದೇ ನಮ್ಮ ಗುರಿ. ಕೊಟ್ಟ ಮಾತುಗಳನ್ನು ನಾವು ಕಾರ್ಯರೂಪಕ್ಕೆ ತರುತ್ತೇವೆ ಎಂದು ಸಚಿವ ಸಂತೋಷ ಲಾಡ್ (Santhosh Lad) ಹೇಳಿಕೆ ನೀಡಿದ್ದಾರೆ.

    ಧಾರವಾಡದ ಮುರುಘಾಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ (Congress) ಅಧಿಕಾರದ ಅಮಲು ಏರಿದೆ ಎಂಬ ಬಿಜೆಪಿ (BJP) ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಮೊನ್ನೆಯಷ್ಟೇ ನಾವು ಅಧಿಕಾರಕ್ಕೆ ಬಂದಿದ್ದೇವೆ. ಒಟ್ಟಾರೆ ನಮ್ಮ ಉದ್ದೇಶ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವುದಾಗಿದೆ. ವಿಶೇಷವಾಗಿ ನಮ್ಮ ಗಮನ ಆ ಕಡೆ ಇರುತ್ತದೆ ಎಂದರು. ಇದನ್ನೂ ಓದಿ: ಕಂಡೀಷನ್‌ಗಳ ಮೂಲಕ ಗ್ಯಾರಂಟಿಗಳು ಜನರಿಗೆ ತಲುಪದಂತೆ ಕಾಂಗ್ರೆಸ್ ಷಡ್ಯಂತ್ರ ಮಾಡಿದೆ: ಪ್ರಹ್ಲಾದ್ ಜೋಶಿ

    ಕರ್ನಾಟಕದಲ್ಲಿ ಅತೀ ಶೀಘ್ರದಲ್ಲೇ ತುರ್ತು ಪರಿಸ್ಥಿತಿ ಬರುತ್ತದೆ ಬರುತ್ತದೆ ಎಂಬ ಮಾಜಿ ಸಿಎಂ ಬೊಮ್ಮಾಯಿ (Basavaraj Bommai) ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಯಾವ ದೃಷ್ಟಿಯಿಂದ ಹಾಗೆ ಹೇಳಿದ್ದಾರೋ ಗೊತ್ತಿಲ್ಲ. ಮುಂಬರುವ ದಿನಗಳಲ್ಲಿ ಅದಕ್ಕೆ ಉತ್ತರ ಸಿಗುತ್ತದೆ. ಸುಮ್ಮನೆ ಅವರೊಂದು ಹೇಳುವುದು ನಾವೊಂದು ಹೇಳುವುದು ಬೇಡ. ಬೊಮ್ಮಾಯಿ ಅವರು ಬಡತನ ಹಾಗೂ ಅಭಿವೃದ್ಧಿ ಬಗ್ಗೆ ಮಾತನಾಡುವುದು ಒಳ್ಳೆಯದು ಎಂದು ಹೇಳಿದರು. ಇದನ್ನೂ ಓದಿ: ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು: ಲಕ್ಷ್ಮಿ ಹೆಬ್ಬಾಳ್ಕರ್

    ರಾಜ್ಯದಲ್ಲಿ ನಕಲಿ ಜಾಬ್ ಕಾರ್ಡ್‌ಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಕಲಿ ಜಾಬ್ ಕಾರ್ಡ್ ಇರುವ ಬಗ್ಗೆ ಮಾಹಿತಿ ಬೇಕು. ನಕಲಿ ಜಾಬ್ ಕಾರ್ಡ್‌ಗೆ ಕೆಲವು ಮಾನದಂಡ ಹಾಕಿದ್ದೇವೆ. ನಕಲಿ ಎಂದು ಗೊತ್ತಾದರೆ ಅದನ್ನು ತೆಗೆಯುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: IAS ವರ್ಸಸ್‌ IPS: ರೂಪಾ ಮೌದ್ಗಿಲ್‌ಗೆ ಜಾಮೀನು

    ಒಡಿಶಾ ರೈಲು ದುರಂತ (Odisha Train Tragedy) ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದುರಂತದಲ್ಲಿ 150ರಿಂದ 160 ಜನ ಕರ್ನಾಟಕದವರು ಇದ್ದರು. ಪುರಿ ಜಗನ್ನಾಥದಲ್ಲಿ ಇದ್ದವರು 17 ಜನ ವಾಪಸ್ ಬಂದಿದ್ದಾರೆ. 30ಕ್ಕೂ ಹೆಚ್ಚು ವಾಲಿಬಾಲ್ ಆಟಗಾರರನ್ನು ವಾಪಸ್ ಕರೆತರಲಾಗಿದೆ. ಯಾರಿಗೂ ತೊಂದರೆ ಆಗದಂತೆ 150-160 ಜನರನ್ನು ರಕ್ಷಣೆ ಮಾಡಲಾಗಿದೆ. ನನ್ನ ಮಾಹಿತಿ ಪ್ರಕಾರ ಯಾರಿಗೂ ತೊಂದರೆಯಾಗಿಲ್ಲ ಎಂದರು. ಇದನ್ನೂ ಓದಿ: ಪಶು ಸಂಗೋಪನಾ ಸಚಿವರನ್ನು ಮೆಂಟಲ್ ಆಸ್ಪತ್ರೆ ದಾಖಲಿಸಿ ಚೆಕ್ ಮಾಡಿಸ್ಬೇಕು: ಪ್ರಭು ಚವ್ಹಾಣ್ ಕಿಡಿ

  • 300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಿಗರು ಇಲ್ಲ: ಸಂತೋಷ್ ಲಾಡ್

    300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಿಗರು ಇಲ್ಲ: ಸಂತೋಷ್ ಲಾಡ್

    ಬೆಂಗಳೂರು: ಒಡಿಶಾ ರೈಲು ದುರಂತದಲ್ಲಿ (Odisha Train Accident) ಮೃತಪಟ್ಟವರ 300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲಿಸಿದ್ದೇನೆ. ಯಾರೂ ಕನ್ನಡಿಗರು ಇಲ್ಲ ಎಂದು ಸಚಿವ ಸಂತೋಷ್ ಲಾಡ್ (Santhosh Lad) ತಿಳಿಸಿದ್ದಾರೆ.

    ರೈಲು ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಎರಡ್ಮೂರು ಶವಗಾರ, ನಾಲ್ಕು ಆಸ್ಪತ್ರೆಗಳಲ್ಲಿ ಹುಡುಕಾಟ ಮಾಡಿದ್ದು, ನಾಲ್ಕು ಆಸ್ಪತ್ರೆಗಳಲ್ಲಿ 750 ಗಾಯಾಳು ರೋಗಿಗಳನ್ನು ಮಾತನಾಡಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

    ನಂತರ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, 750 ಗಾಯಾಳುಗಳಲ್ಲಿ ಯಾರೂ ಕನ್ನಡಿಗರು ಇಲ್ಲ. 300ಕ್ಕೂ ಹೆಚ್ಚು ಡೆಡ್‌ಬಾಡಿಗಳನ್ನು ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಗರಿಲ್ಲ. ಕನ್ನಡಿಗರು ಸೇಫ್ ಆಗಿದ್ದಾರೆ. 110 ಜನ ಕಳಸದವರು ವಾಪಾಸ್ ಆಗುತ್ತಿದ್ದಾರೆ. ಪುರಿ ಜಗನ್ನಾಥ ದರ್ಶನಕ್ಕೆ (Puri Jagannatha Temple) ಬಂದವರಿಗೆ ಟಿಕೆಟ್ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದೇವರ ದಯೆಯಿಂದ ನಾವು ಕೋರಮಂಡಲ್ ಎಕ್ಸ್‌ಪ್ರೆಸ್ ಹತ್ತಲಿಲ್ಲ – ಬೆಂಗಳೂರಿಗೆ ಬಂದಿಳಿದ ವಾಲಿಬಾಲ್ ಕೋಚ್ ಪ್ರತಿಕ್ರಿಯೆ

    ಒಡಿಶಾದ ಪುರಿ ಜಗನ್ನಾಥ ದರ್ಶನಕ್ಕೆ ತೆರಳಿದ್ದ 12 ಯಾತ್ರಿಗಳು ವಾಪಸ್ಸಾಗಲು ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದು, ಸಂತೋಷ್ ಲಾಡ್ ಯಾತ್ರಿಗಳನ್ನು ವಾಪಸ್ ಕರೆತರುವ ಸಲುವಾಗಿ ಬೆಂಗಳೂರಿಗೆ (Bengaluru) ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಭುವನೇಶ್ವರದಿಂದ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದು, ಯಾತ್ರಿಗಳು ಇಂದು (ಭಾನುವಾರ) ಸಂಜೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

  • ಸಿದ್ದರಾಮಯ್ಯ ಚುನಾವಣೆಗೆ ನಿಲ್ಲೋದೇ ಬೇಡ: ಸಂತೋಷ್ ಲಾಡ್ ಹೊಸ ಬಾಂಬ್

    ಸಿದ್ದರಾಮಯ್ಯ ಚುನಾವಣೆಗೆ ನಿಲ್ಲೋದೇ ಬೇಡ: ಸಂತೋಷ್ ಲಾಡ್ ಹೊಸ ಬಾಂಬ್

    ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಚಿವ ಸಂತೋಷ್ ಲಾಡ್ (Santhosh Lad) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಯಾವ ಕ್ಷೇತ್ರದಲ್ಲಿ ಚುನಾವಣೆ ನಿಲ್ಲೋದೇ ಬೇಡ. ಈ ಬಾರಿ ಅವರು ಚುನಾವಣೆ ನಿಲ್ಲುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಬಾಂಬ್ ಸಿಡಿಸಿದ್ದಾರೆ. ಇದನ್ನೂ ಓದಿ: ಜನರ ಮುಂದೆ ಏಕೆ ರಾಜಕೀಯವಾಗಿ ಬೆತ್ತಲಾಗ್ತೀರಿ – ಕಾಂಗ್ರೆಸ್‌ಗೆ ಸುಧಾಕರ್ ತಿರುಗೇಟು

    ಸಿದ್ದರಾಮಯ್ಯ ಕೇವಲ ಒಂದು ಪಕ್ಷಕ್ಕೆ ಸೀಮಿತವಲ್ಲ, ಅವರು 224 ಕ್ಷೇತ್ರದಲ್ಲಿ ಎಲ್ಲೆ ಸ್ಪರ್ಧೆ ಮಾಡಿದರೂ ಗೆಲ್ಲತ್ತಾರೆ. ಆದರೆ ಅವರು ಈ ಬಾರಿ ಚುನಾವಣೆ ನಿಲ್ಲುವ ಬದಲು ರಾಜ್ಯ ಸುತ್ತಿ ಪಕ್ಷ ಸಂಘಟನೆ ಮಾಡಲಿ. ಹಾಗೂ ಅವರ ವಯಸ್ಸು ಸಹ ಚುನಾವಣೆ ಪ್ರಚಾರಕ್ಕೆ ಅಡ್ಡಿಯಾಗಬದು. ಏಪ್ರಿಲ್ ನಲ್ಲಿ ಬಿಸಿಲು ಜಾಸ್ತಿ ಇದು ಅವರ ಆರೋಗ್ಯ ಮೇಲೆ ಪರಿಣಾಮ ಬಿರುತ್ತದೆ. ಹೀಗಾಗಿ ಅವರು ಚುನಾವಣೆ ನಿಲ್ಲುವ ಬದಲು ಪಕ್ಷ ಸಂಘಟನೆ ಮಾಡಲಿ ಎಂದು ಆಜಿ ಸಚಿವರು ಸಲಹೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಕಲಘಟಗಿ ಕ್ಷೇತ್ರದಿಂದ್ಲೇ ನನ್ನ ಸ್ಪರ್ಧೆ – ಮಾಜಿ ಎಂಎಲ್‍ಸಿ ನಾಗರಾಜ ಛಬ್ಬಿ ಘೋಷಣೆ

    ಕಲಘಟಗಿ ಕ್ಷೇತ್ರದಿಂದ್ಲೇ ನನ್ನ ಸ್ಪರ್ಧೆ – ಮಾಜಿ ಎಂಎಲ್‍ಸಿ ನಾಗರಾಜ ಛಬ್ಬಿ ಘೋಷಣೆ

    – ಸಂತೋಷ್ ಲಾಡ್ ಸ್ಪರ್ಧೆಗೆ ಅಡ್ಡಿಯಾದ ಛಬ್ಬಿ

    ಹುಬ್ಬಳ್ಳಿ: ಕಲಘಟಗಿಯೇ ನನ್ನ ಕರ್ಮಭೂಮಿ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಲಘಟಗಿ ಕ್ಷೇತ್ರದಿಂದಲೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ. ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಘೋಷಿಸಿದ್ದಾರೆ.

    ಕಲಘಟಗಿ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಮಾಜಿ ಸಚಿವ ಸಂತೋಷ್ ಲಾಡ್ ಹಾಗೂ ನಾಗರಾಜ ಛಬ್ಬಿ ಮಧ್ಯೆ ಪೈಪೋಟಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ಷೇತ್ರದ ಜನತೆಯೊಂದಿಗೆ ನನಗೆ ಅವಿನಾಭಾವ ಸಂಬಂಧ ಬೆಸೆದುಕೊಂಡಿದೆ. ಎರಡು ದಶಕದಿಂದ ಕಲಘಟಗಿಯೊಂದಿಗೆ ಸಂಪರ್ಕ ಹೊಂದಿದ್ದೇನೆ. ಕಳೆದ ಚುನಾವಣೆಯಲ್ಲಿ ಹಾಗೂ ಚುನಾವಣೆ ಬಳಿಕ ಕ್ಷೇತ್ರದಲ್ಲಿಯೇ ಬೀಡುಬಿಟ್ಟಿದ್ದೇನೆ. ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಹೋಗಿ ಜನರ ಬೇಕು-ಬೇಡಗಳಿಗೆ ಸ್ಪಂದಿಸಿದ್ದೇನೆ. ಜನರ ಒತ್ತಾಸೆಯ ಮೇರೆಗೆ ಕಲಘಟಗಿಯಿಂದ ಸ್ಪರ್ಧಿಸಲು ಮುಂದಾಗಿದ್ದೇನೆ. ಹೀಗಾಗಿ ಈ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಉದ್ಭವಿಸದು ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಆರ್‌ಎಸ್‍ಎಸ್‍ನವರು ಅಲ್ಲ: ಸಿದ್ದರಾಮಯ್ಯ

    ಕಲಘಟಗಿಯಲ್ಲೇ ಮನೆ ನಿರ್ಮಿಸುತ್ತಿದ್ದೇನೆ. ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮದ ನೈಜ ಸಮಸ್ಯೆಗಳನ್ನು ಪಟ್ಟಿ ಮಾಡುತ್ತಿದ್ದೇನೆ. ಈಗಾಗಲೇ ಸರ್ಕಾರ ಮಟ್ಟದಲ್ಲಿ ಒತ್ತಡ ತಂದು ಅನೇಕ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಕಲಘಟಗಿ ಕ್ಷೇತ್ರವನ್ನು ಮಾದರಿಯಾಗಿಸುವ ಗುರಿ ಹೊಂದಿದ್ದೇನೆ. ಪ್ರತಿ ಹಳ್ಳಿ – ಹಳ್ಳಿಗೆ ಹೋದಾಗಲೂ ಜನರು ನನ್ನ ಪರವಾಗಿ ನಿಲ್ಲುತ್ತಿದ್ದಾರೆ. ಇಂತಹ ಪ್ರಸಂಗದಲ್ಲಿ ನಾನು ಕ್ಷೇತ್ರ ತೊರೆಯುವ ಪ್ರಶ್ನೆ ಉದ್ಭವಿಸದು. ನನ್ನ ಕರ್ಮಭೂಮಿ ಕಲಘಟಗಿಯೇ ಹೊರತು ಇನ್ನಾವುದೂ ಅಲ್ಲ. ಛಬ್ಬಿ ಅವರು ಕಲಘಟಗಿಯಿಂದ ಸ್ಪರ್ಧಿಸಲಾರರು ಎನ್ನುವ ಸುಳ್ಳು ಸುದ್ದಿ ಹರಿಯ ಬಿಡುತ್ತಿದ್ದಾರೆ. ನನ್ನ ಮುಂದಿನ ರಾಜಕೀಯ ಜೀವನ ಎಂದಿರುವುದಾದರೆ ಅದು ಕಲಘಟಗಿಯಲ್ಲಿಯೇ ಎಂದು ನಾಗರಾಜ ಛಬ್ಬಿ ಘೋಷಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ

    ನಾನು ಕಾಂಗ್ರೆಸ್ಸಿನ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಪಕ್ಷವೂ ಅಭ್ಯರ್ಥಿಯಾಗಿ ಘೋಷಿಸಿ, ಟಿಕೆಟ್ ಕೊಟ್ಟು ನನ್ನನ್ನು ಹಾರೈಸಲಿದೆ. ಈ ಬಗ್ಗೆ ಯಾವುದೇ ಸಂದೇಹವಿಲ್ಲ. ದಾರಿ ತಪ್ಪಿಸುವವರಿಗೆ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ನಾಗರಾಜ ಛಬ್ಬಿ ಪರೋಕ್ಷವಾಗಿ ಸಂತೋಷ ಲಾಡ್ ಗೆ ಸವಾಲು ಎಸೆದಿದ್ದಾರೆ. ಇದನ್ನೂ ಓದಿ: ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಟ್ವೀಟ್ ವಾರ್