Tag: Santhosh Patil Case

  • ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ

    ನಾನು ತಪ್ಪಿತಸ್ಥನಲ್ಲ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ: ಈಶ್ವರಪ್ಪ

    ಶಿವಮೊಗ್ಗ: ಈ ಆರೋಪದಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೇನೆ. ನನಗೆ ಪೂರ್ಣವಿಶ್ವಾಸ ಇದೆ ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ನಾಳೆ ರಾಜೀನಾಮೆ ಕೊಡುತ್ತಿದ್ದೇನೆ. ಯಾರು ನನ್ನನ್ನು ಬೆಳೆಸಿದ್ದಾರೆ, ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕರಿಗೆ ಇರಿಸು ಮುರಿಸು ಆಗಬಾರದು ಹೀಗಾಗಿ ರಾಜೀನಾಮೆ ಕೊಡುತ್ತಿದ್ದೇನೆ. ನಾಳೆ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಸಲ್ಲಿಸುತ್ತೇನೆ. ಸಿಎಂ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಪೂರ್ಣವಿಶ್ವಾಸ ಇದೆ. ನನ್ನ ತಪ್ಪು ಇದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ. ಈ ಆರೋಪದಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೇನೆ ಎಂದರು. ಇದನ್ನೂ ಓದಿ: ಮಂತ್ರಿ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

    ನನ್ನ ಮನೆ ದೇವರು ಚೌಡೇಶ್ವರಿ ನಾನು ತಪ್ಪಿತಸ್ಥನಲ್ಲ, ನಿರ್ದೋಷಿ ಎಂದು ಹೊರಗೆ ತರುತ್ತಾಳೆ. ಗ್ರಾಮೀಣಾಭಿವೃದ್ಧಿ ಇಲಾಖೆ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ. ನನ್ನ ಇಲಾಖೆಯಲ್ಲಿ ಕೆಲಸ ಮಾಡಿ ಯಶಸ್ವಿಯಾಗುತ್ತಿದ್ದೇನೆ ಎಂಬ ಸಂತೋಷ ಇದೆ. ಪಕ್ಷದ ನಾಯಕರು, ಮಾಧ್ಯಮದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ನಿನ್ನೆಯೇ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೆ ಆತುರ ಮಾಡಬೇಡಿ ಎಂದು ಬೆಂಬಲಿಗರು ಎಂದಿದ್ದರು ಅದಕ್ಕೆ ಕೊಟ್ಟಿರಲಿಲ್ಲ. ನಾನು ದೇವರನ್ನು ನಂಬಿರುವವನು ನಾನು ತಪ್ಪುಮಾಡಿದ್ದರೆ ಶಿಕ್ಷೆ ಆಗಲಿ ಎಂದು ನುಡಿದರು. ಇದನ್ನೂ ಓದಿ: ಪ್ರಧಾನಿ ಒಂದೇ ಒಂದು ಮಾತು – ಈಶ್ವರಪ್ಪ ದಿಢೀರ್‌ ರಾಜೀನಾಮೆ

  • ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ಹೈಡ್ರಾಮಾ

    ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ಹೈಡ್ರಾಮಾ

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟಿಲ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರ ಮಧ್ಯೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನಡೆದಿದೆ.

    ಸಂತೋಷ್ ಮೃತದೇಹವನ್ನು ಬೆಳಗಾವಿಯಲ್ಲಿರುವ ಅವರ ಮನೆ ಮುಂದೆ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಶಾಸಕಿ ಮಾತನಾಡಿ, ಸಂತೋಷ್ ಆತ್ಮಹತ್ಯೆಗೆ ನ್ಯಾಯ ಸಿಗಬೇಕು. ಜೊತೆಗೆ ಪರಿಹಾರ ಸಿಗಬೇಕು. ಅಲ್ಲಿಯವರೆಗೂ ಸಂತೋಷ್ ಅವರ ಮೃತದೇಹವನ್ನು ಕದಲಿಸುವುದು ಬೇಡಾ ಎಂದು ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿದ್ದ ಸಂತೋಷ್ ಸಂಬಂಧಿಗಳು ಅಂತ್ಯಕ್ರಿಯೆ ಮಾಡೋಣ. ಸಂತೋಷ್ ಮೃತದೇಹ ಇಟ್ಟು ಪ್ರತಿಭಟನೆ ಮಾಡುವುದು ಬೇಡ ಎಂದಿದ್ದರು. ಆ ಬಳಿಕ ಸಂತೋಷ್ ಪಾಟೀಲ್ ಸಂಬಂಧೀಕರ ಮಧ್ಯೆಯೇ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಶಾಂತ ಪಡಿಸಿದರು. ಇದನ್ನೂ ಓದಿ: ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹ

    ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮನೆಯಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಸಂತೋಷ್ ಪಾಟೀಲ್ ಅವರ ಮೃತದೇಹ ರವಾನೆ ಆಗಿದೆ. ಗ್ರಾಮದ ಹೊರವಲಯದ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗ್ರಾಮದ ಪ್ರಮುಖ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಿದ್ದು, ಲಿಂಗಾಯತ ವಿಧಿ ವಿಧಾನದಂತೆ ನೆರವೇರಲಿರುವ ಸಂತೋಷ ಪಾಟೀಲ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

  • ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ: ಸುರ್ಜೆವಾಲಾ

    ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ: ಸುರ್ಜೆವಾಲಾ

    ಬೆಳಗಾವಿ: ಕರ್ನಾಟಕದಲ್ಲಿ ಬಿಜೆಪಿಯಿಂದ ಅವರದೇ ಕಾರ್ಯಕರ್ತರ ಲೂಟಿ ನಡೆದಿದ್ದು, ಭ್ರಷ್ಟಾಚಾರದಲ್ಲಿ ಬೊಮ್ಮಾಯಿ ಸರ್ಕಾರ ಮುಳುಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅವರದೇ ಪಕ್ಷದ ಕಾರ್ಯಕರ್ತನ ಹತ್ಯೆಯಾಗಿದೆ. ಆತ್ಮಹತ್ಯೆಗೆ ಪ್ರಚೋದಿಸಿದ್ದು ಮಂತ್ರಿ ಕೆ.ಎಸ್. ಈಶ್ವರಪ್ಪ. ಇಷ್ಟೆಲ್ಲಾ ಆದ ಬಳಿಕ ಬೊಮ್ಮಾಯಿ ಸರ್ಕಾರ ಈಶ್ವರಪ್ಪ ಜೊತೆಗೆ ನಿಂತುಕೊಂಡಿದೆ. ಇದರ ಅರ್ಥ ಈಶ್ವರಪ್ಪ ಅಷ್ಟೇ ಅಲ್ಲ ಬೊಮ್ಮಾಯಿ ಕೂಡ ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಂತೋಷ್‌ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಕಾಂಗ್ರೆಸ್‌ ನಾಯಕರ ಸಾಂತ್ವನ


    ಬಿಜೆಪಿ ಸರ್ಕಾರದ ಮೇಲೆ ಒಂದಲ್ಲಾ ಒಂದು ಆರೋಪಗಳು ಬರುತ್ತಿದೆ. ಗುತ್ತಿಗೆದಾರ ಸಂಘ ಕೂಡ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದೆ. ಸರ್ಕಾರದ ವ್ಯವಸ್ಥೆ ಭ್ರಷ್ಟವಾಗಿದೆ. ಈ ಭ್ರಷ್ಟಾಚಾರವನ್ನು ಕರ್ನಾಟಕದ ಜನರು ಸಹಿಸಿಕೊಳ್ಳುವುದಿಲ್ಲ. ಕಿತ್ತು ಜೈಲಿನ ಕಂಬಿ ಒಳಗೆ ಜನ ಬಿಸಾಕ್ತಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಸಂತೋಷ್ ಸಾವಿಗೆ ನ್ಯಾಯ ಕೊಡಿಸುತ್ತೇವೆ. ಪ್ರತಿಹಳ್ಳಿಗೂ, ಗಲ್ಲಿಗೂ ಹೋಗುತ್ತೇವೆ ಕೊನೆ ಕ್ಷಣದವರೆಗೂ ಸಂತೋಷ್ ಕುಟುಂಬದ ಜೊತೆಗೆ ಹೋರಾಟ ಮಾಡುತ್ತೇವೆ. ಕೊಲೆಗಾರ ಮಂತ್ರಿ ಜೈಲಿಗೆ ಹೋಗಬೇಕು. ಭ್ರಷ್ಟಾಚಾರ ನಿಲ್ಲಬೇಕು. ಅಲ್ಲಿವರೆಗೂ ಕಾಂಗ್ರೆಸ್ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನ ಬಳಿ 40% ಕಮಿಷನ್ ವಸಲಿ ಮಾಡೋದು ರಾಕ್ಷಸ ಪ್ರವೃತ್ತಿ: ಸಿದ್ದರಾಮಯ್ಯ

    ರಾಜಸ್ಥಾನ, ಬಿಹಾರಕ್ಕೆ ಹೋಗಲಿಲ್ಲ ಬೆಳಗಾವಿಗೆ ಬರುತ್ತಿದ್ದೀರಿ ಎಂದು ಅರುಣ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅರುಣ್ ಸಿಂಗ್ ನಮಗಿಂತ ದೊಡ್ಡವರಿದ್ದಾರೆ. ಅವರ ಬಗ್ಗೆ ನನಗೆ ಗೌರವ ಇದೆ. ಆದ್ರೆ, ಅರುಣ್ ಸಿಂಗ್ ಅವರೇ ನೀವು ಇಷ್ಟು ನಿರ್ದಯಿ ಆಗಿ ಹೋದ್ರಾ. ಒಬ್ಬ ಅಮಾಯಕ ವಿಧವೆಯ ಕಣ್ಣೀರು ಕಾಣಿಸುವುದಿಲ್ವಾ. ನಿಮ್ಮ ಪರಿವಾರದಲ್ಲಿ ದುಃಖವನ್ನು ಯಾವತ್ತು ನೋಡೇ ಇಲ್ವಾ. ಬಿಜೆಪಿಯವರು ಇಷ್ಟೊಂದು ನಿರ್ದಯಿಗಳು ಆಗಿ ಹೋದ್ರಾ. ನಿಮಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.