Tag: Santro Ravi Case

  • ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ಒಪ್ಪಿಸಿ ಶಬರಿಮಲೆಗೆ ಹೊರಟ ಆರಗ ಜ್ಞಾನೇಂದ್ರ

    ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ಒಪ್ಪಿಸಿ ಶಬರಿಮಲೆಗೆ ಹೊರಟ ಆರಗ ಜ್ಞಾನೇಂದ್ರ

    ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣವನ್ನು (Santro Ravi Case)  ಸರ್ಕಾರ ಸಿಐಡಿ (CID) ತನಿಖೆಗೆ ಒಪ್ಪಿಸಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಈಗಾಗಲೇ ಸಿಐಡಿ ತನಿಖೆಗೆ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.

    ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಹಿನ್ನೆಲೆ ಮೈಸೂರು ವಿಜಯನಗರ ಪೊಲೀಸರು ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಸಿಐಡಿ ಪೊಲೀಸರಿಗೆ ಎಸಿಪಿ ಶಿವಶಂಕರ್ ನೀಡಲಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ಮೈಸೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ಕಾರಣಕ್ಕೆ ಜನವರಿ 25 ರವರೆಗೆ ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ. ಇದನ್ನೂ ಓದಿ: ಗೃಹ ಸಚಿವರಿಗೆ ಅವರ ಇಲಾಖೆಯಲ್ಲಿ ನಡೆಯೋ ವಿಷಯ ಗೊತ್ತಿಲ್ಲವೇ?: ಹೆಚ್‍ಡಿಕೆ ವಾಗ್ದಾಳಿ

    ಸ್ಯಾಂಟ್ರೋ ರವಿ ಪರ ವಕೀಲರು ಇನ್ನೆರಡು ದಿನಗಳಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇನ್ನು, ನಟೋರಿಯಸ್ ಕ್ರಿಮಿನಲ್‍ನ್ನು ಯಾಕೆ ನ್ಯಾಯಾಂಗ ಬಂಧನಕ್ಕೆ ನೀಡಿದರು? ಸೂಕ್ತ ತನಿಖೆಗೆ ಒಳಪಡಿಸಬೇಕು ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಮಧ್ಯೆ, ಆರಗ ಜ್ಞಾನೇಂದ್ರ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಇರುಮುಡಿ ಹೊತ್ತು ಶಬರಿ ಮಲೆಗೆ ಸೆಕ್ಯೂರಿಟಿ ಜೊತೆ ತೆರಳಿದ್ದಾರೆ. ಇದನ್ನೂ ಓದಿ: ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೃಹ ಸಚಿವರಿಗೆ ಅವರ ಇಲಾಖೆಯಲ್ಲಿ ನಡೆಯೋ ವಿಷಯ ಗೊತ್ತಿಲ್ಲವೇ?: ಹೆಚ್‍ಡಿಕೆ ವಾಗ್ದಾಳಿ

    ಗೃಹ ಸಚಿವರಿಗೆ ಅವರ ಇಲಾಖೆಯಲ್ಲಿ ನಡೆಯೋ ವಿಷಯ ಗೊತ್ತಿಲ್ಲವೇ?: ಹೆಚ್‍ಡಿಕೆ ವಾಗ್ದಾಳಿ

    ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D Kumarswamy) ಪ್ರಶ್ನೆ ಮಾಡಿದ್ದಾರೆ.

    ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾತನಾಡಿದ ಅವರು, ತಮ್ಮ ಇಲಾಖೆಯಲ್ಲಿ ದಂಧೆ ನಡೆಯುತ್ತಿದ್ದರೆ ಸಚಿವರು ಏನು ಮಾಡುತ್ತಿದ್ದರು. ಅದನ್ನು ಅವರು ಜನರಿಗೆ ತಿಳಿಸಬೇಕು ಅಲ್ಲವೇ? ಸ್ಯಾಂಟ್ರೋ ರವಿ (Santro Ravi) ಬಳಿ ಹಣ ಪಡೆದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ತೀನಿ ಎನ್ನುವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರು ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ನಾನ್ಯಾಕೆ ಹೇಳಲಿ. ಈ ಸರ್ಕಾರದಲ್ಲಿ ನಡೆಯುತ್ತಿರುವ ಕಾಸಿಗಾಗಿ ಪೋಸ್ಟಿಂಗ್ ವಿಚಾರ ಬೀದಿ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ಪೊಲೀಸ್ ಇಲಾಖೆಯಲ್ಲಿ ನಡೆಯುತ್ತಿರುವ ದಂಧೆಗಳ ಜನರು ಕೂತಲ್ಲಿ, ನಿಂತಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ನನಗೆ ಯಾವುದೇ ನೋಟಿಸ್‌ ಬಂದಿಲ್ಲ: ಯತ್ನಾಳ್‌

    ಈಗ ಬಂಧನಕ್ಕೆ ಒಳಗಾಗಿರುವ ವ್ಯಕ್ತಿ ಎಲ್ಲಿ, ಯಾರಿಂದ ಏನೆಲ್ಲಾ ಕೆಲಸ ಮಾಡಿಕೊಂಡಿದ್ದಾನೆ ಎಲ್ಲ ಕಡೆ ಹೇಳಿಕೊಂಡು ತಿರುಗಿದ್ದಾನೆ. ಆತನ ಫೋಟೋಗಳು, ಅಡಿಯೋಗಳು ರಾಜ್ಯದ ತುಂಬಾ ಹಬ್ಬಿವೆ. ಇದೆಲ್ಲಾ ಗೃಹ ಸಚಿವರ ಗಮನಕ್ಕೆ ಬಂದಿಲ್ಲವೇ ಎಂದು ಸಚಿವರಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಇಲಾಖೆಯ ಟೆಂಡರ್ ಕೊಡಿಸದ್ದಕ್ಕೆ ನನ್ನ ಮೇಲೆ ಭ್ರಷ್ಟಾಚಾರ ಆರೋಪ: ಶಾಸಕ ತಿಪ್ಪಾರೆಡ್ಡಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿದೆ: ಸಿಎಂ ಇಬ್ರಾಹಿಂ ಹೊಸ ಬಾಂಬ್

    13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿದೆ: ಸಿಎಂ ಇಬ್ರಾಹಿಂ ಹೊಸ ಬಾಂಬ್

    ಕೋಲಾರ: ಕಾಂಗ್ರೆಸ್‍ನವರು (Congress) ಬಾಯಿ ಬಿಡುತ್ತಿಲ್ಲ. ಕಾಂಗ್ರೆಸ್‍ನಿಂದ ಬಿಜೆಪಿಗೆ (BJP) ಹೋದ 13 ಜನ ಶಾಸಕರ ಸಿಡಿ (CD) ಇದೆ. ಸದನದಲ್ಲಿ ಅವರೇ ಹೇಳಿದ್ದಾರೆ. ಸ್ಟೇ ತೆಗೆದುಕೊಂಡಿದ್ದಾರೆ. ಗೋಪಾಲಯ್ಯ ಒಬ್ಬ ಮಾತ್ರ ತೆಗೆದುಕೊಂಡಿಲ್ಲ. ಉಳಿದಂತೆ 13 ಜನ ಸಚಿವರ ಸಿಡಿಗಳು ಚುನಾವಣೆ ಒಳಗೆ ಬಿಡುಗಡೆಯಾಗಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಹೊಸ ಬಾಂಬ್ ಸಿಡಿಸಿದ್ದಾರೆ.

    ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ (Santro Ravi Case)  ಪ್ರಕರಣದ ವಿಚಾರಣೆ ಪಾರದರ್ಶಕವಾಗಿರಬೇಕಾದ್ರೆ ನಿವೃತ್ತ ನ್ಯಾಯಾಧೀಶರ ಮೂಲಕ ತನಿಖೆ ಮಾಡಿಸುವುದು ಉತ್ತಮ. ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ಅಲ್ಲ, ಸಿಬಿಐ ತನಿಖೆ ಆಗಬೇಕು. ಇಲ್ಲವಾದಲ್ಲಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ನಿರುದ್ಯೋಗಿ ಯುವತಿಯರಿಗೆ 2,500 ರೂ. ಇನ್ನೂ ನೀಡಿಲ್ಲ ಯಾಕೆ – ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

    ಸಿದ್ದರಾಮಯ್ಯ (Siddaramaiah)  ಬಾದಾಮಿ ಗೆಲ್ಲಲು ನಾನು ಕಾರಣ. ಬಾದಾಮಿ ಚುನಾವಣೆಯಲ್ಲಿ ನಾನು ಹೋಂವರ್ಕ್ ಮಾಡಿದ್ದು, ಸಿದ್ದರಾಮಯ್ಯ ಅಲ್ಲ. ನಾನು ಅವರನ್ನು ಗೆಲ್ಲಿಸಿದೆ ಅದಕ್ಕೆ ಅವರ ಸರಿಯಾದ ಉಪಕಾರ ಮಾಡಿದ್ರು. ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲಲ್ಲ. ಮನೇ ದೇವರು ಹೇಳಿದ್ದಾರೆ ಅವರು ಬರಲ್ಲ. ಆದ್ರೆ ಸಿದ್ದರಾಮಯ್ಯ ಬಲವಂತಕ್ಕೆ ಕೋಲಾರಕ್ಕೆ ಬರುತ್ತಿದ್ದಾರೆ. ಕೊನೆಗೆ ಹೈಕಮಾಂಡ್ ಮೇಲೆ ಹಾಕುತ್ತಿದ್ದಾರೆ. ಸಿದ್ದರಾಮಯ್ಯರನ್ನು ಸೋಲಿಸಲು ಕೋಲಾರಕ್ಕೆ ಕರೆದುಕೊಂಡು ಕೆಲವರು ಬರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಏಕಕಾಲಕ್ಕೆ 72 ಕ್ಷೇತ್ರ ನಿರ್ವಹಿಸುವ ರಿಮೋಟ್ ಮತಯಂತ್ರ ಪ್ರದರ್ಶನ

    ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ರಾಜ್ಯದಲ್ಲಿ 123 ಸೀಟ್ ಬರುವುದು ಖಚಿತ. ಈ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ನಾವೇ ಅಧಿಕಾರ ಮಾಡುವುದು. ನಮ್ಮ ಪಕ್ಷದವರು ಸೇರಿ ಸಿಎಂ ಕುಮಾರಸ್ವಾಮಿ (H.D Kumaraswamy)  ಎಂದು ಹೇಳುತ್ತೇವೆ. ಆದ್ರೆ ಕಾಂಗ್ರೆಸ್, ಬಿಜೆಪಿಯಲ್ಲಿ ಹಾಗಿಲ್ಲ, ನೀವು ಹೇಳಿ ನೋಡಿ ನೋಡೋಣ ಎಂದು ಕಾಂಗ್ರೆಸ್ ಹಾಗೂ ಬಿಜೆಪಿಗೆ ಸವಾಲು ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k