Tag: sanya iyer

  • ಫೋಟೋಶೂಟ್ ಮೇಕಿಂಗ್ ವಿಡಿಯೋ ಔಟ್ : ಖುಷ್ ಆದ ಸಾನ್ಯಾ ಫ್ಯಾನ್ಸ್

    ಫೋಟೋಶೂಟ್ ಮೇಕಿಂಗ್ ವಿಡಿಯೋ ಔಟ್ : ಖುಷ್ ಆದ ಸಾನ್ಯಾ ಫ್ಯಾನ್ಸ್

    ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photoshoot) ಮಾಡಿಸಿಕೊಂಡಿರುವುದಾಗಿ ತಿಳಿಸಿದ್ದ ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ (Sanya Iyer), ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಸಾನ್ಯಾ ಮಿರಿ ಮಿರಿ ಮಿಂಚಿದ್ದರು. ಇದೀಗ ಆ ಫೋಟೋಶೂಟ್ ವಿಡಿಯೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಫ್ಯಾನ್ಸ್ ಸಖತ್ ರೆಸ್ಪಾನ್ಸ್ ಮಾಡುತ್ತಿದ್ದಾರೆ.

    ಇತ್ತೀಚೆಗಷ್ಟೇ ಬಾಲಿವುಡ್ ನಲ್ಲಿ ಪ್ರಾಜೆಕ್ಟ್ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಅವರು ಆ ಪ್ರಾಜೆಕ್ಟ್ ಗಾಗಿಯೇ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ಹಂಚಿಕೊಂಡಿರುವ ಫೋಟೋಗಳು ಸಖತ್ ಹಾಟ್ ಅಂಡ್ ಬೋಲ್ಡ್ ಆಗಿವೆ. ಈ ಫೋಟೋಗಳಿಗೆ ಅನೇಕರು ಸಖತ್ ಸೆಕ್ಸಿ ಎಂದು ಕಾಮೆಂಟ್ ಮಾಡಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಇಂದು ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ.

    ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.

    ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.

    ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.

    ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್‌ ಹರಿದು ಬಂದಿತ್ತು.

    ಅಮ್ಮನ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರನ್ನು ಚಳಿಬಿಡಿಸಿದ್ದರು ಸಾನ್ಯಾ. ನನ್ನ ತಾಯಿ ನನಗೆ ಹೆಮ್ಮೆ. ಮಾತನಾಡಲು ನೀವ್ಯಾರು? ಒಂದು ಸಲ ನಿಮ್ಮ ತಾಯಿಯನ್ನು ಪ್ರೀತಿಸಿ ನೋಡಿ, ಆಗ ಇಂತಹ ಕಾಮೆಂಟ್ ಗಳು ಬರಲಾರವು ಎಂದಿದ್ದರು. ಈ ಮೂಲಕ ತಾಯಿಯ ಬಗೆಗಿನ ಅಭಿಮಾನವನ್ನು ಮೆರೆದಿದ್ದರು.

  • ಪುಟ್ಟಗೌರಿ ಖ್ಯಾತಿಯ ಸಾನ್ಯಾ ಸಖತ್ ಹಾಟ್ ಅಂಡ್ ಬೋಲ್ಡ್

    ಪುಟ್ಟಗೌರಿ ಖ್ಯಾತಿಯ ಸಾನ್ಯಾ ಸಖತ್ ಹಾಟ್ ಅಂಡ್ ಬೋಲ್ಡ್

    ಮೊನ್ನೆಯಷ್ಟೇ ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photoshoot) ಮಾಡಿಸಿಕೊಂಡಿರುವುದಾಗಿ ತಿಳಿಸಿದ್ದ ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ (Sanya Iyer), ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಸಾನ್ಯಾ ಮಿರಿ ಮಿರಿ ಮಿಂಚಿದ್ದರು. ಇದೀಗ ಮತ್ತಷ್ಟು ಫೋಟೋಗಳನ್ನು ಸಾನ್ಯಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

    ಇತ್ತೀಚೆಗಷ್ಟೇ ಬಾಲಿವುಡ್ ನಲ್ಲಿ ಪ್ರಾಜೆಕ್ಟ್ ಮಾಡುತ್ತಿರುವುದಾಗಿ ಹೇಳಿಕೊಂಡಿರುವ ಅವರು ಆ ಪ್ರಾಜೆಕ್ಟ್ ಗಾಗಿಯೇ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ಹಂಚಿಕೊಂಡಿರುವ ಫೋಟೋಗಳು ಸಖತ್ ಹಾಟ್ ಅಂಡ್ ಬೋಲ್ಡ್ ಆಗಿವೆ. ಈ ಫೋಟೋಗಳಿಗೆ ಅನೇಕರು ಸಖತ್ ಸೆಕ್ಸಿ ಎಂದು ಕಾಮೆಂಟ್ ಮಾಡಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಇಂದು ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ.

    ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.

    ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.

    ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.

    ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್‌ ಹರಿದು ಬಂದಿತ್ತು.

    ಅಮ್ಮನ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರನ್ನು ಚಳಿಬಿಡಿಸಿದ್ದರು ಸಾನ್ಯಾ. ನನ್ನ ತಾಯಿ ನನಗೆ ಹೆಮ್ಮೆ. ಮಾತನಾಡಲು ನೀವ್ಯಾರು? ಒಂದು ಸಲ ನಿಮ್ಮ ತಾಯಿಯನ್ನು ಪ್ರೀತಿಸಿ ನೋಡಿ, ಆಗ ಇಂತಹ ಕಾಮೆಂಟ್ ಗಳು ಬರಲಾರವು ಎಂದಿದ್ದರು. ಈ ಮೂಲಕ ತಾಯಿಯ ಬಗೆಗಿನ ಅಭಿಮಾನವನ್ನು ಮೆರೆದಿದ್ದರು.

  • ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಕ್ಯಾಮೆರಾದಲ್ಲಿ ಕಂಡಂತೆ ಸಾನ್ಯಾ ಅಯ್ಯರ್

    ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಕ್ಯಾಮೆರಾದಲ್ಲಿ ಕಂಡಂತೆ ಸಾನ್ಯಾ ಅಯ್ಯರ್

    ಕಿರುತೆರೆಯ ಮುದ್ದಾದ ಗೊಂಬೆ ಎಂದೇ ಖ್ಯಾತರಾಗಿರುವ ಸಾನ್ಯಾ ಅಯ್ಯರ್ (Sanya Iyer), ಇತ್ತೀಚೆಗಷ್ಟೇ ಬಾಲಿವುಡ್ ನಲ್ಲಿ ಪ್ರಾಜೆಕ್ಟ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಮುಂಬೈನಲ್ಲಿ ಅದರ ಶೂಟಿಂಗ್ ಇರಲಿದೆ ಎಂದೂ ಹಂಚಿಕೊಂಡಿದ್ದರು. ಈ ಖುಷಿಯಲ್ಲೇ ಅವರು ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದಾರೆ. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಇಂದು ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದಾರೆ.

    ಕೆಲವು ಘಟನೆಗಳ ನಂತರ ಸಾನ್ಯಾ ತಮ್ಮ ಬದುಕನ್ನು ನಾಜೂಕಾಗಿ ಕಟ್ಟಿಕೊಳ್ಳುತ್ತಿದ್ದಾರೆ. ಅಲ್ಲದೇ ಗ್ಲಾಮರ್ ಬಗ್ಗೆಯೂ ಅವರು ಕಾಳಜಿ ತಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಅವರು ಮಾತನಾಡಿ, ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದಿದ್ದರು.

    ಈಗಾಗಲೇ ಜೀವನಲ್ಲಿ ಒಂದು ಲವ್ ಫೆಲ್ಯೂವರ್ ಕಂಡಿರುವ ಪುಟ್ಟಗೌರಿ ಖ್ಯಾತಿಯ ಸಾನ್ಯಾ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Rupesh Shetty) ನಡುವೆ ಏನೋ ನಡೀತಾ ಇದೆ ಎನ್ನುವುದು ಬಿಗ್ ಬಾಸ್ ಮನೆಯಲ್ಲಿದ್ದವರ ಗುಮಾನಿಯಾಗಿತ್ತು. ಅದಕ್ಕೆ ಪುಷ್ಠಿ ಎನ್ನುವಂತೆ ಈ ಜೋಡಿ ಸದಾ ಜೊತೆಯಾಗಿಯೇ ಕ್ಯಾಮೆರಾ ಮುಂದೆ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ.

    ರೂಪೇಶ್ ಮತ್ತು ತಮ್ಮ ನಡುವೆ ಅಂಥದ್ದೂ ಏನೂ ಇಲ್ಲ, ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಏನೇ ಪ್ರಯತ್ನಿಸಿದರೂ, ಅವರುಗಳ ನಡೆ ಮಾತ್ರ ಹಲವು ಅನುಮಾನಗಳನ್ನು ಬಿತ್ತಿದೆ. ಬಿಗ್ ಬಾಸ್ ಮನೆಯಿಂದ ಆಚೆ ಬಂದ ಮೇಲೂ ಸಾನ್ಯಾ ಮತ್ತು ರೂಪೇಶ್ ಹಲವಾರು ಬಾರಿ ಭೇಟಿ ಮಾಡಿದ್ದಾರೆ. ಹಾಗಾಗಿ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನುವ ವಿಚಾರ ಹಾಗೆಯೇ ಜನರ ಮನಸ್ಸಿನಲ್ಲಿ ಉಳಿದಿದೆ.

    ತಮ್ಮ ತಾಯಿಯನ್ನು ಅಭಿಮಾನದಿಂದ ಕಾಣುವ ಸಾನ್ಯಾ. ಅವರ ತಾಯಿಯ ಬಗ್ಗೆ ಯಾರೇ ಕೆಟ್ಟ ಕಾಮೆಂಟ್ ಮಾಡಿದರೂ ಸಹಿಸುವುದಿಲ್ಲ. ಇತ್ತೀಚಿಗೆ ದೀಪಾ ಅಯ್ಯರ್ ಅವರ (Deepa Iyer) ಹುಟ್ಟುಹಬ್ಬವಿತ್ತು. ಹಾಗಾಗಿ ಸಾನ್ಯ ಅಮ್ಮನಿಗೆ ಸರ್ಪ್ರೈಸ್ ಉಡುಗೊರೆ ನೀಡಿದ್ದರು. ದೊಡ್ಡ ಹೊಟೇಲಿಗೆ ಕರೆದೊಯ್ದು ಕೇಕ್ ಆರ್ಡರ್ ಮಾಡಿ ಅಮ್ಮನಿಂದ ಕಟ್ ಮಾಡಿಸಿದ್ದರು. ಈ ಖುಷಿಯ ಸನ್ನಿವೇಶವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋ ಶೇರ್ ಆಗ್ತಿದಂತೆ ದೀಪಾ ಅವರ ಡ್ರೆಸ್‌ಗೆ ನೆಗೆಟಿವ್ ಕಾಮೆಂಟ್‌ ಹರಿದು ಬಂದಿತ್ತು.

    ಅಮ್ಮನ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರನ್ನು ಚಳಿಬಿಡಿಸಿದ್ದರು ಸಾನ್ಯಾ. ನನ್ನ ತಾಯಿ ನನಗೆ ಹೆಮ್ಮೆ. ಮಾತನಾಡಲು ನೀವ್ಯಾರು? ಒಂದು ಸಲ ನಿಮ್ಮ ತಾಯಿಯನ್ನು ಪ್ರೀತಿಸಿ ನೋಡಿ, ಆಗ ಇಂತಹ ಕಾಮೆಂಟ್ ಗಳು ಬರಲಾರವು ಎಂದಿದ್ದರು. ಈ ಮೂಲಕ ತಾಯಿಯ ಬಗೆಗಿನ ಅಭಿಮಾನವನ್ನು ಮೆರೆದಿದ್ದರು.

  • ಸಾನ್ಯ ಅಯ್ಯರ್ ಮನೆಗೆ ಬಂದ ‘ಬಿಗ್ ಬಾಸ್’ ವಿನ್ನರ್ ರೂಪೇಶ್ ಶೆಟ್ಟಿ

    ಸಾನ್ಯ ಅಯ್ಯರ್ ಮನೆಗೆ ಬಂದ ‘ಬಿಗ್ ಬಾಸ್’ ವಿನ್ನರ್ ರೂಪೇಶ್ ಶೆಟ್ಟಿ

    ಬಿಗ್ ಬಾಸ್ ಮನೆಯ (Bigg Boss House) ಪ್ರೇಮ ಪಕ್ಷಿಗಳು ರೂಪೇಶ್ ಶೆಟ್ಟಿ – ಸಾನ್ಯ ಅಯ್ಯರ್ (Sanya Iyer) ಮತ್ತೆ ಸುದ್ದಿಯಲ್ಲಿದ್ದಾರೆ. ಬಹುದಿನಗಳ ಬಳಿಕ ಸಾನ್ಯ ಮನೆಗೆ ರೂಪೇಶ್ ಶೆಟ್ಟಿ (Roopesh Shetty) ಭೇಟಿ ನೀಡಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

    ದೊಡ್ಮನೆಯಲ್ಲಿ ಸಾನ್ಯ- ರೂಪೇಶ್ ಲವ್ವಿ ಡವ್ವಿ ಮೋಡಿ ಮಾಡಿತ್ತು. ಬಿಗ್ ಬಾಸ್‌ನಲ್ಲಿ ಪರಿಚಿತರಾದ ಈ ಜೋಡಿ, ಶೋ ಮುಗಿದ ಮೇಲೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಒಬ್ಬರ ಕೆಲಸಕ್ಕೆ ಮತ್ತೊಬ್ಬರು ಸಾಥ್ ನೀಡುತ್ತಾರೆ. ಸಿನಿಮಾಗಳಿಗೆ ಬೆಂಬಲಿಸುತ್ತಾರೆ.

    ಬಿಗ್ ಬಾಸ್ ಮನೆ ಅಂಗಳದಲ್ಲಿ ಲವ್ ಬರ್ಡ್ಸ್ ಆಗಿ ಮಿಂಚಿದ್ದ ಸಾನು- ರೂಪು ಜೋಡಿ ಮತ್ತೆ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಸಾನ್ಯ ಮನೆಗೆ ರೂಪೇಶ್ ಶೆಟ್ಟಿ ಭೇಟಿ ಕೊಟ್ಟು ಕೆಲ ಸಮಯ ಕಳೆದಿದ್ದಾರೆ. ಸಾನ್ಯ ತಾಯಿ ಮತ್ತು ಕುಟುಂಬದವರನ್ನು (Family) ಮೀಟ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗ್ತಿದ್ದಂತೆ ಮದುವೆ (Wedding) ಮಾತುಕತೆ ನಾ ಎಂದು ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ರೂಪೇಶ್ ಶೆಟ್ಟಿ ಕನ್ನಡ ಮತ್ತು ತುಳು ಸಿನಿಮಾಗಳಲ್ಲಿ ಆಕ್ಟೀವ್ ಆಗಿದ್ದಾರೆ. ಕ್ರಿಡೆಗೆ ಕುರಿತಂತೆ ಖಾಸಗಿ ವಾಹಿನಿಯಲ್ಲಿ ಕ್ರಿಕೆಟ್ ಬಗ್ಗೆ ನಿರೂಪಣೆ ಮಾಡ್ತಿದ್ದಾರೆ. ಈ ಮೂಲಕ ಕಿರುತೆರೆಗೆ ರೂಪೇಶ್ ಎಂಟ್ರಿ ಕೊಟ್ಟಿದ್ದಾರೆ.

  • ರಮ್ಯಾಗಿಂತ ಸಾನ್ಯಗೆ ವಯಸ್ಸಾಯ್ತಾ? ಕಾಲೆಳೆದ ನೆಟ್ಟಿಗರು

    ರಮ್ಯಾಗಿಂತ ಸಾನ್ಯಗೆ ವಯಸ್ಸಾಯ್ತಾ? ಕಾಲೆಳೆದ ನೆಟ್ಟಿಗರು

    ಬಿಗ್ ಬಾಸ್ ಶೋನಿಂದ (Bigg Boss Kannada) ಗಮನ ಸೆಳೆದ ನಟಿ ಸಾನ್ಯ ಅಯ್ಯರ್ (Sanya Iyer) ಸಿನಿಮಾಗಳ ಮೂಲಕ ಸೌಂಡ್ ಮಾಡುವ ಬದಲು ಸದಾ ಒಂದಲ್ಲಾ ಒಂದು ಕಿರಿಕ್ ಮಾಡಿಕೊಳ್ಳುವ ಮೂಲಕ ಸದ್ದು ಮಾಡ್ತಿದ್ದಾರೆ. ಇದೀಗ ಕೆಸಿಸಿ ಇವೆಂಟ್‌ನಲ್ಲಿ ಸಾನ್ಯ, ನಟಿ ರಮ್ಯಾ ಅವರನ್ನ ಭೇಟಿಯಾಗಿರುವ ಫೋಟೋವನ್ನ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ನೀವೇ ವಯಸ್ಸಾದಂಗೆ ಕಾಣ್ತಿದ್ದೀರಾ ಎಂದು ನೆಟ್ಟಿಗರು ಸಾನ್ಯ ಕಾಲೆಳೆದಿದ್ದಾರೆ.

    ಮೋಹಕತಾರೆ ರಮ್ಯಾ (Actress Ramya) ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗಿದ್ದಾರೆ. ಸಿನಿಮಾ ಮತ್ತು ಕ್ರಿಕೆಟ್‌ಗೆ ಸಂಬಂಧಿಸಿದ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಆಕ್ಟೀವ್ ಆಗಿದ್ದಾರೆ. ಇದೀಗ ಕೆಸಿಸಿ (KCC) ಕ್ರಿಕೆಟ್ ಲೀಗ್‌ನಲ್ಲಿ ರಮ್ಯಾ ಸಾಥ್ ನೀಡಿದ್ದಾರೆ. ಈ ವೇಳೆ ಮೋಹಕತಾರೆ ರಮ್ಯಾ ಜೊತೆಗಿನ ಫೋಟೋವನ್ನ ನಟಿ ಸಾನ್ಯ ಅಯ್ಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರೆಡ್ ಗೌನ್ ಧರಿಸಿ ಪಡ್ಡೆಗಳ ನಿದ್ದೆಗೆಡಿಸಿದ ನವವಧು ಕಿಯಾರಾ

    ಸಾನ್ಯ ಅಯ್ಯರ್ ಜೀನ್ಸ್ ಮತ್ತು ಬಿಳಿ ಬಣ್ಣದ ಟಾಪ್ ಧರಿಸಿದ್ದರೆ, ರಮ್ಯಾ ಅವರು ಬ್ಲ್ಯಾಕ್ ಡ್ರೆಸ್ ಮೇಲೆ ವೈಟ್ ಬ್ಲೇಝರ್ ಧರಿಸಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಕಂಬಳದ (Kambala) ಕಿರಿಕ್ ನಂತರ ಮತ್ತೆ ಸಾನ್ಯ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದ್ದಾರೆ. ರಮ್ಯಾ ಜೊತೆಗಿನ ಫೋಟೋವನ್ನ ಸಾನ್ಯ ಶೇರ್ ಮಾಡ್ತಿದ್ದಂತೆ ನಿಮಗೆ 21, ರಮ್ಯಾಗೆ 40, ನಿಮಗಿಂತ ಅವರಿಗೆ ಡಬಲ್ ವಯಸ್ಸಾಗಿದೆ. ಆದರೆ ನೀವೇ ವಯಸ್ಸಾಗಿರುವ ಹಾಗೇ ಕಾಣುತ್ತೀರಾ ಎಂದು ನೆಟ್ಟಿಗರು ಸಾನ್ಯ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ರಮ್ಯಾ ಅವರ ಸೌಂದರ್ಯವನ್ನ ನೆಟ್ಟಿಗರು ಹಾಡಿ ಹೊಗಳಿದ್ದಾರೆ.

  • ಪುತ್ತೂರು ಕಂಬಳದಲ್ಲಿ ಕಿರಿಕ್ – ಸಮಸ್ಯೆ ಪರಿಹಾರಕ್ಕೆ ದೇವರ ಮೊರೆಹೋದ ಕಂಬಳ ಸಮಿತಿ

    ಪುತ್ತೂರು ಕಂಬಳದಲ್ಲಿ ಕಿರಿಕ್ – ಸಮಸ್ಯೆ ಪರಿಹಾರಕ್ಕೆ ದೇವರ ಮೊರೆಹೋದ ಕಂಬಳ ಸಮಿತಿ

    ಮಂಗಳೂರು: ಪುತ್ತೂರಿನಲ್ಲಿ (Puttur) ನಡೆದ ಕಂಬಳದ ವೇಳೆ ಬಿಗ್‌ಬಾಸ್ (Bigg Boss Kannada) ಖ್ಯಾತಿಯ ಸಾನ್ಯ ಅಯ್ಯರ್ ಅವರೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದ ಘಟನೆ ಬೆಳಕಿಗೆ ಬಂದಿದ್ದು, ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಪುತ್ತೂರು ಕೋಟಿ-ಚೆನ್ನಯ ಜೋಡುಕೆರೆ ಕಂಬಳ (Kambala) ಸಮಿತಿ ದೇವರ ಮೊರೆ ಹೋಗಿದೆ. ಅಪಸ್ವರ ಮಾಡಿದವರಿಗೆ ದೇವರೇ ತಕ್ಕ ಬುದ್ಧಿ ಕಲಿಸಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ.

    ಪುತ್ತೂರು ಕಂಬಳದಲ್ಲಿ ಬಿಗ್‌ಬಾಸ್ ಖ್ಯಾತಿಯ ಸಾನ್ಯ ಅಯ್ಯರ್ (Sanya Iyer) ಕಿರಿಕ್ ವಿಚಾರವಾಗಿ ಪರಿಹಾರ ಕಂಡುಕೊಳ್ಳಲು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕದಶರುದ್ರ ಸೇವೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದೆ. ಇದನ್ನೂ ಓದಿ: ನಾನು ರುದ್ರಾಕ್ಷಿ ಧರಿಸಿದ್ದೇನೆ, ಮದ್ಯಪಾನ ಮಾಡಲ್ಲ : ನಟಿ ಸಾನ್ಯಾ ಅಯ್ಯರ್

    ಈ ವೇಳೆ ಕಂಬಳದಲ್ಲಿ ನಡೆದ ಘಟನೆಗೂ ಕಂಬಳ (Kambala) ಸಮಿತಿಗೂ ಸಂಬಂಧವಿಲ್ಲ. ಅತಿಥಿಯಾಗಿ ಬಂದವರನ್ನ ಊಟ ಮಾಡಿಸಿ, ಸುರಕ್ಷಿತವಾಗಿ ಕಳುಹಿಸಿ, ಬಿಟ್ಟು ಬಂದಿದ್ದೇವೆ. ಆ ಬಳಿಕ ಏನಾಗಿದೆ ಅನ್ನೋದು ಮರುದಿನ ನಮಗೆ ತಿಳಿದುಬಂದಿದೆ. ಪುತ್ತೂರಿನ ದೇವರಮಾರು ಗದ್ದೆಯಲ್ಲಿ ಜಗಳ ಅಥವಾ ಅಸಭ್ಯವಾಗಿ ವರ್ತಿಸಿದರೆ ಅವರಿಗೆ ಕ್ಷೇಮವಿಲ್ಲ. ಮಹಾಲಿಂಗೇಶ್ವರ ದೇವರ ಕಾರಣಿಕ ಎಲ್ಲಾ ಜನರಿಗೂ ಗೊತ್ತಿದೆ. ಈ ಘಟನೆಗೆ ಕಂಬಳ ಸಮಿತಿಯನ್ನು ಹೊಣೆ ಮಾಡಿದವರಿಗೆ ದೇವರೇ ಬುದ್ದಿ ಕಲಿಸಲಿ ಎಂದು ಮಹಾಲಿಂಗೇಶ್ವರ ದೇವರ ಮುಂದೆ ಕಂಬಳ ಸಮಿತಿ ಪ್ರಾರ್ಥನೆ ಸಲ್ಲಿಸಿದೆ.

    ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ಅನೇಕರು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅವನು ನನಗೆ ಹೊಡೆಯಲಿಲ್ಲ, ನಾನು ಅವನಿಗೆ ಹೊಡೆಯಲಿಲ್ಲ : ನಟಿ ಸಾನ್ಯಾ ಅಯ್ಯರ್

    ಏನಿದು ಘಟನೆ?
    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ದೇವಮಾರು ಗದ್ದೆಯಲ್ಲಿ ಇತ್ತೀಚೆಗೆ ಕಂಬಳ ನಡೆದಿತ್ತು. ಈ ವೇಳೆ ಕಂಬಳಕ್ಕೆ ಅತಿಥಿಯಾಗಿ ಬಂದಿದ್ದರು. ಮಧ್ಯರಾತ್ರಿ ಮತ್ತೆ ಸಾನ್ಯ ಸ್ನೇಹಿತರೊಡನೆ ಕಂಬಳಕ್ಕೆ ಆಗಮಿಸಿದ್ದರು. ಈ ವೇಳೆ ಯುವಕನೊಬ್ಬ ಕೈಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಸಾನ್ಯ ಹಾಗೂ ಅವರ ಸ್ನೇಹಿತೆಯರು ಪ್ರಶ್ನೆ ಮಾಡಿದ್ದರು. ಬಳಿಕ ಕಂಬಳ ಆಯೋಜಕರನ್ನು ತರಾಟೆ ತೆಗೆದುಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾನ್ಯಾ ಅಯ್ಯರ್ ವಿವಾದ : ಕಂಬಳ ಸಮಿತಿಯಿಂದ ದೇವರ ಬಳಿ ದೂರು

    ಸಾನ್ಯಾ ಅಯ್ಯರ್ ವಿವಾದ : ಕಂಬಳ ಸಮಿತಿಯಿಂದ ದೇವರ ಬಳಿ ದೂರು

    ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ (Sanya Iyer) ಇತ್ತೀಚೆಗಷ್ಟೇ ಪುತ್ತೂರಿನಲ್ಲಿ (Puttur) ನಡೆದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ (Kambala) ಅತಿಥಿಯಾಗಿ ಭಾಗಿಯಾಗಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ತಮಗೆ ತೊಂದರೆ ನೀಡಿದ ಎನ್ನುವ ಕಾರಣಕ್ಕಾಗಿ ಆಯೋಜಕರ ಮೇಲೆ ಗರಂ ಆಗಿದ್ದರು. ಸಾನ್ಯಾ ಮತ್ತು ಸ್ನೇಹಿತರು ಆಯೋಜಕರನ್ನು ತರಾಟೆಗೆ ತಗೆದುಕೊಂಡ ವಿಡಿಯೋ ಸಖತ್ ವೈರಲ್ ಕೂಡ ಆಗಿತ್ತು. ಇದೊಂದು ದೊಡ್ಡ ವಿವಾದವಾಗಿಯೇ ಮಾರ್ಪಟ್ಟಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕಂಬಳ ಸಮಿತಿ ದೇವರ ಬಳಿ ದೂರು ನೀಡಿದೆ.

    ಪುತ್ತೂರಿನ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ ಸಾನ್ಯಾ ಅತಿಥಿಯಾಗಿ ಬಂದು, ತುಳು ನಾಡಿನ ಬಗ್ಗೆ ಮೆಚ್ಚಿ ಮಾತನಾಡಿದ್ದರು. ಐ ಲವ್ ಯೂ ಪುತ್ತೂರು ಎಂದು ಹೇಳುವ ಮೂಲಕ ಅಲ್ಲಿನ ಜನರ ಪ್ರೀತಿಗೆ ಪಾತ್ರರಾಗಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಹೊರಟು ಹೋಗಿದ್ದರು. ಆದರೆ, ಮತ್ತೆ ಅವರು ಕಂಬಳ ನೋಡುವುದಕ್ಕಾಗಿ ಸ್ನೇಹಿತೆಯರ ಜೊತೆ ವಾಪಸ್ಸಾಗಿದ್ದಾರೆ. ಆ ವೇಳೆಯಲ್ಲಿ ಹುಡುಗನೊಬ್ಬ ಸಾನ್ಯಾ ಅಯ್ಯರ್ ಜೊತೆ ಸೆಲ್ಫಿ ತಗೆದುಕೊಳ್ಳುವ ನೆಪದಲ್ಲಿ ಕೈ ಹಿಡಿದು ಎಳೆದ ಎಂದು ಹೇಳಲಾಗುತ್ತಿದೆ. ಈ ವಿಚಾರ ಕಂಬಳ ಸಮಿತಿಯ ಗಮನಕ್ಕೆ ಬಂದಿಲ್ಲ ಎನ್ನುತ್ತಾರೆ ಕಂಬಳ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ (Shakuntala Shetty). ಇದನ್ನೂ ಓದಿ: ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

    ಸುಖಾಸುಮ್ಮನೆ ಕಂಬಳ ಸಮಿತಿಯನ್ನು ಗುರಿ ಮಾಡುತ್ತಿರುವುದು ತಮಗೆ ಬೇಸರ ತಂದಿದೆ ಎನ್ನುವ ಶೆಟ್ಟಿ, ಕಂಬಳ ಸಮಿತಿಯನ್ನು ಕೆಟ್ಟ ಶಬ್ದಗಳಿಂದ ನಿಂದಿಸಲಾಗುತ್ತಿದೆ. ಹಾಗಾಗಿ ನಿಂದಿಸಿದವರನ್ನು ನೀನೇ ನೋಡಿಕೋ ದೇವಾ ಎಂದು ಮಹಾಲಿಂಗೇಶ್ವರನ ಬಳಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ. ಯಾರೋ ಅಸಭ್ಯವಾಗಿ ವರ್ತಿಸಿದ್ದಾರೆಂದು ಇನ್ನ್ಯಾರನ್ನೋ ಗುರಿ ಮಾಡುವುದು ತಪ್ಪು. ಈ ಕಾರಣಕ್ಕಾಗಿಯೇ ತಾವು ದೇವರ ಬಳಿ ನ್ಯಾಯ ಕೇಳಲು ಬಂದಿದ್ದೇವೆ ಎಂದಿದ್ದಾರೆ.

    ಈ ವಿಷಯದಲ್ಲಿ ತಾವು ಸಾನ್ಯಾ ಪರವಾಗಿ ನಿಲ್ಲುತ್ತೇವೆ ಎನ್ನುವ ಕಂಬಳ ಸಮಿತಿ, ಆ ನಟಿ ಪೊಲೀಸರಿಗೆ ದೂರು ನೀಡಲಿ. ಆಕೆಗೆ ಬೇಕಿರುವ ಎಲ್ಲಾ ಸಹಾಯವನ್ನು ಸಮಿತಿ ಮಾಡುತ್ತದೆ ಎಂದೂ ಅವರು ಹೇಳಿದ್ದಾರೆ. ಕೆಲವು ಶಕ್ತಿಗಳು ಈ ಪ್ರಕರಣಕ್ಕೆ ಹಿಂದೂ, ಮುಸ್ಲಿಂ ರೂಪವನ್ನು ನೀಡಲಾಗುತ್ತಿರುವುದಕ್ಕೆ ಬೇಸರವನ್ನೂ ಅವರು ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾನು ರುದ್ರಾಕ್ಷಿ ಧರಿಸಿದ್ದೇನೆ, ಮದ್ಯಪಾನ ಮಾಡಲ್ಲ : ನಟಿ ಸಾನ್ಯಾ ಅಯ್ಯರ್

    ನಾನು ರುದ್ರಾಕ್ಷಿ ಧರಿಸಿದ್ದೇನೆ, ಮದ್ಯಪಾನ ಮಾಡಲ್ಲ : ನಟಿ ಸಾನ್ಯಾ ಅಯ್ಯರ್

    ಪುತ್ತೂರಿನ (Puttur) ಕಂಬಳದಲ್ಲಿ (Kambala) ನಡೆದ ಘಟನೆಗೆ ಸಂಬಂಧಪಟ್ಟಂತೆ ಕಿರುತೆರೆ ನಟಿ ಸಾನ್ಯಾ ಅಯ್ಯರ್ (Sanya Iyer) ಮೇಲೆ ದಿನಕ್ಕೊಂದು ಆರೋಪ ಕೇಳಿ ಬಂದಿದ್ದವು. ಅದಕ್ಕೆ ಸಂಬಂಧಪಟ್ಟಂತೆ ಸ್ವತಃ ಸಾನ್ಯಾ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತುರ್ತು ಪತ್ರಿಕಾಗೋಷ್ಠಿ ಕರೆದಿದ್ದ ಅವರು ತಮ್ಮ ಮೇಲಿನ ಆರೋಪಗಳಿಗೆ ಉತ್ತರಿಸಿದ್ದಾರೆ. ಕಂಬಳದ ವೇದಿಕೆಯಲ್ಲೇ ಅವರ ಮೇಲೆ ಹಲ್ಲೆ ಆಯಿತು ಎನ್ನುವುದರ ಜೊತೆಗೆ ಸಾನ್ಯಾ ಮದ್ಯಪಾನ ಮಾಡಿಕೊಂಡು ಬಂದಿದ್ದರು ಎಂದೂ ಹೇಳಲಾಗಿತ್ತು. ಈ ಕುರಿತು ಅವರು ಮಾತನಾಡಿದ್ದಾರೆ.

    ‘ಕಂಬಳದಲ್ಲಿ ನಾನು ಕುಡಿದುಕೊಂಡು ಬಂದಿದ್ದೆ ಎಂದು ಹೇಳಲಾಗುತ್ತಿದೆ. ಆದರೆ, ಅದು ಸುಳ್ಳು. ನಾನು ಜೀರೋ ಶುಗರ್ ಡಯೆಟ್ ಮಾಡುತ್ತಿದ್ದೇನೆ. ಮುಂಬೈನಲ್ಲಿ ಶೂಟಿಂಗ್ ಇರುವ ಕಾರಣಕ್ಕಾಗಿ ಇದೆಲ್ಲವನ್ನೂ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ಜೊತೆಗೆ ನಾನು ರುದ್ರಾಕ್ಷಿಯನ್ನು ಧರಿಸಿದ್ದೇನೆ. ಇದನ್ನು ಧರಿಸಿದಾಗ ಮದ್ಯಪಾನ, ಧೂಮಪಾನ ಮಾಡಲ್ಲ. ಸುಮ್ಮನೆ ನನ್ನ ಮೇಲೆ ಆಪಾದನೆ ಹೊರಿಸಲಾಗುತ್ತಿದೆ’ ಎಂದರು ಸಾನ್ಯ. ಇದನ್ನೂ ಓದಿ: ಜೀನ್ಸ್ ಪ್ಯಾಂಟನ್ನೇ ಟಾಪ್ ಮಾಡಿಕೊಂಡ ಉರ್ಫಿ ಜಾವೇದ್ ಕಾಲೆಳೆದ ನೆಟ್ಟಿಗರು

    ಪುತ್ತೂರಿನಲ್ಲಿ ನಡೆದ ಕಂಬಳಕ್ಕೆ ನಾನು ಅತಿಥಿಯಾಗಿ ಹೋಗಿದ್ದೆ. ಅವತ್ತು ಕಂಬಳವನ್ನು ಸರಿಯಾಗಿ ನೋಡಲು ಆಗದೇ ಇರುವ ಕಾರಣಕ್ಕಾಗಿ ಮತ್ತೆ ಸ್ನೇಹಿತೆಯರ ಜೊತೆ ಹೋದೆ. ಆಗ ಒಬ್ಬ ಹುಡುಗ ನನ್ನ ಫ್ರೆಂಡ್ಸ್ ಕೈ ಹಿಡಿದು ಎಳೆದ. ಭಯ ಆಯಿತು. ಆನಂತರ ಇದನ್ನು ಆಯೋಜಕರ ಗಮನಕ್ಕೆ ತಂದೆವು. ಆ ಹುಡುಗ ನಂತರ ಎಲ್ಲಿಗೆ ಹೋದ? ಏನಾದ ಎನ್ನುವ ವಿಚಾರ ಗೊತ್ತಿಲ್ಲ. ಆದರೆ, ಸುದ್ದಿ ಆದಂತೆ ಅವನ ಕಪಾಳಕ್ಕೆ ನಾನು ಹೊಡೆಯಲಿಲ್ಲ, ನನಗೂ ಅವನು ಹೊಡೆಯಲಿಲ್ಲ ಎಂದು ಸಾನ್ಯ ಮಾತನಾಡಿದ್ದಾರೆ.

    ತಮ್ಮ ಕಪಾಳಕ್ಕೆ ಆ ಹುಡುಗ ಹೊಡೆದಿದ್ದಾನೆ ಎನ್ನುವ ಸುದ್ದಿ ಹೇಗೆ ಹಬ್ಬಿತೋ ಗೊತ್ತಿಲ್ಲ ಎನ್ನುವ ಸಾನ್ಯಾ, ಅಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲವೆಂದು ಹೇಳಿದ್ದಾರೆ. ಆದರೆ, ಕಳೆದ ಎರಡು ದಿನಗಳಿಂದ ಈ ಘಟನೆಯ ಕುರಿತು ಬೇರೆಯೇ ಸುದ್ದಿ ಹಬ್ಬಿತ್ತು. ಮದ್ಯ ಸೇವಿಸಿದ್ದ ಯುವಕನೊಬ್ಬ ಸಾನ್ಯಾ ಜೊತೆ ಸೆಲ್ಫಿ ತಗೆದುಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿದ. ಅವನ ಮೇಲೆ ಸಾನ್ಯಾ ಕೈ ಮಾಡಿದರು. ಅವನೂ ಹೊಡೆದ. ನಂತರ ಅಲ್ಲಿದ್ದವರು ಆ ಹುಡುಗನನ್ನು ಥಳಿಸಿದರು ಎನ್ನುವುದು ವರದಿಯಾಗಿತ್ತು. ಇದೀಗ ಅಂಥದ್ದು ಏನೂ ಆಗಿಲ್ಲ ಎಂದಿದ್ದಾರೆ ಸಾನ್ಯ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅವನು ನನಗೆ ಹೊಡೆಯಲಿಲ್ಲ, ನಾನು ಅವನಿಗೆ ಹೊಡೆಯಲಿಲ್ಲ : ನಟಿ ಸಾನ್ಯಾ ಅಯ್ಯರ್

    ಅವನು ನನಗೆ ಹೊಡೆಯಲಿಲ್ಲ, ನಾನು ಅವನಿಗೆ ಹೊಡೆಯಲಿಲ್ಲ : ನಟಿ ಸಾನ್ಯಾ ಅಯ್ಯರ್

    ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ (Sanya Iyer) ಮೇಲೆ ಪುತ್ತೂರಿನಲ್ಲಿ (Puttur) ಹಲ್ಲೆ ಆಗಿದೆ ಎನ್ನುವ ವಿಚಾರ ಕಳೆದ ಎರಡು ದಿನಗಳಿಂದ ಭಾರೀ ಸದ್ದು ಮಾಡಿತ್ತು. ವೇದಿಕೆಯ ಮೇಲೆ ಸಾನ್ಯಾ ಮತ್ತು ಗೆಳೆತಿಯರು ಆಯೋಜಕರ ಜೊತೆ ಗಲಾಟೆ ಮಾಡುವ ವಿಡಿಯೋ ಕೂಡ ವೈರಲ್ ಆಗಿತ್ತು. ಈ ಕುರಿತು ಸಾನ್ಯಾ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು ಕಪಾಳಮೋಕ್ಷ ಮಾಡುವಂಥದ್ದು ಏನೂ ನಡೆದೇ ಇಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

    ಪುತ್ತೂರಿನಲ್ಲಿ ನಡೆದ ಕಂಬಳಕ್ಕೆ (Kambala) ನಾನು ಅತಿಥಿಯಾಗಿ ಹೋಗಿದ್ದೆ. ಅವತ್ತು ಕಂಬಳವನ್ನು ಸರಿಯಾಗಿ ನೋಡಲು ಆಗದೇ ಇರುವ ಕಾರಣಕ್ಕಾಗಿ ಮತ್ತೆ ಸ್ನೇಹಿತೆಯರ ಜೊತೆ ಹೋದೆ. ಆಗ ಒಬ್ಬ ಹುಡುಗ ನನ್ನ ಫ್ರೆಂಡ್ಸ್ ಕೈ ಹಿಡಿದು ಎಳೆದ. ಭಯ ಆಯಿತು. ಆನಂತರ ಇದನ್ನು ಆಯೋಜಕರ ಗಮನಕ್ಕೆ ತಂದೆವು. ಆ ಹುಡುಗ ನಂತರ ಎಲ್ಲಿಗೆ ಹೋದ? ಏನಾದ ಎನ್ನುವ ವಿಚಾರ ಗೊತ್ತಿಲ್ಲ. ಆದರೆ, ಸುದ್ದಿ ಆದಂತೆ ಅವನ ಕಪಾಳಕ್ಕೆ ನಾನು ಹೊಡೆಯಲಿಲ್ಲ, ನನಗೂ ಅವನು ಹೊಡೆಯಲಿಲ್ಲ ಎಂದು ಸಾನ್ಯಾ ಮಾತನಾಡಿದ್ದಾರೆ. ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

    ತಮ್ಮ ಕಪಾಳಕ್ಕೆ ಆ ಹುಡುಗ ಹೊಡೆದಿದ್ದಾನೆ ಎನ್ನುವ ಸುದ್ದಿ ಹೇಗೆ ಹಬ್ಬಿತೋ ಗೊತ್ತಿಲ್ಲ ಎನ್ನುವ ಸಾನ್ಯಾ, ಅಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲವೆಂದು ಹೇಳಿದ್ದಾರೆ. ಆದರೆ, ಕಳೆದ ಎರಡು ದಿನಗಳಿಂದ ಈ ಘಟನೆಯ ಕುರಿತು ಬೇರೆಯೇ ಸುದ್ದಿ ಹಬ್ಬಿತ್ತು. ಮದ್ಯ ಸೇವಿಸಿದ್ದ ಯುವಕನೊಬ್ಬ ಸಾನ್ಯಾ ಜೊತೆ ಸೆಲ್ಫಿ ತಗೆದುಕೊಳ್ಳುವ ವಿಚಾರಕ್ಕೆ ಗಲಾಟೆ ಮಾಡಿದ. ಅವನ ಮೇಲೆ ಸಾನ್ಯಾ ಕೈ ಮಾಡಿದರು. ಅವನೂ ಹೊಡೆದ. ನಂತರ ಅಲ್ಲಿದ್ದವರು ಆ ಹುಡುಗನನ್ನು ಥಳಿಸಿದರು ಎನ್ನುವುದು ವರದಿಯಾಗಿತ್ತು. ಇದೀಗ ಅಂಥದ್ದು ಏನೂ ಆಗಿಲ್ಲ ಎಂದಿದ್ದಾರೆ ಸಾನ್ಯಾ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k