Tag: sara govindu

  • ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ: ಸಾರಾ ಗೋವಿಂದು

    ಅಣ್ಣಾವ್ರಿಗೆ ಮರು ಜೀವ ಕೊಟ್ಟಿದ್ದೇ ಎಸ್‌ಎಂ ಕೃಷ್ಣ: ಸಾರಾ ಗೋವಿಂದು

    ರನಟ ರಾಜ್‌ಕುಮಾರ್ (Rajkumar) ಅವರನ್ನು ವೀರಪ್ಪನ್  (Veerappan) ಅಪಹರಣ ಮಾಡಿ ಬರೋಬ್ಬರಿ 108 ದಿನಗಳ ಕಾಲ ಕಾಡಿನಲ್ಲಿಟ್ಟಿದ್ದನು. ಅಣ್ಣಾವ್ರರನ್ನು ಹೊರ ತರುವುದಕ್ಕೆ ಎಸ್.ಎಂ. ಕೃಷ್ಣ ದೊಡ್ಡ ಮಟ್ಟದ ಪ್ರಯತ್ನವನ್ನೇ ಮಾಡಿದರು. ಇದೀಗ ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಹಳೆಯ ದಿನಗಳನ್ನು ಸ್ಮರಿಸಿದ್ದಾರೆ. ರಾಜ್‌ಕುಮಾರ್ ಜೀವಂತವಾಗಿ ಮನೆಗೆ ಬರಲು ಎಸ್.ಎಂ. ಕೃಷ್ಣ ಕಾರಣ ಎಂದಿದ್ದಾರೆ.

    ಸಾರಾ ಗೋವಿಂದು ಮಾತನಾಡಿ, ಒಂದು ತಿಂಗಳ ಹಿಂದೆ ಎಸ್.ಎಂ. ಕೃಷ್ಣ ಅವರ ಮನೆಗೆ ಹೋಗಿದ್ದೆ, ಒಂದು ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲು ಆಗ ಅವರ ಸ್ಥಿತಿ ನೋಡಿ ಬೇಸರವಾಯಿತು. ನಾನು ಆ ದೇವರಲ್ಲಿ ಕೇಳಿಕೊಂಡಿದ್ದೆ, ದೇವರೆ ಅವರಿಗೆ ಹಿಂಸೆ ಕೊಡಬೇಡ ಆದಷ್ಟು ಬೇಗ ಕರೆದುಕೊಂಡು ಬಿಡು ಎಂದು ಕೋರಿಕೊಂಡಿದ್ದೆ ಎಂದರು. ಇಂತಹ ರಾಜಕಾರಣಿ ಸಿಗೋದು ಅಪರೂಪ. ಅವರು ತುಂಬಾ ಶಿಸ್ತು ಅನ್ನು ಪಾಲಿಸುತ್ತಿದ್ದರು. ಅದರಿಂದಲೇ ಕೇಂದ್ರದಲ್ಲಿ ವಿದೇಶಾಂಗ ಸಚಿವರಾದರು.

    ಡಾ.ರಾಜ್‌ಕುಮಾರ್‌ರನ್ನು ವೀರಪ್ಪನ್ ಅಪಹರಣ ಮಾಡಿದ ಸಂದರ್ಭದಲ್ಲಿ ಅವರು ಪಟ್ಟಂತಹ ಕಷ್ಟ ತುಂಬಾ ಹತ್ತಿರದಿಂದ ನೋಡಿದ್ದೇನೆ. ಆ ಸಂದರ್ಭದಲ್ಲಿ ಎಲ್ಲರೂ ಶಾಂತಿಯಿಂದ ಇದ್ರೆ ಅಣ್ಣಾವ್ರು ವಾಪಸ್ ಬರುತ್ತಾರೆ ಎಂದು ಪಾರ್ವತಮ್ಮ ಹೇಳಿದ್ದರು. ಎಸ್.ಎಂ. ಕೃಷ್ಣ ಅವರು ಅಂದು ಸಿಎಂ ಆಗಿದ್ದಕ್ಕೆನೇ ರಾಜ್‌ಕುಮಾರ್ ಅವರು ಜೀವಂತ ಮನೆಗೆ ಬಂದರು. ರಾಜ್‌ಕುಮಾರ್‌ಗೆ ಮರುಜೀವ ತಂದು ಕೊಟ್ಟಿದ್ದು ಎಸ್.ಎಂ. ಕೃಷ್ಣ ಎಂದು ಸ್ಮರಿಸಿದರು.

    ಇಂತಹ ವ್ಯಕ್ತಿಯನ್ನು ರಾಜಕಾರಣದಲ್ಲಿ ಮತ್ತೆ ನೋಡೋಕೆ ಆಗಲ್ಲ. ಅಂದು ಅಪಹರಣದಿಂದ ಮುಕ್ತರಾದ್ಮೇಲೆ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಅಣ್ಣಾವ್ರಿಗೆ ಅಭಿನಂದನಾ ಕಾರ್ಯಕ್ರಮ ಇಟ್ಟುಕೊಂಡಿದ್ದೇವು. ಆ ಸಂದರ್ಭದಲ್ಲಿ ಎಸ್.ಎಂ ಕೃಷ್ಣಗೆ ಆಹ್ವಾನ ನೀಡಿದ್ದೇವು. ಅಂದು ಅವರ ಮನಸ್ಸಿಗೆ ಏನೋ ಬೇಸರ ಆಗಿತ್ತು ಅಂತ ಕಾಣುತ್ತೆ ಅವರು ಬರಲ್ಲ ಅಂದ್ರು. ನೀವು ಬರಲಿಲ್ಲ ಅಂದರೆ ಕಾರ್ಯಕ್ರಮ ರದ್ದು ಮಾಡುತ್ತೇವೆ ಎಂದು ಹೇಳಿದಾಗ ನಮ್ಮ ಮಾತಿಗೆ ಸ್ಪಂದಿಸಿ ಬಂದರು. ಅಪಹರಣದ ಸಂದರ್ಭದಲ್ಲಿ ಅಣ್ಣಾವ್ರ ಮಕ್ಕಳು ಮತ್ತು ನಾವೆಲ್ಲರೂ ಎಸ್.ಎಂ. ಕೃಷ್ಣರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವು. ಅಣ್ಣಾವ್ರರನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವ ಹೊಣೆ ನಮ್ಮದು ಎಂದರು. ಅವರು ಆಡಿದ ಮಾತಿನಂತೆ ಅಣ್ಣಾವ್ರರನ್ನು ಕರೆದುಕೊಂಡು ಬಂದರು. ಎಸ್.ಎಂ. ಕೃಷ್ಣ ಅವರು ಸರಳ ವ್ಯಕ್ತಿ, ಇಂದು ಅವರು ನಮ್ಮೊಂದಿಗೆ ಇಲ್ಲದೆ ಇರೋದು ಬೇಸರವಿದೆ. ಅವರ ಆತ್ಮಕ್ಕೆ ಶಾಂತಿ ಕೊಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಸಾರಾ ಗೋವಿಂದು ಮಾತನಾಡಿದರು.

    ಇನ್ನೂ ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ (92) ಅವರು ಮಂಗಳವಾರ ಬೆಳಗ್ಗೆ 3:30ಕ್ಕೆ ವಿಧಿವಶರಾಗಿದ್ದಾರೆ.

  • ನಟ ಜೈ ಜಗದೀಶ್ ವಿರುದ್ಧ ಎಫ್‍ಐಆರ್

    ನಟ ಜೈ ಜಗದೀಶ್ ವಿರುದ್ಧ ಎಫ್‍ಐಆರ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಮತ್ತು ಚಲನಚಿತ್ರ ಕಾರ್ಮಿಕರ, ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷ ಸಾ.ರಾ.ಗೋವಿಂದು ಅವರು ನಿಂದನೆ ಆರೋಪದ ಅಡಿ ಜೈ ಜಗದೀಶ್ ವಿರುದ್ಧ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಏನಿದು ಪ್ರಕರಣ?:
    ಹೆಮ್ಮಾರಿ ಕೊರೊನಾದಿಂದಾಗಿ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ಭಾರತದಲ್ಲಿ ಲಾಕ್‍ಡೌನ್‍ನಿಂದಾಗಿ ಸಿನಿಮಾ, ಕಿರುತೆರೆ ಶೂಟಿಂಗ್ ಸೇರಿದಂತೆ ಚಿತ್ರೋದ್ಯಮದ ಚಟುವಟಿಕೆಗಳು ಸ್ತಬ್ದವಾಗಿವೆ. ಹೀಗಾಗಿ ನೂರಾರು ಕಲಾವಿದರು, ತಂತ್ರಜ್ಞರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅಂತಹವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿತ್ತು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾತೃ ಸಂಸ್ಥೆಯಾಗಿದ್ದು ನಿರ್ಮಾಪಕ, ವಿತರಕ ಹಾಗೂ ಪ್ರದರ್ಶಕ ಮೂರು ವಲಯಗಳು ಇದರಲ್ಲಿ ಒಗ್ಗೂಡಿವೆ. ಸಂಕಷ್ಟದಲ್ಲಿರುವ ಕಲಾವಿದರು, ತಂತ್ರಜ್ಞರಿಗೆ ಆಹಾರದ ಕಿಟ್ ವಿತರಿಸಲು ನಿರ್ಮಾಪಕ ಸಾ.ರಾ. ಗೋವಿಂದು, ವಾಣಿಜ್ಯ ಮಂಡಳಿಯ ಸದಸ್ಯ ಕೆ.ಎಂ. ವೀರೇಶ್ ನೇತೃತ್ವದಲ್ಲಿ ಸರ್ಕಾರದೊಂದಿಗೆ ಮಾತನಾಡಿ ಸಹಾಯಕ್ಕೆ ನಿಂತಿದ್ದರು.

    ಈ ವಿಚಾರವಾಗಿ ನಟ ನಿರ್ಮಾಪಕ ಜೈ ಜಗದೀಶ್ ಕೋಪಗೊಂಡಿದ್ದರು. “ನಿರ್ಮಾಪಕರು ಅನ್ನದಾತರು, ಸಾವಿರಾರು ಜನಕ್ಕೆ ಅನ್ನವನ್ನು ನೀಡಿದ್ದಾರೆ. ನಮಗೆ ಆಹಾರದ ಕಿಟ್ ನೀಡಿ ಅವಮಾನ ಮಾಡಬೇಡಿ” ಎಂದು ಹೇಳಿದ್ದರು. ಅಷ್ಟೇ ಅಲ್ಲದೆ ಸಾ.ರಾ.ಗೋವಿಂದು ಹಾಗೂ ಕೆ.ಎಂ.ವೀರೇಶ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ ಬೈದಿದ್ದಾರೆ. ಅವರು ಮಾತನಾಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

    ಇದರಿಂದಾಗಿ ಅಸಮಾಧಾನಗೊಂಡ ಸಾ.ರಾ.ಗೋವಿಂದು ಅವರು, ಜೈ ಜಗದೀಶ್ ಅವರು ಉದ್ದೇಶ ಪೂರ್ವಕವಾಗಿ ನನ್ನ ಬಗ್ಗೆ ತಮ್ಮ ವಾಟ್ಸಪ್ ಮೂಲಕ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಜೊತೆಗೆ ತೀರಾ ಕೆಳಮಟ್ಟದಲ್ಲಿ ಬಾಯಿಗೆ ಬಂದಂತೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ನನ್ನ ವಿರುದ್ಧ, ಸ್ನೇಹಿತರ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಬಗ್ಗೆ ಆರೋಪ ಮಾಡಿರುವ ಜೈ ಜಗದೀಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಮನವಿ ಮಾಡಿಕೊಂಡಿದ್ದರು.

  • ಕೆಲಸಕ್ಕೆ ಬರಲಿಲ್ಲ ಅಂತಾ ಡ್ರೈವರ್ ಮೇಲೆ ಹಲ್ಲೆ- ಸಾರಾ ಗೋವಿಂದು ಪುತ್ರನಿಂದ ಗೂಂಡಾಗಿರಿ

    ಕೆಲಸಕ್ಕೆ ಬರಲಿಲ್ಲ ಅಂತಾ ಡ್ರೈವರ್ ಮೇಲೆ ಹಲ್ಲೆ- ಸಾರಾ ಗೋವಿಂದು ಪುತ್ರನಿಂದ ಗೂಂಡಾಗಿರಿ

    ಬೆಂಗಳೂರು: ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದು ಪುತ್ರನಿಂದ ಗೂಂಡಾಗಿರಿ ನಡೆದಿರೋ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ಹೌದು. ಸಾರಾ ಗೋವಿಂದು ಅವರ ಪುತ್ರ ಅನೂಪ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಅನೂಪ್ ಸಾರಾ ಗೋವಿಂದು ಮನೆಯ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ದೀಪಾವಳಿ ಹಬ್ಬಕ್ಕೆ ಸಂಬಳ ನೀಡದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗದ್ದಕ್ಕೆ ಈ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಹರೀಶ್‍ರನ್ನು ಬಸವೇಶ್ವರನಗರಕ್ಕೆ ಕರೆಸಿಕೊಂಡು ಫರಿಸ್ತಾ ಕೆಫೆ ಮುಂಭಾಗದಲ್ಲಿ ಅನೂಪ್ ಸೇರಿ ಜೊತೆಯಿದ್ದ ಫ್ರಭಾಕರ್ ಮತ್ತು ಸತ್ಯ ಎಂಬವರು ಹರೀಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಹೊರಗಡೆ ಈ ವಿಚಾರ ಗೊತ್ತಾದ್ರೆ ಕೊಲೆ ಮಾಡೋದಾಗಿ ಕೂಡ ಗ್ಯಾಂಗ್ ಬೆದರಿಕೆ ಹಾಕಿದೆ ಅಂತ ಹಲ್ಲೆಗೊಳಗಾದ ಹರೀಶ್ ಹೇಳಿದ್ದಾರೆ.

    ಘಟನೆಯಿಂದ ಕಿವಿ ಕೇಳದ ಸ್ಥಿತಿಯಲ್ಲಿದ್ದ ಹರೀಶ್ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನೂಪ್ ಡವ್, ಮಿಸ್ಟರ್ ಫರ್ಫೆಕ್ಟ್, ಸಾಗುವ ದಾರಿಯಲ್ಲಿ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ.

    ಘಟನೆ ಸಂಬಂಧ ಅನೂಪ್ ಅಂಡ್ ಗ್ಯಾಂಗ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೊಲೀಸ್ ರಕ್ಷಣೆ ನೀಡಲು ಮಾತ್ರ ಸೂಚನೆ – ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು : ಸಾರಾ ಗೋವಿಂದು

    ಪೊಲೀಸ್ ರಕ್ಷಣೆ ನೀಡಲು ಮಾತ್ರ ಸೂಚನೆ – ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು : ಸಾರಾ ಗೋವಿಂದು

    ಬೆಂಗಳೂರು: ಕಾಲಾ ಸಿನಿಮಾ ಬಿಡುಗಡೆ ಪೊಲೀಸ್ ರಕ್ಷಣೆ ನೀಡಲು ಹೈಕೋರ್ಟ್ ಸೂಚನೆ ನೀಡಿದೆ, ಆದರೆ ಪ್ರತಿಭಟನೆ ಮಾಡಬೇಡಿ ಎಂದು ಎಲ್ಲೂ ಹೇಳಿಲ್ಲ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾರಾ ಗೋವಿಂದು ಹೇಳಿದ್ದಾರೆ.

    ನಟ ರಜನಿಕಾಂತ್ ಅಭಿನಯದ ಕಾಲಾ ಸಿನಿಮಾ ಬಿಡುಗಡೆಗೆ ಕೋರ್ಟ್ ಪೊಲೀಸ್ ರಕ್ಷಣೆ ನೀಡುವಂತೆ ಆದೇಶ ನೀಡಿದ ಬಳಿಕ ಕರವೇ ಪ್ರವೀಣ್ ಶೆಟ್ಟಿ ಸೇರಿದಂತೆ ಕನ್ನಡಪರ ಹೋರಾಟಗಾರರು ಸಾ.ರಾ ಗೋವಿಂದ್ ಅವರ ನೇತೃತ್ವದಲ್ಲಿ ಸಿಎಂ ಕುಮಾರಸ್ವಾಮಿ ಕೃಷ್ಣ ಗೃಹ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

    ಸಿಎಂ ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಾರಾ ಗೋವಿಂದ್, ಸಿನಿಮಾ ಬಿಡುಗಡೆಗೆ ರಕ್ಷಣೆ ಕೊಡಿ ಎಂದು ಕೋರ್ಟ್ ಸೂಚನೆ ನೀಡಿದೆ. ಆದರೆ ಕನ್ನಡ ಪರ ಸಂಘಟನೆಗಳಿಗೆ ಪ್ರತಿಭಟನೆ ಮಾಡಬೇಡಿ ಎಂದು ಎಲ್ಲೂ ಹೇಳಿಲ್ಲ. ಪ್ರತಿಭಟನೆ ಮಾಡೋದು ನಮ್ಮ ಹಕ್ಕು. ಪೊಲೀಸರು ಯಾವುದೇ ಪ್ರಕರಣ ದಾಖಲಿಸಿದರೂ ಭಯವಿಲ್ಲ. ಈ ವಿಚಾರದಲ್ಲಿ ಜೈಲಿಗೂ ಹೋಗಲು ಸಿದ್ಧ. ಕಾಲಾ ಸಿನಿಮಾ ಬಿಡುಗಡೆಯನ್ನು ತಡೆದು ನಿಲ್ಲಿಸುತ್ತೇವೆ ಎಂದು ಹೇಳಿದರು.

    ಕಾವೇರಿ ವಿಚಾರದಲ್ಲಿ ನಟ ರಜಿನಿಕಾಂತ್ ಅವರು ನೀಡಿರುವ ಹೇಳಿಕೆಗಳು ಸರಿಯಿಲ್ಲ. ಅದ್ದರಿಂದ ಕಾಲಾ ಸಿನಿಮಾ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಸಾರಾ ಗೋವಿಂದು ಅವರು ಮನವಿ ಮಾಡಿದ್ದಾರೆ.

  • ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಸದಿದ್ರೆ ಆಹೋರಾತ್ರಿ ಧರಣಿ: ಭಾ.ಮ.ಹರೀಶ್

    ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರ ಅಧಿಕಾರಾವಧಿ ಮುಗಿದು 9 ತಿಂಗಳಾದರೂ ಇನ್ನೂ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ನಿರ್ಮಾಪಕ ಭಾ.ಮ.ಹರೀಶ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಮೇ 25ರ ಒಳಗಡೆ ಚುನಾವಣೆ ಪ್ರಕ್ರಿಯೆ ಆರಂಭಿಸದಿದ್ದರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಂಗಳದಲ್ಲಿ ಕುರಿತು ಹೋರಾಟ ಮಾಡುವುದಾಗಿ ಭಾ.ಮ.ಹರೀಶ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಈ ಕುರಿತು ಕನ್ನಡ ಚಿತ್ರರಂಗದ ನಿರ್ಮಾಪಕರು ಮತ್ತು ನಿರ್ದೇಶಕರ ಜೊತೆ ಮಾತು-ಕಥೆ ನಡೆಸಿದ್ದು ಹಲವರ ಬೆಂಬಲ ಕೂಡ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

    ಈ ವಿಚಾರವಾಗಿ ಚಿತ್ರ ಮಂಡಳಿ ಫೇಸ್‍ಬುಕ್ ಪೇಜ್ ನಲ್ಲಿ ಪೋಸ್ಟ್ ಪ್ರಕಟವಾಗಿದ್ದು, ಅದರ ಯಥಾವತ್ ಕಾಪಿಯನ್ನು ಇಲ್ಲಿ ನೀಡಲಾಗಿದೆ

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಂಡಳಿ ಮಾಜಿ ಕಾರ್ಯದರ್ಶಿ ಭಾ.ಮ.ಹರೀಶ್ ನೇತೃತ್ವದ ಬಣ ಆಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿದೆ.

    ಕಳೆದ ಸೆಪ್ಟೆಂಬರ್ ನಲ್ಲಿ ವಾಣಿಜ್ಯ ಮಂಡಳಿಯ ಚುನಾವಣೆ ನಡೆಸಬೇಕಿತ್ತು .ಆದರೆ ಯಾವುದೋ ನೆಪವೊಡ್ಡಿ ಪ್ರಸ್ತುತ ವಾಣಿಜ್ಯಮಂಡಳಿ ಅಧ್ಯಕ್ಷರಾಗಿರುವ ಸಾ.ರಾ.ಗೋವಿಂದು ಅವರು ಚುನಾವಣೆಯನ್ನು ಆರು ತಿಂಗಳುಗಳ ಕಾಲ ಮುಂದೂಡಿದ್ದರು. ಈಗ ಇದೇ ಜೂನ್ ನಲ್ಲಿ ನಡೆಯಬೇಕಿರುವ ಚುನಾವಣೆಯನ್ನೂ ಕೂಡ ಅವರು ಮುಂದೂಡುವ ಯತ್ನದಲ್ಲಿದ್ದಾರೆ. ಹಾಗಾಗಿ ಚುನಾವಣೆ ನಡೆಸುವ ಪ್ರಕ್ರಿಯೆ ನಡೆಯಬೇಕು ಎಂದು ಭಾ.ಮ.ಹರೀಶ್ ನೇತೃತ್ವದ ನಿರ್ಮಾಪಕರ ತಂಡ ಒತ್ತಾಯಿಸಿದೆ.

    ಜಯಸಿಂಹ ಮುಸುರಿ, ದಿನೇಶ್ ಗಾಂಧಿ, ನಂಧಿಹಾಳ್, ರಾಜೇಶ್ ಬ್ರಹಾವರ್, ಬಿ.ಆರ್.ಕೇಶವ ಸೇರಿದಂತೆ ಇತರ ನಿರ್ಮಾಪಕರ ತಂಡವು ಇದೇ ತಿಂಗಳ 25 ರಿಂದ ವಾಣಿಜ್ಯ ಮಂಡಳಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಲಾಗಿದೆ ಎಂದು ಭಾ.ಮ.ಹರೀಶ್ ನೇತೃತ್ವದ ನಿರ್ಮಾಪಕರ ತಂಡ ತಿಳಿಸಿದೆ.

    https://www.youtube.com/watch?v=uX36lAxExv4