Tag: Sarabjit Singh

  • ಪಾಕ್‌ ಜೈಲಿನಲ್ಲಿ ಕೊಲೆಯಾಗಿದ್ದ ಸರಬ್ಜಿತ್ ಸಿಂಗ್ ಹಂತಕನ ಗುಂಡಿಕ್ಕಿ ಕೊಲೆ

    ಪಾಕ್‌ ಜೈಲಿನಲ್ಲಿ ಕೊಲೆಯಾಗಿದ್ದ ಸರಬ್ಜಿತ್ ಸಿಂಗ್ ಹಂತಕನ ಗುಂಡಿಕ್ಕಿ ಕೊಲೆ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಜೈಲು ಸೇರಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ (Sarabjit Singh) ಹಂತಕ ಅಮೀರ್ ಸರ್ಫರಾಜ್ (Amir Sarfaraz) ಅಲಿಯಾಸ್ ತಾಂಬಾನನ್ನು ಲಾಹೋರ್‌ನಲ್ಲಿ (Lahore) ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ.

    ಪಾಕಿಸ್ತಾನದ (Pakistan) ಲಾಹೋರ್‌ನ ಇಸ್ಲಾಂಪುರ ಪ್ರದೇಶದಲ್ಲಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ತಾಂಬಾ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಇತ್ತ ಘಟನೆಯಿಂದ ಗಂಭೀರ ಗಾಯಗೊಂಡ ತಾಂಬಾನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಗ್ಗೆ ಡಿಸಿಪಿ ಪ್ರತಿಕ್ರಿಯೆ

    ಆಪಾದಿತ ಭಯೋತ್ಪಾದನೆ ಮತ್ತು ಬೇಹುಗಾರಿಕೆಯ ಆರೋಪದಲ್ಲಿ ಸರಬ್ಜಿತ್ ಸಿಂಗ್ (49) ಅವರನ್ನು ಪಾಕ್‌ ಕೋರ್ಟ್ 1991 ರಲ್ಲಿ ಮರಣದಂಡನೆಗೆ ಗುರಿಪಡಿಸಿತ್ತು. ಆದಾಗ್ಯೂ ಸರ್ಕಾರವು 2008 ರಲ್ಲಿ ಅನಿರ್ದಿಷ್ಟ ಅವಧಿಗೆ ಸಿಂಗ್‌ ಮರಣದಂಡನೆಯನ್ನು ತಡೆಹಿಡಿಯಿತು. ಬಳಿಕ ಏಪ್ರಿಲ್ 2013 ರಲ್ಲಿ ಲಾಹೋರ್ ಜೈಲಿನಲ್ಲಿ ಸಾವನ್ನಪ್ಪಿದ್ದರು. ಮರಣದ ನಂತರ ಸರಬ್ಜಿತ್ ಅವರ ಮೃತದೇಹವನ್ನು ಲಾಹೋರ್‌ನಿಂದ ಅಮೃತಸರಕ್ಕೆ ತರಲಾಯಿತು. ಅಲ್ಲಿ ಅವರ ಅಂತಿಮ ವಿಧಿಗಳನ್ನು ನಡೆಸಲಾಗಿತ್ತು.

  • ಪಾಕ್‌ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್‌ ಸಿಂಗ್‌ ಪತ್ನಿ ರಸ್ತೆ ಅಪಘಾತದಲ್ಲಿ ಸಾವು

    ಪಾಕ್‌ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್‌ ಸಿಂಗ್‌ ಪತ್ನಿ ರಸ್ತೆ ಅಪಘಾತದಲ್ಲಿ ಸಾವು

    ಚಂಡೀಗಢ: 2013ರಲ್ಲಿ ಪಾಕಿಸ್ತಾನದ ಜೈಲಿನಲ್ಲಿ ಸಾವನ್ನಪ್ಪಿದ್ದ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ (Sarabjit Singh) ಅವರ ಪತ್ನಿ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

    ಸಿಂಗ್ ಅವರ ಪತ್ನಿ ಸುಖಪ್ರೀತ್ ಕೌರ್ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದರು. ಇಲ್ಲಿನ ಫತೇಪುರ್ ಬಳಿ ಅಪಘಾತವಾಗಿದೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಹಾರ ಪದಾರ್ಥಗಳು ದುಬಾರಿ – ಚಿಲ್ಲರೆ ಹಣದುಬ್ಬರ ಶೇ.7ಕ್ಕೆ ಏರಿಕೆ

    jail

    ಕೌರ್‌ ಅವರು ಅವರು ಪೂನಂ ಮತ್ತು ಸ್ವಪಂದೀಪ್ ಕೌರ್ ಎಂಬ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ತರ್ನ್ ತರಣ್‌ನಲ್ಲಿರುವ ಅವರ ಸ್ಥಳೀಯ ಸ್ಥಳ ಭಿಖಿವಿಂಡ್‌ನಲ್ಲಿ ನಡೆಯಲಿದೆ.

    ತನ್ನ ಸಹೋದರನನ್ನು ಜೈಲಿನಿಂದ ಬಿಡುಗಡೆ ಮಾಡುವ ಪ್ರಯತ್ನದಲ್ಲಿ ವಿವಿಧ ವೇದಿಕೆಗಳಲ್ಲಿ ಧ್ವನಿ ಎತ್ತಿದ್ದ ಸರಬ್ಜಿತ್ ಸಹೋದರಿ ದಲ್ಬೀರ್ ಕೌರ್ ಎದೆನೋವಿನಿಂದ ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

    ಸರಬ್ಜಿತ್ ಸಿಂಗ್ (49) ಅವರು ಏಪ್ರಿಲ್ 2013 ರಲ್ಲಿ ಲಾಹೋರ್ ಜೈಲಿನಲ್ಲಿ ಸಾವನ್ನಪ್ಪಿದ್ದರು. ಆಪಾದಿತ ಭಯೋತ್ಪಾದನೆ ಮತ್ತು ಬೇಹುಗಾರಿಕೆಯ ಆರೋಪದಲ್ಲಿ ಪಾಕಿಸ್ತಾನಿ ನ್ಯಾಯಾಲಯವು ಅವರನ್ನು 1991 ರಲ್ಲಿ ಮರಣದಂಡನೆಗೆ ಗುರಿಪಡಿಸಿತ್ತು. ಆದಾಗ್ಯೂ ಸರ್ಕಾರವು 2008 ರಲ್ಲಿ ಅನಿರ್ದಿಷ್ಟ ಅವಧಿಗೆ ಸಿಂಗ್‌ ಮರಣದಂಡನೆಯನ್ನು ತಡೆಹಿಡಿಯಿತು. ಮರಣದ ನಂತರ, ಸರಬ್ಜಿತ್ ಅವರ ಮೃತದೇಹವನ್ನು ಲಾಹೋರ್‌ನಿಂದ ಅಮೃತಸರಕ್ಕೆ ತರಲಾಯಿತು. ಅಲ್ಲಿ ಅವರ ಅಂತಿಮ ವಿಧಿಗಳನ್ನು ನಡೆಸಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಪಾಕ್ ಜೈಲಿನಲ್ಲಿ ಕೊಲ್ಲಲ್ಪಟ್ಟ ಸರಬ್ಜಿತ್ ಸಹೋದರಿ ದಲ್ಬೀರ್ ಕೌರ್ ನಿಧನ

    ಪಾಕ್ ಜೈಲಿನಲ್ಲಿ ಕೊಲ್ಲಲ್ಪಟ್ಟ ಸರಬ್ಜಿತ್ ಸಹೋದರಿ ದಲ್ಬೀರ್ ಕೌರ್ ನಿಧನ

    ಚಂಡೀಗಢ: ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧನಕ್ಕೊಳಗಾಗಿ ಪಾಕಿಸ್ತಾನದ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್ ಸಿಂಗ್ ಅವರ ಸಹೋದರಿ ದಲ್ಬೀರ್ ಕೌರ್ ಶನಿವಾರ ತಡರಾತ್ರಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.

    ದಲ್ಬೀರ್ ಕೌರ್ ಅವರ ಅಂತ್ಯ ಕ್ರಿಯೆಯನ್ನು ಪಂಜಾಬ್‍ನ ಭಿಖಿವಿಂಡ್ ಗ್ರಾಮದಲ್ಲಿ ಇಂದು ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ಭಾರತ -ಪಾಕಿಸ್ತಾನ ಗಡಿಯ ಸಮೀಪವಿರುವ ಪಂಜಾಬ್‍ನ ಭಿಖಿವಿಂಡ್ ಗ್ರಾಮದ ರೈತರಾಗಿದ್ದ ಸರಬ್ಜಿತ್ ಸಿಂಗ್ ತಿಳಿಯದೆ ಪಾಕ್ ಗಡಿ ಪ್ರವೇಶಿಸಿದ್ದರು. ಹೀಗಾಗಿ ಅವರನ್ನು ಭದ್ರತಾ ಸಿಬಂದಿ ಬಂಧಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ಪಾಕ್‍ನ ಲಾಹೋರ್ ನ್ಯಾಯಾಲಯ 1991ರಲ್ಲಿ ಭಯೋತ್ಪಾದನೆ ಮತ್ತು ಗೂಢಚಾರಿಕೆ ಪ್ರಕರಣದಡಿ ಸರಬ್ಜಿತ್ ಸಿಂಗ್‍ಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಇದನ್ನೂ ಓದಿ:  ನಿಮಗೆ ತಾಕತ್ ಇದ್ರೆ ಚುನಾವಣೆಗೆ ಬನ್ನಿ: ರೆಬೆಲ್ ಶಾಸಕರಿಗೆ ಸವಾಲೆಸೆದ ಆದಿತ್ಯ ಠಾಕ್ರೆ

    22 ವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದ ಸರಬ್ಜಿತ್ ಸಿಂಗ್ ಮೇಲೆ 2013ರಲ್ಲಿ ಜೈಲಿನ ಕೈದಿಗಳು ಹಲ್ಲೆ ನಡೆಸಿದ್ದರು. ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಘಟನೆ ವೇಳೆ ಅವರ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಐದು ದಿನಗಳ ಕಾಲ ಕೋಮಾದಲ್ಲಿದ್ದ ಸರಬ್ಜಿತ್ ಅವರು ನಂತರ ಚಿಕಿತ್ಸೆ ಫಲಕಾರಿಯಗದೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.

    22 ವರ್ಷಗಳ ಸುದೀರ್ಘ ಜೈಲಿನಲ್ಲಿದ್ದ ಸರಬ್ಜಿತ್ ಸಿಂಗ್ ಅವರನ್ನು ಬಿಡುಗಡೆಗೊಳಿಸಲು ಅಕ್ಕ ದಲ್ಬೀರ್ ಕೌರ್ ಬಹಳಷ್ಟು ಕಾನೂನು ಹೋರಾಟ ನಡೆಸಿದ್ದರು. ಅವರ ಸಹೋದರ ನಿರಾಪರಾಧಿ ಎಂದು ಯಾವಾಗಲೂ ಹೇಳುತ್ತಿದ್ದರು. ಸರಬ್ಜಿತ್ ಬಂಧನಕ್ಕೊಳಪಡಿಸಿದಾಗ ಅವರನ್ನು ನೋಡಲು ಪಾಕಿಸ್ತಾನಕ್ಕೆ ಹೋಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮುಂದುವರಿದ ರಾಜಕೀಯ ಬಿಕ್ಕಟ್ಟು – ಶಿಂಧೆ, ಫಡ್ನವೀಸ್ ಭೇಟಿ ಸರ್ಕಾರ ರಚನೆ ಚರ್ಚೆ

    ಸರಬ್ಜಿತ್ ಸಿಂಗ್ ಸಾವಿನ ಬಗ್ಗೆ ತನಿಖೆ ನಡೆಸುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಕಿಸ್ತಾನ ಸರ್ಕಾರವನ್ನು ತಿಳಿಸಿತ್ತು. ಈ ವೇಳೆ ದಲ್ಬೀರ್ ಕೌರ್ ಕೂಡ ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಧ್ವನಿ ಎತ್ತಿದ್ದರು. ನಂತರ ಈ ದಾಳಿಯನ್ನು ಸರ್ಕಾರವೇ ಪೂರ್ವ ನಿಯೋಜಿಸಿದ್ದರೆ, ತನಿಖೆ ನಡೆಸುವ ಅಗತ್ಯವಿಲ್ಲ. ಒಂದು ವೇಳೆ ಈ ಘಟನೆ ಬಗ್ಗೆ ನಿಜವಾಗಿಯೂ ಅಧಿಕಾರಿಗಳಿಗೆ ತಿಳಿದಿಲ್ಲ ಎಂದರೆ ಖಂಡಿತವಾಗಿಯೂ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದರು.

    Live Tv