Tag: sashikala jolle

  • ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ: ಶಶಿಕಲಾ ಜೊಲ್ಲೆ

    ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸಂಪರ್ಕಕ್ಕೆ ಸಿಗುತ್ತಿಲ್ಲ: ಶಶಿಕಲಾ ಜೊಲ್ಲೆ

    ಚಿಕ್ಕೋಡಿ: ರಾಜ್ಯ ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಯಿಂದಲೂ ಉಕ್ರೇನ್‍ನಲ್ಲಿ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದ ವಿದ್ಯಾರ್ಥಿ ಕೂಡ ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ. ಪಾಲಕರ ಜೊತೆ ಸಂಪರ್ಕದಲ್ಲಿದ್ದರು. ಆದರೆ ಶನಿವಾರದಿಂದ ಸಂಪರ್ಕಕ್ಕೆ ಬಂದಿಲ್ಲ ಎಂಬ ಪಾಲಕರಿಂದ ಮಾಹಿತಿ ಬಂದಿದೆ. ಸಿಎಂ ಅವರಿಗೂ ಈ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ. ಮಕ್ಕಳೆಲ್ಲಿದ್ದಾರೆ ಎಂಬ ಮಾಹಿತಿ ಪಡೆಯುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಿದೆ ಎಂದಿದ್ದಾರೆ. ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

    Bidar

    ವಿದೇಶಾಂಗ ಇಲಾಖೆ ಬಸವರಾಜ್ ಬೊಮ್ಮಾಯಿಯವರು ಕರ್ನಾಟಕದ ಎಲ್ಲ ವಿದ್ಯಾರ್ಥಿಗಳನ್ನು ಕರೆ ತರಲು ಪ್ರಯತ್ನ ಪಡುತ್ತಿದ್ದಾರೆ. ಕೆಲವೊಂದು ಟೆಕ್ನಿಕಲ್ ಸಮಸ್ಯೆ ಇದೆ. ನಾನೂ ಡಿಸಿ ಅವರ ಜೊತೆ ಮಾತನಾಡಿದ್ದೇನೆ. ಯಾವುದೇ ಟೆಕ್ನಿಕಲ್ ಸಮಸ್ಯೆ ಇದ್ದರೂ ವಿದೇಶಾಂಗ ಸಚಿವರ ಹತ್ತಿರ ಮಾತನಾಡಿ ಆದಷ್ಟು ಬೇಗ ಮಕ್ಕಳನ್ನು ದೇಶಕ್ಕೆ ತರಲು ಕಾರ್ಯರೂಪದಲ್ಲಿದ್ದೇವೆ. ಈ ಹಿಂದೆ ಕೂಡ ತಾಲಿಬಾನ್‍ನಲ್ಲೂ ಇದೇ ರೀತಿಯಾದಾಗ ದೇಶಕ್ಕೆ ವಾಪಸ್ ತರುವ ಕೆಲಸ ಆಗಿದೆ. ಸಿಎಂ ಅವರು ಪ್ರಧಾನಿಗಳು ಹಾಗೂ ವಿದೇಶಾಂಗ ಇಲಾಖೆ ಯಾರಿಗೂ ತೊಂದರೆಯಾಗದಂತೆ ಸುರಕ್ಷಿತವಾಗಿ ಕರೆ ತರಲಾಯಿತು. ಮಕ್ಕಳೆಲ್ಲಿದ್ದರೂ ಅವರನ್ನು ಕರೆ ತರುವ ವ್ಯವಸ್ಥೆ ಮಾಡುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಶುಭ ಭಾನುವಾರ, ಶುಭ ಗಳಿಗೆಯಲ್ಲಿ ಇಂದು ಪಾದಯಾತ್ರೆಗೆ ಚಾಲನೆ: ಡಿಕೆಶಿ

  • ದೇವಾಲಯಗಳ ಆಧ್ಯಾತ್ಮಿಕ ವಾತಾವರಣ ಇನ್ನಷ್ಟು ಸುಧಾರಣೆಗೆ ಕ್ರಮ: ಶಶಿಕಲಾ ಜೊಲ್ಲೆ

    ದೇವಾಲಯಗಳ ಆಧ್ಯಾತ್ಮಿಕ ವಾತಾವರಣ ಇನ್ನಷ್ಟು ಸುಧಾರಣೆಗೆ ಕ್ರಮ: ಶಶಿಕಲಾ ಜೊಲ್ಲೆ

    ಬೆಳಗಾವಿ: ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸುಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ನಮ್ಮ ನಾಡಿನ ಜನತೆಗೆ ಯಾವುದೇ ತೊಂದರೆಯಾಗದಂತೆ ಪ್ರಾರ್ಥಿಸಲು ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

    Sashikala Jolle

    ರಾಜ್ಯದ ಪ್ರಮುಖ ಶ್ರದ್ಧಾಕೇಂದ್ರವಾದ ಬೆಳಗಾವಿ ಜಿಲ್ಲೆಯ ಶ್ರೀಕ್ಷೇತ್ರ ಸವದತ್ತಿ ಶ್ರೀ ಯಲ್ಲಮ್ಮದೇವಿ ದೇವಾಲಯದಲ್ಲಿ ಶುಕ್ರವಾರ ಬೆಳಗ್ಗೆ ರಾಜ್ಯದ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ನಾಡಿನಾದ್ಯಂತ ನಡೆಯುವ ವಿಶೇಷ ಪೂಜಾ ಕೈಂಕರ್ಯಗಳಿಗೆ ಚಾಲನೆ ನೀಡಿದರು.

    Sashikala Jolle

    ಪ್ರಾತಃಕಾಲ ಆರು ಗಂಟೆಗೆ ಯಲ್ಲಮ್ಮನ ದೇವಾಲಯಕ್ಕೆ ಆಗಮಿಸಿದ ಸಚಿವರು, ದೇವಾಲಯದಲ್ಲಿ ಕೋವಿಡ್ ಹಿನ್ನೆಲೆ ನಮ್ಮ ನಾಡಿನ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಅನುಗ್ರಹಿಸಬೇಕೆಂದು ದೇವಿಯಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: 45 ಅಡಿ ಎತ್ತರದ ಪರಿಸರ ಸ್ನೇಹಿ ದುರ್ಗಾದೇವಿ ಮೂರ್ತಿ – ಫೋಟೋ ವೈರಲ್

    ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ತೊಂದರೆಗೊಳಗಾಗಿದ್ದು, ನಮ್ಮ ಮಕ್ಕಳು ಶಾಲೆಯತ್ತ ಮುಖ ಮಾಡದೇ ಮನೆಯಲ್ಲೇ ಇರುವಂತಾಗಿದೆ. ಈಗ ಮಕ್ಕಳು ಶಾಲೆಯತ್ತ ಮುಖ ಮಾಡಿರುವ ಈ ಸಂದರ್ಭದಲ್ಲಿ ಅವರಿಗೆ ಯಾವುದೇ ತೊಂದರೆಯಾಗದಂತೆ ದೇವಿ ಆಸೀರ್ವಾದಿಸಬೇಕೆಂದು ಕೋರಿದರು. ಕೋವಿಡ್ ಸೋಂಕಿನಿಂದ ತೊಂದರೆಯಾಗಿರುವ ನಾಡಿನ ಜನರು ಸುಭಿಕ್ಷ ವಾತಾವರಣದಲ್ಲಿ ಜೀವಿಸುವಂತೆ ಅನುಗ್ರಹಿಸಬೇಕೆಂದು ಪ್ರಾರ್ಥನೆ ಸಲ್ಲಿಸಿದರು.

    ನಂತರ ದೇವಾಲಯದ ಅಧಿಕಾರಿಗಳು ಹಾಗೂ ಅರ್ಚಕರೊಂದಿಗೆ ಚರ್ಚಿಸಿದ ಅವರು, ದೇವಾಲಯದ ಅಗತ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಸವದತ್ತಿ ಶ್ರೀ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಲೋಚನೆ ನಡೆಸಿ ವಿಸ್ತøತ ಪ್ರಸ್ತಾವನೆ ಮತ್ತು ಕ್ರಿಯಾ ಯೋಜನೆ ರೂಪಿಸಲು ಸೂಚನೆ ನೀಡಿದರು. ಇದನ್ನೂ ಓದಿ:  ಸಚಿವ ಎಸ್.ಟಿ ಸೋಮಶೇಖರ್‌ರಿಂದ ಡೋಲು ಬಡಿತ, ವೀರಗಾಸೆ ಕುಣಿತ

    Sashikala Jolle

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಶುಕ್ರವಾರ ವಿಜಯ ದಶಮಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗದಂತೆ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆಗಳನ್ನು ನೆರವೇರಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದೇವರ ನೈವೇದ್ಯಕ್ಕೆ ನವಧಾನ್ಯ ಉಸ್ಲಿ ನವರಾತ್ರಿ ಸ್ಪೆಷಲ್

    Sashikala Jolle

    ರಾಜ್ಯದ ಎಲ್ಲ ದೇವಾಲಯಗಳಲ್ಲಿ ಶ್ರದ್ಧಾಳು ಭಕ್ತ ಸಮೂಹಕ್ಕೆ ಅತ್ಯುತ್ತಮ ಸೌಕರ್ಯ ಒದಗಿಸುವುದು ಹಾಗೂ ಉತ್ತಮ ಆಧ್ಯಾತ್ಮಿಕ ವಾತಾವರಣ ನಿರ್ಮಾಣವಾಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ತಾವು ಸಚಿವರಾದ ನಂತರ ಇಲಾಖೆಗೆ ಸಂಬಂಧಿಸಿದಂತೆ ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ದೇವಾಲಯಗಳ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದು, ಮತ್ತು ತ್ವರಿತಗತಿಯಲ್ಲಿ ದೇವಾಲಯಗಳ ಸೇವೆ ದೊರೆಯುವಂತೆ ಮಾಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು. ಇದನ್ನೂ ಓದಿ: ಅರಮನೆಯಲ್ಲಿ ವಿಜಯ ದಶಮಿ ಸಂಭ್ರಮ

    ವಿಶೇಷ ಪೂಜೆಗೆ ಸಚಿವರನ್ನು ದೇವಾಲಯದ ಅಧಿಕಾರಿಗಳು ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದರಾದ ಅಣ್ಣಾ ಸಾಹೇಬ ಜೊಲ್ಲೆ, ಸ್ಥಳೀಯ ಶಾಸಕರಾದ ಆನಂದ ಮಾಮನಿ, ದೇವಾಲಯದ ಪ್ರಮುಖರಾದ ಕೋಟರಗಸ್ತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

  • ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಡಿಸಿಎಂ ಮಾಡಿ – ವಿಕಲಚೇತನರ ಒತ್ತಾಯ

    ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಡಿಸಿಎಂ ಮಾಡಿ – ವಿಕಲಚೇತನರ ಒತ್ತಾಯ

    ಚಿಕ್ಕೋಡಿ(ಬೆಳಗಾವಿ): ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರಿಗೆ ಸಚಿವ ಸ್ಥಾನದ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ವಿಕಲಚೇತನ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಅಲ್ಲದೆ ತಹಶೀಲ್ದಾರ್ ಡಾ.ಡಿ ಎಚ್ ಹೂಗಾರ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಗಿದೆ.

    ಸೋಮವಾರ ತಾಲೂಕು ಪಂಚಾಯತ್ ಆವರಣದಲ್ಲಿ ಜಮಾವನೆಗೊಂಡು ಈ ಮೊದಲು ಯಡಿಯೂರಪ್ಪ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ವಹಿಸಿದ ಜೊಲ್ಲೆಯವರು ಅಂಗವಿಕಲರು ಮತ್ತು ಮಹಿಳೆಯರಿಗೆ ಸರಕಾರದ ಸಾಕಷ್ಟು ಯೋಜನೆ ಕಾರ್ಯರೂಪಕ್ಕೆ ತಂದು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರಿಗೆ ನೂತನ ಸಿ.ಎಂ ಬಸವರಾಜ ಬೊಮ್ಮಾಯಿ ಯವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನೀಡಿ ಮತ್ತೆ ಮೊದಲಿದ್ದ ಖಾತೆ ನೀಡಬೇಕು ಎಂದು ಆಗ್ರಹಿಸಿದರು.

    ಒಂದು ವೇಳೆ ಅವರನ್ನು ಸಂಪುಟದಲ್ಲಿ ಕಡೆಗಣಿಸಿದಲ್ಲಿ ಬರುವ ದಿನಗಳಲ್ಲಿ ರಾಜ್ಯದ ವಿವಿಧ ಭಾಗದಿಂದ ವಿಕಲಚೇತನರು ವಿಧಾನಸೌಧ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಮೊಮ್ಮಕ್ಕಳನ್ನು ಆಡಿಸುತ್ತಾ ಮನೆಯಲ್ಲಿರಲಿ: ಯತ್ನಾಳ್

    ಈ ಸಂದರ್ಭದಲ್ಲಿ ತಾ.ಪಂ.ಇ.ಓ ಉಮೇಶ್ ಸಿದ್ನಾಳ, ಮಹಾವೀರ ಬಾಗಿ, ಚಿದಾನಂದ ಕಿಲ್ಲೆದಾರ ಹಾಗೂ ತಾಲೂಕಿನ ಅಂಗವಿಕಲರಾದ ಬಾಹುಬಲಿ ಬೆಳವಿ, ವಿಠ್ಠಲ ಕರಡಿ, ಮಲಗೌಡಾ ಪಾಟೀಲ, ಸಹದೇವ ನರಸನ್ನವರ, ಶಿವಲೀಲಾ ಹಿಡಕಲ್, ಕಲ್ಲಪ್ಪಾ ತಳವಾರ, ಸಂಜೀವ ಕರಿಗಾರ ಹಾಗೂ ಮುಂತಾದವರು ಉಪಸ್ಥಿತರಿದ್ದರು.

  • ಪೋಷನ್ ಅಭಿಯಾನದ ಪ್ರಗತಿ ಸಭೆ ನಡೆಸಿದ ಶಶಿಕಲಾ ಜೊಲ್ಲೆ

    ಪೋಷನ್ ಅಭಿಯಾನದ ಪ್ರಗತಿ ಸಭೆ ನಡೆಸಿದ ಶಶಿಕಲಾ ಜೊಲ್ಲೆ

    ಬೆಂಗಳೂರು: ರಾಷ್ಟ್ರೀಯ ಪೋಷನ್ ಅಭಿಯಾನದ ಅನುದಾನದ ಬಳಕೆ ಹಾಗೂ ಸಾಧನೆಯಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಗುರಿ ನೀಡಿದ್ದಾರೆ.

    ಪೋಷನ್ ಅಭಿಯಾನದ ಪ್ರಗತಿ ಪರಿಶೀಲನೆ ಕುರಿತಂತೆ ಬಹುಮಹಡಿ ಕಟ್ಟಡದ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜೊತೆಗೆ ಶಶಿಕಲಾ ಜೊಲ್ಲೆಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಅಭಿಯಾನದ ಕುರಿತಂತೆ ಪ್ರತಿಯೊಂದು ಜಿಲ್ಲೆಗಳ ಉಪನಿರ್ದೇಶಕರ ಜೊತೆಗೆ ಮಾತನಾಡಿ ಚಟುವಟಿಕೆಗಳ ಭೌತಿಕ ಹಾಗೂ ಆರ್ಥಿಕ ಮಾಹಿತಿ ಪಡೆದರು. ಅಲ್ಲದೆ ಅಭಿಯಾನದ ಜಾರಿಗೆ ಇರುವ ಸಮಸ್ಯೆಗಳ ಕುರಿತಂತೆಯೂ ಮಾಹಿತಿ ಪಡೆದರು. ಪೋಷನ್ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ಐಎಲ್‍ಎ ತರಬೇತಿ ಕಾರ್ಯಕ್ರಮ, ಇ-ಐಎಲ್‍ಎ ಪ್ರಗತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

    ಇದೇ ವೇಳೆ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಸಚಿವೆಯರ ಗಮನಕ್ಕೆ ತಂದರು. ನಂತರ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆಯನ್ನು ಲಿಖಿತ ರೂಪದಲ್ಲಿ ಆಯುಕ್ತರಿಗೆ ಸಲ್ಲಿಸುವಂತೆ ಸೂಚಿಸಿದರು. ಅಲ್ಲದೆ ಸಂಬಂಧಪಟ್ಟ ಕಂಪನಿಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

    ಇದೇ ಸಮಯದಲ್ಲಿ ಈ ಅಭಿಯಾನದ ಜಾರಿಯಲ್ಲಿ ಎರಡನೇ ಸ್ಥಾನದಲ್ಲಿರುವುದಕ್ಕೆ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಮುಂದಿನ ಸಭೆಯ ವೇಳೆಗೆ ದೇಶದಲ್ಲಿ ಈ ಅಭಿಯಾನ ಜಾರಿಗೊಳಿಸುವುದರಲ್ಲಿ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗೆಳಿಗೆ ಗುರಿ ನೀಡಿದರು. ಸರ್ಕಾರದ ಯೋಜನೆ ಜಾರಿಯಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

  • ಖುಷಿ ಜೊತೆಗೆ ಜವಾಬ್ದಾರಿಯೂ ಹೆಚ್ಚಿದೆ- ಶಶಿಕಲಾ ಜೊಲ್ಲೆ

    ಖುಷಿ ಜೊತೆಗೆ ಜವಾಬ್ದಾರಿಯೂ ಹೆಚ್ಚಿದೆ- ಶಶಿಕಲಾ ಜೊಲ್ಲೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಕ್ಯಾಬಿನೆಟ್ ಫೈನಲ್ ಆಗಿದೆ. ನೂತನ ಸಚಿವರ ಅಧಿಕೃತ ಪಟ್ಟಿ ಬಿಡುಗಡೆ ಆಗಿದೆ. 17 ಮಂದಿ ಸಚಿವರ ಪೈಕಿ ನಾನೊಬ್ಬಳೇ ಮಹಿಳೆ ಅನ್ನೋ ಖುಷಿಯ ಜೊತೆಗೆ ಜವಾಬ್ದಾರಿಯೂ ಹೆಚ್ಚಾಗಿದೆ ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ಸಚಿವರ ಪಟ್ಟಿ ಬಿಡುಗಡೆಗೊಂಡ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಾಲಚಂದ್ರ ಚಾರಕಿ ಹೊಳಿಗೆ ಸಚಿವ ಸ್ಥಾನ ಕೈ ತಪ್ಪಿರೋದು ಶಾಕ್ ಆಗಿದೆ. ಮುಂದಿನ ಲಿಸ್ಟ್ ನಲ್ಲಿ ಅವರನ್ನು ಪರಿಗಣಿಸಬಹುದು ಅನ್ನೋ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬಹಳ ಸಂತೋಷವಾಗಿದೆ. ಹದಿನೇಳು ಜನರಲ್ಲಿ ನಾನೊಬ್ಬಳೇ ಮಹಿಳೆ. ಮಹಿಳೆಯರ ಅಭಿವೃದ್ಧಿ ಹಾಗೂ ಪ್ರವಾಹದಿಂದ ನಲುಗಿರುವ ಬೆಳಗಾವಿ ಭಾಗಕ್ಕೆ ಸಹಾಯವಾಗುವಂತೆ ಕೆಲಸ ಮಾಡುತ್ತೇನೆ. ಸಂಘಟನೆ, ಕೆಲಸವನ್ನು ನೋಡಿ ನನ್ನನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಹೇಳಿದರು.

    ನನಗೆ ಸ್ಥಾನಮಾನ ಸಿಗುವ ಬಗ್ಗೆ ವಿಶ್ವಾಸವಿತ್ತು. ಖುಷಿಯ ಜೊತೆಗೆ ಜವಾಬ್ದಾರಿಯೂ ಹೆಚ್ಚಾಗಿದೆ. ಅನರ್ಹ ಶಾಸಕರು ಜೊತೆಗೆ ಇರೋದರಿಂದ ಸವಾಲು ಹೆಚ್ಚಾಗಿದೆ. ಅನರ್ಹ ಶಾಸಕರು ಜೊತೆಗೆ ಇರೋದ್ರಿಂದ ಸವಾಲು ಹೆಚ್ಚಾಗಿದೆ ಎಂದರು.

    ಆಯ್ಕೆಗೊಂಡ 17 ಮಂದಿ ಶಾಸಕರು ಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಸವರಾಜ ಬೊಮ್ಮಾಯಿ, ಜೆಸಿ ಮಾಧುಸ್ವಾಮಿ, ಜಗದೀಶ್ ಶೆಟ್ಟರ್, ವಿ.ಸೋಮಣ್ಣ, ಶಶಿಕಲಾ ಜೊಲ್ಲೆ, ಸಿಸಿ ಪಾಟೀಲ್, ಲಕ್ಷ್ಮಣ ಸವದಿ, ಆರ್.ಅಶೋಕ್, ಸಿಟಿ ರವಿ, ಡಾ.ಅಶ್ವಥ್‍ನಾರಾಯಣ್, ಗೋವಿಂದ ಕಾರಜೋಳ, ನಾಗೇಶ್, ಪ್ರಭು ಚೌಹಾಣ್, ಶ್ರೀರಾಮುಲು, ಈಶ್ವರಪ್ಪ, ಕೋಟ ಶ್ರೀನಿವಾಸ್ ಪೂಜಾರಿ, ಸುರೇಶ್ ಕುಮಾರ್ ಇವರೆಲ್ಲರೂ ಇಂದು ಸಚಿವರರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.