Tag: Sasikala Natarajan

  • ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ

    ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ

    ಬೆಂಗಳೂರು: ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲಾಗಿತ್ತು ಎಂಬ ವಿಚಾರ ಸಂಬಂಧ ತಮಿಳುನಾಡು (Tamilnadu) ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ (Jayalalitha) ಆಪ್ತೆ ಶಶಿಕಲಾ ನಟರಾಜನ್ (Sasikala Natarajan) ಹಾಗೂ ಇಳವರಸಿಗೆ ಲೋಕಾಯುಕ್ತ ವಿಶೇಷ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.

    ಕೋರ್ಟ್ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಶ್ಯೂರಿಟಿಗಳಿಗೂ ಕೂಡ ವಾರೆಂಟ್ ಜಾರಿ ಮಾಡಿದೆ. ಲೋಕಾಯುಕ್ತ (Lokayukta) ಪೊಲೀಸರು ಆರೋಪಪಟ್ಟಿ ದಾಖಲಿಸಿದ್ದರು. ಜೈಲು ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿತ್ತು. ತಮ್ಮ ಪ್ರಕರಣದ ರದ್ದು ಕೋರಿ ಹೈಕೋರ್ಟ್‍ಗೆ ಶಶಿಕಲಾ ಅರ್ಜಿ ಸಲ್ಲಿಸಿದ್ದರು. ಆದರೆ ಸೋಮವಾರ ವಿಚಾರಣೆ ಸಂದರ್ಭದಲ್ಲಿ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.

    ಜಯಲಲಿತಾ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಹಾಗೂ ಇಳವರಸಿ ಇಬ್ಬರೂ ಪರಪ್ಪನ ಅಗ್ರಹಾರದಲ್ಲಿ ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಜೈಲಿನಲ್ಲಿಯೂ ಐಷಾರಾಮಿ ಸೌಕರ್ಯಗಳನ್ನು ಪಡೆದಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಅಧಿಕಾರಿಗಳಿಗೆ 2 ಕೋಟಿ ಲಂಚ ನೀಡಿ ಬೆಂಗಳೂರು ಜೈಲಿನ ಹೊರಗೆ ಶಾಪಿಂಗ್ ಗೆ ತೆರಳಿದ್ದ ಶಶಿಕಲಾ ಹಾಗೂ ಇಳವರಸಿಯ ವೀಡಿಯೋ ಸಿಕ್ಕಿತ್ತು. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಈ ಘಟನೆ ಕುರಿತು ಬೆಂಗಳೂರಿನ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ಆದರೆ ಬೆಂಗಳೂರು ಲೋಕಾಯುಕ್ತ ನ್ಯಾಯಾಲಯದ ವಿಚಾರಣೆಗೆ ಇಳವರಸಿ, ಶಶಿಕಲಾ ಹಾಜರಾಗಿರಲಿಲ್ಲ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡಿನತ್ತ ಶಶಿಕಲಾ ನಟರಾಜನ್

    ತಮಿಳುನಾಡಿನತ್ತ ಶಶಿಕಲಾ ನಟರಾಜನ್

    ಬೆಂಗಳೂರು: ಜೈಲುವಾಸ ಅಂತ್ಯ ಬಳಿಕ ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಮರಳಿ ತಮಿಳುನಾಡಿಗೆ ತೆರಳಲಿದ್ದಾರೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ.

    ತಮಿಳುನಾಡಿನಲ್ಲಿ ಶಶಿಕಲಾ ಸ್ವಾಗತಕ್ಕೆ ಬೆಂಬಲಿಗರು ಸಿದ್ಧತೆ ನಡೆಸಿದ್ದಾರೆ. ಕೊರೊನಾ ಹಿನ್ನೆಲೆ ವಿಕ್ಟೋರಿಯಾಗೆ ದಾಖಲಾಗಿದ್ದ ಶಶಿಕಲಾ ಜೈಲು ಶಿಕ್ಷೆ ಪೂರ್ಣ ಬಳಿಕ ಜನವರಿ 27ರಂದು ಬಿಡುಗಡೆಯಾಗಿದ್ದರು. ನಂತರದಲ್ಲಿ ಜ್ಯೋತಿಷಿಗಳ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕವೂ ದೇವನಹಳ್ಳಿಯ ರೆಸಾರ್ಟ್ ನಲ್ಲಿ ತಂಗಿದ್ರು. ಇಂದು ಮರಳಿ ತಮಿಳುನಾಡಿಗೆ ತೆರಳಲಿದ್ದು, ರಾಜಕೀಯ ಗರಿಗೆದರಿದೆ. ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ ಶಶಿಕಲಾ ಮುಂದೇನು ಮಾಡ್ತಾರೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

    ಈ ಮೊದಲು ಅಮವಾಸ್ಯೆ ಬಳಿಕ ಅಂದ್ರೆ ಫೆಬ್ರವರಿ 11ರ ನಂತರ ಶಶಿಕಲಾ ತಮಿಳುನಾಡಿಗೆ ಹಿಂದಿರುಗಲಿದ್ದಾರೆ ಎಂದು ಹೇಳಲಾಗಿತ್ತು. ಜನವರಿ 31ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಶಶಿಕಲಾ ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದರು.

  • ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಬೆಂಗಳೂರು: ಅನಾರೋಗ್ಯ ಮತ್ತು ಕೋವಿಡ್ ಪಾಸಿಟಿವ್ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 21ರಂದು ಶಶಿಕಲಾ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು.

    ಜನವರಿ 27ರಂದು ಜೈಲಿನಿಂದ ಬಿಡುಗಡೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದ್ರೆ ಅಮವಾಸ್ಯೆ ಬಳಿಕ ಶಶಿಕಲಾ ತಮಿಳುನಾಡಿಗೆ ತೆರಳಲಿದ್ದಾರೆ ಎಂದು ಹೇಳಲಾಗ್ತಿದೆ. ಫೆಬ್ರವರಿ 11ರ ನಂತರ ಅದ್ಧೂರಿ ಮೆರವಣಿಗೆ ಮೂಲಕ ಶಶಿಕಲಾ ತಮಿಳುನಾಡಿಗೆ ಎಂಟ್ರಿ ಕೊಡಲಿದ್ದಾರೆ. ಈ ಹಿನ್ನೆಲೆ ಬೆಂಗಳೂರು ಹೊರ ವಲಯದಲ್ಲಿರುವ ಆಪ್ತರ ಐಷಾರಾಮಿ ಮನೆಯಲ್ಲಿ ಶಶಿಕಲಾ ಉಳಿದುಕೊಳ್ಳಲಿದ್ದಾರೆ.

    ಈ ಹಿಂದೆ ಶಶಿಕಲಾ ಅವರಿಗೆ ಭದ್ರತೆ ನೀಡಿದ ಸಿಬ್ಬಂದಿಯನ್ನೇ ಸದ್ಯ ಸಹ ನೇಮಿಸಲಾಗಿದೆ. 10 ಖಾಸಗಿ ಅಂಗ ರಕ್ಷಕರು ಭದ್ರತೆಯಲ್ಲಿ ಶಶಿಕಲಾ ಆಸ್ಪತ್ರೆಯಿಂದ ತೆರಳಿದ್ದಾರೆ.

  • ಇಂದು ಆಸ್ಪತ್ರೆಯಿಂದ ಶಶಿಕಲಾ ಬಿಡುಗಡೆ – ಚೆನ್ನೈಗೆ ಹೋಗದೇ ಬೆಂಗಳೂರಲ್ಲೇ ವಾಸ್ತವ್ಯ

    ಇಂದು ಆಸ್ಪತ್ರೆಯಿಂದ ಶಶಿಕಲಾ ಬಿಡುಗಡೆ – ಚೆನ್ನೈಗೆ ಹೋಗದೇ ಬೆಂಗಳೂರಲ್ಲೇ ವಾಸ್ತವ್ಯ

    – ಶುಭಗಳಿಗೆಯಲ್ಲಿ ಬನ್ನಿ ಎಂದು ಜ್ಯೋತಿಷಿಗಳ ಸಲಹೆ

    ಬೆಂಗಳೂರು: ನಾಲ್ಕು ವರ್ಷಗಳ ಜೈಲು ವಾಸ 10 ದಿನಗಳ ಆಸ್ಪತ್ರೆ ವಾಸದ ಬಳಿಕ ಶಶಿಕಲಾ ಇಂದು ಡಿಸ್ಚಾರ್ಜ್ ಗೆ ಸಿದ್ಧರಾಗಿದ್ದಾರೆ. ಇದೇ ತಿಂಗಳ 27ಕ್ಕೆ ನಾಲ್ಕು ವರ್ಷದ ಶಿಕ್ಷೆ ಪ್ರಮಾಣ ಪೂರ್ಣಗೊಳಿಸಿದ್ದ ಶಶಿಕಲಾ, ಕೋವಿಡ್ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದರು. ಇದೀಗ 10 ದಿನಗಳ ಚಿಕಿತ್ಸಾವಧಿ ಮುಗಿದಿದ್ದು ಆಸ್ಪತ್ರೆಯಿಂದ ಮನೆಗೆ ತೆರಳಲು ಸಿದ್ಧರಾಗಿದ್ದಾರೆ.

    1996ರಲ್ಲಿ ಸುಬ್ರಮಣಿಯನ್ ಸ್ವಾಮಿ, ಜಯಲಲಿತಾ ಸೇರಿದಂತೆ ಆಪ್ತರಾದ ಶಶಿಕಲಾ, ಇಳವರಸಿ ಹಾಗೂ ಸುಧಾಕರ್ ಮೇಲೆ ಆಕ್ರಮ ಆಸ್ತಿ ಗಳಿಕೆ ಕೇಸ್ ಹಾಕಿದ್ದರು. ಇದಕ್ಕಾಗಿ ಬೆಂಗಳೂರಿನಲ್ಲಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿತ್ತು. 1991 ರಿಂದ 96 ರ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ 66 ಕೋಟಿಯಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಅನ್ನೋದು ಸಾಬೀತಾಗಿ, ನಾಲ್ವರಿಗೂ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ವಿಶೇಷ ಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಜಯಲಲಿತಾ ಪ್ರಶ್ನೆ ಮಾಡಿದ್ದರು. ಕರ್ನಾಟಕ ಹೈ ಕೋರ್ಟ್ ನಲ್ಲಿ ಬಗೆ ಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ನಾಲ್ವರನ್ನ ನಿರ್ದೋಷಿಗಳು ಎಂದು ಕರ್ನಾಟಕ ಹೈ ಕೋರ್ಟ್ ತೀರ್ಪು ನೀಡಿತ್ತು.

    ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಿತ್ತು. ಹೈ ಕೋರ್ಟ್ ತೀರ್ಪನ್ನು ರದ್ದುಗೊಳಿಸಿ, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯಲಾಗಿತ್ತು. 2016ರಲ್ಲಿ ಜಯಲಲಿತಾ ಮರಣ ಹೊಂದಿದ್ರಿಂದ ಉಳಿದ ಮೂವರು ಪರಪ್ಪನ ಅಗ್ರಹಾರ ಜೈಲು ಸೇರಬೇಕಾಯ್ತು. ಇದೀಗ ಶಶಿಕಲಾ ಮತ್ತು ಇಳವರಿಸಿ 10 ಕೋಟಿ ದಂಡ ಪಾವತಿಸಿದ್ದಾರೆ. ಸುಧಾಕರ್ ಇನ್ನು ಪಾವತಿಸಿಲ್ಲ.

    ಈ ನಡುವೆ ಟಿಟಿವಿ ದಿನಕರನ್ ಎಎಂಎಂಕೆ ಪಕ್ಷ ಸ್ಥಾಪಿಸಿದ್ದು, ಶಶಿಕಲಾರನ್ನ ಮೆರವಣಿಗೆಯ ಮೂಲಕ ತಮಿಳುನಾಡಿಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ. ಆದರೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೂ ಸಹ ಬೆಂಗಳೂರಿನಲ್ಲಿಯೇ ಇದ್ದು, ಒಳ್ಳೆ ದಿನಾಂಕ ನೋಡಿ ತಮಿಳುನಾಡಿಗೆ ಕಾಲಿಡೋಕೆ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಜ್ಯೋತಿಷಿಗಳು ಒಳ್ಳೆಯ ದಿನಾಂಕ ನೋಡಿ ತಮಿಳುನಾಡಿಗೆ ಕಾಲಿಡಿ ಅಂತಾ ಹೇಳಿದ್ದಾರೆ ಎನ್ನಲಾಗಿದೆ. ಎರಡು ತಿಂಗಳಲ್ಲಿ ತಮಿಳುನಾಡಿನ ಸಾರ್ವತ್ರಿಕ ಚುನಾವಣೆ ಇದ್ದು, ಶಶಿಕಲಾ ಬಿಡುಗಡೆ ಯಾವ ಮಟ್ಟದಲ್ಲಿ ಪರಿಣಾಮ ಬೀರುತ್ತೆ ಅನ್ನೋದನ್ನ ನೋಡಬೇಕಿದೆ.

  • ಪರಪ್ಪನ ಅಗ್ರಹಾರದಿಂದ ಶಶಿಕಲಾ ಬಿಡುಗಡೆ ದಿನಾಂಕ ಫಿಕ್ಸ್

    ಪರಪ್ಪನ ಅಗ್ರಹಾರದಿಂದ ಶಶಿಕಲಾ ಬಿಡುಗಡೆ ದಿನಾಂಕ ಫಿಕ್ಸ್

    ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಶೀಘ್ರ ಬಿಡುಗಡೆಯಾಗಲಿದ್ದಾರೆ ಎಂಬ ಸುದ್ದಿ ಸಾಕಷ್ಟು ವೈರಲ್ ಆಗಿದೆ. ಆದರೆ ಸದ್ಯ ಆಕೆಯ ಬಿಡುಗಡೆಯ ಕುರಿತು ಸ್ಪಷ್ಟತೆ ಲಭಿಸಿದ್ದು, ಮುಂದಿನ ವರ್ಷ ಜನವರಿ 27 ರಂದು ಆಕೆಯ ಬಿಡುಗಡೆಯ ಸಾಧ್ಯತೆ ಇದೆ ಎಂದು ಆರ್‌ಟಿಐ ಅರ್ಜಿ ಮೂಲಕ ತಿಳಿದುಬಂದಿದೆ.

    ಶಶಿಕಲಾ ಬಿಡುಗಡೆಯ ಕುರಿತು ನರಸಿಂಹ ಮೂರ್ತಿ ಅವರು ಸಲ್ಲಿಸಲಾಗಿದ್ದ ಆರ್‌ಟಿಐ ಅರ್ಜಿಗೆ ಜೈಲಾಧಿಕಾರಿಗಳು ಉತ್ತರ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆಯೊಂದಿಗೆ 10 ಕೋಟಿ ರೂ. ದಂಡ ವಿಧಿಸಿದೆ. ಈ ಮೊತ್ತವನ್ನು ಶಶಿಕಲಾ ಪಾವತಿ ಮಾಡಿದರೆ ಅವರ ಬಿಡುಗಡೆಗೆ ಅವಕಾಶವಿದೆ. ಇಲ್ಲವಾದರೇ ಮತ್ತೆ ಒಂದು ವರ್ಷ ಶಶಿಕಲಾ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಇನ್ನು ಪೆರೋಲ್ ದಿನಗಳನ್ನು ಲೆಕ್ಕಾಚಾರ ಮಾಡಿದರೂ ಅವರ ಬಿಡುಗಡೆ ದಿನಾಂಕ ಬದಲಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭಿಸಿದೆ.

    ಈ ಹಿಂದೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ ಸೆಪ್ಟೆಂಬರ್ ತಿಂಗಳಿನಿಂದ ಬಿಡುಗಡೆಯಾಗುವ ಅವಕಾಶವಿದೆ ಎಂದು ವಕೀಲ ರಾಜಾ ಸೆಂಥೂರ್ ಪಾಂಡಿಯನ್ ಹೇಳಿದ್ದರು. ಉತ್ತಮ ನಡವಳಿಕೆ ತೋರಿದ ಹಿನ್ನೆಲೆಯಲ್ಲಿ ಅವರು ಮಾರ್ಚ್‍ನಲ್ಲೇ ಬಿಡುಗಡೆಯ ಅರ್ಹತೆ ಪಡೆದಿದ್ದರು. ಈ ತಿಂಗಳ ಅಂತ್ಯದಲ್ಲಿ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದಿದ್ದರು.

    ಇತ್ತೀಚೆಗೆ ಜಯಲಲಿತಾ ಅವರ ಜಯಂತಿಯಲ್ಲಿ ಮಾತನಾಡಿದ್ದ ಎಐಎಂಡಿಕೆ ಜಿಲ್ಲಾ ಕಾರ್ಯದರ್ಶಿ, ಮಾಜಿ ಶಾಸಕ ರಾಜಾ, ಶಶಿಕಲಾ ಶೀಘ್ರ ಬಿಡುಗಡೆಯಾಗಲಿದ್ದಾರೆ. ಅವರ ಬಿಡುಗಡೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದೆ. ಸಿಎಂ ಪಳನಿಸ್ವಾಮಿ ಮುಖ್ಯಮಂತ್ರಿ ಪದವಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಈ ವೇಳೆ ಶಶಿಕಲಾ ಬಿಡುಗಡೆಯೂ ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದೆ. 2017 ರಲ್ಲಿ ನಾಲ್ಕು ವರ್ಷಗಳ ಕಾಲ ಶಶಿಕಲಾ ಜೈಲು ಶಿಕ್ಷೆಗೆ ಒಳಗಾಗಿದ್ದರು.

  • ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಡಿಯೋ ರಿಲೀಸ್

    ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಡಿಯೋ ರಿಲೀಸ್

    ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ, ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಕಾರ್ಡ್ ಮಾಡಲಾಗಿರೋ ವಿಡಿಯೋವನ್ನ ಬಿಡುಗಡೆ ಮಾಡಲಾಗಿದೆ.

    ಶಶಿಕಲಾ ನಟರಾಜನ್ ಬಣ ಈ ವಿಡಿಯೋವನ್ನ ರಿಲೀಸ್ ಮಾಡಿದ್ದು, ಆಸ್ಪತ್ರೆಯ ಬೆಡ್ ಮೇಲೆ ಜಯಲಲಿತಾ ಆಹಾರ ಸೇವನೆ ಮಾಡುತ್ತಿರೋ 20 ಸೆಕೆಂಡ್‍ಗಳ ವಿಡಿಯೋ ಇದಾಗಿದೆ. ವಿಡಿಯೋದಲ್ಲಿ ಜಯಲಲಿತಾ ಜ್ಯೂಸ್ ಕುಡಿಯುತ್ತಾ ಟಿವಿ ನೋಡುತ್ತಿರೋದನ್ನ ಕಾಣಬಹುದು. ಗುರುವಾರ ಆರ್‍ಕೆ ನಗರ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಈ ಹೊತ್ತಲ್ಲೇ ಶಶಿಕಲಾ ಬಣ ಆಸ್ಪತ್ರೆ ವಿಡಿಯೋವನ್ನ ಬಿಡುಗಡೆ ಮಾಡಿದೆ. ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಫೋಟೋ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಫೋಟೋ ರಿಲೀಸ್ ಆಗಿರಲಿಲ್ಲ.

    ಜಯಲಲಿತಾ ಕೊನೆಯ ದಿನಗಳಲ್ಲಿ ಹೇಗಿದ್ದರು ಎಂಬುದಕ್ಕೆ ಸಾಕ್ಷಿಯಾಗಿ ನಮ್ಮಲ್ಲಿ ಕೆಲವು ವಿಡಿಯೋಗಳಿದ್ದು, ಅವುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಶಶಿಕಲಾ ಸೋದರ ಸಂಬಂಧಿ ಜಯನಾಥ್ ದಿವಾಕರನ್ ಈ ಹಿಂದೆ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದರು. ಪನ್ನಿರ್ ಸೆಲ್ವಂ ಅವರ ಗುಂಪಿನ ಟೀಕೆಗಳಿಗೆ ಉತ್ತರ ಎಂಬಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.

    ಜಯಲಲಿತಾ ಸಾವು ನಿಗೂಢವಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಪನ್ನೀರ್ ಸೆಲ್ವಂ ಬಣ ಒತ್ತಾಯಿಸಿತ್ತು. ಅಲ್ಲದೆ ಜಯಲಲಿತಾ ಅವರನ್ನ ಕೊಲೆ ಮಾಡಲಾಗಿದೆ ಎಂದು ಕೂಡ ಆರೋಪಿಸಲಾಗಿತ್ತು. ಇದನ್ನು ತಮ್ಮ ಫೇಸ್ ಬುಕ್ ಹೇಳಿಕೆಯಲ್ಲಿ ಉಲ್ಲೇಖಿಸಿದ್ದ ದಿವಾಕರನ್, ”ಜಯಲಲಿತಾ ಹಾಗೂ ಶಶಿಕಲಾ ನಡುವಿನ ಅನ್ಯೋನ್ಯತೆ ಎಷ್ಟಿತ್ತು ಎಂಬುದು ನನಗೆ ಗೊತ್ತು. ಅದಕ್ಕೆ ಸಾಕ್ಷಿಯಾಗಿ ಜಯಲಲಿತಾ ಅವರ ಕೊನೆಯ ದಿನಗಳಲ್ಲಿ ಅವರ ಹಾಗೂ ಶಶಿಕಲಾ ನಡುವಿನ ಬಾಂಧವ್ಯವನ್ನು ಬಿಂಬಿಸುವ ವೀಡಿಯೋಗಳು ನನ್ನಲ್ಲಿವೆ. ಜಯಲಲಿತಾ ತಮ್ಮ ಕೊನೆಯ ದಿನಗಳನ್ನು ಕಳೆದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಅವುಗಳನ್ನು ಚಿತ್ರೀಕರಿಸಲಾಗಿದೆ. ನಾನು ಆ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಹಾಕಿದರೆ ಹೇಗಿರುತ್ತೆ? ಜಯಲಲಿತಾ ಅವರದ್ದು ಸಹಜ ಸಾವಲ್ಲ ಎಂದು ದನಿಯೆತ್ತಿದ್ದ ಪನ್ನೀರ್ ಸೆಲ್ವಂ ಬಣದ ಪಿಎಚ್ ಪಾಂಡಿಯನ್ ಹಾಗೂ ಮನೋಜ್ ಕೆ. ಪಾಂಡಿಯನ್ ಅವರ ಪರಿಸ್ಥಿತಿ ಹೇಗಿರುತ್ತೆ?” ಎಂದು ದಿವಾಕರನ್ ಹೇಳಿಕೊಂಡಿದ್ದರು.

    https://www.youtube.com/watch?v=gZTeqiaWTh4&feature=youtu.be

  • ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ – ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಸುಪ್ರೀಂಗೆ ಅರ್ಜಿ

    ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ – ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಸುಪ್ರೀಂಗೆ ಅರ್ಜಿ

    ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹೊಸ ಆಟ ಶುರು ಮಾಡಿದ್ದಾರೆ.

    ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಜಯಲಲಿತಾ ಪ್ರಮುಖ ಆರೋಪಿಯಾಗಿದ್ದು, ಅವರ ಅನುಪಸ್ಥಿತಿಯಲ್ಲಿ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಪಿಸಿ ಘೋಷ್ ಹಾಗೂ ಅಮಿತಾವ್ ರಾಯ್ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಇವರ ಜೊತೆ ಮತ್ತಿಬ್ಬರು ಆರೋಪಿಗಳಾದ ಸುಧಾಕರನ್ ಹಾಗೂ ಇಳವರಸಿ ಕೂಡ ಅರ್ಜಿ ಹಾಕಿದ್ದಾರೆ.

    ಫೆಬ್ರವರಿ 14 ರಂದು ಕರ್ನಾಟಕ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಶಶಿಕಲಾ ನಟರಾಜನ್, ಸುಧಾಕರನ್ ಹಾಗೂ ಇಳವರಸಿಯನ್ನು ದೋಷಿಗಳು ಎಂದು ತೀರ್ಪು ನೀಡಿ, 4 ವರ್ಷ ಜೈಲು, 10 ಕೋಟಿ ರೂ. ದಂಡ ವಿಧಿಸಿತ್ತು.

  • ಐಟಿ ದಾಳಿ ವೇಳೆ ಸಿಕ್ಕಿಬಿದ್ದಿದ್ದ ಚಂದ್ರಕಾಂತ್ ಈಗ ಶಶಿಕಲಾ ಕೇರ್‍ಟೇಕರ್!

    ಐಟಿ ದಾಳಿ ವೇಳೆ ಸಿಕ್ಕಿಬಿದ್ದಿದ್ದ ಚಂದ್ರಕಾಂತ್ ಈಗ ಶಶಿಕಲಾ ಕೇರ್‍ಟೇಕರ್!

    ಬೆಂಗಳೂರು: ನೋಟ್‍ಬ್ಯಾನ್ ಬಳಿಕ ಐಟಿ ರೇಡ್‍ನಲ್ಲಿ ಸಿಕ್ಕಿಬಿದ್ದು ಜೈಲು ಸೇರಿ ರಿಲೀಸ್ ಆಗಿರುವ ರಾಮಲಿಂಗಂ ಕನ್‍ಸ್ಟ್ರಕ್ಷನ್ ಮಾಲೀಕ ಚಂದ್ರಕಾಂತ್ ಈಗ ಶಶಿಕಲಾ ಕೇರ್‍ಟೇಕರ್ ಆಗಿದ್ದಾರೆ.

    ಜೈಲಾಧಿಕಾರಿಗಳ ಸ್ನೇಹ ಸಂಪಾದನೆ ಮಾಡಿದ್ದ ಚಂದ್ರಕಾಂತ್ ಅಧಿಕಾರಿಗಳ ಮೂಲಕ ಚಿನ್ನಮ್ಮನ ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಶಶಿಕಲಾ ಬಂಟನಾಗಿರುವ ಸಿಎಂ ಪಳನಿಸ್ವಾಮಿಯ ಮಗ ಮಿಥುನ್ ಮತ್ತು ಚಂದ್ರಕಾಂತ್ ಸಹೋದರ ಸೂರ್ಯಕಾಂತ್ ಮದುವೆಯಾಗಿರೋದು ಅಕ್ಕ-ತಂಗಿಯರನ್ನಂತೆ. ಹೀಗಾಗಿ, ಚಂದ್ರಕಾಂತ್ ಮತ್ತು ಪಳನಿಸ್ವಾಮಿ ಸಂಬಂಧಿಗಳೇ.

    ಈರೋಡು ಮೂಲದ ಅಡ್ವೊಕೇಟ್ ಸುಬ್ರಹ್ಮಣ್ಯ ಪುತ್ರಿ ದಿವ್ಯಾ ಅನ್ನೋವ್ರನ್ನ ಪಳನಿಸ್ವಾಮಿ ಪುತ್ರ ಮಿಥುನ್ ಮದುವೆಯಾಗಿದ್ದಾರೆ. ಅಡ್ವೊಕೇಟ್ ಸುಬ್ರಹ್ಮಣ್ಯಗೆ ಕಪ್ಪುಕುಳ ಶೇಖರ್ ರೆಡ್ಡಿ ಬಿಸಿನೆಸ್ ಪಾರ್ಟ್‍ನರ್ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

    ಈ ಮಧ್ಯೆ, ಜಯಲಲಿತಾ ಆಸ್ಪತ್ರೆ ಸೇರಿದಾಗ ತಮಿಳುನಾಡಿನ ರಾಜಕೀಯ ಭವಿಷ್ಯದ ಲೆಕ್ಕಾಚಾರ ಹಾಕಿದ್ದ ಪ್ರಧಾನಿ ಮೋದಿಯವರು ಪನ್ನಿರ್ ಸೆಲ್ವಂ ಬಳಸಿಕೊಂಡು ಪಳನಿಸ್ವಾಮಿ ಆಪ್ತರು ಮತ್ತು ಶೇಖರ್‍ರೆಡ್ಡಿ, ಚಂದ್ರಕಾಂತ್ ಮೇಲೆ ಐಟಿ ರೇಡ್ ಮಾಡಿಸಿದ್ರು ಎನ್ನುವ ಮಾತು ಈಗ ಕೇಳಿ ಬರುತ್ತಿದೆ.

  • ಪನ್ನೀರ್‍ಸೆಲ್ವಂ ಹೇಳಿದ ಅಮ್ಮನ ‘ಆತ್ಮ’ಕಥೆ!

    – ನಾನೇ ಸಿಎಂ ಆಗಬೇಕೆಂದು ಅಮ್ಮಾ ಬಯಸಿದ್ದರು
    – ಶಶಿಕಲಾ ವಿರುದ್ಧ ಪನ್ನೀರ್ ಸೆಲ್ವಂ ಅಸಮಾಧಾನ
    – ತಮಿಳುನಾಡಿನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ
    – ಕೊನೆಗೂ ಮನದ ದುಗುಡ ಹೊರಹಾಕಿದ ಒಪಿಎಸ್

    ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ ಎಂಬ ಸುದ್ದಿಯ ನಡುವೆಯೇ ತಮಿಳುನಾಡು ಸಿಎಂ ಒ.ಪನ್ನೀರ್‍ಸೆಲ್ವಂ ತುಟಿಬಿಚ್ಚಿದ್ದಾರೆ. ಪನ್ನೀರ್‍ಸೆಲ್ವಂ ಮಾತುಗಳನ್ನು ನೋಡಿದರೆ ಅವರು ಬಂಡಾಯದ ಬಾವುಟ ಹಾರಿಸಿದ ಲಕ್ಷಣ ಸ್ಪಷ್ಟವಾಗಿ ಗೋಚರಿಸಿದೆ. ತಮಿಳುನಾಡಿನಲ್ಲಿ ಮಂಗಳವಾರ ರಾತ್ರಿ 9 ಗಂಟೆ ಬಳಿಕ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಆರಂಭವಾದವು. ಮರೀನಾ ಬೀಚ್‍ನಲ್ಲಿರುವ ಜಯಲಲಿತಾ ಸಮಾಧಿ ಬಳಿಗೆ ಆಗಮಿಸಿದ ಪನ್ನೀರ್ ಸೆಲ್ವಂ ಸಮಾಧಿ ಮುಂದೆ ಕೂತು ಧ್ಯಾನ ಮಗ್ನರಾದರು. ಸುಮಾರು ಅರ್ಧ ಗಂಟೆಗಳ ಕಾಲ ಇದೇ ರೀತಿಯಲ್ಲಿಯೇ ಒಪಿಎಸ್ ಕೂತಿದ್ದರು. ಇದಾದ ಬಳಿಕ ಪನ್ನೀರ್‍ಸೆಲ್ವಂ ಮಾಧ್ಯಮಗಳ ಮುಂದೆ ಬಂದು ಮಾತಿಗೆ ನಿಂತರು. ಮಾತಿನ ನಡುವೆಯೇ ಒಪಿಎಸ್ ಕಣ್ಣೀರನ್ನೂ ಹಾಕಿದರು.

    ಸಮಾಧಿಗೆ ನಮಿಸಿದ ಬಳಿಕ ಬಂದ ಒ.ಪನ್ನೀರ್‍ಸೆಲ್ವಂ ಹೇಳಿದ್ದಿಷ್ಟು.

    ನನ್ನ ನಾಯಕಿಗೆ ನಾನು ಗೌರವ ಸಲ್ಲಿಸಿದ್ದೇನೆ. ನಾನು ದೇಶದ ಜನರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಕೆಲವು ಸತ್ಯವನ್ನು ಹೇಳಬೇಕೆಂದು ಅಮ್ಮನ ಆತ್ಮ ನನಗೆ ಹೇಳಿದೆ. ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ನಾನೇ ಸಿಎಂ ಆಗಬೇಕು ಎಂದು ಸಾವಿಗೂ ಮುನ್ನ ಹೇಳಿದ್ದರು ಎಂದು ಪನ್ನೀರ್‍ಸೆಲ್ವಂ ಸ್ಪಷ್ಟಪಡಿಸಿದರು.

    ನನ್ನ ಮೇಲೆ ಒತ್ತಡ ಹಾಕಿ ರಾಜೀನಾಮೆ ಪಡೆದಿದ್ದಾರೆ. ಮುಖ್ಯಮಂತ್ರಿಯಾಗಿದ್ದ ವೇಳೆ ನನ್ನನ್ನು ಪದೇ ಪದೇ ಅವಮಾನಿಸಿದರು. ಶಶಿಕಲಾ ಸಿಎಂ ಆಗಬೇಕೆಂದು ಕೆಲವರು ನನಗೆ ಹೇಳಿದರು. ನಾನು ಇದರ ಅಗತ್ಯವೇನು ಎಂದು ಪ್ರಶ್ನಿಸಿದ್ದಕ್ಕೆ ಒಬ್ಬನೇ ವ್ಯಕ್ತಿ ಸಿಎಂ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿರಬೇಕು ಎಂದು ಹೇಳಿದರು. ಪಕ್ಷದ ಕಚೇರಿಯಲ್ಲೇ ಶಾಸಕರ ಸಭೆ ನಡೆಯುತ್ತಿದ್ದರೂ ನನಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಈ ಎಲ್ಲಾ ವಿಚಾರಗಳನ್ನೂ ತಿಳಿಸುವಂತೆ ಜಯಲಲಿತಾ ಆತ್ಮ ನನಗೆ ಹೇಳಿದೆ. ಹೀಗಾಗಿ ನಾನು ಇದನ್ನು ನಿಮ್ಮ ಮುಂದೆ ಹೇಳುತ್ತಿದ್ದೇನೆ ಎಂದು ಪನ್ನೀರ್‍ಸೆಲ್ವಂ ಹೇಳಿದರು.

    ಕಳೆದ ಸೆಪ್ಟೆಂಬರ್‍ನಲ್ಲಿ ಮನೆಯಲ್ಲೇ ಕುಸಿದು ಬಿದ್ದಿದ್ದ ಜಯಲಲಿತಾ ಅವರನ್ನು ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಯಲಲಿತಾ ಕಳೆದ ವರ್ಷ ಡಿಸೆಂಬರ್ 6ರಂದು ಸಾವನ್ನಪ್ಪಿದ್ದರು. ಅಂದು ಮಧ್ಯರಾತ್ರಿಯಲ್ಲೇ ಒ.ಪನ್ನೀರ್‍ಸೆಲ್ವಂ ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಕಳೆದ ಭಾನುವಾರ ಶಶಿಕಲಾ ನಟರಾಜನ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ಇದಾದ ಬಳಿಕ ಒ.ಪನ್ನೀರ್‍ಸೆಲ್ವಂ ರಾಜೀನಾಮೆ ನೀಡಿದ್ದರು. ಆದರೆ ಮುಂದಿನ ಸಿಎಂ ಅಧಿಕಾರ ಸ್ವೀಕರಿಸುವವರೆಗೆ ನೀವೇ ಸಿಎಂ ಆಗಿ ಮುಂದುವರಿಯಿರಿ ಎಂದು ತಮಿಳುನಾಡಿನ ರಾಜ್ಯಪಾಲರು ಸೂಚಿಸಿದ್ದರು.

  • ತಮಿಳುನಾಡಲ್ಲಿ ನಾಳೆಯಿಂದ ಚಿನ್ನಮ್ಮನ ರಾಜ್ಯಭಾರ, ಪನೀರ್ ಸೆಲ್ವಂ ರಾಜೀನಾಮೆ

    ಚೆನ್ನೈ: ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.

    ಇಂದು ಚೆನ್ನೈನ ಪೋಯಸ್ ಗಾರ್ಡನ್ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಎಡಿಎಂಕೆಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಶಶಿಕಲಾ ಆಯ್ಕೆಯಾಗಿದ್ದು, ಸಿಎಂ ಸ್ಥಾನಕ್ಕೆ ಓ ಪನೀರ್ ಸೆಲ್ವಂ ರಾಜೀನಾಮೆ ನೀಡಿದ್ದಾರೆ.

    ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಅಮ್ಮನಂತೆಯೇ ಇರ್ತೀನಿ, ಅವರ ಮಾರ್ಗದಲ್ಲೇ ನಡೆಯುತ್ತೇನೆ ಎಂದಿದ್ದ ಶಶಿಕಲಾ ಇಂದಿನ ಸಭೆಯ ಬಳಿಕ ಪಕ್ಷದ ಕಾರ್ಯಕರ್ತರ ಮುಂದೆ ಜಯಲಲಿತಾ ತುಂಬಾ ಇಷ್ಟಪಡುತ್ತಿದ್ದ ಹಸಿರು ಬಣ್ಣದ ಸೀರೆಯಲ್ಲಿ ಕಾಣಿಸಿಕೊಂಡರು.