Tag: Satellite Phone

  • ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ: ಎಸ್‍ಪಿ ಆನಂದ್ ಕುಮಾರ್

    ಮಹದೇಶ್ವರ ಬೆಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ: ಎಸ್‍ಪಿ ಆನಂದ್ ಕುಮಾರ್

    ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಸ್ಯಾಟ್‍ಲೈಟ್ ಫೋನ್ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.

    ಸ್ಯಾಡ್‍ಲೈಟ್ ಫೋನನ್ನು ನಕ್ಸಲೀಯರು ಬಳಸಿದ್ದಾರಾ ಅಥವಾ ಸಮಾಜಘಾತುಕ ಶಕ್ತಿಗಳು ಬಳಸಿವೆಯಾ ಎಂಬುದರ ಬಗ್ಗೆ ಕೇಂದ್ರ ಆಂತರಿಕ ಭದ್ರತಾ ಪಡೆ, ನಕ್ಸಲ್ ನಿಗ್ರಹ ದಳ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಗಳಿಂದ ತೀವ್ರ ನಿಗಾವಹಿಸಲಾಗಿದೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ ಕುಮಾರ್ ಮಹದೇಶ್ವರ ಬೆಟ್ಟ ಅರಣ್ಯ ವ್ಯಾಪ್ತಿಯಲ್ಲಿ ಸ್ಯಾಟ್‍ಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಖಚಿತಪಡಿಸಿದ್ದಾರೆ. ಕೆಲವು ಕಡೆ ಸ್ಯಾಟ್‍ಲೈಟ್ ಫೋನ್ ಬಳಸಿರುವ ಬಗ್ಗೆ ತನ್ನ ಗಮನಕ್ಕೆ ಬಂದಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

    ಒಮ್ಮೊಮ್ಮೆ ವಿದೇಶಿ ಪ್ರಯಾಣಿಕರು ಬಳಸಿರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಯಾರು ಬಳಕೆ ಮಾಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ನಂತರ ಮುಂದಿನ ಕ್ರಮ ವಹಿಸಿವುದಾಗಿ ಎಸ್‍ಪಿ ತಿಳಿಸಿದ್ದಾರೆ

  • ಸ್ಯಾಟಲೈಟ್ ಫೋನ್ ಹೊಂದಿದ್ದ ಮಹಿಳಾ ಪೈಲಟ್ ವಶ

    ಸ್ಯಾಟಲೈಟ್ ಫೋನ್ ಹೊಂದಿದ್ದ ಮಹಿಳಾ ಪೈಲಟ್ ವಶ

    ಬೆಂಗಳೂರು: ಸ್ಯಾಟಲೈಟ್ ಫೋನ್ ಹೊಂದಿದ್ದ ಅಮೆರಿಕಾ ಮೂಲದ ಮಹಿಳಾ ಪೈಲಟನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

    ಅಮೆರಿಕಾ ಮೂಲದ ಬೆಂಟರ್ ಚಾರಿಟಿ ನೊಯಲ್ ವಶಕ್ಕೆ ಪಡೆದ ಮಹಿಳಾ ಪೈಲಟ್. ಅಂದಹಾಗೆ ವಿಶೇಷ ವಿಮಾನದ ಚಾಲಕಿಯಾಗಿರುವ ಬೆಂಡರ್ ಚಾರಿಟಿ ನೊಯಲ್ ಬಳಿ ತಪಾಸಣೆ ವೇಳೆ ಸ್ಯಾಟಲೈಟ್ ಫೋನ್ ಪತ್ತೆಯಾಗಿದೆ. ಹೀಗಾಗಿ ಅನುಮಾನಗೊಂಡ ಸಿಐಎಸ್‍ಎಫ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಕೆಯನ್ನ ಕೆಐಎಎಲ್ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಸಂಬಂಧ ಕೆಐಎಎಲ್‍ನ ಸಿಪಿಐ ಪ್ರಶಾಂತ್, ಮಹಿಳಾ ವಿಮಾನ ಚಾಲಕಿಯನ್ನ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

    ಭಾರತ ದೇಶದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ನಿಷಿದ್ಧ ಹಾಗೂ ಕಾನೂನುಬಾಹಿರ, ಕೇವಲ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಸಂಸ್ಥೆಯ ಸ್ಯಾಟಲೈಟ್ ಫೋನ್ ಮಾತ್ರ ಸರ್ಕಾರಿ ಸದುದ್ದೇಶದ ಕಾರ್ಯಗಳಿಗೆ ಬಳಕೆ ಮಾಡಬಹುದಾಗಿದೆ ಎನ್ನಲಾಗಿದೆ. ಆದರೆ ಈ ಮಹಿಳಾ ಪೈಲಟ್ ಇರುಡಿಯಮ್ ಅನ್ನೋ ಸ್ಯಾಟಲೈಟ್ ಫೋನ್ ಹೊಂದಿದ್ದಾಳೆ. ಹೀಗಾಗಿ ಅಮೆರಿಕಾದಲ್ಲಿ ಈ ಸ್ಯಾಟಲೈಟ್ ಫೋನ್ ಬಳಕೆಗೆ ಅವಕಾಶ ಇದೆಯಾ ಅಥವಾ ಕಾನೂನುಬಾಹಿರವಾಗಿ ಈಕೆ ಸ್ಯಾಟಲೈಟ್ ಫೋನ್ ಹೊಂದಿದ್ದಾಳಾ ಎಂಬುದನ್ನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.